News Kadaba

ಕಡಬ ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಯಲ್ಲಿ ವಾರ್ಷಿಕ ಕ್ರೀಡಾಕೂಟ

(ನ್ಯೂಸ್‌ ಕಡಬ) newskadaba.com,  ನ.25 ಕಡಬ :ಸೈಂಟ್ ಜೋಕಿಮ್ಸ್ ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಕಾಲೇಜು ವಿಭಾಗಗಳ ವಾರ್ಷಿಕ ಕ್ರೀಡಾಕೂಟವು ವಿದ್ಯುಕ್ತವಾಗಿ ಶಾಲಾ ಕ್ರೀಡಾಂಗಣದಲ್ಲಿ ನೆರವೇರಿತು. ಕಡಬ ಪಟ್ಟಣ ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷರಾದ  ಹನೀಫ್ ಕೆ.ಎಂ. ಮುಖ್ಯ ಅತಿಥಿಗಳಾಗಿ ಆಗಮಿಸಿ, ಕ್ರೀಡಾಕೂಟವನ್ನು ಉದ್ಘಾಟಿಸಿದರು. ಕ್ರೀಡೆಯು  ಶಿಸ್ತು ಹಾಗೂ ಸಂಯಮವನ್ನು ಕಾಪಾಡಿಕೊಳ್ಳಲು ಅಗತ್ಯ, ಗ್ರಾಮೀಣ ಪ್ರತಿಭೆಗಳು ಕ್ರೀಡಾ ಕ್ಷೇತ್ರದಲ್ಲಿ ಬೆಳಗಿದಾಗ ರಾಷ್ಟ್ರದ ಕ್ರೀಡಾ ಪ್ರಗತಿ ಸಾಧ್ಯ, ಈ ದಿಶೆಯಲ್ಲಿ  ಗ್ರಾಮೀಣ ಕ್ರೀಡಾಕೂಟಗಳು ಶಿಕ್ಷಣ ಸಂಸ್ಥೆಗಳ ಮೂಲಕ ಹೆಚ್ಚು […]

ಕಡಬ ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಯಲ್ಲಿ ವಾರ್ಷಿಕ ಕ್ರೀಡಾಕೂಟ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಇಂದು ಅಯೋಧ್ಯೆ ರಾಮಮಂದಿರದ ಮೇಲೆ ಮೋದಿ ಧಾರ್ಮಿಕ ಧ್ವಜಾರೋಹಣ

(ನ್ಯೂಸ್‌ ಕಡಬ) newskadaba.com,  ನ.25 ಲಕ್ನೋ: ಪ್ರಧಾನಿ ನರೇಂದ್ರ ಮೋದಿಅವರು ಇಂದು ಅಯೋಧ್ಯೆಯ ರಾಮಮಂದಿರದ ಮೇಲೆ ಕೇಸರಿ ಧ್ವಜಾರೋಹಣ ನೆರವೇರಿಸಲಿದ್ದಾರೆ…….5 ವರ್ಷದ ಬಳಿಕ ಅಯೋಧ್ಯೆ ರಾಮಮಂದಿರ ನಿರ್ಮಾಣ ಪೂರ್ಣಗೊಂಡಿದೆ. ಇದರ ಸಂಕೇತವಾಗಿ ಇಂದು ಅಯೋಧ್ಯೆಗೆ ಪ್ರಧಾನಿ ಮೋದಿ ಭೇಟಿ ನೀಡಿ, ರಾಮಮಂದಿರ ಗೋಪುರ ಮೇಲೆ 22 ಅಡಿ ಎತ್ತರದ ಭಗವಾ ಧ್ವಜಾರೋಹಣ ನೆರವೇರಿಸಲಿದ್ದಾರೆ. ಪ್ರಧಾನಿ ಮೋದಿ ಅವರು 22 ಅಡಿ ಎತ್ತರದ ಧಾರ್ಮಿಕ ಧ್ವಜಾರೋಹಣ ಮಾಡಿ, ಸಾಧುಗಳು, ಗಣ್ಯರು ಮತ್ತು ರಾಮ ಜನ್ಮಭೂಮಿ ಟ್ರಸ್ಟ್ ಸದಸ್ಯರ ಸಮ್ಮುಖದಲ್ಲಿ ಧಾರ್ಮಿಕ

ಇಂದು ಅಯೋಧ್ಯೆ ರಾಮಮಂದಿರದ ಮೇಲೆ ಮೋದಿ ಧಾರ್ಮಿಕ ಧ್ವಜಾರೋಹಣ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಕಾರ್ಯ ಪೂರ್ಣ – ನಾಳೆ ಮೋದಿಯಿಂದ ಧಾರ್ಮಿಕ ಧ್ವಜಾರೋಹಣ

(ನ್ಯೂಸ್‌ ಕಡಬ) newskadaba.com,  ನ.24 ಲಕ್ನೋ: ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿದ್ದ ಭವ್ಯ ರಾಮ ಮಂದಿರದ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ. ಈ ಹಿನ್ನೆಲೆ ನಾಳೆ (ಮಂಗಳವಾರ) ಧಾರ್ಮಿಕ ಧ್ವಜಾರೋಹಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಧ್ವಜಾರೋಹಣ ಮಾಡಲಿದ್ದಾರೆ. ಮಂಗಳವಾರ ಮಧ್ಯಾಹ್ನ ಸುಮಾರು 11:52ರಿಂದ 12:35ರ ಶುಭ ಮುಹೂರ್ತದಲ್ಲಿ ಧ್ವಜಾರೋಹಣ ಕಾರ್ಯಕ್ರಮ ನಡೆಯಲಿದೆ. 191 ಅಡಿ ಎತ್ತರದ ರಾಮ ಮಂದಿರದ ಮೇಲ್ಭಾಗದಲ್ಲಿ 11 ಅಡಿ ಅಗಲ ಮತ್ತು 22 ಅಡಿ ಉದ್ದದ ತ್ರಿಕೋನಾಕಾರದ ಕೇಸರಿ ಧ್ವಜವನ್ನು ಹಾರಿಸಲಾಗುತ್ತಿದೆ. ದ್ವಜದ ಮೇಲೆ

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಕಾರ್ಯ ಪೂರ್ಣ – ನಾಳೆ ಮೋದಿಯಿಂದ ಧಾರ್ಮಿಕ ಧ್ವಜಾರೋಹಣ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು : ರಾಜ್ಯ ಸ್ಪೀಡ್ ಸ್ಕೇಟಿಂಗ್ – ಯುವರಾಜ್, ತಸ್ಮಯಿಗೆ ಚಿನ್ನ

(ನ್ಯೂಸ್‌ ಕಡಬ) newskadaba.com,  ನ.24 :  ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ 41ನೇ ರಾಜ್ಯ ಮಟ್ಟದ ಸ್ಪೀಡ್ ಸ್ಕೇಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಮಂಗಳೂರು ನಗರದ ಕ್ರೀಡಾಪಟುಗಳು ಅತ್ಯುತ್ತಮ ಪ್ರದರ್ಶನ ನೀಡಿ ಪದಕಗಳ ಮಳೆ ಸುರಿಸಿದ್ದಾರೆ. ಕರ್ನಾಟಕ ರಾಜ್ಯ ಸ್ಕೇಟಿಂಗ್ ಅಸೋಸಿಯೇಷನ್ ಆಯೋಜಿಸಿದ್ದ ಈ ಸ್ಪರ್ಧೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಿಂದ ಆಯ್ಕೆಯಾದ 400ಕ್ಕೂ ಅಧಿಕ ಸ್ಕೇಟಿಂಗ್ ಪಟುಗಳು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು. ಮಂಗಳೂರು ರೋಲರ್ ಸ್ಕೇಟಿಂಗ್ ಕ್ಲಬ್‌ನ ಸ್ಕೇಟಿಂಗ್ ಪಟುಗಳಾದ ಯುವರಾಜ್ ಕುಂದರ್ 2 ಚಿನ್ನದ ಪದಕ ಗೆದ್ದುಕೊಂಡರೆ, ತಸ್ಮಯಿ ಶೆಟ್ಟಿ

ಮಂಗಳೂರು : ರಾಜ್ಯ ಸ್ಪೀಡ್ ಸ್ಕೇಟಿಂಗ್ – ಯುವರಾಜ್, ತಸ್ಮಯಿಗೆ ಚಿನ್ನ Read More »

ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬಾಲಿವುಡ್‍ ಹಿರಿಯ ನಟ ಧರ್ಮೇಂದ್ರ ವಿಧಿವಶ.!

(ನ್ಯೂಸ್‌ ಕಡಬ) newskadaba.com,  ನ.24 ಮುಂಬೈ : ಕಳೆದ ಹಲವು ದಿನಗಳಿಂದ ತೀವ್ರ ಆನಾರೋಗ್ಯದಿಂದ ಬಳಲುತ್ತಿದ್ದ ಬಾಲಿವುಡ್‍ನ ಹೀ ಮ್ಯಾನ್, ಎವರ್‍ಗ್ರೀನ್ ಸ್ಟಾರ್, ಆಕ್ಷನ್ ಕಿಂಗ್ ಎಂದು ಜನಪ್ರಿಯರಾಗಿದ್ದ ಹಿರಿಯ ನಟ ಧರ್ಮೇಂದ್ರ (89) ಅವರು ಸೋಮವಾರ ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಧರ್ಮೇಂದ್ರ ಅವರು ತೀವ್ರ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದರು. ಸೋಮವಾರ ಬೆಳಿಗ್ಗೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿತ್ತು. ರಾಷ್ಟ್ರಪರಿ ದ್ರೌಪತಿ ಮುರ್ಮು, ಉಪ ರಾಷ್ಟ್ರಪತಿ ರಾಧಕೃಷ್ಣನ್, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವಾರು ಗಣ್ಯರು ಸಂತಾಪ

ಬಾಲಿವುಡ್‍ ಹಿರಿಯ ನಟ ಧರ್ಮೇಂದ್ರ ವಿಧಿವಶ.! Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬೆಂಗಳೂರು ಉತ್ತರ ತಾಲೂಕಿನ ತಮ್ಮೇನಹಳ್ಳಿಯಲ್ಲಿ ಯುವತಿಯ ಭೀಕರ ಹತ್ಯೆ

(ನ್ಯೂಸ್‌ ಕಡಬ) newskadaba.com,  ನ.24 ಬೆಂಗಳೂರು : ರಾಜಧಾನಿಯಲ್ಲಿ ಯುವತಿಯೊಬ್ಬಳ ಭೀಕರ ಹತ್ಯೆ ನಡೆದಿದೆ. ಯುವಕನೊಬ್ಬ ಸ್ನೇಹಿತೆಯ ರೂಮ್‌ಗೆ ಕರೆದೊಯ್ದು ಯುವತಿಯನ್ನು ಕೊಲೆ ಮಾಡಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ತಮ್ಮೇನಹಳ್ಳಿಯಲ್ಲಿ ನಡೆದಿದೆ. ಆಂಧ್ರದ ಮೂಲದ ದೇವಿಶ್ರೀ (21) ಕೊಲೆಯಾದ ಯುವತಿ ಎಂದು ತಿಳಿದುಬಂದಿದೆ. ಘಟನೆ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಮೂಲತಃ ಆಂಧ್ರದ ಅನ್ನಮಯ್ಯ ಜಿಲ್ಲೆಯ ಬಿಕ್ಕಿಂವರೀಪಲ್ಲಿ ಗ್ರಾಮದ ನಿವಾಸಿಯಾದ ದೇವಿಶ್ರೀ, ಕಳೆದ ಮೂರು ವರ್ಷಗಳಿಂದ ಬೆಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಪ್ರತಿಷ್ಠಿತ

ಬೆಂಗಳೂರು ಉತ್ತರ ತಾಲೂಕಿನ ತಮ್ಮೇನಹಳ್ಳಿಯಲ್ಲಿ ಯುವತಿಯ ಭೀಕರ ಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ನಿಯಂತ್ರಣ ತಪ್ಪಿದ ಕಾರು ಸೇತುವೆಯಿಂದ ಕೆಳಗೆ ಬಿದ್ದು, ಚೆನ್ನೈ ಮೂಲದ ನಾಲ್ವರು ಯುವಕರು ಸ್ಥಳದಲ್ಲೇ ಸಾವು

(ನ್ಯೂಸ್‌ ಕಡಬ) newskadaba.com,  ನ.24 ಕೋಲಾರ : ಚೆನ್ನೈ-ಬೆಂಗಳೂರು ಕಾರಿಡಾರ್ ರಸ್ತೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ಕೋಲಾರ ಜಿಲ್ಲೆಯಲ್ಲಿ ನಡೆದಿದೆ. ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ಅಬ್ಬೇನಹಳ್ಳಿ ಬ್ರಿಡ್ಜ್ ಬಳಿ ತಡರಾತ್ರಿ 2 ಗಂಟೆ ಸುಮಾರಿಗೆ ಈ ದುರಂತ ಸಂಭವಿಸಿದೆ. ಚೆನ್ನೈ ಕಡೆಯಿಂದ ಬೆಂಗಳೂರಿಗೆ ಬರುತ್ತಿದ್ದ ವರ್ಣಾ ಕಾರು, ಚಾಲಕನ ನಿದ್ರೆ ಮಂಪರಿನಿಂದ ನಿಯಂತ್ರಣ ತಪ್ಪಿದೆ. ವೇಗವಾಗಿದ್ದ ಕಾರು ಅಬ್ಬೇನಹಳ್ಳಿ ಬ್ರಿಡ್ಜ್ ಮೇಲಿಂದ ಕೆಳಗೆ ಬಿದ್ದಿದೆ. ​ಬಿದ್ದ

ನಿಯಂತ್ರಣ ತಪ್ಪಿದ ಕಾರು ಸೇತುವೆಯಿಂದ ಕೆಳಗೆ ಬಿದ್ದು, ಚೆನ್ನೈ ಮೂಲದ ನಾಲ್ವರು ಯುವಕರು ಸ್ಥಳದಲ್ಲೇ ಸಾವು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಹತೋಭಾರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ವೈಭವದ ಲಕ್ಷ ದೀಪೋತ್ಸವ ಕುಣಿತ ಭಜನೆಗೆ ಹೆಜ್ಜೆ ಹಾಕಿದ ಸಾವಿರಾರು ಭಜಕರು

(ನ್ಯೂಸ್‌ ಕಡಬ) newskadaba.com,  ನ.24: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ವಾರ್ಷಿಕ ಚಂಪಾಷಷ್ಠಿ ಮಹೋತ್ಸವದ ಅಂಗವಾಗಿ ನ.19 ರಾತ್ರಿ ವೈಭವದ ಲಕ್ಷದೀಪೋತ್ಸವ ನೆರವೇರಿತು.ಪಂಚ ಶಿಖರಗಳನ್ನೊಳಗೊಂಡ ಚಂದ್ರಮಂಡಲ ರಥದಲ್ಲಿ ಸುಬ್ರಹ್ಮಣ್ಯ ದೇವರ ಉತ್ಸವ ನಡೆಯಿತು. ದೇವಸ್ಥಾನದ ಅರ್ಚಕರು ಉತ್ಸವದ ವಿಧಿ ವಿಧಾನ ನೆರವೇರಿಸಿದರು.ಕುಕ್ಕೆ ಸುಬ್ರಹ್ಮಣ್ಯದ ಹಲವೆಡೆ ಬೆಳಗುದ ಲಕ್ಷ ಹಣತೆ ದೀಪದ ನಡುವೆ ಭಕ್ತರ ಪರಾಕುಗಳೊಂದಿಗೆ ಶ್ರೀ ದೇವರ ಲಕ್ಷದೀಪೋತ್ಸವ ರಥೋತ್ಸವ ನೆರವೇರಿತು ಇದಕ್ಕೂ ಪೂರ್ವದಲ್ಲಿ ಸಂಜೆ ಆದಿ ಸುಬ್ರಹ್ಮಣ್ಯದಲ್ಲಿ ದೀಪಾಂಕೃತ ರಂಗಪೂಜೆ ನಡೆಯಿತು. ಬಳಿಕ ಪ್ರಧಾನ ದೇವಾಲಯದಲ್ಲಿ

ಮಹತೋಭಾರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ವೈಭವದ ಲಕ್ಷ ದೀಪೋತ್ಸವ ಕುಣಿತ ಭಜನೆಗೆ ಹೆಜ್ಜೆ ಹಾಕಿದ ಸಾವಿರಾರು ಭಜಕರು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ತಾರತಮ್ಯ ಖಂಡನಾರ್ಹ

(ನ್ಯೂಸ್‌ ಕಡಬ) newskadaba.com,  ನ.24 ಇಂಡಿ : ರಾಜ್ಯದ ಪ್ರತಿಯೊಂದು ಪೊಲೀಸ್ ಠಾಣೆಗಳಲ್ಲಿ ಪೊಲೀಸ್ ಕಾನ್ಸ್ಟೇಬಲ್ ಆಗಿ ಸೇವೆ ಸಲ್ಲಿಸುತ್ತಿರುವ ಸಿಬ್ಬಂದಿಗಳಿಗೆ ಸಾಕಷ್ಟು ತಾರತಮ್ಯ ಆಗುತ್ತಿರುವುದು ಕಂಡುಬAದಿರುತ್ತದೆ.ಅದನ್ನು ಮೇಲಾಧಿಕಾರಿಗಳು ಸರಿ ಪಡಿಸಿಕೊಳ್ಳಬೇಕು ಎಂದು ಡಿಎಸ್ ಎಸ್ ವಿದ್ಯಾರ್ಥಿ ಒಕ್ಕೂಟ ಸಂಚಾಲಕ ಶ್ರೀ ಲೋಹಿತಕುಮಾರ ರೂಗಿ ಅವರು ಮನವಿ ಮಾಡಿಕೊಂಡಿದ್ದಾರೆ. ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವಂತಹ ಹಳ್ಳಿಗಳಿಗೆ ಒಬ್ಬರಂತೆ ಎಸ್ ಬಿ. ಮತ್ತು ಎಂ ಟಿ ಅಂತ ನೇಮಕ ಮಾಡಿಕೊಳ್ಳುವ ಅಧಿಕಾರ ಠಾಣಾಧಿಕಾರಿಗಳಿಗೆ ಇರುತ್ತದೆ. ಈ ಅಧಿಕಾರಿಗಳು ತಮಗೆ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ತಾರತಮ್ಯ ಖಂಡನಾರ್ಹ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅರ್ಜಿ ಆಹ್ವಾನ: ಮಹಿಳಾ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆ

(ನ್ಯೂಸ್‌ ಕಡಬ) newskadaba.com,  ನ.24 ಮಂಗಳೂರು/ಉಡುಪಿ: ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ 2025-26ನೇ ಸಾಲಿನ ಧನಶ್ರೀ ಯೋಜನೆ, ಲಿಂಗತ್ವ ಅಲ್ಪ ಸಂಖ್ಯಾತರ ಪುನರ್ವಸತಿ ಯೋಜನೆ, ಚೇತನ ಯೋಜನೆ, ಉದ್ಯೋಗಿನಿ ಹಾಗೂ ಎಸ್ ಸಿಪಿ/ಟಿಎಸ್ ಪಿ ಯೋಜನೆಗಳಿಗೆ ಸೇವಾ ಸಿಂಧು ಪೋರ್ಟಲ್‌ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿದಾರರು ಹತ್ತಿರದ ಬಾಪೂಜಿ ಸೇವಾ ಕೇಂದ್ರ, ಗ್ರಾಮ ಒನ್, ಮಂಗಳೂರು ಒನ್, ಕರ್ನಾಟಕ ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಡಿಸೆಂಬರ್ 15 ಕೊನೆಯ ದಿನ. ದ.ಕ.

ಅರ್ಜಿ ಆಹ್ವಾನ: ಮಹಿಳಾ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top