News Kadaba

ಮೂಡುಬಿದಿರೆ : ರಾಜ್ಯಮಟ್ಟದ ಅಥ್ಲೆಟಿಕ್ಸ್; ಆಳ್ವಾಸ್‌ಗೆ ೧೧ ಪದಕ

(ನ್ಯೂಸ್‌ ಕಡಬ) newskadaba.com,  ನ.12 ಮೂಡುಬಿದಿರೆ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಮೈಸೂರು ಹಾಗೂ ಆರ್‌ವಿ ಪದವಿಪೂರ್ವ ಕಾಲೇಜು ಮೈಸೂರು ಆಶ್ರಯದಲ್ಲಿ ಚಾಮುಂಡಿ ವಿಹಾರ ಸ್ಟೇಡಿಯಂನಲ್ಲಿ ನಡೆದ ಪದವಿಪೂರ್ವ ಕಾಲೇಜುಗಳ ರಾಜ್ಯಮಟ್ಟದ ಬಾಲಕಿಯರ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜು ಒಟ್ಟು ೭ ಚಿನ್ನ, ೩ ಬೆಳ್ಳಿ ಮತ್ತು ೧ ಕಂಚಿನ ಪದಕಗಳೊಂದಿಗೆ ಒಟ್ಟು ೧೧ ಪದಕಗಳನ್ನು ಗೆದ್ದಿದೆ. ರಾಷ್ಟ್ರಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ೮ ಕ್ರೀಡಾಪಟುಗಳು ಆಯ್ಕೆಯಾಗಿದ್ದಾರೆ. ಬಾಲಕಿಯರ ವಿಭಾಗದಲ್ಲಿ: ನಾಗಿಣಿ – ೮೦೦ ಮೀ. (ಪ್ರಥಮ), […]

ಮೂಡುಬಿದಿರೆ : ರಾಜ್ಯಮಟ್ಟದ ಅಥ್ಲೆಟಿಕ್ಸ್; ಆಳ್ವಾಸ್‌ಗೆ ೧೧ ಪದಕ Read More »

ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ಉಡುಪಿ: ಪರ್ಕಳ ಪಟ್ಟಣದ ಸಮೀಪ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

(ನ್ಯೂಸ್‌ ಕಡಬ) newskadaba.com,  ನ.12 ಉಡುಪಿ: ಪರ್ಕಳ ಬಳಿ ಕುಸಿದು ಬಿದ್ದಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕೂಡಲೇ ಅವರನ್ನು ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರು ಆಂಬುಲೆನ್ಸ್ ಮೂಲಕ ಅಜ್ಜರಕಾಡು ಜಿಲ್ಲಾ ಆಸ್ಪತ್ರೆಗೆ ಸಾಗಿಸಿದರು…. ಆದರೆ, ಆಸ್ಪತ್ರೆಯಲ್ಲಿ ವೈದ್ಯರು ಪರೀಕ್ಷೆ ನಡೆಸಿ ಆ ವ್ಯಕ್ತಿ ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ. ಮೃತದೇಹವನ್ನು ಜಿಲ್ಲಾ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಮೃತರ ಬಗ್ಗೆ ಮಾಹಿತಿ ಇರುವವರು ಅಥವಾ ಅವರ ಸಂಬಂಧಿಕರು ಜಿಲ್ಲಾ ಆಸ್ಪತ್ರೆಯ ನಾಗರಿಕ ಸಹಾಯ ಕೇಂದ್ರ ಅಥವಾ ಮಣಿಪಾಲ

ಉಡುಪಿ: ಪರ್ಕಳ ಪಟ್ಟಣದ ಸಮೀಪ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಿಗ್ ಬಾಸ್’ ಖ್ಯಾತಿಯ ರೂಪೇಶ್ ಶೆಟ್ಟಿ ನಟನೆಯ ‘ಜೈ’ ಸಿನಿಮಾ ಟ್ರೇಲರ್ ಬಿಡುಗಡೆ

(ನ್ಯೂಸ್‌ ಕಡಬ) newskadaba.com,  ನ.12 ಮಂಗಳೂರು:‘ಜೈ’ ಸಿನಿಮಾ  ಬಿಡುಗಡೆಗೂ ಮುನ್ನವೇ ಸಾಕಷ್ಟು ಸದ್ದು ಮಾಡುತ್ತಿದೆ. ‘ಬಿಗ್ ಬಾಸ್’ ಖ್ಯಾತಿಯ ರೂಪೇಶ್ ಶೆಟ್ಟಿ ಅವರು ಈ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಮುಖ್ಯ ಭೂಮಿಕೆಯಲ್ಲೂ ರೂಪೇಶ್ ಶೆಟ್ಟಿ ಅವರೇ ನಟಿಸಿದ್ದಾರೆ. ಈಗ ಈ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಅದ್ದೂರಿಯಾಗಿ ಟ್ರೇಲರ್ ರಿಲೀಸ್ ಮಾಡಲಾಗಿದೆ. ಉಪೇಂದ್ರ ಶೆಟ್ಟಿ, ರಾಜ್ ದೀಪಕ್ ಶೆಟ್ಟಿ, ಮಧು ರಾವ್, ಉದ್ಯಮಿ ಪ್ರಕಾಶ್ ಕುಮ್ಕಳ ಸೇರಿದಂತೆ ಹಲವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ರೂಪೇಶ್ ಶೆಟ್ಟಿ ಹಾಗೂ ‘ಜೈ’

ಬಿಗ್ ಬಾಸ್’ ಖ್ಯಾತಿಯ ರೂಪೇಶ್ ಶೆಟ್ಟಿ ನಟನೆಯ ‘ಜೈ’ ಸಿನಿಮಾ ಟ್ರೇಲರ್ ಬಿಡುಗಡೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ

ಭಾರತೀಯ ರೈಲ್ವೆಯು ಮಕ್ಕಳಿಗಾಗಿ ರೈಲು ಟಿಕೆಟ್ ಬುಕಿಂಗ್ ನಿಯಮಗಳಲ್ಲಿ ಬದಲಾವಣೆ

(ನ್ಯೂಸ್‌ ಕಡಬ) newskadaba.com,  ನ.12 ನವದೆಹಲಿ:  ಪ್ರಯಾಣಿಕರ ಬೇಡಿಕೆಯ ಮೇರೆಗೆ ಭಾರತೀಯ ರೈಲ್ವೆಯು ಮಕ್ಕಳ ಟಿಕೆಟ್ ಬುಕ್ಕಿಂಗ್ ವ್ಯವಸ್ಥೆಯಲ್ಲಿ ಕೊಂಚ ಬದಲಾವಣೆಯನ್ನು ಮಾಡಿದೆ. ಇದು ರೈಲು ಪ್ರಯಾಣ ಮಾಡಬಯಸುವ ಪೋಷಕರು ತಿಳಿದುಕೊಳ್ಳಬೇಕಾದ ಪ್ರಮುಖ ನಿಯಮಗಳಲ್ಲಿ ಒಂದಾಗಿದೆ.ಇನ್ನು ಮುಂದೆ ಐದು ವರ್ಷದ ಒಳಗಿನ ಮಕ್ಕಳಿಗೆ ರೈಲು ಟಿಕೆಟ್ ಪಡೆಯಲು ಕೆಲವು ನಿಯಮಗಳು ಅನ್ವಯವಾಗುತ್ತದೆ. ಇದು ಬುಕ್ಕಿಂಗ್ ಸ್ಕ್ರೀನ್ ಮೇಲೆ ಕಾಣಿಸಿಕೊಳ್ಳಲಿದೆ. ಪ್ರಯಾಣಿಕರ ಬೇಡಿಕೆಯ ಮೇರೆಗೆ ಇನ್ನು ಮುಂದೆ 5 ವರ್ಷದೊಳಗಿನ ಮಗುವಿಗೆ ಬರ್ತ್ ಬುಕ್ ಮಾಡುವ ಆಯ್ಕೆ ಇದೆ.

ಭಾರತೀಯ ರೈಲ್ವೆಯು ಮಕ್ಕಳಿಗಾಗಿ ರೈಲು ಟಿಕೆಟ್ ಬುಕಿಂಗ್ ನಿಯಮಗಳಲ್ಲಿ ಬದಲಾವಣೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಡ್ಯ: ‘ತಿಥಿ’ ಚಿತ್ರದ ಹಿರಿಯ ನಟ ಗಡ್ಡಪ್ಪ ವಿಧಿವಶ

ನ್ಯೂಸ್‌ ಕಡಬ) newskadaba.com,  ನ.12 ಮಂಡ್ಯ: ರಾಷ್ಟ್ರ ಪ್ರಶಸ್ತಿ ವಿಜೇತ ‘ತಿಥಿ’ ಸಿನಿಮಾ ಖ್ಯಾತಿಯ ಗಡ್ಡಪ್ಪ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಮಂಡ್ಯ ತಾಲೂಕಿನ ನೊದೆ ಕೊಪ್ಪಲು ಗ್ರಾಮದ ಚನ್ನೇಗೌಡ, ತಿಥಿ ಚಿತ್ರದಲ್ಲಿ ಅಭಿನಯದ ನಂತರ ಗಡ್ಡಪ್ಪ ಎಂದೇ ರಾಜ್ಯಾದ್ಯಂತ ಹೆಸರುವಾಸಿಯಾಗಿದ್ದರು. ಅವರಿಗೆ 89 ವರ್ಷ ವಯಸ್ಸಾಗಿತ್ತು.ತಿಥಿ, ತರ್ಲೆ ವಿಲೇಜ್, ಜಾನಿ ಮೇರಾ ನಾಮ್, ಹಳ್ಳಿ ಪಂಚಾಯಿತಿ ಸೇರಿ ಸುಮಾರು 8 ಸಿನಿಮಾಗಳಲ್ಲಿ ಅಭಿನಯಿಸಿದ್ದರು. ಅಸ್ತಮಾ, ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಗಡ್ಡಪ್ಪ,

ಮಂಡ್ಯ: ‘ತಿಥಿ’ ಚಿತ್ರದ ಹಿರಿಯ ನಟ ಗಡ್ಡಪ್ಪ ವಿಧಿವಶ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಚಿನ್ನದ ಬೆಲೆಯಲ್ಲಿ ಕೊಂಚ ಇಳಿಕೆ

(ನ್ಯೂಸ್‌ ಕಡಬ) newskadaba.com,  ನ.12 ಬೆಂಗಳೂರು: ಚಿನ್ನದ ದರದಲ್ಲಿ ಇಂದು ಕೊಂಚ ಇಳಿಕೆ  ಕಂಡು ಬಂದಿದೆ. ಇಂದು 22ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 30ರೂ. ಇಳಿಕೆ ಕಂಡು ಬಂದಿದ್ದು, 11,505 ರೂ. ಗೆ ತಲುಪಿದೆ. 24 ಕ್ಯಾರಟ್‌ 1 ಗ್ರಾಂ ಚಿನ್ನದ ದರದಲ್ಲಿ 32 ರೂ. ಇಳಿಕೆಯಾಗಿ, 12,551 ರೂ ಆಗಿದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನ 92,040 ರೂ. ಬಾಳಿದರೆ, 10 ಗ್ರಾಂಗೆ ನೀವು 1,15,050 ಹಾಗೂ 100 ಗ್ರಾಂಗೆ 11,50,500 ರೂ., ನೀಡಬೇಕಾಗುತ್ತದೆ.

ಚಿನ್ನದ ಬೆಲೆಯಲ್ಲಿ ಕೊಂಚ ಇಳಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರಿನಲ್ಲಿ ಗಾಂಜಾ ಸೇವನೆ ಆರೋಪ; ಇಬ್ಬರು ಪೊಲೀಸರ ವಶಕ್ಕೆ

(ನ್ಯೂಸ್‌ ಕಡಬ) newskadaba.com,  ನ.12 ಮಂಗಳೂರು: ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಕಂಕನಾಡಿ ನಗರ ಠಾಣೆ ವ್ಯಾಪ್ತಿಯ ಎಕ್ಕೂರು ಮೈದಾನ ಬಳಿ ಮತ್ತು ಪಡೀಲ್ ರೈಲ್ವೆ ಬ್ರಿಡ್ಜ್ ಬಳಿ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡಿದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ದಾಳಿ ನಡೆಸಿದ ಪೊಲೀಸರು ಎಕ್ಕೂರಿನಲ್ಲಿ ಹರಿಪ್ರಸಾದ್ ನನ್ನು ಹಾಗೂ ಪಡೀಲ್ ನಲ್ಲಿ ಮುಹಮ್ಮದ್ ಶಾರೂಕ್ ನನ್ನು ಬಂಧಿಸಲಾಗಿದೆ. ಆರೋಪಿಗಳನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ. ಆರೋಪಿಗಳ

ಮಂಗಳೂರಿನಲ್ಲಿ ಗಾಂಜಾ ಸೇವನೆ ಆರೋಪ; ಇಬ್ಬರು ಪೊಲೀಸರ ವಶಕ್ಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಂಟ್ವಾಳ: ಮುಂಬೈ ಮೂಲದ ಯುವತಿ ಕಣ್ಮರೆ

(ನ್ಯೂಸ್‌ ಕಡಬ) newskadaba.com,  ನ.12 ಬಂಟ್ವಾಳ: ಬೆಂಜನಪದವಿನಲ್ಲಿರುವ ತನ್ನ ಅತ್ತೆಯ ಮನೆಯಲ್ಲಿ ವಾಸವಾಗಿದ್ದ ಮುಂಬೈ ಮೂಲದ ಅವಿವಾಹಿತ ಯುವತಿಯೊಬ್ಬಳು ನವೆಂಬರ್ 9 ರಿಂದ ಕಾಣೆಯಾಗಿದ್ದಾಳೆ ಎಂದು ವರದಿಯಾಗಿದೆ.ನಾಪತ್ತೆಯಾದ ಯುವತಿಯನ್ನು ಬೆಂಜನಪದವಿನ ಶಿವಾಜಿನಗರದ ನಿವಾಸಿ ಮರಿಯಾ ಆಲ್ಬರ್ಟ್ ಡಿಸೋಜಾ ಎಂದು ಗುರುತಿಸಲಾಗಿದೆ. ವರದಿಗಳ ಪ್ರಕಾರ, ಮರಿಯಾ ಒಂದು ವರ್ಷದ ಹಿಂದೆ ತನ್ನ ತಾಯಿಯನ್ನು ಕಳೆದುಕೊಂಡ ನಂತರ, ಬೆಂಜನಪದವಿನಲ್ಲಿರುವ ತನ್ನ ಅತ್ತೆ ಮೊಲ್ಲಿ ಟೆಲ್ಲಿಸ್ ಅವರೊಂದಿಗೆ ವಾಸವಾಗಿದ್ದಳು. ಆಕೆಯ ತಂದೆ ಆಲ್ಬರ್ಟ್ ಡಿಸೋಜಾ ಅವರು ಮುಂಬೈನಲ್ಲಿ ನೆಲೆಸಿದ್ದಾರೆ. ನವೆಂಬರ್ 9

ಬಂಟ್ವಾಳ: ಮುಂಬೈ ಮೂಲದ ಯುವತಿ ಕಣ್ಮರೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನಿಂದ ಕೆಎಸ್‌ಆರ್‌ಟಿಸಿನಲ್ಲಿ ಡೈರಿ ತಿಂಡಿಗಳು ಹಾಗೂ ಪಾನೀಯಗಳನ್ನು ಫ್ಲೈಬಸ್‌ ಪ್ರಯಾಣಿಕರಿಗೆ ನಂದಿನಿ ಉಚಿತ ಲಘು ತಿಂಡಿ ಕಿಟ್‌

(ನ್ಯೂಸ್‌ ಕಡಬ) newskadaba.com,  ನ.12 ಬೆಂಗಳೂರು: ಬೆಂಗಳೂರು ವಿಮಾನ ನಿಲ್ದಾಣಕ್ಕೆ ಹೋಗುವ ಅಥವಾ ಅಲ್ಲಿಂದ ನಿರ್ಗಮಿಸುವ ಪ್ರಯಾಣಿಕರಿಗೆ ಕೆಎಸ್‌ಆರ್‌ಟಿಸಿ ಹಾಗೂ ಕೆಎಂಎಫ್‌ ಸಿಹಿ ಸುದ್ದಿ ನೀಡಿವೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ತನ್ನ ಫ್ಲೈಬಸ್ ವಿಮಾನ ನಿಲ್ದಾಣ ಸೇವೆಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಕರ್ನಾಟಕ ಹಾಲು ಒಕ್ಕೂಟದ ಪ್ರಮುಖ ಬ್ರ್ಯಾಂಡ್ ನಂದಿನಿ ಉತ್ಪನ್ನಗಳನ್ನು ಒಳಗೊಂಡ ಉಚಿತ ಲಘು ತಿಂಡಿ ಕಿಟ್‌ಗಳನ್ನು ನೀಡಲಾಗುವುದು ಎಂದು ಘೋಷಿಸಿದೆ. ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ನವೆಂಬರ್ 12ರಂದು ಕೆಂಪೇಗೌಡ ಅಂತಾರಾಷ್ಟ್ರೀಯ

ಇಂದಿನಿಂದ ಕೆಎಸ್‌ಆರ್‌ಟಿಸಿನಲ್ಲಿ ಡೈರಿ ತಿಂಡಿಗಳು ಹಾಗೂ ಪಾನೀಯಗಳನ್ನು ಫ್ಲೈಬಸ್‌ ಪ್ರಯಾಣಿಕರಿಗೆ ನಂದಿನಿ ಉಚಿತ ಲಘು ತಿಂಡಿ ಕಿಟ್‌ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರೈಲ್ವೆ ಇಲಾಖೆಯಲ್ಲಿ ನೇಮಕಾತಿ

(ನ್ಯೂಸ್‌ ಕಡಬ) newskadaba.com,  ನ.12 ಬೆಂಗಳೂರು: ಭಾರತೀಯ ರೈಲ್ವೆ ಇಲಾಖೆಯು ತಾಂತ್ರಿಕೇತರ ವರ್ಗದ ದಲ್ಲಿ ಉದ್ಯೋಗಾವಕಾಶವಿದ್ದು,ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಒಟ್ಟು 8,860 ಹುದ್ದೆಗಳ ಭರ್ತಿಗೆ ನೇಮಕಾತಿ ಪ್ರಕ್ರಿಯೆ ನಡೆಯಲಿದ್ದು, ಎರಡು ಹಂತದಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಲಿದೆ. 5,817 ಪದವೀಧರ ಹುದ್ದೆಳು ಹಾಗೂ 3058 ಅಂಡರ್​ ಗ್ರಾಜುಯೇಟ್​ ಹುದ್ದೆಗಳು ಇದ್ದು, ಅರ್ಜಿ ಸಲ್ಲಿಕೆಗೆ ನವೆಂಬರ್ ಕೊನೆ ದಿನವಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ner.indianrailways.gov.in ಗೆ ಭೇಟಿ

ರೈಲ್ವೆ ಇಲಾಖೆಯಲ್ಲಿ ನೇಮಕಾತಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top