ಖಾಸಗಿ ಶಾಲೆಗಳು ಹೆಚ್ಚುವರಿ ಶುಲ್ಕ ವಸೂಲಿ ಮಾಡಿದ್ದಲ್ಲಿ ಕಠಿಣ ಕ್ರಮ ► ಶಿಕ್ಷಣ ಸಚಿವ ತನ್ವೀರ್ ಸೇಠ್ ಎಚ್ಚರಿಕೆ
(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.21. ಖಾಸಗಿ ಶಾಲೆಗಳು ಅನಿಯಮಿತವಾಗಿ ಶುಲ್ಕ ವಸೂಲಿ ಮಾಡಿದ್ದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಠ್ ಎಚ್ಚರಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮನ ಬಂದಂತೆ ಶುಲ್ಕ ನಿಗದಿ ಮಾಡುವ ಖಾಸಗಿ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳಲು ಕಾಯ್ದೆ ತಿದ್ದುಪಡಿ ಮಾಡಲಾಗಿದೆ. ಇದಕ್ಕೆ ನಿಯಮಾವಳಿ ರೂಪಿಸಿ 2018-19ನೆ ಸಾಲಿನಿಂದಲೇ ಅನುಷ್ಠಾನಕ್ಕೆ ತರಲಾಗುವುದು ಎಂದರು. ಸರಕಾರದ ನಿಯಮಾವಳಿ ಆಧರಿಸಿಯೇ ಖಾಸಗಿ ಶಾಲೆಗಳು ಶುಲ್ಕ ನಿಗದಿ […]









