News Kadaba

ಬೆಂಗಳೂರಲ್ಲಿ ಮಳೆ ಅವಾಂತರ – ಕಾರಿನ ಮೇಲೆ ಬಿದ್ದ ಬೃಹತ್‌ ಮರ

(ನ್ಯೂಸ್ ಕಡಬ) newskadaba.com, ಜು. 10. ಬೆಂಗಳೂರು: ನಗರದ ಹಲವೆಡೆ ತಡರಾತ್ರಿ ಭಾರೀ ಮಳೆ ಸುರಿದು, ಪ್ರಮುಖ ರಸ್ತೆಯಲ್ಲಿ ನೀರು ತುಂಬಿಕೊಂಡು ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ. ವಿವಿಧ ಪ್ರದೇಶಗಳಲ್ಲಿ 3.2 ಸೆಂ.ಮೀ.ವರೆಗೂ ಮಳೆಯಾಗಿದೆ ಎಂದು ತಿಳಿದುಬಂದಿದೆ. ಮಳೆಯೊಂದಿಗೆ ಭಾರೀ ಗಾಳಿಗೆ ಅಲ್ಲಲ್ಲಿ ಅವಾಂತರಗಳೂ ಸಂಭವಿಸಿವೆ. ಬೃಹತ್‌ ಮರಗಳು, ವಿದ್ಯುತ್‌ ಕಂಬಗಳಿಗೆ ಹಾನಿಯಾಗಿದೆ. ಈ ನಡುವೆ ನಿನ್ನೆ ರಾತ್ರಿ ಬಿದ್ದ ಮರಗಳನ್ನ ಈವರೆಗೂ ತೆರವು ಮಾಡದ ಬಿಬಿಎಂಪಿ, ಬೆಸ್ಕಾಂ ಅಧಿಕಾರಿಗಳ ವಿರುದ್ಧ ಸಾರ್ವಜನಿಕರು ಇಡೀ ಶಾಪ ಹಾಕಿದ್ದಾರೆ. ನಿನ್ನೆ ಸಂಜೆ […]

ಬೆಂಗಳೂರಲ್ಲಿ ಮಳೆ ಅವಾಂತರ – ಕಾರಿನ ಮೇಲೆ ಬಿದ್ದ ಬೃಹತ್‌ ಮರ Read More »

ಕರ್ನಾಟಕ

ದೆಹಲಿ ತುಳು ಮಹಾಸಭೆಯ ಸಂಚಾಲಕರಾಗಿ ಪ್ರಕಾಶ್ ಶೆಟ್ಟಿ ಉಳೆಪಾಡಿ ನೇಮಕ

(ನ್ಯೂಸ್ ಕಡಬ) newskadaba.com, ಜು. 10. ತುಳು ಭಾಷೆ, ಸಂಸ್ಕೃತಿ ಮತ್ತು ಸಮುದಾಯದ ಹಕ್ಕುಗಳನ್ನು ರಕ್ಷಿಸಲು ಶತಮಾನಗಳಿಂದ ಶ್ರಮಿಸುತ್ತಿರುವ ತುಳು ಮಹಾಸಭೆಯು ತನ್ನ ನವದೆಹಲಿ ಘಟಕದ ಸಂಚಾಲಕರಾಗಿ ಪ್ರಕಾಶ್ ಶೆಟ್ಟಿ ಉಳೆಪಾಡಿ ಅವರನ್ನು ನಾಮನಿರ್ದೇಶನ ಮಾಡಿದೆ. ಈ ಹೊಸ ನೇಮಕಾತಿಯು ತುಳು ಭಾಷೆಯನ್ನು ಭಾರತೀಯ ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಸೇರಿಸುವ ಹೋರಾಟಕ್ಕೆ ಶಕ್ತಿ ತುಂಬುವ ನಿರೀಕ್ಷೆಯಿದೆ. ರಾಜ್ಯ, ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ತುಳು ಸಂಘಟನೆಗಳು ಈ ನೇಮಕಾತಿಯನ್ನು ಸ್ವಾಗತಿಸಿವೆ. 1928 ರಲ್ಲಿ ಹಿರಿಯ ಎಸ್.ಯು. ಪಣಿಯಾಡಿ

ದೆಹಲಿ ತುಳು ಮಹಾಸಭೆಯ ಸಂಚಾಲಕರಾಗಿ ಪ್ರಕಾಶ್ ಶೆಟ್ಟಿ ಉಳೆಪಾಡಿ ನೇಮಕ Read More »

ಕರಾವಳಿ, ರಾಷ್ಟ್ರೀಯ ನ್ಯೂಸ್

ಅಕಾಡೆಮಿ ಮುಚ್ಚಲು ನಿರಾಕರಿಸಿದ ಟೆನ್ನಿಸ್ ಆಟಗಾರ್ತಿಯನ್ನು ಗುಂಡಿಕ್ಕಿ ಕೊಂದ ತಂದೆ!

(ನ್ಯೂಸ್ ಕಡಬ) newskadaba.com, ಜು. 10. ಟೆನಿಸ್ ಅಕಾಡೆಮಿಯನ್ನು ನಡೆಸುತ್ತಿದ್ದ ಟೆನಿಸ್ ಆಟಗಾರ್ತಿ ರಾಧಿಕಾ ಯಾದವ್ ತನ್ನ ತಂದೆಯೊಂದಲೇ ಭೀಕರವಾಗಿ ಕೊಲೆಯಾಗಿದ್ದಾರೆ. ಗುರುಗ್ರಾಮದಲ್ಲಿರುವ ತಮ್ಮ ಮೂರು ಅಂತಸ್ತಿನ ಮನೆಯ ಅಡುಗೆಮನೆಯಲ್ಲಿ ಬೆಳಿಗ್ಗೆ 10.30ರ ಸುಮಾರಿಗೆ ಅಡುಗೆ ಮಾಡುತ್ತಿದ್ದಾಗ ರಾಧಿಕಾ ಅವರ ಹಿಂಭಾಗಕ್ಕೆ 3 ಬಾರಿ ಗುಂಡು ಹಾರಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಇದರಿಂದ  ಗಾಯಗಳಾಗಿ ಅವರು ತಕ್ಷಣವೇ ಸಾವನ್ನಪ್ಪಿದ್ದಾರೆ. ಕೊಲೆ ಆರೋಪಿ ಹಾಗೂ ಮೃತ ಯುವತಿಯ ತಂದೆ ದೀಪಕ್ ಯಾದವ್ ಅವರನ್ನು ಬಂಧಿಸಲಾಗಿದೆ. ಅವರ ಬಳಿಯಿದ್ದ ಲೈಸೆನ್ಸ್

ಅಕಾಡೆಮಿ ಮುಚ್ಚಲು ನಿರಾಕರಿಸಿದ ಟೆನ್ನಿಸ್ ಆಟಗಾರ್ತಿಯನ್ನು ಗುಂಡಿಕ್ಕಿ ಕೊಂದ ತಂದೆ! Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸಿಎಂ ಸಿದ್ದರಾಮಯ್ಯ ವಿರುದ್ಧದ ಮಾನನಷ್ಟ ಮೊಕದ್ದಮೆ ಕೇಸ್ಗೆ ತಡೆ

(ನ್ಯೂಸ್ ಕಡಬ) newskadaba.com, ಜು. 10. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಬಿಜೆಪಿ ಹೂಡಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಈ ಪ್ರಕರಣ 2023ರ ಕರ್ನಾಟಕ ವಿಧಾನಸಭಾ ಚುನಾವಣಾ ಪ್ರಚಾರದ ಸಮಯದಲ್ಲಿ ನೀಡಲಾದ ಜಾಹೀರಾತಿಗೆ ಸಂಬಂಧಿಸಿದೆ. ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಸರ್ಕಾರ ವಿವಿಧ ಹುದ್ದೆಗಳಿಗೆ ದರ ನಿಗದಿಪಡಿಸಿದೆ ಎಂದು ಆರೋಪಿಸಿ ಕಾಂಗ್ರೆಸ್​ ರಾಜ್ಯದ ಪ್ರಮುಖ ದಿನ ಪತ್ರಿಕೆಗಳ ಮುಖಪುಟದಲ್ಲಿ ‘ಭ್ರಷ್ಟಾಚಾರ ದರ ಪಟ್ಟಿ’

ಸಿಎಂ ಸಿದ್ದರಾಮಯ್ಯ ವಿರುದ್ಧದ ಮಾನನಷ್ಟ ಮೊಕದ್ದಮೆ ಕೇಸ್ಗೆ ತಡೆ Read More »

ಕರ್ನಾಟಕ

ಹಾಸ್ಯನಟ ಕಪಿಲ್ ಶರ್ಮಾ ಕೆಫೆ ಮೇಲೆ ಖಲಿಸ್ತಾನಿ ಉಗ್ರರಿಂದ ಗುಂಡಿನ ದಾಳಿ

(ನ್ಯೂಸ್ ಕಡಬ) newskadaba.com, ಜು. 10. ಕೆನಡಾದಲ್ಲಿ ಹಾಸ್ಯನಟ ಕಪಿಲ್ ಶರ್ಮಾ ಅವರ ಕೆಫೆ ಉದ್ಘಾಟನೆಯಾದ ಕೆಲವೇ ದಿನಗಳಲ್ಲಿ ಅದರ ಮೇಲೆ ಖಲಿಸ್ತಾನ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿರುವ ಘಟನೆ ವರದಿಯಾಗಿದೆ. ಈ ಗುಂಡಿನ ದಾಳಿಯ ಹೊಣೆಯನ್ನು ಖಲಿಸ್ತಾನಿ ಭಯೋತ್ಪಾದಕ ಹರ್ಜೀತ್ ಸಿಂಗ್ ಲಡ್ಡಿ ಹೊತ್ತಿಕೊಂಡಿದೆ. ಈ ದಾಲಿಯಲ್ಲಿ ಯಾರಿಗೂ ಗಾಯಗಳಾಗಿಲ್ಲ. ಕೆಫೆ ಮೇಲೆ ಕನಿಷ್ಠ ಒಂಬತ್ತು ಗುಂಡುಗಳನ್ನು ಹಾರಿಸಲಾಗಿದೆ ಎಂದು ತಿಳಿದುಬಂದಿದೆ. ಕ್ಯಾಪ್ಸ್ ಕೆಫೆ ಎಂದು ಕರೆಯಲ್ಪಡುವ ಈ ಕೆಫೆ, ರೆಸ್ಟೋರೆಂಟ್ ಉದ್ಯಮದಲ್ಲಿ ಶರ್ಮಾ ಅವರ

ಹಾಸ್ಯನಟ ಕಪಿಲ್ ಶರ್ಮಾ ಕೆಫೆ ಮೇಲೆ ಖಲಿಸ್ತಾನಿ ಉಗ್ರರಿಂದ ಗುಂಡಿನ ದಾಳಿ Read More »

ಕ್ರೈಮ್ ನ್ಯೂಸ್

ಜು.14ರಂದು ಬಾಹ್ಯಕಾಶದಿಂದ ಭೂಮಿಗೆ ಮರಳಲಿದ್ದಾರೆ ಗಗನಯಾತ್ರಿ ಶುಭಾಂಶು ಶುಕ್ಲಾ

(ನ್ಯೂಸ್ ಕಡಬ) newskadaba.com, ಜು. 10. ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಜುಲೈ 14ರಂದು ಬಾಹ್ಯಾಕಾಶದಿಂದ ಭೂಮಿಗೆ ಮರಳಲಿದ್ದಾರೆ ಎಂದು ಹೇಳಲಾಗಿದೆ. ಶುಭಾಂಶು ಶುಕ್ಲಾ ಅವರು ‘ಆಕ್ಸಿಯಂ-4’ ಕಾರ್ಯಾಚರಣೆಯ ಭಾಗವಾಗಿ 12 ದಿನಗಳ ಕಾಲ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಇರಲಿದ್ದಾರೆ. ‘ಆಕ್ಸಿಯಂ-4’ ಅಂತರಿಕ್ಷ ಕಾರ್ಯಕ್ರಮದ ಭಾಗವಾಗಿ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿದಂತೆ ನಾಲ್ವರು ಗಗನಯಾತ್ರಿಗಳನ್ನು ಹೊತ್ತ ಸ್ಪೇಸ್​​ಎಕ್ಸ್​​ನ ‘ಫಾಲ್ಕನ್-9’ ರಾಕೆಟ್ ಫ್ಲಾರಿಡಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಜೂನ್ 25 ರಂದು ಯಶಸ್ವಿಯಾಗಿ ಉಡಾವಣೆಯಾಗಿತ್ತು. ಶುಭಾಂಶು ಮತ್ತು ಅವರ

ಜು.14ರಂದು ಬಾಹ್ಯಕಾಶದಿಂದ ಭೂಮಿಗೆ ಮರಳಲಿದ್ದಾರೆ ಗಗನಯಾತ್ರಿ ಶುಭಾಂಶು ಶುಕ್ಲಾ Read More »

ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಲಂಚಕ್ಕೆ ಬೇಡಿಕೆ ಪ್ರಕರಣ: ಐವರು ಪೊಲೀಸರ ಅಮಾನತು

(ನ್ಯೂಸ್ ಕಡಬ) newskadaba.com, ಜು. 10. ವಾಹನ ಪರವಾನಗಿ ಮರಳಿ ನೀಡಲು 50 ಸಾವಿರ ರೂ. ಲಂಚದ ಬೇಡಿಕೆಯಿರಿಸಿದ ಪ್ರಕರಣಕ್ಕೆ ಸಂಬಂಧಿಸಿ 5 ಮಂದಿ ಪೊಲೀಸರನ್ನು ಅಮಾನತುಗೊಳಿಸಿ ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾ‌ರ್ ರೆಡ್ಡಿ ಆದೇಶಿಸಿದ್ದಾರೆ. ಲಂಚದ ಬೇಡಿಕೆಯಿರಿಸಿದ ಪ್ರಕರಣದಲ್ಲಿ ತಸ್ಲಿಂ ಹಾಗೂ ಸಹಕರಿಸಿದ ವಿನೋದ್ ನೇರ ಆರೋಪಿಗಳಾಗಿದ್ದು, ಅವರನ್ನು ಅಮಾನತು ಮಾಡಲಾಗಿದೆ. ತಸ್ಲಿಂ ಮತ್ತು ವಿನೋದ್ ಅವರ ಲಂಚ ಬೇಡಿಕೆ ಬಗ್ಗೆ ಮಾಹಿತಿ ಗೊತ್ತಿದ್ದರೂ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡದೆ ಮೌನವಹಿಸಿದ್ದ ಇತರ

ಮಂಗಳೂರು: ಲಂಚಕ್ಕೆ ಬೇಡಿಕೆ ಪ್ರಕರಣ: ಐವರು ಪೊಲೀಸರ ಅಮಾನತು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಲಂಚ‌ಕ್ಕೆ ಬೇಡಿಕೆ ಆರೋಪ: ಟ್ರಾಫಿಕ್ ಹೆಡ್‌ಕಾನ್ಸ್‌ಟೇಬಲ್ ಲೋಕಾಯುಕ್ತ ಬಲೆಗೆ

(ನ್ಯೂಸ್ ಕಡಬ) newskadaba.com, ಜು. 10. ಮಂಗಳೂರು: ಕಾರು ಮತ್ತು ಸ್ಕೂಟರ್ ಮಧ್ಯೆ ಸಂಭವಿಸಿದ ಅಪಘಾತಕ್ಕೆ ಸಂಬಂಧಿಸಿ ಕಾರನ್ನು ಠಾಣೆಯಿಂದ ಬಿಡಿಸಿಕೊಳ್ಳಲು ಲಂಚಕ್ಕೆ ಬೇಡಿಕೆಯಿಟ್ಟ ಕದ್ರಿ ಟ್ರಾಫಿಕ್ ಠಾಣೆಯ ಠಾಣೆಯ ಹೆಡ್‌ಕಾನ್ಸ್‌ಟೇಬಲ್ ತಸ್ಲೀಂ ಎಂಬವರನ್ನು ಲೋಕಾಯುಕ್ತ ಪೊಲೀಸರು ಬಲೆಗೆ ಕೆಡವಿದ್ದಾರೆ.‌ನಂತೂರು ಸರ್ಕಲ್‌ನಲ್ಲಿ ಸಂಭವಿಸಿದ ಅಪಘಾತದ ಬಗ್ಗೆ ಕದ್ರಿ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕದ್ರಿ ಟ್ರಾಫಿಕ್ ಪೊಲೀಸ್ ಠಾಣೆಯ ಹೆಡ್‌ಕಾನ್ಸ್‌ಟೇಬಲ್ ತಸ್ಲಿಂ, ಕಾರು, ಕಾರಿನ ದಾಖಲಾತಿಗಳನ್ನು ಪೊಲೀಸ್ ಠಾಣೆಗೆ ತಂದು ಕೊಡುವಂತೆ ಸೂಚಿಸಿದ್ದು, ಅದರಂತೆ ಕಾರಿನ

ಮಂಗಳೂರು: ಲಂಚ‌ಕ್ಕೆ ಬೇಡಿಕೆ ಆರೋಪ: ಟ್ರಾಫಿಕ್ ಹೆಡ್‌ಕಾನ್ಸ್‌ಟೇಬಲ್ ಲೋಕಾಯುಕ್ತ ಬಲೆಗೆ Read More »

ಕರಾವಳಿ, ಕರ್ನಾಟಕ

ಬೆಟ್ಟಿಂಗ್ ಆ್ಯಪ್: ಪ್ರಕಾಶ್ ರಾಜ್, ವಿಜಯ್ ದೇವರಕೊಂಡ, ನಟಿ ಪ್ರಣೀತಾ ಸೇರಿ 29 ಮಂದಿ ವಿರುದ್ಧ FIR ದಾಖಲು!

(ನ್ಯೂಸ್ ಕಡಬ) newskadaba.com, ಜು. 10. ಹೈದರಾಬಾದ್: ಬೆಟ್ಟಿಂಗ್ ಆ್ಯಪ್ ಮೂಲಕ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸಿನಿಮಾ ನಟ-ನಟಿಯರಾದ ವಿಜಯ್ ದೇವರಕೊಂಡ, ರಾಣಾ ದಗ್ಗುಬಾಟಿ, ಪ್ರಕಾಶ್ ರಾಜ್, ನಟಿ ಪ್ರಣೀತಾ ಸುಭಾಷ್ ಸೇರಿ 29 ಮಂದಿ ವಿರುದ್ಧ ಜಾರಿ ನಿರ್ದೇಶನಾಲಯ (ED) ಪ್ರಕರಣದ ದಾಖಲಿಸಿದೆ. ನಟ, ನಟಿಯರ ಜೊತೆಗೆ ಸಾಮಾಜಿಕ ಮಾಧ್ಯಮ ಇನ್‌ಫ್ಲುಯನ್ಸರ್‌, ಯುಟ್ಯೂಬರ್‌ಗಳು ಈ ಪಟ್ಟಿಯಲ್ಲಿದ್ದಾರೆ ಎಂದು ಇಡಿ ಅಧಿಕಾರಿಗಳು ಗುರುವಾರ ಮಾಹಿತಿ ನೀಡಿದ್ದಾರೆ. ಸೆಲೆಬ್ರಿಟಿಗಳು ಮತ್ತು ಸೋಶಿಯಲ್​ ಮೀಡಿಯಾ ಇನ್ಫ್ಲುಯೆನ್ಸರ್​ಗಳು ಅಕ್ರಮ ಬೆಟ್ಟಿಂಗ್​

ಬೆಟ್ಟಿಂಗ್ ಆ್ಯಪ್: ಪ್ರಕಾಶ್ ರಾಜ್, ವಿಜಯ್ ದೇವರಕೊಂಡ, ನಟಿ ಪ್ರಣೀತಾ ಸೇರಿ 29 ಮಂದಿ ವಿರುದ್ಧ FIR ದಾಖಲು! Read More »

ಕರಾವಳಿ, ಕರ್ನಾಟಕ, ಸಿನಿಮಾ

ಮಂಗಳೂರು : ಮುಂದಿನ ಮೀನುಗಾರಿಕೆ ಋತುವಿನ ವೇಳೆಗೆ ಸಿದ್ಧವಾಗಲಿದೆ ಕರ್ನಾಟಕದ ಮೊದಲ ಸಮುದ್ರ ಆಂಬ್ಯುಲೆನ್ಸ್!

(ನ್ಯೂಸ್ ಕಡಬ) newskadaba.com, ಜು. 10. ಕರಾವಳಿ ಮೀನುಗಾರಿಕಾ ಸಮುದಾಯದ ಬಹುದಿನಗಳ ಕನಸು ನನಸಾಗುವ ಹಂತಕ್ಕೆ ತಲುಪಿದ್ದು, ಕರ್ನಾಟಕದ ಮೊದಲ ಸಮುದ್ರ ಆಂಬ್ಯುಲೆನ್ಸ್ 2026 ರ ಮುಂದಿನ ಮೀನುಗಾರಿಕೆ ಋತುವಿನ ವೇಳೆಗೆ ಸಿದ್ಧವಾಗುವ ನಿರೀಕ್ಷೆಯಿದೆ. ಮೀನುಗಾರಿಕೆ ಇಲಾಖೆಯು ಶೀಘ್ರದಲ್ಲೇ ಬಹುಕೋಟಿ ವೆಚ್ಚದ ತುರ್ತು ಹಡಗಿನ ನಿರ್ಮಾಣವನ್ನು ಪ್ರಾರಂಭಿಸಲಿದ್ದು, ಇದರ ಬೆಲೆ ಸುಮಾರು 7.85 ಕೋಟಿ ರೂ.ಗಳಷ್ಟಾಗುತ್ತದೆ. ಮೀನುಗಾರಿಕೆ ಇಲಾಖೆ ನಿರ್ದೇಶಕ ದಿನೇಶ್ ಕುಮಾರ್ ಕಲ್ಲರ್ ಅವರ ಪ್ರಕಾರ, ಸಮುದ್ರ ಆಂಬ್ಯುಲೆನ್ಸ್‌ಗಾಗಿ ಕೆಲಸದ ಆದೇಶವನ್ನು ಮುಂದಿನ ವಾರ ನೀಡಲಾಗುವುದು.

ಮಂಗಳೂರು : ಮುಂದಿನ ಮೀನುಗಾರಿಕೆ ಋತುವಿನ ವೇಳೆಗೆ ಸಿದ್ಧವಾಗಲಿದೆ ಕರ್ನಾಟಕದ ಮೊದಲ ಸಮುದ್ರ ಆಂಬ್ಯುಲೆನ್ಸ್! Read More »

ಕರಾವಳಿ, ಕರ್ನಾಟಕ
Scroll to Top