News Kadaba

ಅತೀ ಶೀಘ್ರದಲ್ಲೇ ಕರ್ನಾಟಕದಲ್ಲಿ ಬರಲಿದೆ AI ದೂರು ವ್ಯವಸ್ಥೆ

(ನ್ಯೂಸ್‌ ಕಡಬ) newskadaba.com,  ನ.10 ಬೆಂಗಳೂರು:  ನೀರು ಸರಬರಾಜು, ವಿದ್ಯುತ್ ವ್ಯತ್ಯಯ, ಹದಗೆಟ್ಟ ರಸ್ತೆಗಳು ಅಥವಾ ಸರ್ಕಾರಿ ಯೋಜನೆಗಳ ಅಡಿಯಲ್ಲಿ ಸಮಸ್ಯೆಗಳ ಬಗ್ಗೆ ಸರ್ಕಾರಿ ಅಧಿಕಾರಿಗಳಿಗೆ ದೂರು ಸಲ್ಲಿಸುವುದು ಸುಲಭವಾಗಲಿದೆ. ಕರ್ನಾಟಕ ಇ-ಗವರ್ನೆನ್ಸ್ ಕೇಂದ್ರವು ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (AI) ಆಧಾರಿತ ಕುಂದುಕೊರತೆ ಪರಿಹಾರ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸುತ್ತಿದೆ. ಈ ಹೊಸ ವ್ಯವಸ್ಥೆ ಡಿಸೆಂಬರ್‌ನಿಂದ ಸಾರ್ವಜನಿಕರಿಗೆ ಲಭ್ಯವಾಗುವ ಸಾಧ್ಯತೆಯಿದೆ. 2021 ರಿಂದ ಸಮಗ್ರ ಸಾರ್ವಜನಿಕ ಕುಂದುಕೊರತೆ ನಿವಾರಣಾ ವ್ಯವಸ್ಥೆ (iPGRS) ಕಾರ್ಯನಿರ್ವಹಿಸುತ್ತಿದ್ದು, ಇದರ ಮೂಲಕ ವೆಬ್‌ಸೈಟ್ ಬಳಸಿ ದೂರುಗಳನ್ನು ಸಲ್ಲಿಸಬಹುದಾಗಿದೆ. ಈ ನೂತನ […]

ಅತೀ ಶೀಘ್ರದಲ್ಲೇ ಕರ್ನಾಟಕದಲ್ಲಿ ಬರಲಿದೆ AI ದೂರು ವ್ಯವಸ್ಥೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸದ್ದಿಲ್ಲದೆ ಸಪ್ತಪದಿ ತುಳಿದ ‘ಅಮೃತವರ್ಷಿಣಿ’ ಖ್ಯಾತಿಯ ರಜನಿ

(ನ್ಯೂಸ್‌ ಕಡಬ) newskadaba.com,  ನ.08: ‘ಅಮೃತವರ್ಷಿಣಿ’ ಧಾರಾವಾಹಿ ಮೂಲಕ ಖ್ಯಾತಿ ಗಳಿಸಿದ್ದ ನಟಿ ರಜಿನಿ ಇದೀಗ ಸದ್ದಿಲ್ಲದೆ ಜಿಮ್ ಟ್ರೇನರ್ ಅರುಣ್ ವೆಂಕಟೇಶ್ ಜೊತೆ ಹಸೆಮಣೆ ಏರಿದ್ದಾರೆ. ರಜಿನಿ ಅವರು ‘ಅಮೃತವರ್ಷಿಣಿ’, ‘ಹಿಟ್ಲರ್ ಕಲ್ಯಾಣ’ದಂತಹ ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ಜೊತೆಗೆ ರಿಯಾಲಿಟಿ ಶೋಗಳಲ್ಲೂ ಕಾಣಿಸಿಕೊಂಡಿದ್ದು, ಕೆಲವು ಶೋಗಳನ್ನು ನಿರೂಪಿಸಿದ್ದಾರೆ ಕೂಡ. ಇತ್ತೀಚೆಗೆ ಅವರು ಬಣ್ಣದ ಲೋಕದಲ್ಲಿ ಕಾಣಿಸಿಕೊಳ್ಳುತ್ತಾ ಇರಲಿಲ್ಲ. ಇನ್‌ಸ್ಟಾಗ್ರಾಮ್ ನಲ್ಲಿ ಅರುಣ್ ವೆಂಕಟೇಶ್ ಅವರೊಂದಿಗೆ ರೀಲ್ಸ್‌ಗಳನ್ನು ಮಾಡುತ್ತಿದ್ದರು. ಇವರಿಬ್ಬರ ವಿಡಿಯೋಗಳು ಸಾಕಷ್ಟು ಫೇಮಸ್ ಆಗಿದ್ದು, ಈ ಬಗ್ಗೆ ಪ್ರಶ್ನೆ

ಸದ್ದಿಲ್ಲದೆ ಸಪ್ತಪದಿ ತುಳಿದ ‘ಅಮೃತವರ್ಷಿಣಿ’ ಖ್ಯಾತಿಯ ರಜನಿ Read More »

ಸಿನಿಮಾ

ಎಡಮಂಗಲ ರೈಲ್ವೆ ನಿಲ್ದಾಣದಲ್ಲಿ ಎಕ್ಸ್‌ಪ್ರೆಸ್ ರೈಲು ನಿಲುಗಡೆಗೆ ಮನವಿ

(ನ್ಯೂಸ್‌ ಕಡಬ) newskadaba.com,  ನ.10 ಎಡಮಂಗಲ : ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರತಿ ಮುರುಳ್ಯ ಅವರು ಇಂದು ಎಡಮಂಗಲದಲ್ಲಿ ನಡೆದ ಗುದ್ದಲಿ ಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಈ ಸಂದರ್ಭದಲ್ಲಿ ಜೀವೇಂದ್ರ ಎಡಮಂಗಲ ಅವರು ಎಡಮಂಗಲ ರೈಲ್ವೆ ನಿಲ್ದಾಣದಲ್ಲಿ ಎಕ್ಸ್‌ಪ್ರೆಸ್ ರೈಲುಗಳ ನಿಲುಗಡೆ ಸೌಲಭ್ಯ ನೀಡುವಂತೆ ಸಂಸದರನ್ನು ಒತ್ತಾಯಿಸಲು ಶಾಸಕರಿಗೆ ಮನವಿ ಸಲ್ಲಿಸಿದರು. ಎಡಮಂಗಲ ಪ್ರದೇಶದ ಜನತೆಗೆ ರೈಲು ಪ್ರಯಾಣದ ಅನುಕೂಲತೆ ಹೆಚ್ಚಿಸಲು ಈ ನಿಲುಗಡೆ ಅತ್ಯಂತ ಅಗತ್ಯ ಎಂದು ಜೀವೇಂದ್ರ ಅಭಿಪ್ರಾಯಪಟ್ಟರು. ಸ್ಥಳೀಯರು ಈ ಮನವಿಗೆ ಬೆಂಬಲ

ಎಡಮಂಗಲ ರೈಲ್ವೆ ನಿಲ್ದಾಣದಲ್ಲಿ ಎಕ್ಸ್‌ಪ್ರೆಸ್ ರೈಲು ನಿಲುಗಡೆಗೆ ಮನವಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಭಾರತದ ಇಬ್ಬರು ಮೋಸ್ಟ್ ವಾಂಟೆಡ್ ದರೋಡೆಕೋರರ ಬಂಧನ

(ನ್ಯೂಸ್‌ ಕಡಬ) newskadaba.com,  ನ.08: ಅಮೆರಿಕ ಹಾಗೂ ಜಾರ್ಜಿಯಾದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಭಾರತದ ಇಬ್ಬರು ಮೋಸ್ಟ್ ವಾಂಟೆಡ್ ದರೋಡೆಕೋರರನ್ನು ಭಾರತೀಯ ಭದ್ರತಾ ಸಂಸ್ಥೆಗಳು ಬಂಧಿಸಿವೆ. ಬಂಧಿತರಲ್ಲಿ ಓರ್ವ ಆರೋಪಿ ಬಿಷ್ಣೋಯ್ ಗ್ಯಾಂಗ್ ಜೊತೆ ಸಂಪರ್ಕದಲ್ಲಿದ್ದ ಎಂದು ತಿಳಿದುಬಂದಿದೆ. ವೆಂಕಟೇಶ್ ಗಾರ್ಗ್ ಹಾಗೂ ಭಾನು ರಾಣಾ ಬಂಧಿತರು. ಹರಿಯಾಣ ಪೊಲೀಸರು ಹಾಗೂ ಭದ್ರತಾ ಸಂಸ್ಥೆಯ ಅಧಿಕಾರಿಗಳು ವೆಂಕಟೇಶ್ ಗಾರ್ಗ್ನನ್ನು ಜಾರ್ಜಿಯಾದಲ್ಲಿ, ಭಾನು ರಾಣಾನನ್ನು ಅಮೆರಿಕದಲ್ಲಿ ಬಂಧಿಸಿದ್ದಾರೆ. ರಾಣಾ ಕುಖ್ಯಾತ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನೊಂದಿಗೆ ಸಂಪರ್ಕ ಹೊಂದಿದ್ದಾನೆ. ಗಾರ್ಗ್ ಮತ್ತು ರಾಣಾ

ಭಾರತದ ಇಬ್ಬರು ಮೋಸ್ಟ್ ವಾಂಟೆಡ್ ದರೋಡೆಕೋರರ ಬಂಧನ Read More »

ಬ್ರೇಕಿಂಗ್ ನ್ಯೂಸ್

ಅಮೆರಿಕಾದಲ್ಲಿ ಉನ್ನತ ವ್ಯಾಸಂಗಕ್ಕೆ ತೆರಳಿದ್ದ ಭಾರತೀಯ ವಿದ್ಯಾರ್ಥಿನಿಯೊಬ್ಬರು ಸಾವು

(ನ್ಯೂಸ್‌ ಕಡಬ) newskadaba.com,  ನ.10 : ಅಮೆರಿಕಾದ ಉನ್ನತ ವ್ಯಾಸಂಗಕ್ಕೆಂದು ತೆರಳಿದ ಭಾರತದ ವಿದ್ಯಾರ್ಥಿನಿಯೊಬ್ಬಳು ಶವವಾಗಿ ಪತ್ತೆಯಾಗಿದ್ದಾಳೆ. ಆಂಧ್ರಪ್ರದೇಶ ಮೂಲದ ರಾಜ್ಯಲಕ್ಷ್ಮಿ ಯರ್ಲಗಡ್ಡ ಸಾವನ್ನಪ್ಪಿದ ವಿದ್ಯಾರ್ಥಿನಿ. ನವೆಂಬರ್ 7 ರಂದು ಈಕೆ ಸಾವನ್ನಪ್ಪಿದ್ದು ಈಕೆಯ ಶವವನ್ನು ಈಗ ಭಾರತಕ್ಕೆ ತರುವುದಕ್ಕೆ ಕುಟುಂಬದವರು ಕೇಂದ್ರ ವಿದೇಶಾಂಗ ಇಲಾಖೆಯ ನೆರವು ಕೋರಿದ್ದಾರೆ. ಕೃಷಿ ಕುಟುಂಬದಿಂದ ಬಂದ ರಾಜ್ಯಲಕ್ಷ್ಮಿ ಯರ್ಲಗುಡ್ಡ ಅಮೆರಿಕಾದಲ್ಲಿ ನಿದ್ರೆಯಲ್ಲಿದ್ದಾಗಲೇ ಸಾವನ್ನಪ್ಪಿದ್ದಾರೆ. ಅಮೆರಿಕಾದಲ್ಲೇ ಪದವಿ ಪಡೆದು ಕೆಲಸ ಹುಡುಕುತ್ತಿದ್ದ ವಿದ್ಯಾರ್ಥಿನಿ ರಾಜ್ಯಲಕ್ಷ್ಮಿ ಟೆಕ್ಸಾಸ್‌ ಎ & ಎಂ ವಿಶ್ವವಿದ್ಯಾಲಯ

ಅಮೆರಿಕಾದಲ್ಲಿ ಉನ್ನತ ವ್ಯಾಸಂಗಕ್ಕೆ ತೆರಳಿದ್ದ ಭಾರತೀಯ ವಿದ್ಯಾರ್ಥಿನಿಯೊಬ್ಬರು ಸಾವು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಿಡುಗಡೆಗೆ ಮೊದಲೇ ‘ಜನ ನಾಯಗನ್’ ಸಿನಿಮಾ ಹೊಸ ದಾಖಲೆ

(ನ್ಯೂಸ್‌ ಕಡಬ) newskadaba.com,  ನ.10 : ದಳಪತಿ ಎಂದು ಪ್ರೀತಿಯಿಂದ ಕರೆಯಲ್ಪಡುವ ವಿಜಯ್ ಸ್ಟಾರ್ ನಿರ್ದೇಶಕರಿಲ್ಲದೆಯೂ ಬಾಕ್ಸ್ ಆಫೀಸ್‌ನಲ್ಲಿ ಪ್ರಾಬಲ್ಯ ಸಾಧಿಸುತ್ತಿದ್ದಾರೆ. ದಿ ಗ್ರೇಟೆಸ್ಟ್ ಆಫ್ ಆಲ್ ಟೈಮ್ ಚಿತ್ರದ ಉತ್ತಮ ಯಶಸ್ಸಿನ ನಂತರ, ಅವರ ಮುಂಬರುವ ಆಕ್ಷನ್ ಥ್ರಿಲ್ಲರ್ ಸಿನಿಮಾ ಜನ ನಾಯಗನ್ ಬಿಡುಗಡೆ ಪೂರ್ವವೇ ಎಲ್ಲಾ ದಾಖಲೆಗಳನ್ನು ಮುರಿಯುತ್ತಿದೆ . ಹೆಚ್. ವಿನೋದ್ ನಿರ್ದೇಶಿಸಿದ ಮತ್ತು ಕೆವಿಎನ್ ಪ್ರೊಡಕ್ಷನ್ಸ್ ನಿರ್ಮಿಸಿದ ಈ ಚಿತ್ರವು 2026 ರ ಪೊಂಗಲ್‌ಗೆ ಜನವರಿ 9, 2026 ರಂದು ಬಿಡುಗಡೆಯಾಗಲಿದೆ. ಈಗಾಗಲೇ ಸಿನಿಮಾ

ಬಿಡುಗಡೆಗೆ ಮೊದಲೇ ‘ಜನ ನಾಯಗನ್’ ಸಿನಿಮಾ ಹೊಸ ದಾಖಲೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಇಂದಿನಿಂದ ಕರ್ನಾಟಕ, ತಮಿಳುನಾಡಿಗೆ ಕೇರಳ ಟೂರಿಸ್ಟ್ ಬಸ್ ಸೇವೆ ಸ್ಥಗಿತ

(ನ್ಯೂಸ್‌ ಕಡಬ) newskadaba.com,  ನ.08: ಸೋಮವಾರದಿಂದ ಕರ್ನಾಟಕ ಮತ್ತು ತಮಿಳುನಾಡಿಗೆ ತೆರಳುವ ಎಲ್ಲಾ ಅಂತರರಾಜ್ಯ ಸೇವೆಗಳನ್ನು ಸ್ಥಗಿತಗೊಳಿಸುವುದಾಗಿ ಕೇರಳ ಐಷಾರಾಮಿ ಬಸ್ ಮಾಲೀಕರ ಸಂಘ ಪ್ರಕಟಿಸಿದೆ. ಸೋಮವಾರ ಸಂಜೆ 6 ಗಂಟೆಯಿಂದ ಟೂರಿಸ್ಟ್ ಬಸ್ ಸೇವೆಯನ್ನು ಸ್ಥಗಿತಗೊಳಿಸಲಾಗುವುದು ಎಂದು ಐಷಾರಾಮಿ ಬಸ್ ಮಾಲೀಕರ ಸಂಘ, ಕೇರಳ ರಾಜ್ಯ ಸಮಿತಿ ತಿಳಿಸಿದೆ. ಎರಡೂ ರಾಜ್ಯಗಳು ಕಾನೂನುಬಾಹಿರ ರಾಜ್ಯದ ತೆರಿಗೆಗಳನ್ನು (Tax) ವಿಧಿಸುತ್ತಿದೆ. ಕೇರಳ ನಿರ್ವಾಹಕರಿಗೆ ಸೇರಿದ ಅಖಿಲ ಭಾರತ ಪ್ರವಾಸಿ ಪರವಾನಗಿ (AITP) ಬಸ್‌ಗಳನ್ನು ವಶಪಡಿಸಿಕೊಳ್ಳಲು ಪ್ರಾರಂಭಿಸಿದ ನಂತರ

ಇಂದಿನಿಂದ ಕರ್ನಾಟಕ, ತಮಿಳುನಾಡಿಗೆ ಕೇರಳ ಟೂರಿಸ್ಟ್ ಬಸ್ ಸೇವೆ ಸ್ಥಗಿತ Read More »

ಕರ್ನಾಟಕ

ಸುಳ್ಯ : ರಾಜ್ಯ ಮಟ್ಟದ ವೇಟ್ ಲಿಪ್ಟಿಂಗ್ ಚಾಂಪಿಯನ್ ಷಿಪ್ ಪಂದ್ಯಾಟ

(ನ್ಯೂಸ್‌ ಕಡಬ) newskadaba.com,  ನ.10 ಸುಳ್ಯ: ರಾಜ್ಯ ಮಟ್ಟದ ಜೂನಿಯರ್, ಸಬ್ ಜೂನಿಯರ್, ಹಾಗೂ ಸೀನಿಯರ್ ವಿಭಾಗದ ಪುರುಷ ಮತ್ತು ಮಹಿಳೆಯರ ವೇಟ್ ಲಿಪ್ಟಿಂಗ್ ಚಾಂಪಿಯನ್ ಷಿಪ್ ೨೦೨೫ ಸುಳ್ಯದ ಯುವಜನ ಸಂಯುಕ್ತ ಮಂಡಳಿ ಬಳಿಯ ಸುಳ್ಯದ ಜೂನಿಯಲ್ ಕಾಲೇಜು ಮೈದಾನದಲ್ಲಿ ಆರಂಭಗೊಂಡಿದೆ.ಕರ್ನಾಟಕ ರಾಜ್ಯ ವೇಟ್ ಲಿಫ್ಟಿಂಗ್ ಸಂಸ್ಥೆ ಬೆಂಗಳೂರು ಇವರ ಮೂಲಕ ಸುಳ್ಯದ ಸ್ಪೋರ್ಟ್ಸ್ ಮತ್ತು ಆರ್ಟ್ಸ್ ಎಸೋಸಿಯೇಶನ್ ಇದರ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ವೇಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ಇದರ ಸಂಘಟನಾ ಸಮಿತಿಯ ಸಹಯೋಗದಲ್ಲಿ

ಸುಳ್ಯ : ರಾಜ್ಯ ಮಟ್ಟದ ವೇಟ್ ಲಿಪ್ಟಿಂಗ್ ಚಾಂಪಿಯನ್ ಷಿಪ್ ಪಂದ್ಯಾಟ Read More »

ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ಇಂಟರ್ ಲಾಕ್ ತುಂಬಿದ್ದ ಲಾರಿ ಪಲ್ಟಿ – ಇಬ್ಬರಿಗೆ ಗಾಯ

(ನ್ಯೂಸ್‌ ಕಡಬ) newskadaba.com,  ನ.08: ಸುಳ್ಯ:ಇಂಟರ್ ಲಾಕ್ ತುಂಬಿಕೊಂಡು ಹೋಗುತ್ತಿದ್ದ ಲಾರಿ ಪಲ್ಟಿಯಾಗಿ ಚಾಲಕ ಮತ್ತು ನಿರ್ವಾಹಕ ಗಾಯಗೊಂಡ ಘಟನೆ ಸುಳ್ಯ ಅಜ್ಜಾವರ ಗ್ರಾಮದ ಮುಳ್ಯ ಎಂಬಲ್ಲಿ ಶುಕ್ರವಾರ ನಡೆದಿದೆ. ಮುಳ್ಯದ ಯತೀಶ್ ಅವರ ಹೊಸ ಮನೆಯ ಅಂಗಳಕ್ಕೆ ಇಂಟರ್ ಲಾಕ್ ಅಳವಡಿಸಲು ಇಂಟರ್ ಲಾಕ್ ತುಂಬಿ ಕೊಂಡು ಬರುತ್ತಿದ್ದ ಲಾರಿ ಪಲ್ಟಿಯಾಗಿದೆ. ಘಟನೆಯಲ್ಲಿ ಚಾಲಕ ಮತ್ತು ನಿರ್ವಾಹಕರಿಬ್ಬರು ಗಾಯಗೊಂಡಿದ್ದಾರೆ. ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದು, ನಿರ್ವಾಹಕ ನವೀನ್ ಗಂಭೀರವಾಗಿ ಗಯಗೊಂಡಿದ್ದಾರೆ. ಅವರನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರು

ಇಂಟರ್ ಲಾಕ್ ತುಂಬಿದ್ದ ಲಾರಿ ಪಲ್ಟಿ – ಇಬ್ಬರಿಗೆ ಗಾಯ Read More »

ಕರಾವಳಿ

ಗಾಂಜಾ ಸಾಗಾಟ: ಆರೋಪಿ ಬಂಧನ

(ನ್ಯೂಸ್‌ ಕಡಬ) newskadaba.com,  ನ.08: ಅಟೋ ರಿಕ್ಷಾದಲ್ಲಿ ನಿಷೇಧಿತ ಮಾದಕ ವಸ್ತು ಗಾಂಜಾವನ್ನು ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಪುತ್ತೂರು ನಗರ ಪೊಲೀಸರು ಬಂಧಿಸಿದ್ದಾರೆ. ರಿಕ್ಷಾ ಚಲಾಯಿಸುತ್ತಿದ್ದ ಪ್ರಸಾದ್ ಬಂಧಿತ ಆರೋಪಿ. ಈತ ಸವಣೂರು ಕಡೆಯಿಂದ ಪುತ್ತೂರು ಕಡೆಗೆ ಆಟೋರಿಕ್ಷಾದಲ್ಲಿ ಗಾಂಜಾವನ್ನು ಸಾಗಾಟ ಮಾಡುತ್ತಿದ್ದ ಮಾಹಿತಿ ಅರಿತ ಪುತ್ತೂರು ನಗರ ಪೊಲೀಸ್ ಠಾಣಾ ಪೊಲೀಸ್ ಉಪನಿರೀಕ್ಷಕ ಜನಾರ್ಧನ ಕೆ.ಎಂ ಮತ್ತು ಸಿಬ್ಬಂದಿಗಳೊಂದಿಗೆ ದಾಳಿ ನಡೆಸಿ ಆರೋಪಿ ಸಹಿತ ಆತನಿಂದ ಸುಮಾರು ಒಂದು ಕೆಜಿಗಿಂತಲೂ ಅಧಿಕ ಗಾಂಜಾ ಹಾಗೂ ತಲವಾರು

ಗಾಂಜಾ ಸಾಗಾಟ: ಆರೋಪಿ ಬಂಧನ Read More »

ಕರಾವಳಿ
Scroll to Top