News Kadaba

Death, deadbody, Waterfall

ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 6 ಮಂದಿ ಸಾವು

(ನ್ಯೂಸ್ ಕಡಬ) newskadaba.com ಮೇ.01 : ಬುಧವಾರ ಸಂಜೆ ಖೇಡಾ ಜಿಲ್ಲೆಯ ಮೆಶ್ವೋ ನದಿಯಲ್ಲಿ ಒಂದೇ ಕುಟುಂಬದ ಆರು ಮಂದಿ ಯುವಕರು ಮುಳುಗಿ ಸಾವನ್ನಪ್ಪಿದ ದುರಂತ ಘಟನೆ ನಡೆದಿದೆ. ಘಟನೆಯ ಬಗ್ಗೆ ಮಾಹಿತಿ ಪಡೆದ ನಂತರ, ಮೆಹಮದಾಬಾದ್ ಪೊಲೀಸರು ಮತ್ತು ಅಗ್ನಿಶಾಮಕ ದಳದ ತಂಡವು ಸ್ಥಳಕ್ಕೆ ತಲುಪಿ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿತು. ಕಾರ್ಯಾಚರಣೆಯಲ್ಲಿ ಕನಿಜ್ ಗ್ರಾಮದ ಬಳಿ ಸ್ಥಳಕ್ಕೆ ತಲುಪಿ, ಆರು ಶವಗಳನ್ನು ನದಿಯಿಂದ ಹೊರತೆಗೆದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇಬ್ಬರು ಕನಿಜ್ ಗ್ರಾಮದ […]

ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 6 ಮಂದಿ ಸಾವು Read More »

ಬ್ರೇಕಿಂಗ್ ನ್ಯೂಸ್

ಜನಗಣತಿ ಜೊತೆಗೇ ಜಾತಿಗಣತಿ : ಕೇಂದ್ರ ಸರ್ಕಾರ ಮಹತ್ವದ ಘೋಷಣೆ

(ನ್ಯೂಸ್ ಕಡಬ) newskadaba.com ಮೇ.01 ನವದೆಹಲಿ : ಮಹತ್ವದ ಬೆಳವಣಿಗೆಯಲ್ಲಿ ಕೇಂದ್ರ ಸರ್ಕಾರ ಜನಗಣತಿ ಜೊತೆಯಲ್ಲಿ ಜಾತಿ ಗಣತಿ ನಡೆಸಲು ನಿರ್ಧಾರ ಕೈಗೊಂಡಿದೆ. ನವದೆಹಲಿಯಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹಿರಿಯ ಸಚಿವ ಅಶ್ವಿನ್ ವೈಷ್ಣವ್ ಅವರು ಪಾರದರ್ಶಕವಾಗಿ ದೇಶದಲ್ಲಿ ಜನಗಣತಿಯನ್ನ ನಡೆಸಲಾಗುತ್ತದೆ ಜೊತೆಗೆ ಜಾತಿಗಣತಿಯನ್ನು ಕೂಡ ನಡೆಸಲಾಗುವುದು ಎಂದು ತಿಳಿಸಿದ್ದಾರೆ. ಈಗಾಗಲೇ ಪ್ರತಿಪಕ್ಷ ಕಾಂಗ್ರೆಸ್ ಜಾತಿ ಗಣತಿಗೆ ಒತ್ತಾಯಿಸಿ ಅಧಿಕಾರದಲ್ಲಿರುವ ಕೆಲವು ರಾಜ್ಯಗಳಲ್ಲಿ ಆಯೋಗವನ್ನು ಕೂಡ ರಚಿಸಿದೆ. ಸುಮಾರು 14 ವರ್ಷಗಳ ನಂತರ ಕೇಂದ್ರ ಸರ್ಕಾರ ಈ ಮಹತ್ವದ

ಜನಗಣತಿ ಜೊತೆಗೇ ಜಾತಿಗಣತಿ : ಕೇಂದ್ರ ಸರ್ಕಾರ ಮಹತ್ವದ ಘೋಷಣೆ Read More »

ರಾಷ್ಟ್ರೀಯ ನ್ಯೂಸ್

ಹೆಬ್ರಿ: ಕತ್ತಿಯಿಂದ ಕಡಿದು ಗಂಡನನ್ನು ಕೊಲೆ ಮಾಡಿದ ಹೆಂಡತಿ

(ನ್ಯೂಸ್ ಕಡಬ) newskadaba.com ಮೇ.01 ಉಡುಪಿ: ಮದ್ಯಪಾನ ಮಾಡಿಕೊಂಡು ಪತ್ನಿಯೊಂದಿಗೆ ಜಗಳವಾಡುತ್ತಿದ್ದ ಪತಿಯನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿದ ಘಟನೆ ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ಸಂಭವಿಸಿದೆ. ಮೃತ ವ್ಯಕ್ತಿಯನ್ನು ಹೆಬ್ರಿ ನಿವಾಸಿ ಗಣಪತಿ ಎಂದು ಗುರುತಿಸಲಾಗಿದೆ. ಆರೋಪಿ ಪತ್ನಿ ಜಯಂತಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೃತ ಗಣಪತಿಗೆ ಮದ್ಯಪಾನ ಮಾಡುವ ಅಭ್ಯಾಸವಿದ್ದು ಪ್ರತಿದಿನ ಕುಡಿದು ಬಂದು ಪತ್ನಿಯೊಂದಿಗೆ ಜಗಳವಾಡುತ್ತಿದ್ದು, ಬುಧವಾರ ಮಧ್ಯಾಹ್ನ ಕೂಡ ಗಣಪತಿ ಅತನ ಹೆಂಡತಿ ಜಯಂತಿಯೊಂದಿಗೆ ಕುಡಿಯಲು ಹಣ ಕೇಳಿದ ವಿಚಾರದಲ್ಲಿ ಗಲಾಟೆ ಮಾಡಿಕೊಂಡಿದ್ದು

ಹೆಬ್ರಿ: ಕತ್ತಿಯಿಂದ ಕಡಿದು ಗಂಡನನ್ನು ಕೊಲೆ ಮಾಡಿದ ಹೆಂಡತಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪಾಕಿಸ್ತಾನದ ವಿಮಾನಗಳಿಗೆ ಭಾರತದ ವಾಯುಪ್ರದೇಶ ಬಂದ್

(ನ್ಯೂಸ್ ಕಡಬ) newskadaba.com ಮೇ.01: ಹೊಸದಿಲ್ಲಿ: ಏ. 22ರಂದು ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ದಾಳಿ ನಡೆಸಿ 26 ಮಂದಿಯನ್ನು ಉಗ್ರರು ಹತ್ಯೆಗೈದ ಬಳಿಕ ಭಾರತ ಪಾಕಿಸ್ತಾನದ ವಿರುದ್ಧ ಹಲವು ಕಠಿಣ ಕ್ರಮ ಕೈಗೊಳ್ಳುತ್ತಿದೆ. ಅದರ ಭಾಗವಾಗಿ ಪಾಕಿಸ್ತಾನದಿಂದ ಬರುವ ಎಲ್ಲ ವಿಮಾನಗಳಿಗೆ ಭಾರತ ತನ್ನ ವಾಯುಪ್ರದೇಶವನ್ನು ಮುಚ್ಚಿದೆ. ಕಳೆದ ವಾರ ಎಲ್ಲ ಭಾರತೀಯ ವಿಮಾನಯಾನ ಸಂಸ್ಥೆಗಳಿಗೆ ಪಾಕಿಸ್ತಾನ ತನ್ನ ವಾಯುಪ್ರದೇಶವನ್ನು ನಿರ್ಬಂಧಿಸಿತ್ತು. ಇದೀಗ ಭಾರತವು ವಾಣಿಜ್ಯ ವಿಮಾನಯಾನ ಸಂಸ್ಥೆಗಳು ಮತ್ತು ಮಿಲಿಟರಿ ವಿಮಾನಗಳು ಸೇರಿದಂತೆ ಪಾಕಿಸ್ತಾನದಿಂದ ನೋಂದಾಯಿಸಲ್ಪಟ್ಟ,

ಪಾಕಿಸ್ತಾನದ ವಿಮಾನಗಳಿಗೆ ಭಾರತದ ವಾಯುಪ್ರದೇಶ ಬಂದ್ Read More »

ಬ್ರೇಕಿಂಗ್ ನ್ಯೂಸ್

ಮಂಗಳೂರು : ನೇತ್ರಾವತಿ ಒಡಲಿಗೆ ಕಲುಷಿತ ನೀರು – ಜಾಗೃತ ಹಿರಿಯ ನಾಗರಿಕರ ತಂಡದಿಂದ ಸಮೀಕ್ಷೆ

(ನ್ಯೂಸ್ ಕಡಬ) newskadaba.com ಎ. 30: ನೇತ್ರಾವತಿ ನದಿಗೆ ಕಲುಷಿತ ನೀರು ಸೇರುವ ವಿಚಾರಕ್ಕೆ ಸಂಬಂಧಿಸಿ ಮಾಧ್ಯಮಗಳಲ್ಲಿ ಈ ಕುರಿತು ಬಿತ್ತರವಾದ ವರದಿಗಳನ್ನು ಗಮನಿಸಿ, ಮಂಗಳೂರಿನ ಜಾಗೃತ ಹಿರಿಯ ನಾಗರಿಕರ ತಂಡವೊಂದು ಬಂಟ್ವಾಳದ ಪ್ರದೇಶಗಳಲ್ಲಿ ಸಮೀಕ್ಷೆ ನಡೆಸಿತು. ಪ್ರತ್ಯಕ್ಷ ಭೇಟಿ ಸಂದರ್ಭ ನದಿಯ ಒಡಳಿಗೆ ತ್ಯಾಜ್ಯ ಸೇರುವುದನ್ನು ಗಮನಿಸಿದ ತಂಡ, ಈ ಕುರಿತು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಮನವಿ ಸಲ್ಲಿಸಿ, ಕೂಡಲೇ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದೆ.

ಮಂಗಳೂರು : ನೇತ್ರಾವತಿ ಒಡಲಿಗೆ ಕಲುಷಿತ ನೀರು – ಜಾಗೃತ ಹಿರಿಯ ನಾಗರಿಕರ ತಂಡದಿಂದ ಸಮೀಕ್ಷೆ Read More »

ಕರಾವಳಿ

ರಾಷ್ಟ್ರೀಯ ಭದ್ರತಾ ಸಲಹಾ ಮಂಡಳಿ ಪುನಾರ್ ರಚನೆ; ಅಧ್ಯಕ್ಷರಾಗಿ ಅಲೋಕ್ ಜೋಶಿ ನೇಮಕ

(ನ್ಯೂಸ್ ಕಡಬ) newskadaba.com ಎ. 30: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಮತ್ತು ಪಾಕಿಸ್ತಾನದೊಂದಿಗಿನ ಉದ್ವಿಗ್ನತೆಯ ನಡುವೆ ರಾಷ್ಟ್ರೀಯ ಭದ್ರತಾ ಸಲಹಾ ಮಂಡಳಿಯನ್ನು ಪುನರ್ರಚಿಸಲಾಗಿದೇ. ರಾಷ್ಟ್ರೀಯ ಭದ್ರತಾ ಸಲಹಾ ಮಂಡಳಿಯ ನೂತನ ಮುಖ್ಯಸ್ಥರಾಗಿ ಮಾಜಿ ರಾ ಮತ್ತು ಎಡಬ್ಲ್ಯೂ ಮುಖ್ಯಸ್ಥ ಅಲೋಕ್ ಜೋಶಿ ಅವರನ್ನು ನೇಮಕ ಮಾಡಲಾಗಿದೆ. ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಪಾಕಿಸ್ತಾನದೊಂದಿಗೆ ನಡೆಯುತ್ತಿರುವ ಉದ್ವಿಗ್ನತೆಯ ನಡುವೆ ಮೋದಿ ಸರ್ಕಾರ ರಾಷ್ಟ್ರೀಯ ಭದ್ರತಾ ಸಲಹಾ ಮಂಡಳಿಯನ್ನು (ಎನ್‌ಎಸ್‌ಎಬಿ) ಪುನರ್ ರಚನೆ ಮಾಡಿದೆ.

ರಾಷ್ಟ್ರೀಯ ಭದ್ರತಾ ಸಲಹಾ ಮಂಡಳಿ ಪುನಾರ್ ರಚನೆ; ಅಧ್ಯಕ್ಷರಾಗಿ ಅಲೋಕ್ ಜೋಶಿ ನೇಮಕ Read More »

ರಾಷ್ಟ್ರೀಯ ನ್ಯೂಸ್

ನನಗೆ ನ್ಯಾಯ ಸಿಕ್ಕಿದೆ: ನನ್ನ ಹೋರಾಟ ಇನ್ನೂ ಜೀವಂತ; ಜಾಮೀನಿನ ಮೇಲೆ ಲಾಯರ್ ಜಗದೀಶ್ ಬಿಡುಗಡೆ

(ನ್ಯೂಸ್ ಕಡಬ) newskadaba.com ಎ. 30: ಬೆಂಗಳೂರು: ಬಿಗ್‌ ಬಾಸ್‌ ಕನ್ನಡ ಸೀಸನ್‌ 11ರ ಮಾಜಿ ಸ್ಪರ್ಧಿ ಲಾಯರ್‌ ಜಗದೀಶ್‌ ಅವರು ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಸುಮಾರು 93 ದಿನಗಳ ಬಳಿಕ ಜಗದೀಶ್‌ ಜೈಲಿನಿಂದ ರಿಲೀಸ್‌ ಆಗಿದ್ದಾರೆ. ಕೊಡಿಗೆಹಳ್ಳಿ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಲಾಯರ್ ಜಗದೀಶ್ ಹಾಗೂ ಗನ್ ಮ್ಯಾನ್‌ನನ್ನು ಜನವರಿ 25ರಂದು ಪೊಲೀಸರು ಬಂಧಿಸಿದ್ದರು. ರಸ್ತೆಯಲ್ಲಿ ಅಣ್ಣಮ್ಮ ದೇವಿ ಕೂರಿಸಲು ವಿರೋಧಿಸಿದ್ದಕ್ಕೆ ಜಗದೀಶ್ ಮತ್ತು ಸ್ಥಳೀಯರ ನಡುವೆ ಜಗಳವಾಗಿತ್ತು. ಹೀಗಾಗಿ ಬಂಧನವಾಗಿದ್ದ ಲಾಯರ್‌ ಜಗದೀಶ್‌ ಇದೀಗ ಜೈಲಿನಿಂದ ರಿಲೀಸ್‌

ನನಗೆ ನ್ಯಾಯ ಸಿಕ್ಕಿದೆ: ನನ್ನ ಹೋರಾಟ ಇನ್ನೂ ಜೀವಂತ; ಜಾಮೀನಿನ ಮೇಲೆ ಲಾಯರ್ ಜಗದೀಶ್ ಬಿಡುಗಡೆ Read More »

ಕರ್ನಾಟಕ

ಪಹಲ್ಗಾಮ್‌ ದಾಳಿ : ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಸಂಪುಟ ಸಮಿತಿಗಳ ಸಭೆ

(ನ್ಯೂಸ್ ಕಡಬ) newskadaba.com ಎ. 30: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಜನರು ಸಾವನ್ನಪ್ಪಿದ ಒಂದು ವಾರದ ನಂತರ ಪ್ರಧಾನಿ ನರೇಂದ್ರ ಮೋದಿ ಬುಧವಾರ ಕೇಂದ್ರ ಸಂಪುಟದ ಸಚಿವರೊಂದಿಗೆ ಪ್ರಮುಖ ಸಭೆಗಳನ್ನು ನಡೆಸಿದರು. ಬುಧವಾರ ಪ್ರಧಾನಿ ಮೋದಿ ಆರಂಭದಲ್ಲಿ ಭದ್ರತೆ ಕುರಿತ ಸಂಪುಟ ಸಮಿತಿಯ ಸಭೆಯ ಅಧ್ಯಕ್ಷತೆ ವಹಿಸಿದ್ದರು, ನಂತರ ರಾಜಕೀಯ ವ್ಯವಹಾರಗಳ ಕುರಿತ ಸಂಪುಟ ಸಮಿತಿಯ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ

ಪಹಲ್ಗಾಮ್‌ ದಾಳಿ : ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಸಂಪುಟ ಸಮಿತಿಗಳ ಸಭೆ Read More »

ಅಂತರ್ರಾಷ್ಟ್ರೀಯ ನ್ಯೂಸ್

ಭಾರತದಿಂದ ಪಾಕ್‌ಗೆ ಔಷಧ ಬಂದ್; ಕೆಲಸ ಬಿಡಲು ಮುಂದಾಗ್ತಿರೋ ವೈದ್ಯರು

(ನ್ಯೂಸ್ ಕಡಬ) newskadaba.com ಎ. 30: ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿಯ ನಂತರ ಭಾರತ, ಪಾಕಿಸ್ತಾನದೊಂದಿಗಿನ ವ್ಯಾಪಾರ ವಹಿವಾಟನ್ನು ಸ್ಥಗಿತಗೊಳಿಸಿದೆ. ಈ ಹಿನ್ನೆಲೆ ಪಾಕಿಸ್ತಾನ ಅಗತ್ಯ ಔಷಧಗಳ ಕೊರತೆ ಎದುರಿಸುತ್ತಿದ್ದು, ಪಾಕ್ ವೈದ್ಯರೇ ಕೆಲಸ ಬಿಡುವ ಯೋಚನೆ ಮಾಡುತ್ತಿದ್ದಾರೆ ಎನ್ನಲಾಗಿದೆ. ಪಾಕಿಸ್ತಾನವು ಭಾರತದ ಜೆನೆರಿಕ್ ಮೆಡಿಸಿನ್ ಮೇಲೆ ಅವಲಂಬಿತವಾಗಿತ್ತು. ಭಾರತವು ಪಾಕಿಸ್ತಾನದೊಂದಿಗೆ ವ್ಯಾಪಾರ ವಹಿವಾಟನ್ನು ಸ್ಥಗಿತಗೊಳಿಸಿದ ಬಳಿಕ ಅನೇಕ ಮಾತ್ರೆಗಳ ತಯಾರಿಸಲು ಕಚ್ಚಾವಸ್ತುಗಳ ಕೊರತೆ ಎದುರಾಗಿದೆ. ಅಲ್ಲಿನ ಜನ ಹಾವು ಕಡಿತಕ್ಕೆ, ಕ್ಯಾನ್ಸರ್‌ಗೆ ಔಷಧವಿಲ್ಲದೇ ಪರದಾಡುತ್ತಿದ್ದಾರೆ.

ಭಾರತದಿಂದ ಪಾಕ್‌ಗೆ ಔಷಧ ಬಂದ್; ಕೆಲಸ ಬಿಡಲು ಮುಂದಾಗ್ತಿರೋ ವೈದ್ಯರು Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕೋಲ್ಕತ್ತಾ ಹೋಟೆಲ್‌ವೊಂದರಲ್ಲಿ ಭೀಕರ ಬೆಂಕಿ ಅವಘಡ, 15 ಮಂದಿ ಸಾವು

(ನ್ಯೂಸ್ ಕಡಬ) newskadaba.com ಎ. 30: ಕೋಲ್ಕತ್ತಾ: ಮೆಚುಪಟ್ಟಿ ಪ್ರದೇಶದ ಹೋಟೆಲ್‌ವೊಂದರಲ್ಲಿ ಭೀಕರ ಬೆಂಕಿ ಕಾಣಿಸಿಕೊಂಡಿದ್ದು,ಮಹಿಳೆ ಮತ್ತು ಇಬ್ಬರು ಮಕ್ಕಳು ಸೇರಿದಂತೆ 15 ಜನರು ಸಾವನ್ನಪ್ಪಿದ್ದಾರೆ ಮಧ್ಯ ಕೋಲ್ಕತ್ತಾದಲ್ಲಿರುವ 6 ಮಹಡಿಯ ಹೋಟಲ್‌ನ 42 ಕೊಠಡಿಗಳಲ್ಲಿ 88 ಅತಿಥಿಗಳಿದ್ದರು,ಕಳೆದ ರಾತ್ರಿ ಈ ಬೆಂಕಿ ಅವಘಡ ಸಂಭವಿಸಿದೆ. ಸುಮಾರು 13 ಮಂದಿ ಗಾಯಗೊಂಡಿದ್ದಾರೆ ಅಧರಲ್ಲಿ ಹಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಹಿರಿಯ ಪೊಲೀಸ್‌‍ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕಡಿಮೆ ವೆಚ್ಚದ ರಿತುರಾಜ್‌ ಹೋಟೆಲ್‌ನಲ್ಲಿ ರಾತ್ರಿ7:30 ರ ಸುಮಾನಲ್ಲಿ ಹೊಗೆ ಕಾಣಿಸಿಕೊಂಡಿದ್ದು

ಕೋಲ್ಕತ್ತಾ ಹೋಟೆಲ್‌ವೊಂದರಲ್ಲಿ ಭೀಕರ ಬೆಂಕಿ ಅವಘಡ, 15 ಮಂದಿ ಸಾವು Read More »

ಬ್ರೇಕಿಂಗ್ ನ್ಯೂಸ್
Scroll to Top