News Kadaba

ಭದ್ರತಾ ಪಡೆಗಳ ಕಾರ್ಯಾಚರಣೆ: ಅಪಾರ ಪ್ರಮಾಣದ ಶಸ್ತ್ರಾಸ್ತ್ರ, ಸ್ಫೋಟಕ ವಶಕ್ಕೆ

(ನ್ಯೂಸ್ ಕಡಬ) newskadaba.com, ಮೇ.06: ಐಎಸ್‌ಐ ಬೆಂಬಲಿತ ಗಡಿಯಾಚೆಗಿನ ಭಯೋತ್ಪಾದನೆಯ ವಿರುದ್ಧ ಮಂಗಳವಾರ ಕಾರ್ಯಾಚರಣೆ ನಡೆಸಿದ ಪಂಜಾಬ್ ಪೊಲೀಸರು ಅಪಾರ ಪ್ರಮಾಣದ ಶಸ್ತ್ರಾಸ್ತ್ರ, ಸ್ಫೋಟಕಗಳನ್ನು ವಶಪಡಿಸಿಕೊಂಡಿದ್ದಾರೆ. ಎಸ್‌ಬಿಎಸ್ ನಗರದ ಟಿಬ್ಬಾ ನಂಗಲ್-ಕುಲಾರ್ ರಸ್ತೆಯ ಬಳಿಯ ಅರಣ್ಯ ಪ್ರದೇಶದಲ್ಲಿ ಪಂಜಾಬ್ ಪೊಲೀಸರು ಮತ್ತು ಕೇಂದ್ರ ತನಿಖಾ ದಳದ ಸಿಬ್ಬಂದಿ ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದಾರೆ. ಈ ವೇಳೆ ಎರಡು ರಾಕೆಟ್ ಚಾಲಿತ ಗ್ರೆನೇಡ್ (ಆರ್‌ಪಿಜಿ), ಎರಡು ಸುಧಾರಿತ ಸ್ಫೋಟಕ ಸಾಧನಗಳು (ಐಇಡಿ), ಐದು ಪಿ-86 ಹ್ಯಾಂಡ್ ಗ್ರೆನೇಡ್‌ಗಳು, ಒಂದು ಮೊಬೈಲ್ […]

ಭದ್ರತಾ ಪಡೆಗಳ ಕಾರ್ಯಾಚರಣೆ: ಅಪಾರ ಪ್ರಮಾಣದ ಶಸ್ತ್ರಾಸ್ತ್ರ, ಸ್ಫೋಟಕ ವಶಕ್ಕೆ Read More »

ಬ್ರೇಕಿಂಗ್ ನ್ಯೂಸ್

ಜೇಮ್ಸ್, ಜೆಲ್ಲಿಸ್‌ಗಳಲ್ಲಿ ಹಾನಿಕಾರಕ ರಾಸಾಯನಿಕ ಬಳಕೆ ಆರೋಪ; ಟೆಸ್ಟ್ಗೆ ಮುಂದಾದ ಆಹಾರ ಇಲಾಖೆ

(ನ್ಯೂಸ್ ಕಡಬ) newskadaba.com, ಮೇ.06: ಮಕ್ಕಳಿಗೆ ಚಾಕೊಲೇಟ್, ಪೆಪ್ಪರಮೆಂಟ್, ಜೇಮ್ಸ್ ಮತ್ತು ಜೆಲ್ಲಿಸ್ ಬಹಳ ಅಚ್ಚುಮೆಚ್ಚು. ಆದರೆ ಇವುಗಳಲ್ಲಿ ಕೃತಕ ಕಲರ್ ಹಾಗೂ ಹಾನಿಕಾರಕ ರಾಸಾಯನಿಕ ಬಳಕೆ ಆರೋಪ ಕೇಳಿಬಂದಿದ್ದು, ಇವುಗಳನ್ನು ಮಕ್ಕಳಿಗೆ ನೀಡುವ ಮುನ್ನ ಪೋಷಕರು ಎಚ್ಚರಿಕೆ ವಹಿಸುವಂತೆ ಆಹಾರ ಇಲಾಖೆ ತಿಳಿಸಿದೆ. ಚಾಕೊಲೇಟ್, ಪೆಪ್ಪರಮೆಂಟ್, ಜೇಮ್ಸ್ ಮತ್ತು ಜೆಲ್ಲಿಸ್‌ಗಳಲ್ಲಿ ಕೃತಕ ಕಲರ್ ಹಾಗೂ ಹಾನಿಕಾರಕ ರಾಸಾಯನಿಕ ಬಳಸಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಇವುಗಳ ಸೇವನೆಯಿಂದ ಕ್ಯಾನ್ಸರ್ ನಂತಹ ಅಪಾಯಕಾರಿ ಕಾಯಿಲೆಗಳು ಬರುವ ಜೊತೆಗೆ

ಜೇಮ್ಸ್, ಜೆಲ್ಲಿಸ್‌ಗಳಲ್ಲಿ ಹಾನಿಕಾರಕ ರಾಸಾಯನಿಕ ಬಳಕೆ ಆರೋಪ; ಟೆಸ್ಟ್ಗೆ ಮುಂದಾದ ಆಹಾರ ಇಲಾಖೆ Read More »

ಬ್ರೇಕಿಂಗ್ ನ್ಯೂಸ್

ಜಾತಿ ಜನಗಣತಿ ಕುರಿತು ಪ್ರಧಾನಿಗೆ ಪತ್ರ ಬರೆದ ಮಲ್ಲಿಕಾರ್ಜುನ ಖರ್ಗೆ

(ನ್ಯೂಸ್ ಕಡಬ) newskadaba.com, ಮೇ.06: ಸರ್ಕಾರದ ಜಾತಿ ಜನಗಣತಿ ನಿರ್ಧಾರದ ಬಗ್ಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಪತ್ರದಲ್ಲಿ ತೆಲಂಗಾಣ ಮಾದರಿಯನ್ನು ಬಳಸಿಕೊಳ್ಳುವಂತೆ ಮತ್ತು ಈ ವಿಷಯದ ಬಗ್ಗೆ ಶೀಘ್ರದಲ್ಲೇ ಎಲ್ಲಾ ರಾಜಕೀಯ ಪಕ್ಷಗಳೊಂದಿಗೆ ಮಾತುಕತೆ ನಡೆಸುವಂತೆ ಒತ್ತಾಯಿಸಿದ್ದಾರೆ. ಪ್ರಧಾನಿ ಮೋದಿಗೆ ಬರೆದ ಪತ್ರದಲ್ಲಿ, ಖರ್ಗೆ ಅವರು, ಸಾಂವಿಧಾನಿಕ ತಿದ್ದುಪಡಿಯ ಮೂಲಕ ಮೀಸಲಾತಿಯ ಮೇಲಿನ ಶೇ. 50 ರ ಮಿತಿಯನ್ನು ತೆಗೆದುಹಾಕಬೇಕು ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಎಸ್‌ಸಿ,

ಜಾತಿ ಜನಗಣತಿ ಕುರಿತು ಪ್ರಧಾನಿಗೆ ಪತ್ರ ಬರೆದ ಮಲ್ಲಿಕಾರ್ಜುನ ಖರ್ಗೆ Read More »

ಕರ್ನಾಟಕ

ಕರ್ನಾಟಕದ ಮೂರು ಜಿಲ್ಲೆಗಳಲ್ಲಿ ನಾಳೆ ಮಾಕ್ ಡ್ರಿಲ್

(ನ್ಯೂಸ್ ಕಡಬ) newskadaba.com, ಮೇ.06: ಪಹಲ್ಗಾಮ್​ನಲ್ಲಿ ನಡೆದ ಉಗ್ರ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳಲು ಭಾರತ ಭರ್ಜರಿ ತಾಲೀಮು ನಡೆಸಿದೆ. ಹೀಗಾಗಿ ಕೇಂದ್ರ ಸರ್ಕಾರ ದೇಶಾದ್ಯಂತ ಮಾಕ್​ ಡ್ರಿಲ್ ಮಾಡಲು ಆದೇಶಿಸಿದೆ. ಈಗಾಗಲೇ ಬೇರೆ ರಾಜ್ಯಗಳಲ್ಲಿ ಮಾಕ್​ ಡ್ರಿಲ್​​ ಮಾಡಲಾಗುತ್ತಿದೆ.ಇತ್ತ ಕರ್ನಾಟಕದಲ್ಲಿ ಕೂಡ ಮಾಕ್​ ಡ್ರಿಲ್​​ ಮಾಡಲು ನಿರ್ಧರಿಸಲಾಗಿದೆ. ಬೆಂಗಳೂರು, ಕಾರವಾರ ಮತ್ತು ರಾಯಚೂರಿನಲ್ಲಿ ನಾಳೆ ಮಾಕ್​ ಡ್ರಿಲ್​ಗೆ ನಿರ್ಧರಿಸಲಾಗಿದೆ. ಈ ಬಗ್ಗೆ ಕೇಂದ್ರ ಸರ್ಕಾರದಿಂದ ಸುತ್ತೋಲೆ ಬರುತ್ತದೆ ಎಂದು ಅಗ್ನಿಶಾಮಕ ದಳದ ಡಿಜಿಪಿ ಪ್ರಶಾಂತ್ ಕುಮಾರ್ ಠಾಕೂರ್ ಹೇಳಿದ್ದಾರೆ. ಅಗ್ನಿಶಾಮಕ

ಕರ್ನಾಟಕದ ಮೂರು ಜಿಲ್ಲೆಗಳಲ್ಲಿ ನಾಳೆ ಮಾಕ್ ಡ್ರಿಲ್ Read More »

ಕರ್ನಾಟಕ

ರಾಜ್ಯದಲ್ಲಿ ವಾಣಿಜ್ಯ ತೆರಿಗೆ ಸಂಗ್ರಹ 1317.61 ಕೋಟಿ ರೂ.ನಷ್ಟು ಇಳಿಕೆ

(ನ್ಯೂಸ್ ಕಡಬ) newskadaba.com, ಮೇ.06: ರಾಜ್ಯದಲ್ಲಿ ಪ್ರಸಕ್ತ ಆರ್ಥಿಕ ಸಾಲಿನ ಮೊದಲ ತಿಂಗಳಾದ ಏಪ್ರಿಲ್ ನಲ್ಲಿ 8560.86 ಕೋಟಿ ರೂ. ಮಾತ್ರ ವಾಣಿಜ್ಯ ತೆರಿಗೆಗಳ ಸಂಗ್ರಹವಾಗಿದೆ. ಇದು ಕಳೆದ ವರ್ಷದ ಏಪ್ರಿಲ್ ತಿಂಗಳಿಗೆ ಹೋಲಿಸಿದರೆ ಒಂದು ಸಾವಿರ ಕೋಟಿ ರೂ.ಗಿಂತ ಹೆಚ್ಚು ಇಳಿಕೆಯಾಗಿರುವುದು ಕಂಡುಬಂದಿದೆ. ವಾಣಿಜ್ಯ ತೆರಿಗೆಗಳ ಇಲಾಖೆ ಮಾಹಿತಿ ಪ್ರಕಾರ ಕಳೆದ 2024ರ ಏಪ್ರಿಲ್‌ನಲ್ಲಿ ಸರಕು ಮತ್ತು ಸೇವಾ ತೆರಿಗೆ 7677.87 ಕೋಟಿ ರೂ., ಕರ್ನಾಟಕ ಮಾರಾಟ ತೆರಿಗೆ 1811.32 ಕೋಟಿ ರೂ. ಹಾಗೂ ವೃತ್ತಿ

ರಾಜ್ಯದಲ್ಲಿ ವಾಣಿಜ್ಯ ತೆರಿಗೆ ಸಂಗ್ರಹ 1317.61 ಕೋಟಿ ರೂ.ನಷ್ಟು ಇಳಿಕೆ Read More »

ಕರ್ನಾಟಕ

‘ಭಾರತ ಯಾವುದೇ ಸಮಯದಲ್ಲಿ ಬೇಕಾದರೂ ದಾಳಿ ನಡೆಸಬಹುದು’- ಪಾಕ್ ರಕ್ಷಣಾ ಸಚಿವ

(ನ್ಯೂಸ್ ಕಡಬ) newskadaba.com, ಮೇ.06: ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಬಳಿ ಭಾರತ ಯಾವುದೇ ಸಮಯದಲ್ಲಿ ಬೇಕಾದರೂ ದಾಳಿ ನಡೆಸಬಹುದು ಎಂದು ಪಾಕಿಸ್ತಾನ ರಕ್ಷಣಾ ಸಚಿವ ಖ್ವಾಜಾ ಆಸಿಫ್ ತಿಳಿಸಿದ್ದಾರೆ. ಪಹಲ್ಗಾಮ್ ಉಗ್ರರ ದಾಳಿಯ ನಂತರ ಭಾರತ ಹಾಗೂ ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಮತ್ತಷ್ಟು ಹೆಚ್ಚಾಗಿದೆ. ಈ ನಡುವೆ ಎಲ್‌ಒಸಿಯಲ್ಲಿ ಭಾರತ ಯಾವುದೇ ಸ್ಥಳದ ಮೇಲೆ ದಾಳಿ ಮಾಡಬಹುದು ಎಂಬ ವರದಿಗಳಿವೆ. ಸೂಕ್ತ ಪ್ರತ್ಯುತ್ತರ ನೀಡಲಾಗುವುದು, ಪ್ರಧಾನಿ ನರೇಂದ್ರ ಮೋದಿಯನ್ನು ಟೀಕಿಸಿದ ಅವರು, ರಾಜಕೀಯ ಲಾಭಕ್ಕಾಗಿ ಈ

‘ಭಾರತ ಯಾವುದೇ ಸಮಯದಲ್ಲಿ ಬೇಕಾದರೂ ದಾಳಿ ನಡೆಸಬಹುದು’- ಪಾಕ್ ರಕ್ಷಣಾ ಸಚಿವ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

‘ಟೈಗರ್ಸ್ ಔಟ್‌ಸೈಡ್ ಟೈಗರ್ ರಿಸರ್ವ್ಸ್’ ಯೋಜನೆ ಜಾರಿಗೆ ಕೇಂದ್ರ ಸಜ್ಜು

(ನ್ಯೂಸ್ ಕಡಬ) newskadaba.com, ಮೇ.06: ಕಳೆದ ವರ್ಷ ಡಿಸೆಂಬರ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ ‘ಟೈಗರ್ಸ್ ಔಟ್‌ಸೈಡ್ ಟೈಗರ್ ರಿಸರ್ವ್ಸ್’ ಎಂಬ ಯೋಜನೆಯನ್ನು ಜಾರಿಗೆ ತರಲು ಕೇಂದ್ರವು ಸಜ್ಜಾಗಿದೆ. ಹುಲಿಗಳ ಬೇಟೆಯನ್ನು ತಡೆಯುವ ಮತ್ತು ಹುಲಿ ಮೀಸಲು ಪ್ರದೇಶದ ಹೊರಗಿನ ಪ್ರದೇಶಗಳಲ್ಲಿ ಹುಲಿಗಳ ಸಂರಕ್ಷಣೆ ಕುರಿತು ಯೋಜನೆಯನ್ನು ರೂಪಿಸಲು ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ (ಎನ್‌ಟಿಸಿಎ) ಇತ್ತೀಚೆಗೆ ಹಿರಿಯ ಅರಣ್ಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದೆ ಎಂದು ತಿಳಿದುಬಂದಿದೆ. ಮಾನವ-ಪ್ರಾಣಿ ಸಂಘರ್ಷದ ನಿದರ್ಶನಗಳನ್ನು ಕಡಿಮೆ ಮಾಡುವುದು ಸರ್ಕಾರದ ಗುರಿಯಾಗಿದೆ.

‘ಟೈಗರ್ಸ್ ಔಟ್‌ಸೈಡ್ ಟೈಗರ್ ರಿಸರ್ವ್ಸ್’ ಯೋಜನೆ ಜಾರಿಗೆ ಕೇಂದ್ರ ಸಜ್ಜು Read More »

ಬ್ರೇಕಿಂಗ್ ನ್ಯೂಸ್

ಹುಬ್ಬಳ್ಳಿ ಭೀಕರ ಅಪಘಾತ : ಕಾರಿಗೆ ಲಾರಿ ಡಿಕ್ಕಿಯಾಗಿ 5 ಮಂದಿ ಸ್ಥಳದಲ್ಲೇ ಸಾವು

(ನ್ಯೂಸ್ ಕಡಬ) newskadaba.com, ಮೇ.06: ಅತೀ ವೇಗ ಹಾಗೂ ಅಜಾಗರೂಕತೆಯಿಂದ ಮುನ್ನುಗ್ಗಿದ ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಐದು ಮಂದಿ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿರುವ ಘಟನೆ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಮೃತರನ್ನು ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಶ್ವೇತಾ (29) ಅಂಜಲಿ (26) ಸಂದೀಪ್ (26), ವಿಠಲ್ (55) ಹಾಗೂ ಶಶಿಕಲಾ (40) ಎಂದು ಗುರುತಿಸಲಾಗಿದೆ. ಇಂದು ಬೆಳಗ್ಗೆ 8.30 ರ ಸುಮಾರಿನಲ್ಲಿ ಹೋಟೆಲ್ ವ್ಯಾಪಾರಕ್ಕೆಂದು ಬಾಗಲಕೋಟೆಗೆ ಕಾರಿನಲ್ಲಿ

ಹುಬ್ಬಳ್ಳಿ ಭೀಕರ ಅಪಘಾತ : ಕಾರಿಗೆ ಲಾರಿ ಡಿಕ್ಕಿಯಾಗಿ 5 ಮಂದಿ ಸ್ಥಳದಲ್ಲೇ ಸಾವು Read More »

ಕರ್ನಾಟಕ

ರಾಜ್ಯದ ಹಲವೆಡೆ ಇಂದು ಗುಡುಗು ಸಹಿತ ಮಳೆ ಸಾಧ್ಯತೆ

(ನ್ಯೂಸ್ ಕಡಬ) newskadaba.com, ಮೇ.06: ರಾಜ್ಯದಲ್ಲಿ ಹಲವೆಡೆ ಮುಂದಿನ ಎರಡು ದಿನ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಸಿಕ್ಕಿದೆ. ಮೇ 6ರಂದು ದಕ್ಷಿಣ ಕನ್ನಡ, ಉಡುಪಿ, ಬಳ್ಳಾರಿ, ವಿಜಯನಗರ, ದಾವಣಗೆರೆ, ಶಿವಮೊಗ್ಗ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ತುಮಕೂರು, ಹಾಸನ, ಕೊಡಗು, ಮೈಸೂರು, ಮಂಡ್ಯ ಜಿಲ್ಲೆಗಳಲ್ಲಿ ಹಗುರದಿಂದ ಮಧ್ಯಮ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮರಾಠವಾಡದಿಂದ ದಕ್ಷಿಣ ತಮಿಳುನಾಡಿವರೆಗೆ

ರಾಜ್ಯದ ಹಲವೆಡೆ ಇಂದು ಗುಡುಗು ಸಹಿತ ಮಳೆ ಸಾಧ್ಯತೆ Read More »

ಕರ್ನಾಟಕ

ಬುಡ್ಗಾಮ್ನ ಚೆಕ್ಪಾಯಿಂಟ್ನಲ್ಲಿ ಇಬ್ಬರು ಭಯೋತ್ಪಾದಕ ಸಹಚರರ ಬಂಧನ

(ನ್ಯೂಸ್ ಕಡಬ) newskadaba.com, ಮೇ.06: 26 ಜನರ ಪ್ರಾಣವನ್ನು ಬಲಿ ಪಡೆದ ಪಹಲ್ಗಾಮ್ ದಾಳಿಯ ಕೆಲವು ದಿನಗಳ ನಂತರ, ಬುಡ್ಗಾಮ್ ಜಿಲ್ಲೆಯಲ್ಲಿ ಇಬ್ಬರು ಭಯೋತ್ಪಾದಕ ಸಹಚರರನ್ನು ಬಂಧಿಸಿದ್ದು, ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಹಾಗೂ ಗ್ರೆನೇಡ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಶ್ರೀನಗರದ ಹೊರವಲಯದಲ್ಲಿರುವ ಬುಚ್‌ಪೋರಾ ಪಟ್ಟಣದಲ್ಲಿ ನಾಕಾ ತಪಾಸಣೆ ಕಾರ್ಯಾಚರಣೆಯ ಸಂದರ್ಭದಲ್ಲಿ ಭಯೋತ್ಪಾದಕ ಸಹಚರರನ್ನು ಬಂಧಿಸಲಾಗಿದೆ. ಪೂಂಚ್‌ನಲ್ಲಿ ಭಯೋತ್ಪಾದಕ ಅಡಗುತಾಣವನ್ನು ಪತ್ತೆಹಚ್ಚಲಾಗಿದೆ. ಪೂಂಚ್ ಜಿಲ್ಲೆಯ ಸುರನ್‌ಕೋಟ್ ಸೆಕ್ಟರ್‌ನ ಹರಿ ಮರೋಟೆ ಗ್ರಾಮದಲ್ಲಿ ನಿನ್ನೆ ತಡರಾತ್ರಿ ಭಾರತೀಯ ಸೇನೆ, ಜಮ್ಮು ಮತ್ತು ಕಾಶ್ಮೀರ ಪೊಲೀಸರು

ಬುಡ್ಗಾಮ್ನ ಚೆಕ್ಪಾಯಿಂಟ್ನಲ್ಲಿ ಇಬ್ಬರು ಭಯೋತ್ಪಾದಕ ಸಹಚರರ ಬಂಧನ Read More »

ಬ್ರೇಕಿಂಗ್ ನ್ಯೂಸ್
Scroll to Top