News Kadaba

ಚಿನ್ನ ಪ್ರಿಯರಿಗಾಗಿ ಮತ್ತೆ ಶುಭಸುದ್ಧಿ

(ನ್ಯೂಸ್‌ ಕಡಬ) newskadaba.com,  ನ.15 : ಚಿನ್ನ ಪ್ರಿಯರಿಗೆ ಇಂದು ದೊಡ್ಡ ಸಿಹಿಸುದ್ದಿ. ಹಿಂದಿನ ದಿನಕ್ಕಿಂತ ಚಿನ್ನದ ಬೆಲೆ ಹಲವು ಸಾವಿರ ರೂಪಾಯಿಗಳಷ್ಟು ಕುಸಿದಿದ್ದು, ಮಾರುಕಟ್ಟೆಯಲ್ಲಿ ಹೊಸ ಚಲನವಲನಕ್ಕೆ ಕಾರಣವಾಗಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಕಂಡುಬಂದ ಭಾರೀ ಇಳಿಕೆ ದೇಶೀಯ ಚಿನ್ನದ ದರಗಳ ಮೇಲೂ ನೇರ ಪರಿಣಾಮ ಬೀರಿದೆ. ಇಂದು ಬೆಳಿಗ್ಗೆ 10 ಗಂಟೆಯ ನಂತರ ದರ ಇನ್ನೂ ಇಳಿಯುವ ಸಾಧ್ಯತೆ ಇದೆ… ಅಮೆರಿಕದಲ್ಲಿ 43 ದಿನಗಳ ಕಾಲ ಮುಂದುವರಿದ ಸರ್ಕಾರದ ಸ್ಥಗಿತವನ್ನು ಟ್ರಂಪ್ ಸರ್ಕಾರ ಕೊನೆಗೊಳಿಸಿರುವುದು ಮಾರುಕಟ್ಟೆಗಳಲ್ಲಿ […]

ಚಿನ್ನ ಪ್ರಿಯರಿಗಾಗಿ ಮತ್ತೆ ಶುಭಸುದ್ಧಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,  ನ.15 ಬೆಂಗಳೂರು: ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಒಣ ಹವೆಯ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ನವೆಂಬರ್ 17ರಿಂದ ಎರಡು ದಿನಗಳ ಕಾಲ ದಕ್ಷಿಣ ಒಳನಾಡು ಹಾಗೂ ಕರಾವಳಿಯಲ್ಲಿ ಸಾಧಾರಣ ಮಳೆಯಾಗಲಿದೆ ಎನ್ನುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣ ಕಂಡುಬರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡು ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು,

ಇಂದಿನ ಹವಾಮಾನ ವರದಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸರ್ಕಾರಿ ಗೌರವದೊಂದಿಗೆ ಸಾಲುಮರದ ತಿಮ್ಮಕ್ಕ ಅಂತ್ಯಕ್ರಿಯೆ: ಸಿಎಂ ಸಿದ್ದರಾಮಯ್ಯ

(ನ್ಯೂಸ್‌ ಕಡಬ) newskadaba.com,  ನ.15 ಬೆಂಗಳೂರು :ಪದ್ಮಶ್ರೀ ಪುರಸ್ಕೃತ ಸಾಲು ಮರದ ತಿಮ್ಮಕ್ಕ ಅವರ ಮರಣದಿಂದ ತೀವ್ರ ದುಃಖ ಉಂಟಾಗಿದೆ. ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವದೊಂದಿಗೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ತಿಮ್ಮಕ್ಕ ಅವರ ಕೊನೇ ಆಸೆಯ ಪತ್ರ ಕೊಟ್ಟಿದ್ದಾರೆ. ಬೇಲೂರಿನಲ್ಲಿ ತಿಮ್ಮಕ್ಕ ವಸ್ತು ಸಂಗ್ರಹಾಲಯ ಮಾಡಬೇಕು ಎಂದು ಆ ಪತ್ರದಲ್ಲಿದೆ. ಈ ಕುರಿತು ಸರ್ಕಾರ ಪರಿಶೀಲಿಸಿ ಕ್ರಮ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅವರ ಆತ್ಮಕ್ಕೆ ಶಾಂತಿ ದೊರಕಲಿ,

ಸರ್ಕಾರಿ ಗೌರವದೊಂದಿಗೆ ಸಾಲುಮರದ ತಿಮ್ಮಕ್ಕ ಅಂತ್ಯಕ್ರಿಯೆ: ಸಿಎಂ ಸಿದ್ದರಾಮಯ್ಯ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮುಂದಿನ ಶೈಕ್ಷಣಿಕ ವರ್ಷದಿಂದ, ರಾಜ್ಯಾದ್ಯಂತ ಕರ್ನಾಟಕ ಪಬ್ಲಿಕ್‌ ಶಾಲೆಯ ಪಿಯುಸಿ ವಿದ್ಯಾರ್ಥಿಗಳಿಗೂ ಬಿಸಿಯೂಟ ಯೋಜನೆ ವಿಸ್ತರಣೆ..

(ನ್ಯೂಸ್‌ ಕಡಬ) newskadaba.com,  ನ.15 ಬೆಂಗಳೂರು: ಮಧ್ಯಾಹ್ನದ ಬಿಸಿಯೂಟ ಯೋಜನೆಯನ್ನು puc ವಿದ್ಯಾರ್ಥಿಗಳಿಗೂ ವಿಸ್ತರಿಸುವುದಾಗಿ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಶುಕ್ರವಾರ ಭರವಸೆ ನೀಡಿದ್ದಾರೆ. ವಿಧಾನಸೌಧದಲ್ಲಿ ಶುಕ್ರವಾರ ಆಯೋಜಿಸಿದ್ದ ರಾಜ್ಯಮಟ್ಟದ ಮಕ್ಕಳ ದಿನಾಚರಣೆ ಹಾಗೂ ಪೋಷಕ–ಶಿಕ್ಷಕರ ಸಭೆಯಲ್ಲಿ ನಡೆದ ಸಂವಾದದಲ್ಲಿ ಬೆಳಗಾವಿ ಜಿಲ್ಲೆ ಬೈಲಹೊಂಗಲದ ಸರ್ಕಾರಿ ಪಿಯು ಕಾಲೇಜಿನ ವಿದ್ಯಾರ್ಥಿ ರಾಕೇಶ್‌ ಪ್ರಶ್ನೆಗೆ ಉತ್ತರಿಸಿದ ಅವರು, ಪಿಯು ಕಾಲೇಜುಗಳಿಗೂ ಮಧ್ಯಾಹ್ನದ ಬಿಸಿಯೂಟ ಒದಗಿಸಬೇಕಿದ್ದರೆ ಬಜೆಟ್‌ನಲ್ಲೇ ಘೊಷಣೆ ಮಾಡಬೇಕು. ಮುಂದಿನ ಶೈಕ್ಷಣಿಕ ವರ್ಷದಿಂದ, ರಾಜ್ಯಾದ್ಯಂತ ಕರ್ನಾಟಕ

ಮುಂದಿನ ಶೈಕ್ಷಣಿಕ ವರ್ಷದಿಂದ, ರಾಜ್ಯಾದ್ಯಂತ ಕರ್ನಾಟಕ ಪಬ್ಲಿಕ್‌ ಶಾಲೆಯ ಪಿಯುಸಿ ವಿದ್ಯಾರ್ಥಿಗಳಿಗೂ ಬಿಸಿಯೂಟ ಯೋಜನೆ ವಿಸ್ತರಣೆ.. Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಿಹಾರ ವಿಧಾನಸಭಾ ಚುನಾವಣೆ ಫಲಿತಾಂಶ: ಬಿಜೆಪಿ ಸಂಭ್ರಮಾಚರಣೆ

(ನ್ಯೂಸ್‌ ಕಡಬ) newskadaba.com,  ನ.14:   ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದ ಬಳಿ ಇಂದು ಮಧ್ಯಾಹ್ನ ಬಿಹಾರ ವಿಧಾನಸಭಾ ಚುನಾವಣೆಯ ಅದ್ಭುತ ಗೆಲುವಿನ ಸಂಭ್ರಮಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು. ವಿರೋಧ ಪಕ್ಷದ ನಾಯಕ ಆರ್. ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ವಿಧಾನಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್. ರವಿಕುಮಾರ್, ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್, ರಾಜ್ಯಸಭಾ ಸದಸ್ಯ ಲೇಹರ್ ಸಿಂಗ್ ಸಿರೋಯಾ, ಶಾಸಕ ಡಾ. ಚಂದ್ರು ಲಮಾಣಿ, ಸಿಮೆಂಟ್ ಮಂಜುನಾಥ್, ಮಾಜಿ ಶಾಸಕ ಎಂ.ಡಿ. ಲಕ್ಷ್ಮೀನಾರಾಯಣ್,

ಬಿಹಾರ ವಿಧಾನಸಭಾ ಚುನಾವಣೆ ಫಲಿತಾಂಶ: ಬಿಜೆಪಿ ಸಂಭ್ರಮಾಚರಣೆ Read More »

ರಾಷ್ಟ್ರೀಯ ನ್ಯೂಸ್

ತಮಿಳುನಾಡು: ಭಾರತೀಯ ವಾಯುಪಡೆಯ ವಿಮಾನ ಪತನ

(ನ್ಯೂಸ್‌ ಕಡಬ) newskadaba.com,  ನ.14:   ಭಾರತೀಯ ವಾಯುಪಡೆಗೆ ಸೇರಿದ Pilatus PC-7 ವಿಮಾನ ತಮಿಳುನಾಡಿನಲ್ಲಿ ಪತನವಾಗಿದೆ. ಚೆಂಗಳಪಟ್ಟು ಜಿಲ್ಲೆಯ ತಾಂಬರಂನಲ್ಲಿ ವಿಮಾನ ಪತನವಾಗಿದ್ದು, ಯಾವುದೇ ಅಪಾಯವಿಲ್ಲದೆ ಪೈಲಟ್‌ ಪಾರಾಗಿದ್ದಾರೆ. ದೈನಂದಿನ ತರಬೇತಿ ವೇಳೆ ಈ ಅವಘಡ ಸಂಭವಿಸಿದೆ. ವಿಮಾನ ಪತನವಾದ ಸ್ಥಳದಲ್ಲಿ ಸಾರ್ವಜನಿಕರು ಗುಂಪುಗೂಡಿರುವ ವಿಡಿಯೊ ವೈರಲ್‌ ಆಗಿದೆ. ಅಪಘಾತಕ್ಕೀಡಾದ ವಿಮಾನವು ಪಿಸಿ-7 ಪಿಲಾಟಸ್ ಆಗಿದ್ದು, ಇದು ವಾಯುಪಡೆಯ ಕೆಡೆಟ್‌ಗಳಿಗೆ ಆರಂಭಿಕ ಹಾರಾಟ ತರಬೇತಿ ನೀಡುತ್ತದೆ. ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳೀಯ ಅಧಿಕಾರಿಗಳು ಮತ್ತು ವಾಯು ಪಡೆಯ

ತಮಿಳುನಾಡು: ಭಾರತೀಯ ವಾಯುಪಡೆಯ ವಿಮಾನ ಪತನ Read More »

ಬ್ರೇಕಿಂಗ್ ನ್ಯೂಸ್

ಶ್ರೀಲಂಕಾ ಕ್ರಿಕೆಟ್ ತಂಡದ ಭದ್ರತೆಯನ್ನು ಸೇನೆಗೆ ಹಸ್ತಾಂತರಿಸಿದ ಪಾಕ್ ಸರ್ಕಾರ!

(ನ್ಯೂಸ್‌ ಕಡಬ) newskadaba.com,  ನ.14:   ಇಸ್ಲಾಮಾಬಾದ್‌ನಲ್ಲಿ ನಡೆದ ಸರಣಿ ಬಾಂಬ್ ಸ್ಫೋಟಗಳ ನಂತರ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಅವರ ಮಧ್ಯಸ್ಥಿಕೆಯ ಮೇರೆಗೆ ಪ್ರವಾಸ ಮುಂದುವರಿಸಲು ಒಪ್ಪಿಕೊಂಡ ನಂತರ, ಸರ್ಕಾರವು ಶ್ರೀಲಂಕಾ ಕ್ರಿಕೆಟ್ ತಂಡದ ಭದ್ರತೆಯನ್ನು ಪಾಕಿಸ್ತಾನ ಮಿಲಿಟರಿ ಪಡೆಗಳಿಗೆ ಹಸ್ತಾಂತರಿಸಿದೆ. ಪಾಕಿಸ್ತಾನ ಕ್ರಿಕೆಟ್ ಮಂಡಳಿಯ (ಪಿಸಿಬಿ) ಮುಖ್ಯಸ್ಥ ಮತ್ತು ಫೆಡರಲ್ ಆಂತರಿಕ ಸಚಿವರೂ ಆಗಿರುವ ಮೊಹ್ಸಿನ್ ನಖ್ವಿ, ಸದ್ಯ ಇಲ್ಲಿಗೆ ಭೇಟಿ ನೀಡುವ ಯಾವುದೇ ತಂಡಕ್ಕೆ ರಾಜ್ಯ ಮಟ್ಟದ ಭದ್ರತೆ ಒದಗಿಸಲಾಗುತ್ತದೆ. ಆದರೆ, ಶ್ರೀಲಂಕಾ ಕ್ರಿಕೆಟ್

ಶ್ರೀಲಂಕಾ ಕ್ರಿಕೆಟ್ ತಂಡದ ಭದ್ರತೆಯನ್ನು ಸೇನೆಗೆ ಹಸ್ತಾಂತರಿಸಿದ ಪಾಕ್ ಸರ್ಕಾರ! Read More »

ರಾಷ್ಟ್ರೀಯ ನ್ಯೂಸ್

ಕಾಸರಗೋಡು: ಟಯರ್ ಸ್ಪೋಟಗೊಂಡು ರಸ್ತೆ ಮಗುಚಿ ಬಿದ್ದ ಲಾರಿ; ಚಾಲಕ ಪಾರು

(ನ್ಯೂಸ್‌ ಕಡಬ) newskadaba.com,  ನ.14:   ಮೀನು ಸಾಗಾಟದ ಲಾರಿಯೊಂದರ ಟಯರ್ ಸ್ಪೋಟಗೊಂಡ ಹಿನ್ನೆಲೆಯಲ್ಲಿ ರಸ್ತೆಗೆ ಲಾರಿ ಮಗುಚಿ ಬಿದ್ದ ಘಟನೆ ಕಾಸರಗೋಡಿನ ರಾಷ್ಟ್ರೀಯ ಹೆದ್ದಾರಿಯ ಮೊಗ್ರಾಲ್ ಪುತ್ತೂರು ನಲ್ಲಿ ಗುರುವಾರ ರಾತ್ರಿ ನಡೆದಿದೆ. ಚಾಲಕ ವಿಜಿನ್ ಕುಮಾರ್ (35) ಸಣ್ಣ ಪುಟ್ಟ ಗಾಯ ಗಳೊಂದಿಗೆ ಪಾರಾಗಿದ್ದಾರೆ. ಕೋಜಿಕ್ಕೋಡ್ ನಿಂದ ಉಳ್ಳಾಲಕ್ಕೆ ತೆರಳುತ್ತಿದ್ದ ಲಾರಿ ಟಯರ್ ಸ್ಪೋಟಗೊಂಡ ಹಿನ್ನೆಲೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಲಾರಿ ಮಗುಚಿ ಬಿದ್ದು ದುರ್ಘಟನೆ ಸಂಭವಿಸಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿ

ಕಾಸರಗೋಡು: ಟಯರ್ ಸ್ಪೋಟಗೊಂಡು ರಸ್ತೆ ಮಗುಚಿ ಬಿದ್ದ ಲಾರಿ; ಚಾಲಕ ಪಾರು Read More »

ಕರಾವಳಿ

ಬಿಹಾರದಲ್ಲಿ ಮತ್ತೆ ಅಧಿಕಾರ ಏರಿದ ಎನ್ ಡಿ ಎ

(ನ್ಯೂಸ್‌ ಕಡಬ) newskadaba.com,  ನ.14:   ರಾಷ್ಟ್ರ ರಾಜಕಾರಣಕ್ಕೆ ಹೊಸ ದಿಕ್ಸೂಚಿ ಎಂದೇ ಹೇಳಲಾಗಿದ್ದ ಪ್ರತಿಷ್ಠಿತ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಆಡಳಿತ ವಿರೋಧಿ ಅಲೆಯನ್ನು ಹಿಂದಿಕ್ಕಿ ಎನ್‌ಡಿಎ ಅಭೂತಪೂರ್ವ ಜನಾದೇಶ ಪಡೆದು ಮತ್ತೆ ಅಧಿಕಾರಕ್ಕೆ ಬಂದಿದೆ. ರಾಜ್ಯದ ಒಟ್ಟು 243 ವಿಧಾನಸಭಾ ಕ್ಷೇತ್ರಗಳ ಪೈಕಿ ಎನ್‌ಡಿಎ ಮೈತ್ರಿಕೂಟ 190 ಸ್ಥಾನಗಳನ್ನು ಪಡೆದು ಈ ಬಾರಿ ಭಾರೀ ಜನಾದೇಶದೊಂದಿಗೆ ಅಧಿಕಾರ ಗದ್ದುಗೆ ಹಿಡಿದಿದೆ. ಎನ್‌ಡಿಎ ಅಬ್ಬರಕ್ಕೆ ಪ್ರತಿಪಕ್ಷಗಳು ಧೂಳಿಪಟವಾಗಿದ್ದು, ಅಧಿಕೃತ ವಿರೋಧ ಪಕ್ಷದ ಸ್ಥಾನಕ್ಕೆ ಬೇಕಾದ ಸ್ಥಾನಗಳನ್ನು ಪಡೆಯಲೂ ವಿಫಲವಾಗಿವೆ.

ಬಿಹಾರದಲ್ಲಿ ಮತ್ತೆ ಅಧಿಕಾರ ಏರಿದ ಎನ್ ಡಿ ಎ Read More »

ಬ್ರೇಕಿಂಗ್ ನ್ಯೂಸ್

ರಾಜ್ಯದಲ್ಲಿ ಮುಂದಿನ ಮೂರು ದಿನ ಒಣ ಹವೆ: ಹವಾಮಾನ ಇಲಾಖೆ ಮುನ್ಸೂಚನೆ

(ನ್ಯೂಸ್‌ ಕಡಬ) newskadaba.com,  ನ.14:   ರಾಜ್ಯದಲ್ಲಿ ಗುರುವಾರ ಎಲ್ಲೆಡೆ ಒಣ ಹವೆ ಕಂಡುಬಂದಿತ್ತು. ಅದೇ ರೀತಿ ಮುಂದಿನ ಮೂರು ದಿನ ಕರ್ನಾಟಕದಲ್ಲಿ ಮುಂದುವರಿಯುವ ಸಾಧ್ಯತೆ ಇದೆ. ಇನ್ನು ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವು ಕಡೆಗಳಲ್ಲಿ ಮುಂಜಾನೆಯ ಸಮಯದಲ್ಲಿ ಮಂಜು ಇರುವ ಸಾಧ್ಯತೆ ಇದೆ. ಗರಿಷ್ಠ ಮತ್ತು  ಕ್ರಮವಾಗಿ 27 ಡಿಗ್ರಿ ಸೆ. ಮತ್ತು 20 ಡಿಗ್ರಿ ಸೆ. ಇರಬಹುದು. ನ.14ರಿಂದ 16ರವರೆಗೆ ಕರಾವಳಿ, ಉತ್ತರ

ರಾಜ್ಯದಲ್ಲಿ ಮುಂದಿನ ಮೂರು ದಿನ ಒಣ ಹವೆ: ಹವಾಮಾನ ಇಲಾಖೆ ಮುನ್ಸೂಚನೆ Read More »

ಕರ್ನಾಟಕ
Scroll to Top