News Kadaba

ಭಾರತದಲ್ಲಿ ಗ್ಲೋಬಲ್‌ ಟೈಮ್ಸ್ ಸಾಮಾಜಿಕ ಮಾಧ್ಯಮಗಳ ಖಾತೆಗಳಿಗೆ ನಿರ್ಬಂಧ

(ನ್ಯೂಸ್ ಕಡಬ) newskadaba.com , ಮೇ.14. ಚೀನಾ ಪರ ಸುದ್ದಿಗಳನ್ನು ಮಾಡುವ ಚೀನಾದ ಮುಖವಾಣಿ ಗ್ಲೋಬಲ್‌ ಟೈಮ್ಸೌನ ಸಾಮಾಜಿಕ ಮಾಧ್ಯಮ ಖಾತೆಯನ್ನು ಭಾರತ ನಿರ್ಬಂಧಿಸಿದೆ.ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆ ಹೆಚ್ಚುತ್ತಿರುವ ನಡುವೆಯೇ ಭಾರತೀಯ ಸೇನೆಯ ಮೇಲೆ ಪರಿಶೀಲಿಸದ ಹೇಳಿಕೆಗಳನ್ನು ಹರಡಿದ್ದಕ್ಕಾಗಿ ಭಾರತ ಸರ್ಕಾರ ಇಂದು ಚೀನಾದ ಸರ್ಕಾರಿ ಸ್ವಾಮ್ಯದ ಎಕ್‌್ಸ ಹ್ಯಾಂಡಲ್‌ ಅನ್ನು ನಿಷೇಧಿಸಿದೆ. ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್‌ ಮಾಡುವ ಮೊದಲು ಸತ್ಯಗಳನ್ನು ಪರಿಶೀಲಿಸುವಂತೆ ಚೀನಾದಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಮಾಧ್ಯಮಗಳಿಗೆ ಬಲವಾಗಿ ಎಚ್ಚರಿಕೆ ನೀಡಿದ […]

ಭಾರತದಲ್ಲಿ ಗ್ಲೋಬಲ್‌ ಟೈಮ್ಸ್ ಸಾಮಾಜಿಕ ಮಾಧ್ಯಮಗಳ ಖಾತೆಗಳಿಗೆ ನಿರ್ಬಂಧ Read More »

ಬ್ರೇಕಿಂಗ್ ನ್ಯೂಸ್

ಶಾಲಾ ಆವರಣದೊಳಗೆ ಮದ್ಯ ಸೇವನೆ – ಇಬ್ಬರು ಶಿಕ್ಷಕರು ಅಮಾನತು

(ನ್ಯೂಸ್ ಕಡಬ) newskadaba.com , ಮೇ.14. ಅಮ್ರೋಹಾ ಜಿಲ್ಲೆಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರು ಆವರಣದೊಳಗೆ ಮದ್ಯ ಸೇವಿಸುತ್ತಿರುವ ವೀಡಿಯೊ ವೈರಲ್‌ ಆದ ನಂತರ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಹಸನ್‌ಪುರ ಬ್ಲಾಕ್‌ನ ಫಯಾಜ್‌ನಗರ ಗ್ರಾಮದಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದೆ. ಗ್ರಾಮಸ್ಥರ ಪ್ರಕಾರ, ಸುತಾರಿ ಗ್ರಾಮದ ಹತ್ತಿರದ ಶಾಲೆಯ ಮುಖ್ಯೋಪಾಧ್ಯಾಯ ಅರವಿಂದ್ ಕುಮಾರ್ ಮತ್ತು ಮತ್ತೊಬ್ಬ ಮುಖ್ಯೋಪಾಧ್ಯಾಯ ಅನುಪಾಲ್, ಪ್ರತಿದಿನ ಶಾಲಾ ಆವರಣದಲ್ಲಿ ಮಕ್ಕಳ ಮುಂದೆ ಒಟ್ಟಿಗೆ ಮದ್ಯಪಾನ ಮಾಡುತ್ತಿದ್ದರು ಎನ್ನಲಾಗಿದೆ.

ಶಾಲಾ ಆವರಣದೊಳಗೆ ಮದ್ಯ ಸೇವನೆ – ಇಬ್ಬರು ಶಿಕ್ಷಕರು ಅಮಾನತು Read More »

ಬ್ರೇಕಿಂಗ್ ನ್ಯೂಸ್

ಶೋಪಿಯಾನ್‌ನಲ್ಲಿ ಉಗ್ರರ ಹತ್ಯೆ ಬೆನ್ನಲ್ಲೇ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶಕ್ಕೆ

(ನ್ಯೂಸ್ ಕಡಬ) newskadaba.com , ಮೇ.14. ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಶುಕ್ರೂ ಕೆಲ್ಲರ್ ಅರಣ್ಯ ಪ್ರದೇಶದಲ್ಲಿ ಮೂವರು ಉಗ್ರರ ಹತ್ಯೆ ಬೆನ್ನಲ್ಲೇ ಭದ್ರತಾ ಪಡೆಗಳು ಅಪಾರ ಪ್ರಮಾಣದ ಶಸ್ತ್ರಾಸ್ತ್ರ, ಮದ್ದುಗುಂಡುಗಳನ್ನು ವಶಪಡಿಸಿಕೊಂಡಿವೆ. ಮೇ 13ರಂದು ‘ಆಪರೇಷನ್ ಕೆಲ್ಲರ್’ ಅಡಿಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಭದ್ರತಾ ಪಡೆ ಮೂವರು ಉಗ್ರರನ್ನು ಹತ್ಯೆ ಮಾಡಿತ್ತು. ಇದಾದ ಬೆನ್ನಲ್ಲೇ ಭದ್ರತಾ ಪಡೆಗಳು ರೈಫಲ್, ಗ್ರೆನೇಡ್‌ಗಳು ಸೇರಿದಂತೆ ಬೃಹತ್ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಕ್ಕೆ ಪಡೆದುಕೊಂಡಿವೆ. ಈ ಶಸ್ತ್ರಾಸ್ತ್ರಗಳು, ಸಾವನ್ನಪ್ಪಿದ್ದ

ಶೋಪಿಯಾನ್‌ನಲ್ಲಿ ಉಗ್ರರ ಹತ್ಯೆ ಬೆನ್ನಲ್ಲೇ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶಕ್ಕೆ Read More »

ಬ್ರೇಕಿಂಗ್ ನ್ಯೂಸ್

‘ಕೇಂದ್ರ ಸರ್ಕಾರದಿಂದ ಬರಬೇಕಾದ ಪಿಂಚಣಿ ಎರಡು ವರ್ಷದಿಂದ ರಾಜ್ಯಕ್ಕೆ ಕೊಟ್ಟಿಲ್ಲ’- ಸಿಎಂ ಅಸಮಾಧಾನ

(ನ್ಯೂಸ್ ಕಡಬ) newskadaba.com , ಮೇ.14. ಕೇಂದ್ರ ಸರ್ಕಾರದಿಂದ ಬರಬೇಕಾದ ಪಿಂಚಣಿ ಎರಡು ವರ್ಷದಿಂದ ರಾಜ್ಯಕ್ಕೆ ಕೊಟ್ಟಿಲ್ಲ. ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಕೇಂದ್ರದಿಂದ ಹಣ ಬಾರದೇ ಇರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಸಮಾಧಾನ ವ್ಯಕ್ತಪಡಿಸಿದರು. ವಿಧಾನಸೌಧದ ಸಮ್ಮೇಳನಾ ಕೊಠಡಿಯಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಮಟ್ಟದ ದಿಶಾ ಸಮಿತಿ ಸಭೆಯಲ್ಲಿ ಮಾತನಾಡಿದರು. ರಾಜ್ಯ ಸರ್ಕಾರವೇ ಬಹುತೇಕ ಹಣ ಕೊಡುವ ಯೋಜನೆಗಳಿಗೆ ಪ್ರಧಾನಿ ಮತ್ತು ಕೇಂದ್ರದ ಹೆಸರಿದೆ. ಆದರೂ ಚೂರು, ಪಾರು ಶೇಕಡ ಕೇಂದ್ರದ ಹಣವೂ ಬರುತ್ತಿಲ್ಲ. ಈ

‘ಕೇಂದ್ರ ಸರ್ಕಾರದಿಂದ ಬರಬೇಕಾದ ಪಿಂಚಣಿ ಎರಡು ವರ್ಷದಿಂದ ರಾಜ್ಯಕ್ಕೆ ಕೊಟ್ಟಿಲ್ಲ’- ಸಿಎಂ ಅಸಮಾಧಾನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

‘ಸರ್ಕಾರವೇ ಇನ್ನು ಮೇಲೆ 108 ಆ್ಯಂಬುಲೆನ್ಸ್ ಸೇವೆ ನೀಡಲಿದೆ’- ದಿನೇಶ್‌ಗುಂಡೂರಾವ್

(ನ್ಯೂಸ್ ಕಡಬ) newskadaba.com , ಮೇ.14. ನವದೆಹಲಿ: ಸರ್ಕಾರದಿಂದಲೇ ಇನ್ನು 108 ಆ್ಯಂಬುಲೆನ್ಸ್ ಸೇವೆ ನೀಡಲಾಗುತ್ತದೆ. ಯಾವುದೇ ಏಜೆನ್ಸಿ ಮೂಲಕ 108 ಆ್ಯಂಬುಲೆನ್ಸ್ ಕಾರ್ಯ ನಡೆಯುವುದಿಲ್ಲ. ಸಂಪೂರ್ಣ ಸೇವೆ ಹಾಗೂ ನಿರ್ವಹಣೆ ಸರ್ಕಾರವೇ ನಡೆಸಲು ಮುಂದಾಗಿದೆ. ಆರೋಗ್ಯ ಇಲಾಖೆ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್​ ಗುಂಡೂರಾವ್ ಹೇಳಿದ್ದಾರೆ. ಆರೋಗ್ಯ ಇಲಾಖೆಯ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದಿನೇಶ್ ಗುಂಡುರಾವ್, ಸರ್ಕಾರವೇ ಇನ್ಮುಂದೆ 108 ಆ್ಯಂಬುಲೆನ್ಸ್ ಸೇವೆ ನೀಡುತ್ತದೆ. ಈಗಾಗಲೇ ಚಾಮರಾಜನಗರದಲ್ಲಿ ಪ್ರಾಯೋಗಿಕವಾಗಿ ನಡೆಸಲಾಗುತ್ತಿದೆ. 108 ಆ್ಯಂಬುಲೆನ್ಸ್ ಸಿಬ್ಬಂದಿ

‘ಸರ್ಕಾರವೇ ಇನ್ನು ಮೇಲೆ 108 ಆ್ಯಂಬುಲೆನ್ಸ್ ಸೇವೆ ನೀಡಲಿದೆ’- ದಿನೇಶ್‌ಗುಂಡೂರಾವ್ Read More »

ಕರ್ನಾಟಕ

ಪಾಕ್ ಪರ ಘೋಷಣೆ – ಟೆಕ್ಕಿ ಅರೆಸ್ಟ್‌

(ನ್ಯೂಸ್ ಕಡಬ) newskadaba.com , ಮೇ.14. ನವದೆಹಲಿ: ʻಆಪರೇಷನ್‌ ಸಿಂಧೂರʼ ವಿಜಯೋತ್ಸವ ಆಚರಣೆ ವೇಳೆ ಪಾಕ್‌ ಪರ ಘೋಷಣೆ ಕೂಗಿದ ಆರೋಪದ ಮೇಲೆ ಟೆಕ್ಕಿಯೊಬ್ಬನನ್ನ ಬಂಧಿಸಿರುವ ಘಟನೆ ಬೆಂಗಳೂರಿನ ವೈಟ್ ಫೀಲ್ಡ್‌ನ ಪ್ರಶಾಂತ್ ಲೇಔಟ್‌ನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಶುಭಾಂಶು ಶುಕ್ಲಾ (26) ಬಂಧಿತ ಆರೋಪಿ. ಛತ್ತಿಸ್‌ಗಢ ಮೂಲದ ಶುಕ್ಲಾ ಬೆಂಗಳೂರಿನಲ್ಲಿ ಟೆಕ್ಕಿ ಆಗಿ ಕೆಲಸ ಮಾಡಿಕೊಂಡಿದ್ದ, ವೈಟ್‌ಫೀಲ್ಡ್‌ನ ಪ್ರಶಾಂತ್‌ ಲೇಔಟ್‌ನಲ್ಲಿ ವಾಸಿಸುತ್ತಿದ್ದ. ಮೇ 9ರಂದು ಈ ಬಡಾವಣೆಯಲ್ಲಿ ʻಆಪರೇಷನ್‌ ಸಿಂಧೂರʼ ವಿಜಯೋತ್ಸವ ಆಚರಿಸಲಾಗುತ್ತಿತ್ತು. ಈ ವೇಳೆ

ಪಾಕ್ ಪರ ಘೋಷಣೆ – ಟೆಕ್ಕಿ ಅರೆಸ್ಟ್‌ Read More »

ಬ್ರೇಕಿಂಗ್ ನ್ಯೂಸ್

ಪಾಕಿಸ್ತಾನದ ವಶದಲ್ಲಿದ್ದ BSF ಯೋಧ ಬಿಡುಗಡೆ

(ನ್ಯೂಸ್ ಕಡಬ) newskadaba.com , ಮೇ.14. ನವದೆಹಲಿ: ಪಾಕಿಸ್ತಾನ ವಿರುದ್ಧ ಭಾರತಕ್ಕೆ ಮತ್ತೊಂದು ರಾಜತಾಂತ್ರಿಕ ಜಯ ಲಭಿಸಿದ್ದು, ಇತ್ತೀಚೆಗೆ ಅಜಾಗರೂಕತೆಯಿಂದ ಆಕಸ್ಮಿಕವಾಗಿ ಪಾಕಿಸ್ತಾನ ಗಡಿ ಪ್ರವೇಶ ಮಾಡಿದ್ದ BSF ಯೋಧ ಕೊನೆಗೂ ಬಿಡುಗಡೆಯಾಗಿದ್ದಾನೆ. ಹೌದು.. ಈ ಹಿಂದೆ ಅಂದರೆ ಏಪ್ರಿಲ್ ನಲ್ಲಿ ಭಾರತ ಪಾಕ್ ಗಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಅಜಾಗರೂಕತೆಯಿಂದ ಪಾಕಿಸ್ತಾನ ಗಡಿ ಪ್ರವೇಶ ಮಾಡಿದ್ದ ಭಾರತೀಯ ಗಡಿ ಭದ್ರತಾ ಪಡೆಯ ಯೋಧ ಪೂರ್ಣಂ ಕುಮಾರ್ ಶಾನನ್ನು ಪಾಕಿಸ್ತಾನ ಸೇನೆ ಬಿಡುಗಡೆ ಮಾಡಿದೆ. ಈಗಾಗಲೇ ಯೋಧ ಪಿಕೆ ಶಾನನ್ನು

ಪಾಕಿಸ್ತಾನದ ವಶದಲ್ಲಿದ್ದ BSF ಯೋಧ ಬಿಡುಗಡೆ Read More »

ಬ್ರೇಕಿಂಗ್ ನ್ಯೂಸ್

‘ಭಾರತ- ಪಾಕ್‌ ಗಡಿಯಲ್ಲಿ ರಾತ್ರಿಯಿಂದ ಯಾವುದೇ ದಾಳಿ ನಡೆದಿಲ್ಲ’- ರಕ್ಷಣಾ ಇಲಾಖೆ ವಕ್ತಾರ

(ನ್ಯೂಸ್ ಕಡಬ) newskadaba.com , ಮೇ.14. ಜಮ್ಮು ಮತ್ತು ಕಾಶ್ಮೀರ, ಪಂಜಾಬ್‌, ರಾಜಸ್ಥಾನ, ಗುಜರಾತ್‌ಗೆ ಹೊಂದಿಕೊಂಡಿರುವ ಭಾರತ- ಪಾಕ್‌ ಗಡಿಯಲ್ಲಿ ಮಂಗಳವಾರ ರಾತ್ರಿಯಿಂದ ಡ್ರೋನ್‌ ಹಾರಾಟ ಸೇರಿದಂತೆ ಯಾವುದೇ ದಾಳಿ ನಡೆದಿಲ್ಲ ಎಂದು ರಕ್ಷಣಾ ಇಲಾಖೆ ವಕ್ತಾರರು ತಿಳಿಸಿದ್ದಾರೆ. ಡ್ರೋನ್‌ ಹಾರಾಟ, ಶೆಲ್‌ ದಾಳಿ, ರಾಕೆಟ್‌ ದಾಳಿ, ಅಂತರರರಾಷ್ಟ್ರೀಯ ಗಡಿಯಲ್ಲಿ ಪಾಕ್‌ ಕಡೆಯಿಂದ ಗುಂಡಿನ ಚಕಮಕಿ ನಡೆದಿಲ್ಲ. ಗಡಿ ಪ್ರದೇಶಗಳು ಶಾಂತವಾಗಿದ್ದು, ಜನಜೀವನ ಸಹಜವಾಗಿದೆ ಎಂದು ವಕ್ತಾರು ಹೇಳಿದ್ದಾರೆ. ನಿನ್ನೆ ಗಡಿಜಿಲ್ಲೆಗಳನ್ನು ಹೊರತುಪಡಿಸಿ ಜಮ್ಮು- ಕಾಶ್ಮೀರದ ಉಳಿದೆಡೆ

‘ಭಾರತ- ಪಾಕ್‌ ಗಡಿಯಲ್ಲಿ ರಾತ್ರಿಯಿಂದ ಯಾವುದೇ ದಾಳಿ ನಡೆದಿಲ್ಲ’- ರಕ್ಷಣಾ ಇಲಾಖೆ ವಕ್ತಾರ Read More »

ಕರ್ನಾಟಕ

ಹುಬ್ಬಳ್ಳಿ: 6ನೇ ತರಗತಿ ವಿದ್ಯಾರ್ಥಿಯಿಂದ 8ನೇ ತರಗತಿ ವಿದ್ಯಾರ್ಥಿಗೆ ಚಾಕು ಇರಿದು ಭೀಕರ ಹತ್ಯೆ!

(ನ್ಯೂಸ್ ಕಡಬ) newskadaba.com , ಮೇ.14. ಹುಬ್ಬಳ್ಳಿಯ ಗುರುಸಿದ್ದೇಶ್ವರ ನಗರದಲ್ಲಿ ನಡೆದಿರುವ ಈ ಅಮಾನವೀಯ ಘಟನೆ ನಾಡಿನ ನಾಗರಿಕ ಸಮುದಾಯವನ್ನು ಬೆಚ್ಚಿ ಬೀಳಿಸಿದೆ. ಶಾಲಾ ಮಕ್ಕಳ ನಡುವೆ ನಡೆದ ಕಿರು ಜಗಳ ಕೇವಲ ಮಾತುಗಳ ಮಟ್ಟದಲ್ಲೇ ನಿಂತಿರಲಿಲ್ಲ, ಅದು ನೇರವಾಗಿ ಒಂದು ಪ್ರಾಣಹರಣದ ಘಟ್ಟಕ್ಕೆ ತಲುಪಿದ್ದು, ಸಮಾಜದಲ್ಲಿ ಮಕ್ಕಳ ಆಂತರಿಕ ಸ್ಥಿತಿಗೆ ಕಳವಳ ಮೂಡಿಸಿದೆ. 6ನೇ ತರಗತಿಯ ವಿದ್ಯಾರ್ಥಿಯೊಬ್ಬ, ಅಲ್ಪ ಸಣ್ಣ ದ್ವೇಷ ಹಾಗೂ ಹಿಂಸಾತ್ಮಕ ಮನೋಭಾವದ ಪರಿಣಾಮವಾಗಿ 8ನೇ ತರಗತಿಯ ವಿದ್ಯಾರ್ಥಿ ಚೇತನ ರಕ್ಕಸಗಿ (15)

ಹುಬ್ಬಳ್ಳಿ: 6ನೇ ತರಗತಿ ವಿದ್ಯಾರ್ಥಿಯಿಂದ 8ನೇ ತರಗತಿ ವಿದ್ಯಾರ್ಥಿಗೆ ಚಾಕು ಇರಿದು ಭೀಕರ ಹತ್ಯೆ! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಇಂದಿರಾ ಗಾಂಧಿ ಗುಣಗಾನ ಮಾಡುತ್ತಾ ಮೋದಿ ವಿರುದ್ಧ ಕಾಂಗ್ರೆಸ್ ನಾಯಕರು ಟೀಕೆ

(ನ್ಯೂಸ್ ಕಡಬ) newskadaba.com , ಮೇ.13. ಪಾಕಿಸ್ತಾನವನ್ನು ಎರಡು ಭಾಗ ಮಾಡಿ ಸದೆಬಡೆದ ಅಂದಿನ ಪ್ರಧಾನ ಮಂತ್ರಿ ಇಂದಿರಾ ಗಾಂಧಿ ರವರ ಹೋರಾಟವನ್ನು ಇಂದು ದೇಶದ ಪ್ರತಿಯೊಬ್ಬ ನಾಗರೀಕರು ಸರಿಸುತ್ತಿದ್ದಾರೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್‌‍.ಮನೋಹರ್‌ ಹೇಳಿದ್ದಾರೆ.ಅವರ ದಿಟ್ಟತನದ ಕ್ರಮಗಳು ಇಂದಿಗೂ ಅವಿಸರಣೀಯ ಹಾಗೂ ಭಾರತದ ಸೈನಿಕರಿಗೆ ಇಂದಿರಾಗಾಂಧಿ ಅವರು ನೀಡಿದ ನೈತಿಕ ಬೆಂಬಲದಿಂದ ಇಡೀ ಪಾಕಿಸ್ತಾನವನ್ನು ಬಗ್ಗು ಬಡಿಯಲು ಸಾಧ್ಯವಾಯಿತು ಎಂದು ದೇಶದ ಜನತೆ ಹೆಮೆಯಿಂದ ಹೇಳಿಕೊಳ್ಳುತ್ತಿದ್ದಾರೆ. ಭಾರತದ ಸೈನಿಕರು ಪಾಕಿಸ್ತಾನದಲ್ಲಿ ಅಡಗಿರುವ ಉಗ್ರರ

ಇಂದಿರಾ ಗಾಂಧಿ ಗುಣಗಾನ ಮಾಡುತ್ತಾ ಮೋದಿ ವಿರುದ್ಧ ಕಾಂಗ್ರೆಸ್ ನಾಯಕರು ಟೀಕೆ Read More »

ರಾಷ್ಟ್ರೀಯ ನ್ಯೂಸ್
Scroll to Top