News Kadaba

ದೆಹಲಿಯಲ್ಲಿ ಭಾರೀ ಮಳೆ- ಅಪಾಯ ಮಟ್ಟ ಮೀರಿ ಹರಿಯುತ್ತಿದೆ ಯಮುನಾ ನದಿ;

(ನ್ಯೂಸ್‌ ಕಡಬ) newskadaba.com,  ಸೆ.02ನವದೆಹಲಿ: ರಾಷ್ಟ್ರರಾಜಧಾನಿ ನವದೆಹಲಿಯಲ್ಲಿ ಮಂಗಳವಾರ ರಾತ್ರಿ ಸುರಿದ ಮಳೆಯಿಂದಾಗಿ ಯಮುನಾ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ನದಿ ಪ್ರದೇಶದ ಕೆಲವು ಭಾಗಗಳಲ್ಲಿದ್ದ ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ.   ನದಿ ಉಕ್ಕಿ ಹರಿಯುತ್ತಿದ್ದಂತೆ ಯಮುನಾ ಬಜಾರ್‌ನಂತಹ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು, ಹಲವಿ ಮನೆಗಳ ನೆಲ ಮಹಡಿಗಳು ಜಲಾವೃತಗೊಂಡಿವೆ. ವಸ್ತುಗಳು ಹಾನಿಗೊಂಡಿವೆ ಎಂದು ವರದಿಗಳು ತಿಳಿಸಿವೆ.   ಕೇಂದ್ರ ಜಲ ಆಯೋಗದ (ಸಿಡಬ್ಲ್ಯೂಸಿ) ಪ್ರಕಾರ, ಬೆಳಿಗ್ಗೆ 9 ಗಂಟೆಗೆ, ಹಳೆಯ ಯಮುನಾ […]

ದೆಹಲಿಯಲ್ಲಿ ಭಾರೀ ಮಳೆ- ಅಪಾಯ ಮಟ್ಟ ಮೀರಿ ಹರಿಯುತ್ತಿದೆ ಯಮುನಾ ನದಿ; Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಭಾರತ ಶೂನ್ಯ ತೆರಿಗೆ ಆಫರ್ ನೀಡಿದೆ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌

(ನ್ಯೂಸ್‌ ಕಡಬ) newskadaba.com,  ಸೆ.02  ನ್ಯೂಯಾರ್ಕ್‌ : ಶಾಂಘೈ ಶೃಂಗದಲ್ಲಿ ಭಾರತ-ರಷ್ಯಾ ಸ್ನೇಹ ಸಂಬಂಧದ ಫೋಟೋ ವೈರಲ್‌ ಆದ ಬೆನ್ನಲ್ಲೇ ಮತ್ತೆ ಭಾರತದ ವಿರುದ್ಧ ಸಿಡಿದೆದ್ದಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌, ‘ಭಾರತ ಅಮೆರಿಕದ ಮೇಲಿನ ತೆರಿಗೆಯನ್ನು ಶೂನ್ಯಕ್ಕಿಳಿಸುವ ಆಫರ್ ನೀಡಿದೆ. ಆದರೆ ಸಮಯ ಮೀರಿಹೋಗುತ್ತಿದೆ. ವರ್ಷಗಳ ಮೊದಲೇ ಭಾರತ ಈ ಕೆಲಸ ಮಾಡಬೇಕಿತ್ತು’ ಎಂದು ಗುಡುಗಿದ್ದಾರೆ. ‘ನಾವು ಭಾರತದ ಜೊತೆ ದೊಡ್ಡಮಟ್ಟದ ವ್ಯಾಪಾರ ನಡೆಸುತ್ತೇವೆ. ಆದರೆ ಭಾರತ ನಮ್ಮ ಜೊತೆ ತೀರಾ ಕಡಿಮೆ ವ್ಯಾಪಾರ ನಡೆಸುತ್ತದೆ. ಇದು ಸಂಪೂರ್ಣವಾಗಿ ಏಕಪಕ್ಷೀಯ

ಭಾರತ ಶೂನ್ಯ ತೆರಿಗೆ ಆಫರ್ ನೀಡಿದೆ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಹಾಸನ: ಕೋಟ್ಯಂತರ ರೂ. ವೆಚ್ಚದಲ್ಲಿ ನಿರ್ಮಿಸುತ್ತಿದ್ದ ಪಾಲಿಕೆಯ ಶೆಡ್ ಕುಸಿತ – ಕಾರ್ಮಿಕರು ಪಾರು

(ನ್ಯೂಸ್‌ ಕಡಬ) newskadaba.com,  ಸೆ.02 ಹಾಸನ: ಕೋಟ್ಯಂತರ ರೂ. ವೆಚ್ಚದಲ್ಲಿ ನಿರ್ಮಿಸುತ್ತಿದ್ದ ಮಹಾನಗರ ಪಾಲಿಕೆಯ ತ್ಯಾಜ್ಯ ವಿಲೇವಾರಿ ಘಟಕದ ಶೆಡ್ ಏಕಾಏಕಿ ಕುಸಿದುಬಿದ್ದ ಘಟನೆ ಹಾಸನದ ಅಗಿಲೆ ಗ್ರಾಮದ ಬಳಿ ನಡೆದಿದೆ. ಕಾರ್ಮಿಕರು ಕೆಲಸ ಮಾಡುವ ವೇಳೆಯೇ ಬೃಹತ್ ಶೆಡ್ ದಿಢೀರ್ ಕುಸಿದುಬಿದ್ದಿದೆ. ಅದೃಷ್ಟವಶಾತ್ ಕಾರ್ಮಿಕರು ಅಪಾಯದಿಂದ ಪಾರಾಗಿದ್ದಾರೆ. ಶೆಡ್ ಕುಸಿತಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.  

ಹಾಸನ: ಕೋಟ್ಯಂತರ ರೂ. ವೆಚ್ಚದಲ್ಲಿ ನಿರ್ಮಿಸುತ್ತಿದ್ದ ಪಾಲಿಕೆಯ ಶೆಡ್ ಕುಸಿತ – ಕಾರ್ಮಿಕರು ಪಾರು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ತಲಪಾಡಿ: ಮಾದಕ ವಸ್ತು ಮಾರಾಟ: ಇಬ್ಬರು ಆರೋಪಿಗಳು ಸೆರೆ

(ನ್ಯೂಸ್‌ ಕಡಬ) newskadaba.com,  ಸೆ.02 ಮಂಗಳೂರು: ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ತಲಪಾಡಿ ಗ್ರಾಮದ ತಚ್ಚಣಿ ಗೌಂಡ್ ನಲ್ಲಿ ನಿಷೇದಿತ ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಫಝಲ್ ಹುಸೇನ್(33) ಮತ್ತು ನೌಶಾದ್(32) ಎಂದು ಗುರುತಿಸಲಾಗಿದೆ.ಇವರು ತಚ್ಛಣಿ ಗೌಂಡ್ ನಲ್ಲಿ ಮಾದಕವಸ್ತು ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿ ಪ್ರಕರಣವನ್ನು ಭೇದಿಸಿದ್ದಾರೆ. ಬಂಧಿತರಿಂದ 15 ಗ್ರಾಂ ಎಂಡಿಎಂಎ, ಎರಡು ಮೊಬೈಲ್ ಫೋನ್, ಪೋರ್ಟಬಲ್ ಡಿಜಿಟಲ್ ತೂಕದ ಯಂತ್ರ ಸಹಿತ

ತಲಪಾಡಿ: ಮಾದಕ ವಸ್ತು ಮಾರಾಟ: ಇಬ್ಬರು ಆರೋಪಿಗಳು ಸೆರೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

‘ಮಗು ಹೊಟ್ಟೆಯಲ್ಲಿರುವಾಗಲೇ ವಾಕ್ ಮತ್ತು ಶ್ರವಣ ಸಮಸ್ಯೆ ಪತ್ತೆ ಹಚ್ಚಲು ಸಾಧ್ಯವಾಗಿರುವುದು ನಿಜಕ್ಕೂ ದೊಡ್ಡ ಸಾಧನೆ’- ಸಿ.ಎಂ

(ನ್ಯೂಸ್‌ ಕಡಬ) newskadaba.com,  ಸೆ.02  ಮೈಸೂರು :  . ಮೈಸೂರಿನ ವಾಕ್ ಮತ್ತು ಶ್ರವಣ ಸಂಸ್ಥೆ ಅಭಿನಂದನೀಯವಾಗಿದೆ ಎಂದು ಸಿ.ಎಂ.ಸಿದ್ದರಾಮಯ್ಯ ನುಡಿದರು ಅಖಿಲ ಭಾರತ ವಾಕ್-ಶ್ರವಣ ಸಂಸ್ಥೆ (ಆಯಿಷ್) ಮೈಸೂರು ಇವರ ವತಿಯಿಂದ ಆಯೋಜಿಸಿದ್ದ ಅಖಿಲ ಭಾರತ ವಾಕ್-ಶ್ರವಣ ಸಂಸ್ಥೆಯ“ವಜ್ರ ಮಹೋತ್ಸವ ಕಾರ್ಯಕ್ರಮ”ದಲ್ಲಿ ಮಾತನಾಡಿದರು. ಈ ಕ್ಷೇತ್ರದಲ್ಲಿ ಇನ್ನಷ್ಟು ಸಾಧನೆ ಮತ್ತು ಪ್ರಗತಿ ಕಾಣಬೇಕಾಗಿದೆ. ಇದಕ್ಕಾಗಿ ನಮ್ಮ‌ ಸರ್ಕಾರ ಈಗಾಗಲೇ 10 ಎಕರೆ ಜಾಗ ಒದಗಿಸಿದೆ. ಇಷ್ಟಲ್ಲದೆ ಅಗತ್ಯ ಇರುವ ಎಲ್ಲಾ ನೆರವನ್ನೂ ಒದಗಿಸಲು ನಾವು ಸಿದ್ದರಿದ್ದೇವೆ

‘ಮಗು ಹೊಟ್ಟೆಯಲ್ಲಿರುವಾಗಲೇ ವಾಕ್ ಮತ್ತು ಶ್ರವಣ ಸಮಸ್ಯೆ ಪತ್ತೆ ಹಚ್ಚಲು ಸಾಧ್ಯವಾಗಿರುವುದು ನಿಜಕ್ಕೂ ದೊಡ್ಡ ಸಾಧನೆ’- ಸಿ.ಎಂ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ರಾಜ್ಯದ ಹವಮಾನ ವರದಿ

(ನ್ಯೂಸ್‌ ಕಡಬ) newskadaba.com,  ಸೆ.02: ರಾಜ್ಯದಲ್ಲಿ ಮುಂದಿನ 2 ದಿನಗಳ ಕಾಲ ಮಳೆ ಮುನ್ಸೂಚನೆ ನೀಡಲಾಗಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಸೆಪ್ಟೆಂಬರ್ 3ರವರೆಗೂ ಸಾಧಾರಣ ಮಳೆ ಆಗಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ

ಇಂದಿನ ರಾಜ್ಯದ ಹವಮಾನ ವರದಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಗಂಡನಿಗೆ ಆರೆಸ್ಟ್ ವಾರಂಟ್‌ ಹಿಡಿದು ಬಂದ ಪೊಲೀಸರು, ಹೆದರಿ ಮಗುವಿನ ಜೊತೆಗೆ ಪತ್ನಿ ನೇಣು ಬಿಗಿದು ಆತ್ಮಹತ್ಯೆ

(ನ್ಯೂಸ್‌ ಕಡಬ) newskadaba.com,  ಸೆ.02  ಬ್ರಹ್ಮಾವರ:  ಉಡುಪಿ ಜಿಲ್ಲೆಯಲ್ಲಿ  ಹೃದಯ ವಿದ್ರಾವಕ ಘಟನೆಯೊಂದು ನಡೆದಿದೆ. ಆರೂರು ಗ್ರಾಮದ ಅಡ್ಜಿಲ್‌ ಎಂಬಲ್ಲಿ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿ ವ್ಯಕ್ತಿಯೊಬ್ಬರನ್ನು ಪೊಲೀಸರು ಬಂಧಿಸಲು ವಾರಂಟ್‌ ಹಿಡಿದು ಬಂದಿರುವುದನ್ನು ಕಂಡು ಹೆದರಿದ ಅವರ ಪತ್ನಿ ಸುಶ್ಮಿತಾ (35) ಎಂಬವರು ತನ್ನ ಒಂದೂವರೆ ವರ್ಷದ ಮಗು ಶ್ರೇಷ್ಠ ಎಂಬಾಕೆಯನ್ನು ನೇಣು ಬಿಗಿದು ಕೊಲೆ ಮಾಡಿ ಬಳಿಕ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ  ಮಾಡಿಕೊಂಡ ಘಟನೆ ಸೋಮವಾರ(ಸೆ.01)  ನಡೆದಿದೆ. ಸುಶ್ಮಿತಾ ಅವರ ಪತಿ ಸುಭಾಶ್‌

ಗಂಡನಿಗೆ ಆರೆಸ್ಟ್ ವಾರಂಟ್‌ ಹಿಡಿದು ಬಂದ ಪೊಲೀಸರು, ಹೆದರಿ ಮಗುವಿನ ಜೊತೆಗೆ ಪತ್ನಿ ನೇಣು ಬಿಗಿದು ಆತ್ಮಹತ್ಯೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ರೇಣುಕಾ ಸ್ವಾಮಿ ಕೊಲೆ ಪ್ರಕರಣ: ಆರೋಪಿ ಪವಿತ್ರಾ ಗೌಡ ಜಾಮೀನು ಅರ್ಜಿ ವಜಾ

(ನ್ಯೂಸ್‌ ಕಡಬ) newskadaba.com,  ಸೆ.02: ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾ ಗೌಡ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಜಾ ಆಗಿದೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಏಳು ಆರೋಪಿಗಳ ಜಾಮೀನನ್ನು ಸುಪ್ರೀಂಕೋರ್ಟ್ ವಜಾ ಮಾಡಿದ ಹಿನ್ನೆಲೆ ಏಳು ಮಂದಿ ಆರೋಪಿಗಳು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಇತ್ತೀಚೆಗಷ್ಟೆ ಪ್ರಕರಣದ ನಂಬರ್ 1 ಆರೋಪಿ ಪವಿತ್ರಾ ಗೌಡ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಆದರೆ ಇದೀಗ ಜಾಮೀನು

ರೇಣುಕಾ ಸ್ವಾಮಿ ಕೊಲೆ ಪ್ರಕರಣ: ಆರೋಪಿ ಪವಿತ್ರಾ ಗೌಡ ಜಾಮೀನು ಅರ್ಜಿ ವಜಾ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಂಗಳೂರು: 4 ವರ್ಷಗಳಿಂದ ನಿಷ್ಕ್ರಿಯಗೊಂಡಿರುವ ಕದ್ರಿ ಮ್ಯೂಸಿಕಲ್ ಫೌಂಟೇನ್

(ನ್ಯೂಸ್‌ ಕಡಬ) newskadaba.com,  ಸೆ.02  ಮಂಗಳೂರು : ಒಂದು ಕಾಲದಲ್ಲಿ ಪ್ರಮುಖ ಪ್ರವಾಸಿ ತಾಣವಾಗಲಿದೆ ಎಂದು ನಿರೀಕ್ಷಿಸಲಾಗಿದ್ದ ಕದ್ರಿ ಜಿಂಕೆ ಉದ್ಯಾನವನದ ಮ್ಯೂಸಿಕಲ್ ಫೌಂಟೇನ್, ಕಳೆದ ನಾಲ್ಕು ವರ್ಷಗಳಿಂದ ನಿಷ್ಕ್ರಿಯವಾಗಿದೆ. ತಾಂತ್ರಿಕ ದೋಷಗಳು, ನಿರ್ವಹಣೆಯ ಕೊರತೆ ಮತ್ತು ಸಾರ್ವಜನಿಕರ ಹಿತಾಸಕ್ತಿ ಕ್ಷೀಣಿಸುತ್ತಿರುವುದರಿಂದ, ಈ ಕಾರಂಜಿ ಇದೀಗ ತುಕ್ಕು ಹಿಡಿದು ಹಾಳಾಗಿ ಹೋಗಿದೆ. ಹಳೆಯ ಮೃಗಾಲಯದ ಆವರಣದಲ್ಲಿ, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಐದು  ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಈ ಕಾರಂಜಿಯನ್ನು, ಅಂದಿನ ಸಿಎಂ ಸಿದ್ದರಾಮಯ್ಯ ಅವರು 2018ರ

ಮಂಗಳೂರು: 4 ವರ್ಷಗಳಿಂದ ನಿಷ್ಕ್ರಿಯಗೊಂಡಿರುವ ಕದ್ರಿ ಮ್ಯೂಸಿಕಲ್ ಫೌಂಟೇನ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪಾಕಿಸ್ತಾನ: ಹೆಲಿಕಾಪ್ಟರ್ ಪತನ-ಐವರು ಸಾವು

(ನ್ಯೂಸ್‌ ಕಡಬ) newskadaba.com,  ಸೆ.02: ನೂತನವಾಗಿ ನಿರ್ಮಾಣವಾಗಿದ್ದ ಹೆಲಿಪ್ಯಾಡ್‌ ಮೇಲೆ ಲ್ಯಾಂಡಿಂಗ್‌ ಟೆಸ್ಟ್‌ ನಡೆಸುತ್ತಿದ್ದಾಗ ಪಾಕಿಸ್ತಾನದ ಸರ್ಕಾರಿ ಹೆಲಿಕಾಪ್ಟರ್‌ ಪತನಗೊಂಡು ಐವರು ಸಾವನ್ನಪ್ಪಿರುವ ಘಟನೆ ಗಿಲ್ಗಿಟ್‌-ಬಾಲ್ಟಿಸ್ತಾನ್‌ನಲ್ಲಿ ನಡೆದಿದೆ. ಡೈಮರ್‌ ಜಿಲ್ಲೆಯ ಚಿಲಾಸ್‌‍ನ ಥೋರ್‌ ಪ್ರದೇಶದ ಬಳಿ ಈ ಅವಘಡ ಸಂಭವಿಸಿದ್ದು,ದುರಂತದಲ್ಲಿ ಪರಿಣಾಮ ಇಬ್ಬರು ಪೈಲಟ್‌ ಸೇರಿ ಮೂವರು ತಂತ್ರಜ್ಞರು ಸಾವನ್ನಪ್ಪಿದ್ದಾರೆ.ಘಟನೆ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಹಿರಿಯ ಪೊಲೀಸ್‌‍ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇತ್ತೀಚಿಗೆ ಖೈಬರ್‌ ಪ್ರಾಂತ್ಯದಲ್ಲಿ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದ ಇದೇ ಮಾದರಿಯ ಎಂಐ-17

ಪಾಕಿಸ್ತಾನ: ಹೆಲಿಕಾಪ್ಟರ್ ಪತನ-ಐವರು ಸಾವು Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top