News Kadaba

ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆ; ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ 6 ಜಿಲ್ಲೆಗಳಿಗೆ ರಡ್ ಅಲರ್ಟ್ ಘೋಷಣೆ

(ನ್ಯೂಸ್ ಕಡಬ) newskadaba.com ಕಡಬ, ಮೇ. 31. ಬೆಂಗಳೂರು: ಅವಧಿಗೂ ಮುನ್ನವೇ ರಾಜ್ಯಕ್ಕೆ ಮುಂಗಾರು ಪ್ರವೇಶವಾಗಿದ್ದು, ಎಲ್ಲೆಡೆ ಭಾರೀ ಮಳೆಯಾಗುತ್ತಿದ್ದು, ವಾಯುಭಾರ ಕುಸಿತ ಮುಂಗಾರು ಮಳೆಯ ಅಬ್ಬರ ಹೆಚ್ಚಿಸಿದೆ. ಇದರ ನಡುವೆ ಇನ್ನು ಮೂರು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೆಲ ಜಿಲ್ಲೆಗಳಿಗೆ ರೆಡ್​ ಅಲರ್ಟ್ ಘೋಷಣೆ ಮಾಡಿದ್ದು, ಭಾರೀ ಮಳೆ ಹಿನ್ನೆಲೆ ಶಾಲೆ-ಕಾಲೇಜಿಗೂ ರಜೆ ಘೋಷಣೆ ಮಾಡಲಾಗಿದೆ. 6 ಜಿಲ್ಲೆಗಳಿಗೆ ರೆಡ್ ಅಲರ್ಟ್​ ಉತ್ತರ ಕನ್ನಡ, ಉಡುಪಿ, […]

ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆ; ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ 6 ಜಿಲ್ಲೆಗಳಿಗೆ ರಡ್ ಅಲರ್ಟ್ ಘೋಷಣೆ Read More »

ಕರ್ನಾಟಕ

ಸಾರ್ವಜನಿಕ ಸ್ಥಳದಲ್ಲಿ ಗುಟ್ಕಾ ಉಗುಳುವುದು, ಸಿಗರೇಟು ಸೇದಿದರೆ ದಂಡ – 1,000 ರೂ.ಗೆ ಏರಿಕೆ

(ನ್ಯೂಸ್ ಕಡಬ) newskadaba.com ಕಡಬ, ಮೇ. 31. ಬೆಂಗಳೂರು : ಕರ್ನಾಟಕ ರಾಜ್ಯಾದ್ಯಂತ ಹುಕ್ಕಾ ಬಾರ್ ತೆರೆಯುವುದು ಅಥವಾ ನಡೆಸುವುದನ್ನು ನಿಷೇಧಿಸಿ ರಾಜ್ಯ ಸರ್ಕಾರ ಗೆಜೆಟ್ ನೋಟಿಫಿಕೇಷನ್ ಹೊರಡಿಸಿದೆ. 21 ವರ್ಷಗಳಿಗಿಂತ ಕಡಿಮೆ ವಯಸ್ಸಿನವರಿಗೆ ಸಿಗರೇಟ್ ಮಾರಾಟ ಹಾಗೂ ಹುಕ್ಕಾ ಬಾರ್ ನಿಷೇಧಿಸುವ ಮಸೂದೆಗೆ ರಾಷ್ಟ್ರಪತಿಗಳು ಸಹಿ ಹಾಕಿದ್ದಾರೆ. ಇದರ ಬೆನ್ನಲ್ಲೇ ಸಿಗರೇಟುಗಳ ಮತ್ತು ಇತರ ತಂಬಾಕು ಉತ್ಪನ್ನಗಳ (ಜಾಹೀರಾತು ನಿಷೇಧ ಮತ್ತು ವ್ಯಾಪಾರ ಮತ್ತು ವಾಣಿಜ್ಯ ಉತ್ಪಾದನೆ, ಸರಬರಾಜು ಮತ್ತು ವಿತರಣೆಯ ವಿನಿಯಮನ) (ಕರ್ನಾಟಕ ತಿದ್ದುಪಡಿ) ಅಧಿನಿಯಮ

ಸಾರ್ವಜನಿಕ ಸ್ಥಳದಲ್ಲಿ ಗುಟ್ಕಾ ಉಗುಳುವುದು, ಸಿಗರೇಟು ಸೇದಿದರೆ ದಂಡ – 1,000 ರೂ.ಗೆ ಏರಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯಾದ್ಯಂತ ಲೋಕಾಯುಕ್ತ ದಾಳಿ, ಭ್ರಷ್ಟ ಅಧಿಕಾರಿಗಳಿಗೆ ಶಾಕ್

(ನ್ಯೂಸ್ ಕಡಬ) newskadaba.com ಕಡಬ, ಮೇ. 31. ಬೆಂಗಳೂರು : ರಾಜ್ಯಾದ್ಯಂತ ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಬಿಗ್ ಶಾಕ್ ಎದುರಾಗಿದ್ದು, ಗದಗ, ಬಳ್ಳಾರಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪದ ಮೇಲೆ ಹಲವು ಅಧಿಕಾರಿಗಳ ಮನೆ, ಕಚೇರಿಗಳಿಗೆ ದಾಳಿ ನಡೆಸಲಾಗಿದೆ. ಗದಗ ನಿರ್ಮಿತಿ ಕೇಂದ್ರ ಯೋಜನಾ ನಿರ್ದೇಶಕ ಗಂಗಾಧರ್ ಶಿರೋಳ ಮನೆ, ಕಚೇರಿ ಸೇರಿ 6 ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ರಾಜ್ಯಾದ್ಯಂತ ಲೋಕಾಯುಕ್ತ ದಾಳಿ, ಭ್ರಷ್ಟ ಅಧಿಕಾರಿಗಳಿಗೆ ಶಾಕ್ Read More »

ಕರ್ನಾಟಕ

ರಾಜ್ಯದಲ್ಲಿ ಕೊರೊನಾಕ್ಕೆ ಮತ್ತೊಂದು ಬಲಿ, ಟೆಸ್ಟ್ ಕಡ್ಡಾಯಗೊಳಿಸಿದ ಕೇಂದ್ರ

(ನ್ಯೂಸ್ ಕಡಬ) newskadaba.com ಕಡಬ, ಮೇ. 31. ರಾಜ್ಯದಲ್ಲಿ ಕೊರೊನಾ ಹೆಚ್ಚಾಗುತ್ತಿದ್ದು ಜನರಲ್ಲಿ ಆತಂಕ ತಂದಿಟ್ಟಿದೆ. ಈ ಮಧ್ಯೆ ಇಂದು ಮೈಸೂರಲ್ಲಿ 63ವರ್ಷ ಪುರುಷ ಕೊರೊನಾಗೆ ಬಲಿಯಾಗಿದ್ದಾನೆ. ಈ ಮೂಲಕ ಕೊರೊನಾಗೆ ಬಲಿಯಾದವರ ಸಂಖ್ಯೆ 3ಕ್ಕೆ ಏರಿಕೆಯಾಗಿದೆ. ಇನ್ನೊಂದೆಡೆ SARI ಗುಣಲಕ್ಷಣ ಹೊಂದಿರುವವರಿಗೆ ಕೊರೊನಾ ಟೆಸ್ಟ್ ಕಡ್ಡಾಯಗೊಳಿಸಿ ಕೇಂದ್ರ ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ. ಮುಂಗಾರಿನ ಎಂಟ್ರಿ ಆಗಿರೋದರಿಂದ ಕೊರೊನಾ ಸೋಂಕು ವೇಗವಾಗಿ ಹರಡೋಕೆ ಶುರುವಾಗಿದ್ದು ರಾಜ್ಯದ ಕೊರೊನಾ ಪಾಸಿಟಿವಿಟಿ ರೇಟ್ ಶೇಕಡಾ 24ರ ಗಡಿ ದಾಟಿದೆ.

ರಾಜ್ಯದಲ್ಲಿ ಕೊರೊನಾಕ್ಕೆ ಮತ್ತೊಂದು ಬಲಿ, ಟೆಸ್ಟ್ ಕಡ್ಡಾಯಗೊಳಿಸಿದ ಕೇಂದ್ರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅರಣ್ಯ ಇಲಾಖೆಯ ರಾಯಭಾರಿಯಾದ ಅನಿಲ್ ಕುಂಬ್ಳೆ

(ನ್ಯೂಸ್ ಕಡಬ) newskadaba.com, ಮೇ.27. ಮಾಜಿ ಕ್ರಿಕೆಟಿಗ, ಕನ್ನಡಿಗ ಅನಿಲ್ ಕುಂಬ್ಳೆ ಇನ್ನು ಮುಂದೆ ಅರಣ್ಯ ಇಲಾಖೆಯ ರಾಯಭಾರಿಯಾಗಲಿದ್ದಾರೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದರು. ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಅನಿಲ್ ಕುಂಬ್ಳೆ ರಾಯಭಾರಿ ಆಗಿರೋ ವಿಚಾರವನ್ನು ಸ್ಪಷ್ಟಪಡಿಸಿದರು. ಅನಿಲ್ ಕುಂಬ್ಳೆ ಅವರು ಅರಣ್ಯ ಇಲಾಖೆ ರಾಯಭಾರಿಯಾಗಲು ಒಪ್ಪಿಗೆ ನೀಡಿದ್ದಾರೆ ಎಂದು ಹೇಳಿದರು. ಈ ಹಿಂದೆ ಕರ್ನಾಟಕ ವನ್ಯಜೀವಿ ಮಂಡಳಿಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ ಅನುಭವ ಅನಿಲ್ ಕುಂಬ್ಳೆ ಅವರಿಗೆ ಇದೆ. ಇವರು

ಅರಣ್ಯ ಇಲಾಖೆಯ ರಾಯಭಾರಿಯಾದ ಅನಿಲ್ ಕುಂಬ್ಳೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಿಜೆಪಿಯಿಂದ ಶಾಸಕರಾದ ಶಿವರಾಂ ಹೆಬ್ಬಾರ್, ಎಸ್.ಟಿ. ಸೋಮಶೇಖರ್ ಉಚ್ಚಾಟನೆ

(ನ್ಯೂಸ್ ಕಡಬ) newskadaba.com, ಮೇ.27. ಬೆಂಗಳೂರು: ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಆರೋಪದ ಹಿನ್ನಲೆಯಲ್ಲಿ ಬಿಜೆಪಿ ಶಾಸಕರಾದ ಎಸ್.ಟಿ.ಸೋಮಶೇಖರ್ ಮತ್ತು ಶಿವರಾಮ್ ಹೆಬ್ಬಾರ್ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದಲೇ ಆರು ವರ್ಷಗಳ ಕಾಲ ಉಚ್ಚಾಟಿಸಲಾಗಿದೆ. ಕಳೆದ ಮಾರ್ಚ್ 26ರಂದು ಪಕ್ಷ ವಿರೋಧಿ ಚಟುವಟಿಕೆ . ಹಿನ್ನಲೆಯಲ್ಲಿ ಬಿಜಾಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಉಚ್ಚಾಟಿಸಿದ ಬೆನ್ನಲ್ಲೇ ಕೇಂದ್ರ ಬಿಜೆಪಿ ವರಿಷ್ಠರು ಸೋಮಶೇಖರ್ ಮತ್ತು ಶಿವರಾಮ್ ಹೆಬ್ಬಾರ್ ಅವರುಗಳಿಗೂ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದಲೇ ಗೇಟ್ ಪಾಸ್ ನೀಡಿದೆ. ಹಲವು

ಬಿಜೆಪಿಯಿಂದ ಶಾಸಕರಾದ ಶಿವರಾಂ ಹೆಬ್ಬಾರ್, ಎಸ್.ಟಿ. ಸೋಮಶೇಖರ್ ಉಚ್ಚಾಟನೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವೃದ್ಧರು, ಕಾಯಿಲೆಯಿರುವವರಿಗೆ ಮಾಸ್ಕ್ ಕಡ್ಡಾಯ: ಸಿಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com, ಮೇ.27. ಬೆಂಗಳೂರು: ಸ್ವತಂತ್ರ ಭಾರತದ ಮೊದಲನೇ ಪ್ರಧಾನಿ ಜವಾಹರ್ ಲಾಲ್ ನೆಹರು ಅವರು ಆಧುನಿಕ ಭಾರತದ ನಿರ್ಮಾತೃ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ವಿಧಾನಸೌಧದ ಪೂರ್ವ ದ್ವಾರದ ಬಳಿ ಇರುವ ಮಾಜಿ ಪ್ರಧಾನಮಂತ್ರಿ ದಿವಂಗತ ಪಂಡಿತ್ ಜವಾಹರಲಾಲ್ ನೆಹರು ಅವರ ಪುಣ್ಯತಿಥಿಯ ಅಂಗವಾಗಿ ಅವರ ಪ್ರತಿಮೆ ಹಾಗೂ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ನಂತರ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ನೆಹರೂ ಅವರ ಪುಣ್ಯ ತಿಥಿಯನ್ನು ಸರ್ಕಾರ ಗೌರವ ಹಾಗೂ ಅಭಿಮಾನದಿಂದ ನೆರವೇರಿಸಿದೆ. ದೇಶದ ಬಡತನವನ್ನು ಹೋಗಲಾಡಿಸುವ

ವೃದ್ಧರು, ಕಾಯಿಲೆಯಿರುವವರಿಗೆ ಮಾಸ್ಕ್ ಕಡ್ಡಾಯ: ಸಿಎಂ ಸಿದ್ದರಾಮಯ್ಯ Read More »

ಆರೋಗ್ಯ ಮಾಹಿತಿ, ಕರ್ನಾಟಕ

ಬಂಟ್ವಾಳ : ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿ ಅವಾಂತರ – ಕೃತಕ ಹೊಳೆ ಸೃಷ್ಟಿ

(ನ್ಯೂಸ್ ಕಡಬ) newskadaba.com, ಮೇ.27. ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿ ನಡೆಸುತ್ತಿರುವ ಆಂಧ್ರಪ್ರದೇಶದ ಕೆಎನ್‌ಆರ್ ಕಂಪೆನಿಯ ಬೇಜವಾಬ್ದಾರಿತನದ ಕೆಲಸಗಳಿಂದ ಮಾಣಿ ಸೂರಿಕುಮೇರು ಮಧ್ಯೆ ಹಲವಾರು ಅವಾಂತರಗಳು ಸೃಷ್ಠಿಯಾಗಿದೆ. ರಾಜ್ ಕಮಲ್ ಹಾಲ್ ಬಳಿ ಮತ್ತು ಟಿಕ್ಕಾ ಪಾಯಿಂಟ್ ಹೋಟೆಲ್ ಸಮೀಪ ಚರಂಡಿಗಳಲ್ಲಿ ತುಂಬಿರುವ ಮಣ್ಣು ತೆಗೆಯದೇ ಇರುವುದರಿಂದ ಮಳೆಯ ನೀರೆಲ್ಲಾ ರಸ್ತೆಯಲ್ಲೇ ತುಂಬಿ ಕೃತಕ ಹೊಳೆ ನಿರ್ಮಾಣವಾಗಿ ವಾಹನ ಸಂಚಾರ ಸುಗಮವಾಗುತ್ತಿಲ್ಲ, ಅದೇ ರೀತಿ ಹಳೀರ ಮಾನಸ ತೆಂಗಿನ ಎಣ್ಣೆಯ ಮಿಲ್ ಸಮೀಪ ಎತ್ತರದಲ್ಲಿ ಇರುವ ಮೂರು

ಬಂಟ್ವಾಳ : ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿ ಅವಾಂತರ – ಕೃತಕ ಹೊಳೆ ಸೃಷ್ಟಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೊಡಗಿನಲ್ಲಿ ಗಾಳಿ-ಮಳೆ: ಮರ ಬಿದ್ದು ಓರ್ವ ಮೃತ್ಯು

(ನ್ಯೂಸ್ ಕಡಬ) newskadaba.com, ಮೇ.27. ಕೊಡಗು ಜಿಲ್ಲೆಯಲ್ಲಿ ಗಾಳಿ ಸಹಿತ ಭಾರೀ ಮಳೆಯಾಗುತ್ತಿದ್ದು ಮರ ಬಿದ್ದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಅಮತ್ತಿ ಹೋಬಳಿ ಬಾಡಗ ಬಾಣಂಗಾಲ ಗ್ರಾಮದ ಜನತಾ ಕಾಲನಿಯಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ. ಸ್ಥಳೀಯ ನಿವಾಸಿ ಪಿಸಿವಿಷ್ಟು ಬೆಳ್ಳಿಯಪ್ಪ (65) ಮೃತಪಟ್ಟವರು. ಇಂದು ಬೆಳಗ್ಗೆ 730ರ ಸುಮಾರಿಗೆ ವಿಷ್ಣು ಬೆಳ್ಳಿಯಪ್ಪರ ಮೇಲೆ ಮಾವಿನಮರ ಉರುಳಿಬಿದ್ದಿದೆ. ತಕ್ಷಣ ಇವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟರಲ್ಲಿ ಅವರು ಕೊನೆಯುಸಿರೆಳೆದಿದ್ದರು ಎಂದು ತಿಳಿದು ಬಂದಿದೆ.ಸ್ಥಳಕ್ಕೆ ಗ್ರೇಡ್ 2 ತಹಶೀಲ್ದಾರರು ಕಂದಾಯ

ಕೊಡಗಿನಲ್ಲಿ ಗಾಳಿ-ಮಳೆ: ಮರ ಬಿದ್ದು ಓರ್ವ ಮೃತ್ಯು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಾಂಬ್ ಇಡಲು ಯತ್ನಿಸುತ್ತಿರುವಾಗ ಸ್ಫೋಟ – ವ್ಯಕ್ತಿ ಸಾವು

(ನ್ಯೂಸ್ ಕಡಬ) newskadaba.com, ಮೇ.27. ಅಮೃತಸರದ ನಗರದಲ್ಲಿ ವ್ಯಕ್ತಿಯೊಬ್ಬ ಬಾಂಬ್ ಇಡಲು ಯತ್ನಿಸುತ್ತಿರುವಾಗ ಬಾಂಬ್ ಸ್ಫೋಟಗೊಂಡಿದೆ ಎಂದು ವರದಿಯಾಗಿದೆ. ವ್ಯಕ್ತಿ ಸಾವನ್ನಪ್ಪಿದ್ದಾನೆ ಎಂದು ಹೇಳಲಾಗಿದೆ. ಮಜಿತಾ ರಸ್ತೆ ಬೈಪಾಸ್‌ನಲ್ಲಿರುವ ಡಿಸೆಂಟ್ ಅವೆನ್ಯೂ ಹೊರಗೆ ಸಂಭವಿಸಿದ ಸ್ಫೋಟದಲ್ಲಿ ಗಾಯಗೊಂಡಿದ್ದ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಾಂಬ್ ಇಡಲು ಯತ್ನಿಸುತ್ತಿದ್ದಾಗ ಆರೋಪಿಯ ಕೈಯಲ್ಲೇ ಬಾಂಬ್ ಸ್ಫೋಟಗೊಂಡಿದೆ ಎಂದು ವರದಿಗಳು ಹೇಳಿವೆ. ಮಾಹಿತಿ ಪಡೆದ ನಂತರ ಪೊಲೀಸರು ಸ್ಥಳಕ್ಕೆ ಆಗಮಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಪ್ರಸ್ತುತ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಫೋಟದ ಕಾರಣವನ್ನು

ಬಾಂಬ್ ಇಡಲು ಯತ್ನಿಸುತ್ತಿರುವಾಗ ಸ್ಫೋಟ – ವ್ಯಕ್ತಿ ಸಾವು Read More »

ಬ್ರೇಕಿಂಗ್ ನ್ಯೂಸ್
Scroll to Top