News Kadaba

ಮಹೇಶ್ ತಿಮರೋಡಿ ವಶಕ್ಕೆ ಪಡೆದ ಬ್ರಹ್ಮಾವರ ಪೊಲೀಸರು!

(ನ್ಯೂಸ್‌ ಕಡಬ) newskadaba.com, ಆ.20 ಬ್ರಹ್ಮಾವರ: ಧರ್ಮಸ್ಥಳ ವಿಚಾರವಾಗಿ ಆಕ್ಷೇಪಾರ್ಹರ ಹೇಳಿಕೆ ನೀಡಿದ ಪ್ರಕರಣದಲ್ಲಿ ಉಡುಪಿ ಪೊಲೀಸರು ಮಹೇಶ್ ಶೆಟ್ಟಿ ತಿಮರೋಡಿ ಯನ್ನು ವಶಕ್ಕೆ ಪಡೆದಿದ್ದಾರೆ. ಒಂದೆಡೆ ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿದ್ದಾಗಿ ಅನಾಮಿಕ ಹೇಳಿರುವ ಪ್ರಕರಣದ ಎಸ್​​ಐಟಿ ತನಿಖೆ ತೀವ್ರಗೊಂಡಿದ್ದು, ಮತ್ತೊಂದೆಡೆ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು ಗುರುವಾರ ಉಡುಪಿಯ ಬ್ರಹ್ಮಾವರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಧರ್ಮಸ್ಥಳ ವಿಚಾರದಲ್ಲಿ ಮಾತನಾಡುವಾಗ ಬಿಜೆಪಿ ನಾಯಕ ಬಿಎಲ್ ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಉಡುಪಿಯ ಬ್ರಹ್ಮಾವರ […]

ಮಹೇಶ್ ತಿಮರೋಡಿ ವಶಕ್ಕೆ ಪಡೆದ ಬ್ರಹ್ಮಾವರ ಪೊಲೀಸರು! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

‘ಕಾಂಗ್ರೆಸ್ ಸರ್ಕಾರವು ಪೊಲೀಸ್ ಇಲಾಖೆಯನ್ನ ಮುಂದಿಟ್ಟು ಹಿಂದೂ ಹಬ್ಬಗಳ ಆಚರಣೆಗೆ ಅಡ್ಡಿ’- ಸಂಸದ ಕ್ಯಾ. ಚೌಟ ಆಕ್ರೋಶ

(ನ್ಯೂಸ್‌ ಕಡಬ) newskadaba.com, ಆ.20 ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಪೊಲೀಸ್ ಇಲಾಖೆಯ ಮೂಲಕ ಹಬ್ಬಗಳ ಆಚರಣೆಗೆ ಮನಸೋ-ಇಚ್ಛೆ ನಿಯಮಗಳನ್ನು ಹೇರಿ ಹಿಂದೂಗಳ ಭಾವನೆಗಳನ್ನು ಘಾಸಿಗೊಳಿಸುವ ಹುನ್ನಾರ ಮಾಡುತ್ತಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಆರೋಪಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿ ಸೇರಿದಂತೆ ಹಲವು ಹಬ್ಬದ ಆಚರಣೆ ಸಂದರ್ಭ ಧ್ವನಿವರ್ಧಕ ಬಳಸುವುದಕ್ಕೆ ಪೊಲೀಸರು ಅವಕಾಶ ನೀಡದೆ ಷರತ್ತುಗಳನ್ನು ವಿಧಿಸಿ ತೊಂದರೆ ನೀಡುತ್ತಿರುವ ಬಗ್ಗೆ ಪ್ರತಿಕ್ರಿಯಿಸಿರುವ ಸಂಸದರು, ತುಳುನಾಡು ದೈವಾರಾಧನೆ, ಧಾರ್ಮಿಕ ಆಚರಣೆಗಳು,

‘ಕಾಂಗ್ರೆಸ್ ಸರ್ಕಾರವು ಪೊಲೀಸ್ ಇಲಾಖೆಯನ್ನ ಮುಂದಿಟ್ಟು ಹಿಂದೂ ಹಬ್ಬಗಳ ಆಚರಣೆಗೆ ಅಡ್ಡಿ’- ಸಂಸದ ಕ್ಯಾ. ಚೌಟ ಆಕ್ರೋಶ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಜನಸಂದಣಿ ನಿಯಂತ್ರಣ ವಿಧೇಯಕಕ್ಕೆ ವಿಧಾನಸಭೆಯಲ್ಲಿ ಅಂಗೀಕಾರ, ಅನುಮತಿ ರಹಿತ ಕಾರ್ಯಕ್ರಮ ಆಯೋಜಿಸಿದರೆ 1 ಕೋಟಿ ರೂ. ದಂಡ

(ನ್ಯೂಸ್‌ ಕಡಬ) newskadaba.com, ಆ.20 ಬೆಂಗಳೂರು: ಅನುಮತಿ ರಹಿತ ಕಾರ್ಯಕ್ರಮ ಆಯೋಜಿಸಿದರೆ 1 ಕೋಟಿ ರೂ. ದಂಡ ವಿಧಿಸುವ ಹಾಗೂ ಇತರ ಕಠಿಣ ನಿಬಂಧನೆಗಳನ್ನು ಹೊಂದಿರುವ ಜನಸಂದಣಿ ನಿಯಂತ್ರಣ ವಿಧೇಯಕಕ್ಕೆ ಇಂದು ವಿಧಾನಸಭೆಯಲ್ಲಿ ಅಂಗೀಕಾರ ದೊರೆತಿದೆ. ರಾಜ್ಯ ಸರ್ಕಾರದ ಪರವಾಗಿ ಇದನ್ನು ವಿಧಾನಸಭೆಯಲ್ಲಿ ಗೃಹ ಸಚಿವ ಡಾ.ಜಿ ಪರಮೇಶ್ವರ ಅವರು ಮಂಡಿಸಿದ್ದರು. ಆರ್​ಸಿಬಿ ವಿಜಯೋತ್ಸವ ಸಂಭ್ರಮಾಚರಣೆ ವೇಳೆ ನಡೆದ ಕಾಲ್ತುಳಿತದಿಂದ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ, ಈ ನಿಟ್ಟಿನಲ್ಲಿ ಕಠಿಣ ಜೈಲು ಶಿಕ್ಷೆ, ದಂಡನೆ ವಿಧಿಸುವ ಜನಸಂದಣಿ ನಿಯಂತ್ರಣ

ಜನಸಂದಣಿ ನಿಯಂತ್ರಣ ವಿಧೇಯಕಕ್ಕೆ ವಿಧಾನಸಭೆಯಲ್ಲಿ ಅಂಗೀಕಾರ, ಅನುಮತಿ ರಹಿತ ಕಾರ್ಯಕ್ರಮ ಆಯೋಜಿಸಿದರೆ 1 ಕೋಟಿ ರೂ. ದಂಡ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಚಿನ್ನದ ದರದಲ್ಲಿ ಮತ್ತೆ ಏರಿಕೆ; ಇಂದಿನ ರೇಟ್‌ ಚೆಕ್‌ ಮಾಡಿ

(ನ್ಯೂಸ್‌ ಕಡಬ) newskadaba.com, ಆ.20 ಬೆಂಗಳೂರು: ಬೆಂಗಳೂರು: ಚಿನ್ನದ ದರದಲ್ಲಿ ಕಳೆದೆರಡು ದಿನಗಳಿಂದ ಭಾರೀ ಇಳಿಕೆ ಕಂಡಿದ್ದ ಚಿನ್ನದ ದರದಲ್ಲಿ ಮತ್ತೆ ಏರಿಕೆ ಕಂಡು ಬಂದಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 50ರೂ. ಏರಿಕೆಯಾಗಿದ್ದು 9,230 ರೂ. ಇದೆ. ಇನ್ನು 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 60ರೂ ಏರಿಕೆಯಾಗಿ 10,075 ರೂ.ಗೆ ಬಂದು ತಲುಪಿದೆ. ಆ ಮೂಲಕ 22 ಕ್ಯಾರಟ್‌ನ 8 ಗ್ರಾಂ ಚಿನ್ನ 73,840 ರೂ. ಬಾಳಿದರೆ, 10

ಚಿನ್ನದ ದರದಲ್ಲಿ ಮತ್ತೆ ಏರಿಕೆ; ಇಂದಿನ ರೇಟ್‌ ಚೆಕ್‌ ಮಾಡಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕರ್ನಾಟಕ ಪೂರಕ ಅಂದಾಜು: ₹3,352.57 ಕೋಟಿ ಮೊತ್ತ ವಿಧಾನಸಭೆಯಲ್ಲಿ ಮಂಡನೆ

(ನ್ಯೂಸ್‌ ಕಡಬ) newskadaba.com, ಆ.20 ಬೆಂಗಳೂರು: ರಾಜ್ಯ ಸರ್ಕಾರದ 2025-26ನೇ ಸಾಲಿನ ₹3,352.57 ಕೋಟಿ ಮೊತ್ತದ ಪೂರಕ ಅಂದಾಜು (ಮೊದಲನೇ ಕಂತು) ಅನ್ನು ವಿಧಾನಸಭೆಯಲ್ಲಿ ಬುಧವಾರ ಮಂಡಿಸಲಾಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಪರವಾಗಿ ಸಮಾಜ ಕಲ್ಯಾಣ ಸಚಿವ ಡಾ. ಎಚ್‌.ಸಿ.ಮಹದೇವಪ್ಪ ಅವರು ಪೂರಕ ಅಂದಾಜು ಮಂಡಿಸಿದರು. ರಾಜ್ಯ ಸರ್ಕಾರ ವಿಜಯನಗರ ಜಿಲ್ಲೆಯಲ್ಲಿ ಹಮ್ಮಿಕೊಂಡಿದ್ದ ಸಾಧನಾ ಸಮಾವೇಶಕ್ಕೆ 10 ಕೋಟಿ ರು. ವೆಚ್ಚ ಮಾಡಿರುವ ಬಗ್ಗೆ ಪೂರಕ ಅಂದಾಜಿನಲ್ಲಿ ಉಲ್ಲೇಖಿಸಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿ ಗಿರಿಧಾಮದಲ್ಲಿ ಜರುಗಿದ ಸಚಿವ ಸಂಪುಟ

ಕರ್ನಾಟಕ ಪೂರಕ ಅಂದಾಜು: ₹3,352.57 ಕೋಟಿ ಮೊತ್ತ ವಿಧಾನಸಭೆಯಲ್ಲಿ ಮಂಡನೆ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಇಂದಿನ ಹವಮಾನ ವರದಿ

(ನ್ಯೂಸ್‌ ಕಡಬ) newskadaba.com, ಆ.20 ಬೆಂಗಳೂರು: ರಾಜ್ಯದಲ್ಲಿ ಆ.21ರಂದು ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ರಾಯಚೂರು, ವಿಜಯಪುರ ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ ಸೇರಿ ವಿವಿಧೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು,

ಇಂದಿನ ಹವಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನೆಲ್ಯಾಡಿ : ರಸ್ತೆ ಬದಿ ನಿಂತಿದ್ದ ವೃದ್ಧೆಯ ಸರ ಕಳ್ಳತನ – ಆರೋಪಿ ಅರೆಸ್ಟ್

(ನ್ಯೂಸ್‌ ಕಡಬ) newskadaba.com, ಆ.20 : ಬೆಂಗಳೂರು ಗ್ರಾಮದ ಪಡುಬೆಟ್ಟು ರಸ್ತೆ ಬದಿ ನಿಂತಿದ್ದ ಅಲಿಮಮ್ಮ (65) ಎಂಬವರ ಕುತ್ತಿಗೆಯಿಂದ 10 ಪವನ್‌ ತೂಕವಿರುವ ಸರವನ್ನು ಸೆಳೆದೊಯ್ದ ಆರೋಪಿ ಸುಳ್ಯದ ಅಲೆಟ್ಟಿ ನಿವಾಸಿ ಅಬ್ದುಲ್‌ ರಹಿಮಾನ್‌ (31) ಎಂಬಾತನನ್ನು ಉಪ್ಪಿನಂಗಡಿ ಪೊಲೀಸರು ನೆಕ್ಕಿಲಾಡಿಯಲ್ಲಿ ಬಂಧಿಸಿ ಚಿನ್ನಾಭರಣವನ್ನು ವಶಪಡಿಸಿಕೊಂಡಿರುತ್ತಾರೆ ಎಂದು ತಿಳಿದುಬಂದಿದೆ. ಬೈಕ್‌ನಲ್ಲಿ ಬಂದ ಇಬ್ಬರು ಯುವಕರು ವೃದ್ಧೆಯನ್ನು ಮಾತನಾಡಿಸಿ ನಂತರ ಕುತ್ತಿಗೆಯಲ್ಲಿದ್ದ ಸರವನ್ನು ಸೆಳೆದೊಯ್ದ ಕುರಿತು ದೂರು ನೀಡಲಾಗಿತ್ತು. ವೃತ್ತ ನಿರೀಕ್ಷಕ ರವಿ ಬಿ.ಎಸ್‌. ಅವರ ತಂಡ

ನೆಲ್ಯಾಡಿ : ರಸ್ತೆ ಬದಿ ನಿಂತಿದ್ದ ವೃದ್ಧೆಯ ಸರ ಕಳ್ಳತನ – ಆರೋಪಿ ಅರೆಸ್ಟ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

‘ಪಾಕಿಸ್ತಾನ ಭಯೋತ್ಪಾದನೆ ಮಟ್ಟ ಹಾಕುವ ಮೂಲಕ ಪ್ರಾಮಾಣಿಕತೆ ತೋರಿಸುವತ್ತ ‘- ಶಶಿ ತರೂರ್

(ನ್ಯೂಸ್‌ ಕಡಬ) newskadaba.com ಆ.20 ನವದೆಹಲಿ: ‘ಪಾಕಿಸ್ತಾನದೊಂದಿಗಿನ ಬಾಂಧವ್ಯ ಸಹಜ ಸ್ಥಿತಿಗೆ ತರುವ ವಿಚಾರದಲ್ಲಿ ಭಾರತಕ್ಕೆ ಇನ್ನೊಂದು ಹೆಜ್ಜೆ ಮುಂದಿಡುವ ಹಂಬಲವಿಲ್ಲ. ಇದಕ್ಕಾಗಿ ತನ್ನ ನೆಲದಲ್ಲಿರುವ ಭಯೋತ್ಪಾದಕ ಮೂಲಸೌಕರ್ಯಗಳನ್ನು ಮಟ್ಟ ಹಾಕುವ ಮೂಲಕ ಪ್ರಾಮಾಣಿಕತೆ ತೋರಿಸುವತ್ತ ಮೊದಲ ಹೆಜ್ಜೆ ಇಡಬೇಕು’ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ತಿಳಿಸಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ‘ಪಾಕಿಸ್ತಾನದ ನಡವಳಿಕೆಯನ್ನು ಗಮನಿಸಿದಾಗ, ಹೊಣೆಗಾರಿಕೆ ಅವರ ಮೇಲಿದೆ. ಪಾಕಿಸ್ತಾನವೇ ತನ್ನ ನೆಲದಲ್ಲಿರುವ ಭಯೋತ್ಪಾದಕ ಜಾಲವನ್ನು ನಿರ್ನಾಮ ಮಾಡುವ ಮೂಲಕ ಹೊಣೆಗಾರಿಕೆ ಪ್ರದರ್ಶಿಸಬೇಕು. 1950ರಲ್ಲಿ

‘ಪಾಕಿಸ್ತಾನ ಭಯೋತ್ಪಾದನೆ ಮಟ್ಟ ಹಾಕುವ ಮೂಲಕ ಪ್ರಾಮಾಣಿಕತೆ ತೋರಿಸುವತ್ತ ‘- ಶಶಿ ತರೂರ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

* ಪುನರ್ವಸತಿ ಕಾರ್ಯಕರ್ತರ ಗೌರವಧನ 15,000 ದಿಂದ 16,000 ರೂ.ಗೆ ಹೆಚ್ಚಳ’-ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್*

(ನ್ಯೂಸ್‌ ಕಡಬ) newskadaba.com ಆ.20 ಬೆಂಗಳೂರು : ಗ್ರಾಮೀಣ ಹಾಗೂ ನಗರ ಪುನರ್ವಸತಿ ಕಾರ್ಯಕರ್ತರ ಮಾಸಿಕ ಗೌರವಧನವನ್ನು 9,000 ರೂಪಾಯಿಯಿಂದ 10,000 ರೂಪಾಯಿಗಳಿಗೆ ಹಾಗೂ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರ ಮಾಸಿಕ ಗೌರವಧನವನ್ನು 15,000 ರೂಪಾಯಿಯಿಂದ 16,000 ರೂಪಾಯಿಗೆ ಹೆಚ್ಚಿಸಲಾಗಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ನಡೆಯುತ್ತಿರುವ ಮುಂಗಾರು ಅಧಿವೇಶನದ 7ನೇ ದಿನವಾದ ಬುಧವಾರ ವಿಧಾನಸಭೆಯಲ್ಲಿ ಪ್ರಶ್ನೋತ್ತರ ವೇಳೆ ಮಾತನಾಡಿದ ಅವರು, ಗ್ರಾಮೀಣ ಪುನರ್ವಸತಿ ಯೋಜನೆಯಡಿ ಪುನರ್ವಸತಿ ಕಾರ್ಯಕರ್ತರನ್ನು ನಿಯಮಾನುಸಾರ ಗೌರವಧನದ ಆಧಾರದ ಮೇಲೆ ನೇಮಕ

* ಪುನರ್ವಸತಿ ಕಾರ್ಯಕರ್ತರ ಗೌರವಧನ 15,000 ದಿಂದ 16,000 ರೂ.ಗೆ ಹೆಚ್ಚಳ’-ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್* Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ ಪಟ್ಟಣ ಪಂಚಾಯತ್ ಚುನಾವಣೆ: ಕಾಂಗ್ರೆಸ್ ಗೆ ಗೆಲುವು

(ನ್ಯೂಸ್‌ ಕಡಬ) newskadaba.com ಆ.20 : ಕಡಬ ಪಟ್ಟಣ ಪಂಚಾಯತ್ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು, ಕಾಂಗ್ರೆಸ್ 8 ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ಬಹುಮತ ಗಳಿಸಿದೆ. ಬಿಜೆಪಿ ಐದು ಸ್ಥಾನಗಳಲ್ಲಿ ಗೆಲುವು ದಾಖಲಿಸಿದೆ. ಒಟ್ಟು 13 ಸ್ಥಾನಗಳಿಗೆ ಚುನಾವಣೆ ನಡೆದಿತ್ತು. ಬೆಳಗ್ಗೆ 8 ಗಂಟೆಗೆ ಆರಂಭಗೊಂಡ ಮತ ಎಣಿಕೆ ಪ್ರಕ್ರಿಯೆ 9:45ರ ವೇಳೆ ಮುಕ್ತಾಯಗೊಂಡಿದೆ. ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಕಳಾರ ವಾರ್ಡ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ತಮನ್ನಾ ಜಬೀನ್ ಜಯ ಗಳಿಸಿದರೆ. 8ನೇ ಪಿಜಕ್ಕಳ ವಾರ್ಡ್ ನಲ್ಲಿ

ಕಡಬ ಪಟ್ಟಣ ಪಂಚಾಯತ್ ಚುನಾವಣೆ: ಕಾಂಗ್ರೆಸ್ ಗೆ ಗೆಲುವು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top