News Kadaba

ಉಡುಪಿ : ಅಕ್ಟೋಬರ್ ನಿಂದ ಹೊಸ ಪಡಿತರ ಚೀಟಿಗಳಿಗೆ ಅರ್ಜಿ ಸಲ್ಲಿಸಲು ರಾಜ್ಯ ಸರ್ಕಾರ ಅವಕಾಶ..!

(ನ್ಯೂಸ್‌ ಕಡಬ) newskadaba.com,  ಸೆ.27 ಉಡುಪಿ: ಅಕ್ಟೋಬರ್ ನಿಂದ ಹೊಸ ಪಡಿತರ ಚೀಟಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಎಚ್. ​​ಮುನಿಯಪ್ಪ ಶುಕ್ರವಾರ ಹೇಳಿದರು. ಉಡುಪಿಯಲ್ಲಿ ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ ಅವರು, ಎನ್‌ಎಫ್‌ಎಸ್‌ಎ ಅಡಿಯಲ್ಲಿ ಫಲಾನುಭವಿಗಳ ಇತ್ತೀಚಿನ ಸಮೀಕ್ಷೆಯ ವೇಳೆ 7.70 ಲಕ್ಷ ಪಡಿತರ ಚೀಟಿಗಳನ್ನು ಅನರ್ಹರೆಂದು ಗುರುತಿಸಲಾಗಿದೆ. ಕರ್ನಾಟಕದಲ್ಲಿ ಈ 7.70 ಲಕ್ಷ ಪಡಿತರ ಚೀಟಿದಾರರನ್ನು ಬಿಪಿಎಲ್ ವರ್ಗದಿಂದ ಎಪಿಎಲ್‌ಗೆ ಬದಲಾಯಿಸಲಾಗುತ್ತದೆ ಎಂದು ಹೇಳಿದರು. ಹಿಂದಿನ […]

ಉಡುಪಿ : ಅಕ್ಟೋಬರ್ ನಿಂದ ಹೊಸ ಪಡಿತರ ಚೀಟಿಗಳಿಗೆ ಅರ್ಜಿ ಸಲ್ಲಿಸಲು ರಾಜ್ಯ ಸರ್ಕಾರ ಅವಕಾಶ..! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಏಷ್ಯಾ ಕಪ್ 2025ರ ಪಾಕಿಸ್ತಾನ ವಿರುಧ್ಧದ ಬಹುನಿರೀಕ್ಷಿತ ಫೈನಲ್‌ಗೂ ಮುನ್ನ ಭಾರತಕ್ಕೆ ಆತಂಕ; ಸ್ಟಾರ್‌ ಆಲ್‌ರೌಂಡರ್‌ಗೆ ಗಾಯ

(ನ್ಯೂಸ್‌ ಕಡಬ) newskadaba.com,  ಸೆ.27 ದುಬೈ: ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಶ್ರೀಲಂಕಾ ವಿರುದ್ಧದ ಭಾರತದ ಪಂದ್ಯದಲ್ಲಿ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಕೇವಲ ಒಂದು ಓವರ್ ಬೌಲಿಂಗ್ ಮಾಡಿ ಮೈದಾನದಿಂದ ಹೊರನಡೆದಿದ್ದರು. ಇಈಗ ಅವರು ಫೈನಲ್‌ನಲ್ಲಿ ಆಡಲಿದ್ದಾರಾ ಎಂಬ ಅನುಮಾನ ಮೂಡಿದೆ. ಶ್ರೀಲಂಕಾದ ಚೇಸಿಂಗ್‌ ವೇಳೆ ಭಾರತ ಪರ ಮೊದಲ ಓವರ್‌ ಎಸೆದಿದ್ದ ಪಾಂಡ್ಯ ಈ ಓವರ್‌ನಲ್ಲಿಯೇ ಪಾಂಡ್ಯ ಶ್ರೀಲಂಕಾದ ಆರಂಭಿಕ ಆಟಗಾರ ಕುಶಾಲ್ ಮೆಂಡಿಸ್ ಅವರ ವಿಕೆಟ್ ಪಡೆದಿದರು. ಆದಾಗ್ಯೂ, ಓವರ್‌ನ ಕೊನೆಯ ಎಸೆತದಲ್ಲಿ ತೊಡೆ ನೋವಿನಿಂದ

ಏಷ್ಯಾ ಕಪ್ 2025ರ ಪಾಕಿಸ್ತಾನ ವಿರುಧ್ಧದ ಬಹುನಿರೀಕ್ಷಿತ ಫೈನಲ್‌ಗೂ ಮುನ್ನ ಭಾರತಕ್ಕೆ ಆತಂಕ; ಸ್ಟಾರ್‌ ಆಲ್‌ರೌಂಡರ್‌ಗೆ ಗಾಯ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬಿಕಾಂ, ಎಂಕಾಂ ಪದವಿ ನಂತರ ಬಿಇಡಿ ಮಾಡಿ ಟಿಇಟಿ ಪಾಸಾದರೂ – ನೇಮಕಾತಿಗೆ ಪರಿಗಣಿಸದ ಸರ್ಕಾರ

(ನ್ಯೂಸ್‌ ಕಡಬ) newskadaba.com,  ಸೆ.27 ದಾವಣಗೆರೆ: ಬಿಕಾಂ, ಎಂಕಾಂ ಪದವಿ ನಂತರ ಬಿಇಡಿ ಮಾಡಿ ಶಿಕ್ಷಕರ ಅರ್ಹತಾ ಪರೀಕ್ಷೆ ಪಾಸಾದರೂ ಅವರಿಗೆ ಶಿಕ್ಷಕರಾಗುವ ಅವಕಾಶ ಸರ್ಕಾರ ನೀಡಿಲ್ಲ. ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆ ಶಿಕ್ಷಕರ ನೇಮಕಾತಿಯಲ್ಲಿಇವರನ್ನು ಪರಿಗಣಿಸದೆ ಇರುವ ಕಾರಣಕ್ಕೆ ರಾಜ್ಯಾದ್ಯಂತ ಸುಮಾರು 10 ಸಾವಿರಕ್ಕೂ ಹೆಚ್ಚು ಮಂದಿ ಹತ್ತಾರು ವರ್ಷಗಳಿಂದ ತ್ರಿಶಂಕು ಸ್ಥಿತಿಯಲ್ಲಿ ನರಳುತ್ತಿದ್ದಾರೆ. ”ಬಿಕಾಂ, ಎಂಜಿನಿಯರಿಂಗ್‌ ಪದವೀಧರರಿಗೆ 2015ರಲ್ಲಿಸರ್ಕಾರ ಬಿಇಡಿ ಮಾಡಲು ಅವಕಾಶ ನೀಡಿತು. ನಂತರ 2020ರಲ್ಲಿಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಬರೆಯಲು ಕೂಡ

ಬಿಕಾಂ, ಎಂಕಾಂ ಪದವಿ ನಂತರ ಬಿಇಡಿ ಮಾಡಿ ಟಿಇಟಿ ಪಾಸಾದರೂ – ನೇಮಕಾತಿಗೆ ಪರಿಗಣಿಸದ ಸರ್ಕಾರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಧಾರವಾಡದಲ್ಲಿ ಯುವಕರಿಂದ ಉದ್ಯೋಗಕ್ಕಾಗಿ ಒತ್ತಾಯಿಸಿ ಬೃಹತ್ ಪ್ರತಿಭಟನೆ

(ನ್ಯೂಸ್‌ ಕಡಬ) newskadaba.com,  ಸೆ.27 ಧಾರವಾಡ: ಸರ್ಕಾರವು ತನ್ನ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಬೇಕು ಮತ್ತು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ವಯಸ್ಸಿನ ಮಿತಿಯನ್ನು ಸಡಿಲಿಸಬೇಕೆಂದು ಒತ್ತಾಯಿಸಿ ಬೃಹತ್ ಸಂಖ್ಯೆಯ ಉದ್ಯೋಗ ಆಕಾಂಕ್ಷಿಗಳು, ವಿದ್ಯಾರ್ಥಿಗಳು ಮತ್ತು ಯುವಕರು ಬೀದಿಗಿಳಿದು ಪ್ರತಿಭಟನೆ ನಡೆಸಿದರು. ಯುವಕರ ಗುಂಪೊಂದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್, ಗೃಹ ಸಚಿವ ಜಿ. ಪರಮೇಶ್ವರ ಮತ್ತು ಇತರರ ಚಿತ್ರಗಳನ್ನು ಹರಿದುಹಾಕಿದರು ಆ ಮೂಲಕ, ಸರ್ಕಾರವು ಯುವ ಚಳವಳಿಯನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ

ಧಾರವಾಡದಲ್ಲಿ ಯುವಕರಿಂದ ಉದ್ಯೋಗಕ್ಕಾಗಿ ಒತ್ತಾಯಿಸಿ ಬೃಹತ್ ಪ್ರತಿಭಟನೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಹೊಸಪೇಟೆ: ಅಡುಗೆ ಸಿಲಿಂಡರ್ ಸ್ಫೋಟಗೊಂಡು ಒಂದೇ ಕುಟುಂಬದ 8 ಮಂದಿಗೆ ಗಾಯ

(ನ್ಯೂಸ್‌ ಕಡಬ) newskadaba.com,  ಸೆ.27 ಹೊಸಪೇಟೆ : ತಾಲ್ಲೂಕಿನ ಗಾದಿಗನೂರಿನಲ್ಲಿ ಶನಿವಾರ ಬೆಳಿಗ್ಗೆ 5.15ರ ಸುಮಾರಿಗೆ ಸಿಲಿಂಡರ್ ಸ್ಫೋಟಗೊಂಡು ಮನೆಯಲ್ಲಿದ್ದ 8 ಮಂದಿ ಗಾಯಗೊಂಡಿದ್ದಾರೆ.ಗಾಯಾಳುಗಳನ್ನು ತೋರಣಗಲ್‌ನ ಸಂಜೀವಿನಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕವಿತಾ ಎಂಬುವವರ ಸ್ಥಿತಿ ಗಂಭೀರವಾಗಿದ್ದು, ಉಳಿದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಗ್ರಾಮೀಣ ಠಾಣೆ ಪೊಲೀಸರು ತಿಳಿಸಿದ್ದಾರೆ. ಹೊಸಪೇಟೆ–ಬಳ್ಳಾರಿ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲೇ ವಕೀಲ ಹಾಲಪ್ಪ ಅವರಿಗೆ ಸೇರಿದ ಮನೆಯಾಗಿದೆ. ಮನೆಯಲ್ಲಿ ಸುಮಾರು 10 ಮಂದಿ ಇದ್ದರು. ಬೆಳಿಗ್ಗೆ ಅಡುಗೆ ಅನಿಲ ಸೋರಿಕೆಯ ವಾಸನೆ ಬರುತ್ತಿತ್ತು ಎಂದು ಹೇಳಲಾಗುತ್ತಿದೆ.

ಹೊಸಪೇಟೆ: ಅಡುಗೆ ಸಿಲಿಂಡರ್ ಸ್ಫೋಟಗೊಂಡು ಒಂದೇ ಕುಟುಂಬದ 8 ಮಂದಿಗೆ ಗಾಯ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ : ಮೀಸಲು ಅರಣ್ಯ ಭೂಮಿಯನ್ನು ಅರಣ್ಯಾಧಿಕಾರಿಗಳಿಂದ ಕೃಷಿ ಬೆಳೆ ತೆರವು

(ನ್ಯೂಸ್‌ ಕಡಬ) newskadaba.com,  ಸೆ.27 ಕಡಬ: ಅರಣ್ಯ ಇಲಾಖೆಯ ಜಾಗವನ್ನು ಅತಿಕ್ರಮಿಸಿರುವುದನ್ನು ತೆರವು ಮಾಡುವಂತೆ ಮೇಲ್ಮನವಿ ಪ್ರಾಧಿಕಾರ ಮತ್ತು ಅರಣ್ಯ ಸಂರಕ್ಷಣಾಧಿಕಾರಿ ಮಂಗಳೂರು ವೃತ್ತದ ನಿರ್ದೇಶನದ ಮೇರೆಗೆ ಕಡಬ ತಾಲೂಕಿನ ಏನೆಕಲ್ಲು ಗ್ರಾಮದಲ್ಲಿ ಅತಿಕ್ರಮಣಗೊಂಡಿದ್ದ ಮೀಸಲು ಅರಣ್ಯ ಭೂಮಿಯನ್ನು ಅರಣ್ಯಾಧಿಕಾರಿಗಳು ಶುಕ್ರವಾರ ತೆರವುಗೊಳಿಸಿದ್ದಾರೆ. ವರದಿಗಳ ಪ್ರಕಾರ, ಕುಮಾರ್ ಪಿ. ಎಂಬುವವರು ಏನೆಕಲ್ಲು ಗ್ರಾಮದಲ್ಲಿ 1.44 ಎಕರೆ ಮೀಸಲು ಅರಣ್ಯ ಪ್ರದೇಶವನ್ನು ಅತಿಕ್ರಮಿಸಿ ಕಟ್ಟಡ ನಿರ್ಮಿಸಿದ್ದು, ಕೃಷಿ ಚಟುವಟಿಕೆಗಳನ್ನು ನಡೆಸುತ್ತಿದ್ದರು ಎನ್ನಲಾಗಿದೆ. ಈ ಸಂಬಂಧ ಲೋಕಾಯುಕ್ತಕ್ಕೆ ದೂರು ಸಲ್ಲಿಕೆಯಾದ

ಕಡಬ : ಮೀಸಲು ಅರಣ್ಯ ಭೂಮಿಯನ್ನು ಅರಣ್ಯಾಧಿಕಾರಿಗಳಿಂದ ಕೃಷಿ ಬೆಳೆ ತೆರವು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪುತ್ತೂರು: ಪಡಿತರ ಅಕ್ಕಿ ಮಾರಾಟದ ವಿವಾದ- ಮಗನ ಮೇಲೆ ಹಲ್ಲೆ ನಡೆಸಿ ತಂದೆ ಕಣ್ಮರೆ

(ನ್ಯೂಸ್‌ ಕಡಬ) newskadaba.com,  ಸೆ.27 ಪುತ್ತೂರು: ಪಡಿತರ ಅಕ್ಕಿ ಮಾರಾಟದ ವಿವಾದಕ್ಕೆ ಸಂಬಂಧಿಸಿದಂತೆ ತನ್ನ ಮಗನ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ತಂದೆ ಕೆದಂಬಾಡಿ ಗ್ರಾಮದಿಂದ ನಾಪತ್ತೆಯಾಗಿದ್ದಾರೆ ಎಂದು ಪುತ್ತೂರು ಸಂಪ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕಾಣೆಯಾದ ವ್ಯಕ್ತಿಯನ್ನು ಕೆದಂಬಾಡಿಯ ಇಡಪಾಡಿ ನಿವಾಸಿ ಚೋಮ (65) ಎಂದು ಗುರುತಿಸಲಾಗಿದೆ. ಸೆಪ್ಟೆಂಬರ್ 3 ರಂದು ಸಂಜೆ, ಚೋಮ ತನ್ನ 2ನೇ ಮಗ ರವಿಯೊಂದಿಗೆ ಸೇರಿ, ಪಡಿತರ ಅಕ್ಕಿ ಮಾರಾಟ ಮಾಡುವ ಬಗ್ಗೆ ಪ್ರಶ್ನಿಸಿದ ಬಳಿಕ ತನ್ನ

ಪುತ್ತೂರು: ಪಡಿತರ ಅಕ್ಕಿ ಮಾರಾಟದ ವಿವಾದ- ಮಗನ ಮೇಲೆ ಹಲ್ಲೆ ನಡೆಸಿ ತಂದೆ ಕಣ್ಮರೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದುಬೈ: ಏಷ್ಯಾ ಕಪ್‌ ಇತಿಹಾಸದಲ್ಲಿ ಇಂಡೋ – ಪಾಕಿಸ್ತಾನ ಫೈನಲ್ ಗೆ

(ನ್ಯೂಸ್‌ ಕಡಬ) newskadaba.com,  ಸೆ.26 ದುಬೈ: ಸೂಪರ್ 4 ಪಂದ್ಯದಲ್ಲಿ ಬಾಂಗ್ಲಾದೇಶ ತಂಡಕ್ಕೆ 11 ರನ್‌ಗಳ ಸೋಲುಣಿಸಿದ ಪಾಕಿಸ್ತಾನ ತಂಡ ಏಷ್ಯಾಕಪ್ ಫೈನಲ್ ಪ್ರವೇಶಿಸಿದೆ. ಇದರಿಂದ ಇದೇ ಮೊದಲ ಬಾರಿಗೆ ಟೂರ್ನಿಯ ಇತಿಹಾಸದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಲಿವೆ. 1984ರಲ್ಲಿ ಏಷ್ಯಾ ಕಪ್ ಆರಂಭವಾದ ಬಳಿಕ ಈವರೆಗೆ ಒಟ್ಟು 16 ಬಾರಿ ಉಭಯ ತಂಡಗಳ ನಡುವೆ ಪಂದ್ಯಾವಳಿ ಜರುಗಿದೆ. ಆದ್ರೆ ಈವರೆಗೂ ಕ್ರಿಕೆಟ್‌ನ ಸಾಂಪ್ರದಾಯಿಕ ಎದುರಾಳಿಗಳಾದ ಪಾಕಿಸ್ತಾನ ಮತ್ತು ಭಾರತ ಫೈನಲ್ ತಲುಪಿದ್ದಿಲ್ಲ. ಇದೀಗ ಭಾನುವಾರದಂದು

ದುಬೈ: ಏಷ್ಯಾ ಕಪ್‌ ಇತಿಹಾಸದಲ್ಲಿ ಇಂಡೋ – ಪಾಕಿಸ್ತಾನ ಫೈನಲ್ ಗೆ Read More »

ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮದುವೆಗೆ ಪೋಷಕರು ವಿರೋಧ ವ್ಯಕ್ತ ಪಡಿಸಿದ್ದರಿಂದ- ರೈಲಿಗೆ ತಲೆಕೊಟ್ಟು ಪ್ರೇಮಿಗಳು ಆತ್ಮಹತ್ಯೆ

(ನ್ಯೂಸ್‌ ಕಡಬ) newskadaba.com,  ಸೆ.26 ಬೆಂಗಳೂರು– ಮದುವೆಗೆ ಪೋಷಕರು ವಿರೋಧ ವ್ಯಕ್ತ ಪಡಿಸಿದ್ದರಿಂದ ನೊಂದ ಪ್ರೇಮಿಗಳು ರೈಲಿಗೆ ಸಿಕ್ಕಿ ಆತಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಮಾಲೂರು ತಾಲ್ಲೂಕಿನ ಬ್ಯಾಟರಾಯನಹಳ್ಳಿ ರೈಲ್ವೆ ನಿಲ್ದಾಣದ ಬಳಿ ನಡೆದಿದೆ.ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನ ಶೆಟ್ಟಹಳ್ಳಿ ನಿವಾಸಿಗಳಾದ ಸತೀಶ್‌ (19) ಹಾಗೂ ಶ್ವೇತಾ (18) ಆತಹತ್ಯೆಗೆ ಶರಣಾದ ಪ್ರೇಮಿಗಳು. ಸತೀಶ್‌ ಐಟಿಐ ವ್ಯಾಸಂಗ ಮಾಡಿದ್ದು, ಶ್ವೇತಾ ಮೊದಲ ವರ್ಷದ ಬಿಎ ವ್ಯಾಸಂಗ ಮಾಡುತ್ತಿದ್ದಳು. ಇವರಿಬ್ಬರು ಒಬ್ಬರನ್ನೊಬ್ಬರು ಬಿಟ್ಟಿರಲಾರದಷ್ಟು ಪ್ರೀತಿಸುತ್ತಿದ್ದರು. ಮನೆಯವರ ಒಪ್ಪಿಗೆ ಪಡೆದೇ

ಮದುವೆಗೆ ಪೋಷಕರು ವಿರೋಧ ವ್ಯಕ್ತ ಪಡಿಸಿದ್ದರಿಂದ- ರೈಲಿಗೆ ತಲೆಕೊಟ್ಟು ಪ್ರೇಮಿಗಳು ಆತ್ಮಹತ್ಯೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮನೆ ಮುಂದೆ ಆಟವಾಡುತ್ತಿದ್ದ 4 ವರ್ಷದ ಬಾಲಕ ಚರಂಡಿ ಗುಂಡಿಗೆ ಬಿದ್ದು ಸಾವು

(ನ್ಯೂಸ್‌ ಕಡಬ) newskadaba.com,  ಸೆ.26 ಬಳ್ಳಾರಿ:  ಆಟವಾಡುತ್ತಿದ್ದ 4 ವರ್ಷದ ಬಾಲಕ ಚರಂಡಿ ಗುಂಡಿಗೆ ಬಿದ್ದು ಮೃತಪಟ್ಟಿರುವ ಘಟನೆ ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕಿನ ಕುರೇಕುಪ್ಪ ಗ್ರಾಮದಲ್ಲಿ ನಡೆದಿದೆ. ಕುರೇಕುಪ್ಪದ 6ನೇ ವಾರ್ಡ್‌ನ ಪಿ ಅರವಿಂದ್ ಮೃತ ಬಾಲಕ. ಸಂಜೆ ಆಟವಾಡುತ್ತಾ ತಾತನ ಮನೆಗೆ ಹೊರಟಿದ್ದ ಬಾಲಕ ಕಾಲು ಜಾರಿ ಚರಂಡಿ ನೀರು ತುಂಬಿದ್ದ ಗುಂಡಿಗೆ ಬಿದ್ದು ಕೊನೆಯುಸಿರೆಳೆದಿದ್ದಾನೆ. ಆಟವಾಡಲು ಹೋಗಿದ್ದ ಬಾಲಕ ರಾತ್ರಿಯಾದರೂ ಮನೆಗೆ ಬಾರದೇ ಇದ್ದಾಗ ಗಾಬರಿಗೊಂಡ ಪೋಷಕರು ಹುಡುಕಾಡಿದ್ದಾರೆ. ತಡರಾತ್ರಿ ಚರಂಡಿ ನೀರಿನಲ್ಲಿ

ಮನೆ ಮುಂದೆ ಆಟವಾಡುತ್ತಿದ್ದ 4 ವರ್ಷದ ಬಾಲಕ ಚರಂಡಿ ಗುಂಡಿಗೆ ಬಿದ್ದು ಸಾವು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top