News Kadaba

ಜಮ್ಮು ಮತ್ತು ಕಾಶ್ಮೀರದ 48 ಪ್ರಮುಖ ಪ್ರವಾಸಿ ತಾಣಗಳು ತಾತ್ಕಾಲಿಕ ಬಂದ್

(ನ್ಯೂಸ್ ಕಡಬ) newskadaba.com ಎ. 29:  ಜಮ್ಮು ಮತ್ತು ಕಾಶ್ಮೀರ ಸರ್ಕಾರವು ಕೇಂದ್ರಾಡಳಿತ ಪ್ರದೇಶದ 87 ಪ್ರವಾಸಿ ತಾಣಗಳ ಪೈಕಿ 48 ಪ್ರವಾಸಿ ತಾಣಗಳನ್ನು ತಾತ್ಕಾಲಿಕವಾಗಿ ಮುಚ್ಚಲು ಆದೇಶ ಹೊರಡಿಸಿದೆ ಎಂದು ವರದಿಯಾಗಿದೆ. ಇತ್ತೀಚೆಗೆ ನಡೆದ ಪಹಲ್ಗಾಮ್ ಉಗ್ರರ ದಾಳಿಯ ಬಳಿಕ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ ತೀವ್ರಗೊಂಡ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಯೂಸ್ಮಾರ್ಗ್, ತೌಸಿಮೈದನ್, ದೂದ್ಪತ್ರಿ, ಬಂಗುಸ್, ಕರಿವಾನ್ ಡೈವರ್ ಚಂಡಿಗಮ್, ಅಹರ್ಬಲ್, ಕೌಸರ್ನಾಗ್, ವುಲರ್/ವಾಟ್ಲಾಬ್, ರಾಮ್ಪೋರಾ ಬಂಗುಸ್ ವ್ಯಾಲಿ, ರಾಜ್ಪೋರಾ ಮತ್ತು ಚೀರ್‌ಹಾರ್ ಮುಚ್ಚಲು […]

ಜಮ್ಮು ಮತ್ತು ಕಾಶ್ಮೀರದ 48 ಪ್ರಮುಖ ಪ್ರವಾಸಿ ತಾಣಗಳು ತಾತ್ಕಾಲಿಕ ಬಂದ್ Read More »

ಬ್ರೇಕಿಂಗ್ ನ್ಯೂಸ್

‘ಪಾಕಿಸ್ತಾನಕ್ಕೆ ನಾವು ಶಸ್ತ್ರಾಸ್ತ್ರಗಳನ್ನು ಕಳುಹಿಸಿಲ್ಲ’- ಸ್ಪಷ್ಟನೆ ನೀಡಿದ ಟರ್ಕಿ

(ನ್ಯೂಸ್ ಕಡಬ) newskadaba.com ಎ. 29:  ನಾವು ಪಾಕಿಸ್ತಾನಕ್ಕೆ ಯಾವುದೇ ಶಸ್ತ್ರಾಸ್ತ್ರಗಳನ್ನು ಕಳುಹಿಸಿಲ್ಲ ಎಂದು ಟರ್ಕಿ ರಕ್ಷಣಾ ಸಚಿವಾಲಯ ಸ್ಪಷ್ಟನೆ ನೀಡಿದೆ. ಪಾಕಿಸ್ತಾನಕ್ಕೆ ಆರು ಶಸ್ತ್ರಾಸ್ತ್ರ ವಿಮಾನಗಳನ್ನು ಟರ್ಕಿ ಕಳುಹಿಸಿದೆ ಹಲವಾರು ಸುದ್ದಿವಾಹಿನಿಗಳು ವರದಿ ಮಾಡಿದ್ದವು. ಆದರೆ ಇದಕ್ಕೆ ಸೋಮವಾರ ಅಧ್ಯಕ್ಷೀಯ ಸಂವಹನ ನಿರ್ದೇಶನಾಲಯ ಸ್ಪಷ್ಟನೆ ನೀಡಿದ್ದು, ಟರ್ಕಿಯಿಂದ ಬಂದ ಸರಕು ವಿಮಾನವು ಇಂಧನ ತುಂಬಿಸಲು ಪಾಕಿಸ್ತಾನದಲ್ಲಿ ಇಳಿಯಿತು. ನಂತರ ಅದು ತನ್ನ ಮಾರ್ಗದಲ್ಲಿ ಮುಂದುವರಿಯಿತು. ಅಧಿಕೃತ ಸಂಸ್ಥೆಗಳು ಬಿಟ್ಟು ಬೇರೆ ಯಾರಿಂದಲಾದರೂ ಊಹಾತ್ಮಕ ಹೇಳಿಕೆಗಳು, ಸುದ್ದಿಗಳು

‘ಪಾಕಿಸ್ತಾನಕ್ಕೆ ನಾವು ಶಸ್ತ್ರಾಸ್ತ್ರಗಳನ್ನು ಕಳುಹಿಸಿಲ್ಲ’- ಸ್ಪಷ್ಟನೆ ನೀಡಿದ ಟರ್ಕಿ Read More »

ಬ್ರೇಕಿಂಗ್ ನ್ಯೂಸ್

ಮಹಮ್ಮದ್ ಪೈಗಂಬರ್ ವಿರುದ್ಧ ಹೇಳಿಕೆ: ಯತ್ನಾಳ್ ವಿರುದ್ಧ ಕ್ರಮಕ್ಕೆ ಆಗ್ರಹ, ಕಾಂಗ್ರೆಸ್ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಎ. 29 ವಿಜಯಪುರ: ಪ್ರವಾದಿ ಮಹಮ್ಮದ್ ಪೈಗಂಬರ್ ಅವಕ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕಾಂಗ್ರೆಸ್ ಸೋಮವಾರ ವಿಜಯಪುರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದು, ಸಾರ್ವಜನಿಕ ಕ್ಷಮೆಯಾಚಿಸುವಂತೆ ಆಗ್ರಹಿಸಿದೆ. ನಗರದ ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಜಮಾಯಿಸಿದ ಸಾವಿರಾರು ಪ್ರತಿಭಟನಾಕಾರರು, ಯತ್ನಾಳ್ ವಿರುದ್ಧ ಘೋಷಣೆಗಳನ್ನು ಕೂಗಿದರು. ಪ್ರತಿಭಟನೆಯಲ್ಲಿ ಸಚಿವ ಶಿವಾನಂದ ಪಾಟೀಲ್, ಶಾಸಕರಾದ ಯಶ್ವಂತ್‌ರಾಯಗೌಡ ಪಾಟೀಲ್, ಅಶೋಕ್ ಮನಗೂಳಿ, ವಿಠಲ ಕಟಕದೊಂಡ ಮತ್ತು ಪ್ರಮುಖ ಮುಸ್ಲಿಂ ನಾಯಕರು

ಮಹಮ್ಮದ್ ಪೈಗಂಬರ್ ವಿರುದ್ಧ ಹೇಳಿಕೆ: ಯತ್ನಾಳ್ ವಿರುದ್ಧ ಕ್ರಮಕ್ಕೆ ಆಗ್ರಹ, ಕಾಂಗ್ರೆಸ್ ಪ್ರತಿಭಟನೆ Read More »

ಕರ್ನಾಟಕ

ಪಾಕಿಸ್ತಾನದಲ್ಲಿ ಬಾಂಬ್ ಸ್ಫೋಟ: ಏಳು ಮಂದಿ ಸಾವು, ಒಂಬತ್ತು ಜನರಿಗೆ ಗಾಯ

(ನ್ಯೂಸ್ ಕಡಬ) newskadaba.com ಎ. 29 ಪೇಶಾವರ: ಪಾಕಿಸ್ತಾನದ ಪ್ರಕ್ಷುಬ್ಧ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಸೋಮವಾರ ನಡೆದ ಪ್ರಬಲ ಬಾಂಬ್ ಸ್ಫೋಟದಲ್ಲಿ ಕನಿಷ್ಠ ಏಳು ಜನ ಸಾವನ್ನಪ್ಪಿದ್ದಾರೆ ಮತ್ತು ಒಂಬತ್ತು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ದಕ್ಷಿಣ ವಜೀರಿಸ್ತಾನ್ ಜಿಲ್ಲೆಯ ಪ್ರಧಾನ ಕಚೇರಿಯಾದ ವಾನಾದಲ್ಲಿರುವ ಸ್ಥಳೀಯ ಶಾಂತಿ ಸಮಿತಿ ಕಚೇರಿಯಲ್ಲಿ ಬಾಂಬ್ ಸ್ಫೋಟ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಸ್ಫೋಟದ ನಂತರ 16 ಗಾಯಾಳುಗಳನ್ನು ಆಸ್ಪತ್ರೆಗೆ ತರಲಾಯಿತು. ಅವರಲ್ಲಿ ಏಳು ಮಂದಿ ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆಯ ಆಡಳಿತ

ಪಾಕಿಸ್ತಾನದಲ್ಲಿ ಬಾಂಬ್ ಸ್ಫೋಟ: ಏಳು ಮಂದಿ ಸಾವು, ಒಂಬತ್ತು ಜನರಿಗೆ ಗಾಯ Read More »

ಬ್ರೇಕಿಂಗ್ ನ್ಯೂಸ್

ಚಿಕ್ಕಬಳ್ಳಾಪುರ: ರೈತರ ಮೇಲೆ ಗುಂಡಿನ ದಾಳಿ

(ನ್ಯೂಸ್ ಕಡಬ) newskadaba.com ಎ. 29 ಚಿಕ್ಕಬಳ್ಳಾಪುರ : ಪಂಚಗಿರಿಗಳ ನಾಡು ಎಂಬ ಖ್ಯಾತಿಯ ಚಿಕ್ಕಬಳ್ಳಾಪುರದಂತೆ ಜಿಲ್ಲೆಯಲ್ಲಿ ಹಬ್ಬಿನಿಂತ ಮಲೆಯ ಸಾಲುಗಳಲ್ಲಿ ಡೈನಮೈಟ್‌ಗಳ ಭೋರ್ಗೆರೆತ,ಜಲ್ಲಿ ಕಲ್ಲುಗಳ ಸಾಗಾಟದ ನಡುವೆ ರೈತಾಪಿ ವರ್ಗದ ಎದೆಗೆ ಗುಂಡು ಹಾರಿಸಲಾಗಿದೆ. ಜಿಲ್ಲೆಯಲ್ಲಿ ಗಣಿಗಾರಿಕೆ ಮತ್ತು ಕಲ್ಲು ಕ್ವಾರಿಗಳ ಹೆಸರಿನಲ್ಲಿ ನಡೆಯುತ್ತಿರುವ ಪ್ರಾಕೃತಿಕ ಸಂಪ ನ್ಮೂಲಗಳ ಹರಣ ನಾಗರೀಕರನ್ನು ದಿಗಿಲುಬೀಳುವಂತೆ ಮಾಡಿರುವುದೇ ಏ28ರ ಮಂಚೇನಹಳ್ಳಿ ಬಂದ್‌ಗೆ ಕಾರಣವಾಗಿದೆ. ಹೌದು. ಜಿಲ್ಲೆಯಲ್ಲಿ ಚಿಕ್ಕಬಳ್ಳಾಪುರ ಮತ್ತು ಗುಡಿಬಂಡೆ ತಾಲ್ಲೂಕಿನಲ್ಲಿಯೇ ಅತಿ ಹೆಚ್ಚಿನ ಗಣಿಗಾರಿಕೆ ಚಟುವಟಿಕೆಗಳು ನಡೆಯುತ್ತಿದ್ದು

ಚಿಕ್ಕಬಳ್ಳಾಪುರ: ರೈತರ ಮೇಲೆ ಗುಂಡಿನ ದಾಳಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕರ್ನಾಟಕದಲ್ಲಿದ್ದ ನಾಲ್ವರು ಪಾಕಿಸ್ತಾನಿ ಪ್ರಜೆಗಳು ಗಡಿಪಾರು

(ನ್ಯೂಸ್ ಕಡಬ) newskadaba.com ಎ. 28: ಪಹಲ್ಗಾಮ್ ದಾಳಿ ಬಳಿಕ ಅಲ್ಪಾವಧಿ ವೀಸಾ ಹೊಂದಿದ್ದ ನಾಲ್ವರು ಪಾಕಿಸ್ತಾನಿ ಪ್ರಜೆಗಳನ್ನು ರಾಜ್ಯದಿಂದ ಗಡಿಪಾರು ಮಾಡಲಾಗಿದೆ. ದೀರ್ಘಾವಧಿ ವೀಸಾ ಹೊಂದಿರುವವರ ಗಡಿಪಾರು ಮಾಡಲು ಕೇಂದ್ರ ಸೂಚನೆ ನೀಡಿಲ್ಲ. ಹೀಗಾಗಿ ದೀರ್ಘಾವಧಿ ವೀಸಾ ಹೊಂದಿರುವ 91 ಮಂದಿ ಪಾಕ್ ಪ್ರಜೆಗಳನ್ನು ಇನ್ನೂ ಗಡಿಪಾರು ಮಾಡಲಾಗಿಲ್ಲ. ಈ 91 ಮಂದಿ ಪಾಕ್ ಪ್ರಜೆಗಳು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವಾಸವಾಗಿದ್ದಾರೆ ಎಂದು ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಕಾರ್ಯಾಚರಣೆಯಲ್ಲಿ ಬೆಳಕಿಗೆ ಬಂದಿದೆ. 5 ಪಾಕಿಸ್ತಾನಿ

ಕರ್ನಾಟಕದಲ್ಲಿದ್ದ ನಾಲ್ವರು ಪಾಕಿಸ್ತಾನಿ ಪ್ರಜೆಗಳು ಗಡಿಪಾರು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಾಶ್ಮೀರ ಉಗ್ರರ ಗುಂಡೇಟಿಗೆ ಹುತಾತ್ಮರಾದ ಕನ್ನಡಿಗರ ಮಕ್ಕಳಿಗೆ ಉಚಿತ ಶಿಕ್ಷಣ, 10 ಲಕ್ಷ ರೂ. ನೆರವು; ತೇಜಸ್ವಿ ಸೂರ್ಯ!

(ನ್ಯೂಸ್ ಕಡಬ) newskadaba.com ಎ. 28: ಕಾಶ್ಮೀರದ ಪಹಲ್ಗಾಮ್‌ಗೆ ಪ್ರವಾಸಕ್ಕೆ ಹೋಗಿದ್ದ ವೇಳೆ ಇಸ್ಲಾಮಿಕ್ ಉಗ್ರರ ಗುಂಡೇಟಿಗೆ ಬಲಿಯಾದ ಕನ್ನಡಿಗರಾದ ಬೆಂಗಳೂರಿನ ಭರತ್ ಭೂಷಣ್ ಹಾಗೂ ಶಿವಮೊಗ್ಗದ ಮಂಜುನಾಥ್ ರಾವ್ ಅವರ ಮಕ್ಕಳಿಗೆ ಉಚಿತ ಶಿಕ್ಷಣ ನೀಡಲಾಗುವುದು. ಜೊತೆಗೆ, ಅವರ ಕುಟುಂಬಕ್ಕೆ ಉಚಿತ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ. ಮುಂದುವರೆದು, ಭರತ್ ಭೂಷಣ್ ಅವರ ಕುಟುಂಬಕ್ಕೆ ಬೆಂಗಳೂರಿನ ಜನರಿಂದ ಸಂಗ್ರಹಿಸಲಾದ 10 ಲಕ್ಷ ರೂ. ಹಣ ನೆರವು ನೀಡಲಾಗುವುದು ಎಂದು ಸಂಸದ ತೇಜಸ್ವಿ ಸೂರ್ಯ ತಿಳಿಸಿದ್ದಾರೆ.

ಕಾಶ್ಮೀರ ಉಗ್ರರ ಗುಂಡೇಟಿಗೆ ಹುತಾತ್ಮರಾದ ಕನ್ನಡಿಗರ ಮಕ್ಕಳಿಗೆ ಉಚಿತ ಶಿಕ್ಷಣ, 10 ಲಕ್ಷ ರೂ. ನೆರವು; ತೇಜಸ್ವಿ ಸೂರ್ಯ! Read More »

ಕರ್ನಾಟಕ

ಮಂತ್ರಾಲಯದಲ್ಲಿ ಹೈ ಅಲರ್ಟ್; ಬಾಂಬ್ ಸ್ಕ್ವಾಡ್‌ನಿಂದ ಪರಿಶೀಲನೆ

(ನ್ಯೂಸ್ ಕಡಬ) newskadaba.com ಎ. 28 ರಾಯಚೂರು: ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯ ಹಿನ್ನೆಲೆ ದೇಶಾದ್ಯಂತ ಜನಸಂದಣಿ ಹೆಚ್ಚಾಗಿರುವ ಪ್ರಮುಖ ಸ್ಥಳಗಳು, ಪುಣ್ಯಕ್ಷೇತ್ರಗಳು ಹಾಗೂ ಬಸ್‌, ರೈಲು ಹಾಗೂ ವಿಮಾನ ನಿಲ್ದಾಣಗಳಲ್ಲಿ ಹೈ ಅಲರ್ಟ್‌ ಘೋಷಿಸಲಾಗಿದೆ. ಅದೇ ರೀತಿ ಮಂತ್ರಾಲಯದ ರಾಘವೇಂದ್ರ ಸ್ವಾಮಿಗಳ ಸನ್ನಿಧಿಯಲ್ಲೂ ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸರು ಡಾಗ್ ಸ್ಕ್ವಾಡ್, ಬಾಂಬ್ ಸ್ಕ್ವಾಡ್‌ ಮೂಲಕ ತಪಾಸಣೆ ನಡೆಸಿದ್ದಾರೆ. ಪ್ರಸಿದ್ಧ ಧಾರ್ಮಿಕ ಕೇಂದ್ರವಾಗಿರುವುದರಿಂದ ರಾಘವೇಂದ್ರ ಸ್ವಾಮಿ ಮಠ ಹಾಗೂ ಮಂತ್ರಾಲಯದಲ್ಲಿ ತೀವ್ರ ತಪಾಸಣೆ ಮಾಡಲಾಗಿದೆ. ಮಠದ ಪ್ರಾಂಗಣ,

ಮಂತ್ರಾಲಯದಲ್ಲಿ ಹೈ ಅಲರ್ಟ್; ಬಾಂಬ್ ಸ್ಕ್ವಾಡ್‌ನಿಂದ ಪರಿಶೀಲನೆ Read More »

ಬ್ರೇಕಿಂಗ್ ನ್ಯೂಸ್

ಅಂಗನವಾಡಿ ಮಕ್ಕಳಿಗೆ ಪೌಷ್ಟಿಕಾಂಶ ಒದಗಿಸಲು ರಾಗಿ ಹೆಲ್ತ್ ಮಿಕ್ಸ್ ನೀಡಲು ಸರ್ಕಾರ ಚಿಂತನೆ

(ನ್ಯೂಸ್ ಕಡಬ) newskadaba.com ಎ. 28 ಬೆಂಗಳೂರು: ಅಂಗನವಾಡಿ ಮಕ್ಕಳಿಗೆ ಅಗತ್ಯ ಪೌಷ್ಟಿಕಾಂಶ ಒದಗಿಸಲು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯು ಶ್ರೀ ಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್‌ ಸಹಯೋಗದೊಂದಿಗೆ ರಾಗಿ ಹೆಲ್ತ್ ಮಿಕ್ಸ್ ನೀಡಲು ಯೋಜಿಸುತ್ತಿದೆ. ಸದ್ಯ ಸರ್ಕಾರಿ ಶಾಲೆಗಳಿಗೆ ಪೌಷ್ಟಿಕಾಂಶ ಭರಿತ ಮಿಶ್ರಣವನ್ನು ಪೂರೈಸಲು ಶ್ರೀ ಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್ ರಾಜ್ಯ ಸರ್ಕಾರದೊಂದಿಗೆ ಕೈಜೋಡಿಸಿದೆ. ತೀವ್ರ ಅಪೌಷ್ಟಿಕತೆ ಮತ್ತು ಮಧ್ಯಮ ಅಪೌಷ್ಟಿಕತೆಯಿಂದ ಬಳಲುತ್ತಿರುವವರ ಮೇಲೆ ವಿಶೇಷ ಗಮನಹರಿಸುವ ಮೂಲಕ ಈ ಕಾರ್ಯಕ್ರಮವನ್ನು ಅಂಗನವಾಡಿ ಮಕ್ಕಳಿಗೆ ವಿಸ್ತರಿಸುವ

ಅಂಗನವಾಡಿ ಮಕ್ಕಳಿಗೆ ಪೌಷ್ಟಿಕಾಂಶ ಒದಗಿಸಲು ರಾಗಿ ಹೆಲ್ತ್ ಮಿಕ್ಸ್ ನೀಡಲು ಸರ್ಕಾರ ಚಿಂತನೆ Read More »

ಕರ್ನಾಟಕ

ಗಡುವು ಮುಗಿದರೂ ಭಾರತ ತೊರೆಯದ ಪಾಕ್ ಪ್ರಜೆಗಳಿಗೆ 3 ವರ್ಷ ಜೈಲು, 3 ಲಕ್ಷ ದಂಡ

(ನ್ಯೂಸ್ ಕಡಬ) newskadaba.com ಎ. 28 ಮಂಗಳೂರು:  ಕೇಂದ್ರ ಸರ್ಕಾರ ಪಾಕ್ ಪ್ರಜೆಗಳಿಗೆ ಭಾರತ ತೊರೆಯಲು ನೀಡಿದ್ದ ಗಡುವು ಮುಗಿದಿದೆ. ಆದಾಗ್ಯೂ ಭಾರತ ತೊರೆಯದೇ ಇಲ್ಲೇ ಉಳಿದಿದವರನ್ನು ಬಂಧಿಸಿ 3 ವರ್ಷಗಳವರೆಗೆ ಜೈಲು ಶಿಕ್ಷೆ ಅಥವಾ 3 ಲಕ್ಷ ರೂ. ದಂಡ ಅಥವಾ ಎರಡನ್ನೂ ವಿಧಿಸಲಾಗುತ್ತದೆ ಕೇಂದ್ರ ಸರ್ಕಾರ ಎಚ್ಚರಿಕೆ ನೀಡಿದೆ. ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕರ ದಾಳಿಯ ಬಳಿಕ ಕೇಂದ್ರವು ಪಾಕ್ ಪ್ರಜೆಗಳಿಗೆ ಭಾರತ ಬಿಟ್ಟು ವಾಪಸ್ ಪಾಕಿಸ್ತಾನಕ್ಕೆ ಮರಳುವಂತೆ ಆದೇಶಿಸಲಾಗಿತ್ತು. ಸಾರ್ಕ್ ವೀಸಾ ಹೊಂದಿರುವವರು ಏ.26ರೊಳಗೆ

ಗಡುವು ಮುಗಿದರೂ ಭಾರತ ತೊರೆಯದ ಪಾಕ್ ಪ್ರಜೆಗಳಿಗೆ 3 ವರ್ಷ ಜೈಲು, 3 ಲಕ್ಷ ದಂಡ Read More »

ಬ್ರೇಕಿಂಗ್ ನ್ಯೂಸ್
Scroll to Top