News Kadaba

ಕರಾವಳಿ ಸೇರಿ 7 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ ; ಯೆಲ್ಲೋ ಅಲರ್ಟ್ ಘೋಷಣೆ

(ನ್ಯೂಸ್‌ ಕಡಬ) newskadaba.com,  ಅ.20 ಬೆಂಗಳೂರು: ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಚಾಮರಾಜನಗರ, ಹಾಸನ, ಕೊಡಗು ಮತ್ತು ಮೈಸೂರು ಸೇರಿದಂತೆ ಒಟ್ಟು 7 ಜಿಲ್ಲೆಗಳಲ್ಲಿ ಅಕ್ಟೋಬರ್ 21 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು ಯೆಲ್ಲೋ ಅಲರ್ಟ್ ಘೋಷಿಸಿದೆ. ಈ ಅವಧಿಯಲ್ಲಿ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಗಂಟೆಗೆ 55 ಕಿ.ಮೀ.ವರೆಗೆ ಗಾಳಿಯ ವೇಗ ತಲುಪುವ ಸಾಧ್ಯತೆಯಿದೆ. ಹವಾಮಾನ ಇಲಾಖೆಯು ಪರಿಸ್ಥಿತಿ ಸುಧಾರಿಸುವವರೆಗೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಿದೆ. […]

ಕರಾವಳಿ ಸೇರಿ 7 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ ; ಯೆಲ್ಲೋ ಅಲರ್ಟ್ ಘೋಷಣೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರಿನಲ್ಲಿ ಯುವತಿಯರ ವೀಡಿಯೋ ಬಳಸಿ ಹನಿಟ್ರ್ಯಾಪ್ ಆರೋಪ – ನಿರೀಕ್ಷಾ ಆರೆಸ್ಟ್

(ನ್ಯೂಸ್‌ ಕಡಬ) newskadaba.com,  ಅ.20 ಮಂಗಳೂರು: ಯುವತಿ ಬಟ್ಟೆ ಬದಲಾಯಿಸುವ ವೀಡಿಯೋ ಮಾಡಿ ಬ್ಲ್ಯಾಕ್ ಮೇಲ್ ಮಾಡಿರುವ ಆರೋಪದಡಿಯಲ್ಲಿ ಯುವತಿಯೊಬ್ಬಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಚಿಕ್ಕಮಗಳೂರು ಮೂಲದ, ಮಂಗಳೂರಿನ ಕಂಕನಾಡಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ನಿರೀಕ್ಷಾ ಎಂಬಾಕೆ ಬಂಧಿತ ಆರೋಪಿ. ಇತ್ತೀಚೆಗೆ ಕಾರ್ಕಳದ ನಿಟ್ಟೆಯ ಅಭಿಷೇಕ್ ಆಚಾರ್ಯ ಆತ್ಮಹತ್ಯೆ ಪ್ರಕರಣದಲ್ಲಿಯೂ ನಿರೀಕ್ಷಾ ವಿರುದ್ಧ ಹನಿ ಟ್ರ್ಯಾಪ್ ಆರೋಪದ ಕೇಳಿ ಬಂದಿತ್ತು. ಮಂಗಳೂರಿನ ಕದ್ರಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದ ಹಿನ್ನೆಲೆಯಲ್ಲಿ ನಿರೀಕ್ಷಾಳನ್ನು ಭಾನುವಾರ (ಅ.19) ಬಂಧಿಸಿರುವ ಪೊಲೀಸರು

ಮಂಗಳೂರಿನಲ್ಲಿ ಯುವತಿಯರ ವೀಡಿಯೋ ಬಳಸಿ ಹನಿಟ್ರ್ಯಾಪ್ ಆರೋಪ – ನಿರೀಕ್ಷಾ ಆರೆಸ್ಟ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಕ್ಟೋಬರ್ 31ರವರೆಗೆ ‘ಜಾತಿ ಗಣತಿ’ ಸಮೀಕ್ಷೆ ವಿಸ್ತರಣೆ

(ನ್ಯೂಸ್‌ ಕಡಬ) newskadaba.com,  ಅ.20 ಬೆಂಗಳೂರು: ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗವು ನಡೆಸುತ್ತಿರುವ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಮತ್ತೆ ವಿಸ್ತರಿಸಲಾಗಿದೆ. ಇದೀಗ ರಾಜ್ಯಾದ್ಯಂತ ಅಕ್ಟೋಬರ್ 31 ರವರೆಗೆ ಸಮೀಕ್ಷೆ ನಡೆಯಲಿದೆ.ಇದುವರೆಗೆ ಮನೆ-ಮನೆ ಸಮೀಕ್ಷೆಯಲ್ಲಿ ನಿರ್ಣಾಯಕ ಪಾತ್ರ ವಹಿಸಿದ ಶಿಕ್ಷಕರು, ತಮ್ಮ ಶೈಕ್ಷಣಿಕ ಜವಾಬ್ದಾರಿಗಳಿಗೆ ಮರಳಲಿದ್ದಾರೆ. ಸೆಪ್ಟೆಂಬರ್ 22 ರಂದು ಪ್ರಾರಂಭವಾದ ಸಮೀಕ್ಷೆಯು ಅಕ್ಟೋಬರ್ 7 ರಂದು ಕೊನೆಗೊಳ್ಳಬೇಕಾಗಿತ್ತು. ಅದನ್ನು ಅಕ್ಟೋಬರ್ 19 ರವರೆಗೆ ವಿಸ್ತರಿಸಲಾಯಿತು. ಇದೀಗ ಮತ್ತೆ ವಿಸ್ತರಿಸಲಾಗಿದೆ.ಭಾನುವಾರ ಸಂಜೆಯ ವೇಳೆಗೆ, ಗ್ರೇಟರ್ ಬೆಂಗಳೂರು

ಅಕ್ಟೋಬರ್ 31ರವರೆಗೆ ‘ಜಾತಿ ಗಣತಿ’ ಸಮೀಕ್ಷೆ ವಿಸ್ತರಣೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅ. 19 ರಂದು ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಮೊದಲ ಏಕದಿನ ಪಂದ್ಯ ಪ್ರಾರಂಭ

(ನ್ಯೂಸ್‌ ಕಡಬ) newskadaba.com,  ಅ.18: ಏಕದಿನ ಸರಣಿಗಾಗಿ ಭಾರತೀಯ ಕ್ರಿಕೆಟ್ ತಂಡ ಆಸ್ಟ್ರೇಲಿಯಾಕ್ಕೆ ತೆರಳಿದೆ. ಅಕ್ಟೋಬರ್ 19 ರಂದು ಪರ್ತ್‌ನಲ್ಲಿ ಪ್ರಾರಂಭವಾಗುವ ಈ ಸರಣಿಯಲ್ಲಿ ಮೂರು ಪಂದ್ಯಗಳು ನಡೆಯಲಿವೆ. ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಮತ್ತೊಮ್ಮೆ ಸರಣಿಯಲ್ಲಿ ಆಡುವುದನ್ನು ಕಾಣಬಹುದು. ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ಏಳು ತಿಂಗಳ ವಿರಾಮದ ನಂತರ, ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಮತ್ತೆ ಮೈದಾನಕ್ಕೆ ಇಳಿಯಲಿದ್ದಾರೆ. ಭಾರತ ಮತ್ತು ಆಸ್ಟ್ರೇಲಿಯಾ ಮೊದಲ ಏಕದಿನ ಪಂದ್ಯ ಭಾನುವಾರ (ಅಕ್ಟೋಬರ್ 19) ನಡೆಯಲಿದೆ. ಬೆಳಿಗ್ಗೆ

ಅ. 19 ರಂದು ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಮೊದಲ ಏಕದಿನ ಪಂದ್ಯ ಪ್ರಾರಂಭ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪಾಕ್ ವೈಮಾನಿಕ ದಾಳಿ; ಮೂವರು ಅಫ್ಘಾನ್ ಕ್ರಿಕೆಟಿಗರು ಬಲಿ

(ನ್ಯೂಸ್‌ ಕಡಬ) newskadaba.com,  ಅ.18: ಪಾಕಿಸ್ತಾನದ ಮಿಲಿಟರಿ ಆಡಳಿತವು ಪಕ್ಟಿಕಾ ಪ್ರಾಂತ್ಯದಲ್ಲಿ ನಡೆಸಿದೆ ಎನ್ನಲಾದ ವೈಮಾನಿಕ ದಾಳಿಯಲ್ಲಿ ಮೂವರು ಅಫ್ಘಾನ್ ದೇಶೀಯ ಕ್ರಿಕೆಟಿಗರು ಸಾವನ್ನಪ್ಪಿದ ನಂತರ, ಅಫ್ಘಾನಿಸ್ತಾನ ಕ್ರಿಕೆಟ್ ಮಂಡಳಿ (ACB) ಮುಂಬರುವ ಪಾಕಿಸ್ತಾನ ಮತ್ತು ಶ್ರೀಲಂಕಾ ನಡುವಿನ ತ್ರಿಕೋನ T20 ಸರಣಿಯಿಂದ ಹಿಂದೆ ಸರಿಯುವ ನಿರ್ಧಾರವನ್ನು ಪ್ರಕಟಿಸಿದೆ. ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡ ಹೇಳಿಕೆಯಲ್ಲಿ, ಎಸಿಬಿ ಈ ಘಟನೆಯನ್ನು ಖಂಡಿಸಿದ್ದು, ಇದನ್ನು “ಪಾಕಿಸ್ತಾನ ಆಡಳಿತ ನಡೆಸಿದ ಹೇಡಿತನದ ದಾಳಿ” ಎಂದು ಬಣ್ಣಿಸಿದೆ. ನವೆಂಬರ್ 5 ರಿಂದ 29

ಪಾಕ್ ವೈಮಾನಿಕ ದಾಳಿ; ಮೂವರು ಅಫ್ಘಾನ್ ಕ್ರಿಕೆಟಿಗರು ಬಲಿ Read More »

ಬ್ರೇಕಿಂಗ್ ನ್ಯೂಸ್

ನೇತ್ರವನ್ನು ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ KSRTC ಬಸ್‌‍ ಚಾಲಕ

(ನ್ಯೂಸ್‌ ಕಡಬ) newskadaba.com,  ಅ.18 ಕನಕಪುರ: ಅನಾರೋಗ್ಯದ ಕಾರಣ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದ ರಾಜ್ಯ ಸಾರಿಗೆ ಬಸ್‌‍ ಚಾಲಕನೊಬ್ಬ ಸಾವನ್ನಪ್ಪಿದ್ದು, ತನ್ನ ಎರಡು ಕಣ್ಣುಗಳನ್ನು ದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಕಸಬಾ ಹೋಬಳಿ, ತೆಂಗಿನಮರದೊಡ್ಡಿ ಗ್ರಾಮದ ಎಸ್‌‍.ಸುರೇಶ್‌ (36) ಅವರು ನಿನ್ನೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದರು. ನಗರದ ರಾಜ್ಯ ಸಾರಿಗೆ ಡಿಪೋನಲ್ಲಿ ಚಾಲಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಈತ ಕಳೆದ ಮೂರು ದಿನಗಳ ಹಿಂದೆ ಹೊಟ್ಟೆನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದರು. ದುಃಖದ ಸಂದರ್ಭದಲ್ಲೂ ಮೃತನ ಕುಟುಂಬಸ್ಥರ

ನೇತ್ರವನ್ನು ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ KSRTC ಬಸ್‌‍ ಚಾಲಕ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಚಾಮರಾಜನಗರದಲ್ಲಿ 27 ತಿಂಗಳಿನಿಂದ ವೇತನ ಸಿಗದ್ದಕ್ಕೆ ವಾಟರ್‌ಮೆನ್‌ ಆತ್ಮಹತ್ಯೆ, PDO ಅಮಾನತು..!

(ನ್ಯೂಸ್‌ ಕಡಬ) newskadaba.com,  ಅ.18 ಚಾಮರಾಜನಗರ: 27 ತಿಂಗಳುಗಳಿಂದ ವೇತನ ಸಿಗದ್ದಕ್ಕೆ ಬೇಸತ್ತು ನೀರುಗಂಟಿ (ವಾಟರ್​​​ಮ್ಯಾನ್) ಆತ್ಮಹತ್ಯೆ ಮಾಡಿಕೊಂಡ ಘಟನೆಗೆ ಸಂಬಂಧಿಸಿದಂತೆ ಬೇಜವಾಬ್ದಾರಿತನದ ಆರೋಪದ ಮೇಲೆ ಗ್ರಾಮ ಪಂಚಾಯಿತಿ ಪಂಚಾಯತ್ ಅಭಿವೃದ್ದಿ ಅಧಿಕಾರಿ (ಪಿಡಿಒ)ಯನ್ನು ಅಮಾನತುಗೊಳಿಸಲಾಗಿದೆ. .ಹೊಂಗನೂರು ಗ್ರಾಮ ಪಂಚಾಯತ್‌ನಲ್ಲಿ ವಾಟರ್‌ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದ ಮಾಜಿ ಪಂಚಾಯತ್ ಉದ್ಯೋಗಿ ಚಿಕ್ಕುಸನಾಯಕ ಅವರು ಪಂಚಾಯತ್ ಕಟ್ಟಡದ ಕಿಟಕಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು.ಡೆತ್ ನೋಟ್ ವೇತನ ನೀಡದೇ ನನಗೆ ರಜೆ ಕೊಡದೇ ಸತಾಯಿಸಿದ್ದಾರೆ. ವೇತನಕ್ಕೆ ಪಿಡಿಒ ರಾಮೇಗೌಡ

ಚಾಮರಾಜನಗರದಲ್ಲಿ 27 ತಿಂಗಳಿನಿಂದ ವೇತನ ಸಿಗದ್ದಕ್ಕೆ ವಾಟರ್‌ಮೆನ್‌ ಆತ್ಮಹತ್ಯೆ, PDO ಅಮಾನತು..! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

‘ಯಾವುದೇ ಸಂಘಸಂಸ್ಥೆಗಳನ್ನು ಗುರಿಯಾಗಿಸಿಲ್ಲ’- ಮುಖ್ಯಮಂತ್ರಿ ಸಿದ್ದರಾಮಯ್ಯ

(ನ್ಯೂಸ್‌ ಕಡಬ) newskadaba.com,  ಅ.18: ಯಾವುದೇ ಸಂಘಸಂಸ್ಥೆಗಳ ಚಟುವಟಿಕೆಗಳನ್ನು ಜನರಿಗೆ ತೊಂದರೆಯಾಗುವಂತೆ ಸಾರ್ವಜನಿಕ ಸ್ಥಳಗಳಲ್ಲಿ ನಡೆಸಲು ಅನುಮತಿ ಪಡೆಯುವಂತೆ ಆದೇಶ ನೀಡಲಾಗಿದ್ದು, ಇದರಲ್ಲಿ ಯಾವುದೇ ಸಂಘಸಂಸ್ಥೆಗಳನ್ನು ಗುರಿಯಾಗಿಸಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.ಚಿತ್ತಾಪುರದಲ್ಲಿ ಆರ್ ಎಸ್ ಎಸ್ ಪಥಸಂಚಲನದ ಬಗ್ಗೆ ಗೊಂದಲ ಎದ್ದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ಬಗ್ಗೆ ಹಿಂದೆ ಬಿಜೆಪಿಯ ಜಗದೀಶ್ ಶೆಟ್ಟರ್ ಅವರ ನೇತೃತ್ವದ ಸರ್ಕಾರ ಆದೇಶ ಹೊರಡಿಸಿದಂತೆ , ನಮ್ಮ ಸರ್ಕಾರವೂ

‘ಯಾವುದೇ ಸಂಘಸಂಸ್ಥೆಗಳನ್ನು ಗುರಿಯಾಗಿಸಿಲ್ಲ’- ಮುಖ್ಯಮಂತ್ರಿ ಸಿದ್ದರಾಮಯ್ಯ Read More »

ಕರ್ನಾಟಕ

ಜಾತಿ ಸಮೀಕ್ಷೆಯಿಂದ ರಾಜ್ಯದ ಮಕ್ಕಳಿಗೆ ಊಟ–ಪಾಠ ಇಲ್ಲದಾಗಿದೆ- ಎಚ್. ವಿಶ್ವನಾಥ್

(ನ್ಯೂಸ್‌ ಕಡಬ) newskadaba.com,  ಅ.18 ಮೈಸೂರು: ಕಾಂಗ್ರೆಸ್ ಆಡಳಿತದಲ್ಲಿ ರಾಜ್ಯದ ಶಿಕ್ಷಣ ಕ್ಷೇತ್ರವು “ಕೆಳಮಟ್ಟಕ್ಕೆ” ತಲುಪಿದ್ದು, ಜಾತಿ ಸಮೀಕ್ಷೆಯಿಂದ ರಾಜ್ಯದ ಮಕ್ಕಳಿಗೆ ಊಟ–ಪಾಠ ಇಲ್ಲದಾಗಿದೆ ವಿಧಾನ ಪರಿಷತ್ ಸದಸ್ಯ ಅಡಗೂರು ಎಚ್‌.ವಿಶ್ವನಾಥ್ ಅವರು ಟೀಕಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಲಾ ಶಿಕ್ಷಣ ವ್ಯವಸ್ಥೆಯನ್ನು ಸರ್ಕಾರ ನಿರ್ವಹಿಸುತ್ತಿರುವ ರೀತಿಯನ್ನು ಟೀಕಿಸಿದರು, ‘ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗಾಗಿ ದಸರಾ ರಜೆಯನ್ನು ವಿಸ್ತರಿಸಿರುವುದು, ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದಲ್ಲಿ ಶಾಲಾ ಶಿಕ್ಷಣ ಅಧೋಗತಿಗೆ ಹೋಗುತ್ತಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. 2010 ರಲ್ಲಿ ಆಹಾರ ಹಕ್ಕು ಕಾಯ್ದೆಯನ್ನು

ಜಾತಿ ಸಮೀಕ್ಷೆಯಿಂದ ರಾಜ್ಯದ ಮಕ್ಕಳಿಗೆ ಊಟ–ಪಾಠ ಇಲ್ಲದಾಗಿದೆ- ಎಚ್. ವಿಶ್ವನಾಥ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಗರೀಬ್ ರಥ ಎಕ್ಸ್ಪ್ರೆಸ್ ರೈಲಿನಲ್ಲಿ ಏಕಾಏಕಿ ಬೆಂಕಿ; ಹೊತ್ತಿ ಉರಿದ ಎಸಿ ಕೋಚ್ಗಳು

(ನ್ಯೂಸ್‌ ಕಡಬ) newskadaba.com,  ಅ.18: ಲುಧಿಯಾನದಿಂದ ದೆಹಲಿಗೆ ತೆರಳುತ್ತಿದ್ದ ಗರೀಬ್ ರಥ ಎಕ್ಸ್‌ಪ್ರೆಸ್ ರೈಲಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಎಸಿ ಕೋಚ್‌ಗಳು ಹೊತ್ತಿ ಉರಿದ ಘಟನೆ ಪಂಜಾಬ್‌ನಲ್ಲಿ ನಡೆದಿದೆ. ಘಟನೆಯ ಸಮಯದಲ್ಲಿ ರೈಲು ಅಮೃತಸರದಿಂದ ಪ್ರಯಾಣಿಸುತ್ತಿತ್ತು. ಘಟನೆಯಲ್ಲಿ ಪ್ರಯಾಣಿಕರಿಗೆ ಯಾವುದೇ ಹಾನಿಯಾಗದಂತೆ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ. ಘಟನೆ ಬಳಿಕ ಭಯದ ವಾತಾವರಣ ಸೃಷ್ಟಿಯಾಗಿದೆ ಪಂಜಾಬ್‌ನ ಸಿರ್ಹಿಂದ್ ರೈಲು ನಿಲ್ದಾಣದಲ್ಲಿ ಬೆಳಗ್ಗೆ 7:30ರ ಸುಮಾರಿಗೆ ಅಮೃತಸರ-ಸಹರ್ಸಾ ಗರೀಬ್ ರಥ ಎಕ್ಸ್‌ಪ್ರೆಸ್ ರೈಲಿನ ಕೋಚ್‌ಗೆ ಬೆಂಕಿ ಹೊತ್ತಿಕೊಂಡಿದೆ. ರೈಲಿನ 2-3, ಜಿ -19 ಎಸಿ

ಗರೀಬ್ ರಥ ಎಕ್ಸ್ಪ್ರೆಸ್ ರೈಲಿನಲ್ಲಿ ಏಕಾಏಕಿ ಬೆಂಕಿ; ಹೊತ್ತಿ ಉರಿದ ಎಸಿ ಕೋಚ್ಗಳು Read More »

ಬ್ರೇಕಿಂಗ್ ನ್ಯೂಸ್
Scroll to Top