News Kadaba

ಸಾರಿಗೆ ಸಂಸ್ಥೆಗಳಿಗೂ ತಟ್ಟಿದ GST ಬಿಸಿ ► ಗುಜರಿ ಬಸ್‌’ಗಳ ಖರೀದಿಗೆ ತೆರಿಗೆ ಎಷ್ಟು ಗೊತ್ತೆ…?

(ನ್ಯೂಸ್ ಕಡಬ) newskadaba.com ಬೆಂಗಳೂರು, ನ.4. ಕೇಂದ್ರ ಸರ್ಕಾರ ದೇಶದಲ್ಲಿ ಜಿಎಸ್ ಟಿ ಜಾರಿಗೆ ತಂದ ಮೇಲೆ  ಉದ್ಯಮ, ವ್ಯಾಪಾರ, ವಹಿವಾಟಿನ ಮೇಲೆ ಮಹತ್ವದ ಬದಲಾವಣೆಗಳು ನಡೆದಿವೆ. ಆದ್ರೆ ಜಿಎಸ್ ಟಿಯ ಬಿಸಿ ಈಗ ಸಾರಿಗೆ ಸಂಸ್ಥೆಗಳಿಗೂ ತಟ್ಟಿದೆ. ಜಿಎಸ್ ಟಿಯಿಂದ  ಸಾರಿಗೆ ಸಂಸ್ಥೆ ಸಂಕಷ್ಟಕ್ಕೀಡಾಗಿದೆ. GST ಜಾರಿಗೆ ಬಂದ ನಂತರ ಕೆಎಸ್​’ಆರ್​ಟಿಸಿಗೆ ಬಿಸಿ ತಟ್ಟಿದೆ. ಈಗಾಗಲೆ ಗುಜರಿಗೆ ಸೇರಿರುವ 800 ಬಸ್‌’ಗಳ ಖರೀದಿಗೆ ಗುಜರಿಯವರು ಮುಂದೆ ಬರುತ್ತಿಲ್ಲ. ಕಾರಣವೇನು ಅಂತಿರಾ..? ಹೌದು ಗುಜರಿ ವಸ್ತುಗಳ ಖರೀದಿ ಮೇಲೆ ಶೇಕಡ […]

ಸಾರಿಗೆ ಸಂಸ್ಥೆಗಳಿಗೂ ತಟ್ಟಿದ GST ಬಿಸಿ ► ಗುಜರಿ ಬಸ್‌’ಗಳ ಖರೀದಿಗೆ ತೆರಿಗೆ ಎಷ್ಟು ಗೊತ್ತೆ…? Read More »

ಕರಾವಳಿ

ಮಾಣಿ: ಆಟೋ ರಿಕ್ಷಾ ಪಲ್ಟಿ ► ಓರ್ವ ಮೃತ್ಯು, ಇಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ನ.04. ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪದ ಬುಡೋಳಿ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾವೊಂದು ಉರುಳಿಬಿದ್ದ ಪರಿಣಾಮ ಓರ್ವ ಮೃತಪಟ್ಟು ಇಬ್ಬರು ಗಾಯಗೊಂಡ ಘಟನೆ ಶನಿವಾರ ಬೆಳಗ್ಗೆ ನಡೆದಿದೆ. ಮೃತರನ್ನು ಬುಡೋಳಿ ಸಮೀಪದ ಬೊಳ್ಳುಕಲ್ಲು ನಿವಾಸಿ ದಿನೇಶ್ ಎಂದು ಗುರುತಿಸಲಾಗಿದೆ. ಬುಡೋಳಿಯಿಂದ ಮಾಣಿ ಕಡೆಗೆ ತೆರಳುತ್ತಿದ್ದ ರಿಕ್ಷಾದ ಮುಂಭಾಗದ ಚಕ್ರ ಕಳಚಿ ಬಿದ್ದ ಪರಿಣಾಮ ರಿಕ್ಷಾ ಪಲ್ಟಿಯಾಗಿದೆ. ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಾಣಿ: ಆಟೋ ರಿಕ್ಷಾ ಪಲ್ಟಿ ► ಓರ್ವ ಮೃತ್ಯು, ಇಬ್ಬರಿಗೆ ಗಾಯ Read More »

ಕರಾವಳಿ

ಸ್ನೇಹಿತರೊಂದಿಗೆ ಮ್ಯೂಸಿಕ್ ಪಾರ್ಟಿ ಮಾಡಬೇಕೆ…??? ►ಹಾಗಾದರೆ ಈ ಆ್ಯಪ್ ಡೌನ್‌ಲೋಡ್ ಮಾಡಿ…!!!

(ನ್ಯೂಸ್ ಕಡಬ) newskadaba.com ಕಡಬ, ನ.4.  ಸ್ನೇಹಿತರೊಂದಿಗೆ ಸಂಗೀತವನ್ನು ಪ್ಲೇ ಮಾಡಿ ಪಾರ್ಟಿ ಖುಷಿ ಹೆಚ್ಚಿಸ ಬೇಕೆ..??  ಏಕಕಾಲದಲ್ಲಿ  ಉಚ್ಛ ಸ್ವರದಲ್ಲಿ ನಿಮ್ಮ ಹ್ಯಾಂಡ್ ಸೆಟ್‌ನಲ್ಲಿ ಯೂಟ್ಯೂಬ್, ಸ್ಪಾಟಿಫೈ, ಸೌಂಡ್‌ಕ್ಲೌಡ್ ಅಥವಾ ಮ್ಯೂಸಿಕ್ ಲೈಬ್ರೆರಿಯಲ್ಲಿ ಸಂಗೀತವನ್ನು ಪ್ಲೇ ಮಾಡಿ ಪಾರ್ಟಿಯಲ್ಲಿ ಕುಣಿಯಲು ನೆರವಾಗುವ  ‘ಪಾರ್ಟಿ ಮ್ಯೂಸಿಕ್ ಆ್ಯಪ್’ ಬಂದಿದೆ. ಹೌದು ಈ ಆ್ಯಪ್ ಹೆಸರು “ಆ್ಯಂಪ್‌ಮಿ” ಅಂತ. ಈ ‘ಆ್ಯಂಪ್‌ಮಿ’ ಆ್ಯಪ್ ನಲ್ಲಿ ಜೈಂಟ್ ಮಲ್ಟಿ ಸ್ಪೀಕರ್ ಸೆಟಪ್ ಸಹಾಯದಿಂದ ಮೊಬೈಲ್ ಫೋನ್ ಹಾಗೂ ಬ್ಲೂಟೂಥ್ ಸ್ಪೀಕರ್ ಬಳಸಿ

ಸ್ನೇಹಿತರೊಂದಿಗೆ ಮ್ಯೂಸಿಕ್ ಪಾರ್ಟಿ ಮಾಡಬೇಕೆ…??? ►ಹಾಗಾದರೆ ಈ ಆ್ಯಪ್ ಡೌನ್‌ಲೋಡ್ ಮಾಡಿ…!!! Read More »

ತಂತ್ರಜ್ಞಾನ, ಲೈಫ್‍ಸ್ಟೈಲ್

ಖಾಸಗಿ ವೈದ್ಯರ ಮುಷ್ಕರ – ಸರಕಾರಿ ವೈದ್ಯರ ನಿರ್ಲಕ್ಷ್ಯ► ಬಲಿಯಾಯಿತು ಬಡಜೀವ

(ನ್ಯೂಸ್ ಕಡಬ) newskadaba.com ಕಾರವಾರ, ನ.04. ಖಾಸಗಿ ಆಸ್ಪತ್ರೆಯ ವೈದ್ಯರು ಸರ್ಕಾರದ ವಿರುದ್ಧ ಶುಕ್ರವಾರ ಮುಷ್ಕರ ನಡೆಸಿದ ಪರಿಣಾಮ ಸೂಕ್ತ ಚಿಕಿತ್ಸೆ ದೊರೆಯದೆ ವಿದ್ಯಾರ್ಥಿನಿಯೊಬ್ಬಳು ಬಲಿಯಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ಗೋರ್ಸಗದ್ದೆ ನಿವಾಸಿ ರಾಜೇಶ್ವರಿ(21) ಎಂದು ಗುರುತಿಸಲಾಗಿದೆ. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಈಕೆಯನ್ನು ಖಾಸಗಿ ಆಸ್ಪತ್ರೆ ವೈದ್ಯರ ಮುಷ್ಕರ ಹಿನ್ನೆಲೆಯಲ್ಲಿ ಮಂಚಿಕೇರಿ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಅಲ್ಲಿ ವೈದ್ಯರು ಮತ್ತು ಸಿಬ್ಬಂದಿ ಯಾರೂ ಇಲ್ಲದ ಕಾರಣ ವಿದ್ಯಾರ್ಥಿನಿಗೆ ಸಕಾಲಕ್ಕೆ

ಖಾಸಗಿ ವೈದ್ಯರ ಮುಷ್ಕರ – ಸರಕಾರಿ ವೈದ್ಯರ ನಿರ್ಲಕ್ಷ್ಯ► ಬಲಿಯಾಯಿತು ಬಡಜೀವ Read More »

ಕರ್ನಾಟಕ

ನಾಳೆ‌ ಬಿ.ಸಿ.ರೋಡ್ ನಲ್ಲಿ ಉಚಿತ ಹಿಜಾಮ ಚಿಕಿತ್ಸಾ ಶಿಬಿರ

(ನ್ಯೂಸ್ ಕಡಬ) newskadaba.com ಬಂಟ್ವಾಳ, ನ.04. ಜವಾನ್ ಫ್ರೆಂಡ್ಸ್ ಬಿ.ಸಿ.ರೋಡ್ ಹಾಗೂ ಯು.ಟಿ.ಖಾದರ್ ಅಭಿಮಾನಿಗಳ ಬಳಗ ಮಂಗಳೂರು ಜಂಟಿ ಆಶ್ರಯದಲ್ಲಿ ವೆನ್ಲಾಕ್ ಜಿಲ್ಲಾ ಆಸ್ಪತ್ರೆ ಮಂಗಳೂರು ಸಹಯೋಗದೊಂದಿಗೆ ನ.05 ಭಾನುವಾರದಂದು ಉಚಿತ ಹಿಜಾಮ ಚಿಕಿತ್ಸಾ ಶಿಬಿರವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಡಂಗೆ, ಬಿ.ಸಿ.ರೋಡ್ ನಲ್ಲಿ ನಡೆಯಲಿದೆ. ರಾಜ್ಯ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ರಮಾನಾಥ ರೈ ಕಾರ್ಯಕ್ರಮ ಉದ್ಘಾಟಿಸುವರು. ಆಹಾರ ಮತ್ತು ನಾಗರಿಕ ಸರಬರಾಜು ಸಚಿವರಾದ ಯು.ಟಿ.ಖಾದರ್ ಅಧ್ಯಕ್ಷತೆ ವಹಿಸಲಿದ್ದಾರೆ

ನಾಳೆ‌ ಬಿ.ಸಿ.ರೋಡ್ ನಲ್ಲಿ ಉಚಿತ ಹಿಜಾಮ ಚಿಕಿತ್ಸಾ ಶಿಬಿರ Read More »

ಕರಾವಳಿ

ಸಿಎಂ ಸಿದ್ದರಾಮಯ್ಯ ಇಂದು ಮಂಗಳೂರಿಗೆ

(ನ್ಯೂಸ್ ಕಡಬ) newskadaba.com ಮಂಗಳೂರು, ನ.04. ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯರವರು ನ.04 ಶನಿವಾರದಂದು ಬೆಳಿಗ್ಗೆ ಮಂಗಳೂರಿಗೆ ಆಗಮಿಸಲಿದ್ದಾರೆ. ನಗರದ ನೆಹರೂ ಮೈದಾನದಲ್ಲಿ ಎರಡು ದಿನಗಳ ಕಾಲ ನಡೆಯಲಿರುವ ರಾಷ್ಟ್ರೀಯ ಕರಾಟೆ ಸ್ಪರ್ಧೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರದಂದು ಬೆಳಗ್ಗೆ 10 ಗಂಟೆಗೆ ಉದ್ಘಾಟಿಸಲಿದ್ದಾರೆ. ತದನಂತರ ಅವರು ಬೇರೆ ಕಾರ್ಯಕ್ರಮದ ನಿಮಿತ್ತ ಮಂಗಳೂರು ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಹಿಂತಿರುಗಲಿದ್ದಾರೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ತಿಳಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಇಂದು ಮಂಗಳೂರಿಗೆ Read More »

ಕರ್ನಾಟಕ

ದುಬೈನಲ್ಲಿ ರಸ್ತೆ ಅಪಘಾತ ► ದಕ್ಷಿಣ ಕನ್ನಡದ ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ನ.03. ದುಬೈನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ‌ ಯುವಕನೋರ್ವ ಮೃತಪಟ್ಟ ಘಟನೆ ಶುಕ್ರವಾರದಂದು ನಡೆದಿದೆ. ಮೃತ ಯುವಕನನ್ನು ಮೂಡಬಿದಿರೆಯ ಗಂಟಾಲ್ಕಟ್ಟೆ ನಿವಾಸಿ ರಿಯಾಝ್ ಅಹಮ್ಮದ್(25 ) ಎಂದು ಗುರುತಿಸಲಾಗಿದೆ. ದುಬೈನ ಅಜ್ಮನ್ ನಲ್ಲಿ ಉದ್ಯೋಗದಲ್ಲಿದ್ದ ರಿಯಾಝ್ ಅಹಮದ್ ತನ್ನ ಮನೆ ಕಡೆಗೆ ಕಾರು ಚಲಾಯಿಸಿಕೊಂಡು ಹೋಗುತ್ತಿದ್ದ ವೇಳೆ ಅಪಘಾತಕ್ಕೀಡಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈತ ಒಂದೂವರೆ ತಿಂಗಳ ಹಿಂದಷ್ಟೇ ಊರಿಗೆ ಬಂದು ದುಬೈಗೆ ತೆರಳಿದ್ದನೆನ್ನಲಾಗಿದ್ದು, ಮೃತದೇಹವನ್ನು ಊರಿಗೆ

ದುಬೈನಲ್ಲಿ ರಸ್ತೆ ಅಪಘಾತ ► ದಕ್ಷಿಣ ಕನ್ನಡದ ಯುವಕ ಮೃತ್ಯು Read More »

ಅಂತರ್ರಾಷ್ಟ್ರೀಯ ನ್ಯೂಸ್

ಕಡಬ: ಬೂತ್ ಮಟ್ಟದ ಕಾರ್ಯಕರ್ತರ ಸಭೆ ►ಪರಿವರ್ತನಾ ಯಾತ್ರೆ ಯಶಸ್ಸಿಗೆ ಬಿಜೆಪಿ ಕಾರ್ಯಕರ್ತರಿಗೆ ಸೂಚನೆ

(ನ್ಯೂಸ್ ಕಡಬ) newskadaba.com ಕಡಬ, ನ.3. ಸುಳ್ಯದಲ್ಲಿ ನಡೆಯುವ ನವಕರ್ನಾಟದ ನಿರ್ಮಾಣಕ್ಕಾಗಿ ಪರಿವರ್ತನಾ ಯಾತ್ರೆಯನ್ನು ಯಶಸ್ಸುಗೊಳಿಸಲು ಪ್ರತಿ ಬೂತ್ ಮಟ್ಟದ ಕಾರ್ಯಕರ್ತರು ಸನ್ನದ್ದರಾಗಬೇಕು ಎಂದು ಸಂಸದ ನಳಿನ್ ಕುಮಾರ್ ಕಟೀಲು ಹೇಳಿದರು. ಕಡಬದ ಅನುಗ್ರಹ ಸಭಾಭವನದಲ್ಲಿ ನಡೆದ ಸುಳ್ಯ ಮಂಡಲದ ನೆಲ್ಯಾಡಿ ಮತ್ತು ಕಡಬ ಶಕ್ತಿ ಕೇಂದ್ರಗಳ ಬೂತ್ ಮಟ್ಟದ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ರಾಜ್ಯದಲ್ಲಿ ಶುದ್ದಾಚಾರದ ಆಡಳಿತ ನೀಡಲು ಬಿಜೆಪಿಯನ್ನು ಗೆಲ್ಲಿಸಬೇಕು, ರಾಜ್ಯದ ಜನತೆ ಅಪೇಕ್ಷೀಸಿದಂತೆ ಕಾರ್ಯಕರ್ತರು ಕಾಂಗ್ರೆಸ್ಸ್‌ ಸರಕಾರದ ದುರಾಡಳಿತವನ್ನು ಹಾಗೂ ಕೇಂದ್ರ ಸರಕಾರದ

ಕಡಬ: ಬೂತ್ ಮಟ್ಟದ ಕಾರ್ಯಕರ್ತರ ಸಭೆ ►ಪರಿವರ್ತನಾ ಯಾತ್ರೆ ಯಶಸ್ಸಿಗೆ ಬಿಜೆಪಿ ಕಾರ್ಯಕರ್ತರಿಗೆ ಸೂಚನೆ Read More »

ಕರಾವಳಿ

ಗೂಗಲ್ ನಕ್ಷೆಯಲ್ಲಿ ಕನ್ನಡ ಬಳಕೆ ► ಸಂತಸ ವ್ಯಕ್ತಪಡಿಸಿದ ಕನ್ನಡಿಗರು

(ನ್ಯೂಸ್ ಕಡಬ) newskadaba.com ಕಡಬ, ನ.3. ಗೂಗಲ್ ನಕ್ಷೆಯಲ್ಲಿ ಈಗ ಸ್ಥಳಗಳ ಹೆಸರು ಇಂಗ್ಲಿಷ್‍‌ನಲ್ಲಿ ಮಾತ್ರ ಅಲ್ಲ ಕನ್ನಡದಲ್ಲಿಯೂ ಲಭ್ಯವಿದೆ. ಇಲ್ಲಿಯವರೆಗೆ ಗೂಗಲ್ ಮ್ಯಾಪ್‍ನಲ್ಲಿ ಸ್ಥಳಗಳ ಹೆಸರು ಇಂಗ್ಲಿಷ್‍ನಲ್ಲಿ ಮಾತ್ರ ಕಾಣುತ್ತಿತ್ತು. ಇದೀಗ ಇಂಗ್ಲಿಷ್ ಜತೆಗೆ ಕನ್ನಡದಲ್ಲಿಯೂ ಸ್ಥಳದ ಹೆಸರನ್ನು ಓದಬಹುದು. ರಾಜ್ಯೋತ್ಸವದ ಈ ಶುಭ ಸಂದರ್ಭದಲ್ಲಿ ಕನ್ನಡಿಗರಿಗೊಂದು ಸಂತೋಷದ ಸುದ್ದಿ ಇದಾಗಿದೆ. ಆಯಾ ಪ್ರಾಂತೀಯ ಭಾಷೆ ನಕ್ಷೆಯಲ್ಲಿ ಕಾಣಿಸಿಕೊಳ್ಳಲಿದೆ. ಗೂಗಲ್‌ನ ಈ ಕ್ರಮವನ್ನು ಪ್ರಶಂಸಿಸಿ, ಸಾಮಾಜಿಕ ಜಾಲತಾಣದಲ್ಲಿ ಕನ್ನಡಿಗರು ಸಂತೋಷ ವ್ಯಕ್ತಪಡಿಸಿ, ಗೂಗಲ್‌ಗೆ ಧನ್ಯವಾದಗಳನ್ನು ಅರ್ಪಿಸಿದ್ದಾರೆ.

ಗೂಗಲ್ ನಕ್ಷೆಯಲ್ಲಿ ಕನ್ನಡ ಬಳಕೆ ► ಸಂತಸ ವ್ಯಕ್ತಪಡಿಸಿದ ಕನ್ನಡಿಗರು Read More »

ಕರಾವಳಿ

ಪುತ್ತೂರು: ಕೆ.ಪಿ.ಎಲ್.ಇ ಕಾಯಿದೆ ತಿದ್ದುಪಡಿ ವಿರೋದಿಸಿ ಖಾಸಗಿ ವೈದ್ಯರ ಮುಷ್ಕರ

(ನ್ಯೂಸ್ ಕಡಬ) newskadaba.com ಪುತ್ತೂರು, ನ.03. ಕರ್ನಾಟಕ ರಾಜ್ಯ ಖಾಸಗಿ ವೈದ್ಯಕೀಯ ತಿದ್ದುಪಡಿ ಮಸೂದೆಗೆ ವಿರೋಧ ವ್ಯಕ್ತಪಡಿಸಿ ಖಾಸಗಿ ಆಸ್ಪತ್ರೆಯ ವೈದ್ಯರು ರಾಜ್ಯ ಸರಕಾರದ ವಿರುದ್ಧ ಕೈಗೊಂಡ ಮುಷ್ಕರದಿಂದಾಗಿ ಪುತ್ತೂರಿನ ಎಲ್ಲಾ ಖಾಸಗಿ ಆಸ್ಪತ್ರೆಗಳು ವೈದ್ಯಕೀಯ ಸೇವೆಯನ್ನು ಸ್ಥಗಿತಗೊಳಿಸಿತು.  

ಪುತ್ತೂರು: ಕೆ.ಪಿ.ಎಲ್.ಇ ಕಾಯಿದೆ ತಿದ್ದುಪಡಿ ವಿರೋದಿಸಿ ಖಾಸಗಿ ವೈದ್ಯರ ಮುಷ್ಕರ Read More »

ಕರಾವಳಿ
Scroll to Top