News Kadaba

ಅಪ್ರಾಪ್ತ ಮಗಳಿಂದಲೇ ಹೆತ್ತ ತಾಯಿಯ ಕೊಲೆ..!!

(ನ್ಯೂಸ್‌ ಕಡಬ) newskadaba.com,  ಅ. 31 ಬೆಂಗಳೂರು: ಅಪ್ರಾಪ್ತ ಮಗಳೇ ತನ್ನ ತಾಯಿಯನ್ನು ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಸುಬ್ರಹ್ಮಣ್ಯಪುರದ ಸರ್ಕಲ್ ಮಾರಮ್ಮ ದೇವಸ್ಥಾನದ ಬಳಿ ನಡೆದಿದೆ… ಲೋನ್ ರಿಕವರಿ ಕಂಪನಿಯಲ್ಲಿ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದ ನೇತ್ರಾವತಿ (35) ಕೊಲೆಯಾದ ಮಹಿಳೆ. ಸ್ನೇಹಿತರ ಜೊತೆ ಸೇರಿಕೊಂಡು ತಾಯಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿ ನೇಣು ಹಾಕಿ ಮಗಳು ಹತ್ಯೆ ಮಾಡಿದ್ದಾಳೆ. ಕೃತ್ಯದಲ್ಲಿ ಐವರು ಅಪ್ರಾಪ್ತರು ಭಾಗಿಯಾಗಿರುವುದು ತನಿಖೆಯಿಂದ ತಿಳಿದುಬಂದಿದೆ..ಅ.25 ರಂದು ಘಟನೆ ನಡೆದಿದೆ. ಪೊಲೀಸರು ಆತ್ಮಹತ್ಯೆ ಪ್ರಕರಣ ದಾಖಲಸಿಕೊಂಡಿದ್ದರು. ನಂತರ […]

ಅಪ್ರಾಪ್ತ ಮಗಳಿಂದಲೇ ಹೆತ್ತ ತಾಯಿಯ ಕೊಲೆ..!! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಆಸ್ಟ್ರೇಲಿಯಾವನ್ನು ಮಣಿಸಿ ಭಾರತ ಮಹಿಳಾ ತಂಡ ವಿಶ್ವಕಪ್ ಫೈನಲ್ಗೆ!

(ನ್ಯೂಸ್‌ ಕಡಬ) newskadaba.com,  ಅ..31: ಜೆಮಿಮಾ ರೋಡ್ರಿಗಸ್ ಅವರ ಅಜೇಯ ಶತಕ ಹಾಗೂ ನಾಯಕಿ ಹರ್ಮನ್‌ಪ್ರೀತ್ ಕೌರ್ ಅವರ ಅದ್ಭುತ ಅರ್ಧಶತಕದ ನೆರವಿನಿಂದ ಭಾರತ ಮಹಿಳಾ ಕ್ರಿಕೆಟ್ ತಂಡವು 2025ರ ಮಹಿಳಾ ವಿಶ್ವಕಪ್ ಸೆಮಿಫೈನಲ್‌ನಲ್ಲಿ ಹಾಲಿ ಚಾಂಪಿಯನ್ ಆಸ್ಟ್ರೇಲಿಯಾವನ್ನು ಸೋಲಿಸಿ ಫೈನಲ್‌ಗೆ ಅರ್ಹತೆ ಪಡೆದಿದೆ. ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಈ ರೋಚಕ ಪಂದ್ಯದಲ್ಲಿ ಭಾರತ 339 ರನ್‌ಗಳ ಭರ್ಜರಿ ಗುರಿಯನ್ನು 48.3 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು ಬೆನ್ನಟ್ಟಿ ಗೆಲುವು ಸಾಧಿಸಿತು. ಮೊದಲು

ಆಸ್ಟ್ರೇಲಿಯಾವನ್ನು ಮಣಿಸಿ ಭಾರತ ಮಹಿಳಾ ತಂಡ ವಿಶ್ವಕಪ್ ಫೈನಲ್ಗೆ! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ಚಿನ್ನದ ರೇಟ್ ಚೆಕ್ ಮಾಡಿ

(ನ್ಯೂಸ್‌ ಕಡಬ) newskadaba.com,  ಅ..31: ಕೆಲವು ದಿನಗಳಿಂದ ಚಿನ್ನದ ಬೆಲೆ ನಿರಂತರವಾಗಿ ಕುಸಿಯುತ್ತಿದೆ. ಜಾಗತಿಕ ಮಾರುಕಟ್ಟೆ, ಭೌಗೋಳಿಕ, ರಾಜಕೀಯ, ಆರ್ಥಿಕ ಪರಿಸ್ಥಿತಿ, ಕರೆನ್ಸಿ ಏರಿಳಿತಗಳು ಭಾರತದಲ್ಲಿ ಚಿನ್ನದ ದರಗಳ ಮೇಲೆ ಪರಿಣಾಮ ಬೀರುತ್ತದೆ. ಭಾರತೀಯ ಬುಲಿಯನ್ ಮತ್ತು ಜ್ಯುವೆಲ್ಲರ್ಸ್ ಅಸೋಸಿಯೇಷನ್ ​​ ಅಂಕಿಅಂಶದ ಪ್ರಕಾರ ಅಕ್ಟೋಬರ್‌ 28ರಂದು ಚಿನ್ನದ ಬೆಲೆ (Gold rate) 24 ಕ್ಯಾರೆಟ್‌ಗೆ 1,18,043 ರೂ.ಗಳಾಗಿದ್ದು, 22 ಕ್ಯಾರೆಟ್ ಚಿನ್ನದ ಬೆಲೆ 1,08,127 ರೂ. ಆಗಿತ್ತು. ಭಾರತದ ಮಲ್ಟಿ ಕಮಾಡಿಟಿ ಎಕ್ಸ್‌ಚೇಂಜ್‌ನಲ್ಲಿ ಅಕ್ಟೋಬರ್‌ 27ರಂದು ಚಿನ್ನದ

ಇಂದಿನ ಚಿನ್ನದ ರೇಟ್ ಚೆಕ್ ಮಾಡಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಂಗಳೂರು : ಒಳ ಮೀಸಲಾತಿಯ ಕುರಿತು ರಾಜ್ಯ ಸರ್ಕಾರದಿಂದ ಗೊಂದಲ ಸೃಷ್ಟಿ- ಕಾರಜೋಳ ಆರೋಪ

(ನ್ಯೂಸ್‌ ಕಡಬ) newskadaba.com,  ಅ. 31 ಬೆಂಗಳೂರು: ಒಳ ಮೀಸಲಾತಿ ಜಾರಿ ಮಾಡುವಲ್ಲಿ ರಾಜ್ಯ ಸರ್ಕಾರ ವಿಳಂಬ ಮಾಡುತ್ತಿದ್ದು, ಈ ಮೂಲಕ 101 ಪರಿಶಿಷ್ಟ ಜಾತಿ (ಎಸ್‌ಸಿ) ಗಳ ಹಿತಾಸಕ್ತಿಗಳನ್ನು ರಕ್ಷಿಸುವಲ್ಲಿ ವಿಫಲವಾಗಿದೆ ಎಂದು ವಿರೋಧ ಪಕ್ಷ ಬಿಜೆಪಿ ಆರೋಪಿಸಿದೆ.ರಾಜ್ಯ ಸರ್ಕಾರ ಒಳ ಮೀಸಲಾತಿ ಕುರಿತು ಗೊಂದಲ ಸೃಷ್ಟಿಸುತ್ತಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಮತ್ತು ಸಂಸದ ಗೋವಿಂದ ಕಾರಜೋಳ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಜಾರಿಯಾಗಬೇಕು. 101 ಜಾತಿಗಳಿಗೆ ಸಾಮಾಜಿಕ

ಬೆಂಗಳೂರು : ಒಳ ಮೀಸಲಾತಿಯ ಕುರಿತು ರಾಜ್ಯ ಸರ್ಕಾರದಿಂದ ಗೊಂದಲ ಸೃಷ್ಟಿ- ಕಾರಜೋಳ ಆರೋಪ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಕ್ಕಿನ ಮನುಷ್ಯನಿಗೆ ಹೂವಿನ ನಮನ ಸಲ್ಲಿಸಿದ ಪ್ರಧಾನಿ ಮೋದಿ

(ನ್ಯೂಸ್‌ ಕಡಬ) newskadaba.com,  ಅ..31: ಭಾರತದ ಮೊದಲ ಗೃಹ ಸಚಿವ ಹಾಗೂ ದೇಶದ ಏಕೀಕರಣದ ಶಿಲ್ಪಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150ನೇ ಜನ್ಮದಿನದ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಗುಜರಾತ್‌ನ ಏಕತಾ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದರು. 2014ರಲ್ಲಿ ಪ್ರಧಾನಿಯಾದ ಬಳಿಕ ಮೋದಿ ಪ್ರಾರಂಭಿಸಿದ ಸಂಪ್ರದಾಯದಂತೆ, ಅಕ್ಟೋಬರ್ 31ನ್ನು ಪ್ರತಿವರ್ಷ ರಾಷ್ಟ್ರೀಯ ಏಕತಾ ದಿವಸ್ ಎಂದು ದೇಶಾದ್ಯಂತ ಆಚರಿಸಲಾಗುತ್ತಿದೆ. ಗುಜರಾತ್‌ನ ನರ್ಮದಾ ಜಿಲ್ಲೆಯ ಏಕ್ತಾ ನಗರದಲ್ಲಿರುವ 182 ಮೀಟರ್ ಎತ್ತರದ ವಿಶ್ವದ ಅತ್ಯಂತ

ಉಕ್ಕಿನ ಮನುಷ್ಯನಿಗೆ ಹೂವಿನ ನಮನ ಸಲ್ಲಿಸಿದ ಪ್ರಧಾನಿ ಮೋದಿ Read More »

ಬ್ರೇಕಿಂಗ್ ನ್ಯೂಸ್

ಇಂದಿನ ರಾಜ್ಯದ ಹವಾಮಾನ ವರದಿ ಹೀಗಿದೆ!

(ನ್ಯೂಸ್‌ ಕಡಬ) newskadaba.com,  ಅ. 31 ಮೊಂಥಾ ಚಂಡಮಾರುತದ ಪರಿಣಾಮ ರಾಜ್ಯದ ಕರಾವಳಿ, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಪ್ರದೇಶಗಳಲ್ಲಿ ಕಳೆದ ಎರಡು ದಿನಗಳಿಂದ ಮಳೆಯಾಗಿದೆ. ಇಂದು ಸಹ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿರಲಿದೆ. ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್

ಇಂದಿನ ರಾಜ್ಯದ ಹವಾಮಾನ ವರದಿ ಹೀಗಿದೆ! Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಮನೆ ಮನೆ ಸಮೀಕ್ಷೆಗೆ ಇಂದು ತೆರೆ-ಆನ್ ಲೈನ್ ಸಮೀಕ್ಷೆಗೆ ನವೆಂಬರ್ 10 ರವರೆಗೆ ವಿಸ್ತರಣೆ

(ನ್ಯೂಸ್‌ ಕಡಬ) newskadaba.com,  ಅ..31: ಬೆಂಗಳೂರು: ರಾಜ್ಯದಲ್ಲಿ ಸೆಪ್ಟೆಂಬರ್ 22ರಿಂದ ಆರಂಭವಾಗಿದ್ದ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯ ಮನೆ ಮನೆ ಗಣತಿ ಕಾರ್ಯಕ್ಕೆ ಶುಕ್ರವಾರ ತೆರೆಬೀಳಲಿದ್ದು, ಗಣತಿಯಲ್ಲಿ ಭಾಗವಹಿಸಲು ಸಾಧ್ಯವಾಗದೆ ಇರುವವರಿಗಾಗಿ ನವೆಂಬರ್ 10ರ ವರೆಗೆ ಆನ್ಲೈನ್ ಸಮೀಕ್ಷೆ ಅವಧಿ ವಿಸ್ತರಣೆ ಮಾಡಲಾಗಿದೆ. ಸರ್ಕಾರದ ಆದೇಶ ಸಂಖ್ಯೆ: ಹಿಂವಕ 289 ಬಿಸಿಎ 2025, ದಿನಾಂಕ:13.08.2025 ರ ಅನ್ವಯ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಕರ್ನಾಟಕ ರಾಜ್ಯದಲ್ಲಿರುವ ಎಲ್ಲಾ ಜನರ (ಹಿಂದುಳಿದ ವರ್ಗಗಳು, ಇತರೆ ಜಾತಿಗಳು

ಮನೆ ಮನೆ ಸಮೀಕ್ಷೆಗೆ ಇಂದು ತೆರೆ-ಆನ್ ಲೈನ್ ಸಮೀಕ್ಷೆಗೆ ನವೆಂಬರ್ 10 ರವರೆಗೆ ವಿಸ್ತರಣೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಂಬ್ಯುಲೆನ್ಸಿಗೆ ದಾರಿ ಬಿಡದೆ ಅಡಚಣೆ: ಬಂಟ್ವಾಳದಲ್ಲಿ ಬೈಕ್ ಸವಾರನ ವಿರುದ್ಧ ಬಂಧನ

(ನ್ಯೂಸ್‌ ಕಡಬ) newskadaba.com,  ಅ. 31 ಬಂಟ್ವಾಳ: ಅಪಘಾತದ ಗಾಯಾಳುಗಳನ್ನು ಮಂಗಳೂರಿಗೆ ಕರೆದೊಯ್ಯುತ್ತಿದ್ದ ಅಂಬ್ಯುಲೆನ್ಸ್ಗೆ ದಾರಿ ಬಿಡದೆ ಸಂಚಾರಕ್ಕೆ ಅಡಚಣೆ ಉಂಟುಮಾಡಿದ ಘಟನೆ ಬಂಟ್ವಾಳ ತಾಲೂಕು ಬಿ.ಸಿ.ರೋಡ್ ಎನ್.ಜಿ. ಸರ್ಕಲ್ ಬಳಿ ನಡೆದಿದೆ. ಮಾಹಿತಿಯ ಪ್ರಕಾರ, ಅಕ್ಟೋಬರ್ 30, 2025 ರಂದು ಬಿಸಿಲೆ ಘಾಟ್ನಲ್ಲಿ ಸಂಭವಿಸಿದ ಅಪಘಾತದ ಗಾಯಾಳುಗಳನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆತಂದು, ತುರ್ತು ಚಿಕಿತ್ಸೆಯ ನಂತರ ಗಂಭೀರ ಸ್ಥಿತಿಯೊಬ್ಬರನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಕಳುಹಿಸಲಾಗುತ್ತಿತ್ತು. KA-22-C-1382 ನಂಬರಿನ ಅಂಬ್ಯುಲೆನ್ಸ್ ಪುತ್ತೂರಿನಿಂದ ಮಂಗಳೂರಿನತ್ತ ಸಾಗುತ್ತಿದ್ದಾಗ ಮಧ್ಯಾಹ್ನ ಸುಮಾರು

ಅಂಬ್ಯುಲೆನ್ಸಿಗೆ ದಾರಿ ಬಿಡದೆ ಅಡಚಣೆ: ಬಂಟ್ವಾಳದಲ್ಲಿ ಬೈಕ್ ಸವಾರನ ವಿರುದ್ಧ ಬಂಧನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯದ ಇಂಧನ ಅಗತ್ಯಗಳಿಗೆ ಶರಾವತಿ ಯೋಜನೆ ನಿರ್ಣಾಯಕ: ಸಚಿವ ಕೆ.ಜೆ. ಜಾರ್ಜ್

(ನ್ಯೂಸ್‌ ಕಡಬ) newskadaba.com,  ಅ. 31 ಬೆಂಗಳೂರು: ಶಿವಮೊಗ್ಗ ಜಿಲ್ಲೆಯಲ್ಲಿ ಕರ್ನಾಟಕ ವಿದ್ಯುತ್ ನಿಗಮ ಲಿಮಿಟೆಡ್ (ಕೆಪಿಸಿಎಲ್) ಪ್ರಸ್ತಾಪಿಸಿರುವ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯು ರಾಜ್ಯದ ಭವಿಷ್ಯದ ಇಂಧನ ಅಗತ್ಯಗಳನ್ನು ಭದ್ರಪಡಿಸಿಕೊಳ್ಳಲು ನಿರ್ಣಾಯಕವಾಗಿದೆ ಎಂದು ಇಂಧನ ಸಚಿವ ಕೆಜೆ ಜಾರ್ಜ್ ಅವರು ಗುರುವಾರ ಹೇಳಿದ್ದಾರೆ.ಯಲಚಹಳ್ಳಿ ಕೆರೆ ಅಂಗಳದಲ್ಲಿ ಸೌರ ಘಟಕ ಉದ್ಘಾಟಿಸಿ ಮಾತನಾಡಿದ ಅವರು, ಜನರು ವದಂತಿಗಳನ್ನು ನಂಬಬಾರದು ಮತ್ತು ಯೋಜನೆಯನ್ನು ಬೆಂಬಲಿಸಬೇಕೆಂದು ಮನವಿ ಮಾಡಿದರು. ಈ ಯೋಜನೆಯು ಪರಿಸರಕ್ಕೆ ಹಾನಿ ಮಾಡುವುದಿಲ್ಲ. ಯೋಜನೆಯು ಅಸ್ತಿತ್ವದಲ್ಲಿರುವ ಎರಡು

ರಾಜ್ಯದ ಇಂಧನ ಅಗತ್ಯಗಳಿಗೆ ಶರಾವತಿ ಯೋಜನೆ ನಿರ್ಣಾಯಕ: ಸಚಿವ ಕೆ.ಜೆ. ಜಾರ್ಜ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

5 ಮಕ್ಕಳ ನಂತರ ನಾಲ್ವರು ರಕ್ತದಾನಿಗಳಿಗೆ HIV ಪಾಸಿಟಿವ್‌!

(ನ್ಯೂಸ್‌ ಕಡಬ) newskadaba.com,  ಅ. 31 ರಾಂಚಿ: ಜಾರ್ಖಂಡ್‌ನ ಚೈಬಾಸಾ ಪಟ್ಟಣದಲ್ಲಿ ವೈದ್ಯರ ಎಡವಟ್ಟಿನಿಂದ ಘೋರ ದುರಂತವೊಂದು ನಡೆದಿತ್ತು. ಥಲಸೇಮಿಯಾ ಪೀಡಿತ ಮಕ್ಕಳಿಗೆ ಸ್ಥಳೀಯ ರಕ್ತ ನಿಧಿಯಿಂದ ರಕ್ತ ಪಡೆದು ವರ್ಗಾವಣೆ ನಂತರ ಎಚ್‌ಐವಿ ಸೋಂಕು ತಗುಲಿದೆ. ಏಳು ವರ್ಷದ ಮಗುವಿಗೆ ಸೋಂಕಿತ ರಕ್ತ ನೀಡಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ತನಿಖೆ ನಡೆಸಿದಾಗ ಈ ಆಘಾತಕಾರಿ ವಿಷಯ ಬೆಳಕಿಗೆ ಬಂದಿತ್ತು. ಇದೀಗ ಮಕ್ಕಳ ಬಳಿಕ ನಾಲ್ವರು ರಕ್ತದಾನಿಗಳಿಗೆ ಹೆಚ್‌ಐವಿ ಸೋಂಕು ತಲುಲಿದೆ ಎಂದು ತಿಳಿದು ಬಂದಿದೆ.. ಒಟ್ಟು ಮಾದರಿಗಳಲ್ಲಿ

5 ಮಕ್ಕಳ ನಂತರ ನಾಲ್ವರು ರಕ್ತದಾನಿಗಳಿಗೆ HIV ಪಾಸಿಟಿವ್‌! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top