News Kadaba

ಪಂಜಾಬ್ : ಪಾಕಿಸ್ತಾನದ ಸಂಬಂಧ ಹೊಂದಿದ್ದ ಅಕ್ರಮ ಶಸ್ತ್ರಾಸ್ತ್ರ, ಮಾರಾಟಗಾರನ ಬಂಧನ

(ನ್ಯೂಸ್‌ ಕಡಬ) newskadaba.com,  ಅ.15: ಅಕ್ರಮ ಶಸ್ತ್ರಾಸ್ತ್ರ ಕಳ್ಳಸಾಗಣೆ ಜಾಲವನ್ನು ಪಂಜಾಬ್ ಪೊಲೀಸರು ಅಮೃತಸರ ಮೂಲದ ವ್ಯಕ್ತಿಯೊಬ್ಬರನ್ನು ಬಂಧಸಿರುವುದಾಗಿ ಹೇಳಿಕೊಂಡಿದ್ದಾರೆ.ಆರೋಪಿ ಅಮರ್‌ಬೀರ್‌ ಸಿಂಗ್‌ನಿಂದ ಪೊಲೀಸರು ಆರು ಪಿಸ್ತೂಲ್‌ಗಳು, 11 ಮ್ಯಾಗಜೀನ್‌ಗಳು ಮತ್ತು 111 ಲೈವ್‌ ಕಾರ್ಟ್ರಿಡ್ಜ್ ಗಳನ್ನು ವಶಪಡಿಸಿಕೊಂಡಿದ್ದಾರೆ. ಒಂದು ಪ್ರಮುಖ ಪ್ರಗತಿಯಲ್ಲಿ, ಅಮೃತಸರ ಗ್ರಾಮೀಣ ಪೊಲೀಸರು ಅಮೃತಸರದ ತಾರ್ಸಿಕ್ಕಾ ಪಿಎಸ್‌‍ನ ಡೈರಿವಾಲ್‌ ನಿವಾಸಿ ಅಮರ್‌ಬೀರ್‌ ಸಿಂಗ್‌ ಅವರನ್ನು ಬಂಧಿಸಿದ್ದಾರೆ ಮತ್ತು 6 ಪಿಸ್ತೂಲ್‌ಗಳು, 11 ಮ್ಯಾಗಜೀನ್‌ಗಳು, .30 ಬೋರ್‌ನ 91 ಲೈವ್‌ ಕಾರ್ಟ್ರಿಡ್ಜ್ ಗಳು ಮತ್ತು […]

ಪಂಜಾಬ್ : ಪಾಕಿಸ್ತಾನದ ಸಂಬಂಧ ಹೊಂದಿದ್ದ ಅಕ್ರಮ ಶಸ್ತ್ರಾಸ್ತ್ರ, ಮಾರಾಟಗಾರನ ಬಂಧನ Read More »

ಬ್ರೇಕಿಂಗ್ ನ್ಯೂಸ್

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಹಸಿರು ಪಟಾಕಿ ಸಿಡಿಸಲು ಸುಪ್ರೀಂ ಕೋರ್ಟ್ ಅನುಮತಿ

(ನ್ಯೂಸ್‌ ಕಡಬ) newskadaba.com,  ಅ.15 ನವದೆಹಲಿ: ದೆಹಲಿಯಲ್ಲಿ ಹಸಿರು ಪಟಾಕಿ ಸಿಡಿಸಲು ಸುಪ್ರೀಂ (Supreme Court) ಅವಕಾಶ ನೀಡಿದೆ. ಅಕ್ಟೋಬರ್ 18ರಿಂದ 21ರವರೆಗೆ ಹಸಿರು ಪಟಾಕಿ ಸಿಡಿಸಲು ಸುಪ್ರೀಂ ಅನುಮತಿ ನೀಡಿದೆ. ಪಟಾಕಿ ಸಿಡಿಸುವ ಬಗ್ಗೆ ಸಮತೋಲನದ ತೀರ್ಮಾನ ಕೈಗೊಳ್ಳಬೇಕಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ದೆಹಲಿ ಹಾಗೂ ರಾಷ್ಟ್ರ ರಾಜಧಾನಿ ವಲಯದ ನಗರಗಳಲ್ಲಿ ಪಟಾಕಿ ಸಿಡಿತದಿಂದ ವಾಯು ಮಾಲಿನ್ಯ ಮಿತಿ ಮೀರುತ್ತದೆ. ಮೂರು ನಾಲ್ಕು ದಿನಗಳವರೆಗೂ ಜನರು ಮನೆಯಿಂದ ಹೊರ ಬರಲು ಸಾಧ್ಯವಾಗದಂಥ ಸ್ಥಿತಿ ನಿರ್ಮಾಣವಾಗುತ್ತದೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಹಸಿರು ಪಟಾಕಿ ಸಿಡಿಸಲು ಸುಪ್ರೀಂ ಕೋರ್ಟ್ ಅನುಮತಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪ್ರತೀ ಜಿಲ್ಲೆಗಳಲ್ಲೂ ಸುಸಜ್ಜಿತ ಕ್ಯಾನ್ಸರ್ ಆಸ್ಪತ್ರೆ- ಸಚಿವ ಶರಣಪ್ರಕಾಶ ಪಾಟೀಲ

(ನ್ಯೂಸ್‌ ಕಡಬ) newskadaba.com,  ಅ.15: ನಗರದ ಜಿಲ್ಲಾಸ್ಪತ್ರೆ ಆವರಣದಲ್ಲಿ ಸುಮಾರು ನಿರ್ಮಿಸಿರುವ 100 ಹಾಸಿಗೆಗಳ ನೂತನ ಕ್ಯಾನ್ಸರ್‌ ಆಸ್ಪತ್ರೆಯ ಕಟ್ಟಡದ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವೆಂಬರ್‌ 7ರಂದು ಲೋಕಾರ್ಪಣೆಗೊಳಿಸಲಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಆರ್‌. ಪಾಟೀಲ ತಿಳಿಸಿದರು. ಕ್ಯಾನ್ಸರ್‌ ಆಸ್ಪತ್ರೆ ಕಟ್ಟಡವನ್ನು ಪರಿಶೀಲಿಸಿ ಮಾತನಾಡಿದ ಅವರು, ಕ್ಯಾನ್ಸರ್‌ ಆಸ್ಪತ್ರೆಯನ್ನು ರೋಗಿಗಳ ಚಿಕಿತ್ಸೆಗೆ ಕಾರ್ಯಾಚರಣೆಗೊಳಿಸಲು ಪ್ರಥಮ ಹಂತದಲ್ಲಿ ಸುಮಾರು 41 ಕೋಟಿ ರೂ. ವೆಚ್ಚದಲ್ಲಿ ಅಗತ್ಯವಿರುವ ವೈದ್ಯಕೀಯ ಉಪಕರಣಗಳನ್ನು ಅಳವಡಿಸಲಾಗುವುದು.

ಪ್ರತೀ ಜಿಲ್ಲೆಗಳಲ್ಲೂ ಸುಸಜ್ಜಿತ ಕ್ಯಾನ್ಸರ್ ಆಸ್ಪತ್ರೆ- ಸಚಿವ ಶರಣಪ್ರಕಾಶ ಪಾಟೀಲ Read More »

ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ಡಾ. ಎಸ್.ಎಲ್. ಭೈರಪ್ಪ ಅವರಿಗೆ ‘ಕಾಲಾತೀತ ಸಾಹಿತ್ಯ ಚಕ್ರವರ್ತಿ’ ಬಿರುದು

(ನ್ಯೂಸ್‌ ಕಡಬ) newskadaba.com,  ಅ.15 ಕಾಪು : “ಡಾ. ಎಸ್.ಎಲ್. ಭೈರಪ್ಪ ಅವರ ಕೃತಿಗಳ ಶ್ರೇಷ್ಠತೆಯು ಅವುಗಳ ಅನುಭವಾತ್ಮಕ ಆಳದಲ್ಲಿ ಮಾತ್ರವಲ್ಲದೆ, ವಾಸ್ತವ ಜೀವನದ ಸನ್ನಿವೇಶಗಳಿಗೆ ಹೊಂದಿಕೊಳ್ಳುವ ಹಾಗೂ ಓದುಗರಿಗೆ ಸಂಬಂಧ ಕಲ್ಪಿಸುವ ನಿರೂಪಣಾ ಶೈಲಿಯಲ್ಲಿ ಅಡಗಿದೆ. ಇದು ಅವರ ಬರವಣಿಗೆಗಳನ್ನು ಕಾಲಾತೀತ ಮತ್ತು ಓದುಗರಿಗೆ ಸದಾ ಪ್ರಸ್ತುತವಾಗುವಂತೆ ಮಾಡಿದೆ” ಎಂದು ಉಡುಪಿ ಎಂಜಿಎಂ ಕಾಲೇಜಿನ ರಾಜಕೀಯ ವಿಜ್ಞಾನ ವಿಭಾಗದ ನಿವೃತ್ತ ಮುಖ್ಯಸ್ಥರಾದ ಪ್ರೊ. ಕೊಕ್ಕರ್ಣೆ ಸುರೇಂದ್ರನಾಥ ಶೆಟ್ಟಿ ಹೇಳಿದರು. ಅವರು ಅಕ್ಟೋಬರ್ 14 ರಂದು ಕಾಲೇಜು

ಡಾ. ಎಸ್.ಎಲ್. ಭೈರಪ್ಪ ಅವರಿಗೆ ‘ಕಾಲಾತೀತ ಸಾಹಿತ್ಯ ಚಕ್ರವರ್ತಿ’ ಬಿರುದು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಹಿಳೆಯರಿಗೆ POSH ಮತ್ತು POCSO ಕಾಯ್ದೆಯ ಬಗ್ಗೆ ಅರಿವು ಇರಬೇಕು- ಎನ್ ಸಿಡಬ್ಲ್ಯು ಅಧ್ಯಕ್ಷೆ

(ನ್ಯೂಸ್‌ ಕಡಬ) newskadaba.com,  ಅ.15: ಬೆಂಗಳೂರು ವಿಶ್ವವಿದ್ಯಾಲಯದ ಕಾನೂನು ಕಾಲೇಜಿನ ಕಾನೂನು ಅಧ್ಯಯನ ವಿಭಾಗವು ರಾಷ್ಟ್ರೀಯ ಮಹಿಳಾ ಆಯೋಗದ (NCW) ಸಹಯೋಗದೊಂದಿಗೆ, ಕ್ಯಾಂಪಸ್ ಕಾಲಿಂಗ್ ಎಂಬ ಉಪಕ್ರಮದ ಅಡಿಯಲ್ಲಿ ‘ಲಿಂಗ ಸಂವೇದನೆ ಮತ್ತು ಸೈಬರ್ ಜಾಗೃತಿ’ ಕುರಿತು ಕಾರ್ಯಾಗಾರವನ್ನು ಆಯೋಜಿಸಿತ್ತು. ಸೈಬರ್ ಅಪರಾಧ, ಡೀಪ್‌ಫೇಕ್‌ಗಳು ಮತ್ತು ಫೋಟೋ ಮಾರ್ಫಿಂಗ್ ಮೂಲಕ ಮಹಿಳೆಯರ ವಿರುದ್ಧ ಕಿರುಕುಳಕ್ಕೆ ಕಾರಣವಾಗುವ ಅನೇಕ ಹೊಸ ಅಪರಾಧಗಳು ಸಮಾಜದಲ್ಲಿ ನಡೆಯುತ್ತಿವೆ. ಮಹಿಳೆಯರು ತಮ್ಮನ್ನು ರಕ್ಷಿಸಲು ಮತ್ತು ಅಂತಹ ಕಿರುಕುಳವನ್ನು ತಡೆಯಲು ರಚಿಸಲಾದ ಕಾನೂನುಗಳ ಬಗ್ಗೆ

ಮಹಿಳೆಯರಿಗೆ POSH ಮತ್ತು POCSO ಕಾಯ್ದೆಯ ಬಗ್ಗೆ ಅರಿವು ಇರಬೇಕು- ಎನ್ ಸಿಡಬ್ಲ್ಯು ಅಧ್ಯಕ್ಷೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಧಾರವಾಡ : ನವೀಕರಿಸಬಹುದಾದ ಶಕ್ತಿ ಸಂಪನ್ಮೂಲಗಳಿಗೆ ಸರ್ಕಾರದ ಉತ್ತೇಜನ: ನಿರ್ಮಲಾ ಸೀತಾರಾಮನ್

(ನ್ಯೂಸ್‌ ಕಡಬ) newskadaba.com,  ಅ.15 ಧಾರವಾಡ: ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ಮಂಗಳವಾರ ಧಾರವಾಡದ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ)ಯಲ್ಲಿ ಸಂಶೋಧನೆ ಮತ್ತು ತಂತ್ರಜ್ಞಾನ ಇನ್‌ಕ್ಯುಬೇಟರ್ (ಧಾರಿ) ಸಹಯೋಗದೊಂದಿಗೆ ನಿರ್ಮಾಣವಾಗಿರುವ ಬಯೋನೆಸ್ಟ್ ಇನ್‌ಕ್ಯುಬೇಷನ್ ಸೆಂಟರ್ (ಬಿಐಸಿ) ಉದ್ಘಾಟಿಸಿದರು. ಐಐಟಿ ವಿದ್ಯಾರ್ಥಿಗಳೊಂದಿಗೆ ನಡೆದ ಸಂವಾದದಲ್ಲಿ, ಸೀತಾರಾಮನ್ ಸರ್ಕಾರವು ಸುಸ್ಥಿರ ಹಸಿರು ಮಾದರಿಗಳ ಮೇಲೆ ಕೇಂದ್ರೀಕರಿಸಿದೆ ಎಂದು ಹೇಳಿದರು. ನೈಸರ್ಗಿಕ ಅನಿಲಗಳ ಬೆಲೆ ಏರಿಕೆಯನ್ನು ಉಲ್ಲೇಖಿಸಿ ಮಾತನಾಡಿದ ಅವರು, ‘ನವೀಕರಿಸಬಹುದಾದ ಶಕ್ತಿ ಸಂಪನ್ಮೂಲಗಳಿಗೆ ಸರ್ಕಾರ

ಧಾರವಾಡ : ನವೀಕರಿಸಬಹುದಾದ ಶಕ್ತಿ ಸಂಪನ್ಮೂಲಗಳಿಗೆ ಸರ್ಕಾರದ ಉತ್ತೇಜನ: ನಿರ್ಮಲಾ ಸೀತಾರಾಮನ್ Read More »

ಕರ್ನಾಟಕ

ಜಲಪಾತ ವೀಕ್ಷಣೆಗೆ ತೆರಳಿದ್ದ ಸುಳ್ಯದ ವಿದ್ಯಾರ್ಥಿ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೃತ್ಯು

(ನ್ಯೂಸ್‌ ಕಡಬ) newskadaba.com,  ಅ.15 ಸುಳ್ಯ: ವಿದೇಶದಲ್ಲಿ ಶಿಕ್ಷಣ ಪಡೆಯುತ್ತಿರುವ ಸುಳ್ಯದ ಯುವಕನೋರ್ವ ಅಲ್ಲಿ ಜಲಪಾತ ವೀಕ್ಷಣೆಗೆ ತೆರಳಿದ್ದ ಸಮಯದಲ್ಲಿ  ಕಾಲು ಜಾರಿ ಬಿದ್ದು ಮೃತಪಟ್ಟ ಘಟನೆ ಸೋಮವಾರ ಸಂಭವಿಸಿದೆ. ಸುಬ್ರಹ್ಮಣ್ಯ ಸಮೀಪದ ನಡುಗಲ್ಲು ಕಲ್ಲಾಜೆಯ ಜಯಲಕ್ಷ್ಮಿ ಎಂಬವರ ಪುತ್ರ ನಂದನ ಎಸ್. ಭಟ್ (25) ಮೃತರು. ನಂದನ ಅವರು ಮಾರಿಷಸ್ ನಲ್ಲಿ ವಿದ್ಯಾರ್ಥಿ ವೀಸಾದಲ್ಲಿದ್ದು ಅಲ್ಲಿ ಜಲಪಾತ ವೀಕ್ಷಣೆಗೆ ಹೋಗಿದ್ದ ವೇಳೆ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ. ಮೃತದೇಹವನ್ನು ಅಲ್ಲಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಇರಿಸಲಾಗಿದೆ… ಘಟನೆ ಸೋಮವಾರ

ಜಲಪಾತ ವೀಕ್ಷಣೆಗೆ ತೆರಳಿದ್ದ ಸುಳ್ಯದ ವಿದ್ಯಾರ್ಥಿ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಗಾಣದಪಡ್ಪು: ಭೀಕರ ಅಪಘಾತ – ಕಾರು ಡಿಕ್ಕಿ ಹೊಡೆದು ವ್ಯಕ್ತಿ ಸಾವು

(ನ್ಯೂಸ್‌ ಕಡಬ) newskadaba.com,  ಅ.15 ಬಂಟ್ವಾಳ:   ಬಿ.ಸಿ.ರೋಡ್ ಬಳಿಯ ಗಾಣದಪಡ್ಪು ಎಂಬಲ್ಲಿ ಮಂಗಳವಾರ ಭೀಕರ ಅಪಘಾತ ಸಂಭವಿಸಿದ್ದು, ಕಾರು ರಿಪೇರಿಯಲ್ಲಿ ತೊಡಗಿದ್ದ ವ್ಯಕ್ತಿಯೊಬ್ಬರು ಮತ್ತೊಂದು ವಾಹನ ಡಿಕ್ಕಿ ಹೊಡೆದು ಸಾವನ್ನಪ್ಪಿದ್ದಾರೆ. ಮೃತರನ್ನು ಬೋಳಾರ್ಂತೂರು ನಿವಾಸಿ ಜಬ್ಬಾರ್ (33) ಎಂದು ಗುರುತಿಸಲಾಗಿದೆ. ಅವರು ಅವಿವಾಹಿತರಾಗಿದ್ದು, ಗಾಣದಪಡ್ಪುವಿನ ಶಿವಗಣೇಶ್ ಬ್ಯಾಟರಿ ಅಂಗಡಿಯಲ್ಲಿ ಉದ್ಯೋಗದಲ್ಲಿದ್ದು, ಅಲ್ಲಿ ಆಟೋ ಎಲೆಕ್ಟ್ರಿಕಲ್ ಟೆಕ್ನಿಷಿಯನ್ ಆಗಿ ಕೆಲಸ ಮಾಡುತ್ತಿದ್ದರು. ವರದಿಗಳ ಪ್ರಕಾರ, ಜಬ್ಬಾರ್ ಹೆದ್ದಾರಿಯಲ್ಲಿ ನಿಲ್ಲಿಸಿದ್ದ ಕಾರಿಗೆ ಹಾರ್ನ್ ಅಳವಡಿಸುತ್ತಿದ್ದಾಗ, ವೇಣೂರಿನ ವ್ಯಕ್ತಿಯೊಬ್ಬರು ಚಲಾಯಿಸುತ್ತಿದ್ದ ಮತ್ತೊಂದು

ಗಾಣದಪಡ್ಪು: ಭೀಕರ ಅಪಘಾತ – ಕಾರು ಡಿಕ್ಕಿ ಹೊಡೆದು ವ್ಯಕ್ತಿ ಸಾವು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕರ್ನಾಟಕದ ಸುಮಾರು 27 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

(ನ್ಯೂಸ್‌ ಕಡಬ) newskadaba.com,  ಅ.15 ಬೆಂಗಳೂರು : ಕರ್ನಾಟದ 27 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದ್ದು, ಇಂದು ಭಾರಿ ಮಳೆಯಾಗುವ  ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಕರ್ನಾಟಕ, ಕರಾವಳಿ ಮತ್ತು ಉತ್ತರ ಒಳನಾಡು, ದಕ್ಷಿಣ ಒಳನಾಡು ಈ ಎಲ್ಲಾ ಕಡೆಯಲ್ಲಿಯೂ ಉತ್ತಮ ಮಳೆಯಾಗಲಿದೆ. ರಾಜಧಾನಿ ಬೆಂಗಳೂರಿನಲ್ಲೂ ಗುಡುಗು ಸಹಿತ ಸಣ್ಣ ಪ್ರಮಾಣದ ಮಳೆ ಆಗುವ ಸಾಧ್ಯತೆ ಇದೆ …. ಉತ್ತರ ಒಳನಾಡ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ,

ಕರ್ನಾಟಕದ ಸುಮಾರು 27 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತೆಗಾಗಿ ಹೊಸ ಮಸೂದೆ ಜಾರಿ

(ನ್ಯೂಸ್‌ ಕಡಬ) newskadaba.com,  ಅ.15 ಬೀದರ್:  ಈ ಭದ್ರತೆಗಾಗಿ ಹೊಸ ಮಸೂದೆ ಜಾರಿಗೆ ತರಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ.ಜಿಲ್ಲಾ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಈ ವಿಚಾರವನ್ನು ತಿಳಿಸಿದರು. ರಾಜ್ಯದ ದುಡಿಯುವ ಜನರಲ್ಲಿ ಶೇ.85ರಷ್ಟು ಅಸಂಘಟಿತ ವಲಯದ ಕಾರ್ಮಿಕರಾಗಿದ್ದಾರೆ. ವಿವಿಧ ವಲಯದಲ್ಲಿ ಕಾರ್ಯ ನಿರ್ವಹಿಸುವುದರ ಮೂಲಕ ರಾಜ್ಯಕ್ಕೆ ದೊಡ್ಡ ಶಕ್ತಿಯಾಗಿದ್ದಾರೆ. ರಾಜ್ಯದಲ್ಲಿ ಅಸಂಘಟಿತ ವಲಯದಲ್ಲಿ ದುಡಿಯುತ್ತಿರುವ ಕಾರ್ಮಿಕರಿಗೆ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಹೊಸ ಮಸೂದೆಯನ್ನು ತರಲು ರಾಜ್ಯ ಸರ್ಕಾರ

ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತೆಗಾಗಿ ಹೊಸ ಮಸೂದೆ ಜಾರಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top