ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಮುಂದುವರೆದ ಮಳೆಯ ಅಬ್ಬರ ➤ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಸಂಚಾರ ಸ್ಥಗಿತ
(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.9.ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಮಳೆಯ ಅಬ್ಬರ, ಮುಂದುವರೆದಿದ್ದು, ಹಲವೆಡೆ ಮಳೆ ನೀರು ರಸ್ತೆಯಲ್ಲೇ ಹರಿಯುತ್ತಿದೆ. ನಿರಂತರ ಸುರಿಯುತ್ತಿರೊ ಮಳೆಯಿಂದಾಗಿ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಸಂಚಾರ ಸ್ಥಗಿತವಾಗಿದೆ. ಕೆಂಪುಹೊಳೆಯಲ್ಲಿ ನೀರಿನ ಪ್ರವಾಹ ಹೆಚ್ಚಾಗುತ್ತಿದ್ದು, ಉದನೆ ಪೇಟೆಯಲ್ಲಿ ಹೆದ್ದಾರಿಯ ಇಕ್ಕೆಲಗಳಲ್ಲಿ ನದಿ ನೀರು ಹರಿಯುತ್ತಿದ್ದು, ಸಂಚಾರ ಅಸ್ತವ್ಯಸ್ಥವಾಗಿದೆ.ಶಿಶಿಲದಲ್ಲಿ ನದಿ ಉಕ್ಕಿ ಹರಿಯುತ್ತಿರುವುದರಿಂದ ಶಿಶಿಲ ದೇವಾಲಯವು ಅಕ್ಷರಶ ದ್ವೀಪವಾಗಿ ಪರಿಣಮಿಸಿದೆ. ದೇವಳಕ್ಕೆ ಹಾಗೂ ಆ ಭಾಗದ ಜನರಿಗೆ ಇರುವ ಒಂದು ಸಂಪರ್ಕ ರಸ್ತೆಯಲ್ಲೇ […]




