2019ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.29. 2019ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲೇ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಪರಿಶಿಷ್ಟ ವರ್ಗದ ಕಲ್ಯಾಣ ಇಲಾಖೆಯಿಂದ ಪ್ರೋತ್ಸಾಹಧನ ಮಂಜೂರು ಮಾಡಲಾಗುತ್ತಿದೆ. ಪ್ರಥಮ ಪ್ರಯತ್ನದಲ್ಲಿ ಶೇ.60% – 74.99% ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ರೂ.7,000/- ಗಳನ್ನು ಮತ್ತು ಶೇ.75% ಹಾಗೂ ಅದಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ರೂ.15,000/- ಮಂಜೂರು ಮಾಡಲಾಗುತ್ತಿದೆ. ಈ ಪ್ರೋತ್ಸಾಹಧನವನ್ನು ಪಡೆಯಲು ವಿದ್ಯಾರ್ಥಿಗಳು ತಮ್ಮ ಬ್ಯಾಂಕ್ ಖಾತೆ ಹಾಗೂ ಇತರ […]
