News Kadaba

ನೇಣು ಬಿಗಿದ ಸ್ಥಿತಿಯಲ್ಲಿ ಬೋಟ್ ಚಾಲಕನ ಶವ ಪತ್ತೆ

(ನ್ಯೂಸ್ ಕಡಬ) newskadaba.com ಕುಂದಾಪುರ, ನ.6. ಬೋಟ್ ಚಾಲಕನೊಬ್ಬನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಗಂಗೊಳ್ಳಿ ಠಾಣಾ ವ್ಯಾಪ್ತಿಯ ಮ್ಯಾಂಗನೀಸ್ ರಸ್ತೆಯ ಸಮೀಪ ನಡೆದಿದೆ. ಮೃತ ಯುವಕನನ್ನು ಕುಂದಾಪುರ ನಿವಾಸಿ ಉಮೇಶ ಮೋಗವೀರ (32) ಎಂದು ಗುರುತಿಸಲಾಗಿದೆ. ಕಳೆದ ಒಂದು ವರ್ಷದಿಂದ ಬೋಟ್ ಚಾಲಕನಾಗಿದ್ದು, ಮ್ಯಾಂಗನೀಸ್ ಬೋಟ್ ಕಟ್ಟುವ ಸ್ಥಳದಲ್ಲಿ ಯುವಕನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ನೇಣು ಹಾಕಿ ಯಾರೋ ಕೊಲೆ ಮಾಡಿದ್ದಾರೆಂದು  ಕುಟುಂಬಸ್ಥರು ಆರೋಪಿಸಿದ್ದು ಇದರ ಬಗ್ಗೆ ಸೂಕ್ತ ತನಿಖೆಗಾಗಿ ಆಗ್ರಹಿಸಿದ್ದಾರೆ. ಗಂಗೊಳ್ಳಿ […]

ನೇಣು ಬಿಗಿದ ಸ್ಥಿತಿಯಲ್ಲಿ ಬೋಟ್ ಚಾಲಕನ ಶವ ಪತ್ತೆ Read More »

ಕರಾವಳಿ

ಜಿಲ್ಲಾ ಮಟ್ಟದ ದೇಹದಾರ್ಢ್ಯ ಸ್ಪರ್ಧೆ ನಡೆಯುತ್ತಿರುವಾಗಲೇ ► ಬಂಟ್ವಾಳದ ಸ್ಪರ್ಧಿ ಕುಸಿದು ಬಿದ್ದು ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ನ.6. ವ್ಯಕ್ತಿಯೋರ್ವ ದೇಹದಾರ್ಢ್ಯ ಸ್ಪರ್ಧೆಯಲ್ಲಿ‌ ಭಾಗವಹಿಸುತ್ತಿರುವಾಗಲೇ ಕುಸಿದು ಬಿದ್ದಿದ್ದು, ಬಳಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಭಾನುವಾರ ನಡೆದಿದೆ. ಬಂಟ್ವಾಳ ತಾಲೂಕು ಫರಂಗಿಪೇಟೆಯ ವಿನಯರಾಜ್ (34) ಮೃತಪಟ್ಟವರು. ಭಾನುವಾರ ರಾತ್ರಿ ಅಮೆಚೂರು ಬಾಡಿ ಬಿಲ್ಡರ್ಸ್ ಅಸೋಸಿಯೇಶನ್ ಡಾನ್ ಬಾಸ್ಕೊ ಸಭಾಂಗಣದಲ್ಲಿ ಏರ್ಪಡಿಸಿದ್ದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ದೇಹದಾರ್ಢ್ಯ ಸ್ಪರ್ಧೆಯಲ್ಲಿ‌ ವಿನಯರಾಜ್ ಕೂಡಾ ಸ್ಪರ್ಧಿಸಿದ್ದರು. ಪವರ್ ಲಿಫ್ಟರ್ ಆಗಿದ್ದ ವಿನಯರಾಜ್ ಇದೇ ಮೊದಲ ಬಾರಿಗೆ ಜಿಲ್ಲಾ ಮಟ್ಟದ ದೇಹದಾರ್ಢ್ಯ ಸ್ಪರ್ಧೆಯಲ್ಲಿ‌ ಭಾಗವಹಿಸಿದ್ದರು. ಪ್ರದರ್ಶನ ನೀಡುತ್ತಿದ್ದಂತೆ

ಜಿಲ್ಲಾ ಮಟ್ಟದ ದೇಹದಾರ್ಢ್ಯ ಸ್ಪರ್ಧೆ ನಡೆಯುತ್ತಿರುವಾಗಲೇ ► ಬಂಟ್ವಾಳದ ಸ್ಪರ್ಧಿ ಕುಸಿದು ಬಿದ್ದು ಮೃತ್ಯು Read More »

ಕರಾವಳಿ

ದ.ಕ.ಜಿಲ್ಲಾ ಯುವಜನ ಒಕ್ಕೂಟ ವತಿಯಿಂದ ► ಸಚಿವ ಪ್ರಮೋದ್ ಮಧ್ವರಾಜ್ ಅವರಿಗೆ ಅಭಿನಂದನೆ

(ನ್ಯೂಸ್ ಕಡಬ) newskadaba.com ಸವಣೂರು, ನ.6. ದ.ಕ.ಜಿಲ್ಲಾ ಯುವಜನ ಒಕ್ಕೂಟದ ಮನವಿಯನ್ನು ಪುರಸ್ಕರಿಸಿ ಯುವಜನ ಮೇಳ, ಯುವಜನೋತ್ಸವ, ಯುವಸಮ್ಮೇಳನ ಕಾರ್ಯಾಗಾರವನ್ನು ಪ್ರತ್ಯೇಕವಾಗಿ ಆಯೋಜಿಸಲು ಕ್ರಮಕೈಗೊಂಡು ಯುವಜನರ ಬೇಡಿಕೆಯನ್ನು ಈಡೇರಿಸಿದಕ್ಕಾಗಿ ದ.ಕ.ಜಿಲ್ಲಾ ಯುವಜನ ಒಕ್ಕೂಟದ ವತಿಯಿಂದ ಯುವ ಸಬಲೀಕರಣ ಮತ್ತು ಕ್ರೀಡೆ ಹಾಗೂ ಮೀನುಗಾರಿಕಾ ಸಚಿವರಾದ ಪ್ರಮೋದ್ ಮಧ್ವರಾಜ್ ಅವರನ್ನು ಉಡುಪಿಯಲ್ಲಿ ಬೇಟಿಯಾಗಿ ಅಭಿನಂದನೆ ಸಲ್ಲಿಸಲಾಯಿತು. ಈ ಸಂದರ್ಭ ಪುತ್ತೂರು ತಾಲೂಕು ಕ್ರೀಡಾಂಗಣದ ಅಭಿವೃದ್ಧಿಗಾಗಿ ಮಂಜೂರುಗೊಳಿಸಿದ ಅನುದಾನವನ್ನು ಬಿಡುಗಡೆ ಮಾಡುವಂತೆಯೂ ಕೇಳಿಕೊಳ್ಳಲಾಯಿತು. ಈ ಸಂಧರ್ಭ ದ.ಕ.ಜಿಲ್ಲಾ ಯುವಜನ ಒಕ್ಕೂಟದ ಅಧ್ಯಕ್ಷ

ದ.ಕ.ಜಿಲ್ಲಾ ಯುವಜನ ಒಕ್ಕೂಟ ವತಿಯಿಂದ ► ಸಚಿವ ಪ್ರಮೋದ್ ಮಧ್ವರಾಜ್ ಅವರಿಗೆ ಅಭಿನಂದನೆ Read More »

ಕರಾವಳಿ

ಕಡಬ ಮುಖ್ಯ ಪೇಟೆಯಲ್ಲಿ ಅಪರಿಚಿತ ಶವ ಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ನ.06. ಇಲ್ಲಿನ ಮುಖ್ಯ ಪೇಟೆಯ ಅಮ್ಮೂಸ್ ಜನರಲ್‌ ಸ್ಟೋರ್ ಅಂಗಡಿಯ ಮುಂಭಾಗದಲ್ಲಿ ಅಪರಿಚಿತ ಶವವೊಂದು ಪತ್ತೆಯಾದ ಘಟನೆ ಸೋಮವಾರ ಮುಂಜಾನೆ ನಡೆದಿದೆ. ಸುಮಾರು 35 ರಿಂದ 40 ವರ್ಷ ಪ್ರಾಯವನ್ನು ಹೋಲುವ ಅಪರಿಚಿತ ಗಂಡಸಿನ ಶವವು ಇದಾಗಿದ್ದು, ಸ್ಥಳೀಯರು ಗಮನಿಸಿ ಕಡಬ ಪೊಲೀಸ್ ಠಾಣೆಗೆ ನೀಡಿದ ಮಾಹಿತಿಯನ್ವಯ ಮೃತದೇಹವನ್ನು ಕಡಬ ಸಮುದಾಯ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

ಕಡಬ ಮುಖ್ಯ ಪೇಟೆಯಲ್ಲಿ ಅಪರಿಚಿತ ಶವ ಪತ್ತೆ Read More »

ಕರಾವಳಿ

ಬೆಳ್ತಂಗಡಿ: ನೇಣು ಬಿಗಿದು ಯುವತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ನ.06. ಯುವತಿಯೋರ್ವಳು ತನ್ನ ಮನೆಯ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿಯ ನಾವೂರು ಎಂಬಲ್ಲಿ ಭಾನುವಾರದಂದು ರಾತ್ರಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡಾಕೆಯನ್ನು ಬೆಳ್ತಂಗಡಿ ನಾವೂರು ನಿವಾಸಿ ಮಹಮ್ಮದ್ ಎಂಬವರ ಪುತ್ರಿ ಸೌಲತ್(21) ಎಂದು ಗುರುತಿಸಲಾಗಿದೆ. ಈಕೆ ತನ್ನ ಕೊಠಡಿಯಲ್ಲಿ ನೇಣು ಬಿಗಿದಿರುವುದನ್ನು ಗಮನಿಸಿದ ಸ್ಥಳೀಯರು ತಕ್ಷಣ ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲಿಸಿದರಾದರೂ ಹಾದಿ ಮಧ್ಯೆ ಮೃತಪಟ್ಟಿದ್ದಾಳೆ.

ಬೆಳ್ತಂಗಡಿ: ನೇಣು ಬಿಗಿದು ಯುವತಿ ಆತ್ಮಹತ್ಯೆ Read More »

ಕರಾವಳಿ

ಉಳ್ಳಾಲ: ಬಸ್ – ಬೈಕ್ ಢಿಕ್ಕಿ ► ಸವಾರ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಉಳ್ಳಾಲ, ನ.05. ಬಸ್ಸೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಕಲ್ಲಾಪು ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ಸಂಜೆ ನಡೆದಿದೆ. ಮೃತ ಬೈಕ್ ಸವಾರನನ್ನು ಉಳ್ಳಾಲ್ ಬೈಲ್ ನಿವಾಸಿ ಮಹಮ್ಮದ್ ಸಯ್ಯದ್ ಶಲೀಲ್ ಎಂದು ಗುರುತಿಸಲಾಗಿದೆ. ತುಂಬೆ ಬಿ.ಎ. ಕಾಲೇಜಿನ ಡಿಪ್ಲೋಮಾ ವಿದ್ಯಾರ್ಥಿಯಾಗಿರುವ ಇವರು ಕಿವಿಗೆ ಇಯರ್ ಫೋನ್ ಇಟ್ಟು ಮೊಬೈಲ್ ನಲ್ಲಿ ಸಂಭಾಷಣೆ ಮಾಡುತ್ತ ಬೈಕ್ ಚಲಾಯಿಸುತ್ತಿದ್ದರು ಎನ್ನಲಾಗಿದೆ. ಈ ವೇಳೆ ಬೈಕ್ ಸ್ಕಿಡ್

ಉಳ್ಳಾಲ: ಬಸ್ – ಬೈಕ್ ಢಿಕ್ಕಿ ► ಸವಾರ ಸ್ಥಳದಲ್ಲೇ ಮೃತ್ಯು Read More »

ಕರಾವಳಿ

ವಿಧಾನಸಭಾ ಚುನಾವಣೆಯಲ್ಲಿ ಮಹಿಳಾ‌ ಮೀಸಲಾತಿ ► ಶೇ.33 ರಷ್ಟು ಮಹಿಳೆಯರಿಗೆ ಟಿಕೆಟ್ ನೀಡಲು ಕಾಂಗ್ರೆಸ್ ಬದ್ಧ:ಡಾ.ಜಿ.ಪರಮೇಶ್ವರ್

(ನ್ಯೂಸ್ ಕಡಬ) newskadaba.com ಬೆಂಗಳೂರು, ನ.04. 2018 ರ ವಿಧಾನಸಭಾ ಚುನಾವಣೆಯಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಅನ್ವಯ ಟಿಕೆಟ್ ನೀಡಲು ಕಾಂಗ್ರೆಸ್ ಬದ್ಧವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಅವರು ಶನಿವಾರದಂದು ನಗರದ ಅರಮನೆ ಮೈದಾನದಲ್ಲಿರುವ ಟೆನ್ನಿಸ್ ಪೆವಿಲಿಯನ್‌ನಲ್ಲಿ ಆಯೋಜಿಸಿದ್ದ ರಾಜ್ಯ ಮಹಿಳಾ ಕಾಂಗ್ರೆಸ್ ಸಮಿತಿಯ ಕಾರ್ಯಕಾರಿಣಿ ಸಭೆಯನ್ನುದ್ದೇಶಿಸಿ ಮಾತನಾಡಿ, ಮುಂದಿನ ಚುನಾವಣೆಯಲ್ಲಿ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಅತ್ಯಂತ ಪ್ರಮುಖ ಪಾತ್ರವಹಿಸಿ ರಾಜ್ಯದಲ್ಲಿ ಮತ್ತೊಮ್ಮೆ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಬೇಕು ಎಂದು ಕರೆ ನೀಡಿದರು.

ವಿಧಾನಸಭಾ ಚುನಾವಣೆಯಲ್ಲಿ ಮಹಿಳಾ‌ ಮೀಸಲಾತಿ ► ಶೇ.33 ರಷ್ಟು ಮಹಿಳೆಯರಿಗೆ ಟಿಕೆಟ್ ನೀಡಲು ಕಾಂಗ್ರೆಸ್ ಬದ್ಧ:ಡಾ.ಜಿ.ಪರಮೇಶ್ವರ್ Read More »

ಕರ್ನಾಟಕ

ತೊಕ್ಕೊಟ್ಟು: ಲಾರಿ – ಆಕ್ಟಿವಾ ಢಿಕ್ಕಿ ► ಓರ್ವ ಮೃತ್ಯು, ಇನ್ನೋರ್ವ ಗಂಭೀರ

(ನ್ಯೂಸ್ ಕಡಬ) newskadaba.com ಮಂಗಳೂರು, ನ.05. ಲಾರಿಯೊಂದು ಹೋಂಡಾ ಆಕ್ಟಿವಾಗೆ ಢಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟು ಸಹ ಸವಾರ ಗಂಭೀರ ಗಾಯಗೊಂಡ ಘಟನೆ ಶನಿವಾರ ರಾತ್ರಿ ತೊಕ್ಕೊಟ್ಟು ಎಂಬಲ್ಲಿ ನಡೆದಿದೆ. ಮೃತ ಸವಾರನನ್ನು ಪಡೀಲ್ ನಿವಾಸಿ ರಾಜೇಶ್ ವೇಗಸ್ ಎಂದು ಗುರುತಿಸಲಾಗಿದೆ. ಗಂಭೀರ ಗಾಯಗೊಂಡಿತುವ ಸಹ ಸವಾರನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ನಡೆದ ಬಳಿಕ ಸ್ಥಳೀಯರು ಸ್ಥಳದಲ್ಲಿ ಜಮಾಯಿಸಿ ರಸ್ತೆ ಅವ್ಯವಸ್ಥೆಯ ಬಗ್ಗೆ ಕೆಲಕಾಲ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ಉಳ್ಳಾಲ ಇನ್ಸ್‌ಪೆಕ್ಟರ್

ತೊಕ್ಕೊಟ್ಟು: ಲಾರಿ – ಆಕ್ಟಿವಾ ಢಿಕ್ಕಿ ► ಓರ್ವ ಮೃತ್ಯು, ಇನ್ನೋರ್ವ ಗಂಭೀರ Read More »

ಕರಾವಳಿ

ಬಿಸಿಯೂಟ ಕಿತ್ತುಕೊಂಡ ಸರ್ಕಾರಕ್ಕೆ ಸವಾಲು ► ಅನ್ನಕ್ಕೆ ಬೇಕಾದ ಅಕ್ಕಿಯನ್ನು ತಾವೇ ಬೆಳೆದ ಕಲ್ಲಡ್ಕ ಶಾಲೆಯ ಮಕ್ಕಳು

(ನ್ಯೂಸ್ ಕಡಬ) newskadaba.com ಕಲ್ಲಡ್ಕ, ನ.4. ಮದ್ಯಾಹ್ನದ ಬಿಸಿಯೂಟ ಕಿತ್ತುಕೊಂಡ ಸರ್ಕಾರಕ್ಕೆ ಸವಾಲು ಹಾಕಿದ ಕಲ್ಲಡ್ಕ ಶಾಲೆಯ ಮಕ್ಕಳು ಇದೀಗ ತಾವೇ ಭತ್ತ ಬೆಳೆದು ತಮ್ಮ ಅನ್ನಕ್ಕೆ ಬೇಕಾದ ಅಕ್ಕಿಯನ್ನು ತಾವೇ ಬೆಳೆದು ಸರ್ಕಾರಕ್ಕೆ ಸೆಡ್ಡು ಹೊಡೆದಿದ್ದಾರೆ. ಕಲ್ಲಡ್ಕ ಪ್ರಭಾಕರ್ ಭಟ್ಟರ ಶ್ರೀರಾಮ ವಿದ್ಯಾಕೇಂದ್ರದ ಶಾಲೆಯ ಮಕ್ಕಳಿಗೆ ಬರುತ್ತಿದ್ದ ಅನ್ನದಾನದ ಅನುದಾನವನ್ನು ಆಗಸ್ಟ್ ತಿಂಗಳಲ್ಲಿ ಸರ್ಕಾರ ಕಿತ್ತುಕೊಂಡಿತ್ತು. ಇದನ್ನು ಸವಾಲಾಗಿ ಸ್ವೀಕರಿಸಿದ ಕಲ್ಲಡ್ಕ ಶಾಲೆಯ ಮಕ್ಕಳು ಶಾಲೆಗೆ ಸೇರಿದ ಸುಮಾರು ಏಳು ಎಕರೆ ಗದ್ದೆಯಲ್ಲಿ ತಾವೇ ಭತ್ತದ ಪೈರು ನಾಟಿ

ಬಿಸಿಯೂಟ ಕಿತ್ತುಕೊಂಡ ಸರ್ಕಾರಕ್ಕೆ ಸವಾಲು ► ಅನ್ನಕ್ಕೆ ಬೇಕಾದ ಅಕ್ಕಿಯನ್ನು ತಾವೇ ಬೆಳೆದ ಕಲ್ಲಡ್ಕ ಶಾಲೆಯ ಮಕ್ಕಳು Read More »

ಕರಾವಳಿ

ಮಂಗಳೂರು: ಏರ್‌ಪೋರ್ಟ್‌ನ ಶೌಚಾಲಯದಲ್ಲಿ ಅಕ್ರಮ ಚಿನ್ನ ಪತ್ತೆ..!!!

(ನ್ಯೂಸ್ ಕಡಬ) newskadaba.com ಮಂಗಳೂರು , ನ.4. ಇಲ್ಲಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಶೌಚಾಲಯದಲ್ಲಿ ಚಿನ್ನದ ಗಟ್ಟಿಯಿರುವ ಬ್ಯಾಗೊಂದು ಪತ್ತೆಯಾದ ಘಟನೆ ವರದಿಯಾಗಿದೆ. ದುಬೈಯಿಂದ ಮಂಗಳೂರಿಗೆ ತಲುಪಿದ್ದ ಸ್ಪೈಸ್ ಜೆಟ್ ಎಸ್.ಜಿ.60ರಲ್ಲಿ ಬಂದಿದ್ದ ಪ್ರಯಾಣಿಕನೊಬ್ಬ ಈ ಬ್ಯಾಗನ್ನು ಬಿಟ್ಟು ಹೋಗಿದ್ದು, ಸ್ವಚ್ಛತಾ ಸಿಬ್ಬಂದಿ ಶೌಚಾಲಯ ಸ್ವಚ್ಛಗೊಳಿಸುವ ಸಂದರ್ಭ ಈ ಬ್ಯಾಗನ್ನು ಕಂಡಿದ್ದು, ಸಂಬಂಧಪಟ್ಟವರಿಗೆ ತಿಳಿಸಿದ್ದಾರೆ. ಕಂದಾಯ ಗುಪ್ತಚರ ಇಲಾಖೆಯ ಸಿಬ್ಬಂದಿಗಳು ಸ್ಥಳಕ್ಕ ಆಗಮಿಸಿ, ಪರಿಶೀಲನೆ ನಡೆಸಿದಾಗ 1.166 ಗ್ರಾಂ.ವಿದೇಶಿ ಮೂಲದ ಚಿನ್ನದ ಬಿಸ್ಕತ್ತುಗಳಿರುವುದು ಬೆಳಕಿಗೆ ಬಂದಿದೆ. ಇಪ್ಪತ್ತನಾಲ್ಕು ಕ್ಯಾರೆಟ್

ಮಂಗಳೂರು: ಏರ್‌ಪೋರ್ಟ್‌ನ ಶೌಚಾಲಯದಲ್ಲಿ ಅಕ್ರಮ ಚಿನ್ನ ಪತ್ತೆ..!!! Read More »

ಕರಾವಳಿ
Scroll to Top