News Kadaba

ಮಧುರೈ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ

(ನ್ಯೂಸ್‌ ಕಡಬ) newskadaba.com,  ಅ.09: ತಮಿಳುನಾಡಿನ ಮಧುರೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ. ಮಾಹಿತಿ ಬಂದ ತಕ್ಷಣವೇ, ಸ್ಥಳೀಯ ಪೊಲೀಸ್ ಆಯುಕ್ತರು ಹಾಗೂ ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಲಾಗಿತ್ತು. ಭದ್ರತಾ ತಪಾಸಣೆ ಹಾಗೂ ಶೋಧ ಕಾರ್ಯಗಳನ್ನು ತ್ವರಿತವಾಗಿ ಆರಂಭಿಸಿದ್ದಾರೆ. ಶ್ವಾನ ದಳ ಮತ್ತು ಬಾಂಬ್ ನಿಷ್ಕ್ರಿಯ ದಳಗಳನ್ನು ಸ್ಥಳಕ್ಕೆ ಆಗಮಿಸಿ ವಿಮಾನ ನಿಲ್ದಾಣದ ಆವರಣದ ಎಲ್ಲ ಭಾಗಗಳನ್ನು ಪರಿಶೀಲಿಸಲಾಯಿತು. ಈ ವೇಳೆ ಪ್ರತಿಕ್ರಿಯಿಸಿದ ಅಧಿಕಾರಿಗಳು, ಎಲ್ಲಾ ಪ್ರವೇಶ ವಾಹನಗಳನ್ನು ತಪಾಸಣೆಗೆ ಒಳಪಡಿಸಿದರು. ಈ […]

ಮಧುರೈ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ Read More »

ಕರಾವಳಿ

ದೈವಸ್ಥಾನದ ಮೆಟ್ಟಿಲೇರಿದ ಕಾಂತಾರ ಚಿತ್ರ

(ನ್ಯೂಸ್‌ ಕಡಬ) newskadaba.com,  ಅ.09 ಮಂಗಳೂರು: ತುಳುನಾಡಿನಲ್ಲಿ ದೈವಾರಾಧಕರು ಹಾಗೂ ಕಾಂತಾರ ಚಾಪ್ಟರ್‌ 1 ಸಿನಿಮಾದ ನಡುವಿನ ಫೈಟ್ ತಾರಕಕ್ಕೇರಿದೆ. ಇದೀಗ ಕಾಂತಾರ ಚಾಪ್ಟರ್ 1 ಸಿನಿಮಾದಲ್ಲಿ ದೈವಾರಾಧನೆ ಬಳಕೆ ವಿರುದ್ಧ ಸಿಡಿದೆದ್ದ ದೈವಾರಾಧಕರು ದೈವಸ್ಥಾನದ ಮೆಟ್ಟಿಲೇರಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ್ದಾರೆ. ಮಂಗಳೂರಿನ ಬಜಪೆ ಸಮೀಪ ಪೆರಾರ ಬ್ರಹ್ಮ ಬಲವಂಡಿ, ಪಿಲಿಚಂಡಿ ದೈವಸ್ಥಾನದಲ್ಲಿ ದೈವನರ್ತಕರು ಹಾಗೂ ದೈವಾರಾಧಕರು ಸಾಮೂಹಿಕ ಪ್ರಾರ್ಥನೆಯನ್ನು ಸಲ್ಲಿಸಿದ್ದಾರೆ. ಕಾಂತಾರ ಚಾಪ್ಟರ್ 1 ಸಿನಿಮಾ ಹಾಗೂ ದೈವಾರಾಧನೆಯ ಅಪಹಾಸ್ಯದ ವಿರುದ್ಧ ದೈವಸ್ಥಾನದ ಮೆಟ್ಟಿಲೇರಿದ್ದಾರೆ. ಕಾಂತಾರ ಸಿನಿಮಾದಲ್ಲಿ

ದೈವಸ್ಥಾನದ ಮೆಟ್ಟಿಲೇರಿದ ಕಾಂತಾರ ಚಿತ್ರ Read More »

ಸಿನಿಮಾ

ದುಬೈಯಲ್ಲಿ ಅ.26 ರಂದು ‘ಸ್ಕೂಲ್ ಲೀಡರ್ ‘ ಕನ್ನಡ ಸಿನೆಮಾ ಬಿಡುಗಡೆ

(ನ್ಯೂಸ್‌ ಕಡಬ) newskadaba.com,  ಅ.09 ದುಬೈ: ಎಸ್.ವಿ.ಎಸ್ ಹಳೆವಿದ್ಯಾರ್ಥಿ ಸಂಘ ಕಟಪಾಡಿ-ದುಬೈ ಇದರಸಹಯೋಗದೊಂದಿಗೆ ಕರ್ನಾಟಕ ರಾಜ್ಯದಲ್ಲಿ 55ಕ್ಕೂ ಅಧಿಕ ದಿನಗಳ ಭರ್ಜರಿ ಪ್ರದರ್ಶನ ಕಂಡು ಪ್ರೇಕ್ಷಕರಿಂದ ಮುಕ್ತಕಂಠದಿಂದ ಪ್ರಶಂಸಿಸಲ್ಪಟ್ಟ ‘ಸ್ಕೂಲ್ ಲೀಡರ್ ‘ಕನ್ನಡ ಸಿನೆಮಾ ಅ. 26ರಂದು ದುಬೈನಲ್ಲಿ ಪ್ರದರ್ಶನಗೊಳ್ಳಲಿದೆ. ಪ್ರತಿಷ್ಠಿತ 4 ಅಂತರ್ರಾಷ್ಟ್ರೀಯ ಪ್ರಶಸ್ತಿಗಳನ್ನು ಬಾಚಿಕೊಂಡ ಸ್ಕೂಲ್ ಲೀಡರ್ ಚಿತ್ರ ಈಗಾಗಲೇ ಆಸ್ಟ್ರೇಲಿಯಾದ ಮೆಲ್ಬೋರ್ನ್,ಸಿಡ್ನಿ,ಪರ್ತ್, ಒಮಾನಿನ ಮಸ್ಕತ್ ಹಾಗೂ ಬೆಹೆರಿನ್ ನಲ್ಲಿ ಯಶಸ್ವಿಯಾಗಿ ಪ್ರದರ್ಶನಗೊಂಡು ಇದೀಗ ಎಸ್.ವಿ.ಎಸ್.ಹಳೆವಿದ್ಯಾರ್ಥಿ ಸಂಘ ಕಟಪಾಡಿ ಮತ್ತು ದುಬೈ ಇವರ ಸಹಕಾರದಿಂದ

ದುಬೈಯಲ್ಲಿ ಅ.26 ರಂದು ‘ಸ್ಕೂಲ್ ಲೀಡರ್ ‘ ಕನ್ನಡ ಸಿನೆಮಾ ಬಿಡುಗಡೆ Read More »

ಕರಾವಳಿ

ಮಂಗಳೂರು ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ 2 ಅತ್ಯಾಧುನಿಕ ಅಗ್ನಿಶಾಮಕ ವಾಹನಗಳು

(ನ್ಯೂಸ್‌ ಕಡಬ) newskadaba.com,  ಅ.09 ಮಂಗಳೂರು : ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್‌ಗೆ 2 ಅತ್ಯಾಧುನಿಕ ಅಗ್ನಿಶಾಮಕ ವಾಹನಗಳನ್ನು ನಿಯೋಜಿಸಲಾಗಿದೆ. ಈ 2 ಅಗ್ನಿಶಾಮಕ ವಾಹನಗಳ ಸೇರ್ಪಡೆಯೊಂದಿಗೆ ಮಂಗಳೂರು ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಗ್ನಿಶಾಮಕದ ಸಾಮರ್ಥ್ಯಗಳನ್ನು ಗಮನಾರ್ಹವಾಗಿ ಹೆಚ್ಚಿಸಿದಂತಾಗಿದೆ . ಅಗ್ನಿ ಶಾಮಕ ವಾಹನಗಳನ್ನು ಆಸ್ಟ್ರಿಯಾದಿಂದ ಆಮದು ಮಾಡಿಕೊಳ್ಳಲಾಗಿದ್ದು, ರೋಸೆನ್‌ಬೌರ್ ಈ ವಾಹನಗಳನ್ನು ತಯಾರಿಸಿದೆ. ಪ್ರಪಂಚದಾದ್ಯಂತದ ಪ್ರಮುಖ ವಿಮಾನ ನಿಲ್ದಾಣಗಳಲ್ಲಿ ಇಂತಹ ಅಗ್ನಿಶಾಮಕ ವಾಹನಗಳು ಇವೆ. ಈ ವಾಹನಗಳು 12,500 ಲೀಟರ್ ನೀರು ಮತ್ತು 1,500 ಲೀಟರ್ ಫೋಮ್

ಮಂಗಳೂರು ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ 2 ಅತ್ಯಾಧುನಿಕ ಅಗ್ನಿಶಾಮಕ ವಾಹನಗಳು Read More »

ಕರಾವಳಿ

ಮಡಿಕೇರಿ ವಸತಿ ಶಾಲೆಯೊಂದರಲ್ಲಿ ಬೆಂಕಿ ಅನಾಹುತ ; 2ನೇ ತರಗತಿ ವಿದ್ಯಾರ್ಥಿ ಸಜೀವ ದಹನ

(ನ್ಯೂಸ್‌ ಕಡಬ) newskadaba.com,  ಅ.09 ಮಡಿಕೇರಿ : ಮಡಿಕೇರಿಯ ವಸತಿ ಶಾಲೆಯೊಂದರಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, 2ನೇ ತರಗತಿ ವಿದ್ಯಾರ್ಥಿ ಮೃತಪಟ್ಟಿರುವ ಘಟನೆ ನಡೆದಿದೆ. ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಕಾಟಗೇರಿ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ವಸತಿ ಶಾಲೆಯ ಎರಡನೇ ತರಗತಿ ವಿದ್ಯಾರ್ಥಿ ಪುಷ್ಪಕ್ ಮೃತಪಟ್ಟಿದ್ದಾನೆ. ಶಾರ್ಟ್ ಸರ್ಕ್ಯೂಟ್‌ನಿಂದ ಈ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ವಸತಿ ಶಾಲೆಯ

ಮಡಿಕೇರಿ ವಸತಿ ಶಾಲೆಯೊಂದರಲ್ಲಿ ಬೆಂಕಿ ಅನಾಹುತ ; 2ನೇ ತರಗತಿ ವಿದ್ಯಾರ್ಥಿ ಸಜೀವ ದಹನ Read More »

ಕರಾವಳಿ

ವ್ಯಕ್ತಿಯೊಬ್ಬರು ಮೊಬೈಲ್ ಅನ್ನು ಮನೆಯಲ್ಲಿಯೇ ಬಿಟ್ಟು ಕಣ್ಮರೆ – ಕೇಸ್ ದಾಖಲು

(ನ್ಯೂಸ್‌ ಕಡಬ) newskadaba.com,  ಅ.09 ಮಂಗಳೂರು: ಮೊಬೈಲ್ ಮನೆಯಲ್ಲಿ ಬಿಟ್ಟು ವ್ಯಕ್ತಿಯೊಬ್ಬರು ನಾಪತ್ತೆಯಾಗಿರುವ ಬಗ್ಗೆ ಮಂಗಳೂರಿನ ಕಂಕನಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಪತ್ತೆಯಾದ ವ್ಯಕ್ತಿಯನ್ನು ಹಾಸನ ಅರಸೀಕೆರೆ ಮೂಲದ ದೇವರಾಜ್ (49) ಎಂದು ಗುರುತಿಸಲಾಗಿದೆ.. ಇವರು ಪಂಪ್ ವೆಲ್ ಸಮೀಪದ ಎಕ್ಕೂರಿನಲ್ಲಿ ವಾಸವಿದ್ದು, ಮನೆಯಲ್ಲಿ ಮೊಬೈಲ್ ಬಿಟ್ಟು ಸೆಪ್ಟೆಂಬರ್ 25ರಿಂದ ನಾಪತ್ತೆಯಾಗಿದ್ದಾರೆ. ಕಂಕನಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವ್ಯಕ್ತಿಯೊಬ್ಬರು ಮೊಬೈಲ್ ಅನ್ನು ಮನೆಯಲ್ಲಿಯೇ ಬಿಟ್ಟು ಕಣ್ಮರೆ – ಕೇಸ್ ದಾಖಲು Read More »

ಕರಾವಳಿ

ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಕೊಕರ್ನಾಗ್‌ನಲ್ಲಿ ಭಯೋತ್ಪಾದಕರನ್ನು ಪತ್ತೆಹಚ್ಚುವ ಶೋಧ ಕಾರ್ಯ

(ನ್ಯೂಸ್‌ ಕಡಬ) newskadaba.com,  ಅ.09  ಅನಂತ್‌ನಾಗ್‌: ಜಮ್ಮು ಮತ್ತು ಕಾಶ್ಮೀರದ ಅನಂತ್‌ನಾಗ್‌ನ ಕೊಕರ್ನಾಗ್ ಪ್ರದೇಶದ ಅರಣ್ಯಗಳಲ್ಲಿ ಭಯೋತ್ಪಾದಕರ ಪತ್ತೆಗಾಗಿ ನಡೆಯುತ್ತಿದ್ದ ಕೂಂಬಿಂಗ್ ಕಾರ್ಯಾಚರಣೆ ವೇಳೆ 2 ಜನ ಸೈನಿಕರು ಕಣ್ಮರೆಯಾಗಿದ್ದಾರೆ. ಸಂಪರ್ಕ ಕಳೆದುಕೊಂಡ ಇಬ್ಬರು ಸೈನಿಕರನ್ನು ಪತ್ತೆಹಚ್ಚಲು ಭದ್ರತಾ ಪಡೆಗಳು ಬೃಹತ್ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿವೆ ಎಂದು ಅಧಿಕಾರಿಗಳು ಬುಧವಾರ(ಅ.08) ತಿಳಿಸಿದ್ದಾರೆ.2 ದಿನಗಳ ಹಿಂದೆ ಕೊಕರ್ನಾಗ್‌ನ ಅಹ್ಲಾನ್ ಗಡೋಲ್ ಪ್ರದೇಶದಲ್ಲಿ ಭಯೋತ್ಪಾದಕರ ಗುಂಪು ಅಡಗಿಕೊಂಡಿರುವ ಮಾಹಿತಿಯ ಮೇರೆಗೆ ಕೂಂಬಿಂಗ್ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು ಎಂದು ಅವರು ಹೇಳಿದ್ದಾರೆ. ಈ ಮಧ್ಯೆ

ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಕೊಕರ್ನಾಗ್‌ನಲ್ಲಿ ಭಯೋತ್ಪಾದಕರನ್ನು ಪತ್ತೆಹಚ್ಚುವ ಶೋಧ ಕಾರ್ಯ Read More »

ಕರಾವಳಿ

ಅಪ್ರಾಪ್ತ ಬಾಲಕನಿಗೆ ದ್ವಿಚಕ್ರ ವಾಹನ ಚಲಾಯಿಸಲು ನೀಡಿದ ವ್ಯಕ್ತಿಗೆ ನ್ಯಾಯಾಲಯ 29,000 ರೂ. ದಂಡ

(ನ್ಯೂಸ್‌ ಕಡಬ) newskadaba.com,  ಅ.09  ಮಂಗಳೂರು : ಅಪ್ರಾಪ್ತ ಬಾಲಕನಿಗೆ ದ್ವಿಚಕ್ರ ವಾಹನ ಚಲಾಯಿಸಲು ನೀಡಿದ ವ್ಯಕ್ತಿಗೆ 29,000 ರೂ. ದಂಡ ವಿದಿಸಿದೆ. ಮಾರುತಿ ಕಂಬಾಲ್ ದಂಡ ಪಾವತಿಸಬೇಕಾದ ವ್ಯಕ್ತಿ ಎಂದು ತಿಳಿದುಬಂದಿದೆ. ಜೆಎಂಎಫ್‌ಸಿ 4 ನ್ಯಾಯಾಲಯದ ಪ್ರಭಾರ ನ್ಯಾಯಾಧೀಶೆ ಶಿಲ್ಪ ಎಸ್ ಬ್ಯಾಡಗಿ ಅವರು ಮಾರುತಿ ಕಂಬಾಲ್‌ಗೆ ದಂಡ ವಿಧಿಸಿ ಆದೇಶ ನೀಡಿದ್ದಾರೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.

ಅಪ್ರಾಪ್ತ ಬಾಲಕನಿಗೆ ದ್ವಿಚಕ್ರ ವಾಹನ ಚಲಾಯಿಸಲು ನೀಡಿದ ವ್ಯಕ್ತಿಗೆ ನ್ಯಾಯಾಲಯ 29,000 ರೂ. ದಂಡ Read More »

ಕರಾವಳಿ

ಬೆಳಗಾವಿ : ಮದುವೆಯಾದ ನಾಲ್ಕೇ ತಿಂಗಳಲ್ಲಿ ಹೆಂಡತಿಯನ್ನು ಕೊಂದು ಮಂಚದೊಳಗಿಟ್ಟು ಗಂಡ ಪರಾರಿ

(ನ್ಯೂಸ್‌ ಕಡಬ) newskadaba.com,  ಅ.09  ಬೆಳಗಾವಿ: ಪತ್ನಿಯನ್ನು ಕೊಂದು ಶವವನ್ನು ಮಂಚದೊಳಗಿಟ್ಟು ಬೆಡ್ ಮುಚ್ಚಿ ಪತಿ ಪರಾರಿ ಆಗಿರುವ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಕಮಲದಿನ್ನಿ ಗ್ರಾಮದಲ್ಲಿ ನಡೆದಿದೆ. ಸಾಕ್ಷಿ ಕಂಬಾರ (20) ಕೊಲೆಯಾದ ಪತ್ನಿ. ಆಕಾಶ್ ಪರಾರಿಯಾಗಿರುವ ಪತಿ. ಮೂಡಲಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. 4 ತಿಂಗಳ ಹಿಂದೆಯಷ್ಟೇ ಆಕಾಶ್ ಮತ್ತು ಸಾಕ್ಷಿ ಕಂಬಾರ ಮದುವೆ ಆಗಿತ್ತು. 3 ದಿನದ ಹಿಂದೆ ಸಾಕ್ಷಿ ಕಂಬಾರಳನ್ನು ಕೊಂದು ಮಂಚದೊಳಗೆ ಶವ ಬಚ್ಚಿಟ್ಟು ಮೊಬೈಲ್

ಬೆಳಗಾವಿ : ಮದುವೆಯಾದ ನಾಲ್ಕೇ ತಿಂಗಳಲ್ಲಿ ಹೆಂಡತಿಯನ್ನು ಕೊಂದು ಮಂಚದೊಳಗಿಟ್ಟು ಗಂಡ ಪರಾರಿ Read More »

ಕರಾವಳಿ

ಕೆಲವು ದಿನಗಳ ಬಳಿಕ ಸುಳ್ಯ ತಾಲೂಕಿನ ವಿವಿಧ ಭಾಗಗಳಲ್ಲಿ ಗುಡುಗು ಸಹಿತ ಭಾರೀ ಮಳೆ

(ನ್ಯೂಸ್‌ ಕಡಬ) newskadaba.com,  ಅ.09  ಸುಳ್ಯ : ಕೆಲವು ದಿನಗಳ ಬಿಡುವಿನ ನಂತರ ಬುಧವಾರ ಸುಳ್ಯ ತಾಲೂಕಿನ ವಿವಿಧ ಭಾಗಗಳಲ್ಲಿ ಮಳೆಯಾಗಿದೆ. ಸುಳ್ಯ ತಾಲೂಕಿನ ವಿವಿಧೆಡೆಗಳಲ್ಲಿ ಬುಧವಾರ(ಅ.08) ಬೆಳಗ್ಗಿನಿಂದಲೇ ಮೋಡ ಕವಿದ ವಾತಾವರಣವಿದ್ದು ಮಧ್ಯಾಹ್ನದ ಬಳಿಕ ಗುಡುಗು ಸಿಡಿಲು ಸಹಿತ ಸಾಧಾರಣ ಮಳೆ ಸುರಿದಿದೆ. ಕರಾವಳಿ ಹಾಗೂ ಒಳನಾಡಿನ ಕೆಲ ಪ್ರದೇಶದಲ್ಲಿ ಮುಂದಿನ ಕೆಲವು ದಿನಗಳ ಕಾಲ ಗುಡುಗು ಸಹಿತ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಲ್ಲಿ ಹಾಗೂ

ಕೆಲವು ದಿನಗಳ ಬಳಿಕ ಸುಳ್ಯ ತಾಲೂಕಿನ ವಿವಿಧ ಭಾಗಗಳಲ್ಲಿ ಗುಡುಗು ಸಹಿತ ಭಾರೀ ಮಳೆ Read More »

ಕರಾವಳಿ
Scroll to Top