News Kadaba

ಮಂಗಳೂರು: ವಿಶ್ವದ ಮೊದಲ ‘ಎಐ ಕಾರ್ಡ್’ ಡೀಲರ್‌ ಆಗಲು ಸುವರ್ಣ ಅವಕಾಶ

(ನ್ಯೂಸ್‌ ಕಡಬ) newskadaba.com ಆ. 19 ಮಂಗಳೂರು: ಕೃತಕ ಬುದ್ಧಿಮತ್ತೆಯು ವಿಶ್ವದ ಭವಿಷ್ಯವಾಗಿರುವ ಈ ಕಾಲದಲ್ಲಿ, ಎಐ ಮೇಲಿನ ಹೂಡಿಕೆಯೆಂದರೆ ಚಿನ್ನದೇ ಫಸಲೇ ಸರಿ. ಇಂತಹ ಅವಕಾಶವೊಂದು ಈಗ ತೆರೆದುಕೊಂಡಿದೆ. ಶಿಕ್ಷಣದಲ್ಲಿ ಎಐ ಅಳವಡಿಕೆಯ ಚೊಚ್ಚಲ ಹೆಜ್ಜೆಯಾದ ʻವಿಶ್ವದ ಮೊದಲ ಎಐ ಕಾರ್ಡ್ʼ ಹೆಗ್ಗಳಿಕೆಯ ʻಯತಿಕಾರ್ಪ್ ಎಐ ಕಾರ್ಡ್ʼ ಇದೀಗ ರಾಜ್ಯಾದ್ಯಂತ ಡೀಲರ್‌ಶಿಪ್ ಪಡೆಯಲು ಅರ್ಜಿ ಆಹ್ವಾನಿಸಿದೆ. ಈಗಾಗಲೇ ಮೊದಲ ಹಂತದಲ್ಲಿ ಒಂದು ಲಕ್ಷಕ್ಕೂ ಅಧಿಕವಾದ ಫಲಾನುಭವಿಗಳು ಈ ಕಾರ್ಡ್‌ನ ಬಳಕೆದಾರರಾಗಿದ್ದಾರೆ. ಇದೀಗ ಸಂಸ್ಥೆಯು 2ನೇ ಹಂತದ […]

ಮಂಗಳೂರು: ವಿಶ್ವದ ಮೊದಲ ‘ಎಐ ಕಾರ್ಡ್’ ಡೀಲರ್‌ ಆಗಲು ಸುವರ್ಣ ಅವಕಾಶ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವರುಣನ ಆರ್ಭಟಕ್ಕೆ ಇಡೀ ರಾಜ್ಯವೇ ತತ್ತರ: ಅಪಾಯ ಮಟ್ಟ ಮೀರಿ ಹರಿಯುತ್ತಿದೆ ಹಲವು ನದಿಗಳು, ಪ್ರವಾಹದ ಎಚ್ಚರಿಕೆ

ನ್ಯೂಸ್‌ ಕಡಬ) newskadaba.com ಆ. 19.  ಬೆಂಗಳೂರು: ಕೊಡಗು, ಮಲೆನಾಡು, ಉತ್ತರ ಕರ್ನಾಟಕ, ಕರಾವಳಿ ಸೇರಿದಂತೆ ರಾಜ್ಯದಾದ್ಯಂತ ಮುಂಗಾರು ಮಳೆ ಅಬ್ಬರಿಸುತ್ತಿದ್ದು, ಅಧಿಕ ಮಳೆಯ ಪರಿಣಾಮವಾಗಿ ರಾಜ್ಯದ ಹಲವು ನದಿಗಳು, ಜಲಾಶಯಗಳು ಅಪಾಯ ಮಟ್ಟ ಮೀರಿ ಹರಿಯುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಹಲವು ಭಾಗಗಳಲ್ಲಿ ಪ್ರವಾಹದ ಎಚ್ಚರಿಕೆ ನೀಡಲಾಗಿದೆ. ವರುಣನ ಅಬ್ಬರಕ್ಕೆ ಬೆಳಗಾವಿ ಜಿಲ್ಲೆಯ ಹಲವಾರು ಸೇತುವೆಗಳು ಮುಳುಗಡೆಯಾಗಿದ್ದು, ಗದಗ ಜಿಲ್ಲೆಯ ಮಲಪ್ರಭಾ ಜಲಾನಯನ ಪ್ರದೇಶದ ಅನೇಕ ಹಳ್ಳಿಗಳ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗುತ್ತಿದೆ. ಮಂಡ್ಯ ಜಿಲ್ಲಾಡಳಿತವು

ವರುಣನ ಆರ್ಭಟಕ್ಕೆ ಇಡೀ ರಾಜ್ಯವೇ ತತ್ತರ: ಅಪಾಯ ಮಟ್ಟ ಮೀರಿ ಹರಿಯುತ್ತಿದೆ ಹಲವು ನದಿಗಳು, ಪ್ರವಾಹದ ಎಚ್ಚರಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

KSRTC ಗೆ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ಗರಿ: 504 ಕೋಟಿ ಮಹಿಳೆಯರ ಪ್ರಯಾಣ!

(ನ್ಯೂಸ್‌ ಕಡಬ) newskadaba.com ಆ. 19.  ಬೆಂಗಳೂರು: ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಯ (ಕೆಎಸ್ಆರ್ ಟಿಸಿ), ಕಲ್ಯಾಣ ಕರ್ನಾಟಕ, ಈಶಾನ್ಯ ಕರ್ನಾಟಕ ಹಾಗೂ ಬೆಂಗಳೂರು ಮಹಾನಗರ ಸಾರಿಗೆ (ಬಿಎಂಟಿಸಿ) ಸಂಸ್ಥೆಗಳ ಬಸ್ಸುಗಳಲ್ಲಿ 2023ರ ಜೂನ್ ನಿಂದ 2025ರ ಜುಲೈವರೆಗಿನ ಎರಡು ವರ್ಷಗಳ ಅವಧಿಯಲ್ಲಿ ಅತಿ ಹೆಚ್ಚು ಮಹಿಳಾ ಪ್ರಯಾಣಿಕರನ್ನು ಹೊತ್ತೊಯ್ದ ದಾಖಲೆಗೆ ಭಾಜನವಾಗಿದೆ. ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ಎಂಬ ಸಂಸ್ಥೆಯು ಈ ಬಗ್ಗೆ ಅಧ್ಯಯನ ಮಾಡಿ, ಕೆಎಸ್ ಆರ್ ಟಿಸಿಗೆ ದಾಖಲೆಯ ಪ್ರಮಾಣ ಪತ್ರ ನೀಡಿದೆ.

KSRTC ಗೆ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ಗರಿ: 504 ಕೋಟಿ ಮಹಿಳೆಯರ ಪ್ರಯಾಣ! Read More »

ಕರ್ನಾಟಕ

ಸಾಮಾಜಿಕ ಜಾಲತಾಣದಲ್ಲಿ ನಟಿ ರಮ್ಯಾಗೆ ಅಶ್ಲೀಲ-ಬೆದರಿಕೆ ಸಂದೇಶ: ಇಬ್ಬರು ಆರೋಪಿಗಳು ವಶಕ್ಕೆ

(ನ್ಯೂಸ್‌ ಕಡಬ) newskadaba.com ಆ. 19.  ಬೆಂಗಳೂರು: ಇನ್‌ಸ್ಟಾಗ್ರಾಂ ಖಾತೆಯಲ್ಲಿ ನಟಿ, ಮಾಜಿ ಸಂಸದೆ ರಮ್ಯಾ ಅವರಿಗೆ ಅಶ್ಲೀಲವಾಗಿ ಕಮೆಂಟ್ ಮಾಡಿದ್ದ ಮತ್ತು ಬೆದರಿಕೆಯೊಡ್ಡಿದ್ದ ಆರೋಪದಡಿ ಮತ್ತಿಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಬಂಧಿತರನ್ನು ಉಡುಪಿ ಮೂಲದ ಆದರ್ಶ್ ಮತ್ತು ಸಂಜಯ್ ಎಂದು ಗುರುತಿಸಲಾಗಿದೆ. ಈ ಮೂಲಕ ಬಂಧಿತರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ. ಇದೇ ಪ್ರಕರಣದಲ್ಲಿ ಆಗಸ್ಟ್ 4ರಂದು ಭುವನ್‌ ಗೌಡ ಹಾಗೂ ರಾಜೇಶ್ ಎಂಬುವವರನ್ನು ಬಂಧಿಸಲಾಗಿತ್ತು. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಮ್ಯಾ

ಸಾಮಾಜಿಕ ಜಾಲತಾಣದಲ್ಲಿ ನಟಿ ರಮ್ಯಾಗೆ ಅಶ್ಲೀಲ-ಬೆದರಿಕೆ ಸಂದೇಶ: ಇಬ್ಬರು ಆರೋಪಿಗಳು ವಶಕ್ಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ

ವಿಧಾನಪರಿಷತ್ ನಲ್ಲಿ ತಿದ್ದುಪಡಿಗಳೊಂದಿಗೆ ಭೂ ಸುಧಾರಣಾ ಮಸೂದೆ ಅಂಗೀಕಾರ

(ನ್ಯೂಸ್‌ ಕಡಬ) newskadaba.com ಆ. 19.  ಬೆಂಗಳೂರು: ಕೃಷಿ ಭೂಮಿಯನ್ನು ಕೈಗಾರಿಕಾ ಉದ್ದೇಶಗಳಿಗಾಗಿ ಪರಿವರ್ತಿಸಲು ಅವಕಾಶ ನೀಡುವ ಕರ್ನಾಟಕ ಭೂ ಸುಧಾರಣಾ ಮತ್ತು ಇತರ ಕೆಲವು ಕಾನೂನುಗಳ (ತಿದ್ದುಪಡಿ) ಮಸೂದೆಯನ್ನು ಸೋಮವಾರ ವಿಧಾನ ಪರಿಷತ್ತಿನಲ್ಲಿ ಧ್ವನಿ ಮತದ ಮೂಲಕ ಅಂಗೀಕರಿಸಲಾಯಿತು. ಮಸೂದೆಯನ್ನು ಮಂಡಿಸಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು, ಎರಡು ಎಕರೆವರೆಗಿನ ಕೃಷಿ ಭೂಮಿಯಲ್ಲಿ ಎಂಎಸ್‌ಎಂಇ ಘಟಕಗಳನ್ನು ಸ್ಥಾಪಿಸಬೇಕಾದರೆ, ಭೂ ಪರಿವರ್ತನೆಗೆ ಅರ್ಜಿ ಸಲ್ಲಿಸುವ ಅಗತ್ಯವಿಲ್ಲ. ಮಸೂದೆಯು ಪರಿವರ್ತನೆ ಷರತ್ತನ್ನು ತೆಗೆದುಹಾಕುವುದರಿಂದ ಅದು ಸ್ವಯಂಚಾಲಿತವಾಗಿ ಪರಿವರ್ತನೆಯಾಗುತ್ತದೆ

ವಿಧಾನಪರಿಷತ್ ನಲ್ಲಿ ತಿದ್ದುಪಡಿಗಳೊಂದಿಗೆ ಭೂ ಸುಧಾರಣಾ ಮಸೂದೆ ಅಂಗೀಕಾರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಜಿಎಸ್‌ಟಿ ಸುಧಾರಣೆಗಳಿಂದ ಬಳಕೆ ಹೆಚ್ಚಳ, ಹಣದುಬ್ಬರ ಇಳಿಕೆ- ಮೋರ್ಗನ್ ಸ್ಟಾನ್ಲಿ ವರದಿ

(ನ್ಯೂಸ್‌ ಕಡಬ) newskadaba.com ಆ. 19.  ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಸುಧಾರಣೆಗಳು ಚಿಲ್ಲರೆ ಹಣದುಬ್ಬರವನ್ನು ಕಡಿಮೆ ಮಾಡುವುದರ ಜೊತೆಗೆ ಬಳಕೆಗೆ ಪ್ರಮುಖ ಉತ್ತೇಜನವನ್ನು ನೀಡಬಹುದು ಎಂದು ಜಾಗತಿಕ ಹೂಡಿಕೆ ಬ್ಯಾಂಕ್ ಮಾರ್ಗನ್ ಸ್ಟಾನ್ಲಿ ಹೇಳಿದ್ದಾರೆ. ಸೋಮವಾರ ಬಿಡುಗಡೆಯಾದ ವರದಿಯಲ್ಲಿ, ಈ ಬದಲಾವಣೆಯು ಭಾರತದ ವಾರ್ಷಿಕ ಜಿಡಿಪಿಗೆ 0.5-0.6% ಸೇರಿಸಬಹುದು ಮತ್ತು ಬೆಳವಣಿಗೆಯನ್ನು 50-70 ಬೇಸಿಸ್ ಪಾಯಿಂಟ್‌ಗಳಷ್ಟು ಹೆಚ್ಚಿಸಬಹುದು ಎಂದು ಬ್ಯಾಂಕ್ ಅಂದಾಜಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಸ್ವಾತಂತ್ರ‍್ಯ ದಿನಾಚರಣೆಯಂದು “ಮುಂದಿನ ಪೀಳಿಗೆಯ” ಜಿಎಸ್‌ಟಿ

ಜಿಎಸ್‌ಟಿ ಸುಧಾರಣೆಗಳಿಂದ ಬಳಕೆ ಹೆಚ್ಚಳ, ಹಣದುಬ್ಬರ ಇಳಿಕೆ- ಮೋರ್ಗನ್ ಸ್ಟಾನ್ಲಿ ವರದಿ Read More »

ಬ್ರೇಕಿಂಗ್ ನ್ಯೂಸ್

ಆ. 23, 24 ರಂದು ಕೆಲವು ರೈಲುಗಳು ರದ್ದು, ಸಂಚಾರದಲ್ಲಿ ಬದಲಾವಣೆ

(ನ್ಯೂಸ್‌ ಕಡಬ) newskadaba.com ಆ. 19. ಆಗಸ್ಟ್ 24ರಂದು ಅರಸೀಕೆರೆ-ಬಾಣಾವರ ಹಾಗೂ ಅರಸೀಕೆರೆ-ಹಬ್ಬನಘಟ್ಟ ನಿಲ್ದಾಣಗಳ ನಡುವೆ ಪ್ರಮುಖ ಸಿಗ್ನಲಿಂಗ್ ಮತ್ತು ಬ್ಲಾಕ್ ಇನ್‌ಸ್ಟ್ರುಮೆಂಟ್ ಬದಲಾವಣೆ ಕಾಮಗಾರಿಗಳು ನಡೆಯಲಿವೆ. ಈ ಹಿನ್ನೆಲೆಯಲ್ಲಿ, ಅಂದು ಕೆಲವು ರೈಲು ಸೇವೆಗಳನ್ನು ರದ್ದುಗೊಳಿಸಲಾಗಿದೆ. ಇನ್ನು ಕೆಲವು ರೈಲುಗಳ ಸಂಚಾರ ಭಾಗಶಃ ರದ್ದುಗೊಳಿಸಲಾಗಿದೆ. ಕೆಲವು ರೈಲುಗಳ ಪ್ರಯಾಣದ ಸಮಯ ಮರು ನಿಗದಿಪಡಿಸಲಾಗುತ್ತದೆ ಮತ್ತು ನಿಯಂತ್ರಿಸಲಾಗಿದೆ ಎಂದು ಭಾರತೀಯ ರೈಲ್ವೆಯ ನೈರುತ್ಯ ರೈಲ್ವೆ ವಲಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಆಗಸ್ಟ್ 23ರಂದು, ರೈಲು ಸಂಖ್ಯೆ 06270 ಎಸ್ಎಂವಿಟಿ

ಆ. 23, 24 ರಂದು ಕೆಲವು ರೈಲುಗಳು ರದ್ದು, ಸಂಚಾರದಲ್ಲಿ ಬದಲಾವಣೆ Read More »

ಕರಾವಳಿ, ಕರ್ನಾಟಕ

ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಮಹಾಭಿಯೋಗ ಪ್ರಸ್ತಾವನೆ ಮಂಡಿಸಲು ವಿಪಕ್ಷಗಳು ಮುಂದು..!

(ನ್ಯೂಸ್‌ ಕಡಬ) newskadaba.com, ಆ.18: ನವದೆಹಲಿ: ‘ಮತ ಕಳ್ಳತನʼ ಆರೋಪದ ಮೇಲೆ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಸಂಸತ್ತಿನಲ್ಲಿ ಮಹಾಭಿಯೋಗ ಪ್ರಸ್ತಾವನೆ ಮಂಡಿಸಲು ವಿರೋಧ ಪಕ್ಷಗಳ ಇಂಡಿಯಾ ಮೈತ್ರಿಕೂಟ ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ. ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಮತ್ತು ಮತ ಕಳ್ಳತನದ ವಿರುದ್ಧ ವಿರೋಧ ಪಕ್ಷಗಳು ಪ್ರತಿಭಟನೆಯನ್ನು ತೀವ್ರಗೊಳಿಸುತ್ತಿದೆ. ಈ ಮಧ್ಯೆ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ವಿರುದ್ಧ ದೋಷಾರೋಪಣೆ ಮಾಡಲು ಇಂಡಿಯಾ ಮೈತ್ರಿಕೂಟ ನಿರ್ಧರಿಸಿದೆ ಎಂದು

ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಮಹಾಭಿಯೋಗ ಪ್ರಸ್ತಾವನೆ ಮಂಡಿಸಲು ವಿಪಕ್ಷಗಳು ಮುಂದು..! Read More »

ಬ್ರೇಕಿಂಗ್ ನ್ಯೂಸ್

ಉಡುಪಿ – ಸಿಯಾಚಿನ್‌ನಲ್ಲಿ ತ್ರಿವರ್ಣ ಧ್ವಜ ಹಾರಿಸಲು 1,300 ಕಿ.ಮೀ ದೂರ ಬೈಕ್‌ ಸವಾರಿ ಮಾಡಿದ 57 ನೇ ವಯಸ್ಸಿನ ಮಹಿಳೆಯ ಸಾಹಸ !

(ನ್ಯೂಸ್ ಕಡಬ) newskadaba.com ಆ. 18 ಉಡುಪಿ : ಸಾಹಸಕ್ಕೆ ವಯಸ್ಸು ಅಡ್ಡಿಯಾಗಲ್ಲ ಎಂದು ಕುಂದಾಪುರದ 57 ವರ್ಷದ ವಿಲ್ಮಾ ಕ್ರಾಸ್ತಾ ಕಾರ್ವಾಲ್ಹೋ ಮತ್ತೊಮ್ಮೆ ಅದನ್ನು ಸಾಬೀತುಪಡಿಸಿದ್ದಾರೆ. 2023 ರಲ್ಲಿ ವಿಶ್ವದ ಅತಿ ಎತ್ತರದ ಪ್ರದೇಶವಾದ ಪಾಸ್ ಉಮ್ಲಿಂಗ್ ಗೆ ತನ್ನ ಮಗಳು ಚೆರಿಶ್ ಕರ್ವಾಲೋ ಜೊತೆ ಧೈರ್ಯಶಾಲಿಯಾಗಿ ಬೈಕ್‌ ಸವಾರಿ ಮೂಲಕ ಗಮನ ಸೆಳೆದ ನಂತರ, ವಿಲ್ಮಾ ಈಗ ಮತ್ತೊಂದು ಗಮನಾರ್ಹ ಸಾಧನೆ ಮಾಡಿದ್ದಾರೆ. ಆಗಸ್ಟ್‌ 15 ಸ್ವಾತಂತ್ರ್ಯ ದಿನದಂದು, ವಿಶ್ವದ ಅತ್ಯಂತ ಸವಾಲಿನ ಭೂಪ್ರದೇಶಗಳಲ್ಲಿ ಒಂದಾದ ಸಿಯಾಚಿನ್

ಉಡುಪಿ – ಸಿಯಾಚಿನ್‌ನಲ್ಲಿ ತ್ರಿವರ್ಣ ಧ್ವಜ ಹಾರಿಸಲು 1,300 ಕಿ.ಮೀ ದೂರ ಬೈಕ್‌ ಸವಾರಿ ಮಾಡಿದ 57 ನೇ ವಯಸ್ಸಿನ ಮಹಿಳೆಯ ಸಾಹಸ ! Read More »

ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ರಾಜ್ಯದಲ್ಲಿ ಮುಂದುವರೆದ ಮಳೆ ಅಬ್ಬರ, 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

(ನ್ಯೂಸ್ ಕಡಬ) newskadaba.com ಆ. 18 ಬೆಂಗಳೂರು: ಮುಂಗಾರು ಮಳೆಯ ಆರ್ಭಟ ಮುಂದುವರೆದಿದೆ. ಮಳೆಯ ಅಬ್ಬರಕ್ಕೆ ಹಳ್ಳಕೊಳ್ಳಗಳು ಭರ್ತಿಯಾಗಿ ಹೊಲಗದ್ದೆಗಳು ಜಲಾವೃತಗೊಂಡು ರಸ್ತೆ ಸಂಪರ್ಕ ಕಡಿತಗೊಂಡಿದೆ. ಮಲೆನಾಡು ಭಾಗದಲ್ಲಿ ಗುಡ್ಡ ಕುಸಿತ ಉಂಟಾಗಿ ಸಂಚಾರಕ್ಕೆ ಅಡಚಣೆಯಾಗಿದೆ. 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಕೊಡಗಿನಲ್ಲಿ ಬಿಟ್ಟೂಬಿಡದೆ ಮಳೆ ಸುರಿಯುತ್ತಿದ್ದು, ನಿರಂತರ ಮಳೆಗೆ ಹಲವು ಅವಾಂತರಗಳು ಸೃಷ್ಟಿಯಾಗಿವೆ. ಬೃಹತ್‌ ಮರಗಳು, ವಿದ್ಯುತ್‌ ಕಂಬಗಳು ಧರೆಗುರುಳಿರುವುದರಿಂದ ವಿದ್ಯುತ್‌ ಸಂಪರ್ಕ ಕಡಿತಗೊಂಡಿದೆ. ರಸ್ತೆ ಸಂಪರ್ಕ ಸಮರ್ಪಕವಾಗಿಲ್ಲದೆ ಜನ ಪರದಾಡುವಂತಾಗಿದೆ. ಹಾಸನದಲ್ಲಿ

ರಾಜ್ಯದಲ್ಲಿ ಮುಂದುವರೆದ ಮಳೆ ಅಬ್ಬರ, 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top