ದ. ಕ ಜಿಲ್ಲೆಯಲ್ಲಿ ನೆರೆ ಹಾನಿ ವೀಕ್ಷಣೆಗೆಂದು ಆಗಮಿಸಿದ ಮುಖ್ಯಮಂತ್ರಿ ಯಡಿಯೂರಪ್ಪ ➤ ಹೊಸ ಮನೆ ನಿರ್ಮಾಣದ ಭರವಸೆ ನೀಡಿದ ಸಿ.ಎಂ
(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಆಗಸ್ಟ್.12.ಇಂದು ಆಗಮಿಸಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೆರೆಹಾವಳಿಯಿಂದ ಹಾನಿಗೊಳಗಾದ ಪ್ರದೇಶಗಳನ್ನು ವೀಕ್ಷಣೆಮಾಡಿದರು. ಬಳಿಕ ನೇರವಾಗಿ ಧರ್ಮಸ್ಥಳಕ್ಕೆ ತೆರಳಿದ ಬಿ.ಎಸ್.ವೈ. ಅವರು ಅಲ್ಲಿ ಮಂಜುನಾಥ ಸ್ವಾಮಿಯ ದರ್ಶನವನ್ನು ಪಡೆದು ದೇವರಿಗೆ ವಿಶೇಷ ಪೂಜೆಯನ್ನು ಸಲ್ಲಿಸಿದರು.ಸ್ಥಳೀಯ ಶಾಸಕರಾಗಿರುವ ಹರೀಶ್ ಪೂಂಜಾ, ಸಂಸದ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಭಾರತೀಯ ಜನತಾ ಪಕ್ಷದ ಶಾಸಕರು ಮತ್ತು ಸ್ಥಳೀಯ ಮುಖಂಡರು ಬಿ.ಎಸ್.ವೈ. ಅವರಿಗೆ ಸಾಥ್ ನೀಡಿದರು.ನೆರೆಪೀಡಿತ ಪ್ರದೇಶಗಳಲ್ಲಿ ಪ್ರವಾಹದಿಂದ ಉಂಟಾದ ಸಮಸ್ಯೆಯ ಕೇಳಿ ಗಂಭೀರತೆ […]



