News Kadaba

ಚಿಕ್ಕಮಗಳೂರು ಜಿಲ್ಲೆಯ ಕೆಲವು ಪ್ರವಾಸಿ ಸ್ಥಳಗಳಿಗೆ ತಾತ್ಕಾಲಿಕ ನಿರ್ಬಂಧ

(ನ್ಯೂಸ್ ಕಡಬ) newskadaba.com, ಜು.16. ಜಿಲ್ಲೆಗೆ ಆಗಮಿಸುತ್ತಿರುವ ಪ್ರವಾಸಿಗರು ಮತ್ತು ಸ್ಥಳೀಯ ಜನತೆಯ ಹಿತದೃಷ್ಟಿಯಿಂದ ಗಿರಿಪ್ರದೇಶದ ಕೆಲವು ಪ್ರವಾಸೋದ್ಯಮ ಸ್ಥಳಗಳನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸಿ.ಎನ್‌.ಮೀನಾ ನಾಗರಾಜ್‌ ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪ್ರವಾಸೋದ್ಯಮ ನೀತಿ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಹೆಚ್ಚು ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಗಿರಿಪ್ರದೇಶದ ಕೆಲವು ಭಾಗಗಳಲ್ಲಿ ಗುಡ್ಡ ಕುಸಿತದಿಂದ ಅಲ್ಲಲ್ಲಿ ಮಣ್ಣು ಆವರಿಸಿದ್ದು, ರಸ್ತೆ ಕುಸಿತ ಸಂಭವಿಸಿರುವ ಹಿನ್ನೆಲೆಯಲ್ಲಿ ನಿರ್ಬಂಧ ವಿಧಿಸಲಾಗಿದೆ. ನಿಯಮಾನುಸಾರ ಪ್ರವಾಸಿಗರು […]

ಚಿಕ್ಕಮಗಳೂರು ಜಿಲ್ಲೆಯ ಕೆಲವು ಪ್ರವಾಸಿ ಸ್ಥಳಗಳಿಗೆ ತಾತ್ಕಾಲಿಕ ನಿರ್ಬಂಧ Read More »

ಕರ್ನಾಟಕ

ಇಂದು ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಧಾರಾಕಾರ ಮಳೆ ಸಾಧ್ಯತೆ!

(ನ್ಯೂಸ್ ಕಡಬ) newskadaba.com, ಜು.16. ಬೆಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಸೋಮವಾರ ವ್ಯಾಪಕ ಮಳೆಯಾಗಿದೆ. ಇದೇ ರೀತಿ ಮುಂದಿನ 4 ದಿನ ರಾಜ್ಯದಲ್ಲಿ ವರುಣ ಆರ್ಭಟಿಸುವ ಮುನ್ಸೂಚನೆ ಸಿಕ್ಕಿದೆ. ಇನ್ನು ಜುಲೈ 16ರಂದು ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಆರೆಂಜ್‌ ಅಲರ್ಟ್‌ ಘೋಷಿಸಿದೆ. ಬೆಂಗಳೂರು, ಮೈಸೂರು, ಬೆಳಗಾವಿ, ಧಾರವಾಡ ಸೇರಿ ಇನ್ನುಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದ್ದು, ಗುಡುಗು ಸಹಿತ ಮಳೆಯಾಗಲಿದೆ. ಅದೇ ರೀತಿ ಜುಲೈ 17ರಂದು ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಿಗೆ ಆರೆಂಜ್‌

ಇಂದು ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಧಾರಾಕಾರ ಮಳೆ ಸಾಧ್ಯತೆ! Read More »

ಕರ್ನಾಟಕ

ಮಲ್ಟಿಪ್ಲೆಕ್ಸ್, ಚಿತ್ರಮಂದಿರಗಳಲ್ಲಿ ಟಿಕೆಟ್ ದರ 200 ರೂ. ಮೀರದಂತೆ ಸರ್ಕಾರ ಆದೇಶ

(ನ್ಯೂಸ್ ಕಡಬ) newskadaba.com, ಜು.16. ಸಿನಿಪ್ರಿಯರಿಗೆ ಸಿಹಿ ಸುದ್ದಿ. ರಾಜ್ಯದ ಎಲ್ಲ ಚಿತ್ರಮಂದಿರ ಮತ್ತು ಮಲ್ಟಿಪ್ಲೆಕ್ಸ್​ಗಳಲ್ಲಿ ಇನ್ಮುಂದೆ ಏಕರೂಪದ ದರ ಇರಬೇಕು ಎಂದು ಸರ್ಕಾರ ಆದೇಶಿಸಿದೆ. ಆ ಮೂಲಕ ರಾಜ್ಯಾದ್ಯಂತ ಒಂದೇ ದರ ನಿಗದಿ ಮಾಡಲಾಗಿದೆ. ಸಿನಿಮಾ ಪ್ರದರ್ಶನದ ಟಿಕೆಟ್ ಬೆಲೆ 200 ರೂ. ಮೀರಬಾರದು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇದು ಎಲ್ಲ ಭಾಷೆಯ ಸಿನಿಮಾಗಳಿಗೂ ಅನ್ವಯ ಆಗಲಿದೆ. ಈ ಬಗ್ಗೆ ರಾಜ್ಯ ಸರ್ಕಾರ ಅಧಿಕೃತ ಆದೇಶ ನೀಡಿದೆ. ಕನ್ನಡ ಚಿತ್ರರಂಗ ಕಷ್ಟದಲ್ಲಿದೆ. ನಿರೀಕ್ಷಿತ

ಮಲ್ಟಿಪ್ಲೆಕ್ಸ್, ಚಿತ್ರಮಂದಿರಗಳಲ್ಲಿ ಟಿಕೆಟ್ ದರ 200 ರೂ. ಮೀರದಂತೆ ಸರ್ಕಾರ ಆದೇಶ Read More »

ಸಿನಿಮಾ

ಕೇರಳ ನರ್ಸ್ ನಿಮಿಷಾ ಪ್ರಿಯಾಗೆ ಮರಣದಂಡನೆ ಮುಂದೂಡಿಕೆ

(ನ್ಯೂಸ್ ಕಡಬ) newskadaba.com, ಜು.15. ಕೇರಳದ ನರ್ಸ್ ನಿಮಿಷಾ ಪ್ರಿಯಾ ಅವರಿಗೆ ಯೆಮನ್‌ನಲ್ಲಿ ಜು.16ಕ್ಕೆ ಜಾರಿಯಾಗಲಿದ್ದ ಮರಣದಂಡನೆಯನ್ನು ಮುಂದೂಡಲಾಗಿದೆ ಎಂದು ವರದಿಯಾಗಿದೆ. ಇಂಡಿಯನ್ ಗ್ರ್ಯಾಂಡ್ ಮುಫ್ತಿ ಎ.ಪಿ ಅಬೂಬಕ್ಕರ್ ಮುಸ್ಲಿಯಾರ್ ಕಾಂತಪುರಂ ಅವರ ಮಧ್ಯಪ್ರವೇಶದ ಬಳಿಕ ಈ ಬೆಳವಣಿಗೆ ನಡೆದಿದೆ ಎಂದು ಉನ್ನತ ಮೂಲಗಳಿಂದ ತಿಳಿದು ಬಂದಿದೆ. ನಿಮಿಷಾ ಪ್ರಿಯಾ ಅವರಿಗೆ ಮರಣದಂಡನೆ ಜಾರಿಗೊಳಿಸಲು ಬುಧವಾರಕ್ಕೆ ದಿನಾಂಕ ನಿಗದಿಯಾಗಿತ್ತು. ಈ ನಡುವೆ ಅವರ ರಕ್ಷಣೆಗೆ ಎ.ಪಿ ಅಬೂಬಕ್ಕರ್ ಮುಸ್ಲಿಯಾರ್ ಅವರು ಯೆಮನ್‌ನ ಪ್ರಮುಖ ಸೂಫಿ ವಿದ್ವಾಂಸ ಶೇಖ್

ಕೇರಳ ನರ್ಸ್ ನಿಮಿಷಾ ಪ್ರಿಯಾಗೆ ಮರಣದಂಡನೆ ಮುಂದೂಡಿಕೆ Read More »

ಬ್ರೇಕಿಂಗ್ ನ್ಯೂಸ್

ಸಿಎಂ ಸಿದ್ದರಾಮಯ್ಯಗೆ ಖರ್ಗೆ ಪತ್ರ – ಖಡಕ್ ಸೂಚನೆ

(ನ್ಯೂಸ್ ಕಡಬ) newskadaba.com, ಜು.15. ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ಈ ಪತ್ರ ಇದೀಗ ಸರ್ಕಾರದ ಆಡಳಿತದ ಮೇಲೆ ಅನುಮಾನ ಮೂಡಿಸುವಂತಾಗಿದೆ. ಪ್ರಮುಖವಾಗಿ ಎಸ್​​​ಸಿ ಹಾಗೂ ಎಸ್​​ಟಿ ನೌಕರರ ಮುಂಬಡ್ತಿಯಲ್ಲಿ ನಿಯಮ ಪಾಲನೆಯಾಗುತ್ತಿಲ್ಲ. ಈ ಕುರಿತು ಗಮನಹರಿಸಿ ತಕ್ಷಣವೇ ಕ್ರಮ ಕೈಗೊಳ್ಳಿ ಎಂದು ಸಿಎಂ ಸಿದ್ದರಾಮಯ್ಯಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪತ್ರದಲ್ಲಿ ಸೂಚಿಸಿದ್ದಾರೆ ಎನ್ನಲಾಗಿದೆ. ಇನ್ನೂ ಎಐಸಿಸಿ ಅಧ್ಯಕ್ಷರು ಸಿದ್ದರಾಮಯ್ಯ ಅವರಿಗೆ ಎಸ್‌ಸಿ ಎಸ್‌ಟಿ ಸಮುದಾಯದ ನೌಕರರ ಹಿತ

ಸಿಎಂ ಸಿದ್ದರಾಮಯ್ಯಗೆ ಖರ್ಗೆ ಪತ್ರ – ಖಡಕ್ ಸೂಚನೆ Read More »

ಕರ್ನಾಟಕ

ಮಂಗಳೂರು: ತೊಕ್ಕೊಟ್ಟು ಜಂಕ್ಷನ್‌ನಲ್ಲಿ ಕೃತಕ ಪ್ರವಾಹ -ಸಂಚಾರಕ್ಕೆ ಅಡ್ಡಿ

(ನ್ಯೂಸ್ ಕಡಬ) newskadaba.com, ಜು.15. ತೊಕ್ಕೊಟ್ಟು ಪ್ರದೇಶದಲ್ಲಿ ಸೋಮವಾರ ಸುರಿದ ಭಾರಿ ಮಳೆಯಿಂದಾಗಿ ತೊಕ್ಕೊಟ್ಟು ಜಂಕ್ಷನ್‌ನಲ್ಲಿ ಕೃತಕ ಪ್ರವಾಹದಿಂದ ವಾಹನ ಸಂಚಾರ ಮತ್ತು ಪಾದಚಾರಿಗಳಿಗೆ ಗಮನಾರ್ಹ ತೊಂದರೆ ಉಂಟಾಗಿದೆ. ಈ ಪ್ರದೇಶದಲ್ಲಿ ರಾಷ್ಟ್ರೀಯ ಹೆದ್ದಾರಿಯ ಅವೈಜ್ಞಾನಿಕ ನಿರ್ಮಾಣದಿಂದಾಗಿ, ಮಳೆನೀರು ಕಾಲುವೆಗಳಿಗೆ ಸರಿಯಾಗಿ ಹರಿಯದೆ ರಸ್ತೆಯ ಮೇಲೆ ಉಕ್ಕಿ ಹರಿದಿದೆ. ಜಂಕ್ಷನ್‌ನಲ್ಲಿ ನಿಯಮಿತವಾಗಿ ಹೂಳು ತೆಗೆಯದಿರುವುದು ಪರಿಸ್ಥಿತಿಯನ್ನು ಮತ್ತಷ್ಟು ಹದಗೆಡಿಸಿದೆ. ತೊಕ್ಕೊಟ್ಟು ಜಂಕ್ಷನ್‌ನಿಂದ ಚೆಂಬುಗುಡ್ಡೆವರೆಗೆ ಸುಮಾರು 14 ಕೋಟಿ ರೂ. ವೆಚ್ಚದಲ್ಲಿ ನಾಲ್ಕು ಪಥದ ರಸ್ತೆ ನಿರ್ಮಾಣವಾಗಿದ್ದರೂ, ಜಂಕ್ಷನ್‌ನಲ್ಲಿ

ಮಂಗಳೂರು: ತೊಕ್ಕೊಟ್ಟು ಜಂಕ್ಷನ್‌ನಲ್ಲಿ ಕೃತಕ ಪ್ರವಾಹ -ಸಂಚಾರಕ್ಕೆ ಅಡ್ಡಿ Read More »

ಕರಾವಳಿ, ಕರ್ನಾಟಕ

ಹೃದಯಾಘಾತಕ್ಕೆ 6ನೇ ತರಗತಿ ವಿದ್ಯಾರ್ಥಿನಿ ಬಲಿ

(ನ್ಯೂಸ್ ಕಡಬ) newskadaba.com, ಜು.15. ಬಳ್ಳಾರಿ: ರಾಜ್ಯದಲ್ಲಿ ಹೃದಯಾಘಾತದಿಂದ ಸಂಭವಿಸುತ್ತಿರುವ ಸರಣಿ ಸಾವುಗಳು ಮುಂದುವರಿದಿವೆ. ಇದೀಗ ಬಳ್ಳಾರಿಯಲ್ಲಿ ವಿದ್ಯಾರ್ಥಿನಿಯೊಬ್ಬಳು ಸಾವನ್ನಪ್ಪಿದ್ದಾಳೆ. 6ನೇ ತರಗತಿಯ ವಿದ್ಯಾರ್ಥಿನಿ ಶಾಲೆಗೆ ತೆರಳುತ್ತಿರುವಾಗಲೇ ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟಿದ್ದಾಳೆ. ಈ ದುರಂತ ಘಟನೆ ಜಿಲ್ಲೆಯ ಸಂಡೂರು ತಾಲೂಕಿನ ಕಾಳಿಂಗೇರಿಯಲ್ಲಿ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ಕಾಳಂಗೇರಿಯ ದೀಕ್ಷಾ (12) ಎಂದು ಗುರುತಿಸಲಾಗಿದೆ. 6ನೇ ತರಗತಿಯಲ್ಲಿ ಓದುತ್ತಿದ್ದ ದೀಕ್ಷಾ ಎಂದಿನಂತೆ ಸಿದ್ಧಳಾಗಿ ಶಾಲೆಗೆ ಹೋಗುತ್ತಿದ್ದಳು. ಶಾಲೆಗೆ ತೆರಳುವಾಗ ಏಕಾಏಕಿ ಕುಸಿದು ಬಿದ್ದ ಬಾಲಕಿ ದೀಕ್ಷಾಳನ್ನು ಕೂಡಲೇ

ಹೃದಯಾಘಾತಕ್ಕೆ 6ನೇ ತರಗತಿ ವಿದ್ಯಾರ್ಥಿನಿ ಬಲಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಚಿನ್ನದ ದರದಲ್ಲಿ ಕೊಂಚ ಇಳಿಕೆ

(ನ್ಯೂಸ್ ಕಡಬ) newskadaba.com, ಜು.15. ಬೆಂಗಳೂರು: ಚಿನ್ನದ ದರದಲ್ಲಿ ಕೊಂಚ ಇಳಿಕೆ ಕಂಡಿದೆ. ಚಿನ್ನದ ದರದಲ್ಲಿ ಇಂದು (ಜು. 15) ಮತ್ತೆ ಇಳಿಕೆ ಕಂಡು ಬಂದಿದ್ದು, ಬೆಂಗಳೂರಿನಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 10 ರೂ. ಇಳಿಕೆಯಾಗಿದೆ. ಆ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 9,145ರೂ ಕ್ಕೆ ತಲುಪಿದೆ. 24 ಕ್ಯಾರಟ್‌ 1 ಗ್ರಾಂ ಚಿನ್ನ 11 ರೂ. ಇಳಿಕೆ ಕಂಡು, 9,977 ರೂ.ಗೆ ಬಂದು ಮುಟ್ಟಿದೆ. 22 ಕ್ಯಾರಟ್‌ನ 8

ಚಿನ್ನದ ದರದಲ್ಲಿ ಕೊಂಚ ಇಳಿಕೆ Read More »

ಕರ್ನಾಟಕ

‘ಸರಕಾರ ದ.ಕ ಜಿಲ್ಲೆಯನ್ನು ಬೆಳಗ್ಗಿನಿಂದಲೇ ಪ್ರಯೋಜನಕ್ಕೆ ಬಾರದ ಊರಿನಂತೆ ಮಾಡಿದೆ’- ಸತೀಶ್ ಕುಂಪಲ

(ನ್ಯೂಸ್ ಕಡಬ) newskadaba.com, ಜು.15. ಡಿಸಿಎಂ ಡಿಕೆಶಿಯವರು ಮಂಗಳೂರು ರಾತ್ರಿ 7ರ ನಂತರ ಪ್ರಯೋಜನಕ್ಕೆ ಬಾರದ ಊರು ಅಂದಿದ್ದರು, ಇದೀಗ ಮರಳು, ಕೆಂಪುಕಲ್ಲನ್ನು ಬಂದ್ ಮಾಡುವ ಮುಖೇನ ಬೆಳಗ್ಗಿನಿಂದಲೇ ಪ್ರಯೋಜನಕ್ಕೆ ಬಾರದ ಊರಿನಂತೆ ಮಾಡಿದ್ದಾರೆ. ರಾಜ್ಯದ ಕಾಂಗ್ರೆಸ್ ಸರಕಾರ ದ.ಕ್ಷಿಣ ಕನ್ನಡ ಜಿಲ್ಲೆಯನ್ನು ಸಂಪೂರ್ಣವಾಗಿ ನಿಷ್ಪ್ರಯೋಜಕನ್ನಾಗಿ ಮಾಡಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಆರೋಪಿಸಿದರು. ತೊಕ್ಕೊಟ್ಟು ಸಮೀಪದ ಕೊಲ್ಯ ಸಮೀಪ ಖಾಸಗಿ ಸಮಾರಂಭದಲ್ಲಿ ಭಾಗವಹಿಸಿ ಮಾಧ್ಯಮಗಳ ಜತೆಗೆ ಮಾತನಾಡಿದ ಅವರು, ಕಾರ್ಮಿಕರ ಉದ್ಯಮ, ಕೆಲಸಗಳನ್ನು ಹತ್ತಿಕ್ಕುವ ಮೂಲಕ

‘ಸರಕಾರ ದ.ಕ ಜಿಲ್ಲೆಯನ್ನು ಬೆಳಗ್ಗಿನಿಂದಲೇ ಪ್ರಯೋಜನಕ್ಕೆ ಬಾರದ ಊರಿನಂತೆ ಮಾಡಿದೆ’- ಸತೀಶ್ ಕುಂಪಲ Read More »

ಕರ್ನಾಟಕ

ಖ್ಯಾತ ಮ್ಯಾರಥಾನ್‌ ರನ್ನರ್‌ ಫೌಜಾ ಸಿಂಗ್‌ (114 ವರ್ಷ) ರಸ್ತೆ ಅಪಘಾತದಲ್ಲಿ ನಿಧನ!

(ನ್ಯೂಸ್ ಕಡಬ) newskadaba.com, ಜು.15. ಪ್ರಸಿದ್ಧ ಮ್ಯಾರಥಾನ್ ರನ್ನರ್‌ ಫೌಜಾ ಸಿಂಗ್ ಸೋಮವಾರ ರಸ್ತೆ ಅಪಘಾತದಲ್ಲಿ ನಿಧನರಾದರು. ಅವರಿಗೆ 114 ವರ್ಷ ವಯಸ್ಸಾಗಿತ್ತು. ವರದಿಗಳ ಪ್ರಕಾರ, ಸಿಂಗ್ ರಸ್ತೆ ದಾಟುತ್ತಿದ್ದಾಗ ವಾಹನ ಡಿಕ್ಕಿ ಹೊಡೆದಿದೆ. ಜಲಂಧರ್‌ ಜಿಲ್ಲೆಯ ಅಧಂಪುರದ ಬಿಯಾಸ್‌ ಗ್ರಾಮದಲ್ಲಿ ಮಧ್ಯಾಹ್ನ 3.30ಕ್ಕೆ ಈ ಘಟನೆ ನಡೆದಿದೆ. ಅವರ ಕುಟುಂಬದವರ ಪ್ರಕಾರ ಅವರು ತಮ್ಮ ಮನೆಯ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಕಿಂಗ್‌ಗೆ ಹೊರಟಿದ್ದಾಗ ವಾಹನ ಡಿಕ್ಕಿ ಹೊಡೆದಿದೆ. ವಾಹನದ ಮಾಲೀಕರು ಡಿಕ್ಕಿ ಹೊಡೆದ ನಂತರ ವಾಹನೊಂದಿಗೆ

ಖ್ಯಾತ ಮ್ಯಾರಥಾನ್‌ ರನ್ನರ್‌ ಫೌಜಾ ಸಿಂಗ್‌ (114 ವರ್ಷ) ರಸ್ತೆ ಅಪಘಾತದಲ್ಲಿ ನಿಧನ! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top