News Kadaba

ತಿರುಪತಿಯಲ್ಲಿ ಹುಂಡಿ ಹಣ ಎಣಿಕೆ – ಒಂದು ತಿಂಗಳಲ್ಲೇ 129.45 ಕೋಟಿ ಸಂಗ್ರಹ

(ನ್ಯೂಸ್‌ ಕಡಬ) newskadaba.com, ಆ.11 : ಅಮರಾವತಿ: ತಿರುಮಲದಲ್ಲಿರುವ ವೆಂಕಟೇಶ್ವರ ದೇವರ ಸನ್ನಿಧಿಯಲ್ಲಿ ಹುಂಡಿ ಹಣ ಎಣಿಕೆ ಕಾರ್ಯ ನಡೆದಿದ್ದು, ಜುಲೈ ತಿಂಗಳಲ್ಲಿಯೇ 129.45 ಕೋಟಿ ರೂ. ಸಂಗ್ರಹವಾಗಿದೆ. 2024ರ ಜುಲೈನಲ್ಲಿ 125.35 ಕೋಟಿ ರೂ. ಕಾಣಿಕೆ ಸಂಗ್ರಹವಾಗಿತ್ತು. ಆದರೆ ಈ ಬಾರಿ 129.45 ಕೋಟಿ ರೂ. ಸಂಗ್ರಹವಾಗಿದ್ದು, ಕಳೆದ ಸಲಕ್ಕಿಂತ 4.09 ಕೋಟಿ ರೂ. ಅಧಿಕ ಕಾಣಿಕೆ ಸಂಗ್ರಹವಾಗಿದೆ ಎಂದು ತಿರುಮಲ ತಿರುಪತಿ ದೇವಸ್ಥಾನ ಮಂಡಳಿ (TTD) ಮೂಲಗಳು ತಿಳಿಸಿವೆ. ಬೇಸಿಗೆ ರಜೆ ಮುಗಿದು ಶಾಲಾ-ಕಾಲೇಜುಗಳು ತೆರೆದಿದ್ದರೂ […]

ತಿರುಪತಿಯಲ್ಲಿ ಹುಂಡಿ ಹಣ ಎಣಿಕೆ – ಒಂದು ತಿಂಗಳಲ್ಲೇ 129.45 ಕೋಟಿ ಸಂಗ್ರಹ Read More »

ಬ್ರೇಕಿಂಗ್ ನ್ಯೂಸ್

ಇಂದಿನಿಂದ ಮಳೆಗಾಲದ ಅಧಿವೇಶನ ಪ್ರಾರಂಭ

(ನ್ಯೂಸ್‌ ಕಡಬ) newskadaba.com, ಆ.11 : ಬೆಂಗಳೂರು: ಇಂದಿನಿಂದ ವಿಧಾನಮಂಡಲ ಅಧಿವೇಶನ ಪ್ರಾರಂಭವಾಗಲಿದೆ. ಸರ್ಕಾರ ವರ್ಸಸ್ ವಿಪಕ್ಷಗಳ ನಡುವೆ ಮಹಾಕದನಕ್ಕೆ ಅಧಿವೇಶನ ವೇದಿಕೆಯಾಗುವ ಸಾಧ್ಯತೆ ಇದೆ. ಇಂದಿನಿಂದ ಆಗಸ್ಟ್ 22 ರವರೆಗೂ ಅಧಿವೇಶನ ನಡೆಯಲಿದೆ. ವಿಪಕ್ಷಗಳಿಗೆ ಸರ್ಕಾರವನ್ನ ಕಟ್ಟಿ ಹಾಕಲು ಸಾಲು ಸಾಲು ಅಸ್ತ್ರಗಳಿವೆ. ಸರ್ಕಾರದ ವೈಫಲ್ಯಗಳನ್ನ ಬಿಚ್ಚಿಟ್ಟು ಸರ್ಕಾರವನ್ನ ಎಕ್ಸ್‌ಪೋಸ್ ಮಾಡಲು ವಿಪಕ್ಷಗಳ ಸಿದ್ಧತೆ ನಡೆಸಿವೆ. ಭಾನುವಾರ ಬಿಜೆಪಿ-ಜೆಡಿಎಸ್ ಪ್ರಮುಖ ನಾಯಕರಿಂದ ಸದನದಲ್ಲಿ ಹೋರಾಟದ ಬಗ್ಗೆ ಚರ್ಚೆಯ ವಿಷಯಗಳ ಪ್ರಸ್ತಾಪವಾಗಿದೆ. ಸರ್ಕಾರದ ವಿರುದ್ಧ ಒಟ್ಟಾಗಿ ಹೋರಾಟ ನಡೆಸಲು

ಇಂದಿನಿಂದ ಮಳೆಗಾಲದ ಅಧಿವೇಶನ ಪ್ರಾರಂಭ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಂಗಳೂರಿನಲ್ಲಿ ಭಾರಿ ಮಳೆ : 20 ಮರಗಳು ಧರೆಗೆ

(ನ್ಯೂಸ್‌ ಕಡಬ) newskadaba.com, ಆ.11 : ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಭಾನುವಾರ ಭಾರೀ ಮಳೆಯಾಗಿದ್ದು, ಮಹದೇವಪುರದ ಹೂಡಿಯಲ್ಲಿ ಮನೆಗಳಿಗೆ ಮಳೆ ನೀರು ನುಗ್ಗಿ ಅವಾಂತರ ಸೃಷ್ಟಿಸಿದರೆ, ಮೈಸೂರು ರಸ್ತೆಯ ಬಿಜಿಎಸ್‌ ಮೇಲ್ಸೇತುವೆ, ಹೆಬ್ಬಾಳದ ಮುಖ್ಯ ರಸ್ತೆಯಲ್ಲಿ ಭಾರೀ ಪ್ರಮಾಣದ ಮಳೆ ನೀರು ನಿಂತು ವಾಹನ ಸಂಚಾರಕ್ಕೆ ಅಡ್ಡಿ ಉಂಟಾಯಿತು. ಕಳೆದ ಎರಡ್ಮೂರು ದಿನದಿಂದ ನಗರದಲ್ಲಿ ಮಳೆ ಚುರುಕುಗೊಂಡಿದ್ದು, ಶನಿವಾರ ರಾತ್ರಿಯಿಂದ ಸಣ್ಣ ಪ್ರಮಾಣ ಮಳೆ ಆರಂಭಗೊಂಡಿತ್ತು. ಭಾನುವಾರ ಬೆಳಿಗ್ಗೆಯಿಂದ ನಗರದಲ್ಲಿ ಮೋಡ ಕವಿದ ವಾತಾವರಣ ಕಂಡು ಬಂತು.

ಬೆಂಗಳೂರಿನಲ್ಲಿ ಭಾರಿ ಮಳೆ : 20 ಮರಗಳು ಧರೆಗೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಂಗಳೂರು- ಬೆಳಗಾವಿ ವಂದೇ ಭಾರತ್ ರೈಲು ಸೇವೆ: ಪ್ರಯಾಣಿಕರಿಗೆ 80 ನಿಮಿಷ ಉಳಿತಾಯ

(ನ್ಯೂಸ್‌ ಕಡಬ) newskadaba.com, ಆ.11 ಬೆಂಗಳೂರು: ಭಾರತದ ಹೈಸ್ಪೀಡ್ ರೈಲು ಜಾಲಕ್ಕೆ ಉತ್ತೇಜನ ನೀಡುವ ಸಲುವಾಗಿ, ಪ್ರಧಾನಿ ನರೇಂದ್ರ ಮೋದಿ ಭಾನುವಾರ ಬೆಂಗಳೂರಿನ ಕೆಎಸ್ಆರ್ ರೈಲು ನಿಲ್ದಾಣದಿಂದ ಮೂರು ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ ಹಸಿರು ನಿಶಾನೆ ತೋರಿದರು. ಬಹು ನಿರೀಕ್ಷಿತ ಬೆಂಗಳೂರು-ಬೆಳಗಾವಿ ವಂದೇ ಭಾರತ್ ಎಕ್ಸ್‌ಪ್ರೆಸ್ ಗೆ ಪ್ರಧಾನಿ ಭೌತಿಕವಾಗಿ ಹಸಿರು ನಿಶಾನೆ ತೋರಿದರ. ಇದರ ಜೊತೆಗೆ ಶ್ರೀ ಮಾತಾ ವೈಷ್ಣೋ ದೇವಿ ಕತ್ರ-ಅಮೃತಸರ ಮತ್ತು ಅಜ್ನಿ (ನಾಗ್ಪುರ)-ಪುಣೆ ವಂದೇ ಭಾರತ್ ರೈಲುಗಳನ್ನು ಉದ್ಘಾಟಿಸಿದರು.

ಬೆಂಗಳೂರು- ಬೆಳಗಾವಿ ವಂದೇ ಭಾರತ್ ರೈಲು ಸೇವೆ: ಪ್ರಯಾಣಿಕರಿಗೆ 80 ನಿಮಿಷ ಉಳಿತಾಯ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನಟ ವಿಷ್ಣುವರ್ಧನ್ ಸ್ಮಾರಕ ಸಂರಕ್ಷಿಸಿ: ಸಿಎಂ ಸಿದ್ದರಾಮಯ್ಯಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಗ್ರಹ

(ನ್ಯೂಸ್‌ ಕಡಬ) newskadaba.com, ಆ.11 ಬೆಂಗಳೂರು: ಸಾಹಸ ಸಿಂಹ ಡಾ. ವಿಷ್ಣುವರ್ಧನ್ ಸ್ಮಾರಕ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಅವರು, ವಿಷ್ಣುವರ್ಧನ್ ಅವರ ಸ್ಮಾರಕವನ್ನು ರಾತ್ರೋರಾತ್ರಿ ಧ್ವಂಸ ಮಾಡಿರುವುದು ನಮೆಗೆಲ್ಲ ನೋವು ತಂದಿದೆ. ಡಾ ವಿಷ್ಣುವರ್ಧನ್ ಸ್ಮಾರಕ ವನ್ನು ಶಾಶ್ವತವಾಗಿ ಕಾಪಾಡಿ. ಅದನ್ನು ರಾಷ್ಟ್ರೀಯ ಮಟ್ಟದ ಪ್ರವಾಸಿಗರ ಕೇಂದ್ರವಾಗಿ ಮಾಡಿ ಎಂದು ಆಗ್ರಹಿಸಿದ್ದಾರೆ. ಕನ್ನಡ ಚಲನಚಿತ್ರ ರಂಗಕ್ಕೆ

ನಟ ವಿಷ್ಣುವರ್ಧನ್ ಸ್ಮಾರಕ ಸಂರಕ್ಷಿಸಿ: ಸಿಎಂ ಸಿದ್ದರಾಮಯ್ಯಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಗ್ರಹ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಧರ್ಮಸ್ಥಳ ಕೇಸ್‌: ಮಾನಹಾನಿಕರ ವರದಿ ಪ್ರಸಾರ ತಡೆ ಕೋರಿ ಅರ್ಜಿ – ರಾಜ್ಯದ ವಿಚಾರಣಾ ನ್ಯಾಯಾಲಯಕ್ಕೆ ವರ್ಗಾಯಿಸಿದ ಸುಪ್ರೀಂ

(ನ್ಯೂಸ್‌ ಕಡಬ) newskadaba.com, ಆ.08: ನವದೆಹಲಿ: ಧರ್ಮಸ್ಥಳದಲ್ಲಿ ನೂರಾರು ಶವಗಳ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾನಹಾನಿಕರ ವರದಿಗಳ ಪ್ರಕಟಣೆ ತಡೆಯುವಂತೆ ಧರ್ಮಸ್ಥಳ ದೇವಾಲಯದ ಕಾರ್ಯದರ್ಶಿ ಹರ್ಷೇಂದ್ರ ಕುಮಾರ್ ಡಿ ಸಲ್ಲಿಸಿದ್ದ ಅರ್ಜಿಯನ್ನ ಹೊಸದಾಗಿ ನಿರ್ಧರಿಸುವಂತೆ ಸುಪ್ರೀಂ ಕೋರ್ಟ್ ಶುಕ್ರವಾರ ಕರ್ನಾಟಕ ವಿಚಾರಣಾ ನ್ಯಾಯಾಲಯಕ್ಕೆ ನಿರ್ದೇಶನ ನೀಡಿದೆ. ಮಾನಹಾನಿಕರ ವರದಿ ಪ್ರಸಾರಕ್ಕೆ ತಡೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಇಂದು ನ್ಯಾಯಮೂರ್ತಿಗಳಾದ ರಾಜೇಶ್ ಬಿಂದಾಲ್ ಮತ್ತು ಮನಮೋಹನ್ ಅವರಿದ್ದ ದ್ವಿ ಪೀಠವು ವಿಚಾರಣೆ ನಡೆಸಿತು. ಆದಾಗ್ಯೂ ಈ ವಿಷಯದಲ್ಲಿ ಮಾಧ್ಯಮಗಳ ನಿರ್ಬಂಧದ

ಧರ್ಮಸ್ಥಳ ಕೇಸ್‌: ಮಾನಹಾನಿಕರ ವರದಿ ಪ್ರಸಾರ ತಡೆ ಕೋರಿ ಅರ್ಜಿ – ರಾಜ್ಯದ ವಿಚಾರಣಾ ನ್ಯಾಯಾಲಯಕ್ಕೆ ವರ್ಗಾಯಿಸಿದ ಸುಪ್ರೀಂ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಪಿಲ್‌ ಶರ್ಮಾ ಕೆಫೆ ಮೇಲೆ ಮತ್ತೆ ಅಟ್ಯಾಕ್‌

(ನ್ಯೂಸ್‌ ಕಡಬ) newskadaba.com, ಆ.08: ನವದೆಹಲಿ: ಹಾಸ್ಯ ನಟ ಕಪಿಲ್ ಶರ್ಮಾ ಅವರ ಕೆಫೆ ಮೇಲೆ ಮತ್ತೆ ದಾಳಿ ನಡೆದಿದೆ. ಏಕಾಏಕಿ ಕೆಫೆಗೆ ನುಗ್ಗಿದ 25ಜನರ ತಂಡ ಗುಂಡಿನ ದಾಳಿ ನಡೆಸಿದೆ. ಇನ್ನು ದಾಳಿಯ ಹೊಣೆಯನ್ನು ಗುರುಪ್ರೀತ್ ಸಿಂಗ್ ಅಲಿಯಾಸ್ ಗೋಲ್ಡಿ ಧಿಲ್ಲೋನ್ ಮತ್ತು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ಗಳು ಹೊತ್ತುಕೊಂಡಿವೆ. ಇನ್ನು ದಾಳಿಯ ವಿಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಅದರಲ್ಲಿ ಗುಂಡಿನ ಸದ್ದಿನ ನಡುವೆ ಒಂದು ಧ್ವನಿ ಕೇಳಿಸುತ್ತಿದೆ. ನಾವು ಗುರಿಯಿಟ್ಟಿದ್ದ ವ್ಯಕ್ತಿಗೆ ಕರೆ ಮಾಡಿದ್ದೆವು, ಆತ

ಕಪಿಲ್‌ ಶರ್ಮಾ ಕೆಫೆ ಮೇಲೆ ಮತ್ತೆ ಅಟ್ಯಾಕ್‌ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಆ.10 : ಚೆನ್ನಾವರದಲ್ಲಿ 4ನೇ ವರ್ಷದ ಆಟಿದ ಕೂಟ ಕೆಸರ್‌ಡ್ ಒಂಜಿ ದಿನ ವಾಲಿಬಾಲ್ ,ತ್ರೋಬಾಲ್, ಹಗ್ಗಜಗ್ಗಾಟ ಸೇರಿದಂತೆ ವಿವಿಧ ಸ್ಫರ್ಧೆಗಳು

(ನ್ಯೂಸ್‌ ಕಡಬ) newskadaba.com, ಆ.08: ಸವಣೂರು : ಅಭ್ಯುದಯ ಯುವಕ ಮಂಡಲ (ರಿ.) ಚೆನ್ನಾವರ ಪಾಲ್ತಾಡಿ ಇದರ ವತಿಯಿಂದ ಉಳ್ಳಾಕುಲು ಸೇವಾ ಸಮಿತಿ ಚೆನ್ನಾವರ ಇದರ ಸಹಯೋಗದಲ್ಲಿ  4ನೇ ವರ್ಷದ ಆಟಿದ ಕೂಟ-ಕೆಸರ್‌ಡ್ ಒಂಜಿ ದಿನ ಕಾರ್ಯಕ್ರಮ ಆ.10ರಂದು  ಚೆನ್ನಾವರ ಗುತ್ತಿನ ಗದ್ದೆಯಲ್ಲಿ ನಡೆಯಲಿದೆ.   ಚೆನ್ನಾವರ ಉಳ್ಳಾಕುಲು ಸೇವಾ ಸಮಿತಿಯ ಅಧ್ಯಕ್ಷರಾದ ಪದ್ಮನಾಭ ಶೆಟ್ಟಿ ಚೆನ್ನಾವರಗುತ್ತು ಕಾರ್ಯಕ್ರಮ ಉದ್ಘಾಟಿಸುವರು. ಕ್ರೀಡಾಂಗಣ ಉದ್ಘಾಟನೆಯನ್ನು ಅಬುದಾಭಿ ಇಂಡಿಯನ್ ಸ್ಕೂಲ್, ಅಬುದಾಭಿಯ ದೈಹಿಕ ಶಿಕ್ಷಣ ನಿರ್ದೇಶಕ ದಿನೇಶ್ ಎನ್.ಸುವರ್ಣ ನೆರವೇರಿಸುವರು.

ಆ.10 : ಚೆನ್ನಾವರದಲ್ಲಿ 4ನೇ ವರ್ಷದ ಆಟಿದ ಕೂಟ ಕೆಸರ್‌ಡ್ ಒಂಜಿ ದಿನ ವಾಲಿಬಾಲ್ ,ತ್ರೋಬಾಲ್, ಹಗ್ಗಜಗ್ಗಾಟ ಸೇರಿದಂತೆ ವಿವಿಧ ಸ್ಫರ್ಧೆಗಳು Read More »

ಕರಾವಳಿ, ಕ್ರೀಡಾ ನ್ಯೂಸ್

ರಾತ್ರೋರಾತ್ರಿ ವಿಷ್ಣು ಸಮಾಧಿ ನೆಲಸಮ – ಅಭಿಮಾನಿಗಳಿಂದ ತೀವ್ರ ಆಕ್ರೋಶ

(ನ್ಯೂಸ್‌ ಕಡಬ) newskadaba.com, ಆ.08: ಅಭಿಮಾನಿಗಳ ವಿರೋಧದ ನಡುವೆಯೂ ಡಾ.ವಿಷ್ಣುವರ್ಧನ್‌ ಅವರ ಸಮಾಧಿಯನ್ನ ತೆರವುಗೊಳಿಸಿದ್ದು, ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಹೈಕೋರ್ಟ್‌ ಸೂಚನೆ ಮೇರೆಗೆ ಅಭಿಮಾನ್ ಸ್ಟುಡಿಯೋದಲ್ಲಿದ್ದ ಸಮಾಧಿಯನ್ನ ರಾತ್ರೋರಾತ್ರಿ ತೆರವುಗೊಳಿಸಲಾಗಿದೆ. ಇದರಿಂದ ಆಘಾತಕ್ಕೆ ಒಳಗಾಗಿರುವ ವಿಷ್ಣು ಅಭಿಮಾನಿಗಳು ಸರ್ಕಾರ, ಪೊಲೀಸ್‌ ಇಲಾಖೆ ಹಾಗೂ ವಾಣಿಜ್ಯ ಮಂಡಳಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. 35 ವರ್ಷಗಳ ಕಲಾಸೇವೆ ಮತ್ತು 200 ಕನ್ನಡ ಚಲನಚಿತ್ರದಲ್ಲಿ ಅಭಿನಯಿಸಿ ಕನ್ನಡಿಗರ ಮನಗೆದ್ದ ಡಾ.ವಿಷ್ಣುವರ್ಧನ್‌ ಅವರ ಅಂತ್ಯಕ್ರಿಯೆಯನ್ನು ಬೆಂಗಳೂರಿನ ಕೆಂಗೇರಿಯಲ್ಲಿರುವ ಅಭಿಮಾನ್‌ ಸ್ಟುಡಿಯೋ ಆವರಣದಲ್ಲಿ ನಡೆಸಲಾಗಿತ್ತು.

ರಾತ್ರೋರಾತ್ರಿ ವಿಷ್ಣು ಸಮಾಧಿ ನೆಲಸಮ – ಅಭಿಮಾನಿಗಳಿಂದ ತೀವ್ರ ಆಕ್ರೋಶ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮೋದಿ ಮತಗಳ್ಳತನ ಮಾಡಿ ಪ್ರಧಾನಿಯಾಗಿದ್ದಾರೆ: ರಾಹುಲ್‌ ಗಾಂಧಿ ವಾಗ್ದಾಳಿ

(ನ್ಯೂಸ್‌ ಕಡಬ) newskadaba.com, ಆ.08: ನರೇಂದ್ರ ಮೋದಿಯವರು ಮತಗಳ್ಳತನ ಮಾಡಿ ಪ್ರಧಾನ ಮಂತ್ರಿಯಾಗಿದ್ದಾರೆ ಎಂದು ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ.ಚುನಾವಣಾ ಆಯೋಗ ಮತ್ತು ಬಿಜೆಪಿ ಮತ ಕಳ್ಳತನ ಮಾಡಿದೆ ಎಂದು ನಾವು 100% ಸಾಬೀತುಪಡಿಸಿದ್ದೇವೆ ಎಂದು ರಾಹುಲ್ ತಿಳಿಸಿದ್ದಾರೆ. ಕಾಂಗ್ರೆಸ್‌ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕಳೆದ ಚುನಾವಣೆಯಲ್ಲಿ ನಾವು ಸಂವಿಧಾನ ಉಳಿಸುವ ಕೆಲಸ ಮಾಡಿದೆವು. ಸಂವಿಧಾನ ಪುಸ್ತಕದಲ್ಲಿ ಸಾವಿರಾರು ವರ್ಷಗಳ ಇತಿಹಾಸ ಇದೆ. ಗಾಂಧೀಜಿ, ಅಂಬೇಡ್ಕರ್, ನೆಹರೂ, ಪಟೇಲ್‌ರ ಧ್ವನಿ

ಮೋದಿ ಮತಗಳ್ಳತನ ಮಾಡಿ ಪ್ರಧಾನಿಯಾಗಿದ್ದಾರೆ: ರಾಹುಲ್‌ ಗಾಂಧಿ ವಾಗ್ದಾಳಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top