News Kadaba

ಹಾಸನ: ಕೌಟುಂಬಿಕ ಕಲಹ ಪತ್ನಿಯ ಕೊಲೆಯಲ್ಲಿ ಅಂತ್ಯ ► ಇಬ್ಬರು ಮಕ್ಕಳೊಂದಿಗೆ ಪೊಲೀಸರಿಗೆ ಶರಣಾದ ಪತಿ

(ನ್ಯೂಸ್ ಕಡಬ) newskadaba.com ಹಾಸನ, ನ.15. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವ ಪತ್ನಿಯನ್ನು ಕೊಲೆಗೈದು ತನ್ನ ಇಬ್ಬರು ಮಕ್ಕಳೊಂದಿಗೆ ಪೊಲೀಸರಿಗೆ ಶರಣಾಗಿರುವ ಘಟನೆ ಚನ್ನರಾಯಪಟ್ಟಣದ ಗುಣಶೆಟ್ಟಿ ಎಂಬಲ್ಲಿ ಮಂಗಳವಾರದಂದು ನಡೆದಿದೆ. ಕೊಲೆಯಾದ ಮಹಿಳೆಯನ್ನು ಚನ್ನರಾಯಪಟ್ಟಣ ನಿವಾಸಿ ಮಂಜೇಗೌಡ ಎಂಬಾತನ ಪತ್ನಿ ಸುಮಾ(29) ಎಂದು ಗುರುತಿಸಲಾಗಿದೆ. ಮಂಜೇಗೌಡ ಹಾಗೂ ಕೊಲೆಯಾಗಿರುವ ಸುಮಾ ಒಂದೇ ಊರಿನವರಾಗಿದ್ದು, 2004ರಲ್ಲಿ ಮದುವೆಯಾಗಿತ್ತು. ನಂತರದ ದಿನಗಳಲ್ಲಿ ಮಂಜೇಗೌಡ ತನ್ನ ಹೆಂಡತಿಯ ಬಗ್ಗೆ ಸಂಶಯ ಪಡುತ್ತಿದ್ದ ಹಿನ್ನೆಲೆಯಲ್ಲಿ ಕುಟುಂಬದಲ್ಲಿ ಬಿರುಕು ಬಿಟ್ಟಿತ್ತು ಎನ್ನಲಾಗಿದ್ದು, ಬಳಿಕ ಹಿರಿಯರ […]

ಹಾಸನ: ಕೌಟುಂಬಿಕ ಕಲಹ ಪತ್ನಿಯ ಕೊಲೆಯಲ್ಲಿ ಅಂತ್ಯ ► ಇಬ್ಬರು ಮಕ್ಕಳೊಂದಿಗೆ ಪೊಲೀಸರಿಗೆ ಶರಣಾದ ಪತಿ Read More »

ಕರ್ನಾಟಕ

ಮರಕ್ಕೆ ಢಿಕ್ಕಿ ಹೊಡೆದ ಕಾರು ► ಚಾಲಕ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಶೃಂಗೇರಿ, ನ.14. ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಕಾವಡಿ ಸಮೀಪ ನಡೆದಿದೆ. ಮೃತರನ್ನು ಕಾರು ಚಾಲಕ ಅಡುಗೆ ವೃತ್ತಿ ಮಾಡುತ್ತಿದ್ದ ಉಳುವೆ ನಿವಾಸಿ ಸತ್ಯನಾರಾಯಣ(64) ಎಂದು ಗುರುತಿಸಲಾಗಿದೆ. ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಡಿಕ್ಕಿ ಹೊಡೆದಿದ್ದು, ಸತ್ಯನಾರಾಯಣ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಶೃಂಗೇರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮರಕ್ಕೆ ಢಿಕ್ಕಿ ಹೊಡೆದ ಕಾರು ► ಚಾಲಕ ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ

ದೇಯಿಬೈದೇತಿಗೆ ಅವಮಾನ ಪ್ರಕರಣ ► ಆರೋಪಿಗೆ ಜಾಮೀನು ಮಂಜೂರು

(ನ್ಯೂಸ್ ಕಡಬ) newskadaba.com ಪುತ್ತೂರು, ನ.14. ತುಳುನಾಡಿನ ವೀರ ಪುರುಷರಾದ ಕೋಟಿ ಚೆನ್ನಯರ ತಾಯಿ ದೇಯಿಬೈದೆತಿಯ ಪುತ್ತಳಿಯ ಸಮೀಪ ಕುಳಿತು ಅಶ್ಲೀಲವಾಗಿ ಫೊಟೊ ತೆಗೆದು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟ ಪ್ರಕರಣದ ಆರೋಪಿಗೆ ಪುತ್ತೂರು ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜೆ.ಎಮ್.ಎಫ್.ಸಿ ನ್ಯಾಯಾಲಯ ಮಂಗಳವಾರದಂದು ಜಾಮೀನು ಮಂಜೂರು ಮಾಡಿದೆ. ಪ್ರಕರಣದ‌ ಆರೋಪಿ ಈಶ್ವರ ಮಂಗಲ ನಿವಾಸಿ ಮಹಮ್ಮದ್ ಎಂಬವರ ಪುತ್ರ ಹನೀಫ್ ವಿರುದ್ಧ ಸಂಪ್ಯ ಠಾಣೆಯಲ್ಲಿ ಜಾಮೀನು ರಹಿತ ದೂರು ದಾಖಲಾಗಿತ್ತು. ಅರೋಪಿ ಪರವಾಗಿ ವಕೀಲರಾದ ಅಶ್ರಫ್

ದೇಯಿಬೈದೇತಿಗೆ ಅವಮಾನ ಪ್ರಕರಣ ► ಆರೋಪಿಗೆ ಜಾಮೀನು ಮಂಜೂರು Read More »

ಕರಾವಳಿ

ಮೈಸೂರಲ್ಲಿ ಭೀಕರ ಅಪಘಾತ ► ಉಳ್ಳಾಲ ಮೂಲದ ಮೂವರು ಮೃತ್ಯು

(ನ್ಯೂಸ್ ಕಡಬ) newskadaba.com ಮೈಸೂರು, ನ.14. ಇಲ್ಲಿನ ಹುಣಸೂರು ರಸ್ತೆಯಲ್ಲಿ ಸಂಭವಿಸಿದ ಭೀಕರ ಅಪಘಾತವೊಂದರಲ್ಲಿ ಮಂಗಳೂರು ನಗರದ ಉಳ್ಳಾಲ ಮೂಲದ ಮೂವರು ಸಾವನಪ್ಪಿದ ಘಟನೆ ಮಂಗಳವಾರ ಮುಂಜಾನೆ ನಡೆದಿದೆ. ಮೃತರನ್ನು ತೊಕ್ಕೊಟು ಸಮೀಪದ ಉಳ್ಳಾಲದ ಅಬ್ದುಲ್ ಹಮೀದ್(47), ಸಹೋದರ ಮಹಮದ್ ಇಕ್ಬಾಲ್(37) ಹಾಗೂ ಹಮೀದ್ ಪುತ್ರ ಶೇಕ್ ಹಕೀಬ್(18) ಎಂದು ಗುರುತಿಸಲಾಗಿದೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸೋಮವಾರ ಸಂಜೆ ಪ್ರವಾಸಕ್ಕೆಂದು ತೊಕ್ಕೊಟ್ಟು ವಿನಿಂದ ಊಟಿಗೆ ಕುಟುಂಬ ಸಮೇತ ತೆರಳುತ್ತಿದ್ದರು. ಈ ವೇಳೆ ಮೈಸೂರಿನ ಬಸರಿಕಟ್ಟೆ ಬಳಿ ಟೆಂಪೋ

ಮೈಸೂರಲ್ಲಿ ಭೀಕರ ಅಪಘಾತ ► ಉಳ್ಳಾಲ ಮೂಲದ ಮೂವರು ಮೃತ್ಯು Read More »

ಕರಾವಳಿ

ಹೊಸ್ಮಠ: ಫ್ಯಾನ್ಸಿ ಮತ್ತು ಟೈಲರಿಂಗ್ ಅಂಗಡಿ ಬೆಂಕಿಗಾಹುತಿ ► ಲಕ್ಷಾಂತರ ರೂ. ನಷ್ಟ

(ನ್ಯೂಸ್ ಕಡಬ) newskadaba.com ಕಡಬ, ನ.14. ಇಲ್ಲಿನ ಹೊಸ್ಮಠ ಬಸ್ ನಿಲ್ದಾಣದ ಕುಟ್ರುಪ್ಪಾಡಿ ಗ್ರಾಮ ಪಂಚಾಯತ್ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿದ್ದ ಸುಗುಣಾ ದಯಾನಂದ ಎಂಬವರ ಫ್ಯಾನ್ಸಿ ಮತ್ತು ಟೈಲರಿಂಗ್ ಅಂಗಡಿಯೊಂದು ಬೆಂಕಿಗಾಹುತಿಯಾದ ಘಟನೆ ಮಂಗಳವಾರ ಬೆಳಗ್ಗಿನ ಜಾವ ನಡೆದಿದೆ. ಘಟನೆಯಲ್ಲಿ ಕುಟ್ರುಪ್ಪಾಡಿ ಗ್ರಾಮ ಪಂಚಾಯತಿಯ ಕೇಂದ್ರ ಗ್ರಂಥಾಲಯ ಹಾಗೂ ಫ್ಯಾನ್ಸಿ ಅಂಗಡಿ ಸಂಪೂರ್ಣ ಸುಟ್ಟು ಕರಕಲಾಗಿದೆ. ಅಂಗಡಿಯಲ್ಲಿದ್ದ ಟೈಲರಿಂಗ್ ಮೆಷಿನ್,   ಮದುವೆ ಸಮಾರಂಭಗಳ ಕೃತಕ ಆಭರಣಗಳು, ಅಗತ್ಯ ದಾಖಲೆ ಪತ್ರಗಳು ಸೇರಿದಂತೆ ಲಕ್ಷಾಂತರ ರೂ. ನಷ್ಟ ಅಂದಾಜಿಸಲಾಗಿದೆ. ಘಟನೆಗೆ ನಿಖರವಾದ

ಹೊಸ್ಮಠ: ಫ್ಯಾನ್ಸಿ ಮತ್ತು ಟೈಲರಿಂಗ್ ಅಂಗಡಿ ಬೆಂಕಿಗಾಹುತಿ ► ಲಕ್ಷಾಂತರ ರೂ. ನಷ್ಟ Read More »

ಕರಾವಳಿ

ಕೊೖಲ: ಊರಿನ ಹಿರಿಯ ನಾಗರೀಕ ಐತ್ತಪ್ಪ ನಾಯ್ಕ ಅವರಿಗೆ ಸನ್ಮಾನ

(ನ್ಯೂಸ್ ಕಡಬ) newskadaba.com ಪುತ್ತೂರು, ನ.14. ಇಲ್ಲಿನ ಕೊೖಲ ಗ್ರಾಮದ ಏಣಿತಡ್ಕ-2 ಅಂಗನವಾಡಿ ಕೇಂದ್ರದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ಇತ್ತೀಚೆಗೆ ನಡೆಯಿತು. ಕಟ್ಟಡದ ಉದ್ಘಾಟನಾ ಸಮಾರಂಭಕ್ಕೆ ಶಾಸಕರಾದ ಎಸ್. ಅಂಗಾರ ಅವರು ಚಾಲನೆ ನೀಡಿ ಬಳಿಕ ಊರಿನ ಹಿರಿಯ ನಾಗರೀಕರಾದ ಐತ್ತಪ್ಪ ನಾಯ್ಕ ಅವರನ್ನು ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯ ಸರ್ವೋತ್ತಮ ಗೌಡ, ತಾಲೂಕು ಪಂಚಾಯಿತಿ ಸದಸ್ಯರಾದ ಜಯಂತಿ ಆರ್ ಗೌಡ, ತೇಜಸ್ವಿನಿ ಶೇಖರ ಗೌಡ, ಕೊೖಲ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮೀನಾಕ್ಷಿ

ಕೊೖಲ: ಊರಿನ ಹಿರಿಯ ನಾಗರೀಕ ಐತ್ತಪ್ಪ ನಾಯ್ಕ ಅವರಿಗೆ ಸನ್ಮಾನ Read More »

ಕರಾವಳಿ

ಕಡಬ: ದಲಿತ್ ಸೇವಾ ಸಮಿತಿ ಮಾಸಿಕ ಸಭೆ ►ಡಿಸಿ ಮನ್ನಾ ಭೂಮಿಯನ್ನು ಭೂರಹಿತ ದಲಿತ ವರ್ಗಕ್ಕೆ ನೀಡಬೇಕು- ರಾಜು ಹೊಸ್ಮಠ

(ನ್ಯೂಸ್ ಕಡಬ) newskadaba.com ಕಡಬ, ನ.14. ತಾಲೂಕು ದಲಿತ್ ಸೇವಾ ಸಮಿತಿಯ ಮಾಸಿಕ ಸಭೆಯು ತಾಲೂಕು ಅಧ್ಯಕ್ಷರಾದ ರಾಜು ಹೊಸ್ಮಠ ಅವರ ಅಧ್ಯಕ್ಷತೆಯಲ್ಲಿ  ಸೈನಿಕ ಭವನದಲ್ಲಿ ಇತ್ತೀಚೆಗೆ ನಡೆಯಿತು. ಬಳಿಕ ಮಾತನಾಡಿದ ಅವರು ಜಿಲ್ಲೆಯಾದ್ಯಂತ ಸುಮಾರು 8652 ಎಕ್ರೆ ಡಿಸಿ ಮನ್ನಾ ಭೂಮಿ ಇದ್ದು ಈ ಭೂಮಿಯನ್ನು ಕೂಡಲೆ ಭೂರಹಿತ ಬಡಪಾಯಿ ದಲಿತ ವರ್ಗಕ್ಕೆ ನೀಡುವುದರ ಮೂಲಕ ಸಮಾಜದಲ್ಲಿ ದಲಿತರು ಸ್ವಾಭಿಮಾನದ ಬದುಕನ್ನು ನಡೆಸಲು ಕಂದಾಯ ಇಲಾಖೆಯವರು ಮುಂದಾಗಬೇಕೆಂದು ಹೇಳಿದ ಅವರು ಜಿಲ್ಲೆಯಾದ್ಯಂತ ಹೋರಾಟದ ಪ್ರತಿಫಲವಾಗಿ ಡಿಸಿ ಮನ್ನಾ ಭೂಮಿಯನ್ನು

ಕಡಬ: ದಲಿತ್ ಸೇವಾ ಸಮಿತಿ ಮಾಸಿಕ ಸಭೆ ►ಡಿಸಿ ಮನ್ನಾ ಭೂಮಿಯನ್ನು ಭೂರಹಿತ ದಲಿತ ವರ್ಗಕ್ಕೆ ನೀಡಬೇಕು- ರಾಜು ಹೊಸ್ಮಠ Read More »

ಕರಾವಳಿ

ಕಡಬ: ರೀಜನಲ್ ಎಸ್‍ಎಂಎ ಸಮಾವೇಶ ►ಪೂರ್ವಭಾವಿ ಸಭೆ

(ನ್ಯೂಸ್ ಕಡಬ) newskadaba.com ಕಡಬ, ನ.14. ಸುನ್ನೀ ಮೆನೇಜ್‍ಮೆಂಟ್ ಅಸೋಶಿಯೇಶನ್‍ನ ಕಡಬ ರೀಜನಲ್ ಸಮಾವೇಶವು ನ.17ರಂದು ಶುಕ್ರವಾರ ಕಡಬ ಕೇಂದ್ರ ಜುಮ್ಮಾ ಮಸೀದಿಯಲ್ಲಿ ನಡೆಯಲಿದ್ದು ಅದರ ಪೂರ್ವಭಾವಿ ಸಭೆಯು ಆದಿತ್ಯವಾರ ಅಡ್ಡಗದ್ದೆ ಅಲ್‍ಮದೀನ ಮಸೀದಿಯಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಕಡಬ ರೀಜನಲ್ ಉಪಾಧ್ಯಕ್ಷರಾದ ಖಾದರ್ ಸಾಹೇಬ್ ಕಲ್ಲುಗುಡ್ಡೆಯವರು ವಹಿಸಿ ಮಾತನಾಡಿ ಇದೇ ನ.21 ರಂದು ಪುತ್ತೂರು ಟೌನ್‍ಹಾಲ್‍ನಲ್ಲಿ ಜಿಲ್ಲಾ ಮಟ್ಟದ ಸಮಾವೇಶವು ನಡೆಯಲಿದ್ದು ಈಗಾಗಲೇ ನಮ್ಮ ರೀಜನಲ್ ವ್ಯಾಪ್ತಿಯ ಎಲ್ಲಾ ಮದರಸಗಳಲ್ಲಿ ರಕ್ಷಕ-ಶಿಕ್ಷಕ ಸಭೆ ನಡೆಸಲಾಗಿದೆ. ಹಾಗೂ ಇದೇ

ಕಡಬ: ರೀಜನಲ್ ಎಸ್‍ಎಂಎ ಸಮಾವೇಶ ►ಪೂರ್ವಭಾವಿ ಸಭೆ Read More »

ಕರಾವಳಿ

ಮರ್ದಾಳ ಗ್ರಾ.ಪಂ. ಮಕ್ಕಳ ಗ್ರಾಮ ಸಭೆ ► ವಿದ್ಯಾರ್ಥಿಗಳ ಸಮಸ್ಯೆಗಳ ಕುರಿತು ಚರ್ಚೆ

(ನ್ಯೂಸ್ ಕಡಬ) newskadaba.com ಕಡಬ, ನ.14. ಮರ್ದಾಳ ಗ್ರಾ.ಪಂ.ನ 2017-18ನೇ ಸಾಲಿನ ಮಕ್ಕಳ ಗ್ರಾಮಸಭೆಯು ಮರ್ದಾಳ ಸೈಂಟ್ ಮೇರಿಸ್ ಪ್ರೌಢಶಾಲಾ ವಿದ್ಯಾರ್ಥಿ ನಾಯಕ ನಿತೇಶ್ ಕೆ.ಎಂ.ರವರ ಅಧ್ಯಕ್ಷತೆಯಲ್ಲಿ ಮರ್ದಾಳ ಅಂಬೇಡ್ಕರ್ ಭವನದಲ್ಲಿ ನಡೆಯಿತು. ಮರ್ದಾಳ ಗ್ರಾ.ಪಂ.ಅಧ್ಯಕ್ಷೆ ಲಲಿತಾ ಎಂ ಮಾತನಾಡಿ ಮಕ್ಕಳೇ ಮುಂದಿನ ಭವಿಷ್ಯದ ಆಸ್ತಿಯಾಗಿದ್ದು ಮಕ್ಕಳಿಂದಲೇ ಸಮಾಜವನ್ನು ತಿದ್ದುವ ಕೆಲಸಗಳಾಗಬೇಕಿದೆ. ತಾವು ಗ್ರಾಮ ಸಭೆಯಲ್ಲಿ ಭಾಗವಹಿಸುವುದರ ಮೂಲಕ ವಿವಿಧ ಸಮಸ್ಯೆಗಳನ್ನು ತಿಳಿಸಿ ಇತ್ಯರ್ಥ ಪಡಿಸುವಂತೆ ವಿನಂತಿಸಿಕೊಂಡಿದ್ದೀರಿ, ತಮ್ಮ ಬೇಡಿಕೆಗನುಗುಣವಾಗಿ ಆದ್ಯತೆ ನೆಲೆಯಲ್ಲಿ ಗ್ರಾ.ಪಂ.ನಿಂದ ಸಾಧ್ಯವಾದಷ್ಟು ಅಭಿವೃದ್ದಿ ಪಡಿಸಲಾಗುವುದು

ಮರ್ದಾಳ ಗ್ರಾ.ಪಂ. ಮಕ್ಕಳ ಗ್ರಾಮ ಸಭೆ ► ವಿದ್ಯಾರ್ಥಿಗಳ ಸಮಸ್ಯೆಗಳ ಕುರಿತು ಚರ್ಚೆ Read More »

ಕರಾವಳಿ

ಸಬಳೂರು: ಶ್ರೀ ರಾಮ ಗೆಳೆಯರ ಬಳಗದ ವಾರ್ಷಿಕ ಸಭೆ ► ಅಧ್ಯಕ್ಷರಾಗಿ ಪ್ರಶಾಂತ್ ಕೊಲ್ಯ, ಪ್ರಧಾನ ಕಾರ್ಯದರ್ಶಿಯಾಗಿ ಜಯಪ್ರಕಾಶ್ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ನ.13. ಪುತ್ತೂರು ತಾಲೂಕು ಕೊಯಿಲ ಗ್ರಾಮದ ಸಬಳೂರು ಅಯೋಧ್ಯಾನಗರ ಶ್ರೀ ರಾಮ ಗೆಳೆಯರ ಬಳಗದ ವಾರ್ಷಿಕ ಸಭೆಯು ಶ್ರೀ ರಾಮ ಭಜನಾ ಮಂದಿರದಲ್ಲಿ ಭಾನುವಾರ ನಡೆಯಿತು. ಸಂಘದ ವಾರ್ಷಿಕ ಸಭೆಯಲ್ಲಿ ಪದಾಧಿಕಾರಿಗಳ ಆಯ್ಕೆ ನಡಯಿತು. ನೂತನ ಅಧ್ಯಕ್ಷರಾಗಿ ಪ್ರಶಾಂತ್ ಕೊಲ್ಯ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಜಯಪ್ರಕಾಶ್ ಕಡೆಂಬ್ಯಾಲು ಆಯ್ಕೆಯಾಗಿದ್ದಾರೆ. ಗೌರವಧ್ಯಕ್ಷರಾಗಿ ಪ್ರವೀಣ್ ಕುಮಾರ್ ನಿಡೇಲು, ಕೋಶಾಧಿಕಾರಿಯಾಗಿ ಪ್ರವೀಣ್‍ರಾಜ್ ಕೊಲ್ಯ, ಉಪಾಧ್ಯಕ್ಷರಾಗಿ ಮೋಹನ್ ಓಕೆ, ಗುರುಪ್ರಸಾದ್ ಪಟ್ಟೆದಮೂಲೆ, ಉಮೇಶ ಬುಡಲ್ಲೂರು, ಜೊತೆಕಾರ್ಯದರ್ಶಿಯಾಗಿ ನಾಗೇಶ್ ಕಡೆಂಬ್ಯಾಲು, ಬಾಲಕೃಷ್ಣ

ಸಬಳೂರು: ಶ್ರೀ ರಾಮ ಗೆಳೆಯರ ಬಳಗದ ವಾರ್ಷಿಕ ಸಭೆ ► ಅಧ್ಯಕ್ಷರಾಗಿ ಪ್ರಶಾಂತ್ ಕೊಲ್ಯ, ಪ್ರಧಾನ ಕಾರ್ಯದರ್ಶಿಯಾಗಿ ಜಯಪ್ರಕಾಶ್ ಆಯ್ಕೆ Read More »

ಕರಾವಳಿ
Scroll to Top