News Kadaba

‘ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ’- ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ

(ನ್ಯೂಸ್‌ ಕಡಬ) newskadaba.com,  ಅ.08: ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟ ಎಚ್ಚರಿಕೆ ನೀಡಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ 71ನೇ ವನ್ಯಜೀವಿ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಪರಿಸರ, ಅರಣ್ಯ ಸಂರಕ್ಷಕರಿಗೆ ಮುಖ್ಯಮಂತ್ರಿ ಪದಕ ವಿತರಿಸಿ ಮಾತನಾಡಿದರು. ಸಾಕು ಹಸುವನ್ನು ತಿಂದಿದೆ ಎನ್ನುವ ಕಾರಣಕ್ಕೆ ಹುಲಿಗಳಿಗೆ ವಿಷ ಹಾಕುವುದನ್ನು ಸಹಿಸಲು ಸಾಧ್ಯವಿಲ್ಲ. ಯಾರೇ ಅರಣ್ಯ […]

‘ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ’- ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ Read More »

ಕರಾವಳಿ

ತಪ್ಪು ಸರಿಪಡಿಸಿಕೊಳ್ಳಲು ಕಾಲಾವಕಾಶ ನೀಡಿ: ಜಾಲಿವುಡ್ ಆಡಳಿತ ಮಂಡಳಿ ಮನವಿ

(ನ್ಯೂಸ್‌ ಕಡಬ) newskadaba.com,  ಅ.08: ಮಾಲಿನ್ಯ ನಿಯಮ ಉಲ್ಲಂಘಿಸಿದ್ದಕ್ಕೆ ಬಿಗ್‌ಬಾಸ್ ಮನೆಗೆ ಬೀಗ ಜಡಿದ ಬೆನ್ನಲ್ಲೇ ರಾಮನಗರ ಡಿಸಿ ಕಚೇರಿಗೆ ಜಾಲಿವುಡ್ ಆಡಳಿತ ಮಂಡಳಿ ಭೇಟಿ ನೀಡಿ 15 ದಿನ ಕಾಲಾವಕಾಶ ಕೇಳಿ ಮನವಿ ಸಲ್ಲಿಸಿದೆ. ಜಾಲಿವುಡ್ ಸ್ಟುಡಿಯೋದಲ್ಲಿ ಬಿಗ್‌ಬಾಸ್ ಸೀಸನ್ 12ರ ಶೋ ನಡೆಯುತ್ತಿದ್ದು, ಸ್ಟುಡಿಯೋದಲ್ಲಿ 400ಕ್ಕೂ ಹೆಚ್ಚು ಕಾರ್ಮಿಕರು ಕೆಲಸ ಮಾಡ್ತಿದ್ದಾರೆ. ಹೀಗೆ ಏಕಾಏಕಿ ಬಂದ್ ಮಾಡಿದರೆ ಕಾರ್ಮಿಕರ ಕೆಲಸಕ್ಕೆ ಕುತ್ತು ಬೀಳಲಿದೆ. ನಮ್ಮಿಂದ ತಪ್ಪಾಗಿದೆ, ತಪ್ಪು ಸರಿಪಡಿಸಿಕೊಳ್ಳಲು ಕಾಲಾವಕಾಶ ಕೊಡಿ ಎಂದು ಜಾಲಿವುಡ್

ತಪ್ಪು ಸರಿಪಡಿಸಿಕೊಳ್ಳಲು ಕಾಲಾವಕಾಶ ನೀಡಿ: ಜಾಲಿವುಡ್ ಆಡಳಿತ ಮಂಡಳಿ ಮನವಿ Read More »

ಕರಾವಳಿ

ಜಾತಿ ಗಣತಿ 83% ಪೂರ್ಣ ; ನಿನ್ನೆಯೇ ಮುಗಿಯಬೇಕಿದ್ದ ಸಮೀಕ್ಷೆ ವಿಸ್ತರಣೆ

(ನ್ಯೂಸ್‌ ಕಡಬ) newskadaba.com,  ಅ.08: ರಾಜ್ಯಾದ್ಯಂತ ನಡೆಯುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಅಡಿ ಅ.7ರವರೆಗೆ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ (ಜಿಬಿಎ) ಹೊರತುಪಡಿಸಿ ಶೇ. 83.22 ರಷ್ಟು ಕುಟುಂಬಗಳ ಸಮೀಕ್ಷೆ ಪೂರ್ಣಗೊಂಡಿದೆ. ಅ. 7ರಂದು ಸಮೀಕ್ಷೆ ಪೂರ್ಣಗೊಳಿಸಲು ಉದ್ದೇಶಿಸಲಾಗಿದ್ದರೂ ಅನೇಕ ಜಿಲ್ಲೆಗಳಲ್ಲಿ ಸಮೀಕ್ಷೆಯ ಪ್ರಮಾಣ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಸಮೀಕ್ಷೆಯ ಅವಧಿಯನ್ನು ಅ.18ರವರೆಗೂ ವಿಸ್ತರಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದ್ದಾರೆ. ಅ.7 ರಂದು ಮಂಗಳವಾರ ಸಂಜೆ ವೇಳೆಗೆ 3,57,197 ಕುಟುಂಬಗಳ ಸಮೀಕ್ಷೆ ನಡೆದಿದೆ. ಒಟ್ಟು 1,19,65,700 ಕುಟುಂಬಗಳ

ಜಾತಿ ಗಣತಿ 83% ಪೂರ್ಣ ; ನಿನ್ನೆಯೇ ಮುಗಿಯಬೇಕಿದ್ದ ಸಮೀಕ್ಷೆ ವಿಸ್ತರಣೆ Read More »

ಕರಾವಳಿ

ಮಲಯಾಳಂ ಸೂಪರ್ ಸ್ಟಾರ್ ಮಮ್ಮುಟ್ಟಿ, ದುಲ್ಕರ್ ಸಲ್ಮಾನ್ ಮನೆ ಮೇಲೆ ಇಡಿ ದಾಳಿ

(ನ್ಯೂಸ್‌ ಕಡಬ) newskadaba.com,  ಅ.08: ಭೂತಾನ್ ವಾಹನಗಳ ಅಕ್ರಮ ಕಳ್ಳಸಾಗಣೆ ಪ್ರಕರಣದಡಿ ಇಡಿ ಅಧಿಕಾರಿಗಳು ಮಲಯಾಳಂ ಸೂಪರ್‌ಸ್ಟಾರ್ ಮಮ್ಮುಟಿ , ದುಲ್ಕರ್ ಸಲ್ಮಾನ್ , ಪೃಥ್ವಿರಾಜ್ ಹಾಗೂ ಅಮಿತ್ ಚಕ್ಕಲಕಲ್ ಮನೆ ಮೇಲೆ ದಾಳಿ ಮಾಡಿದ್ದಾರೆ. ಚೆನ್ನೈನಲ್ಲಿರುವ ಮಮ್ಮುಟ್ಟಿ ಅವರ ಚಲನಚಿತ್ರ ನಿರ್ಮಾಣ ಕಂಪನಿ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ, ಶೋಧ ಕಾರ್ಯ ನಡೆಸುತ್ತಿದ್ದಾರೆ. ಐಷಾರಾಮಿ ವಾಹನಗಳ ಕಳ್ಳಸಾಗಣೆ ಮತ್ತು ಅಕ್ರಮ ಹಣ ವರ್ಗಾವಣೆ ಆರೋಪದಡಿ ಎರ್ನಾಕುಲಂ, ತ್ರಿಶೂರ್, ಕೋಝಿಕ್ಕೋಡ್, ಮಲಪ್ಪುರಂ, ಕೊಟ್ಟಾಯಂ ಮತ್ತು ಕೊಯಮತ್ತೂರಿನಲ್ಲಿರುವ

ಮಲಯಾಳಂ ಸೂಪರ್ ಸ್ಟಾರ್ ಮಮ್ಮುಟ್ಟಿ, ದುಲ್ಕರ್ ಸಲ್ಮಾನ್ ಮನೆ ಮೇಲೆ ಇಡಿ ದಾಳಿ Read More »

ಕರಾವಳಿ

ಭಾರತೀಯರಿಗೆ ವೀಸಾ ನಿಯಮಗಳನ್ನು ಸಡಿಲಿಸುವುದಿಲ್ಲ-ಬ್ರಿಟನ್ ಪ್ರಧಾನಿ

(ನ್ಯೂಸ್‌ ಕಡಬ) newskadaba.com,  ಅ.08: ಮುಂಬೈ: ಬ್ರಿಟನ್‌ ಪ್ರಧಾನಿ ಕೀರ್ ಸ್ಟಾರ್ಮರ್ ಭಾರತ ಪ್ರವಾಸದಲ್ಲಿದ್ದು, ಅವರನ್ನು ಅದ್ಧೂರಿಯಾಗಿ ಸ್ವಾಗತಿಸಲಾಯಿತು.ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಅವರನ್ನು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಉಪ ಮುಖ್ಯಮಂತ್ರಿಗಳಾದ ಏಕನಾಥ್ ಶಿಂಧೆ ಮತ್ತು ಅಜಿತ್ ಪವಾರ್ ಮತ್ತು ಮಹಾರಾಷ್ಟ್ರ ರಾಜ್ಯಪಾಲ ಆಚಾರ್ಯ ಬರಮಾಡಿಕೊಂಡರು. ಭಾರತ ಭೇಟಿ ಕುರಿತು ಮಾತನಾಡಿದ ಅವರು, ಭಾರತೀಯ ಪ್ರಜೆಗಳಿಗೆ ವೀಸಾ ನಿಯಮಗಳನ್ನು ಸಡಿಲಿಸುವುದನ್ನು ತಳ್ಳಿಹಾಕಿದ್ದಾರೆ. ಮುಂಬೈಗೆ ವಿಮಾನದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಸ್ಟಾರ್ಮರ್, ಭಾರತೀಯ ಕಾರ್ಮಿಕರಿಗೆ ಹೆಚ್ಚಿನ

ಭಾರತೀಯರಿಗೆ ವೀಸಾ ನಿಯಮಗಳನ್ನು ಸಡಿಲಿಸುವುದಿಲ್ಲ-ಬ್ರಿಟನ್ ಪ್ರಧಾನಿ Read More »

ಕರಾವಳಿ

ಸ್ಮಗ್ಲಿಂಗ್ ಪ್ರಕರಣ: ನಟ ಮಮ್ಮುಟ್ಟಿ, ದುಲ್ಕರ್ ಸಲ್ಮಾನ್ ಮನೆ ಮೇಲೆ ಇಡಿ ದಾಳಿ

(ನ್ಯೂಸ್‌ ಕಡಬ) newskadaba.com,  ಅ.08: ಭೂತಾನ್ ವಾಹನಗಳ ಅಕ್ರಮ ಕಳ್ಳಸಾಗಣೆ ಪ್ರಕರಣದಡಿ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಮಲಯಾಳಂ ನಟ ಮಮ್ಮುಟಿ, ದುಲ್ಕರ್ ಸಲ್ಮಾನ್, ಪೃಥ್ವಿರಾಜ್ ಹಾಗೂ ಅಮಿತ್ ಚಕ್ಕಲಕಲ್ ಮನೆ ಮೇಲೆ ದಾಳಿ ಮಾಡಿದ್ದಾರೆ. ಚೆನ್ನೈನಲ್ಲಿರುವ ಮಮ್ಮುಟ್ಟಿ ಅವರ ಚಲನಚಿತ್ರ ನಿರ್ಮಾಣ ಕಂಪನಿ, ಅವರ ಮನೆಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ, ಶೋಧ ಕಾರ್ಯ ನಡೆಸಿದ್ದಾರೆ. ಇನ್ನು ದುಲ್ಕರ್ ಸಲ್ಮಾನ್ ಅವರ ಕಚೇರಿ, ನಿವಾಸ, ಪೃಥ್ವಿರಾಜ್ ಸುಕುಮಾರ್ ಅವರ ಮನೆ, ನಟ ಅಮಿತ್ ಚಕ್ಕಲಕಲ್ ಅವರ

ಸ್ಮಗ್ಲಿಂಗ್ ಪ್ರಕರಣ: ನಟ ಮಮ್ಮುಟ್ಟಿ, ದುಲ್ಕರ್ ಸಲ್ಮಾನ್ ಮನೆ ಮೇಲೆ ಇಡಿ ದಾಳಿ Read More »

ಕರಾವಳಿ

ಮಧ್ಯಪ್ರದೇಶದಲ್ಲಿ ಕೆಮ್ಮಿನ ಸಿರಪ್ ಸೇವಿಸಿ ಮತ್ತೆ 6 ಮಕ್ಕಳು ಮೃತ್ಯು; ಸಾವಿನ ಸಂಖ್ಯೆ 20ಕ್ಕೆ ಏರಿಕೆ

(ನ್ಯೂಸ್‌ ಕಡಬ) newskadaba.com,  ಅ.08: ಮಧ್ಯಪ್ರದೇಶದಲ್ಲಿ ಮಾರಕ ಕೆಮ್ಮಿನ ಸಿರಪ್ ಸೇವಿಸಿ ಕಿಡ್ನಿ ವೈಫಲ್ಯವಾಗಿ ಚಿಕಿತ್ಸೆ ಪಡೆಯುತ್ತಿದ್ದವರ ಪೈಕಿ ಮತ್ತೆ 6 ಮಕ್ಕಳು ಮೃತಪಟ್ಟಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಸಾವನ್ನಪ್ಪಿದ ಮಕ್ಕಳ ಸಂಖ್ಯೆ 20ಕ್ಕೆ ಏರಿಕೆಯಾಗಿದೆ. ಈ ಮೊದಲು ಮಧ್ಯಪ್ರದೇಶದ ಛಿಂದ್ವಾಡದ 14 ಮಕ್ಕಳು ವಿಷಕಾರಿ ಕೆಮ್ಮಿನ ಸಿರಪ್ ಸೇವಿಸಿದ್ದರಿಂದ ಸಾವನ್ನಪ್ಪಿದ್ದಾರೆ ಎಂದು ಸರ್ಕಾರ ದೃಢಪಡಿಸಿತ್ತು. ಬಳಿಕ ಮತ್ತೆ ಅ.7ರಂದು ಛಿಂದ್ವಾಡದಲ್ಲಿ 4 ಹಾಗೂ ಬೇತುಲ್‌ನಲ್ಲಿ 2 ಮಕ್ಕಳು ಮೃತಪಟ್ಟಿದ್ದಾರೆ. ಇನ್ನೂ 6 ಮಕ್ಕಳು ಆಸ್ಪತ್ರೆಗಳಲ್ಲಿ ಚಿಕಿತ್ಸೆ

ಮಧ್ಯಪ್ರದೇಶದಲ್ಲಿ ಕೆಮ್ಮಿನ ಸಿರಪ್ ಸೇವಿಸಿ ಮತ್ತೆ 6 ಮಕ್ಕಳು ಮೃತ್ಯು; ಸಾವಿನ ಸಂಖ್ಯೆ 20ಕ್ಕೆ ಏರಿಕೆ Read More »

ಕರಾವಳಿ

ರೆಸ್ಟೋರೆಂಟ್ ಮಾಲೀಕರ ಮೇಲೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನಿಂದ ಗುಂಡಿನ ದಾಳಿ

(ನ್ಯೂಸ್‌ ಕಡಬ) newskadaba.com,  ಅ.08: ಬಿಷ್ಣೋಯ್ ಗ್ಯಾಂಗ್‌ನ ಸಹಾಯಕ ವ್ಯಕ್ತಿಯೊಬ್ಬರ ಮೇಲೆ ಸುಲಿಗೆ ಆರೋಪ ಹೊರಿಸಿದ ಕೇವಲ ಎರಡು ದಿನಗಳ ನಂತರ ನಡೆದ ಹೊಸ ದಾಳಿಗಳು ವರದಿಯಾಗಿದೆ. ಗುಂಡಿನ ದಾಳಿಯ ಸ್ವಲ್ಪ ಸಮಯದ ನಂತರ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಪರಿಚಿತ ಸಹಚರ ಗೋಲ್ಡಿ ಧಿಲ್ಲೋನ್ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಒಂದನ್ನು ಹಾಕಿದ್ದಾನೆ. ಅದರಲ್ಲಿ ಆತ, ರೆಸ್ಟೋರೆಂಟ್ ಮಾಲೀಕರು ಉದ್ಯೋಗಿಗಳಿಗೆ ಕಿರುಕುಳ ನೀಡುತ್ತಿದ್ದಾರೆ ಮತ್ತು ಅವರ ಸಂಬಳವನ್ನು ನೀಡಲು ವಿಫಲರಾಗಿದ್ದಾರೆ ಎಂದು ಆರೋಪಿಸಿದ್ದಾನೆ. ಅಕ್ಟೋಬರ್ 6 ರಂದು, ರಾಷ್ಟ್ರೀಯ

ರೆಸ್ಟೋರೆಂಟ್ ಮಾಲೀಕರ ಮೇಲೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನಿಂದ ಗುಂಡಿನ ದಾಳಿ Read More »

ಕರಾವಳಿ

ಇಂದಿನ ಚಿನ್ನದ ದರ; ಇಂದಿನ ರೇಟ್‌ ಚೆಕ್‌ ಮಾಡಿ

(ನ್ಯೂಸ್‌ ಕಡಬ) newskadaba.com,  ಅ.08: ಬೆಂಗಳೂರು: ಚಿನ್ನದ ಬೆಲೆಯಲ್ಲಿ ಇಂದು ಸಹ ಭಾರೀ ಏರಿಕೆ (Oct 08-2025)ಯಾಗಿದೆ. 22ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 105 ರೂ. ಏರಿಕೆ ಕಂಡಿದ್ದು, 11,290 ರೂ. ಆಗಿದೆ. 24 ಕ್ಯಾರಟ್‌ 1  ಗ್ರಾಂ ಚಿನ್ನದ ದರದಲ್ಲಿ 115 ರೂ. ಏರಿಕೆ ಕಂಡು, 12,317 ರೂ ಆಗಿದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನ 90,320 ರೂ. ಬಾಳಿದರೆ, 10 ಗ್ರಾಂಗೆ ನೀವು 1,12,900 ಹಾಗೂ 100 ಗ್ರಾಂಗೆ 11,29,000 ರೂ. ನೀಡಬೇಕಾಗುತ್ತದೆ.

ಇಂದಿನ ಚಿನ್ನದ ದರ; ಇಂದಿನ ರೇಟ್‌ ಚೆಕ್‌ ಮಾಡಿ Read More »

ಕರಾವಳಿ

ಮಾಜಿ ಪ್ರಧಾನಿ ದೇವೇಗೌಡ ಆಸ್ಪತ್ರೆಗೆ ದಾಖಲು

(ನ್ಯೂಸ್‌ ಕಡಬ) newskadaba.com,  ಅ.08: ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಪ್ರಧಾನಮಂತ್ರಿ ಮತ್ತು ಜನತಾ ದಳ (ಜಾತ್ಯತೀತ) ಮುಖ್ಯಸ್ಥ ಹೆಚ್‌ಡಿ ದೇವೇಗೌಡ ಅವರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದುಬಂದಿದೆ. ತೀವ್ರ ಅಸ್ವಸ್ಥತೆಯಿಂದಾಗಿ ದೇವೇಗೌಡ ಅವರು ಸೋಮವಾರ ರಾತ್ರಿ ನಗರದ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಅವರ ಆರೋಗ್ಯ ಸ್ಥಿರವಾಗಿದ್ದು, ತೀವ್ರ ನಿಗಾ ಘಟಕದಲ್ಲಿ ತಜ್ಞ ವೈದ್ಯರ ತಂಡ ಅವರಿಗೆ ಚಿಕಿತ್ಸೆ ನೀಡುತ್ತಿದೆ ಎಂದು ವರದಿಗಳಿಂದ ತಿಳಿದುಬಂದಿದೆ. ದೇವೇಗೌಡ ಅವರ ಆರೋಗ್ಯ ಸ್ಥಿರವಾಗಿದೆ, ಒಂದು ಅಥವಾ ಎರಡು ದಿನಗಳಲ್ಲಿ

ಮಾಜಿ ಪ್ರಧಾನಿ ದೇವೇಗೌಡ ಆಸ್ಪತ್ರೆಗೆ ದಾಖಲು Read More »

ಕರಾವಳಿ
Scroll to Top