News Kadaba

ತಮಿಳು ನಾಡಿನ ಕಡಲೂರು ಬಳಿ ಶಾಲಾ ವ್ಯಾನ್ ಅಪಘಾತ: ಇಬ್ಬರು ಮಕ್ಕಳು ಸೇರಿ ಮೂವರು ಸಾವು, 10 ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com, ಜು. 08. ಮಂಗಳವಾರ ಬೆಳಗ್ಗೆ 7:45 ರ ಸುಮಾರಿಗೆ ತಮಿಳು ನಾಡಿನ ಕಡಲೂರಿನಿಂದ ದಕ್ಷಿಣಕ್ಕೆ 10 ಕಿಲೋಮೀಟರ್ ದೂರದಲ್ಲಿರುವ ಸೆಮ್ಮಂಕುಪ್ಪಂನಲ್ಲಿ ಮಾನವಸಹಿತ ಲೆವೆಲ್ ಕ್ರಾಸಿಂಗ್ ದಾಟಲು ಯತ್ನಿಸುತ್ತಿದ್ದ ಶಾಲಾ ವ್ಯಾನ್‌ಗೆ ಪ್ಯಾಸೆಂಜರ್ ರೈಲು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಮತ್ತು ಒಬ್ಬರು ದಾರಿಹೋಕರು ಮೃತಪಟ್ಟಿದ್ದಾರೆ.   ಪ್ರಾಥಮಿಕ ಮಾಹಿತಿಯ ಪ್ರಕಾರ, ಸುಮಾರು 10 ಮಂದಿ ಗಂಭೀರ ಗಾಯಗೊಂಡಿದ್ದು, ಅವರನ್ನು ಕಡಲೂರು ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಲ್ಲಿ ಶಾಲಾ ವ್ಯಾನ್ […]

ತಮಿಳು ನಾಡಿನ ಕಡಲೂರು ಬಳಿ ಶಾಲಾ ವ್ಯಾನ್ ಅಪಘಾತ: ಇಬ್ಬರು ಮಕ್ಕಳು ಸೇರಿ ಮೂವರು ಸಾವು, 10 ಮಂದಿಗೆ ಗಾಯ Read More »

ಬ್ರೇಕಿಂಗ್ ನ್ಯೂಸ್

ಸಿಎಂ ಸಿದ್ದರಾಮಯ್ಯ ಕುರಿತು ಸಾಮಾಜಿಕ ಜಾಲತಾಣದಲ್ಲಿ ಕೆಟ್ಟ ಕಾಮೆಂಟ್: ದೂರು ದಾಖಲು

(ನ್ಯೂಸ್ ಕಡಬ) newskadaba.com, ಜು. 08. ಮುಖ್ಯಮಂತ್ರಿ ಸಿದ್ದರಾಮಯ್ಯ ನಿಯಮಿತ ವೈದ್ಯಕೀಯ ತಪಾಸಣೆಗಾಗಿ ಆಸ್ಪತ್ರೆಗೆ ಭೇಟಿ ನೀಡಿರುವ ಕುರಿತ ಮಾಧ್ಯಮ ವರದಿ ಕುರಿತು ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪ ಹಾಗೂ ಕೆಟ್ಟದಾಗಿ ಕಾಮೆಂಟ್ ಮಾಡಿರುವ ದುಷ್ಕರ್ಮಿಗಳ ವಿರುದ್ಧ ಇಲ್ಲಿನ ಪೀಣ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬೆಂಗಳೂರು ಪಶ್ಚಿಮ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕುಶಾಲ್ ಹರುವೇಗೌಡ ಹಾಗೂ ಸಂಜಯ್ ಎಂಬವರು ದೂರು ನೀಡಿದ್ದು, ಈ ಸಂಬಂಧ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಜು.7ರಂದು ಬೆಂಗಳೂರಿನ

ಸಿಎಂ ಸಿದ್ದರಾಮಯ್ಯ ಕುರಿತು ಸಾಮಾಜಿಕ ಜಾಲತಾಣದಲ್ಲಿ ಕೆಟ್ಟ ಕಾಮೆಂಟ್: ದೂರು ದಾಖಲು Read More »

ಕರ್ನಾಟಕ

ಹೃದಯಾಘಾತದಿಂದ ಇಂಜಿನಿಯರಿಂಗ್ ವಿದ್ಯಾರ್ಥಿ ಮೃತ್ಯು

(ನ್ಯೂಸ್ ಕಡಬ) newskadaba.com, ಜು. 08. ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ಹೃದಯಾಘಾತಕೊಳ್ಳಗಾಗಿ ಕುಸಿದು ಬಿದ್ದು ಮೃತಪಟ್ಟ ಘಟನೆ ಸುರತ್ಕಲ್ ಕೃಷ್ಣಾಪುರ ಹಿಲ್ ಸೈಡ್ ಬಳಿ ನಡೆದಿದೆ. ಮೃತ ಯುವಕನನ್ನು ಹಿಲ್ ಸೈಡ್ ನಿವಾಸಿ ಅಸ್ಲರ್ ಅಲಿ ಎಂಬವರ ಪುತ್ರ ಅಫ್ತಾಬ್ (18) ಎಂದು ತಿಳಿದು ಬಂದಿದೆ. ಈತ ಸುರತ್ಕಲ್ ಸೆಕ್ರೆಡ್ ಹಾರ್ಟ್ ನಲ್ಲಿ ಇಲೆಕ್ಟಿಕಲ್ ಇಂಜಿನಿಯರಿಂಗ್ ಡಿಪ್ಲೋಮಾ ಕಲಿಯುತ್ತಿದ್ದ ಎಂದು ತಿಳಿದು ಬಂದಿದೆ. ಮಧ್ಯಾಹ್ನ 12 ಗಂಟೆಯ ಸುಮಾರಿಗೆ ಮನೆಯಲ್ಲಿ ಸ್ನಾನಕ್ಕೆಂದು ಹೋಗುತ್ತಿದ್ದ ವೇಳೆ ಹೃದಯಾಘಾತ ಕ್ಕೊಳಗಾಗಿ ಕುಸಿದು

ಹೃದಯಾಘಾತದಿಂದ ಇಂಜಿನಿಯರಿಂಗ್ ವಿದ್ಯಾರ್ಥಿ ಮೃತ್ಯು Read More »

ಬ್ರೇಕಿಂಗ್ ನ್ಯೂಸ್

ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಎಂದು ಮರುನಾಮಕರಣ ಮಾಡುವಂತೆ ಪಕ್ಷಾತೀತವಾಗಿ ಒತ್ತಾಯ

(ನ್ಯೂಸ್ ಕಡಬ) newskadaba.com ಜು. 07. ಮಂಗಳೂರು: ಇತ್ತೀಚೆಗೆ ರಾಮನಗರವನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡಲಾಗಿದ್ದು, ತುಮಕೂರು ಜಿಲ್ಲೆಯನ್ನು ಬೆಂಗಳೂರು ಉತ್ತರ ಎಂದು ಮರುನಾಮಕರಣ ಮಾಡಬೇಕೆಂಬ ಬೇಡಿಕೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಕರಾವಳಿ ಕರ್ನಾಟಕದಲ್ಲಿ ಇದೇ ರೀತಿಯ ಚಳುವಳಿ ಆರಂಭವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವಂತೆ ಒತ್ತಾಯ ಕೇಳಿ ಬರುತ್ತಿದೆ. ದಕ್ಷಿಣ ಕನ್ನಡ ಹೆಸರಿಗೆ ರಾಜ್ಯದ ಹೊರಗೆ ಮನ್ನಣೆ ಇಲ್ಲ. ಸಾರ್ವಜನಿಕರೊಂದಿಗೆ ವ್ಯಾಪಕವಾಗಿ ಗುರುತಿಸಿಕೊಳ್ಳಲು ವಿಫಲವಾಗಿದೆ ಎಂದು ಪ್ರಸ್ತಾವನೆಯ ಬೆಂಬಲಿಗರು ವಾದಿಸುತ್ತಾರೆ. ಇದಕ್ಕೆ

ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಎಂದು ಮರುನಾಮಕರಣ ಮಾಡುವಂತೆ ಪಕ್ಷಾತೀತವಾಗಿ ಒತ್ತಾಯ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಸಾರ್ವಜನಿಕರ ಕೋಟ್ಯಾಂತರ ಚೀಟಿ ಹಣದೊಂದಿಗೆ ದಂಪತಿ ಪರಾರಿ-ಡಿ.ಕೆ ಶಿವಕುಮಾರ್ ರವರನ್ನು ಭೇಟಿ ಮಾಡಿ ನೆರವು ಕೋರಿದ ಸಂತ್ರಸ್ತರು

(ನ್ಯೂಸ್ ಕಡಬ) newskadaba.com ಜು. 07, ಬೆಂಗಳೂರು: ಚೀಟಿಯಲ್ಲಿ ಹೂಡಿಕೆ ಮಾಡಿದ್ದ ಸಾರ್ವಜನಿಕರ ಕೋಟ್ಯಂತರ ರೂಪಾಯಿ ಹಣದೊಂದಿಗೆ ಪರಾರಿಯಾದ ದಂಪತಿ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಸಂತ್ರಸ್ತರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಅವರಿಗೆ ದೂರು ನೀಡಿದ್ದಾರೆ. ಜೆ.ಪಿ ನಗರದ ನಾಲ್ವರು ಜನರ ಕುಟುಂಬವೊಂದು 250 ಕ್ಕೂ ಹೆಚ್ಚು ಜನರನ್ನು ವಂಚಿಸಿ ಪರಾರಿಯಾಗಿದೆ ಎಂದು ಆರೋಪಿಸಲಾಗಿದೆ. ಪುಟ್ಟೇನಹಳ್ಳಿ ನಿವಾಸಿ ಪುಷ್ಪಲತಾ ವಿ (45) ಎಂಬುವರು ಸುಧಾ, ಅವರ ಪತಿ ಸಿದ್ಧಾಚಾರಿ, ಮಗ ಯಶವಂತ್ ಮತ್ತು ಮಗಳು ವರ್ಷಿಣಿ ವಿರುದ್ಧ

ಸಾರ್ವಜನಿಕರ ಕೋಟ್ಯಾಂತರ ಚೀಟಿ ಹಣದೊಂದಿಗೆ ದಂಪತಿ ಪರಾರಿ-ಡಿ.ಕೆ ಶಿವಕುಮಾರ್ ರವರನ್ನು ಭೇಟಿ ಮಾಡಿ ನೆರವು ಕೋರಿದ ಸಂತ್ರಸ್ತರು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶರಣ್ ಪಂಪ್‌ವೆಲ್‌ಗೆ 30 ದಿನಗಳ ಕಾಲ ಚಿಕ್ಕಮಗಳೂರು ಜಿಲ್ಲಾ ಪ್ರವೇಶ ನಿಷೇಧ

(ನ್ಯೂಸ್ ಕಡಬ) newskadaba.com ಜು. 07, ಬೆಂಗಳೂರು:  ಹಿಂದುತ್ವ ಸಂಘಟನೆಯ ಮುಖಂಡ ಶರಣ್ ಪಂಪ್‌ವೆಲ್‌ಗೆ ಜಿಲ್ಲಾ ಪ್ರವೇಶ ನಿರ್ಬಂಧಿಸಿ ಚಿಕ್ಕಮಗಳೂರು ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಜು.6ರಿಂದ ಆ.4ರವರೆಗೆ 30 ದಿನಗಳ ಕಾಲ ನಿರ್ಬಂಧ ವಿಧಿಸಿ ಚಿಕ್ಕಮಗಳೂರು ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಶರಣ್ ಪಂಪ್‌ವೆಲ್ ಮೇಲೆ 22ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದು, ಜಿಲ್ಲೆಯ ಕೆಲ ಸಂಘಟನೆಗಳ ಮುಖಂಡರು ಚಿಕ್ಕಮಗಳೂರು, ಮೂಡಿಗೆರೆ, ಆಲ್ಲೂರಿನಲ್ಲಿ ಶರಣ್ ಪಂಪ್‌ವೆಲ್‌ ಅವರನ್ನು ಕರೆಸಿ ಭಾಷಣ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಉದ್ದೇಶಿಸಿದ್ದರು. ಶರಣ್ ಪಂಪ್‌ವೆಲ್‌ ಕೋಮುದ್ವೇಷ ಹರಡುವಂತಹ

ಶರಣ್ ಪಂಪ್‌ವೆಲ್‌ಗೆ 30 ದಿನಗಳ ಕಾಲ ಚಿಕ್ಕಮಗಳೂರು ಜಿಲ್ಲಾ ಪ್ರವೇಶ ನಿಷೇಧ Read More »

ಕರ್ನಾಟಕ

ಕಾಂತಾರ-1 ರಿಲೀಸ್‌ ಡೇಟ್‌ ಅನೌನ್ಸ್‌!

(ನ್ಯೂಸ್ ಕಡಬ) newskadaba.com ಜು. 07, ಬೆಂಗಳೂರು: ಪ್ಯಾನ್‌ ಇಂಡಿಯಾ ಮಾತ್ರವಲ್ಲದೇ ಇಡೀ ಪ್ರಪಂಚದಲ್ಲೇ ಭಾರೀ ಸದ್ದು ಮಾಡಿದ್ದ ಕಾಂತಾರ ಚಿತ್ರತಂಡದಿಂದ ಇದೀಗ ಗುಡ್‌ನ್ಯೂಸ್‌ ಒಂದು ಹೊರಬಿದ್ದಿದೆ. ಡಿವೈನ್‌ ಸ್ಟಾರ್‌ ರಿಷಬ್‌ ಶೆಟ್ಟಿಯವರ ಹುಟ್ಟುಹಬ್ಬವಾದ ಇಂದು(ಜು.07) ಚಿತ್ರತಂಡ ಭರ್ಜರಿ ಸಿಹಿ ಸುದ್ದಿಯೊಂದನ್ನು ನೀಡಿದ್ದು, ಕಾಂತಾರ ಚಾಪ್ಟರ್-‌1ಗೆ ಕಾಯುತ್ತಿರುವ ಸಿನಿಪ್ರಿಯರು ಫುಲ್ ಖುಷಿಯಲ್ಲಿದ್ದಾರೆ. ರಿಷಬ್‌ ಶೆಟ್ಟಿ ಹುಟ್ಟುಹಬ್ಬಕ್ಕೆ ಚಿತ್ರತಂಡ ಪೋಸ್ಟರ್‌ವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಕಾಂತಾರ-1ರ ರಿಲೀಸ್‌ ಡೇಟ್‌ ಅನೌನ್ಸ್‌ ಮಾಡಿದೆ. ಕಾಂತಾರ ಪ್ರೀಕ್ವೆಲ್ ಮೊದಲೇ ನಿರ್ಧರಿಸಿದಂತೆ​​ ಅಕ್ಟೋಬರ್ 2ರಂದು

ಕಾಂತಾರ-1 ರಿಲೀಸ್‌ ಡೇಟ್‌ ಅನೌನ್ಸ್‌! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ

ಸರಕಾರಿ ಆಸ್ಪತ್ರೆಯಲ್ಲಿ ಶವಪರೀಕ್ಷೆ ವರದಿ ಸೇರಿದಂತೆ ಹಲವು ಆರೋಗ್ಯ ದಾಖಲಾತಿಗಳು ಡಿಜಿಟಲೀಕರಣ.!

(ನ್ಯೂಸ್ ಕಡಬ) newskadaba.com ಜು. 07, ಬೆಂಗಳೂರು: ಆರೋಗ್ಯ ಇಲಾಖೆಯು ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಎಲ್ಲಾ ವೈದ್ಯಕೀಯ-ಕಾನೂನು ಪ್ರಮಾಣಪತ್ರಗಳು (MLC) ಮತ್ತು ಮರಣೋತ್ತರ ವರದಿಗಳನ್ನು ನೀಡಲು ರಾಷ್ಟ್ರೀಯ ಮಾಹಿತಿ ಕೇಂದ್ರ ಅಭಿವೃದ್ಧಿಪಡಿಸಿದ ಡಿಜಿಟಲ್ ವೇದಿಕೆಯಾದ MedLEaPR (ವೈದ್ಯಕೀಯ ಕಾನೂನು ಪರೀಕ್ಷೆ ಮತ್ತು ಮರಣೋತ್ತರ ವರದಿಗಳು) ಪೋರ್ಟಲ್ ಅನ್ನು ಕಾರ್ಯಗತಗೊಳಿಸಲು ಕಡ್ಡಾಯಗೊಳಿಸಿದೆ. ಜುಲೈ 5 ರಂದು ಹೊರಡಿಸಿದ ಆದೇಶದಲ್ಲಿ, MedLEaPR ಈಗ ಕಾರ್ಯನಿರ್ವಹಿಸುತ್ತಿದ್ದು ಎಲ್ಲಾ MLC ಗಳು ಮತ್ತು PMR ಗಳನ್ನು ತಯಾರಿಸಲು ಹಾಗೂ ಸಲ್ಲಿಸಲು ಪ್ರತ್ಯೇಕವಾಗಿ ಬಳಸಬೇಕು ಎಂದು

ಸರಕಾರಿ ಆಸ್ಪತ್ರೆಯಲ್ಲಿ ಶವಪರೀಕ್ಷೆ ವರದಿ ಸೇರಿದಂತೆ ಹಲವು ಆರೋಗ್ಯ ದಾಖಲಾತಿಗಳು ಡಿಜಿಟಲೀಕರಣ.! Read More »

ಆರೋಗ್ಯ ಮಾಹಿತಿ, ಕರ್ನಾಟಕ, ತಂತ್ರಜ್ಞಾನ

ಬಾಹ್ಯಾಕಾಶದಲ್ಲಿ ಶುಭಾಂಶು ಶುಕ್ಲಾರಿಂದ “ಬೆಂಗಳೂರು ನೀರುಕರಡಿ” ಪ್ರಯೋಗ ಪೂರ್ಣ

(ನ್ಯೂಸ್ ಕಡಬ) newskadaba.com ಜು. 07, ನವದೆಹಲಿ: ಆಕ್ಸಿಯೋಂ-4 ಮಿಷನ್‌ ಭಾಗವಾಗಿ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ತೆರಳಿರುವ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ, ನೀರುಕರಡಿ ಪ್ರಯೋಗ ಪೂರ್ಣಗೊಳಿಸಿದ್ದಾರೆ. ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯು (ಐಐಎಸ್‌ಸಿ) ಈ ಪ್ರಯೋಗವನ್ನು ಸಿದ್ಧಪಡಿಸಿತ್ತು. ಈ ಬಗ್ಗೆ ಇಸ್ರೋ ಮಾಹಿತಿ ಹಂಚಿಕೊಂಡಿದ್ದು, ‘ಶುಭಾಂಶು ಶುಕ್ಲಾ ಐಎಸ್‌ಎಸ್‌ನಲ್ಲಿ ನೀರುಕರಡಿಗಳನ್ನು ಒಳಗೊಂಡ ಸೂಕ್ಷ್ಮ ಗುರುತ್ವಾಕರ್ಷಣೆಯ ಪ್ರಯೋಗ ಪೂರ್ಣಗೊಳಿಸಿದ್ದಾರೆ. ಅಧ್ಯಯನವು ಬಾಹ್ಯಾಕಾಶದಲ್ಲಿ ಅವುಗಳ ಬದುಕುಳಿಯುವಿಕೆ, ಪುನರುಜ್ಜಿವನ ಮತ್ತು ಸಂತಾನೋತ್ಪತ್ತಿ ಮೇಲೆ ಕೇಂದ್ರೀಕರಿಸುತ್ತದೆ. ಸೂಕ್ಷ್ಮ ಗುರುತ್ವಾಕರ್ಷಣೆಯ ಪರಿಸರದಲ್ಲಿ ನೀರುಕರಡಿಗಳ ಜೈವಿಕ

ಬಾಹ್ಯಾಕಾಶದಲ್ಲಿ ಶುಭಾಂಶು ಶುಕ್ಲಾರಿಂದ “ಬೆಂಗಳೂರು ನೀರುಕರಡಿ” ಪ್ರಯೋಗ ಪೂರ್ಣ Read More »

ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್

ರಾಜ್ಯ ಸರಕಾರದಿಂದ ಬೆಟ್ಟಿಂಗ್ ದಂಧೆ ನಿಯಂತ್ರಣಕ್ಕೆ ಹೊಸ ಮಸೂದೆ..!

(ನ್ಯೂಸ್ ಕಡಬ) newskadaba.com ಜು. 07: ರಾಜ್ಯದಲ್ಲಿ ಬೆಟ್ಟಿಂಗ್ ದಂಧಯ ನಿಯಂತ್ರಣಕ್ಕೆ ಮುಂದಾಗಿರುವ ರಾಜ್ಯ ಸರಕಾರ, ಇದೀಗ ಹೊಸ ಮಸೂದೆಯನ್ನು ಜಾರಿಗೆ ತರುವ ಬಗ್ಗೆ ಚಿಂತನೆ ಮಾಡಿದೆ. ಮುಂಬರುವ ವಿಧಾನ ಮಂಡಲ ಅಧಿವೇಶನದಲ್ಲಿ ಬೆಟ್ಟಿಂಗ್ ನಿಯಂತ್ರಣಕ್ಕೆ ಹೊಸ ಮಸೂದೆ ಮಂಡಿಸಲು ತೀರ್ಮಾನಿಸಿದೆ ಎಂದು ತಿಳಿದು ಬಂದಿದೆ. ಹೊಸ ಮಸೂದೆಯ ಅನ್ವಯ ಯಾವುದೇ ಆಟ, ಸ್ಪರ್ಧೆ ಅದೃಷ್ಟದಿಂದ ಗೆಲ್ಲುವ ಹಾಗಿದ್ದರೆ ಆ ರೀತಿಯ ಆಟಗಳನ್ನ ನಿಷೇಧ ಮಾಡಲಾಗುತ್ತದೆ. ಆದರೆ, ಆಟ (ಗೇಮ್) ಸ್ಕಿಲ್ ಹೊಂದಿರುವ ಆನ್‌ಲೈನ್ ಗೇಮಿಂಗ್‌ಗೆ ವಿನಾಯಿತಿ

ರಾಜ್ಯ ಸರಕಾರದಿಂದ ಬೆಟ್ಟಿಂಗ್ ದಂಧೆ ನಿಯಂತ್ರಣಕ್ಕೆ ಹೊಸ ಮಸೂದೆ..! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top