News Kadaba

ಉಡುಪಿ ಶ್ರೀಕೃಷ್ಣ ಸನ್ನಿಧಾನಕ್ಕೆ ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿ

(ನ್ಯೂಸ್‌ ಕಡಬ) newskadaba.com,  ಅ..29: ಉಡುಪಿ: ಕನಕದಾಸರಿಗೆ ಶ್ರೀಕೃಷ್ಣನೊಲಿದ ದಿವ್ಯ ತಾಣ, ಕರ್ನಾಟಕ ಕರಾವಳಿಯ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಪ್ರಧಾನಿ ನರೇಂದ್ರ ಮೋದಿ ನವೆಂಬರ್ 28ರಂದು ಆಗಮಿಸಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಶ್ರೀಕೃಷ್ಣ ಮಠ ಪ್ರವೇಶಿಸಿ, ಪೊಡವಿಯೊಡೆಯ ಶ್ರೀಕೃಷ್ಣನ ದರ್ಶನ ಮಾಡಿ ಆಶೀರ್ವಾದ ಪಡೆಯಲಿದ್ದಾರೆ. ಈ ನಿಟ್ಟಿನಲ್ಲಿ ಪ್ರಧಾನಿ ಸ್ವಾಗತಕ್ಕೆ ಈಗಾಗಲೇ ಭರದ ಸಿದ್ಧತೆ ನಡೆಸುತ್ತಿದ್ದು, ಶಿಸ್ತು ಬದ್ದ ಭದ್ರತೆಯ ತಯಾರಿಯನ್ನುಈಗಾಗಲೇ ಪೊಲೀಸ್ ವ್ಯವಸ್ಥೆ ನಡೆಸುತ್ತಿದೆ ಎನ್ನುವ ವಿಷಯ ತಿಳಿದು ಬಂದಿದೆ. ಮೋದಿ ಅವರ ಈ […]

ಉಡುಪಿ ಶ್ರೀಕೃಷ್ಣ ಸನ್ನಿಧಾನಕ್ಕೆ ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿ Read More »

ಕರಾವಳಿ, ಕರ್ನಾಟಕ

ಮಂಡ್ಯ: ಕೆಆರ್ಎಸ್ ರಸ್ತೆಯಲ್ಲಿ ಟಿಪ್ಪರ್ ಲಾರಿ ಹಾಗೂ ಕಾರಿನ ನಡುವೆ ಭೀಕರ ಅಪಘಾತ – ವ್ಯಕ್ತಿಯೋರ್ವ ಸಾವು

(ನ್ಯೂಸ್‌ ಕಡಬ) newskadaba.com,  ಅ.30 : ಇಂದು ಬೆಳ್ಳಂಬೆಳಗ್ಗೆ ಸಕ್ಕರೆ ನಾಡು ಮಂಡ್ಯ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಟಿಪ್ಪರ್ ಲಾರಿ ಕಾರಿನ ನಡುವಿನ ಡಿಕ್ಕಿಯ ರಭಸಕ್ಕೆ ಕಾರಿನಲ್ಲಿದ್ದ ವ್ಯಕ್ತಿಯೋರ್ವ ಸಜೀವವಾಗಿ ದಹನವಾಗಿರುವ ಘಟನೆ ನಡೆದಿದೆ. . ಮಂಡ್ಯದ ಶ್ರೀರಂಗಪಟ್ಟಣ ತಾಲೂಕಿನ‌ ಪಾಲಹಳ್ಳಿ ಬಳಿಯ ಕೆಆರ್ಎಸ್ ರಸ್ತೆಯಲ್ಲಿ ಟಿಪ್ಪರ್ ಲಾರಿ ಹಾಗು ಇನ್ನೋವ ಕಾರು‌ ಮುಖಾಮುಖಿ ಡಿಕ್ಕಿ ಹೊಡೆದಿದ್ದು, ಈ ವೇಳೆ ಏಕಾಏಕಿ ಕಾರಿಗೆ ಬೆಂಕಿ ಹೊತ್ತಿದ್ದರಿಂದ ಕಾರಿನಲ್ಲಿದ್ದ ವ್ಯಕ್ತಿ ಸಜೀವವಾಗಿ ದಹನವಾಗಿರುವ ಬಗ್ಗೆ ವರದಿಯಾಗಿದೆ.

ಮಂಡ್ಯ: ಕೆಆರ್ಎಸ್ ರಸ್ತೆಯಲ್ಲಿ ಟಿಪ್ಪರ್ ಲಾರಿ ಹಾಗೂ ಕಾರಿನ ನಡುವೆ ಭೀಕರ ಅಪಘಾತ – ವ್ಯಕ್ತಿಯೋರ್ವ ಸಾವು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಗ್ರಂಥಾಲಯ ಮೇಲ್ವಿಚಾರಕ ಆತ್ಮಹತ್ಯೆ ಪ್ರಕರಣ; PDO ವಿರುದ್ಧ FIR ದಾಖಲು

(ನ್ಯೂಸ್‌ ಕಡಬ) newskadaba.com,  ಅ.30 ಬೆಂಗಳೂರು: ಗ್ರಂಥಾಲಯ ಮೇಲ್ವಿಚಾರಕ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೆಲಮಂಗಲ ತಾಲ್ಲೂಕಿನ ಕಲಾಲಘಟ್ಟ ಗ್ರಾಮ ಪಂಚಾಯಿತಿಯ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ) ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ಗೋವೇನಹಳ್ಳಿ ಗ್ರಾಮದ ರಾಮಚಂದ್ರಯ್ಯ ಅವರ ಸಾವಿಗೆ ಪಿಡಿಒ ಅವರೇ ಕಾರಣ’ ಎಂದು ಮೃತ ವ್ಯಕ್ತಿಯ ಸಂಬಂಧಿ ದೂರು ನೀಡಿದ್ದಾರೆ. ದೂರಿನ ಮೇರೆಗೆ ಪಿಡಿಒ ವಿರುದ್ಧ ಬಿಎನ್‌ಎಸ್ ಸೆಕ್ಷನ್ 108 ರ ಅಡಿಯಲ್ಲಿ ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣವನ್ನು ನೆಲಮಂಗಲ ಉಪವಿಭಾಗದ ತ್ಯಾಮಗೊಂಡ್ಲು ಪೊಲೀಸರು ದಾಖಲಿಸಿದ್ದಾರೆ. ರಾಮಚಂದ್ರಯ್ಯ

ಗ್ರಂಥಾಲಯ ಮೇಲ್ವಿಚಾರಕ ಆತ್ಮಹತ್ಯೆ ಪ್ರಕರಣ; PDO ವಿರುದ್ಧ FIR ದಾಖಲು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮೊಂತಾ ಚಂಡಮಾರುತ- ಕರಾವಳಿಯಲ್ಲಿ ಹೈ ಅಲರ್ಟ್

(ನ್ಯೂಸ್‌ ಕಡಬ) newskadaba.com,  ಅ.30 ಬೆಂಗಳೂರು:ನೆರೆ ರಾಜ್ಯಗಳಲ್ಲಿ ಅಬ್ಬರಿಸುತ್ತಿರುವ ಮೊಂತಾ ಚಂಡಮಾರುತದ ಪರಿಣಾಮ ರಾಜ್ಯದ ಕೆಲ ಜಿಲ್ಲೆಗಳ ಮೇಲೆ ಉಂಟಾಗಲಿದೆ.ಕರ್ನಾಟಕದಲ್ಲಿ ಮಳೆಯ ಪ್ರಮಾಣ ನಾಳೆ ಕಡಿಮೆಯಾಗಲಿದ್ದು, ಕರಾವಳಿ ಭಾಗದಲ್ಲಿ ಗಾಳಿಯ ಪ್ರಮಾಣ ಹೆಚ್ಚಿರಲಿದೆ. ತೆಲಂಗಾಣ, ಅಂಧ್ರ ಮತ್ತು ತಮಿಳುನಾಡಿನ ಗಡಿ ಜಿಲ್ಲೆಗಳಲ್ಲಿ ವಾತಾವರಣ ಏರಿಳಿತವಾಗಲಿದೆ. ರಾಜಧಾನಿ ಬೆಂಗಳೂರಿನಲ್ಲಿ ಬಹುತೇಕ ಮೋಡ ಕವಿದ ವಾತಾವರಣ ಇರಲಿದ್ದು, ಸಣ್ಣ ಅಥವಾ ಸಾಮಾನ್ಯ ಮಳೆ ಸುರಿಯುವ ಸಂಭವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕೋಲಾರ ಮತ್ತು ಕೊಡಗು ಜಿಲ್ಲೆಯಲ್ಲಿ ಉತ್ತಮ ಮಳೆಯಾಗಲಿದ್ದು,

ಮೊಂತಾ ಚಂಡಮಾರುತ- ಕರಾವಳಿಯಲ್ಲಿ ಹೈ ಅಲರ್ಟ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

‘ಸಾಮಾಜಿಕ ಪಿಡುಗು ನಿವಾರಣೆಗೆ 43 ಸಾವಿರ ಕೋಟಿಯ ಯೋಜನೆ’- ತೇಜಸ್ವಿ ಸೂರ್ಯ

(ನ್ಯೂಸ್‌ ಕಡಬ) newskadaba.com,  ಅ..29: ಬೆಂಗಳೂರಿನ ಟನೆಲ್ ರಸ್ತೆಯು ಕಾಂಗ್ರೆಸ್ ಸರಕಾರದ ಸಾಮಾಜಿಕ ಪಿಡುಗಿನ ನಿವಾರಣೆಗೆ 43 ಸಾವಿರ ಕೋಟಿಯ ಯೋಜನೆ ಎಂದು ಈಗ ಗೊತ್ತಾಗಿದೆ ಎಂದು ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಹಾಗೂ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಅವರು ಟೀಕಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಟನೆಲ್ ರಸ್ತೆಗೆ 43 ಸಾವಿರ ಕೋಟಿ ಖರ್ಚು ಆಗಲಿದೆ. ಹೊಸ 18 ಕಿಮೀ ಸುರಂಗ ಮಾರ್ಗ ರಚನೆಯಿಂದ

‘ಸಾಮಾಜಿಕ ಪಿಡುಗು ನಿವಾರಣೆಗೆ 43 ಸಾವಿರ ಕೋಟಿಯ ಯೋಜನೆ’- ತೇಜಸ್ವಿ ಸೂರ್ಯ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಫೇಲ್ನಲ್ಲಿ ಹಾರಾಟ ನಡೆಸಿ ದಾಖಲೆ ಬರೆದ ರಾಷ್ಟ್ರಪತಿ ದ್ರೌಪದಿ ಮುರ್ಮು

(ನ್ಯೂಸ್‌ ಕಡಬ) newskadaba.com,  ಅ..29: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಹರಿಯಾಣದ ಅಂಬಾಲಾ ವಾಯುಪಡೆ ನೆಲೆಯಿಂದ ರಫೇಲ್ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದ್ದಾರೆ. ಈ ಮೂಲಕ ರಫೇಲ್‌ನಲ್ಲಿ ಹಾರಾಟ ನಡೆಸಿದ ಮೊದಲ ರಾಷ್ಟ್ರಪತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಐದು ತಿಂಗಳ ಹಿಂದೆ, ಪಹಲ್ಗಾಮ್ ದಾಳಿಗೆ ಸೇಡು ತೀರಿಸಿಕೊಳ್ಳಲು ಭಾರತ ಆಪರೇಷನ್ ಸಿಂಧೂರ ನಡೆಸಿತು. ಇದೇ ವಾಯುನೆಲೆಯಿಂದ ರಫೇಲ್‌ಗಳು ಗಡಿಯುದ್ದಕ್ಕೂ ಭಯೋತ್ಪಾದಕ ಶಿಬಿರಗಳನ್ನು ನಾಶಮಾಡುವ ಕಾರ್ಯಾಚರಣೆ ನಡೆಸಿದ್ದವು. ಆ ಮೂಲಕ ಭಾರತವು ಭಯೋತ್ಪಾದನಾ ವಿರೋಧಿ ಸಂದೇಶ ರವಾನಿಸಿತ್ತು ಮುರ್ಮು

ರಫೇಲ್ನಲ್ಲಿ ಹಾರಾಟ ನಡೆಸಿ ದಾಖಲೆ ಬರೆದ ರಾಷ್ಟ್ರಪತಿ ದ್ರೌಪದಿ ಮುರ್ಮು Read More »

ಬ್ರೇಕಿಂಗ್ ನ್ಯೂಸ್

‘ರೂಬಿ’ ಮೂಲಕ ಕನ್ನಡ ಚಿತ್ರರಂಗಕ್ಕೆ ಹಿಮೇಶ್ ರೇಶಮಿಯಾ ಎಂಟ್ರಿ

(ನ್ಯೂಸ್‌ ಕಡಬ) newskadaba.com,  ಅ.29 ಲೀಲಾ ಚಿತ್ರಕ್ಕೆ ರಾಜ್ಯ ಪ್ರಶಸ್ತಿ ವಿಜೇತ ಬರಹಗಾರ ರಘು ಕೋವಿ ಅವರು ‘ರೂಬಿ’ ಚಿತ್ರದ ಮೂಲಕ ನಿರ್ದೇಶನಕ್ಕೆ ಸಜ್ಜಾಗಿದ್ದಾರೆ. ಹೈದರಾಬಾದ್-ಕರ್ನಾಟಕ ಗಡಿಯಲ್ಲಿ ನಡೆದ ನೈಜ ಘಟನೆಯನ್ನು ಆಧರಿಸಿದ ಈ ಚಿತ್ರವು ಹಲವು ಅಂಶಗಳನ್ನು, ಆಸಕ್ತಿದಾಯಕ ನಟರು, ಪ್ರಮುಖ ಪ್ರತಿಭೆಗಳ ಪುನರಾಗಮನ ಮತ್ತು ಪ್ರಭಾವಶಾಲಿ ಸಂಗೀತ ಮತ್ತು ತಾಂತ್ರಿಕ ಸೆಟಪ್ ಅನ್ನು ಹೊಂದಿದೆ. ಇತ್ತೀಚೆಗೆ ದಿಲ್‌ಮಾರ್‌ನೊಂದಿಗೆ ನಟನೆಗೆ ಪಾದಾರ್ಪಣೆ ಮಾಡಿದ ರಾಮ್ ಗೌಡ ಅವರು ಈಗ ರೂಬಿಯಲ್ಲಿ ಅಭಿನಯಿಸುತ್ತಿದ್ದು, ಮತ್ತೆ ಕನ್ನಡ ಚಿತ್ರರಂಗಕ್ಕೆ

‘ರೂಬಿ’ ಮೂಲಕ ಕನ್ನಡ ಚಿತ್ರರಂಗಕ್ಕೆ ಹಿಮೇಶ್ ರೇಶಮಿಯಾ ಎಂಟ್ರಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ

ಜಪಾನ್ ನೂತನ ಪ್ರಧಾನಿ ಸನೆ ತಕೈಚಿ ಜೊತೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಾತುಕತೆ

(ನ್ಯೂಸ್‌ ಕಡಬ) newskadaba.com,  ಅ..29: ಜಪಾನ್ ದೇಶದ ಮೊದಲ ಮಹಿಳಾ ಪ್ರಧಾನಿಯಾಗಿ, ಲಿಬರಲ್ ಡೆಮಾಕ್ರಟಿಕ್ ಪಕ್ಷದ ಕಟ್ಟಾ ಸಂಪ್ರದಾಯವಾದಿ ಸನೆ ತಕೈಚಿ (64) ಅವರೊಂದಿಗೆ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಅಧಿಕಾರ ವಹಿಸಿಕೊಂಡಿದ್ದಕ್ಕಾಗಿ ಅವರನ್ನು ಅಭಿನಂದಿಸಿದರು. ಪ್ರಧಾನಿಯಾಗಿದ್ದ ಶಿಗೇರು ಇಶಿಬಾ ಅವರು ಸಂಪುಟಕ್ಕೆ ರಾಜೀನಾಮೆ ನೀಡಿದ್ದರಿಂದಾಗಿ ತಕೈಚಿ (64) ಇತ್ತೀಚೆಗೆ ಜಪಾನ್‌ನ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡರು. ‘ಜಪಾನ್ ಪ್ರಧಾನಿ ಸನೆ ತಕೈಚಿ ಅವರೊಂದಿಗೆ ಆತ್ಮೀಯ ಸಂಭಾಷಣೆ ನಡೆಸಿದೆ. ಅಧಿಕಾರ ವಹಿಸಿಕೊಂಡಿದ್ದಕ್ಕಾಗಿ ಅವರನ್ನು ಅಭಿನಂದಿಸಲಾಯಿತು. ಭಾರತ ಮತ್ತು ಜಪಾನ್

ಜಪಾನ್ ನೂತನ ಪ್ರಧಾನಿ ಸನೆ ತಕೈಚಿ ಜೊತೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಾತುಕತೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಿರರ್‌ಗೆ ಟಚ್‌ ಆಗಿದ್ದಕ್ಕೆ ಕಾರು ಡಿಕ್ಕಿ ಹೊಡೆಸಿ ಬೈಕ್‌ ಸವಾರನ ಕೊಂದ ಗಂಡ-ಹೆಂಡತಿ

(ನ್ಯೂಸ್‌ ಕಡಬ) newskadaba.com,  ಅ.29 ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಇತ್ತೀಚೆಗೆ ರೋಡ್ ರೇಜ್ ಪ್ರಕರಣಗಳು (Bengaluru Road Rage) ಹೆಚ್ಚಾಗುತ್ತಿವೆ. ಈ ನಡುವೆ ಪುಟ್ಟೇನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಒಂದು ರೋಡ್ ರೇಜ್ ಪ್ರಕರಣದಲ್ಲಿ ಯುವಕ ಪ್ರಾಣ ಕಳೆದುಕೊಂಡಿರುವ ಘಟನೆ ನಡೆದಿದೆ. ಕಾರಿನ ಮಿರರ್‌ಗೆ ಬೈಕ್‌ ಟಚ್ ಆಗಿದ್ದಕ್ಕೆ ಕೋಪಗೊಂಡ ದಂಪತಿ, ಬೆನ್ನಟ್ಟಿ ಹಿಂದಿನಿಂದ ಬೈಕ್‌ಗೆ ಡಿಕ್ಕಿ ಹೊಡೆಸಿದ್ದರಿಂದ ದರ್ಶನ್ ಎಂಬ ಯುವಕ ಮೃತಪಟ್ಟಿದ್ದಾನೆ. ವರುಣ್ ಎಂಬ ಮತ್ತೊಬ್ಬ ಯುವಕ ಗಾಯಗೊಂಡಿದ್ದಾನೆ. ಅ. 27ರ ರಾತ್ರಿ ಶ್ರೀರಾಮ ಲೇಔಟ್‌ನಲ್ಲಿ

ಮಿರರ್‌ಗೆ ಟಚ್‌ ಆಗಿದ್ದಕ್ಕೆ ಕಾರು ಡಿಕ್ಕಿ ಹೊಡೆಸಿ ಬೈಕ್‌ ಸವಾರನ ಕೊಂದ ಗಂಡ-ಹೆಂಡತಿ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ವಿದ್ಯಾರ್ಥಿಗಳು ಕಡ್ಡಾಯವಾಗಿ ಕ್ರೀಡೆಗಳಲ್ಲಿ ಭಾಗವಹಿಸುವಂತೆ ಕರೆ

(ನ್ಯೂಸ್‌ ಕಡಬ) newskadaba.com,  ಅ.29 ಸಂಡೂರು: ಇಂದು ವಿದ್ಯಾರ್ಥಿಗಳು ದೈಹಿಕ ಚಟುವಟಿಕೆ ಇಲ್ಲದೆ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ, ಅಲ್ಲದೆ ಸಣ್ಣ ವಯಸ್ಸಿನಲ್ಲಿಯೇ ಬಿ.ಪಿ. ಸುಗರ್ ಬರುವಂತಹ ದುಸ್ಥಿತಿಯನ್ನು ತಡೆಯುವುದು ಪ್ರತಿಯೊಬ್ಬರ ಅದ್ಯ ಕರ್ತವ್ಯವಾಗಿದೆ ಎಂದು ಸಂಸದ ಈ.ತುಕರಾಂ ತಿಳಿಸಿದರು. ಅವರು ತಾಲೂಕಿನ ಯರದಮ್ಮನಹಳ್ಳಿ ಗ್ರಾಮದಲ್ಲಿ ಎನ್.ಎಂ.ಡಿ.ಸಿ. ಸಿ.ಎಸ್.ಅರ್ ಅನುದಾನದಲ್ಲಿ ತಾಲೂಕಿನ 25 ಶಾಲೆಗಳಿಗೆ ಪ್ರತಿ 1 ಲಕ್ಷದಂತೆ 25 ಲಕ್ಷ ಮೊತ್ತದ ಕ್ರೀಡಾ ಸಾಮಾಗ್ರಿಗಳನ್ನು ವಿತರಿಸಿ ಮಾತನಾಡಿ ಎಲ್ಲಿ ದೈಹಿಕ ಕಸರತ್ತು ಇರುತ್ತದೆಯೋ ಅಲ್ಲಿ ಬುದ್ದಿಯೂ ಸಹ ಬೆಳವಣಿಗೆಯಾಗುತ್ತದೆ,

ವಿದ್ಯಾರ್ಥಿಗಳು ಕಡ್ಡಾಯವಾಗಿ ಕ್ರೀಡೆಗಳಲ್ಲಿ ಭಾಗವಹಿಸುವಂತೆ ಕರೆ Read More »

ಬ್ರೇಕಿಂಗ್ ನ್ಯೂಸ್
Scroll to Top