News Kadaba

ರಾಜ್ಯದ ಅಂಗನವಾಡಿಗಳಲ್ಲಿ ಅಕ್ಟೋಬರ್ ನಿಂದ ಎಲ್ ಕೆಜಿ, ಯುಕೆಜಿ ತರಗತಿ ಆರಂಭ

(ನ್ಯೂಸ್ ಕಡಬ) newskadaba.com,ಜು .18. ಬೆಂಗಳೂರು: ಅಕ್ಟೋಬರ್‌ನಿಂದ ರಾಜ್ಯದ ಅಂಗನವಾಡಿಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು (LKG, UKG) ಪ್ರಾರಂಭಿಸಲು ರಾಜ್ಯ ಸರ್ಕಾರ ಸಜ್ಜಾಗಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಪ್ರಾಯೋಗಿಕವಾಗಿ ರಾಜಾಜಿನಗರ ಕ್ಷೇತ್ರದ ಅಂಗನವಾಡಿಗಳಲ್ಲಿ ಪೂರ್ವ ಪ್ರಾಥಮಿಕ ವಿಭಾಗಗಳನ್ನು ಪ್ರಾರಂಭಿಸಿದೆ. ಇಲ್ಲಿ ಕಂಡುಬರುವ ಸಕಾರಾತ್ಮಕ ಪ್ರತಿಕ್ರಿಯೆಯ ನಂತರ, ಈ ಕಾರ್ಯಕ್ರಮವನ್ನು ರಾಜ್ಯಾದ್ಯಂತ 4,000 ಅಂಗನವಾಡಿಗಳಿಗೆ ವಿಸ್ತರಿಸಲು ನಿರ್ಧರಿಸಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ […]

ರಾಜ್ಯದ ಅಂಗನವಾಡಿಗಳಲ್ಲಿ ಅಕ್ಟೋಬರ್ ನಿಂದ ಎಲ್ ಕೆಜಿ, ಯುಕೆಜಿ ತರಗತಿ ಆರಂಭ Read More »

ಕರ್ನಾಟಕ

ಧರ್ಮಸ್ಥಳ: ಶವ ಹೂತ ಪ್ರಕರಣ- ಭದ್ರತೆ ಕೋರಿದ ಸಾಕ್ಷಿ ವ್ಯಕ್ತಿ; SIT ರಚನೆಗೆ ನಿವೃತ್ತ ನ್ಯಾ.ಗೋಪಾಲಗೌಡ ಒತ್ತಾಯ

(ನ್ಯೂಸ್ ಕಡಬ) newskadaba.com,ಜು .18. ಬೆಂಗಳೂರು: ಧರ್ಮಸ್ಥಳದಲ್ಲಿ ಹಲವಾರು ಮಹಿಳೆಯರ ಮೇಲೆ ನಡೆದ ಅತ್ಯಾಚಾರ, ಕೊಲೆ ಮತ್ತು ಸಮಾಧಿ ಪ್ರಕರಣದ ಮಾಹಿತಿ ಬಹಿರಂಗಪಡಿಸಿದ ವ್ಯಕ್ತಿ, ಭಾರತದ ಮುಖ್ಯ ನ್ಯಾಯಮೂರ್ತಿಗಳಿಗೆ ಪತ್ರ ಬರೆದು, ತನ್ನ ಸುರಕ್ಷತೆಗಾಗಿ ಮನವಿ ಮಾಡಿದ್ದಾರೆ. ತನಿಖಾಧಿಕಾರಿಗೆ ನೀಡಿದ ಹೇಳಿಕೆಯನ್ನು ಪೊಲೀಸರು ಸೋರಿಕೆ ಮಾಡಿದ್ದಾರೆ. ಮಾಹಿತಿ ಬಹಿರಂಗಪಡಿಸಿದ ವ್ಯಕ್ತಿ ತನ್ನ ಹೇಳಿಕೆ ಸೋರಿಕೆಯಾದ ಬಗ್ಗೆ ತಕ್ಷಣದ ಉನ್ನತ ಮಟ್ಟದ ತನಿಖೆ ನಡೆಸಬೇಕೆಂದು ಕೋರಿದ್ದಾರೆ. ಮೂರು ಪುಟಗಳ ಪತ್ರದ ಪ್ರತಿಗಳನ್ನು ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ, ಮುಖ್ಯಮಂತ್ರಿ ಸಿದ್ದರಾಮಯ್ಯ,

ಧರ್ಮಸ್ಥಳ: ಶವ ಹೂತ ಪ್ರಕರಣ- ಭದ್ರತೆ ಕೋರಿದ ಸಾಕ್ಷಿ ವ್ಯಕ್ತಿ; SIT ರಚನೆಗೆ ನಿವೃತ್ತ ನ್ಯಾ.ಗೋಪಾಲಗೌಡ ಒತ್ತಾಯ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕೋಮುಲ್ ನೇಮಕಾತಿ ಹಗರಣ: ಕರ್ನಾಟಕ ಕಾಂಗ್ರೆಸ್ ಶಾಸಕನ ಆಸ್ತಿ ಮುಟ್ಟುಗೋಲು

(ನ್ಯೂಸ್ ಕಡಬ) newskadaba.com,ಜು .18. 2023 ರಲ್ಲಿ ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿಯಮಿತ (ಕೋಮುಲ್) ನೇಮಕಾತಿಯಲ್ಲಿ ನಡೆದ ಅಕ್ರಮಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕದ ಕಾಂಗ್ರೆಸ್ ಶಾಸಕ ಕೆ.ವೈ. ನಂಜೇಗೌಡ ಅವರ 1.32 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಲಾಗಿದೆ ಎಂದು ಜಾರಿ ನಿರ್ದೇಶನಾಲಯ ಗುರುವಾರ ತಿಳಿಸಿದೆ. ಕೋಲಾರ ಜಿಲ್ಲೆಯ ಮಾಲೂರು ಕ್ಷೇತ್ರದ ಶಾಸಕರಾದ ನಂಜೇಗೌಡ ಅವರು ಕೋಮುಲ್‌ನ ಅಧ್ಯಕ್ಷರಾಗಿದ್ದಾರೆ. ನೇಮಕಾತಿ ಪ್ರಕ್ರಿಯೆಯನ್ನು KOMUL ನಡೆಸಿದ್ದು, ಇದು ಲಿಖಿತ ಪರೀಕ್ಷೆ ಮತ್ತು ಸಂದರ್ಶನವನ್ನು

ಕೋಮುಲ್ ನೇಮಕಾತಿ ಹಗರಣ: ಕರ್ನಾಟಕ ಕಾಂಗ್ರೆಸ್ ಶಾಸಕನ ಆಸ್ತಿ ಮುಟ್ಟುಗೋಲು Read More »

ಕರ್ನಾಟಕ

ಮೂವರು ಶಂಕಿತ ನಕ್ಸಲರು ಕುಂದಾಪುರ ನ್ಯಾಯಾಲಯಕ್ಕೆ ಹಾಜರು

(ನ್ಯೂಸ್ ಕಡಬ) newskadaba.com,ಜು .18. ಬೆಂಗಳೂರು ಮತ್ತು ಕೇರಳದ ಜೈಲುಗಳಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಬಿ.ಜಿ. ಕೃಷ್ಣಮೂರ್ತಿ ಸೇರಿದಂತೆ ಮೂವರು ಶಂಕಿತ ನಕ್ಸಲರನ್ನು ಗುರುವಾರ ಬಿಗಿ ಭದ್ರತೆಯಲ್ಲಿ ಕುಂದಾಪುರದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ಕೇರಳದ ವಿಯೂರು ಕೇಂದ್ರ ಕಾರಾಗೃಹದಲ್ಲಿರುವ ಬಿ.ಜಿ. ಕೃಷ್ಣಮೂರ್ತಿ ಮತ್ತು ಸಾವಿತ್ರಿ ಅಲಿಯಾಸ್ ಉಷಾ ಮತ್ತು ಬೆಂಗಳೂರು ಕೇಂದ್ರ ಕಾರಾಗೃಹದಲ್ಲಿರುವ ವನಜಾಕ್ಷಿ ಎಂಬ ಆರೋಪಿಗಳನ್ನು ಬಾಡಿ ವಾರಂಟ್‌ಗಳ ಮೇಲೆ ನ್ಯಾಯಾಲಯಕ್ಕೆ ಕರೆತಂದು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಯಿತು. ಕೃಷ್ಣಮೂರ್ತಿ ವಿರುದ್ಧ ಏಳು

ಮೂವರು ಶಂಕಿತ ನಕ್ಸಲರು ಕುಂದಾಪುರ ನ್ಯಾಯಾಲಯಕ್ಕೆ ಹಾಜರು Read More »

ಕರಾವಳಿ, ಕರ್ನಾಟಕ

ನರ್ಸ್ ನಿಮಿಷಾ ಪ್ರಿಯಾ ಪ್ರಕರಣ – ಗಲ್ಲು ಶಿಕ್ಷೆ ಬಗ್ಗೆ ವಿದೇಶಾಂಗ ಸಚಿವಾಲಯ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com,ಜು .18. ಕೇರಳದ ನರ್ಸ್ ನಿಮಿಷಾ ಪ್ರಿಯಾ ಪ್ರಕರಣದಲ್ಲಿ ಮಧ್ಯಪ್ರವೇಶಿಸಬೇಕೆಂಬ ಒತ್ತಾಯ ಹೆಚ್ಚುತ್ತಿರುವ ನಡುವೆ ಭಾರತದ ವಿದೇಶಾಂಗ ಸಚಿವಾಲಯ ಇಂದು ಪ್ರತಿಕ್ರಿಯಿಸಿದ್ದು ಹೇಳಿಕೆ ನೀಡಿದೆ. ಪ್ರಕರಣವನ್ನು ಬಗೆಹರಿಸಲು ನಡೆಯುತ್ತಿರುವ ಪ್ರಯತ್ನಗಳ ನಡುವೆಯೂ ಸರ್ಕಾರ ಕುಟುಂಬಕ್ಕೆ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುತ್ತಿದೆ ಎಂದು ಹೇಳಿದೆ. “ಭಾರತ ಸರ್ಕಾರವು ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುತ್ತಿದೆ. ನಾವು ಕಾನೂನು ನೆರವು ನೀಡಿದ್ದೇವೆ ಮತ್ತು ಕುಟುಂಬಕ್ಕೆ ಸಹಾಯ ಮಾಡಲು ವಕೀಲರನ್ನು ನೇಮಿಸಿದ್ದೇವೆ. ನಾವು ನಿಯಮಿತ ಕಾನ್ಸುಲರ್ ಭೇಟಿಗಳನ್ನು ಸಹ ಏರ್ಪಡಿಸಿದ್ದೇವೆ

ನರ್ಸ್ ನಿಮಿಷಾ ಪ್ರಿಯಾ ಪ್ರಕರಣ – ಗಲ್ಲು ಶಿಕ್ಷೆ ಬಗ್ಗೆ ವಿದೇಶಾಂಗ ಸಚಿವಾಲಯ ಸ್ಪಷ್ಟನೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಬ್ರೇಕಿಂಗ್ ನ್ಯೂಸ್

ಉಡುಪಿ: ಭಾರೀ ಮಳೆಯಿಂದಾಗಿ ಪ್ರವಾಹ- 24 ಜನರ ರಕ್ಷಣೆ

(ನ್ಯೂಸ್ ಕಡಬ) newskadaba.com,ಜು .17. ಜುಲೈ 15 ರಂದು ಮುಂಜಾನೆಯಿಂದ ಉಡುಪಿ ಜಿಲ್ಲೆಯಲ್ಲಿ ನಿರಂತರ ಮತ್ತು ವ್ಯಾಪಕ ಮಳೆಯಾಗುತ್ತಿದೆ. ಕಾಪು ತಾಲ್ಲೂಕಿನ ಪಡುಬಿದ್ರಿಯ ಪಾದೆಬೆಟ್ಟು ಪ್ರದೇಶದಲ್ಲಿ ನೀರಿನ ಮಟ್ಟ ವೇಗವಾಗಿ ಏರಿದ್ದು, ಹಲವಾರು ವಸತಿ ಮನೆಗಳು ಜಲಾವೃತಗೊಂಡಿವೆ. ಕಾಪು ತಹಶೀಲ್ದಾರ್ ಪ್ರತಿಭಾ ಆರ್ ಅವರ ನೇತೃತ್ವದಲ್ಲಿ, ಮುನ್ನೆಚ್ಚರಿಕೆ ಕ್ರಮವಾಗಿ ಐದು ಮನೆಗಳ 24 ಜನರನ್ನು ರಕ್ಷಿಸಿ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಜಿಲ್ಲೆಯ ಹಲವಾರು ಪ್ರದೇಶಗಳಲ್ಲಿ ಭಾರೀ ಮಳೆಯಿಂದಾಗಿ ನೀರು ನುಗ್ಗಿ ಪ್ರವಾಹ ಉಂಟಾಗಿದೆ. ಉಡುಪಿ, ಬ್ರಹ್ಮಾವರ, ಬೈಂದೂರು,

ಉಡುಪಿ: ಭಾರೀ ಮಳೆಯಿಂದಾಗಿ ಪ್ರವಾಹ- 24 ಜನರ ರಕ್ಷಣೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ದರ್ಶನ್‌ ಜಾಮೀನು ರದ್ದು ಕೋರಿದ್ದ ಮೇಲ್ಮನವಿ ಜು.22ಕ್ಕೆ ಸುಪ್ರೀಂನಲ್ಲಿ ವಿಚಾರಣೆ

(ನ್ಯೂಸ್ ಕಡಬ) newskadaba.com,ಜು .17. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರನಟ ದರ್ಶನ್‌ ಹಾಗೂ ಇತರ ಆರೋಪಿಗಳಿಗೆ ಹೈಕೋರ್ಟ್‌ ನೀಡಿರುವ ಜಾಮೀನು ರದ್ದುಪಡಿಸುವಂತೆ ಸಲ್ಲಿಸಿರುವ ಮೇಲನವಿ ಅರ್ಜಿಯನ್ನು ಸುಪ್ರೀಂಕೋರ್ಟ್‌ ಜು.22ಕ್ಕೆ ಮುಂದೂಡಿದೆ. ಮುಂದುವರೆದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌ನ ಪಾರ್ದ್ರಿವಾಲಾ ನೇತೃತ್ವದ ದ್ವಿ ಸದಸ್ಯ ಪೀಠವು ಚಿತ್ರನಟ ದರ್ಶನ್‌ ಹಾಗೂ ಇತರೆ ಆರೋಪಿಗಳನ್ನು ಬಂಧಿಸಿರುವುದಕ್ಕೆ ಕಾರಣಗಳನ್ನು ಮಾತ್ರ ಹೇಳಿ. ನಾವು ಬೇರೆ ಯಾವುದನ್ನೂ ಕೇಳುತ್ತಿಲ್ಲ ಎಂದು ಅರ್ಜಿ ವಿಚಾರಣೆಯನ್ನು ಮುಂದೂಡಿತ್ತು. ದರ್ಶನ್‌ ಹಾಗೂ ಆರೋಪಿಗಳ ಬಂಧನ

ದರ್ಶನ್‌ ಜಾಮೀನು ರದ್ದು ಕೋರಿದ್ದ ಮೇಲ್ಮನವಿ ಜು.22ಕ್ಕೆ ಸುಪ್ರೀಂನಲ್ಲಿ ವಿಚಾರಣೆ Read More »

ಕರ್ನಾಟಕ, ಸಿನಿಮಾ

ಶಾಲೆಯಲ್ಲಿ ವಿದ್ಯುತ್ ಶಾಕ್‌ನಿಂದ ಸಾವನ್ನಪ್ಪಿದ 8ನೇ ಕ್ಲಾಸ್ ವಿದ್ಯಾರ್ಥಿ

(ನ್ಯೂಸ್ ಕಡಬ) newskadaba.com,ಜು .17. ಶಾಲೆಯಲ್ಲಿ ವಿದ್ಯುತ್ ಶಾಕ್ ತಗುಲಿದ ಪರಿಣಾಮ 13 ವರ್ಷದ ವಿದ್ಯಾರ್ಥಿ ಮೃತಪಟ್ಟಿದ್ದಾನೆ. ಕೇರಳದ ಕೊಲ್ಲಂ ಜಿಲ್ಲೆಯ ತೆವಳಕ್ಕರ ಬಾಲಕರ ಶಾಲೆಯಲ್ಲಿ ಇಂದು ಬೆಳಗ್ಗೆ ಈ ಅವಘಡ ಸಂಭವಿಸಿದೆ. ಮೃತ ವಿದ್ಯಾರ್ಥಿ ಮಿಥುನ್, 8ನೇ ತರಗತಿಯಲ್ಲಿ ಓದುತ್ತಿದ್ದನು. ಶಾಲೆಯ ಪಕ್ಕದಲ್ಲಿ ಸೈಕಲ್ ನಿಲ್ಲಿಸಲು ಶೆಡ್ ವ್ಯವಸ್ಥೆ ಮಾಡಲಾಗಿದೆ. ಈ ಶೆಡ್ ಮೇಲೆ ಮಿಥುಲ್ ಚಪ್ಪಲಿ ಬಿದ್ದಿತ್ತು. ಈ ಚಪ್ಪಲಿ ತೆಗೆದುಕೊಳ್ಳಲು ಮಿಥುನ್ ಶೆಡ್ ಮೇಲೆ ಏರಿದ್ದನು. ಈ ವೇಳೆ ತ್ರೀ ಫೇಸ್ ವಿದ್ಯುತ್

ಶಾಲೆಯಲ್ಲಿ ವಿದ್ಯುತ್ ಶಾಕ್‌ನಿಂದ ಸಾವನ್ನಪ್ಪಿದ 8ನೇ ಕ್ಲಾಸ್ ವಿದ್ಯಾರ್ಥಿ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ದೆಹಲಿ-ಗೋವಾ ಇಂಡಿಗೋ ವಿಮಾನದಲ್ಲಿ ತಾಂತ್ರಿಕ ದೋಷ – ತುರ್ತು ಲ್ಯಾಂಡಿಂಗ್

(ನ್ಯೂಸ್ ಕಡಬ) newskadaba.com,ಜು .17. ದೆಹಲಿಯಿಂದ ಗೋವಾಗೆ ತೆರಳುತ್ತಿದ್ದ ಇಂಡಿಗೋ ವಿಮಾನವೊಂದರಲ್ಲಿ ತಾಂತ್ರಿಕ ಸಮಸ್ಯೆ ಕಂಡು ಬಂದ ಹಿನ್ನೆಲೆ ಮುಂಬೈನಲ್ಲಿ ತುರ್ತು ಲ್ಯಾಂಡಿಂಗ್ ಮಾಡಲಾಯಿತು. ವಿಮಾನದ ಎಂಜಿನ್‌ನಲ್ಲಿ ಸಮಸ್ಯೆ ಕಂಡುಬಂದಿದ್ದು, ಪೈಲಟ್ ತುರ್ತು ಸ್ಥಿತಿಯನ್ನು ಸೂಚಿಸಲು `ಪ್ಯಾನ್-ಪ್ಯಾನ್-ಪ್ಯಾನ್’ ಘೋಷಣೆ ಮಾಡಿದ್ದಾರೆ ಎಂದು ವಿಮಾನಯಾನ ಮೂಲಗಳು ತಿಳಿಸಿವೆ. ಇಂಡಿಗೋ ವಿಮಾನ 6E6271 ದೆಹಲಿಯಿಂದ ಗೋವಾಗೆ ತೆರಳುತ್ತಿರುವಾಗ ಎಂಜಿನ್‌ನಲ್ಲಿ ಸಮಸ್ಯೆ ಉಂಟಾಗಿದೆ. ಪರಿಣಾಮ ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಲಾಯಿತು. ವಿಮಾನದಲ್ಲಿದ್ದ

ದೆಹಲಿ-ಗೋವಾ ಇಂಡಿಗೋ ವಿಮಾನದಲ್ಲಿ ತಾಂತ್ರಿಕ ದೋಷ – ತುರ್ತು ಲ್ಯಾಂಡಿಂಗ್ Read More »

ಬ್ರೇಕಿಂಗ್ ನ್ಯೂಸ್

ಭಾರೀ ಮಳೆಗೆ ಭೂಕುಸಿತ -ಅಮರನಾಥ ಯಾತ್ರೆಯನ್ನು ತಾತ್ಕಾಲಿಕ ಸ್ಥಗಿತ

(ನ್ಯೂಸ್ ಕಡಬ) newskadaba.com,ಜು .17. ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರೀ ಮಳೆಯಿಂದಾಗಿ ಅಮರನಾಥ ಯಾತ್ರೆಗೆ ತೆರಳುವ ಮಾರ್ಗದಲ್ಲಿ ಭೂಕುಸಿತವಾಗುತ್ತಿದೆ. ಇದರಿಂದ ಅಮರನಾಥ ಯಾತ್ರೆಯನ್ನು ತಾತ್ಕಾಲಿಕ ಸ್ಥಗಿತಗೊಳಿಸಲಾಗಿದೆ. ಗಂಡೇರ್ಬಾಲ್ ಜಿಲ್ಲೆಯ ಬಾಲ್ಟಾಲ್ ಯಾತ್ರೆಯ ಬಾಲ್ಟಾಲ್ ಮಾರ್ಗದಲ್ಲಿ ನೀರಿನ ಜೊತೆ ಕಲ್ಲು ಬಂಡೆಗಳು ಉರುಳಿ ಬಂದಿದ್ದರಿಂದ ಮಹಿಳೆಯೊಬ್ಬಳು ಸಿಲುಕಿ ಸಾವನ್ನಪ್ಪಿದ್ದಾಳೆ. ಮಾರ್ಗದಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಇತರ ಮೂವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಾಲ್ಟಾಲ್ ಮಾರ್ಗದಲ್ಲಿ ಭೂಕುಸಿತವಾಗಿದೆ. ಭೂಕುಸಿತದ ವಿಡಿಯೋ ವೈರಲ್‌ ಆಗಿದೆ. ವಿಡಿಯೋದಲ್ಲಿ, ಇಬ್ಬರು ಯಾತ್ರಿಗಳು ಸಿಲುಕಿರುವುದು ಸೆರೆಯಾಗಿದೆ.

ಭಾರೀ ಮಳೆಗೆ ಭೂಕುಸಿತ -ಅಮರನಾಥ ಯಾತ್ರೆಯನ್ನು ತಾತ್ಕಾಲಿಕ ಸ್ಥಗಿತ Read More »

ಬ್ರೇಕಿಂಗ್ ನ್ಯೂಸ್
Scroll to Top