News Kadaba

‘ಸಂಗೋನ್ ಮುಗ್ಧಾನ ಕಲಾವಿದೆರ್’ ತಂಡದ ಸ್ಥಾಪಕ ಕಲಾವಿದರಾದ ಸುನಿಲ್ ಪಿಂಟೋ ನಿಧನ

(ನ್ಯೂಸ್‌ ಕಡಬ) newskadaba.com,  ಸೆ. 30 ಹಾಸನ : ಜನಪ್ರಿಯ ಕೊಂಕಣಿ ನಟ ಸುನಿಲ್ ಪಿಂಟೋ(47) ಅವರು ಸೋಮವಾರ ಸಂಜೆ ಹೊಸಪೇಟೆಯ ತಮ್ಮ ಕೃಷಿ ಜಮೀನಿನಲ್ಲಿರುವಾಗ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.ಸುನಿಲ್ ಅವರು ಯುವಕನಾಗಿರುವಾಗಲೇ ಮನರಂಜನಾ ಲೋಕಕ್ಕೆ ಪ್ರವೇಶಿಸಿ, ನಾಟಕಗಳು ಮತ್ತು ಹಾಸ್ಯ ಸರಣಿಗಳಲ್ಲಿ ಸಕ್ರಿಯವಾಗಿ ಅಭಿನಯಿಸಿದ್ದರು. ಬಳಿಕ ದುಬೈಗೆ ತೆರಳಿದ ನಂತರ, ಅವರು ಮೂಡಬಿದಿರೆಯ ‘ಉದೆಂತಿಚೆ ನೆಕೆತ್ರಾಂ’ ತಂಡದ ಸದಸ್ಯರಾದರು. ಅಲ್ಲಿ ಪ್ರದೀಪ್ ಬಾರ್ಬೋಜಾ ನಿರ್ದೇಶನದ ನಾಟಕಗಳಲ್ಲಿ ಅಭಿನಯಿಸುವ ಅವಕಾಶ ಪಡೆದರು. ರಂಗಭೂಮಿಯ ಮೇಲಿನ ಅವರ ಈ ಪ್ರೀತಿಯೇ […]

‘ಸಂಗೋನ್ ಮುಗ್ಧಾನ ಕಲಾವಿದೆರ್’ ತಂಡದ ಸ್ಥಾಪಕ ಕಲಾವಿದರಾದ ಸುನಿಲ್ ಪಿಂಟೋ ನಿಧನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ

ಹಾಸನದ ಮನೆಯೊಂದರಲ್ಲಿ ನಿಗೂಢ ಸ್ಫೋಟ: ದಂಪತಿಗೆ ಗಂಭೀರ ಗಾಯ

(ನ್ಯೂಸ್‌ ಕಡಬ) newskadaba.com,  ಸೆ. 30 ಹಾಸನ: ಮನೆಯೊಂದರಲ್ಲಿ ನಿಗೂಢ ಸ್ಫೋಟ ಸಂಭವಿಸಿ ದಂಪತಿ ಗಂಭೀರವಾಗಿ ಗಾಯಗೊಂಡ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ಸೋಮವಾರ(ಸೆ.29) ರಾತ್ರಿ ಈ ಘಟನೆ ನಡೆದಿದೆ .ಮನೆಯೊಂದರಲ್ಲಿ ನಿಗೂಢ ಸ್ಫೋಟ ಸಂಭವಿಸಿದ ಘಟನೆ ಹಾಸನ ಜಿಲ್ಲೆ, ಆಲೂರು ತಾಲೂಕಿನ ಹಳೇಆಲೂರು ಗ್ರಾಮದಲ್ಲಿ ನಡೆದಿದೆ. ಇನ್ನೂ ಈ  ವೇಳೆ ಸ್ಫೋಟದಿಂದ ಗಾಯಗೊಂಡ ದಂಪತಿಯನ್ನು ಸುದರ್ಶನ್ ಆಚಾರ್ (32) ಹಾಗೂ ಕಾವ್ಯ (27) ಎಂದು ಗುರುತಿಸಲಾಗಿದೆ. ಸ್ಪೋಟ ಸಂಭವಿಸುತ್ತಿದ್ದಂತೆ ಅಕ್ಕಪಕ್ಕದಲ್ಲಿನ ಮನೆಯವರು ಭಯಭೀತರಾಗಿದ್ದಾರೆ ಎಂದು ತಿಳಿದುಬಂದಿದೆ. ನಿನ್ನೆ

ಹಾಸನದ ಮನೆಯೊಂದರಲ್ಲಿ ನಿಗೂಢ ಸ್ಫೋಟ: ದಂಪತಿಗೆ ಗಂಭೀರ ಗಾಯ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸಾಫ್ಟ್‌ವೇರ್ ಎಂಜಿನಿಯರ್ ಒಬ್ಬ ಹೆಂಡತಿಯನ್ನು ಕೊಲೆ ಮಾಡಿ ತಾನೂ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಟೆಕ್ಕಿ!

(ನ್ಯೂಸ್‌ ಕಡಬ) newskadaba.com,  ಸೆ. 30 ಚಂಡೀಗಡ: ಗುರುಗ್ರಾಮದಲ್ಲಿ ಒಬ್ಬ ತನ್ನ ಹೆಂಡತಿಯೊಂದಿಗೆ ಜಗಳವಾಡಿ ಬಳಿಕ ಕತ್ತು ಹಿಸುಕಿ ಕೊಂದು ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.ಪತ್ನಿ ಕೊಲೆ ಮಾಡಿದ ಬಳಿಕ ಆರೋಪಿ ಅಜಯ್ ಕುಮಾರ್ (30) ತನ್ನ ಸ್ನೇಹಿತನಿಗೆ ವೀಡಿಯೊ ಸಂದೇಶ ಕಳುಹಿಸಿ, ತಾನು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ತಿಳಿಸಿದ್ದ. ಕೊನೆಗೆ ಆತ್ಮಹತ್ಯೆಗೆ ಶರಣಾಗಿದ್ದಾನೆ. ಉತ್ತರ ಪ್ರದೇಶದ ಪ್ರಯಾಗ್‌ರಾಜ್ ನಿವಾಸಿ ಕುಮಾರ್ ಮತ್ತು ಪಶ್ಚಿಮ ಬಂಗಾಳದ ಅಸನ್ಸೋಲ್ ನಿವಾಸಿ ಸ್ವೀಟಿ ಶರ್ಮಾ (28) 3

ಸಾಫ್ಟ್‌ವೇರ್ ಎಂಜಿನಿಯರ್ ಒಬ್ಬ ಹೆಂಡತಿಯನ್ನು ಕೊಲೆ ಮಾಡಿ ತಾನೂ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಟೆಕ್ಕಿ! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

‘ಮನಸ್ಸಿನಿಂದ ಮಾತನಾಡಬೇಕು, ಹೀಗಾಗಿ ನಾನು ಕನ್ನಡದಲ್ಲೇ ಮಾತನಾಡುತ್ತೇನೆ’; ಹೈದರಾಬಾದ್ ನ ವೇದಿಕೆ ಮೇಲೆ ಎಲ್ಲರ ಗಮನ ಸೆಳೆದ ರಿಷಬ್ ಶೆಟ್ಟಿ

(ನ್ಯೂಸ್‌ ಕಡಬ) newskadaba.com,  ಸೆ. 30 ಹೈದರಬಾದ್‌: ರಿಷಬ್ ಶೆಟ್ಟಿ ನಟನೆಯ ‘ಕಾಂತಾರ: ಚಾಪ್ಟರ್ 1’ ಸಿನಿಮಾ ರಿಲೀಸ್​ಗೆ ಸಜ್ಜಾಗಿದೆ. ದೇಶಾದ್ಯಂತ 6 ಸಾವಿರಕ್ಕೂ ಚಿತ್ರಮಂದಿರಗಳಲ್ಲಿ ಸಿನಿಮಾ ಬಿಡುಗಡೆ ಕಾಣಲಿದೆ.ಈ ಸಿನಿಮಾದ ಬಜೆಟ್ 150 ಕೋಟಿ ರೂಪಾಯಿ ಮೀರಿದೆ ಎಂದು ಹೇಳಲಾಗುತ್ತಿದೆ. ಈ ಚಿತ್ರದ ಪ್ರಚಾರ ಕಾರ್ಯ ಭರದಿಂದ ಸಾಗುತ್ತಿದೆ. ರಿಷಬ್ ಶೆಟ್ಟಿ ಹಾಗೂ ತಂಡ ಹೈದರಾಬಾದ್​​​ಗೆ ತೆರಳಿ ಸಿನಿಮಾ ಪ್ರಚಾರ ಮಾಡಿದೆ. ಈ ಸಂದರ್ಭದಲ್ಲಿ ವೇದಿಕೆ ಮೇಲೆ ರಿಷಬ್ ಅವರು ಕನ್ನಡದಲ್ಲೇ ಮಾತನಾಡಿದರು ಅನ್ನೋದು ವಿಶೇಷ.

‘ಮನಸ್ಸಿನಿಂದ ಮಾತನಾಡಬೇಕು, ಹೀಗಾಗಿ ನಾನು ಕನ್ನಡದಲ್ಲೇ ಮಾತನಾಡುತ್ತೇನೆ’; ಹೈದರಾಬಾದ್ ನ ವೇದಿಕೆ ಮೇಲೆ ಎಲ್ಲರ ಗಮನ ಸೆಳೆದ ರಿಷಬ್ ಶೆಟ್ಟಿ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್, ಸಿನಿಮಾ

ನಂಬರ್ ಪ್ಲೇಟ್ ಇಲ್ಲದ ವಾಹನಗಳನ್ನು ರಸ್ತೆಗೆ ಇಳಿಸಿದ್ರೆ ಸೆಕ್ಷನ್ 420 ಅಡಿಯಲ್ಲಿ ವಂಚನೆ ಪ್ರಕರಣ ದಾಖಲೆ

(ನ್ಯೂಸ್‌ ಕಡಬ) newskadaba.com,  ಸೆ. 30 ಬೆಂಗಳೂರು :  ನಂಬರ್ ಪ್ಲೇಟ್ ಇಲ್ಲದೇ ವಾಹನ ರಸ್ತೆಗಿಳಿಸಿದ್ರೆ ಸೆಕ್ಷನ್ 420 ಅಡಿ ಕೇಸ್ ದಾಖಲಿಸಲು ಬೆಂಗಳೂರು ಪೊಲೀಸರು ಮುಂದಾಗಿದ್ದಾರೆ.ನಂಬರ್ ಪ್ಲೇಟ್ ಇಲ್ಲದ ವಾಹನಗಳನ್ನು ಸೀಜ್ ಮಾಡಲಾಗುತ್ತಿದೆ. ಕೆಲವರು ಸಂಚಾರಿ ನಿಯಮ ಉಲ್ಲಂಘನೆ ಮರೆಮಾಚಲು, ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುವ ಕೆಲ ಪುಂಡರು ವಾಹನಗಳಿಗೆ ನಂಬರ್ ಪ್ಲೇಟ್ ಹಾಕದೆ, ನಂಬರ್ ಪ್ಲೇಟ್ ವಿಕಾರಗೊಳಿಸಿ ಓಡಾಡುತ್ತಿದ್ದಾರೆ. ಅಂತವರನ್ನು ಮಟ್ಟ ಹಾಕಲು ಪೊಲೀಸರು ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ. ಪಶ್ಚಿಮ ವಿಭಾಗ ಒಂದರಲ್ಲೇ 40ಕ್ಕೂ ಹೆಚ್ಚು

ನಂಬರ್ ಪ್ಲೇಟ್ ಇಲ್ಲದ ವಾಹನಗಳನ್ನು ರಸ್ತೆಗೆ ಇಳಿಸಿದ್ರೆ ಸೆಕ್ಷನ್ 420 ಅಡಿಯಲ್ಲಿ ವಂಚನೆ ಪ್ರಕರಣ ದಾಖಲೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಆನೇಕಲ್‌ನಲ್ಲಿ ಅಮಾನವೀಯ ಕೃತ್ಯ; ವರದಕ್ಷಿಣೆಗಾಗಿ ಮಹಿಳೆಗೆ ಕಿರುಕುಳ

(ನ್ಯೂಸ್‌ ಕಡಬ) newskadaba.com,  ಸೆ.29 ಬೆಂಗಳೂರು: ರಾಜ್ಯದಲ್ಲಿ ಅಮಾನವೀಯ ಘಟನೆಯೊಂದು ನಡೆದಿದೆ. ವರದಕ್ಷಿಣೆಗಾಗಿ ಮಹಿಳೆಗೆ ಕಿರುಕುಳ ನೀಡಿರುವ ಪತಿಯ ಮನೆಯರು, ಆಕೆಯ ಕೂದಲು ಹಿಡಿದು ಎಳೆದಾಡಿ ಕಾಲಿನಿಂದ ಒದ್ದು ಭೀಕರವಾಗಿ ಹಲ್ಲೆ ಮಾಡಿದ್ದಾರೆ. ಆನೇಕಲ್‌ನ ನಾರಾಯಣಪುರದಲ್ಲಿ ಈ ನಡೆದಿದೆ. ಆನೇಕಲ್ ಪಟ್ಟಣದ ನಾರಾಯಣಪುರದಲ್ಲಿ ಪತಿ ಅರುಣ್, ಅತ್ತೆ ಪ್ರಭಾವತಿ, ಮಾವ ಚೌಡಪ್ಪ ಮೂವರು ಸೇರಿಕೊಂಡು ಮಹಿಳೆಯ ಮೇಲೆ ಹಲ್ಲೆ ಮಾಡಿದ್ದಾರೆ.5 ವರ್ಷಗಳ ಹಿಂದೆ ಅರುಣ್ ಜತೆ ಶ್ರೀಲಜಾ ಮದುವೆಯಾಗಿದ್ದರು. ದಂಪತಿಗೆ 4 ವರ್ಷದ ಹೆಣ್ಣು ಮಗು ಕೂಡ ಇದೆ.

ಆನೇಕಲ್‌ನಲ್ಲಿ ಅಮಾನವೀಯ ಕೃತ್ಯ; ವರದಕ್ಷಿಣೆಗಾಗಿ ಮಹಿಳೆಗೆ ಕಿರುಕುಳ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಣ್ಮರೆಯಾಗಿದ್ದ ಬಂಟ್ವಾಳದ ಉದ್ಯಮಿ ಮಂತ್ರಾಲಯದಲ್ಲಿ ಪತ್ತೆ; ಸುರಕ್ಷಿತವಾಗಿ ಮನೆಗೆ ಕರೆತಂದ ಪೊಲೀಸರು

(ನ್ಯೂಸ್‌ ಕಡಬ) newskadaba.com,  ಸೆ.29 ಬಂಟ್ವಾಳ: ಮನೆಯಲ್ಲಿ ಮೊಬೈಲ್ ಫೋನ್ ಇಟ್ಟು ನಾಪತ್ತೆಯಾಗಿದ್ದ ಉದ್ಯಮಿಯೊಬ್ಬರು ಮಂತ್ರಾಲಯ ದೇವಸ್ಥಾನದ ಬಳಿ ಪತ್ತೆಯಾಗಿದ್ದು, ಬಳಿಕ ಪೊಲೀಸರು ಅವರನ್ನು ಸುರಕ್ಷಿತವಾಗಿ ಮನೆಗೆ ಕರೆತಂದಿದ್ದಾರೆ.ನಾಪತ್ತೆಯಾಗಿದ್ದ ವ್ಯಕ್ತಿಯನ್ನು ಬಂಟ್ವಾಳ ತಾಲೂಕಿನ ಸಜಿಪನಡದ ಕಂದೂರು ನಿವಾಸಿ, ಸದಾನಂದ (50) ಎಂದು ಗುರುತಿಸಲಾಗಿದೆ. ಅವರು ಕಂದೂರಿನಲ್ಲಿ ಎಸ್.ಕೆ. ಸುವರ್ಣ ಸೌಂಡ್ಸ್ ಅಂಡ್ ಲೈಟಿಂಗ್ ಅಂಗಡಿಯ ಮಾಲೀಕರಾಗಿದ್ದಾರೆ. ಸೆಪ್ಟೆಂಬರ್ 16ರಂದು ಸಂಜೆ 4:30ರ ಸುಮಾರಿಗೆ ಸದಾನಂದ ಅವರು ತಮ್ಮ ಮೊಬೈಲ್ ಫೋನ್ ಅನ್ನು ಮನೆಯ ಬಳಿ ಇರುವ ಟೆಂಪೋದಲ್ಲಿ

ಕಣ್ಮರೆಯಾಗಿದ್ದ ಬಂಟ್ವಾಳದ ಉದ್ಯಮಿ ಮಂತ್ರಾಲಯದಲ್ಲಿ ಪತ್ತೆ; ಸುರಕ್ಷಿತವಾಗಿ ಮನೆಗೆ ಕರೆತಂದ ಪೊಲೀಸರು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಸೈಂಟ್ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನ ಶರಧಿ ರೈ ರಾಷ್ಟ್ರ ಮಟ್ಟದ ಚೆಸ್ ಸ್ಪರ್ಧೆಗೆ ಆಯ್ಕೆ

(ನ್ಯೂಸ್‌ ಕಡಬ) newskadaba.com,  ಸೆ.29 ನವದೆಹಲಿ : ಬೆಂಗಳೂರಿನ ಶ್ರೀ ಸಾಯಿ ರಾಮ್ ಕಾಲೇಜ್ ಆಫ್ ಎಂಜಿನಿಯರಿಂಗ್ ಆನೇಕಲ್ ನಲ್ಲಿ ನಡೆದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಮಹಿಳೆಯರ ಚೆಸ್ ಪಂದ್ಯಾಟದ ಆಯ್ಕೆ ಪ್ರಕ್ರಿಯೆಯಲ್ಲಿ ಶರಧಿ ರೈ ರಾಷ್ಟ್ರ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ. ಶರಧಿ ರೈ ಅವರು ಆಶಾ ದಿಲೀಪ್ ರೈ ಸುಳ್ಯ ಮೆ ದಂಪತಿ ಪುತ್ರಿ. ಅವರು ಶ್ರೀವಾಣಿ ವಿಜಯ ಹೈ ಸ್ಕೂಲ್ ಕೊಡ್ಲಮೊಗರಿನ ಹಳೆ ವಿದ್ಯಾರ್ಥಿನಿಯಾಗಿದ್ದಾರೆ.   .  

ಮಂಗಳೂರು: ಸೈಂಟ್ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನ ಶರಧಿ ರೈ ರಾಷ್ಟ್ರ ಮಟ್ಟದ ಚೆಸ್ ಸ್ಪರ್ಧೆಗೆ ಆಯ್ಕೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಭಾರತೀಯ ರಿಸರ್ವ್ ಬ್ಯಾಂಕ್‌‌ನ ನೂತನ ಉಪ ಗವರ್ನರ್ ಆಗಿ ಶಿರೀಶ್ ಚಂದ್ರ ಮುರ್ಮು ನೇಮಕ

(ನ್ಯೂಸ್‌ ಕಡಬ) newskadaba.com,  ಸೆ.29 ನವದೆಹಲಿ : ಆರ್‌ಬಿಐ ಉಪಗವರ್ನರ್ ಆಗಿ 3 ವರ್ಷಗಳ ಅವಧಿಗೆ ಶಿರೀಶ್ ಚಂದ್ರ ಮುರ್ಮು ಅವರನ್ನು ನೇಮಕ ಮಾಡಲಾಗಿದೆ.. ಸದ್ಯ ಆರ್‌ಬಿಐ ಉಪಗವರ್ನರ್ ಆಗಿರುವ ರಾಜೇಶ್ವರ್ ರಾವ್ ಅವರ ಅವಧಿ ಅ.8ರಂದು ಕೊನೆಗೊಳ್ಳಲಿದ್ದು, ಅದಾದ ನಂತರ  ಅ.9ರಿಂದ ನೂತನ ಉಪಗವರ್ನರ್ ಆಗಿ ಶಿರೀಶ್ ಚಂದ್ರ ಮುರ್ಮು ಅಧಿಕಾರ ಸ್ವೀಕರಿಸಲಿದ್ದಾರೆ. ಪ್ರಸ್ತುತ ಆರ್‌ಬಿಐನಲ್ಲಿ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.  

ಭಾರತೀಯ ರಿಸರ್ವ್ ಬ್ಯಾಂಕ್‌‌ನ ನೂತನ ಉಪ ಗವರ್ನರ್ ಆಗಿ ಶಿರೀಶ್ ಚಂದ್ರ ಮುರ್ಮು ನೇಮಕ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬೆಂಗಳೂರಿನಲ್ಲಿ ಘೋರ ದುರಂತ, ಕೆರೆಯಲ್ಲಿ ಮುಳುಗಿ ಇಬ್ಬರು ಬಲಿ

(ನ್ಯೂಸ್‌ ಕಡಬ) newskadaba.com,  ಸೆ.29 ಬೆಂಗಳೂರು : ಬೆಂಗಳೂರಿನಲ್ಲಿ ನಿನ್ನೆ ಘೋರವಾದ ದುರಂತ ಒಂದು ಸಂಭವಿಸಿದ್ದು, ಮೀನಿಗೆ ಬಲೆ ಹಾಕಲು ಹೋಗಿ ಕೆರೆಯಲ್ಲಿ ಮುಳುಗಿ ಇಬ್ಬರು ಸಾವನಪ್ಪಿದ್ದಾರೆ. ಬೆಂಗಳೂರು ಹೊರವಲಯದ ಹೆಸರಘಟ್ಟದ ಕೆರೆಯಲ್ಲಿ ಈ ಘಟನೆ ನಡೆದಿದೆ. ಕೆರೆಯಲ್ಲಿ ಮುಳುಗಿ ಮೃತಪಟ್ಟವರನ್ನು ಆನಂದ (32) ಹಾಗೂ ಅನಂತ (27) ಎಂದು ಗುರುತಿಸಲಾಗಿದೆ. ಮೀನಿಗೆ ಬಲೆ ಹಾಕಲು ಇಬ್ಬರು ತೆಪ್ಪದಲ್ಲಿ ಕೆರೆಯ ಮಧ್ಯೆ ತೆರಳಿದ್ದಾರೆ. ಕೆರೆಯ ಮಧ್ಯದಲ್ಲಿ ತೆಪ್ಪದ ಹುಟ್ಟು ಕೈ ತಪ್ಪಿ ಕೆರೆಗೆ ಬಿದ್ದಿತ್ತು. ಈ ಸಂದರ್ಭದಲ್ಲಿ ಆನಂದ

ಬೆಂಗಳೂರಿನಲ್ಲಿ ಘೋರ ದುರಂತ, ಕೆರೆಯಲ್ಲಿ ಮುಳುಗಿ ಇಬ್ಬರು ಬಲಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top