News Kadaba

ಬಂಟ್ವಾಳ: ಅಪ್ರಾಪ್ತ ವಯಸ್ಕನಿಗೆ ವಾಹನ ನೀಡಿದ ಮಾಲೀಕರಿಗೆ 32000 ದಂಡ !

(ನ್ಯೂಸ್‌ ಕಡಬ) newskadaba.com,  ಅ.16 ಬಂಟ್ವಾಳ: ಅಪ್ರಾಪ್ತ ಅಪಘಾತಕ್ಕೀಡಾದ ಮೋಟಾರ್ ಸೈಕಲ್ ಸವಾರಿ ಮಾಡಲು ಅವಕಾಶ ನೀಡಿದ್ದಕ್ಕಾಗಿ ಬಂಟ್ವಾಳ ಎಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯವು ವಾಹನ ಮಾಲೀಕರಿಗೆ 32,000 ರೂ. ದಂಡ ವಿಧಿಸಿದೆ.. ವಿಟ್ಲ ಪೊಲೀಸರ ಪ್ರಕಾರ, ಅಪರಾಧ ಸಂಖ್ಯೆ 74/2025 ರ ಅಡಿಯಲ್ಲಿ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಸೆಕ್ಷನ್ 281 ಮತ್ತು 125 (ಎ) ಅಡಿಯಲ್ಲಿ ಮತ್ತು ಭಾರತೀಯ ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 4 (1), 181, 146, 196, 199 ಎ […]

ಬಂಟ್ವಾಳ: ಅಪ್ರಾಪ್ತ ವಯಸ್ಕನಿಗೆ ವಾಹನ ನೀಡಿದ ಮಾಲೀಕರಿಗೆ 32000 ದಂಡ ! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮದುವೆ ಬಗ್ಗೆ ಸುಳಿವು ಕೊಟ್ಟ ನಟಿ ರಚಿತಾ ರಾಮ್

(ನ್ಯೂಸ್‌ ಕಡಬ) newskadaba.com,  ಅ.16- ಕೊನೆಗೂ ನಟಿ ರಚಿತಾ ರಾಮ್ ತಮ್ಮ ಮದ್ವೆ ಬಗ್ಗೆ ಸುಳಿವು ಕೊಟ್ಟಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡುವಾಗ, ಸದ್ಯದಲ್ಲಿಯೇ ಮದುವೆ ಆಗುವೆ, ಅಭಿಮಾನಿಗಳಿಗೆ ಸಿಹಿ ಸುದ್ದಿ ಕೊಡುವೆ. ಲವ್ ಮ್ಯಾರೇಜೋ & ಅರೇಂಜ್ ಮ್ಯಾರೇಜೋ ಏನೋ ಮ್ಯಾರೇಜ್ ಆಗುವೆ. ಒಟ್ನಲ್ಲಿ ಇನ್ನು ಕೆಲವೇ ದಿನಗಳಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡುವೆ ಎಂದಿದ್ದಾರೆ. ಇತ್ತೀಚೆಗೆ ತಮ್ಮ ಹುಟ್ಟುಹಬ್ಬದ ಸಂದರ್ಭದಲ್ಲೂ ನಟಿ ಮದುವೆ ಬಗ್ಗೆ ಸುಳಿವು ಕೊಟ್ಟಿದ್ದರು. ಮದುವೆಯಾಗುವ ಹುಡುಗ ಹೇಗಿರಬೇಕು ಎನ್ನುವ ಬಗ್ಗೆ ಯಾವ

ಮದುವೆ ಬಗ್ಗೆ ಸುಳಿವು ಕೊಟ್ಟ ನಟಿ ರಚಿತಾ ರಾಮ್ Read More »

ಕರ್ನಾಟಕ, ಸಿನಿಮಾ

ಯಕ್ಷಗಾನ ದಿಗ್ಗಜ ದಿನೇಶ್ ಅಮ್ಮಣ್ಣಾಯ ವಿಧಿವಶ

(ನ್ಯೂಸ್‌ ಕಡಬ) newskadaba.com,  ಅ.16 ಮಂಗಳೂರು: ಯಕ್ಷಗಾನ ಹಿರಿಯ ಭಾಗವತ ಗಾನ ಕೋಗಿಲೆ ದಿನೇಶ್ ಅಮ್ಮಣ್ಣಾಯ(65) ಅವರು ಇಂದು ವಿಧಿವಶರಾಗಿದ್ದಾರೆ. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅಮ್ಮಣ್ಣಾಯರು ಇಂದು ಬೆಳ್ತಂಗಡಿಯ ಅರಸಿನಮಕ್ಕಿಯ ಸ್ವಗೃಹದಲ್ಲಿ ಕೊನೆಯುಸಿರೆಳೆದಿದ್ದಾರೆ. ತೆಂಕುತಿಟ್ಟು ಯಕ್ಷಗಾನ ಪರಂಪರೆಯ ಹಿರಿಯ ಭಾಗವತರಾಗಿ ನಾಲ್ಕು ದಶಕಕ್ಕೂ ಹೆಚ್ಚು ಕಾಲ ಕಲಾ ಸೇವೆ ಸಲ್ಲಿಸಿದ್ದ ಅಮ್ಮಣ್ಣಾಯ ‘ರಸರಾಗ ಚಕ್ರವರ್ತಿ’ ಎಂಬ ಬಿರುದು ಹೊಂದಿದ್ದರು. ದಾಮೋದರ ಮಂಡೆಚ್ಚರ ಆಪ್ತ ಶಿಷ್ಯ ಇನ್ನು ದಿನೇಶ್‌ ಅಮ್ಮಣ್ಣಾಯರು ಹಿರಿಯ ಭಾಗವತ ದಾಮೋದರ ಮಂಡೆಚ್ಚ ಅವರ

ಯಕ್ಷಗಾನ ದಿಗ್ಗಜ ದಿನೇಶ್ ಅಮ್ಮಣ್ಣಾಯ ವಿಧಿವಶ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನವದೆಹಲಿ: ದೇಶದಲ್ಲಿ ನಕ್ಸಲ್ ಪೀಡಿತ ಜಿಲ್ಲೆಗಳ ಸಂಖ್ಯೆ ಗಣನೀಯ ಇಳಿಕೆ

(ನ್ಯೂಸ್‌ ಕಡಬ) newskadaba.com,  ಅ.16 ನವದೆಹಲಿ:  ದೇಶದಲ್ಲಿ ಈಗ ಕೇವಲ 3 ಜಿಲ್ಲೆಗಳಲ್ಲಿ ಮಾತ್ರ ನಕ್ಸಲ್ ಚಟುವಟಿಕೆಗಳು ನಡೆಯುತ್ತಿದೆ. ಉಳಿದೆಡೆ ಬಹುತೇಕ ಸ್ತಬ್ಧವಾಗಿದೆ. ಛತ್ತೀಸ್‌ಗಢ ಮತ್ತು ಮಹಾರಾಷ್ಟ್ರದಲ್ಲಿರುವ 3 ಸಿಪಿಐ ನಕ್ಸಲ್ ಪೀಡಿತ ಜಿಲ್ಲೆಗಳೆಂದರೆ ಬಿಜಾಪುರ, ಸುಕ್ಮಾ ಮತ್ತು ನಾರಾಯಣಪುರ ಎಂದು ಕೇಂದ್ರ ಗೃಹ ಸಚಿವಾಲಯ ತಿಳಿಸಿದೆ. ದೇಶದಲ್ಲಿ ನಡೆಯುತ್ತಿರುವ ನಕ್ಸಲ್ ವಿರೋಧಿ ಕಾರ್ಯಾಚರಣೆಯ ಕುರಿತು ಬುಧವಾರ(ಅ.15) ಮಾಹಿತಿ ನೀಡಿರುವ ಗೃಹ ಸಚಿವಾಲಯ, ನಕ್ಸಲ್ ವಿರೋಧಿ ಕಾರ್ಯಾಚರಣೆಗಳು ಯಶಸ್ವಿಯಾಗಿದ್ದು ಸುಮಾರು 88 ಸಿಪಿಐ ಮಾವೋವಾದಿ ಸದಸ್ಯರು ಶರಣಾಗಿದ್ದಾರೆ ಎಂದು ಹೇಳಿದೆ.

ನವದೆಹಲಿ: ದೇಶದಲ್ಲಿ ನಕ್ಸಲ್ ಪೀಡಿತ ಜಿಲ್ಲೆಗಳ ಸಂಖ್ಯೆ ಗಣನೀಯ ಇಳಿಕೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮೈಸೂರು : ಕಾಂತಾರ ಚಾಪ್ಟರ್ 1 ಉತ್ತಮ ಪ್ರದರ್ಶನ –ರಿಷಬ್ ಶೆಟ್ಟಿ ಚಾಮುಂಡಿ ಬೆಟ್ಟಕ್ಕೆ ಭೇಟಿ

(ನ್ಯೂಸ್‌ ಕಡಬ) newskadaba.com,  ಅ.16:  ಮೈಸೂರು : ಕಾಂತಾರ ಚಾಪ್ಟರ್ 1 ಯಶಸ್ವಿ ಪ್ರದರ್ಶನ ಬೆನ್ನಲ್ಲೇ ನಟ ರಿಷಬ್ ಶೆಟ್ಟಿ ಚಾಮುಂಡಿ ಬೆಟ್ಟಕ್ಕೆ  ಭೇಟಿ ನೀಡಿ, ದೇವಿ ದರ್ಶನ ಪಡೆದುಕೊಂಡರು.. ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ಅವರು ಚಾಮುಂಡಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ಸಮಯದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಲ್ಲವೂ ಖುಷಿಯಾಗಿದೆ. ನಾಡಿನ ಜನತೆ ಹಾಗೂ ದೇಶದಾದ್ಯಂತ ತುಂಬಾ ಅದ್ಭುತವಾದ ಯಶಸ್ಸನ್ನು ಕೊಟ್ಟಿದ್ದಾರೆ. ಯಾವತ್ತೋ ಹೇಳಿದ್ದೇ ಈ ಸಿನಿಮಾದ ಯಶಸ್ಸು ಮೊದಲು ಕನ್ನಡಿಗರಿಗೆ ಸಲ್ಲಬೇಕು. ಅದೇ

ಮೈಸೂರು : ಕಾಂತಾರ ಚಾಪ್ಟರ್ 1 ಉತ್ತಮ ಪ್ರದರ್ಶನ –ರಿಷಬ್ ಶೆಟ್ಟಿ ಚಾಮುಂಡಿ ಬೆಟ್ಟಕ್ಕೆ ಭೇಟಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನಾಳೆ ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ

(ನ್ಯೂಸ್‌ ಕಡಬ) newskadaba.com,  ಅ.16:  ಕಾವೇರಿಯ ಪವಿತ್ರ ತೀರ್ಥೋದ್ಭವ ನಾಳೆ (ಅಕ್ಟೋಬರ್ 17) ಕೊಡಗು ಜಿಲ್ಲೆಯ ಭಾಗಮಂಡಲದ ತಲಕಾವೇರಿಯ ಶ್ರೀ ಭಗಂಡೇಶ್ವರ- ತಲಕಾವೇರಿ ದೇವಾಲಯದ ಪುಷ್ಕರಿಣಿಯಲ್ಲಿ ಜರುಗಲಿದೆ. ಹೊರ ಜಿಲ್ಲೆಗಳು ಹಾಗೂ ಹೊರ ರಾಜ್ಯಗಳಿಂದ ಹೆಚ್ಚಿನ ಸಂಖ್ಯೆಯ ಭಕ್ತರು ಕ್ಷೇತ್ರಕ್ಕೆ ಭೇಟಿ ನೀಡುವ ಸಾಧ್ಯತೆ ಇರುವುದರಿಂದ ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಭಾಗಮಂಡಲದ ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯಗಳಲ್ಲಿ ಸಂಪ್ರದಾಯದಂತೆ, ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ಜಾತ್ರೆಯು ಅ.17ರಂದು ನಡೆಯಲಿದೆ. ಮಧ್ಯಾಹ್ನ 1 ಗಂಟೆ 44

ನಾಳೆ ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಆನ್ ಲೈನ್ ಹೂಡಿಕೆ ಹೆಸರಿನಲ್ಲಿ ವಂಚನೆ, ವ್ಯಕ್ತಿಗೆ 29.68 ಲಕ್ಷರೂ. ಪಂಗನಾಮ

(ನ್ಯೂಸ್‌ ಕಡಬ) newskadaba.com,  ಅ. 16. ವ್ಯಕ್ತಿಯೊಬ್ಬರು ಆನ್‌ಲೈನ್ ಹೂಡಿಕೆ ವಂಚನೆಗೆ ಬಲಿಯಾಗಿ ಲಕ್ಷಾಂತರ ರೂಪಾಯಿ ಕಳೆದುಕೊಂಡಿರುವ ಕುರಿತು ಉಡುಪಿಯಿಂದ ವರದಿಯಾಗಿದೆ. ದೂರಿನ ಪ್ರಕಾರ, ಕಳೆದ ಸೆಪ್ಟೆಂಬರ್ 11 ರಂದು ಟೆಲಿಗ್ರಾಮ್‌ನಲ್ಲಿ @Anjana_198_off  ಎಂಬ ಖಾತೆಯಿಂದ ಸಂದೇಶ ಬಂದಿದ್ದು, ಇದನ್ನು ಅಧಿಕೃತ ಯುಕೆ ಸರ್ಕಾರ ಎಂದು ವಿವರಿಸಲಾಗಿದೆ. ಆ ಸಂದೇಶದಲ್ಲಿ ಚಿನ್ನ, ಬೆಳ್ಳಿ ನಾಣ್ಯಗಳು, ಬಾರ್‌ಗಳು ಮತ್ತು ಇತರ ಚಿನ್ನ-ಸಂಬಂಧಿತ ಉತ್ಪನ್ನಗಳ ಮೇಲೆ ಲಾಭದಾಯಕ ಆದಾಯದ ಭರವಸೆ ನೀಡಲಾಗಿದೆ. ಈ ವೇದಿಕೆಯಲ್ಲಿ “ಚಿನ್ನದ ಬಿಡ್ಡರ್” ಆಗಿ ಕೆಲಸ

ಆನ್ ಲೈನ್ ಹೂಡಿಕೆ ಹೆಸರಿನಲ್ಲಿ ವಂಚನೆ, ವ್ಯಕ್ತಿಗೆ 29.68 ಲಕ್ಷರೂ. ಪಂಗನಾಮ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮುಂದಿನ 7 ದಿನ ಕರ್ನಾಟಕದಲ್ಲಿ ಭಾರಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ

(ನ್ಯೂಸ್‌ ಕಡಬ) newskadaba.com,  ಅ.16 ಮುಂದಿನ 7 ದಿನಗಳ ಕಾಲ ಕರ್ನಾಟಕ ರಾಜ್ಯಾದ್ಯಂತ ಭಾರಿ ಮಳೆಯಾಗಲಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಗುರುವಾರ ಮಾಹಿತಿ ನೀಡಿದೆ. ಈಗಾಗಲೇ ರಾಜ್ಯಾದ್ಯಂತ ಮಳೆ ಅಬ್ಬರ ಮುಂದುವರೆದಿದ್ದು, ಮುಂದಿನ 7 ದಿನಗಳ ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಗುರುವಾರ ಮಾಹಿತಿ ನೀಡಿದೆ. ಅಕ್ಟೋಬರ್ 16 ರಿಂದ 22 ರವರೆಗೆ ಕರ್ನಾಟಕದಾದ್ಯಂತ ಮಳೆ ಮುಂದುವರಿಯಲಿದ್ದು, ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಬಗ್ಗೆ ಹವಾಮಾನ ಇಲಾಖೆ

ಮುಂದಿನ 7 ದಿನ ಕರ್ನಾಟಕದಲ್ಲಿ ಭಾರಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸಾಹಿತಿ, ಖ್ಯಾತ ನಾಟಕ ನಿರ್ದೇಶಕ, ಸಾಹಿತಿ, ಪ್ರಕಾಶ್ ರಾವ್ ಪಯ್ಯಾರ್ ಹೃದಯಾಘಾತದಿಂದ ವಿದಿವಶ

(ನ್ಯೂಸ್‌ ಕಡಬ) newskadaba.com,  ಅ.16 ಮಂಗಳೂರು : ಖ್ಯಾತ ನಾಟಕ ನಿರ್ದೇಶಕ, ಸಾಹಿತಿ ಮತ್ತು ಸಾಹಿತ್ಯಿಕ ವ್ಯಕ್ತಿ ಪ್ರಕಾಶ್ ರಾವ್ ಪಯ್ಯಾರ್ ಅವರು ಅಕ್ಟೋಬರ್ 15 ರಂದು ರಾತ್ರಿ ಮಂಗಳೂರಿನ ತಮ್ಮ ನಿವಾಸದಲ್ಲಿ ಹೃದಯಾಘಾತದಿಂದ ನಿಧನರಾದರು.. ಯುಎಇ ಮೂಲದ ಕವಿ, ನಾಟಕಕಾರ, ರಂಗ ನಿರ್ದೇಶಕ ಮತ್ತು ಸಾಮಾಜಿಕ ಕಾರ್ಯಕರ್ತ ಪಯ್ಯಾರ್ 10 ಪುಸ್ತಕಗಳನ್ನು ಬರೆದು ಪ್ರಕಟಿಸಿದ್ದಾರೆ. 2015 ರಲ್ಲಿ ಬಿಡುಗಡೆಯಾದ ಅವರ ‘ಉರೆಟ್ಟ ಕಣ್ಣುದ ಸಿರಿ’ ಕವನ ಸಂಕಲನವು ಓದುಗರಿಂದ ವ್ಯಾಪಕ ಮೆಚ್ಚುಗೆಯನ್ನು ಪಡೆಯಿತು. ದಶಕಗಳ ಕಾಲದ ವೃತ್ತಿಜೀವನದಲ್ಲಿ,

ಸಾಹಿತಿ, ಖ್ಯಾತ ನಾಟಕ ನಿರ್ದೇಶಕ, ಸಾಹಿತಿ, ಪ್ರಕಾಶ್ ರಾವ್ ಪಯ್ಯಾರ್ ಹೃದಯಾಘಾತದಿಂದ ವಿದಿವಶ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಂಗಡಿಗೆ ತೆರಳಿದ್ದ ಬಾಲಕಿ ಮೇಲೆ ಬೀದಿನಾಯಿಗಳು ದಾಳಿ-ಗಂಭೀರ ಗಾಯ

(ನ್ಯೂಸ್‌ ಕಡಬ) newskadaba.com,  ಅ.16 ಮಂಗಳೂರು:ಅಂಗಡಿಗೆ ಹೋಗಿದ್ದ ಬಾಲಕಿ ಮೇಲೆ ಬೀದಿನಾಯಿಗಳು ದಾಳಿ ಮಾಡಿದ ಪರಿಣಾಮ ಆಕೆ ಗಂಭೀರ ಗಾಯಗೊಂಡಿರುವ ಘಟನೆ ಬುಧವಾರ(ಅ.15) ಸಂಜೆ ಮಂಗಳೂರು ಹೊರವಲಯ ಸುರತ್ಕಲ್ ಕಾನ ಮೈದಗುರಿಯಲ್ಲಿ ನಡೆದಿದೆ.ಮೈಂದಗುರಿ ನಿವಾಸಿ ಹೈದರ್ ಅಲಿ ಅವರ‌ ಮಗಳು ರಿದಾ ಫಾತಿಮ (9) ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ ಎಂದು ತಿಳಿದು ಬಂದಿದೆ‌. ರಿದಾ ಫಾತಿಮ ಸಂಜೆಯಸಮಯದಲ್ಲಿ‌ ಮನೆ ಬಳಿಯ ಅಂಗಡಿಗೆ ಹೋಗುತ್ತಿದ್ದಳು. ಈ ಸಂಧರ್ಭದಲ್ಲಿ ಎಲ್ಲಿಂದಲೋ ಜಗಳ ಮಾಡಿಕೊಂಡು ಬೀದಿನಾಯಿಗಳು

ಅಂಗಡಿಗೆ ತೆರಳಿದ್ದ ಬಾಲಕಿ ಮೇಲೆ ಬೀದಿನಾಯಿಗಳು ದಾಳಿ-ಗಂಭೀರ ಗಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top