News Kadaba

ಇಂದು ಕರಾವಳಿ ಸೇರಿ ರಾಜ್ಯದ ಹಲವೆಡೆ ಭಾರೀ ಮಳೆ ಸಾಧ್ಯತೆ

(ನ್ಯೂಸ್ ಕಡಬ) newskadaba.com, ಜು. 29. ಇಂದು(ಜು.29) ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆ ಇದ್ದು,ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.ಮಂಗಳವಾರದಂದು ಉತ್ತರಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಉಳಿದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆಯೆಂದು ಹವಾಮಾನ ಇಲಾಖೆ ತಿಳಿಸಿದೆ.

ಇಂದು ಕರಾವಳಿ ಸೇರಿ ರಾಜ್ಯದ ಹಲವೆಡೆ ಭಾರೀ ಮಳೆ ಸಾಧ್ಯತೆ Read More »

ಕರಾವಳಿ, ಕರ್ನಾಟಕ

ಮೈಸೂರಿನಲ್ಲಿ ಡ್ರಗ್ಸ್‌ ಫ್ಯಾಕ್ಟರಿ ಪತ್ತೆ, ₹390 ಕೋಟಿಯ ಮಾದಕ ವಸ್ತು ವಶ‌

(ನ್ಯೂಸ್ ಕಡಬ) newskadaba.com, ಜು.‌ 29. ಮುಂಬಯಿ: ಭಾನುವಾರ ಮೈಸೂರಿನ ಹೊರವಲಯದಲ್ಲಿ ಭಾರಿ ಪ್ರಮಾಣದ ಡ್ರಗ್ಸ್‌ ವಶ ಪ್ರಕರಣದ ಸಂಪೂರ್ಣ ಚಿತ್ರಣವನ್ನು ದಾಳಿ ನಡೆಸಿದ್ದ ಮುಂಬೈ ಪೊಲೀಸರು ಸೋಮವಾರ ನೀಡಿದ್ದು ‘ಒಟ್ಟು 390 ಕೋಟಿ ರು. ಮೌಲ್ಯದ 192 ಕೆ.ಜೆ. ಮೆಫೆಡ್ರೋನ್‌ ಡ್ರಗ್ಸ್‌ ವಶಪಡಿಸಿಕೊಳ್ಳಲಾಗಿದೆ. 8 ಜನರನ್ನು ಬಂಧಿಸಲಾಗಿದೆ’ ಎಂದು ಹೇಳಿದ್ದಾರೆ. ಈ ಬಗ್ಗೆ ಮಾತನಾಡಿರುವ ಉಪ ಪೊಲೀಸ್ ಆಯುಕ್ತರ ದತ್ತಾ ನಲವಾಡೆ, ‘ಮೈಸೂರು ದಾಳಿಗೂ ಮುಂಚೆ 8 ಕೋಟಿ ರು. ಮೌಲ್ಯದ 5 ಕೇಜಿ ಮಫೆಡ್ರೋನ್‌

ಮೈಸೂರಿನಲ್ಲಿ ಡ್ರಗ್ಸ್‌ ಫ್ಯಾಕ್ಟರಿ ಪತ್ತೆ, ₹390 ಕೋಟಿಯ ಮಾದಕ ವಸ್ತು ವಶ‌ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕೇರಳದ ನಿಮಿಷಾ ಪ್ರಿಯಾ ಮರಣದಂಡನೆ ಸಂಪೂರ್ಣವಾಗಿ ರದ್ದು

(ನ್ಯೂಸ್ ಕಡಬ) newskadaba.com, ಜು.‌ 29. ಯೆಮೆನ್‌ನಲ್ಲಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳದ ನರ್ಸ್ ನಿಮಿಷಾ ಪ್ರಿಯಾ ಅವರಿಗೆ ವಿಧಿಸಲಾಗಿದ್ದ ಮರಣದಂಡನೆಯನ್ನು ಈಗ ಶಾಶ್ವತವಾಗಿ ರದ್ದುಪಡಿಸಲಾಗಿದೆ ಎಂದು ಭಾರತೀಯ ಗ್ರ‍್ಯಾಂಡ್ ಮುಫ್ತಿ, ಕಾಂತಪುರಂ ಎಪಿ ಅಬುಬಕರ್ ಮುಸ್ಲೈಯರ್ ಅವರ ಕಚೇರಿ ತಿಳಿಸಿದೆ. ಜುಲೈ 16ರಂದು ನಿಮಿಷಾ ಪ್ರಿಯಾಳಿಗೆ ಗಲ್ಲಿಗೇರಿಸಲು ದಿನ ನಿಗದಿಯಾಗಿತ್ತು. ಆದರೆ, ಭಾರತ ಸರ್ಕಾರದ ಮನವಿ ಹಾಗೂ ಧಾರ್ಮಿಕ ಮುಖಂಡರ ಮಧ್ಯಸ್ಥಿಕೆಯ ಬಳಿಕ ಆ ಗಲ್ಲು ಶಿಕ್ಷೆ ಮುಂದೂಡಲಾಗಿತ್ತು. ಭಾರತ ಸರ್ಕಾರ ಮತ್ತು ಗ್ರ‍್ಯಾಂಡ್ ಮುಫ್ತಿ ಅಬುಬಕರ್

ಕೇರಳದ ನಿಮಿಷಾ ಪ್ರಿಯಾ ಮರಣದಂಡನೆ ಸಂಪೂರ್ಣವಾಗಿ ರದ್ದು Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

‘ಬಿಜೆಪಿಯಿಂದ ರೈತಪರ ಹೋರಾಟ’-ವಿಜಯೇಂದ್ರ

(ನ್ಯೂಸ್ ಕಡಬ) newskadaba.com ಜು. 26. ರಾಜ್ಯ ಸರಕಾರವು ರಸಗೊಬ್ಬರ ವಿಚಾರದಲ್ಲಿ ಪೂರ್ವತಯಾರಿ ಮಾಡಿಲ್ಲ. ತೊಗರಿ ಬೆಳೆಯುವ ಗುಲ್ಬರ್ಗ, ಬೇರೆ ಬೇರೆ ಬೆಳೆ ಬೆಳೆಯುವ ಗದಗ, ಶಿವಮೊಗ್ಗ ಜಿಲ್ಲೆಯಲ್ಲಿ ಎಷ್ಟು ರಸಗೊಬ್ಬರ ಬೇಕೆಂಬ ಪೂರ್ವಾಪರ ಲೆಕ್ಕಾಚಾರ ಇಲ್ಲದೇ ರೈತರಿಗೆ ಆತಂಕದ ಸ್ಥಿತಿ ಉಂಟಾಗಿದೆ ಎಂದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಟೀಕಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ದುಪ್ಪಟ್ಟು ದರದಲ್ಲಿ ಬಿತ್ತನೆ ಬೀಜ, ರಸಗೊಬ್ಬರ ಮಾರಾಟವಾಗುತ್ತಿದೆ. ಕಳ್ಳದಂಧೆಯೂ ನಡೆಯುತ್ತಿದೆ. ಕಾಂಗ್ರೆಸ್

‘ಬಿಜೆಪಿಯಿಂದ ರೈತಪರ ಹೋರಾಟ’-ವಿಜಯೇಂದ್ರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸೋನ್‌ಪ್ರಯಾಗ್ ಬಳಿ ಭೂಕುಸಿತ ಸಂಭವಿಸಿದ ಹಿನ್ನೆಲೆ ಕೇದಾರನಾಥ ಯಾತ್ರೆ ತಾತ್ಕಾಲಿಕ ಸ್ಥಗಿತ

(ನ್ಯೂಸ್ ಕಡಬ) newskadaba.com ಜು. 26. ಸೋನ್‌ಪ್ರಯಾಗ್ ಬಳಿ ಭೂಕುಸಿತ ಸಂಭವಿಸಿದ ಹಿನ್ನೆಲೆ ಕೇದಾರನಾಥ ಯಾತ್ರೆಯನ್ನು ಗೌರಿಕುಂಡ್‌ನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಎಸ್‌ಡಿಆರ್‌ಎಫ್ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ ಘಟನೆಯ ಬಗ್ಗೆ ಮಾಹಿತಿ ಪಡೆದ ತಕ್ಷಣ, ಸಬ್-ಇನ್ಸ್‌ಪೆಕ್ಟರ್ ಆಶಿಶ್ ದಿಮ್ರಿ ನೇತೃತ್ವದ ಎಸ್‌ಡಿಆರ್‌ಎಫ್ ಸೋನ್‌ಪ್ರಯಾಗ್‌ನ ತಂಡವನ್ನು ತಕ್ಷಣವೇ ಸ್ಥಳಕ್ಕೆ ಕಳುಹಿಸಿದರು. ಬಳಿಕ ಸಮಗ್ರ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು. ಕಾರ್ಯಾಚರಣೆಯ ಸಮಯದಲ್ಲಿ, ಎಸ್‌ಡಿಆರ್‌ಎಫ್ ತಂಡ ನಿರ್ಬಂಧಿತ ಮಾರ್ಗದ ಹೊರಗೆ ಸಿಲುಕಿಕೊಂಡಿದ್ದ ಸುಮಾರು 100 ಯಾತ್ರಿಕರನ್ನು ರಕ್ಷಣೆ ಮಾಡಿದೆ ಎಂದು

ಸೋನ್‌ಪ್ರಯಾಗ್ ಬಳಿ ಭೂಕುಸಿತ ಸಂಭವಿಸಿದ ಹಿನ್ನೆಲೆ ಕೇದಾರನಾಥ ಯಾತ್ರೆ ತಾತ್ಕಾಲಿಕ ಸ್ಥಗಿತ Read More »

ಬ್ರೇಕಿಂಗ್ ನ್ಯೂಸ್

ಯುವತಿಯನ್ನು ಆಸ್ಪತ್ರೆಗೆ ಸಾಗಿಸುವಾಗ ಆಂಬುಲೆನ್ಸ್‌ನಲ್ಲೇ ಅತ್ಯಾಚಾರ

(ನ್ಯೂಸ್ ಕಡಬ) newskadaba.com ಜು. 26. ಬಿಹಾರದ ಬೋಧ್ ಗಯಾದ BMP-3 ಪರೇಡ್ ಮೈದಾನದಲ್ಲಿ ಗೃಹ ರಕ್ಷಕರ ನೇಮಕಾತಿ ಪ್ರಕ್ರಿಯೆಯಲ್ಲಿ ಭಾಗವಹಿಸುತ್ತಿದ್ದ ಮಹಿಳೆಯೊಬ್ಬರು ಆಂಬುಲೆನ್ಸ್‌ನಲ್ಲಿ ಆಸ್ಪತ್ರೆಗೆ ಸಾಗಿಸುವ ವೇಳೆ ಚಾಲಕ ಮತ್ತು ಟೆಕ್ನೀಷಿಯನ್‌ನಿಂದ ಅತ್ಯಾಚಾರಕ್ಕೊಳಗಾದ ಘಟನೆ ನಡೆದಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಹಿರಿಯ ಪೊಲೀಸ್ ಅಧೀಕ್ಷಕ ಆನಂದ್ ಕುಮಾರ್ ಅವರ ಪತ್ರಿಕಾ ಪ್ರಕಟಣೆಯ ಪ್ರಕಾರ, ಓಟದ ಸ್ಪರ್ಧೆಯ ವೇಳೆ ಮಹಿಳೆಯು ಮೂರ್ಛೆ ಹೋಗಿದ್ದರಿಂದ ಆಂಬುಲೆನ್ಸ್‌ನಲ್ಲಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ, ಆಂಬುಲೆನ್ಸ್ ಚಾಲಕ ವಿನಯ್ ಕುಮಾರ್ ಮತ್ತು

ಯುವತಿಯನ್ನು ಆಸ್ಪತ್ರೆಗೆ ಸಾಗಿಸುವಾಗ ಆಂಬುಲೆನ್ಸ್‌ನಲ್ಲೇ ಅತ್ಯಾಚಾರ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಧರ್ಮಸ್ಥಳ ದಲ್ಲಿ ನೂರಾರು ಮೃತದೇಹ ಹೂತಿಟ್ಟ ಪ್ರಕರಣ: ತನಿಖೆ ಆರಂಭಿಸಿದ ಎಸ್‌ಐಟಿ

(ನ್ಯೂಸ್ ಕಡಬ) newskadaba.com ಜು. 26. ಧರ್ಮಸ್ಥಳ ಗ್ರಾಮದಲ್ಲಿ ವರ್ಷಗಳ ಹಿಂದೆ ವರದಿಯಾದ ನೂರಾರು ಮೃತದೇಹ ಹೂತಿಟ್ಟ  ಸಾವಿನ ಪ್ರಕರಣಗಳ ತನಿಖೆಗಾಗಿ ರಚಿಸಲಾದ ವಿಶೇಷ ತನಿಖಾ ತಂಡ (ಎಸ್‌ಐಟಿ) ಶುಕ್ರವಾರ ಔಪಚಾರಿಕವಾಗಿ ತನ್ನ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದು, ಸತತ ಸಭೆಗಳನ್ನು ನಡೆಸುತ್ತಿದೆ. ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಮಹಾನಿರ್ದೇಶಕ ಪ್ರಣವ್ ಮೊಹಂತಿ ನೇತೃತ್ವದಲ್ಲಿ ತನಿಖಾ ತಂಡವನ್ನು ರಚಿಸಲಾಗಿದೆ. ಪೊಲೀಸ್ ನೇಮಕಾತಿ ವಿಭಾಗದ ಡಿಐಜಿ ಎಂಎನ್ ಅನುಚೇತ್ ಮತ್ತು ಆಂತರಿಕ ಭದ್ರತಾ ವಿಭಾಗದ ಎಸ್ಪಿ ಜಿತೇಂದ್ರ ಕುಮಾರ್ ದಯಾಮ ಅವರು ಎಸ್‌ಐಟಿಯ

ಧರ್ಮಸ್ಥಳ ದಲ್ಲಿ ನೂರಾರು ಮೃತದೇಹ ಹೂತಿಟ್ಟ ಪ್ರಕರಣ: ತನಿಖೆ ಆರಂಭಿಸಿದ ಎಸ್‌ಐಟಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಡಿವೈಡರ್‌ಗೆ ಪೊಲೀಸ್ ವಾಹನ ಡಿಕ್ಕಿ – ಇಬ್ಬರು ಡಿಎಸ್ಪಿ ಸಾವು

(ನ್ಯೂಸ್ ಕಡಬ) newskadaba.com ಜು. 26. ಹೈದರಾಬಾದ್: ತೆಲಂಗಾಣದ ಯಾದಾದ್ರಿಯಲ್ಲಿ ಪೊಲೀಸ್ ವಾಹನವೊಂದು ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಡಿಎಸ್ಪಿ ಅಧಿಕಾರಿಗಳು ಸಾವನ್ನಪ್ಪಿದ್ದು, ಇಬ್ಬರು ಪೊಲೀಸರು ಗಾಯಗೊಂಡಿದ್ದಾರೆ. ಡಿಎಸ್ಪಿಗಳಾದ ಚಂದ್ರಕರ್ ರಾವ್ ಮತ್ತು ಶಾಂತಾ ರಾವ್‌ರನ್ನು ಮೃತರೆಂದು ಗುರುತಿಸಲಾಗಿದೆ. ಎಎಸ್ಪಿ ಪ್ರಸಾದ್ ಮತ್ತು ಹೆಡ್ ಕಾನ್‌ಸ್ಟೇಬಲ್ ನರಸಿಂಗ್ ರಾವ್ ಗಂಭೀರ ಗಾಯಗೊಂಡಿದ್ದು, ಗಾಯಾಳುಗಳನ್ನು ಹೈದ್ರಾಬಾದ್‌ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಡಿವೈಡರ್‌ಗೆ ಪೊಲೀಸ್ ವಾಹನ ಡಿಕ್ಕಿ – ಇಬ್ಬರು ಡಿಎಸ್ಪಿ ಸಾವು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

3 ನಕ್ಸಲರ ಹೊಡೆದುರುಳಿಸಿದ ಭದ್ರತಾ ಪಡೆಗಳು!

(ನ್ಯೂಸ್ ಕಡಬ) newskadaba.com ಜು. 26. ರಾಂಚಿ: ಜಾರ್ಖಂಡ್‌ನಲ್ಲಿ ಶನಿವಾರ ಮುಂಜಾನೆ ನಡೆದ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ 3 ನಕ್ಸಲರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯಲ್ಲಿ ಶನಿವಾರ ಬೆಳಿಗ್ಗೆ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ನಕ್ಸಲರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸಿಪಿಐ-ಮಾವೋವಾದಿಗಳ ವಿಭಜಿತ ಗುಂಪಾದ ಜಾರ್ಖಂಡ್ ಜನ ಮುಕ್ತಿ ಪರಿಷತ್ (ಜೆಜೆಎಂಪಿ) ಸದಸ್ಯರು ಘಾಗ್ರಾ ಅರಣ್ಯದಲ್ಲಿ ಒಟ್ಟುಗೂಡಿದ್ದು, ಭದ್ರತಾ ಪಡೆಗಳ ಮೇಲೆ ದಾಳಿ ನಡೆಸಲು ಯೋಜಿಸುತ್ತಿದ್ದರು. ಈ ವೇಳೆ

3 ನಕ್ಸಲರ ಹೊಡೆದುರುಳಿಸಿದ ಭದ್ರತಾ ಪಡೆಗಳು! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಯೂರಿಯಾ ಅಭಾವದ ಬಗ್ಗೆ ಕೇಂದ್ರ ಸಚಿವರಿಗೆ CM ಪತ್ರ: ರಾಜ್ಯದಲ್ಲಿ ರಸಗೊಬ್ಬರ ಕೊರತೆ ಇಲ್ಲವೆಂದು ಹೇಳಿಕೆ ನೀಡಿ ಗೊಂದಲ ಸೃಷ್ಟಿಸಿದ ಚಲುವರಾಯಸ್ವಾಮಿ

(ನ್ಯೂಸ್ ಕಡಬ) newskadaba.com ಜು. 26. ಬೆಂಗಳೂರು: ರಾಜ್ಯದಲ್ಲಿ ಯೂರಿಯಾ ಕೊರತೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಜೆ.ಪಿ. ನಡ್ಡಾ ಅವರಿಗೆ ಪತ್ರ ಬರೆದಿದ್ದಾರೆ, ಇದೇ ವೇಳೆ ರಾಜ್ಯದಲ್ಲಿ ರಸಗೊಬ್ಬರಗಳ ಕೊರತೆ ಇಲ್ಲ ಎಂದು ರಾಜ್ಯ ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ರಾಜ್ಯದ ಯಾವುದೇ ಜಿಲ್ಲೆಗಳಲ್ಲೂ ರಸಗೊಬ್ಬರ ಪೂರೈಕೆಯಲ್ಲಿ ಕೊರತೆಯಿಲ್ಲ. ಆದರೂ, ಬೇಡಿಕೆ ಕಡಿಮೆಯಿರುವ ಜಿಲ್ಲೆಗಳಿಂದ ಬೇಡಿಕೆ ಹೆಚ್ಚಿರುವ ಪ್ರದೇಶಗಳಿಗೆ ಗೊಬ್ಬರ ವರ್ಗಾವಣೆ ಮಾಡಿ ಸರಿದೂಗಿಸಲಾಗುತ್ತಿದೆ. ಹೀಗಾಗಿ

ಯೂರಿಯಾ ಅಭಾವದ ಬಗ್ಗೆ ಕೇಂದ್ರ ಸಚಿವರಿಗೆ CM ಪತ್ರ: ರಾಜ್ಯದಲ್ಲಿ ರಸಗೊಬ್ಬರ ಕೊರತೆ ಇಲ್ಲವೆಂದು ಹೇಳಿಕೆ ನೀಡಿ ಗೊಂದಲ ಸೃಷ್ಟಿಸಿದ ಚಲುವರಾಯಸ್ವಾಮಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top