News Kadaba

ಅಡುಗೆ ಮಾಡುತ್ತಿದ್ದ ವೇಳೆ ಸಿಲಿಂಡರ್ ಸ್ಫೋಟ ► ತಗಡಿನ ಮನೆ ಜಖಂ

(ನ್ಯೂಸ್ ಕಡಬ) newskadaba.com ವಿಜಯಪುರ, ನ.2. ಮನೆಯೊಳಗೆ ಅಡುಗೆ ಮಾಡುತ್ತಿದ್ದ ವೇಳೆ ಸಿಲಿಂಡರ್ ಸ್ಫೋಟ ಗೊಂಡ ಘಟನೆ ಸಿಂದಗಿ ತಾಲೂಕಿನ ಪಡಗಾನೂರ ಗ್ರಾಮದಲ್ಲಿ ನಡೆದಿದೆ. ಘಟನೆಯಿಂದಾಗಿ ತಗಡು ಶೀಟಿನ ಮನೆ ಸಂಪೂರ್ಣವಾಗಿ ಜಖಂ ಗೊಂಡಿದೆ. ಮನೆಯಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಮನೆ ಹೊರಗೆ ಓಡಿದ ವೃದ್ದ ಮಹಿಳೆ, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯಿಂದಾಗಿ ಮನೆಯಲ್ಲಿದ್ದ ಧವಸ ಧಾನ್ಯ, ಬಟ್ಟೆ, ಗೃಹೊಪಯೋಗಿ ವಸ್ತುಗಳು ಸಂಪೂರ್ಣವಾಗಿ ಸುಟ್ಟು ನಾಶವಾಗಿದೆ. ಘಟನೆ ಕುರಿತು ದೇವರ ಹಿಪ್ಪರಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಡುಗೆ ಮಾಡುತ್ತಿದ್ದ ವೇಳೆ ಸಿಲಿಂಡರ್ ಸ್ಫೋಟ ► ತಗಡಿನ ಮನೆ ಜಖಂ Read More »

ಕರ್ನಾಟಕ

ಕಡಬ: ಕೆರೆಗೆ ಬಿದ್ದು ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ನ.02. ಇಲ್ಲಿನ ಕುಟ್ರುಪ್ಪಾಡಿ ಎಂಬಲ್ಲಿ ಮಹಿಳೆಯೋರ್ವರು ಕೆರೆಗೆ ಬಿದ್ದು ಮೃತಪಟ್ಟ ಘಟನೆ ಬುಧವಾರ ರಾತ್ರಿ ನಡೆದಿದೆ. ಮೃತ ಮಹಿಳೆಯನ್ನು ಕುಟ್ರುಪ್ಪಾಡಿ ಗ್ರಾಮದ ಹಳ್ಳಿ ನಿವಾಸಿ ರತ್ನಾವತಿ(65) ಎಂದು ಗುರುತಿಸಲಾಗಿದೆ. ಕಳೆದ 10 ವರ್ಷಗಳಿಂದ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಇವರು ಬುಧವಾರ ರಾತ್ರಿ ವೇಳೆಗೆ ಕೆರೆಗೆ ಬಿದ್ದಿದ್ದಾರೆನ್ನಲಾಗಿದೆ. ಗುರುವಾರದಂದು ಸ್ಥಳಕ್ಕೆ ಭೇಟಿ ನೀಡಿರುವ ಕಡಬ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕಡಬ: ಕೆರೆಗೆ ಬಿದ್ದು ಮಹಿಳೆ ಮೃತ್ಯು Read More »

ಕರಾವಳಿ

ವಾರುಸುಧಾರನ ಜನನ ► 83ನೇ ವಯಸ್ಸಿನಲ್ಲಿ ಗಂಡು ಮಗುವಿನ ತಂದೆಯಾದ ಶರಣ ಬಸವೇಶ್ವರ ಸಂಸ್ಥಾನದ ಪೀಠಾಧಿಪತಿ..!!!

(ನ್ಯೂಸ್ ಕಡಬ) newskadaba.com ಬೆಂಗಳೂರು, ನ.2. ಕಲಬುರಗಿಯ ಶರಣ ಬಸವೇಶ್ವರ ಸಂಸ್ಥಾನದ ಪೀಠಾಧಿಪತಿಯಾದ 83 ವರ್ಷದ .ಡಾ.ಶರಣ ಬಸಪ್ಪ ರವರು ಗಂಡು ಮಗುವಾಗಿನ ತಂದೆಯಾಗಿದ್ದಾರೆ. ಮುಂಬೈ‌ನ ಖಾಸಗಿ ಆಸ್ಪತ್ರೆಯಲ್ಲಿ ಡಾ.ಶರಣ ಬಸಪ್ಪ ರವರ ಪತ್ನಿ ದಾಕ್ಷಾಯಿಣಿಗೆ ಹೆರಿಗೆಯಾಗಿದೆ. ಶರಣ ಬಸವೇಶ್ವರ ಸಂಸ್ಥಾನಕ್ಕೆ ವಾರುಸುಧಾರನ ಜನನವಾಗಿದೆ ಈ ಹಿನ್ನೆಲೆ ಭಕ್ತಾದಿಗಳಲ್ಲಿ  ಸಂಭ್ರಮ ಮನೆಮಾಡಿದೆ.  ಡಾ.ಶರಣ ಬಸವೇಶ್ವರರಿಗೆ  ಈಗಾಗಲೇ ನಾಲ್ಕು ಜನ ಹೆಣ್ಣು ಮಕ್ಕಳು ಇದ್ದಾರೆ.  83 ವರ್ಷದಲ್ಲಿ  ಡಾ.ಶರಣ ಬಸಪ್ಪ ಅಪ್ಪಾ ಗಂಡು ಮಗುವಿಗೆ ತಂದೆಯಾಗಿದ್ದಾರೆ. ಮೊದಲ ಬಾರಿಗೆ ಮಗನ ಮುಖ

ವಾರುಸುಧಾರನ ಜನನ ► 83ನೇ ವಯಸ್ಸಿನಲ್ಲಿ ಗಂಡು ಮಗುವಿನ ತಂದೆಯಾದ ಶರಣ ಬಸವೇಶ್ವರ ಸಂಸ್ಥಾನದ ಪೀಠಾಧಿಪತಿ..!!! Read More »

ಕರ್ನಾಟಕ

ಮರ್ಧಾಳದಲ್ಲಿ ನಡೆಯುತ್ತಿದೆ ಮದ್ಯದಂಗಡಿ ತೆರೆಯುವ ಹುನ್ನಾರ ► ಪ್ರಬಲಗೊಳ್ಳುತ್ತಿದೆ ಮದ್ಯದಂಗಡಿ ವಿರೋಧಿ ಹೋರಾಟ

(ನ್ಯೂಸ್ ಕಡಬ) newskdaba.com ಕಡಬ, ನ.01. ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಬಂಟ್ರ ಗ್ರಾಮದ ಮರ್ಧಾಳ ಸಮೀಪ ಚಾಕಟೆಕರೆ ಎಂಬಲ್ಲಿ ಮದ್ಯದಂಗಡಿ ತೆರೆಯುವ ಹುನ್ನಾರ ನಡೆಯುತ್ತಿದ್ದು, ಯಾವುದೇ ಕಾರಣಕ್ಕೂ ಅನುಮತಿ ನೀಡಬಾರದೆಂದು ತಾಲೂಕು ಪಂಚಾಯತ್ ಸದಸ್ಯೆ ಕುಸುಮಾರವರು ಅಬಕಾರಿ ಇಲಾಖೆಗೆ ಸೂಚಿಸಿದ್ದಾರೆ. ಅವರು ಪುತ್ತೂರು ತಾಲೂಕು ಪಂಚಾಯತ್ ಸಾಮಾನ್ಯ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿ ಮಾತನಾಡಿ, ಮರ್ಧಾಳ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಯಾವುದೇ ಕಾರಣಕ್ಕೂ ಮದ್ಯದಂಗಡಿ ತೆರೆಯಲು ಅನುಮತಿ ನೀಡಬಾರದೆಂದು ಅಬಕಾರಿ ಇಲಾಖೆಯ ಸಬ್ ಇನ್ಸ್ಪೆಕ್ಟರ್ ಸುಜಾತ್ರವರಲ್ಲಿ

ಮರ್ಧಾಳದಲ್ಲಿ ನಡೆಯುತ್ತಿದೆ ಮದ್ಯದಂಗಡಿ ತೆರೆಯುವ ಹುನ್ನಾರ ► ಪ್ರಬಲಗೊಳ್ಳುತ್ತಿದೆ ಮದ್ಯದಂಗಡಿ ವಿರೋಧಿ ಹೋರಾಟ Read More »

ಕರಾವಳಿ

ಮರ್ಧಾಳ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕಡಬ, ನ.01. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಯೋರ್ವರು ಮನೆಯ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರದಂದು ಬೆಳಕಿಗೆ ಬಂದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಐತ್ತೂರು ಗ್ರಾಮದ 72 ಕಾಲನಿ ನಿವಾಸಿ ಕೆ.ಎಫ್.ಡಿ.ಸಿ ನಿವೃತ್ತ ಉದ್ಯೋಗಿ ಪನ್ನಯ್ಯ(64) ಎಂದು ಗುರುತಿಸಲಾಗಿದೆ. ಇವರು ಮನೆಯಲ್ಲಿ ಒಬ್ಬಂಟಿಯಾಗಿದ್ದು, ಕೆಲವು ವರ್ಷಗಳಿಂದ ಅನಾರೋಗ್ಯಕ್ಕೊಳಗಾಗಿದ್ದರು. ಇದರಿಂದಾಗಿ ಮಾನಸಿಕ ಖಿನ್ನತೆಗೊಳಗಾಗಿ ಆತ್ಮಹತ್ಯೆ ಮಾಡಿರಬಹುದೆಂದು ಶಂಕಿಸಲಾಗಿದೆ. ಈ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮರ್ಧಾಳ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ Read More »

ಕರಾವಳಿ

ಗುರು ಪಟ್ಟಾಭಿಷೇಕಕ್ಕೆ ಒಂದು ತಿಂಗಳು ಇರುವಾಗಲೇ ► ಶಿವಮೊಗ್ಗದಲ್ಲಿ ನೇಣಿಗೆ ಶರಣಾದ ಉಜಿರೆಯ ಕ್ರೈಸ್ತ ಪಾದ್ರಿ!

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ನ.1. ಉಜಿರೆಯ ವ್ಯಕ್ತಿಯೋರ್ವರು ಶಿವಮೊಗ್ಗದ ಆಲ್ಕೋಳದಲ್ಲಿರುವ ಚೈತನ್ಯ ರೂರಲ್ ಡೆವಲಪ್‌ಮೆಂಟ್‌ ಸೊಸೈಟಿಯ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಉಜಿರೆ ಮೂಲದ ಸುನೀಲ್‌ ಫರ್ನಾಂಡಿಸ್(33) ಎಂದು ಗುರುತಿಸಲಾಗಿದೆ. ಮೇ ತಿಂಗಳಲ್ಲಿ ಉಜಿರೆಯಿಂದ ಪಾದ್ರಿ ತರಬೇತಿಗಾಗಿ ಶಿವಮೊಗ್ಗಕ್ಕೆ ತೆರಳಿದ್ದ ಸುನೀಲ್, ಬ್ರದರ್‌ ದೀಕ್ಷೆ ಪಡೆದು ತರಬೇತಿ ಪಡೆಯುತ್ತಿದ್ದರು. 14 ವರ್ಷಗಳ ಗುರು ಸೇವೆ ಪೂರ್ಣಗೊಂಡು ಮುಂದಿನ ತಿಂಗಳು ಪಟ್ಟಾಭಿಷೇಕಕ್ಕೆ ತಯಾರಿ ನಡೆಯುತ್ತಿತ್ತು. ಈ ವೇಳೆಯೇ

ಗುರು ಪಟ್ಟಾಭಿಷೇಕಕ್ಕೆ ಒಂದು ತಿಂಗಳು ಇರುವಾಗಲೇ ► ಶಿವಮೊಗ್ಗದಲ್ಲಿ ನೇಣಿಗೆ ಶರಣಾದ ಉಜಿರೆಯ ಕ್ರೈಸ್ತ ಪಾದ್ರಿ! Read More »

ಕರಾವಳಿ

ಕಡಬ: ಸೈಂಟ್ ಜೋಕಿಮ್ಸ್‌ ವಿದ್ಯಾಸಂಸ್ಥೆಯಲ್ಲಿ ಸ್ನೇಹ ಸಂಗಮ ಕಾರ್ಯಕ್ರಮ ► ವಿದ್ಯಾರ್ಥಿ ಹಾಗೂ ವಿದ್ಯಾಸಂಸ್ಥೆಯ ಬಾಂಧವ್ಯ ಗಟ್ಟಿಗೊಳಿಸಲು ಇದು ಸೂಕ್ತ ವೇದಿಕೆ- ಈಶೋ ಪಿಲಿಫ್

(ನ್ಯೂಸ್ ಕಡಬ) newskadaba.com ಕಡಬ, ನ.1. ಇಲ್ಲಿನ ಸೈಂಟ್ ಜೋಕಿಮ್ಸ್‌ ವಿದ್ಯಾಸಂಸ್ಥೆಯಲ್ಲಿ ಫಾ| ರೋನಾಲ್ಡೋ ಲೋಬೋರವರ ಅಧ್ಯಕ್ಷತೆಯಲ್ಲಿ ಪೂರ್ವ ವಿದ್ಯಾರ್ಥಿಗಳ ಸ್ನೇಹ ಸಂಗಮ ಕಾರ್ಯಕ್ರಮ ಇತ್ತೀಚೆಗೆ ನೆರವೇರಿತು. ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ಸೈಂಟ್ ಮೇರಿಸ್ ಪ್ರೌಢಶಾಲಾ ಮುಖ್ಯಗುರು ಈಶೋ ಪಿಲಿಫ್ರವರು ಸಂಘಟನಾ ಶಕ್ತಿಯ ಮೂಲಕ ವಿದ್ಯಾರ್ಥಿ ಹಾಗೂ ವಿದ್ಯಾಸಂಸ್ಥೆಯ ಬಾಂಧವ್ಯ ಗಟ್ಟಿಗೊಳಿಸುವ ನಿಟ್ಟಿನಲ್ಲಿ ಈ ಸ್ನೇಹ ಸಂಗಮ ಕಾರ್ಯಕ್ರಮವು ಸೂಕ್ತ ವೇದಿಕೆ ಆಗಲಿದೆ ಎಂದು ಪ್ರಶಂಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಸಂಚಾಲಕರಾದ ರೆ|ಫಾ| ರೋನಾಲ್ಡ್‌

ಕಡಬ: ಸೈಂಟ್ ಜೋಕಿಮ್ಸ್‌ ವಿದ್ಯಾಸಂಸ್ಥೆಯಲ್ಲಿ ಸ್ನೇಹ ಸಂಗಮ ಕಾರ್ಯಕ್ರಮ ► ವಿದ್ಯಾರ್ಥಿ ಹಾಗೂ ವಿದ್ಯಾಸಂಸ್ಥೆಯ ಬಾಂಧವ್ಯ ಗಟ್ಟಿಗೊಳಿಸಲು ಇದು ಸೂಕ್ತ ವೇದಿಕೆ- ಈಶೋ ಪಿಲಿಫ್ Read More »

ಕರಾವಳಿ

ಕಡಬ: ಸರಸ್ವತೀ ವಿದ್ಯಾಲಯದಲ್ಲಿ ►ಕನ್ನಡ ರಾಜ್ಯೋತ್ಸವ ಆಚರಣೆ

(ನ್ಯೂಸ್ ಕಡಬ) newskadaba.com ಕಡಬ, ನ.1. 62ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಕಡಬದ ಸರಸ್ವತೀ ವಿದ್ಯಾಲಯದಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಶ್ರೀಯುತ ಸತೀಶ್ ನಾಯ್ಕ್‌ ಕಡಬ ಇವರು ಧ್ವಜಾರೋಹಣಗೈದು ಕನ್ನಡ ರಾಜ್ಯೋತ್ಸವದ ಮಹತ್ವ ತಿಳಿಸಿದರು. ವಿದ್ಯಾಲಯದ ಆಡಳಿತ ಮಂಡಳಿಯ ಅಧ್ಯಕ್ಷರಾದ ರವಿರಾಜ್ ಶೆಟ್ಟಿ ಇವರು ಅಧ್ಯಕ್ಷೀಯ ಭಾಷಣ ಮಾಡಿದರು. ವೇದಿಕೆಯಲ್ಲಿ ಪ್ರಾಥಮಿಕ ವಿಭಾಗದ ಮುಖ್ಯ ಶ್ರೀಮಾನ್ ಶ್ರೀ ಮಾಧವ ಕೋಲ್ಪೆ ಹಾಗೂ ಪ್ರೌಢವಿಭಾಗದ ಮುಖ್ಯಮಾತಾಜಿ ಶೈಲಶ್ರೀ ಮಾತಜಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳು, ಶಿಕ್ಷಕರು, ಶಿಕ್ಷಕೇತರರು ಭಾಗವಹಿಸಿದ್ದರು. ಶೈಲಶ್ರೀ

ಕಡಬ: ಸರಸ್ವತೀ ವಿದ್ಯಾಲಯದಲ್ಲಿ ►ಕನ್ನಡ ರಾಜ್ಯೋತ್ಸವ ಆಚರಣೆ Read More »

ಕರಾವಳಿ

ಮರ್ದಾಳ: 21ನೇ ವರ್ಷದ ಕನ್ನಡ ರಾಜ್ಯೋತ್ಸವ ಆಚರಣೆ ► ಕ್ರೀಡಾಕೂಟಕ್ಕೆ ಚಾಲನೆ

(ನ್ಯೂಸ್ ಕಡಬ) newskadaba.com ಕಡಬ, ನ.1. ಶ್ರೀವಿವೇಕಾನಂದ ಯುವಕ ಮಂಡಲ(ರಿ.) ಮರ್ದಾಳ ಇದರ ವತಿಯಿಂದ 21ನೇ ವರ್ಷದ ಕನ್ನಡ ರಾಜ್ಯೋತ್ಸವ ಆಚರಣೆ ಪ್ರಯುಕ್ತ ಪುರುಷರ 55ಕೆ.ಜಿ. ವಿಭಾಗದ ಕಬಡ್ಡಿ ಪಂದ್ಯಾಟ ಹಾಗೂ ಹಗ್ಗಜಗ್ಗಾಟ ಮತ್ತು ಸಾಧಕರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ಬುಧವಾರ ಮರ್ದಾಳ ಶ್ರೀಅಯ್ಯಪ್ಪ ಭಜನಾ ಮಂದಿರ ವಠಾರದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಗೇರು ನಿಗಮದ ನಿವೃತ್ತ ಮ್ಯಾನೇಜರ್ ಗಂಗಾಧರ ಗೌಡ ಪಂಜೋಡಿ ದೀಪ ಬೆಳಗಿಸಿ ಉದ್ಘಾಟಿಸಿ, ಶುಭಹಾರೈಸಿದರು. ಪ್ರಗತಿಪರ ಕೃಷಿಕರಾದ ಪ್ರೇಮಸಾಗರ ಆಳ್ವ ಅತ್ಲಾಜೆ

ಮರ್ದಾಳ: 21ನೇ ವರ್ಷದ ಕನ್ನಡ ರಾಜ್ಯೋತ್ಸವ ಆಚರಣೆ ► ಕ್ರೀಡಾಕೂಟಕ್ಕೆ ಚಾಲನೆ Read More »

ಕರಾವಳಿ

ಕಡಬ: ಅಭಿವೃದ್ಧಿ ಕಾಮಗಾರಿಗಳು ಸಮರ್ಪಕವಾಗಿ ನಡೆಯಬೇಕಾದರೆ ಊರ ಜನರ ಸಹಕಾರ ಅಗತ್ಯ ►ಶಾಸಕ ಎಸ್‌. ಅಂಗಾರ

(ನ್ಯೂಸ್ ಕಡಬ) newskadaba.com ಕಡಬ, ನ.1. ಮರ್ದಾಳ- ಸುಬ್ರಹ್ಮಣ್ಯ ರಸ್ತೆಯ ಐತ್ತೂರು ಸಂಪರ್ಕಿಸುವ ಜಿ.ಪಂ. ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿಪೂಜೆಯನ್ನು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕ ಎಸ್‌. ಅಂಗಾರ ಅವರು ನೆರವೇರಿಸಿದರು. 3.80 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ಈ ರಸ್ತೆಗೆ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದ ಅಂಗಾರ ಅವರು, ಪ್ರಾಮಾಣಿಕ ಮನಸ್ಸಿನಿಂದ ಜನರು ನೀಡಿದ ಅವಕಾಶವನ್ನು ಉಪಯೋಗಿಸಿಕೊಂಡು ಜನಹಿತಕ್ಕಾಗಿ ಶ್ರಮಿಸುವ ಜನಪ್ರತಿನಿಧಿಗಳಿಗೆ ಜನರು ನಿಜವಾದ ಗೌರವವನ್ನು ಸಲ್ಲಿಸುತ್ತಾರೆ. ಜನಪ್ರತಿನಿಧಿಗಳು ತಮ್ಮ ಜವಾಬ್ದಾರಿಯನ್ನು ಅರಿತು ಮುನ್ನಡೆಯಬೇಕು. ಅಭಿವೃದ್ಧಿ ಕಾಮಗಾರಿಗಳು ಸಮರ್ಪಕವಾಗಿ ನಡೆಯಬೇಕಾದರೆ ಊರ

ಕಡಬ: ಅಭಿವೃದ್ಧಿ ಕಾಮಗಾರಿಗಳು ಸಮರ್ಪಕವಾಗಿ ನಡೆಯಬೇಕಾದರೆ ಊರ ಜನರ ಸಹಕಾರ ಅಗತ್ಯ ►ಶಾಸಕ ಎಸ್‌. ಅಂಗಾರ Read More »

ಕರಾವಳಿ
Scroll to Top