News Kadaba

ವಿದ್ಯಾರ್ಥಿಗಳಲ್ಲಿ ಹೆಚ್ಚಿದ ಆತ್ಮಹತ್ಯೆ ಪ್ರಕರಣ: ಸುಪ್ರೀಂ ಕೋರ್ಟ್ ನಿಂದ ಮಾನಸಿಕ ಸುರಕ್ಷತಗೆ ಮಾರ್ಗಸೂಚಿ ಬಿಡುಗಡೆ

(ನ್ಯೂಸ್ ಕಡಬ) newskadaba.com ಜು. 26. ನವದೆಹಲಿ: ಇತ್ತೀಚೆಗೆ ವಿದ್ಯಾರ್ಥಿಗಳಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವರರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿದ ಸುಪ್ರೀಂ ಕೋರ್ಟ್ ಎಲ್ಲಾ ಶಿಕ್ಷಣ ಸಂಸ್ಥೆಗಳಲ್ಲಿ ಮಾನಸಿಕ ಸುರಕ್ಷತೆ ಮತ್ತು ನಿಯಂತ್ರಕ ಮೇಲ್ವಿಚಾರಣೆಯನ್ನು ಕಡ್ಡಾಯಗೊಳಿಸುವ ರಾಷ್ಟ್ರೀಯ ಮಾರ್ಗಸೂಚಿಗಳನ್ನು ಶುಕ್ರವಾರ ಹೊರಡಿಸಿದೆ. ವಿದ್ಯಾರ್ಥಿಗಳ ಆತ್ಮಹತ್ಯೆಗಳಲ್ಲಿ ಆತಂಕಕಾರಿ ಏರಿಕೆಗೆ ಪ್ರತಿಕ್ರಿಯೆಯಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಕೋರ್ಟ್‌ ಹೇಳಿದೆ. ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರ ಪೀಠವು ನೀಡಿದ ಈ ತೀರ್ಪು, ಶಾಲೆಗಳು, ಕಾಲೇಜುಗಳು, ವಿಶ್ವವಿದ್ಯಾಲಯಗಳು, ಖಾಸಗಿ […]

ವಿದ್ಯಾರ್ಥಿಗಳಲ್ಲಿ ಹೆಚ್ಚಿದ ಆತ್ಮಹತ್ಯೆ ಪ್ರಕರಣ: ಸುಪ್ರೀಂ ಕೋರ್ಟ್ ನಿಂದ ಮಾನಸಿಕ ಸುರಕ್ಷತಗೆ ಮಾರ್ಗಸೂಚಿ ಬಿಡುಗಡೆ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಎಸ್ಸೆಸ್ಸೆಲ್ಸಿ ಪಾಸ್ ಗೆ 33% ಅಂಕ- ಶಿಕ್ಷಣ ತಜ್ಞರಿಂದ ತೀವ್ರ ಆಕ್ಷೇಪ

(ನ್ಯೂಸ್ ಕಡಬ) com ಜು. 26. ಸಿಬಿಎಸ್‌ಇ ಮಾದರಿಯಲ್ಲಿ ರಾಜ್ಯದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲೂ ಪಾಸ್‌ ಅಂಕಗಳ ಪ್ರಮಾಣವನ್ನು ಆಂತರಿಕ ಮೌಲ್ಯಮಾಪನದ ಅಂಕಗಳನ್ನೊಳನ್ನು ಸೇರಿಸಿ ಶೇ.33ಕ್ಕೆ ಇಳಿಸಿ ರಾಜ್ಯ ಸರ್ಕಾರ ಹೊರಡಿಸಿರುವ ಕರಡು ನಿಯಮಾವಳಿ ಅಧಿಸೂಚನೆಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಖಾಸಗಿ ಶಾಲಾ ಸಂಘಟನೆಗಳು, ಪೋಷಕರು ಹಾಗೂ ಶಿಕ್ಷಕ ಸಂಘಟನೆಗಳು ಈ ನಡೆ ಸ್ವಾಗತಿಸಿದರೆ, ಕೆಲ ಶಿಕ್ಷಣದ ತಜ್ಞರು ಶೈಕ್ಷಣಿಕ ದಿವಾಳಿತನಕ್ಕೆ ಇದು ಕೈಗನ್ನಡಿ ಎಂದು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಕ್ಯಾಮ್ಸ್‌

ಎಸ್ಸೆಸ್ಸೆಲ್ಸಿ ಪಾಸ್ ಗೆ 33% ಅಂಕ- ಶಿಕ್ಷಣ ತಜ್ಞರಿಂದ ತೀವ್ರ ಆಕ್ಷೇಪ Read More »

ಕರ್ನಾಟಕ

ಶಾಲಾ ಮೇಲ್ಛಾವಣಿ ಕುಸಿದು 7 ಮಕ್ಕಳು ಸಾವು; ಐವರು ಶಿಕ್ಷಕರ ಅಮಾನತು

(ನ್ಯೂಸ್ ಕಡಬ) com ಜು. 26. ಝಲಾವರ್‌ನಲ್ಲಿ ಪ್ರಾಥಮಿಕ ಶಾಲೆಯ ಮೇಲ್ಛಾವಣಿ ಕುಸಿದು 7 ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಈ ಪ್ರಕರಣ ಸಂಬಂಧ ಐವರು ಶಿಕ್ಷಕರನ್ನು ಅಮಾನತು ಮಾಡಲಾಗಿದೆ. ಶುಕ್ರವಾರ ಬೆಳಗ್ಗೆ ಶಾಲೆ ಶುರುವಾದ ವೇಳೆ ಈ ಅವಘಡ ಸಂಭವಿಸಿದೆ. ಈ ಮೊದಲೇ ಶಿಥಿಲಾವಸ್ಥೆಯಲ್ಲಿದ್ದ ಶಾಲಾ ಕಟ್ಟಡ ಭಾರೀ ಮಳೆಯ ಕಾರಣ ಮೇಲ್ಛಾವಣಿ ಕುಸಿದು ಈ ದುರಂತ ಸಂಭವಿಸಿದೆ. ಸದ್ಯ ಮೃತದೇಹಗಳನ್ನು ಅವಶೇಷಗಳ ಅಡಿಯಿಂದ ಹೊರತೆಗೆದಿದ್ದು, ಇಂದು ಅಂತ್ಯಕ್ರಿಯೆ ನಡೆಯಲಿದೆ. ಗಾಯಾಳು ವಿದ್ಯಾರ್ಥಿಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶಾಲೆಯ

ಶಾಲಾ ಮೇಲ್ಛಾವಣಿ ಕುಸಿದು 7 ಮಕ್ಕಳು ಸಾವು; ಐವರು ಶಿಕ್ಷಕರ ಅಮಾನತು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
crime, arrest, suspected

ಬಂಟ್ವಾಳ: ಕೊಳತ್ತಮಜಲಿನ ಅಬ್ದುಲ್ ರಹಿಮಾನ್ ಹತ್ಯೆ ಕೇಸ್; 12ನೇ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಜು. 26. ಕೂರಿಯಾಳ ಗ್ರಾಮದ ಇರಾಕೋಡಿಯಲ್ಲಿ ಮೇ ೨೭ರಂದು ನಡೆದ ಕೊಳತ್ತಮಜಲಿನ ಅಬ್ದುಲ್ ರಹಿಮಾನ್ ಹತ್ಯೆ ಹಾಗೂ ಖಲಂಧರ್ ಶಾಫಿ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 12ನೇ ಆರೋಪಿಯನ್ನು ಜು. 25ರಂದು ಬಂಧಿಸಿದ್ದಾರೆ. ಪುದು ಗ್ರಾಮದ ರೊಟಿ ಗುಡ್ಡೆ ನಿವಾಸಿ ಸಚಿನ್ ಯಾನೆ ಸಚ್ಚು ರೊಟ್ಟಿಗುಡ್ಡೆ (32) ಬಂಧಿತ ಆರೋಪಿ. ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಳಿಕ ಹೆಚ್ಚಿನ ವಿಚಾರಣೆ ನಡೆಸಲು ನ್ಯಾಯಾಲಯ ಆರೋಪಿಯನ್ನು ಪೊಲೀಸ್ ಕಸ್ಟಡಿಗೆ ನೀಡಿದೆ. ಪ್ರಕರಣಕ್ಕೆ

ಬಂಟ್ವಾಳ: ಕೊಳತ್ತಮಜಲಿನ ಅಬ್ದುಲ್ ರಹಿಮಾನ್ ಹತ್ಯೆ ಕೇಸ್; 12ನೇ ಆರೋಪಿಯ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ರಾಜ್ಯಕ್ಕೆ ಕೊಡಬೇಕಾದ ಯೂರಿಯಾ ಕೂಡಲೇ ಬಿಡುಗಡೆ ಮಾಡಿ; ಕೇಂದ್ರ ಸಚಿವರಿಗೆ ಸಿಎಂ ಸಿದ್ದು ಪತ್ರ

(ನ್ಯೂಸ್‌ ಕಡಬ)newskadaba.com ಜು.25: ರಾಜ್ಯದಲ್ಲಿ ಉಂಟಾಗುತ್ತಿರುವ ಯೂರಿಯಾ ಕೊರತೆ ಹಿನ್ನಲೆಯಲ್ಲಿ ರಾಜ್ಯಕ್ಕೆ ಕೊಡಬೇಕಾದ ಯೂರಿಯಾವನ್ನು ಕೂಡಲೇ ಬಿಡುಗಡೆಗೊಳಿಸುವಂತೆ ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರಿಗೆ ಸಿಎಂ ಸಿದ್ದರಾಮಯ್ಯ ಪತ್ರದ ಮೂಲಕ ಆಗ್ರಹಿಸಿದ್ದಾರೆ. ಪತ್ರದಲ್ಲಿ, ರಾಜ್ಯಕ್ಕೆ ಒಟ್ಟು 11.17 ಲಕ್ಷ ಮೆಟ್ರಿಕ್ ಟನ್ ಯೂರಿಯಾ ಕೊಡಬೇಕಿತ್ತು. ಇಲ್ಲಿಯವರೆಗೆ 5.16 ಲಕ್ಷ ಮೆಟ್ರಿಕ್ ಟನ್ ಮಾತ್ರ ಕೊಡಲಾಗಿದೆ. ರಾಜ್ಯಕ್ಕೆ ಇನ್ನೂ 6.80 ಲಕ್ಷ ಮೆಟ್ರಿಕ್ ಟನ್ ಯೂರಿಯಾ ಬರಬೇಕಿದೆ. ಆದರೆ ಕೆಲ ಫರ್ಟಿಲೈಸರ್ ಕಂಪನಿಗಳು ಕೊರತೆಯ ಕಾರಣ ಹೇಳಿ ಯೂರಿಯಾ ಒದಗಿಸುತ್ತಿಲ್ಲ.

ರಾಜ್ಯಕ್ಕೆ ಕೊಡಬೇಕಾದ ಯೂರಿಯಾ ಕೂಡಲೇ ಬಿಡುಗಡೆ ಮಾಡಿ; ಕೇಂದ್ರ ಸಚಿವರಿಗೆ ಸಿಎಂ ಸಿದ್ದು ಪತ್ರ Read More »

ಕರ್ನಾಟಕ

ಆನ್ ಲೈನ್ ದರೋಡೆ- ಮೆಸೇಜಿಂಗ್ ಆ್ಯಪ್ ನಿಂದ 15.5 ಲಕ್ಷ ಹಣ ವಂಚನೆ

(ನ್ಯೂಸ್‌ ಕಡಬ) newskadaba.com ಜು.23: ಉಡುಪಿ: ಮೆಸೇಜಿಂಗ್ ಆ್ಯಪ್ ಮೂಲಕ ಹೂಡಿಕೆ ಯೋಜನೆಗೆ ಆಮಿಷವೊಡ್ಡಲ್ಪಟ್ಟ ಬಳಿಕ 34 ವರ್ಷದ ವ್ಯಕ್ತಿಯೊಬ್ಬ ಆನ್‌ಲೈನ್ ವಂಚನೆಗೆ ಒಳಗಾಗಿ 15.5 ಲಕ್ಷ ರೂ.ಗೂ ಹೆಚ್ಚು ಹಣವನ್ನು ಕಳೆದುಕೊಂಡಿದ್ದಾನೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಅಶ್ವಿತ್ ಎಂದು ಗುರುತಿಸಲಾದ ಸಂತ್ರಸ್ತ ಈ ಸಂಬಂಧ ಕಾರ್ಕಳ ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಅವರು ಹೇಳಿದರು. ಪೊಲೀಸರ ಪ್ರಕಾರ, ಅಶ್ವಿತ್‌ಗೆ ಜನವರಿ 28 ರಂದು ಮೀನಾ ಸಕ್ಪಾಲ್

ಆನ್ ಲೈನ್ ದರೋಡೆ- ಮೆಸೇಜಿಂಗ್ ಆ್ಯಪ್ ನಿಂದ 15.5 ಲಕ್ಷ ಹಣ ವಂಚನೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ರಾಜ್ಯದಲ್ಲಿ ಮತ್ತೆ ಜಾತಿ ಆಧಾರಿತ ಸಾಮಾಜಿಕ-ಆರ್ಥಿಕ ಸಮೀಕ್ಷೆ; ಸೆ.22ರಿಂದ ಗಣತಿ ಆರಂಭಿಸಲು ಸಿಎಂ ಸೂಚನೆ..!

(ನ್ಯೂಸ್‌ ಕಡಬ) newskadaba.com ಜು.23: ಹಿಂದುಳಿದ ವರ್ಗಗಳ ಆಯೋಗ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸುವ ಕುರಿತಾಗಿ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿದೆ. ಇದರಂತೆ ರಾಜ್ಯದ ಎಲ್ಲಾ 7ಕೋಟಿ ಜನರ ಸಮೀಕ್ಷೆ ನಡೆಸಲಾಗುವುದು. ಜಾತಿ ತಾರತಮ್ಯ ನಿವಾರಣೆ ಮಾಡುವುದು ಗಣತಿಯ ಮುಖ್ಯ ಉದ್ದೇಶ ಎಂದು ಮುಖ್ಯಮಂತ್ರಿ ಅವರು ತಿಳಿಸಿದರು. ರಾಜ್ಯದ ಪ್ರತಿಯೊಬ್ಬರ ಆರ್ಥಿಕ ಪರಿಸ್ಥಿತಿ, ಜಮೀನು ಇದೆಯೇ ಇಲ್ಲವೇ ಸೇರಿದಂತೆ ಸಮಗ್ರ ಸಮೀಕ್ಷೆ ನಡೆಯಬೇಕು. ಈ ಸಮೀಕ್ಷೆ ವರದಿ ಮುಂದಿನ ಬಜೆಟ್ ಸಿದ್ಧಪಡಿಸುವ ಸಂದರ್ಭದಲ್ಲಿ ಆಧಾರವಾಗಲಿದೆ. ಈ ಬಾರಿಯ

ರಾಜ್ಯದಲ್ಲಿ ಮತ್ತೆ ಜಾತಿ ಆಧಾರಿತ ಸಾಮಾಜಿಕ-ಆರ್ಥಿಕ ಸಮೀಕ್ಷೆ; ಸೆ.22ರಿಂದ ಗಣತಿ ಆರಂಭಿಸಲು ಸಿಎಂ ಸೂಚನೆ..! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಚಿಕ್ಕಮಗಳೂರು: ಬಾಲ್ಯ ವಿವಾಹದ ಬಗ್ಗೆ ಮಾಹಿತಿ ನೀಡಿದ್ದಕ್ಕೆ ಅಂಗನವಾಡಿ ಶಿಕ್ಷಕಿ ಕುಟುಂಬಕ್ಕೆ ಗ್ರಾಮಸ್ಥರಿಂದ ಬಹಿಷ್ಕಾರ..!

(ನ್ಯೂಸ್‌ ಕಡಬ) newskadaba.com ಜು.23: ಚಿಕ್ಕಮಗಳೂರು: ಬಾಲ್ಯ ವಿವಾಹದ ಕುರಿತು ಮಾಹಿತಿ ನೀಡಿದ್ದಕ್ಕೆ ಅಂಗನವಾಡಿ ಶಿಕ್ಷಕಿಯ ಕುಟುಂಬವನ್ನು ಗ್ರಾಮಸ್ಥರು ಬಹಿಷ್ಕಾರ ಹಾಕಿರುವ ಘಟನೆ ಚಿಕ್ಕಮಂಗಳೂರು ಜಿಲ್ಲೆಯ ಕಡೂರು ತಾಲೂಕಿನ ಯರೇಹಳ್ಳಿಯಲ್ಲಿ ನಡೆದಿದೆ. ಯರೇಹಳ್ಳಿ ಗ್ರಾಮದಲ್ಲಿ ವಾಸವಾಗಿರುವ ತೇಜಸ್ವಿನಿ ಎಂಬ ಅಂಗನವಾಡಿ ಶಿಕ್ಷಕಿ ಕೆಲ ದಿನಗಳ ಹಿಂದೆ ತಮ್ಮ ಗ್ರಾಮ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಅಪ್ರಾಪ್ತ ವಯಸ್ಸಿನ ಬಾಲಕಿಯೋರ್ವಳ ವಿವಾಹದ ಬಗ್ಗೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಅಂಗನವಾಡಿ ಶಿಕ್ಷಕಿಯಿಂದಾಗಿ ವಿವಾಹ ನಿಂತು ಹೋಗಿದ್ದಲ್ಲದೆ, ಬಾಲ್ಯ

ಚಿಕ್ಕಮಗಳೂರು: ಬಾಲ್ಯ ವಿವಾಹದ ಬಗ್ಗೆ ಮಾಹಿತಿ ನೀಡಿದ್ದಕ್ಕೆ ಅಂಗನವಾಡಿ ಶಿಕ್ಷಕಿ ಕುಟುಂಬಕ್ಕೆ ಗ್ರಾಮಸ್ಥರಿಂದ ಬಹಿಷ್ಕಾರ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ನಾಪತ್ತೆಯಾಗಿ ಪತ್ತೆಯಾಗಿದ್ದ ಯುವತಿ ಧರ್ಮಸ್ಥಳದ ಸನಿಹ ಅನುಮಾನಸ್ಪದ ಸಾವು!

(ನ್ಯೂಸ್‌ ಕಡಬ) newskadaba.com ಜು.23: ಧರ್ಮಸ್ಥಳದ ಸನಿಹ ಬೆಳಾಲು ಗ್ರಾಮದ ಕುಕ್ಕೊಟ್ಟುವಿನ ವೀಣಾ(19) ಎನ್ನುವ ಯುವತಿ ಅನುಮಾನಸ್ಪದವಾಗಿ ಸಾವು ಕಂಡಿರುವ ಘಟನೆ ನಡೆದಿದೆ. ಕಳೆದ ಜುಲೈ 11 ರಂದು ವೀಣಾಳ ಮೃತದೇಹ ಮನೆಯ ಪಕ್ಕದ ಕೆರೆಯಲ್ಲಿ ತೇಲಾಡುವ ಸ್ಥಿತಿಯಲ್ಲಿ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಧರ್ಮಸ್ಥಳ ಠಾಣಾ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ವೀಣಾ ಅವರು ಕಳೆದ ಮೇ.10ರಂದು ನಾಪತ್ತೆಯಾಗಿದ್ದರು. ಈ ಬಗ್ಗೆ ಕೇಸು ದಾಖಲಿಸಿಕೊಂಡಿದ್ದ ಪೊಲೀಸರು ಆಕೆಯ ಪತ್ತೆಗಾಗಿ ಪ್ರಕಟಣೆ ಹೊರಡಿಸಿದ್ದರು. ಆದಾದ ಕೆಲವೇ ದಿನಗಳಲ್ಲಿ

ನಾಪತ್ತೆಯಾಗಿ ಪತ್ತೆಯಾಗಿದ್ದ ಯುವತಿ ಧರ್ಮಸ್ಥಳದ ಸನಿಹ ಅನುಮಾನಸ್ಪದ ಸಾವು! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಇಂದಿನಿಂದ ಪ್ರಧಾನಿ ಮೋದಿ ವಿದೇಶ ಪ್ರವಾಸ ಶುರು; ಮುಕ್ತ ವ್ಯಾಪಾರ ಒಪ್ಪಂದದ ಸಾಧ್ಯತೆ

(ನ್ಯೂಸ್‌ ಕಡಬ) newskadaba.com ಜು.23: ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದಿನಿಂದ ನಾಲ್ಕು ದಿನಗಳ ಕಾಲ ಇಂಗ್ಲೆಂಡ್‌ ಪ್ರವಾಸ ಕೈಗೊಂಡಿದ್ದಾರೆ. ಈ ಎರಡು ದಿನಗಳ ಅಧಿಕೃತ ಪ್ರವಾಸ ವೇಳೆ ಪ್ರಧಾನಿ ಮೋದಿ ಇಂಗ್ಲೆಂಡ್‌ ಜೊತೆಗೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕುವ ನಿರೀಕ್ಷೆ ಇದೆ. ಪ್ರಧಾನಿ ಮೋದಿ ಬ್ರಿಟಿಷ್ ಪ್ರಧಾನಿ ಕೀರ್ ಸ್ಟಾರ್ಮರ್ ಅವರೊಂದಿಗೆ ವ್ಯಾಪಕ ಮಾತುಕತೆ ನಡೆಸಲಿದ್ದಾರೆ ಮತ್ತು ನಂತರ ಕಿಂಗ್ ಚಾರ್ಲ್ಸ್ III ಅವರನ್ನು ಭೇಟಿ ಮಾಡಲಿದ್ದಾರೆ. ಲಂಡನ್ ಬಳಿಯ ಬ್ರಿಟಿಷ್ ಪ್ರಧಾನಿಯ ಅಧಿಕೃತ ನಿವಾಸವಾದ

ಇಂದಿನಿಂದ ಪ್ರಧಾನಿ ಮೋದಿ ವಿದೇಶ ಪ್ರವಾಸ ಶುರು; ಮುಕ್ತ ವ್ಯಾಪಾರ ಒಪ್ಪಂದದ ಸಾಧ್ಯತೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top