News Kadaba

ಶಿರಾಡಿಘಾಟ್‌ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಜಲಪಾತಕ್ಕೆ ಬಿದ್ದ ಕಾರು; ತಪ್ಪಿದ ಅನಾಹುತ

(ನ್ಯೂಸ್ ಕಡಬ) newskadaba.com, ಜು. 14.ಉ.ಕ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಜಲಪಾತಕ್ಕೆ ಬಿದ್ದಿದ್ದು ಅದೃಷ್ಟವಶಾತ್ ಕಾರಿನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಶಿರಾಡಿಘಾಟ್ ರಸ್ತೆಯಲ್ಲಿ ಸಂಭವಿಸಿದೆ. ಬೆಂಗಳೂರು ಮೂಲದ ಪ್ರವಾಸಿಗರು ಪ್ರಯಾಣಿಸುತ್ತಿದ್ದ ವೇಳೆ ಜಲಪಾತ ವೀಕ್ಷಣೆಗೆ ಕಾರು ನಿಲ್ಲಿಸುವಾಗ ಚಾಲಕನ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿ ಪಕ್ಕದ ಫಾಲ್ಸ್‌ಗೆ ಕಾರು ಉರುಳಿ ಬಿದ್ದಿದೆ. ಘಟನೆಯಲ್ಲಿ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಮಲೆನಾಡು ಭಾಗದಲ್ಲಿ ಭಾರಿ ಮಳೆಯಿಂದ ಕಿರು ಜಲಪಾತಗಳು ತುಂಬಿ ಹರಿಯುತ್ತಿದ್ದು, ಸಂಭವನೀಯ […]

ಶಿರಾಡಿಘಾಟ್‌ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಜಲಪಾತಕ್ಕೆ ಬಿದ್ದ ಕಾರು; ತಪ್ಪಿದ ಅನಾಹುತ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕನ್ನಡದ ಖ್ಯಾತ ನಟಿ ಬಿ ಸರೋಜಾದೇವಿ ನಿಧನ

(ನ್ಯೂಸ್ ಕಡಬ) newskadaba.com, ಜು. 14.ಉ.ಕ: ಕನ್ನಡದ ಖ್ಯಾತ ನಟಿ ಬಿ ಸರೋಜಾದೇವಿ ಅವರು ಜುಲೈ 14 ಸೋಮವಾರದಂದು (87) ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದರು. ಅವರಿಗೆ 87 ವರ್ಷ ವಯಸ್ಸಾಗಿತ್ತು, ಇಬ್ಬರು ಮಕ್ಕಳಿದ್ದಾರೆ. ಸರೋಜಾ ದೇವಿ ಅವರು ಆರೂವರೆ ದಶಕಗಳ ಕಾಲ ಚಿತ್ರರಂಗದಲ್ಲಿ ಇದ್ದವರು. 2019ರಲ್ಲಿ ರಿಲೀಸ್ ಆದ ಪುನೀತ್ ರಾಜ್​ಕುಮಾರ್ ನಟನೆಯ ‘ನಟಸಾರ್ವಭೌಮ’ ಅವರು ನಟಿಸಿದ ಕೊನೆಯ ಚಿತ್ರವಾಗಿದೆ. ಜನವರಿ 7, 1938 ರಂದು ಜನಿಸಿದ

ಕನ್ನಡದ ಖ್ಯಾತ ನಟಿ ಬಿ ಸರೋಜಾದೇವಿ ನಿಧನ Read More »

ಕರ್ನಾಟಕ, ಸಿನಿಮಾ

ಭಟ್ಕಳ ನಗರವನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದ ಇಬ್ಬರು ವಶಕ್ಕೆ

(ನ್ಯೂಸ್ ಕಡಬ) newskadaba.com, ಜು. 14.ಉ.ಕ: ಭಟ್ಕಳ ನಗರವನ್ನು 24ಗಂಟೆಯೊಳಗೆ ಸ್ಫೋಟಿಸುವುದಾಗಿ ಭಟ್ಕಳ ಶಹರ ಠಾಣೆಗೆ ಇಮೇಲ್ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ ತಮಿಳುನಾಡು ಮೂಲದ ಕಣ್ಣನ್‌& ಮೋಸ್ಟ್ ವಾಂಟೆಡ್ ವ್ಯಕ್ತಿಯನ್ನು ಭಟ್ಕಳ ಶಹರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ತನಿಖೆ ವೇಳೆ, ಕಣ್ಣನ್ ಮೊಬೈಲ್‌ನಿಂದ ಮತ್ತೊಬ್ಬ ವ್ಯಕ್ತಿ ಈ ಕೃತ್ಯ ಮಾಡಿರುವುದು ಬಯಲಿಗೆ ಬಂದಿದೆ. ಮೋಬೈಲ್‌ನ್ನು ಹೇಗೆ ಆತ ತೆಗೆದುಕೊಂಡ ಎಂಬುವುದರ ಬಗ್ಗೆ ಮಾಹಿತಿ ಕಲೆ ಹಾಕಿರುವ ಪೊಲೀಸರು, ಕಣ್ಣನ್‌& ಮೋಸ್ಟ್ ವಾಂಟೆಡ್ ವ್ಯಕ್ತಿಯ ನಡುವಿನ ಭೇಟಿಯ

ಭಟ್ಕಳ ನಗರವನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದ ಇಬ್ಬರು ವಶಕ್ಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

‘ಹೆಣ್ಣು ಮಕ್ಕಳು ಶಿಕ್ಷಣದಲ್ಲಿ ಮುಂದು’- ಸಿ.ಎಂ.ಸಿದ್ದರಾಮಯ್ಯ ಮೆಚ್ಚುಗೆ

(ನ್ಯೂಸ್ ಕಡಬ) newskadaba.com, ಜು. 10. ಶೇ100 ರಷ್ಟು ಅಂಕಗಳನ್ನು ಪಡೆಯುವುದರಲ್ಲಿ ಹೆಣ್ಣುಮಕ್ಕಳೇ ಮುಂದಿದ್ದು, ಸೈನ್ಯದಲ್ಲಿ , ಅಂತರಿಕ್ಷದಲ್ಲೂ ಹೆಣ್ಣು ಮಕ್ಕಳು ಕೆಲಸ ಮಾಡುತ್ತಿರುವುದು ಮಹಿಳಾ ಕುಲದ ಪ್ರಗತಿಯ ಪ್ರತೀಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆದ ರಾಣಿ ಅಹಲ್ಯಾ ಬಾಯಿ ಹೋಳ್ಕರ್ ಅವರ 300ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಯಾವುದೇ ಸಂಘಟನೆ 25 ವರ್ಷ ಪೂರೈಸಿದರೆ ಅದು ದೊಡ್ಡ ಯಶಸ್ಸು. ಕರ್ನಾಟಕ ರಾಜ್ಯ ಅಹಲ್ಯಾ ಬಾಯಿ

‘ಹೆಣ್ಣು ಮಕ್ಕಳು ಶಿಕ್ಷಣದಲ್ಲಿ ಮುಂದು’- ಸಿ.ಎಂ.ಸಿದ್ದರಾಮಯ್ಯ ಮೆಚ್ಚುಗೆ Read More »

ಕರ್ನಾಟಕ

ಟೆನ್ನಿಸ್ ಆಟಗಾರ್ತಿ ಕೊಲೆ ಕೇಸ್: ಆರೋಪಿ ತಂದೆಗೆ 14 ದಿನ ನ್ಯಾಯಾಂಗ ಬಂಧನ

(ನ್ಯೂಸ್ ಕಡಬ) newskadaba.com, ಜು. 10. ಟೆನ್ನಿಸ್ ಆಟಗಾರ್ತಿ ಮಗಳನ್ನು ಗುಂಡಿಕ್ಕಿ ಕೊಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ತಂದೆ ದೀಪಕ್ ಯಾದವ್‌ನನ್ನು ಗುರುಗ್ರಾಮ ನ್ಯಾಯಾಲಯ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಿದೆ. ದೀಪಕ್‌ನನ್ನು ಬಂಧಿಸಿದ ಗುರುಗ್ರಾಮ ಪೊಲೀಸರು ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದರು. ವಿಚಾರಣೆ ನಡೆಸಿದ ಕೋರ್ಟ್ ದೀಪಕ್ ಯಾದವ್‌ನನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ರಾಜ್ಯ ಮಟ್ಟದ ಟೆನ್ನಿಸ್ ಆಟಗಾರ್ತಿ ರಾಧಿಕಾಳನ್ನು (25) ಜುಲೈ 10 ರಂದು ಗುರುಗ್ರಾಮದಲ್ಲಿರುವ ಮನೆಯಲ್ಲಿ ತಂದೆ

ಟೆನ್ನಿಸ್ ಆಟಗಾರ್ತಿ ಕೊಲೆ ಕೇಸ್: ಆರೋಪಿ ತಂದೆಗೆ 14 ದಿನ ನ್ಯಾಯಾಂಗ ಬಂಧನ Read More »

ಕರ್ನಾಟಕ

ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ – ಪೊಲೀಸರ ವಿರುದ್ಧ ಎಫ್‌ಐಆರ್‌ಗೆ ಶಿಫಾರಸು

(ನ್ಯೂಸ್ ಕಡಬ) newskadaba.com, ಜು. 10. ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ್ದ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟಿರುವ ಪ್ರಕರಣ ಸಂಬಂಧ ಸರ್ಕಾರಕ್ಕೆ ಸಲ್ಲಿಸಿದ ನ್ಯಾ. ಮೈಕಲ್ ಕುನ್ಹಾ ಅವರ ವರದಿಯಲ್ಲಿ ಮತ್ತಷ್ಟು ಸ್ಫೋಟಕ ಅಂಶ ಬಹಿರಂಗವಾಗಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣ ಸಂಬಂಧ ಕರ್ತವ್ಯ ಲೋಪ ಮಾಡಿದ ಅಧಿಕಾರಿಗಳ ವಿರುದ್ಧ ಇಲಾಖಾ ತನಿಖೆಗೆ ಶಿಫಾರಸು ಮಾಡಿದೆ. ಆರ್‌ಸಿಬಿ, ಡಿಎನ್‌ಎ, ಕೆಎಸ್‌ಸಿಎ ಮತ್ತು ಪೊಲೀಸರ ವಿರುದ್ಧ ದಂಡನೀಯ ಪ್ರಕರಣ ದಾಖಲು ಮಾಡಬಹುದು ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.  

ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ – ಪೊಲೀಸರ ವಿರುದ್ಧ ಎಫ್‌ಐಆರ್‌ಗೆ ಶಿಫಾರಸು Read More »

ಕರ್ನಾಟಕ

ನೂಜಿಬಾಳ್ತಿಲ: ಕಡಬ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ

(ನ್ಯೂಸ್ ಕಡಬ) newskadaba.com, ಜು. 10. ಕಡಬ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕಡಬ ತಾಲೂಕು ಘಟಕದ ವತಿಯಿಂದ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ನೂಜಿಬಾಳ್ತಿಲ ಬೆಥನಿ ಪದವಿ ಪೂರ್ವ ಕಾಲೇಜಿನಲ್ಲಿ ಶನಿವಾರ ನಡೆಯಿತು. ಮಂಗಳೂರು ವೃತ್ತ ಪರೀಕ್ಷಾರ್ಥಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹಸ್ತಾ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಪತ್ರಿಕೆ, ಮಾಧ್ಯಮಗಳು ನಮ್ಮ ಸುತ್ತ-ಮುತ್ತ ನಡೆಯುವ ಆಗು-ಹೋಗುಗಳನ್ನು ತಿಳಿಸುವ ಜೊತೆಗೆ ವಿದ್ಯಾರ್ಥಿಗಳಿಗೆ, ಸ್ಪರ್ಧಾತ್ಮಕ ಪರೀಕ್ಷೆ ಎದುರಿಸುವವರಿಗೆ ಭರಪೂರ ಮಾಹಿತಿಗಳನ್ನು ಒದಗಿಸುತ್ತದೆ. ಪತ್ರಿಕೆಗಳನ್ನು ಮೊಬೈಲ್ ನಲ್ಲಿ ಪತ್ರಿಕೆಗಳನ್ನು ಓದುವ

ನೂಜಿಬಾಳ್ತಿಲ: ಕಡಬ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ Read More »

ಕರಾವಳಿ

ಮಂಗಳೂರು: ಸುರತ್ಕಲ್ ನ MRPL ಘಟಕದಲ್ಲಿ ಅನಿಲ ಸೋರಿಕೆ; ಇಬ್ಬರ ಸಾವು, ಓರ್ವನ ಸ್ಥಿತಿ ಗಂಭೀರ

(ನ್ಯೂಸ್ ಕಡಬ) newskadaba.com, ಜು. 10. ಮಂಗಳೂರು: ಎಂಆರ್‌ಪಿಎಲ್‌ ಘಟಕದಲ್ಲಿ ಹೈಡ್ರೋಜನ್ ಸಲ್ಫೈಡ್ ಅನಿಲ ಸೋರಿಕೆಯಾಗಿ ಇಬ್ಬರು ಕಾರ್ಮಿಕರು ಮೃತಪಟ್ಟು ಓರ್ವ ಅಸ್ವಸ್ಥಗೊಂಡಿರುವ ಘಟನೆ ಸಂಭವಿಸಿದೆ. ಎಂಆರ್ ಪಿಎಲ್ ನ OM‌‌‌‌&S ಘಟಕದ ಶೇಖರಣಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಪೆಟ್ರೋಲಿಯಂ ರಿಫೈನರಿಯಾಗಿ ಕಾರ್ಯನಿರ್ವಹಿಸುತ್ತಿರುವ ಎಂಆರ್‌ಪಿಎಲ್‌ ನ ತ್ಯಾಜ್ಯ ತೈಲ ಸಂಗ್ರಹಣ ಘಟಕದಲ್ಲಿ ಲೆವೆಲ್‌ ಬದಲಾವಣೆ ಪರಿಶೀಲನೆಗೆ ತೆರಳಿದ್ದ ಕಾರ್ಮಿಕ ವಾಪಾಸ್ ಬಾರದೇ ಇದ್ದುದನ್ನು ಕಂಡು ಇನ್ನಿಬ್ಬರು ಕಾರ್ಮಿಕರು ತೆರಳಿದ್ದಾರೆ ಈ ವೇಳೆ ಮೂವರು ಅಸ್ವಸ್ಥಗೊಂಡಿದ್ದಾರೆ. ಕೂಡಲೇ

ಮಂಗಳೂರು: ಸುರತ್ಕಲ್ ನ MRPL ಘಟಕದಲ್ಲಿ ಅನಿಲ ಸೋರಿಕೆ; ಇಬ್ಬರ ಸಾವು, ಓರ್ವನ ಸ್ಥಿತಿ ಗಂಭೀರ Read More »

ಕರಾವಳಿ

ಏರ್ ಇಂಡಿಯಾ ಅಪಘಾತ: 2 ಎಂಜಿನ್‌ಗಳಿಗೆ ಇಂಧನ ಪೂರೈಕೆ ಸ್ಥಗಿತವಾಗಿರುವುದೇ ಕಾರಣ- ಪ್ರಾಥಮಿಕ ವರದಿ ಬಹಿರಂಗ

(ನ್ಯೂಸ್ ಕಡಬ) newskadaba.com, ಜು. 10. ಜೂನ್ 12 ರಂದು 260 ಜನರ ಸಾವಿಗೆ ಕಾರಣವಾದ ಏರ್ ಇಂಡಿಯಾ ಅಪಘಾತದ ಈ ಘಟನೆಯ ಕುರಿತು ವಿಮಾನ ಅಪಘಾತ ತನಿಖಾ ಬ್ಯೂರೋ ಪ್ರಾಥಮಿಕ ವರದಿ ಬಹಿರಂಗಗೊಂಡಿದ್ದು, ಹಲವು ಅಂಶಗಳು ಬೆಳಕಿಗೆ ಬಂದಿವೆ. ಬೋಯಿಂಗ್ 787 ಡ್ರೀಮ್‌ಲೈನರ್‌ ವಿಮಾನದಲ್ಲಿ ಏನೆಲ್ಲಾ ಆಯ್ತು ಅನ್ನೋದನ್ನ 15 ಪುಟಗಳ ವರದಿ ಬಹಿರಂಗಪಡಿಸಿದೆ. ವಿಮಾನ ಅಪಘಾತ ತನಿಖಾ ಬ್ಯೂರೋ ವರದಿಯಲ್ಲಿ ಪೈಲಟ್‌ಗಳ ಕಾಕ್‌ಪಿಟ್‌ಧ್ವನಿ ರೆಕಾರ್ಡಿಂಗ್‌ ಡೇಟಾವನ್ನ ಉಲ್ಲೇಖಿಸಲಾಗಿದೆ. ಇದರಲ್ಲಿ ವಿಮಾನವು ವಾಯುಪ್ರದೇಶಕ್ಕೆ ತಲುಪಿದ ಕೆಲವೇ

ಏರ್ ಇಂಡಿಯಾ ಅಪಘಾತ: 2 ಎಂಜಿನ್‌ಗಳಿಗೆ ಇಂಧನ ಪೂರೈಕೆ ಸ್ಥಗಿತವಾಗಿರುವುದೇ ಕಾರಣ- ಪ್ರಾಥಮಿಕ ವರದಿ ಬಹಿರಂಗ Read More »

ಬ್ರೇಕಿಂಗ್ ನ್ಯೂಸ್

ಧರ್ಮಸ್ಥಳ ಪ್ರಕರಣ: ಸಾಕ್ಷಿಗಳ ರಕ್ಷಣೆಗೆ ಅನುಮೋದನೆ- ಗುರುತಿನ ಉಲ್ಲಂಘನೆ ಬಗ್ಗೆ ಪ್ರತ್ಯೇಕ ತನಿಖೆ

(ನ್ಯೂಸ್ ಕಡಬ) newskadaba.com, ಜು. 10. ಧರ್ಮಸ್ಥಳ ಅಪರಾಧ ಸಂಖ್ಯೆ 39/2025 ರ ನಡೆಯುತ್ತಿರುವ ತನಿಖೆಗೆ ಸಂಬಂಧಿಸಿದಂತೆ, ದೂರುದಾರ ಸಾಕ್ಷಿಗೆ ಸಾಕ್ಷಿ ರಕ್ಷಣೆ ನೀಡಲು ಜಿಲ್ಲಾ ಅಧಿಕಾರಿಗಳು ಅನುಮೋದನೆ ನೀಡಿದ್ದು, ಶುಕ್ರವಾರ ಸಂಜೆಯಿಂದ ತಕ್ಷಣದಿಂದ ಜಾರಿಗೆ ಬರಲಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ದೂರುದಾರ ಸಾಕ್ಷಿಯ ಗುರುತಿನ ಉಲ್ಲಂಘನೆಯ ಬಗ್ಗೆ ಕಳವಳಗಳು ಹುಟ್ಟಿಕೊಂಡಿವೆ. ವ್ಯಕ್ತಿಯ ಅನಾಮಧೇಯತೆಯನ್ನು ಕಾಪಾಡುವ ಪ್ರಯತ್ನಗಳ ಹೊರತಾಗಿಯೂ, ದೂರುದಾರ ಸಾಕ್ಷಿಯ ಪ್ರತಿನಿಧಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಂಚಿಕೊಂಡ ಪ್ರತಿಕಾ ಪ್ರಕಟಣೆ ಮತ್ತುಎಫ್‌.ಐ.ಆರ್ ಪ್ರತಿಯನ್ನು ಮಾಧ್ಯಮಗಳಿಗೆ ಹಾಗೂ

ಧರ್ಮಸ್ಥಳ ಪ್ರಕರಣ: ಸಾಕ್ಷಿಗಳ ರಕ್ಷಣೆಗೆ ಅನುಮೋದನೆ- ಗುರುತಿನ ಉಲ್ಲಂಘನೆ ಬಗ್ಗೆ ಪ್ರತ್ಯೇಕ ತನಿಖೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top