News Kadaba

ಮುಂದಿನ ದಿನಗಳಲ್ಲಿ ಕಾಂಗ್ರೆಸ್ ನಾಯಕರು ದಲಿತರ ಬಗ್ಗೆ ಕಾಳಜಿ ವಹಿಸದಿದ್ದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ►ರಾಜು ಹೊಸ್ಮಠ

(ನ್ಯೂಸ್ ಕಡಬ) newskadaba.com ಕಡಬ, ಅ.17. ಜ್ಯಾತತೀತ ನಿಲುವಿನೊಂದಿಗೆ ದಲಿತರನ್ನು ಉದ್ಧಾರ ಮಾಡುತ್ತಾ ಬಂದಿರುವ ಕಾಂಗ್ರೆಸ್ ಈಗಿನ ಜಿಲ್ಲಾ ಉಸ್ತುವಾರಿ ಸಚಿವರಂತಹ ದಲಿತ ವಿರೋಧಿ ನಾಯಕರಿಂದ ದೀನ ದಲಿತ ಕಡೆಗಣನೆ ನಡೆಯುತ್ತಿದೆ. ಡಿ.ಸಿ.ಮನ್ನಾ ಭೂಮಿಯಲ್ಲಿ ಕೂಡ ಅನ್ಯಾಯ ಮಾಡುತ್ತಿರುವ ಕಾಂಗ್ರೆಸ್ ನಾಯಕರ ಬಗ್ಗೆ ದಲಿತರು ಎಚ್ಚರವಾಗಬೇಕಾಗಿದೆ ಎಂದು ದಲಿತ್ ಸೇವಾ ಸಮಿತಿ ತಾಲೂಕು ಅಧ್ಯಕ್ಷ ರಾಜು ಹೊಸ್ಮಠ ಹೇಳಿದ್ದಾರೆ. ಅವರು ಅಲಂಕಾರು ರೈತ ಭವನದಲ್ಲಿ ಭಾನುವಾರ ನಡೆದ ದಲಿತ್ ಸೇವಾ ಸಮಿತಿ ಮಾಸಿಕ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. […]

ಮುಂದಿನ ದಿನಗಳಲ್ಲಿ ಕಾಂಗ್ರೆಸ್ ನಾಯಕರು ದಲಿತರ ಬಗ್ಗೆ ಕಾಳಜಿ ವಹಿಸದಿದ್ದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ►ರಾಜು ಹೊಸ್ಮಠ Read More »

ಕರಾವಳಿ

ಮರ್ದಾಳ ಬಂಟ್ರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ► ಇಂಟರ್ಲಾಕ್ ಕಾಮಗಾರಿಗೆ ಗುದ್ದಲಿಪೂಜೆ

(ನ್ಯೂಸ್ ಕಡಬ) newskadaba.com ಕಡಬ, ಅ.17. ಮರ್ದಾಳ ಬಂಟ್ರ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಅಂಗಳಕ್ಕೆ ಐತ್ತೂರು .ಪಂ.ಸದಸ್ಯರ 2017-18ನೇ ಸಾಲಿನ ರೂ.1ಲಕ್ಷ ಅನುದಾನದಲ್ಲಿ ಇಂಟರ್ಲಾಕ್ ಅಳವಡಿಸಲು ಸೋಮವಾರ ಗುದ್ದಲಿಪೂಜೆ ನಡೆಯಿತು. ತಾ.ಪಂ ಸದಸ್ಯೆ ಪಿ.ವೈ. ಕುಸುಮ ಗುದ್ದಲಿಪೂಜೆ ನೆರವೇರಿಸಿದರು. ಬಳಿಕ ಮಾತನಾಡಿದ ಅವರು  ನಾನು ಇದೇ ಶಾಲೆಯ ಹಳೇಯ ವಿದ್ಯಾರ್ಥಿಯಾಗಿದ್ದು, ಇಲ್ಲಿನ ಶಿಕ್ಷಕರು ಅನೇಕ ಬಾರಿ ಶಾಲಾ ಅಂಗಳಕ್ಕೆ ಇಂಟರ್ಲಾಕ್ ಅಳವಡಿಸುವ ಬಗ್ಗೆ ಬೇಡಿಕೆ ಇಟ್ಟಿದ್ದರು. ಆದರೆ ಈಗ ಸೂಕ್ತ ಸಮಯ ಒದಗಿ ಬಂದಿದೆ ಮುಂದಿನ ದಿನಗಳಲ್ಲಿ

ಮರ್ದಾಳ ಬಂಟ್ರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ► ಇಂಟರ್ಲಾಕ್ ಕಾಮಗಾರಿಗೆ ಗುದ್ದಲಿಪೂಜೆ Read More »

ಕರಾವಳಿ

ಉದನೆ-ಶಿಬಾಜೆ ಜಿ.ಪಂ. ರಸ್ತೆಗೆ 80 ಲಕ್ಷ ರೂ. ► ಗೋಳಿತ್ತಡಿ-ತ್ರಿವೇಣಿ ಸರ್ಕಲ್ ರಸ್ತೆಗೆ 49 ಲಕ್ಷ ರೂ ಅನುದಾನ ಮಂಜೂರು: ಪಿ.ಪಿ.ವರ್ಗೀಸ್

(ನ್ಯೂಸ್ ಕಡಬ) newskadaba.com ಕಡಬ, ಅ.17. ಉದನೆ-ಶಿಬಾಜೆ ಜಿ.ಪಂ. ರಸ್ತೆಯ ಮರುಡಾಮರೀಕರಣಕ್ಕೆ ನಬಾರ್ಡ್ನಿಂದ 80 ಲಕ್ಷ ರೂ.ಅನುದಾನ ಮಂಜೂರುಗೊಂಡಿದ್ದು ಟೆಂಡರ್ ಪ್ರಕ್ರಿಯೆ ನಡೆಯುತ್ತಿದೆ ಎಂದು ಕಡಬ ಜಿ.ಪಂ.ಸದಸ್ಯ ಪಿ.ಪಿ.ವರ್ಗೀಸ್ ತಿಳಿಸಿದ್ದಾರೆ. ಉದನೆ-ಶಿಬಾಜೆ ರಸ್ತೆ ಅಭಿವೃದ್ಧಿಗೆ 2 ವರ್ಷಗಳ ಹಿಂದೆಯೇ ಜಿಲ್ಲಾ ಉಸ್ತುವಾರಿ ಸಚಿವರ ಮೂಲಕ ಸರಕಾರಕ್ಕೆ ಒತ್ತಡ ಹೇರಲಾಗಿತ್ತು. ಈ ವೇಳೆ ಅನುದಾನ ಬಿಡುಗಡೆಗೊಂಡಿದ್ದರೂ ಅನುದಾನವನ್ನು ಕಾರಣಾಂತರದಿಂದ ತಡೆಹಿಡಿಯಲಾಗಿತ್ತು. ಇದೀಗ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈಯವರ ಶಿಫಾರಸ್ಸಿನೊಂದಿಗೆ ಕೆಪಿಸಿಸಿ ಸದಸ್ಯ ಡಾ.ರಘು ಬೆಳ್ಳಿಪ್ಪಾಡಿ, ನೆಲ್ಯಾಡಿ ಕ್ಷೇತ್ರದ ಜಿ.ಪಂ.ಸದಸ್ಯ

ಉದನೆ-ಶಿಬಾಜೆ ಜಿ.ಪಂ. ರಸ್ತೆಗೆ 80 ಲಕ್ಷ ರೂ. ► ಗೋಳಿತ್ತಡಿ-ತ್ರಿವೇಣಿ ಸರ್ಕಲ್ ರಸ್ತೆಗೆ 49 ಲಕ್ಷ ರೂ ಅನುದಾನ ಮಂಜೂರು: ಪಿ.ಪಿ.ವರ್ಗೀಸ್ Read More »

ಕರಾವಳಿ

ಆರೋಪ ಸಾಬೀತದ ನಂತರ ಪುಟ್ಟಸ್ವಾಮಿ ಆತ್ಮಹತ್ಯೆ ಮಾಡಿಕೊಳ್ಳಲಿ ► ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com ಮೈಸೂರು,ಅ.16. ಬಿಜೆಪಿ ಮುಖಂಡ ಬಿ.ಜೆ.ಪುಟ್ಟಸ್ವಾಮಿಯವರು ನನ್ನ ಮೇಲೆ ಮಾಡಿರುವ ಸುಳ್ಳು ಆರೋಪವನ್ನು ಸಾಬೀತು ಪಡಿಸಿದ ನಂತರ ಆತ್ಮಹತ್ಯೆ ಮಾಡಿಕೊಳ್ಳಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ನಗರದಲ್ಲಿನ ತನ್ನ ನಿವಾಸದಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ವಿರುದ್ಧದ ಆರೋಪ ಸುಳ್ಳಾದರೇ ವಿಧಾನಸೌಧ ಎದುರು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಹೇಳಿಕೆ ನೀಡಿದ ವಿಧಾನ ಪರಿಷತ್ ಸದಸ್ಯ ಬಿ.ಜೆ ಪುಟ್ಟಸ್ವಾಮಿ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ, ಮೊದಲು ಸುಳ್ಳು ಆರೋಪವನ್ನು ಸಾಬೀತು ಮಾಡಲಿ, ಆಮೇಲೆ

ಆರೋಪ ಸಾಬೀತದ ನಂತರ ಪುಟ್ಟಸ್ವಾಮಿ ಆತ್ಮಹತ್ಯೆ ಮಾಡಿಕೊಳ್ಳಲಿ ► ಸಿದ್ದರಾಮಯ್ಯ Read More »

ಕರ್ನಾಟಕ

ಅಕ್ರಮ ಡಿನೋಟಿಫೈ ಆರೋಪ: ಸಿದ್ದರಾಮಯ್ಯ ವಿರುದ್ಧ ಎಸಿಬಿಗೆ ದೂರು ► ಆರೋಪ ಸುಳ್ಳಾದರೆ ವಿಧಾನಸೌಧದ ಎದುರು ನೇಣು ಹಾಕುತ್ತೇನೆ: ಪುಟ್ಟಸ್ವಾಮಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.16. ಮುಖ್ಯಮಂತ್ರಿ ಸಿದ್ದರಾಮಯ್ಯರವರು ಅಕ್ರಮವಾಗಿ ಭೂಮಿಯನ್ನು ಡಿನೋಟಿಫೈ ಮಾಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಒಬಿಸಿ ಮೋರ್ಚಾ ರಾಜ್ಯಾಧ್ಯಕ್ಷ ಬಿ.ಜೆ.ಪುಟ್ಟಸ್ವಾಮಿ ಭ್ರಷ್ಟಾಚಾರ ನಿಗ್ರಹ ದಳಕ್ಕೆ(ಎಸಿಬಿ) ದೂರು ನೀಡಿದ್ದಾರೆ. ನನ್ನ ಆರೋಪ ಸುಳ್ಳು ಎಂದಾದರೆ ವಿಧಾನಸೌಧದ ಮುಂದೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಬಿ.ಜೆ.ಪುಟ್ಟಸ್ವಾಮಿ ಹೇಳಿದ್ದಾರೆ. ಅವರು ಸೋಮವಾರದಂದು ನಗರದ ರೇಸ್‌ಕೋರ್ಸ್ ರಸ್ತೆಯ ಎಸಿಬಿ ಪ್ರಧಾನ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ದೂರು ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಸಿದ್ದರಾಮಯ್ಯ ಭೂಪಸಂದ್ರದಲ್ಲಿ 6.36

ಅಕ್ರಮ ಡಿನೋಟಿಫೈ ಆರೋಪ: ಸಿದ್ದರಾಮಯ್ಯ ವಿರುದ್ಧ ಎಸಿಬಿಗೆ ದೂರು ► ಆರೋಪ ಸುಳ್ಳಾದರೆ ವಿಧಾನಸೌಧದ ಎದುರು ನೇಣು ಹಾಕುತ್ತೇನೆ: ಪುಟ್ಟಸ್ವಾಮಿ Read More »

ಕರ್ನಾಟಕ

2018ರ ಜನವರಿಯಿಂದ ದಕ್ಷಿಣ ಕನ್ನಡದಲ್ಲೂ 10 ಇಂದಿರಾ ಕ್ಯಾಂಟೀನ್ ► ಎಲ್ಲೆಲ್ಲಿ ಕ್ಯಾಂಟೀನ್ ಆರಂಭವಾಗುತ್ತದೆ ಗೊತ್ತೇ..?

(ನ್ಯೂಸ್ ಕಡಬ) newskadaba.com ಮಂಗಳೂರು, ಅ.16. 2018 ರ ಜನವರಿ 1 ರಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 10 ಇಂದಿರಾ ಕ್ಯಾಂಟೀನ್ ಗಳನ್ನು ತೆಗೆಯಲಾಗುವುದು ಎಂದು ರಾಜ್ಯ ಆಹಾರ ಸಚಿವ ಯು.ಟಿ. ಖಾದರ್ ಹೇಳಿದ್ದಾರೆ. ಅವರು ಸೋಮವಾರದಂದು ನಗರದ ಸರ್ಕ್ಯೂಟ್ ಹೌಸ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ದ.ಕ.ಜಿಲ್ಲೆಯಲ್ಲಿ 10 ಹೊಸ ಕ್ಯಾಂಟೀನ್ ಗಳು ಆರಂಭವಾಗಲಿದ್ದು, ಅದರಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ 5, ಉಳ್ಳಾಲ ನಗರಸಭಾ ವ್ಯಾಪ್ತಿಯಲ್ಲಿ 1, ಬಂಟ್ವಾಳ, ಪುತ್ತೂರು, ಸುಳ್ಯ ಹಾಗೂ ಬೆಳ್ತಂಗಡಿಯಲ್ಲಿ ತಲಾ

2018ರ ಜನವರಿಯಿಂದ ದಕ್ಷಿಣ ಕನ್ನಡದಲ್ಲೂ 10 ಇಂದಿರಾ ಕ್ಯಾಂಟೀನ್ ► ಎಲ್ಲೆಲ್ಲಿ ಕ್ಯಾಂಟೀನ್ ಆರಂಭವಾಗುತ್ತದೆ ಗೊತ್ತೇ..? Read More »

ಕರಾವಳಿ

ಚಿಕ್ಕಮಗಳೂರು: ಬೈಕ್ ಕಾರು ಢಿಕ್ಕಿ ► ಕಡಬದ ವ್ಯಕ್ತಿ ಗಂಭೀರ

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಅ.16. ಬೈಕ್ ಹಾಗೂ ಕಾರು ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಚಾರ್ಮಾಡಿ ಘಾಟ್ ನಲ್ಲಿ ಸೋಮವಾರದಂದು ನಡೆದಿದೆ. ಗಂಭೀರ ಗಾಯಗೊಂಡ ಗಾಯಾಳುವನ್ನು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕಡಬ ಸಮೀಪದ ಕುಟ್ರುಪ್ಪಾಡಿ ಗ್ರಾಮದ ಕಾಡುಮನೆ ನಿವಾಸಿ ಕೃಷ್ಣಪ್ಪ ಗೌಡ ಎಂಬವರ ಪುತ್ರ ನಾಗೇಶ್ ಎಂದು ಗುರುತಿಸಲಾಗಿದೆ. ಇವರು ತನ್ನ ಪಲ್ಸರ್ ಬೈಕಿನಲ್ಲಿ ಚಾರ್ಮಾಡಿ ಘಾಟ್ ನಲ್ಲಿ ತೆರಳುತ್ತಿದ್ದಾಗ ವಿರುದ್ಧ ದಿಕ್ಕಿನಿಂದ ಬಂದ ಟೊಯೋಟಾ

ಚಿಕ್ಕಮಗಳೂರು: ಬೈಕ್ ಕಾರು ಢಿಕ್ಕಿ ► ಕಡಬದ ವ್ಯಕ್ತಿ ಗಂಭೀರ Read More »

ಕರ್ನಾಟಕ

ನಂಬಿ ಬರುತ್ತಿರುವ ದಲಿತರಿಗೆ ದ್ರೋಹ ಬಗೆಯುತ್ತಿರುವ ಕಾಂಗ್ರೆಸ್ – ದಲಿತ್ ಸೇವಾ ಸಮಿತಿ ತಾಲೂಕು ಅಧ್ಯಕ್ಷ ರಾಜು ಹೊಸ್ಮಠ

(ನ್ಯೂಸ್ ಕಡಬ) newskadaba.com ಕಡಬ, ಅ.16. ಜ್ಯಾತತೀತ ನಿಲುವಿನೊಂದಿಗೆ ದಲಿತರನ್ನು ಉದ್ಧಾರ ಮಾಡುತ್ತಾ ಬಂದಿರುವ ಕಾಂಗ್ರೆಸ್ ಈಗಿನ ಜಿಲ್ಲಾ ಉಸ್ತುವಾರಿ ಸಚಿವರಂತಹ ದಲಿತ ವಿರೋಧಿ ನಾಯಕರಿಂದ ದೀನ ದಲಿತರ ಕಡೆಗಣನೆ ನಡೆಯುತ್ತಿದ್ದು ಡಿ.ಸಿ.ಮನ್ನಾ ಭೂಮಿಯಲ್ಲಿ ಕೂಡ ಅನ್ಯಾಯ ಮಾಡುತ್ತಿರುವ ಕಾಂಗ್ರೆಸ್ ನಾಯಕರ ಬಗ್ಗೆ ದಲಿತರು ಎಚ್ಚರವಾಗಬೇಕಾಗಿದೆ ಎಂದು ದಲಿತ್ ಸೇವಾ ಸಮಿತಿ ತಾಲೂಕು ಅಧ್ಯಕ್ಷ ರಾಜು ಹೊಸ್ಮಠ ಹೇಳಿದರು. ಅವರು ಅಲಂಕಾರು ರೈತ ಭವನದಲ್ಲಿ ಅ.15 ರಂದು ನಡೆದ ದಲಿತ್ ಸೇವಾ ಸಮಿತಿ ಮಾಸಿಕ ಸಭೆಯಲ್ಲಿ ಡಾ. ಬಾಬಾಸಾಹೇಬ್

ನಂಬಿ ಬರುತ್ತಿರುವ ದಲಿತರಿಗೆ ದ್ರೋಹ ಬಗೆಯುತ್ತಿರುವ ಕಾಂಗ್ರೆಸ್ – ದಲಿತ್ ಸೇವಾ ಸಮಿತಿ ತಾಲೂಕು ಅಧ್ಯಕ್ಷ ರಾಜು ಹೊಸ್ಮಠ Read More »

ಕರಾವಳಿ

ಭಾರತವು ಕೊಲೆಗಡುಕರ ರಾಷ್ಟ್ರವಾಗಿ ಪ್ರಸಿದ್ಧಿಯಾಗುತ್ತಿದೆ ► ಉರಿಲಿಂಗ ಪೆದ್ದಿ ಮಠದ ಜ್ಞಾನ ಪ್ರಕಾಶ ಸ್ವಾಮೀಜಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.15. ಭಾರತವು ಸುಳ್ಳಿನ ಸಾಮ್ರಾಜ್ಞವಾಗಿದ್ದು, ಕೊಲೆಗಡುಕರ ರಾಷ್ಟ್ರವಾಗಿ ಪ್ರಸಿದ್ಧಿಯಾಗುತ್ತಿದೆ. ದನ ಕಡಿದವರನ್ನು ಬಂಧಿಸುತ್ತಾರೆ ಆದರೆ ಜನರನ್ನು ಕೊಂದವರನ್ನು ಬಂಧಿಸುವುದಿಲ್ಲ ಎಂದು ಮೈಸೂರಿನ ಉರಿಲಿಂಗ ಪೆದ್ದಿ ಮಠದ ಜ್ಞಾನ ಪ್ರಕಾಶ ಸ್ವಾಮೀಜಿ ಹೇಳಿದರು.   ಅವರು ಭಾನುವಾರದಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ವತಿಯಿಂದ ನಡೆದ ‘ನಮಗೂ ಹೇಳಲಿಕ್ಕಿದೆ’ ಸಮಾವೇಶದಲ್ಲಿ ಅತಿಥಿಯಾಗಿ ಭಾಗವಹಿಸಿ ಮಾತನಾಡುತ್ತಿದ್ದರು. ಭಾರತವು ದನಗಳ ಭಾರತವಾಗಬಾರದು. ಜನಗಳ ಭಾರತವಾಗಬೇಕು. ಕನ್ನಡದ ಹುಲಿ, ಕ್ರಾಂತಿ ವೀರ ಟಿಪ್ಪು

ಭಾರತವು ಕೊಲೆಗಡುಕರ ರಾಷ್ಟ್ರವಾಗಿ ಪ್ರಸಿದ್ಧಿಯಾಗುತ್ತಿದೆ ► ಉರಿಲಿಂಗ ಪೆದ್ದಿ ಮಠದ ಜ್ಞಾನ ಪ್ರಕಾಶ ಸ್ವಾಮೀಜಿ Read More »

ಕರ್ನಾಟಕ

ನೆಲ್ಯಾಡಿ: ಬೈಕ್ – ಲಾರಿ ಢಿಕ್ಕಿ ► ಸವಾರ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ನೆಲ್ಯಾಡಿ, 15. ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಬೆದ್ರೋಡಿ ಎಂಬಲ್ಲಿ ಈಚರ್ ಹಾಗೂ ಬೈಕ್ ಮಧ್ಯೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಭಾನುವಾರದಂದು ನಡೆದಿದೆ. ಮೃತ ಸವಾರನನ್ನು ಕೊಕ್ಕಡ ನಿವಾಸಿ ಬಾಳಪ್ಪ ಗೌಡ ಎಂಬವರ ಪುತ್ರ ಪೂವಪ್ಪ ಗೌಡ(44) ಎಂದು ಗುರುತಿಸಲಾಗಿದೆ. ಇವರು ತನ್ನ ಬೈಕಿನಲ್ಲಿ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದಾಗ ವಿರುದ್ಧ ದಿಕ್ಕಿನಿಂದ ಬಂದ ಈಚರ್ ಲಾರಿಯು ಢಿಕ್ಕಿ ಹೊಡೆದಿದ್ದು, ರಸ್ತೆಗೆ ಎಸೆಯಲ್ಪಟ್ಟ

ನೆಲ್ಯಾಡಿ: ಬೈಕ್ – ಲಾರಿ ಢಿಕ್ಕಿ ► ಸವಾರ ಸ್ಥಳದಲ್ಲೇ ಮೃತ್ಯು Read More »

ಕರಾವಳಿ
Scroll to Top