ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಮುಳುವಾಗಲಿದೆಯೇ ಸರಕಾರದ ನೂತನ ಕಾನೂನು…? ► ಮಂತ್ರಿಗಳ, ಸರ್ಕಾರಿ ಅಧಿಕಾರಿಗಳ ಮಕ್ಕಳು ಸರ್ಕಾರಿ ಶಾಲೆಯಲ್ಲಿ ಓದುವುದು ಕಡ್ಡಾಯ..!
(ನ್ಯೂಸ್ ಕಡಬ) newskadaba.com ಬೆಂಗಳೂರು, ನ.22. ಬೀದಿ ಬೀದಿಗಳಲ್ಲಿ ಖಾಸಗಿ ಶಾಲೆಗಳು ತಲೆಯೆತ್ತುತ್ತಿದ್ದು, ಇವುಗಳ ಅಭಿವೃದ್ಧಿಯ ಮುಂದೆ ಸರಕಾರಿ ಶಾಲೆಗಳು ಇಂದೋ ನಾಳೆಯೋ ಬಾಗಿಲು ಮುಚ್ಚುವ ಭೀತಿಯಲ್ಲಿ ಕಾರ್ಯಾಚರಿಸುತ್ತಿದೆ. ಒಂದೆಡೆ ಸರಕಾರಿ ಶಾಲೆಯಲ್ಲಿನ ಸೌಲಭ್ಯಗಳ ಕೊರತೆ, ಇನ್ನೊಂದೆಡೆ ಖಾಸಗಿ ಶಾಲೆಗಳ ದೌಲತ್ತಿನ ನಡುವೆ ಇದೀಗ ಚಳಿಗಾಲದ ಅಧಿವೇಶನದಲ್ಲಿ ಹೊಸದೊಂದು ಮಸೂದೆಯು ಮಂಡನೆಯಾಗುವ ಸಾಧ್ಯತೆಯಿದೆ. ಸರಕಾರಿ ಅಧಿಕಾರಿಗಳು ಮತ್ತು ರಾಜಕಾರಣಿಗಳ ಮಕ್ಕಳು ಅಂತಾರಾಷ್ಟ್ರೀಯ ಮಟ್ಟದ ಗುಣಮಟ್ಟವುಳ್ಳ ಶಿಕ್ಷಣವನ್ನು ಪಡೆಯುತ್ತಿದ್ದರೆ, ಇನ್ನೊಂದೆಡೆ ಬಡಮಕ್ಕಳು ಸರಕಾರಿ ಶಾಲೆಯಲ್ಲಿ ಶಿಕ್ಷಣ ಪಡೆಯುತ್ತಿದ್ದಾರೆ. ಅಧಿಕಾರಿಗಳ […]










