News Kadaba

ಏಕಾಏಕಿ ಅಡ್ಡಬಂದ ನಾಯಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ KSRTC ಬಸ್ ಅಪಘಾತ

(ನ್ಯೂಸ್‌ ಕಡಬ) newskadaba.com,  ಸೆ.26 ರಾಯಚೂರು: ಸರ್ಕಾರಿ ಸಾರಿಗೆ ಸಂಸ್ಥೆಯ ಸ್ಲೀಪರ್ ಕೋಚ್ ಬಸ್ ಪಲ್ಟಿಯಾದ ಪರಿಣಾಮ ಒಬ್ಬ ಪ್ರಯಾಣಿಕನ ಕಾಲು ಮುರಿದಿದ್ದು 8 ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ರಾಯಚೂರಿನ ಹೊರವಲಯದ ಸಾಥಮೈಲ್ ಕ್ರಾಸ್ ಹತ್ತಿರ ಇಂದು ಬೆಳಗ್ಗೆ ಈ ಅವಘಡ ಸಂಭವಿಸಿದೆ. ದಾವಣಗೆರೆಯಿಂದ ರಾಯಚೂರಿಗೆ ಬರುತ್ತಿದ್ದ ಬಸ್ ಇದಾಗಿದೆ. ಏಕಾಏಕಿ ಅಡ್ಡಬಂದ ನಾಯಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಚಾಲಕ ಬಸ್​ ಅನ್ನು ಎಡಕ್ಕೆ ತಿರುಗಿಸಿದ್ದಾನೆ. ಆಗ ಬಸ್ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಜಮೀನಿಗೆ […]

ಏಕಾಏಕಿ ಅಡ್ಡಬಂದ ನಾಯಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ KSRTC ಬಸ್ ಅಪಘಾತ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉತ್ತರಪ್ರದೇಶದಲ್ಲಿ ಶಿಕ್ಷಕಿ ಮೇಲೆ ಆಸಿಡ್‌ ಎರಚಿದವನಿಗೆ ಪೊಲೀಸರಿಂದ ಕಾಲಿಗೆ ಗುಡೇಟು

(ನ್ಯೂಸ್‌ ಕಡಬ) newskadaba.com,  ಸೆ.26 ಸಂಭಾಲ್‌ : ಉತ್ತರ ಪ್ರದೇಶದಲ್ಲಿ ಶಿಕ್ಷಕಿಯೊಬ್ಬರ ಮೇಲೆ ಆಸಿಡ್‌ ಎರಚಿದ ಆರೋಪಿ ಕಾಲಿಗೆ ಗುಂಡು ಹಾರಿಸಿ ಬಂಧಿಸಲಾಗಿದೆ.ಬಂಧಿತ ಆರೋಪಿಯನ್ನು ಅಮ್ರೋಹಾ ಜಿಲ್ಲೆಯ ಗಜ್ರೌಲಾ ಪೊಲೀಸ್‌‍ ಠಾಣೆ ಪ್ರದೇಶದ ಟಿಗ್ರಿ ಗ್ರಾಮದ ನಿವಾಸಿ ನಿಶು ತಿವಾರಿ (30) ಎಂದು ಗುರುತಿಸಲಾಗಿದೆ. ಸೆಪ್ಟೆಂಬರ್‌ 23 ರಂದು, ನಖಾಸಾ ಪೊಲೀಸ್‌‍ ಠಾಣೆ ಪ್ರದೇಶದಲ್ಲಿ, 22 ವರ್ಷದ ಶಿಕ್ಷಕಿಯೊಬ್ಬರು ಶಾಲೆಯಿಂದ ಮನೆಗೆ ಹಿಂತಿರುಗುತ್ತಿದ್ದಾಗ, ಆರೋಪಿಯು ಸ್ಕೂಟರ್‌ ಮೇಲೆ ಬಂದು ದೇಹಪಾ ಗ್ರಾಮದ ಬಳಿ ಆಕೆಯ ಮುಖದ ಮೇಲೆ

ಉತ್ತರಪ್ರದೇಶದಲ್ಲಿ ಶಿಕ್ಷಕಿ ಮೇಲೆ ಆಸಿಡ್‌ ಎರಚಿದವನಿಗೆ ಪೊಲೀಸರಿಂದ ಕಾಲಿಗೆ ಗುಡೇಟು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಹಿರಿಯ ಸಾಹಿತಿ ಎಸ್‌ಎಲ್‌ ಭೈರಪ್ಪರವರು ಪಂಚಭೂತಗಳಲ್ಲಿ ಲೀನ

(ನ್ಯೂಸ್‌ ಕಡಬ) newskadaba.com,  ಸೆ.26 ಮೈಸೂರು: ಮೊನ್ನೆ ದಿವಂಗತರಾದ ಹಿರಿಯ ಸಾಹಿತಿ, ಕನ್ನಡದ ಹೆಮ್ಮೆಯ ಕಾದಂಬರಿಕಾರ, ಕನ್ನಡದ ಓದುಗರ ಭಾವತಂತುಗಳನ್ನು ಮೀಟಿದ ಸರಸ್ವತಿಯ ವರಪುತ್ರ ಡಾ.ಎಸ್.ಎಲ್ ಭೈರಪ್ಪ ಅವರಿಗೆ ಇಂದು ಕನ್ನಡಿಗರು ಭಾರವಾದ ಹೃದಯದಿಂದ ವಿದಾಯ ಹೇಳಿದ್ದಾರೆ. ಅವರ ಪಾರ್ಥಿವ ಶರೀರ ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನ ರುದ್ರಭೂಮಿಯಲ್ಲಿ ಇಂದು ಮಧ್ಯಾಹ್ನ ಪಂಚಭೂತಗಳಲ್ಲಿ ಲೀನವಾಯಿತು. ಸಕಲ ಸರ್ಕಾರಿ ಗೌರವಗಳೊಂದಿಗೆ ಬ್ರಾಹ್ಮಣ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಸಲಾಯಿತು. ಅಂತ್ಯಸಂಸ್ಕಾರದ ವೇಳೆ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ, ರಾಜ್ಯ ಸಚಿವ ಎಚ್‌ಸಿ ಮಹದೇವಪ್ಪ.

ಹಿರಿಯ ಸಾಹಿತಿ ಎಸ್‌ಎಲ್‌ ಭೈರಪ್ಪರವರು ಪಂಚಭೂತಗಳಲ್ಲಿ ಲೀನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಳ್ಯ : ಕೊಲ್ಲಮೊಗ್ರು ಗ್ರಾಮ ಪಂಚಾಯತ್‌ಗೆ ಗ್ರಾಮಸ್ಥರು ಮುತ್ತಿಗೆ ಹಾಕಿ ಪ್ರತಿಭಟನೆ

(ನ್ಯೂಸ್‌ ಕಡಬ) newskadaba.com,  ಸೆ.26 ಸುಳ್ಯ : ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗವಾದ ಸುಳ್ಯ ತಾಲೂಕಿನ ಕೊಲ್ಲಮೊಗ್ರು ಗ್ರಾಮ ಪಂಚಾಯತ್ ನಲ್ಲಿನ ಸೊತ್ತುಗಳನ್ನು ಅಲ್ಲಿನ ಗುಮಾಸ್ತನೇ ಕಳವು ಮಾಡಿದ್ದರೂ ಆತನ ವಿರುದ್ಧ ಪಂಚಾಯತ್ ಸೂಕ್ತ ಕ್ರಮ ಜರುಗಿಸಿಲ್ಲ, ಪಂಚಾಯತ್ ಸಿಸಿ ಟಿವಿ ಅಳವಡಿಸಿ ಜನರ ಖಾಸಗಿ ವಿಡಿಯೋಗಳನ್ನು ಸೆರೆಹಿಡಿದು ಅದನ್ನು ವಾಟ್ಸ್ಯಾಪ್ ನಲ್ಲಿ ಹರಿಯಬಿಡಲಾಗುತ್ತದೆ ಎಂದು ಆರೋಪಿಸಿದ ಗ್ರಾಮಸ್ಥರು ಸೆ.25ರಂದು ಪಂಚಾಯತ್ ಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಗ್ರಾಮ ಪಂಚಾಯತ್ ಗೆ ಸಂಬಂಧಪಟ್ಟ ಸಿಸಿ ಟಿವಿ

ಸುಳ್ಯ : ಕೊಲ್ಲಮೊಗ್ರು ಗ್ರಾಮ ಪಂಚಾಯತ್‌ಗೆ ಗ್ರಾಮಸ್ಥರು ಮುತ್ತಿಗೆ ಹಾಕಿ ಪ್ರತಿಭಟನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಾದಕ ವಸ್ತು ಪ್ರಕರಣ ಆರೋಪಿಯನ್ನು ಪತ್ತೆ ಹಚ್ಚಲು ತೆರಳುತ್ತಿದ್ದ ಪೊಲೀಸ್ ಕಾನ್ಸ್‌ಟೇಬಲ್ ಅಪಘಾತಕ್ಕೆ ಬಲಿ

(ನ್ಯೂಸ್‌ ಕಡಬ) newskadaba.com,  ಸೆ.26 ಕಾಸರಗೋಡು:ಮಾದಕ ವಸ್ತು ಪ್ರಕರಣದ ಆರೋಪಿಯನ್ನು ಪತ್ತೆ ಹಚ್ಚಲು ಕಾರಿನಲ್ಲಿ ತೆರಳುತ್ತಿದ್ದ ಪೊಲೀಸ್ ಕಾನ್ಸ್‌ಟೇಬಲ್ ಅಪಘಾತಕ್ಕೆ ಬಲಿಯಾದ ಘಟನೆ ಶುಕ್ರವಾರ ಮುಂಜಾನೆ ನಗರ ಹೊರವಲಯದ ಚೆಂಗಳ ನಾಲ್ಕನೇ ಮೈಲ್ ನಲ್ಲಿ ನಡೆದಿದೆ.ಬೇಕಲ ಡಿವೈಎಸ್‌ಪಿ ನೇತೃತ್ವದ ವಿಶೇಷ ತಂಡದ ಪೊಲೀಸ್ ಕಾನ್ಸ್ ಟೇಬಲ್ ಕೆ.ಕೆ ಸಜೀಶ್ (40) ಮೃತಪಟ್ಟವರು. ಮುಂಜಾನೆ 2.45 ರ ಸುಮಾರಿಗೆ ಕಾರು ಮತ್ತು ಟಿಪ್ಪರ್ ಲಾರಿ ನಡುವೆ ಈ ಅಪಘಾತ ನಡೆದಿದೆ. ಕಾರಿನಲ್ಲಿದ್ದ ಇನ್ನೋರ್ವ ಪೊಲೀಸ್ ಗಾಯ ಹೊಂದಿದ್ದಾರೆ. ಕಾರು ಚಲಾಯಿಸುತ್ತಿದ್ದ

ಮಾದಕ ವಸ್ತು ಪ್ರಕರಣ ಆರೋಪಿಯನ್ನು ಪತ್ತೆ ಹಚ್ಚಲು ತೆರಳುತ್ತಿದ್ದ ಪೊಲೀಸ್ ಕಾನ್ಸ್‌ಟೇಬಲ್ ಅಪಘಾತಕ್ಕೆ ಬಲಿ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಸೆಪ್ಟೆಂಬರ್ 28ಕ್ಕೆ ‘ಬಿಗ್ ಬಾಸ್ ಕನ್ನಡ-ಸೀಸನ್ 12’ ಗ್ರ್ಯಾಂಡ್‌ ಓಪನಿಂಗ್!

(ನ್ಯೂಸ್‌ ಕಡಬ) newskadaba.com,  ಸೆ.26 ಬೆಂಗಳೂರು: ಕನ್ನಡಿಗರಿಗೆ ಮನರಂಜನೆಯನ್ನು ನೀಡುವಲ್ಲಿ ಸದಾ ಮುಂಚೂಣಿಯಲ್ಲಿರುವ ಕಲರ್ಸ್‌ ಕನ್ನಡ, ಇದೀಗ ‘ಬಿಗ್‌ ಬಾಸ್‌’ನ ಹನ್ನೆರಡನೇ ಸೀಸನ್‌ ಅನ್ನು ಹೊತ್ತು ತಂದಿದೆ. ಕಳೆದ ಹನ್ನೊಂದು ವರ್ಷಗಳಿಂದ ಕನ್ನಡಿಗರನ್ನು ಯಶಸ್ವಿಯಾಗಿ ರಂಜಿಸುತ್ತ ಬಂದಿರುವ ‘ಬಿಗ್‌ಬಾಸ್’ ರಿಯಾಲಿಟಿ ಷೋ, ಈ ಬಾರಿ “ಎಕ್ಸ್ ಪೆಕ್ಟ್ ದ ಅನ್ ಎಕ್ಸ್ ಪೆಕ್ಟೆಟ್” ಎಂಬ ಥೀಮ್‌ನಲ್ಲಿ ಹಲವು ಅನಿರೀಕ್ಷಿತ ಗಳನ್ನು ಇಟ್ಟುಕೊಂಡು ಪ್ರೇಕ್ಷಕರ ಮನರಂಜನೆಯ ಹೊಸ ಭಾಷ್ಯವನ್ನು ಬರೆಯಲು ಸಜ್ಜಾಗಿದೆ. ಸೆಪ್ಟೆಂಬರ್ 28ರಂದು ಭಾನುವಾರ ಸಂಜೆ 6 ಗಂಟೆಗೆ ಬಿಗ್‌ಬಾಸ್‌

ಸೆಪ್ಟೆಂಬರ್ 28ಕ್ಕೆ ‘ಬಿಗ್ ಬಾಸ್ ಕನ್ನಡ-ಸೀಸನ್ 12’ ಗ್ರ್ಯಾಂಡ್‌ ಓಪನಿಂಗ್! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನಟ ಉಪೇಂದ್ರ ಮತ್ತು ಪತ್ನಿ ಪ್ರಿಯಾಂಕಾ ಮೊಬೈಲ್ ಹ್ಯಾಕ್ ಪ್ರಕರಣ: ಹ್ಯಾಕರ್ ಮೂಲ ಪತ್ತೆ

(ನ್ಯೂಸ್‌ ಕಡಬ) newskadaba.com,  ಸೆ.26 ಬೆಂಗಳೂರು: ಉಪೇಂದ್ರ ದಂಪತಿಗಳ ಮೊಬೈಲ್ ಹ್ಯಾಕ್ ಪ್ರಕರಣದ ತನಿಖೆ ನಡೆಸುತ್ತಿರುವ ಸದಾಶಿವನಗರ ಪೊಲೀಸರು ಹ್ಯಾಕರ್‌ಗಳ ಮೂಲ ಪತ್ತೆ ಮಾಡಿದ್ದಾರೆ.ಉಪೇಂದ್ರ ಮತ್ತು ಪ್ರಿಯಾಂಕಾ ಉಪೇಂದ್ರ ಮೊಬೈಲ್ ಹ್ಯಾಕ್ ಮಾಡಿರುವ ವಂಚಕರು ಬಿಹಾರ ಮೂಲದವರು ಎಂದು ತಿಳಿದುಬಂದಿದೆ. ಆರೋಪಿಗಳು ಬಿಹಾರದಿಂದಲೇ 4-5 ಜನರಿಂದ ಉಪೇಂದ್ರ ದಂಪತಿಯ ಮೊಬೈಲ್ ನಂಬರ್ ಹ್ಯಾಕ್ ಮಾಡಿ, ಹಣ ಕೇಳಿದ್ದು, ಸುಮಾರು 1.65 ಲಕ್ಷ ರೂ. ಹಣ ಪಡೆದುಕೊಂಡು, 4 ಅಕೌಂಟ್ ಗಳಿಗೆ ವರ್ಗಾವಣೆ ಮಾಡಿಕೊಂಡಿದ್ದಾರೆಂದು ತಿಳಿದುಬಂದಿದೆ.ಆ ನಾಲ್ಕು ಅಕೌಂಟ್

ನಟ ಉಪೇಂದ್ರ ಮತ್ತು ಪತ್ನಿ ಪ್ರಿಯಾಂಕಾ ಮೊಬೈಲ್ ಹ್ಯಾಕ್ ಪ್ರಕರಣ: ಹ್ಯಾಕರ್ ಮೂಲ ಪತ್ತೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ

ಕುಂದಾಪುರ: ತೋಡಿಗೆ ಕಾಲು ಜಾರಿ ಬಿದ್ದು ಕೃಷಿ ಕಾರ್ಮಿಕ ಮೃತ್ಯು

(ನ್ಯೂಸ್‌ ಕಡಬ) newskadaba.com,  ಸೆ.26 ಕುಂದಾಪುರ: ತೆಂಗಿನ ತೋಟದಲ್ಲಿ ಕಾಯಿ ಕೊಯ್ದು ಸಾಗಾಟ ಮಾಡುವ ಕಾರ್ಯ ನಿರ್ವಹಿಸುತ್ತಿದ್ದ ಕಾರ್ಮಿಕನೋರ್ವ ಮಳೆಯಿಂದ ನೀರು ತುಂಬಿದ್ದ ತೋಡಿಗೆ ಕಾಲು ಜಾರಿ ಬಿದ್ದು ಸಾವನ್ನಪ್ಪಿದ ಘಟನೆ ಬೇಳೂರು ಗ್ರಾಮದ ಚಾಮ್ತಾಡಿ ಕೈಲೇರಿ ಬಳಿ ಬುಧವಾರ ನಡೆದಿದೆ.ಮೃತರನ್ನು ಅಚ್ಲಾಡಿ ಅಂಬೇಡ್ಕರ್ ಕಾಲೋನಿಯ ನಿವಾಸಿ ಶರತ್ (32) ಎಂದು ಗುರುತಿಸಲಾಗಿದೆ. ಶರತ್ ಅವರು ಬುಧವಾರ ತಮ್ಮ ಮನೆಯ ಸಮೀಪದ ಅಚ್ಲಾಡಿಯಲ್ಲಿ ಗುತ್ತಿಗೆದಾರರೊಬ್ಬರೊಂದಿಗೆ ತೆಂಗಿನ ತೋಟದಲ್ಲಿ ಕೆಲಸಕ್ಕೆ ತೆರಳಿದ್ದರು. ಮರದಿಂದ ತೆಂಗು ಕೊಯ್ದು ಟೆಂಪೋಗೆ ತುಂಬಿಸುವ

ಕುಂದಾಪುರ: ತೋಡಿಗೆ ಕಾಲು ಜಾರಿ ಬಿದ್ದು ಕೃಷಿ ಕಾರ್ಮಿಕ ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕರಾವಳಿ ಮತ್ತು ಉತ್ತರ ಒಳನಾಡು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ – ಗುಡುಗು ಸಹಿತ ಭಾರಿ ಮಳೆ

(ನ್ಯೂಸ್‌ ಕಡಬ) newskadaba.com,  ಸೆ.26 ಬೆಂಗಳೂರು: ಕರಾವಳಿ ಮತ್ತು ಉತ್ತರ ಒಳನಾಡು ಜಿಲ್ಲೆಗಳಿಗೆ ಶುಕ್ರವಾರ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ನೀಡಿದ್ದು, ಗುಡುಗು ಸಹಿತ ಭಾರಿ ಮಳೆಯಾಗುವ ಸಂಭವ ಇದೆ. ಕರಾವಳಿಯಲ್ಲಿ ಸೆಪ್ಟೆಂಬರ್‌ 27ರವರೆಗೆ ಗಂಟೆಗೆ 60 ಕಿ.ಮೀ. ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.  ಇನ್ನು ಮುಂದಿನ 24 ಗಂಟೆಯಲ್ಲಿ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ

ಕರಾವಳಿ ಮತ್ತು ಉತ್ತರ ಒಳನಾಡು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ – ಗುಡುಗು ಸಹಿತ ಭಾರಿ ಮಳೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಡುಪಿ: ನಿಂತಿದ್ದ ಪಿಕ್ ಅಪ್ ವಾಹನಕ್ಕೆ ಟಿಪ್ಪರ್ ಲಾರಿ ಡಿಕ್ಕಿ; ಪಾದಚಾರಿ ಮೃತ್ಯು

(ನ್ಯೂಸ್‌ ಕಡಬ) newskadaba.com,  ಸೆ.26 ಉಡುಪಿ: ಟಿಪ್ಪರ್ ಲಾರಿಯೊಂದು ನಿಂತಿದ್ದ ಪಿಕ್ ಅಪ್ ವಾಹನಕ್ಕೆ ಡಿಕ್ಕಿ ಹೊಡೆದು, ಬಳಿಕ ಪಾದಚಾರಿಯೊಬ್ಬರಿಗೆ ಗುದ್ದಿದ ಪರಿಣಾಮ ಅವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉಡುಪಿಯ ಕಾಮತ್ ಪೆಟ್ರೋಲ್ ಪಂಪ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸೆಪ್ಟೆಂಬರ್ 25ರಂದು ಸಂಭವಿಸಿದೆ. ಮೃತರನ್ನು ಬಿಹಾರ ಮೂಲದ ರಾಜಕುಮಾರ್ ಶರ್ಮಾ (23) ಎಂದು ಗುರುತಿಸಲಾಗಿದೆ. ಮೃತರು ಎರ್ಮಾಳ್‌ನಲ್ಲಿರುವ ಪ್ಲೈವುಡ್ ಕಾರ್ಖಾನೆಯಲ್ಲಿ ವಲಸೆ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. ಅಪಘಾತ ಸಂಭವಿಸುವಾಗ ಅವರು ತಮ್ಮ ಸಹೋದ್ಯೋಗಿಗಳೊಂದಿಗೆ ಪಡುಬಿದ್ರಿಯ ಕಡೆಗೆ

ಉಡುಪಿ: ನಿಂತಿದ್ದ ಪಿಕ್ ಅಪ್ ವಾಹನಕ್ಕೆ ಟಿಪ್ಪರ್ ಲಾರಿ ಡಿಕ್ಕಿ; ಪಾದಚಾರಿ ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top