News Kadaba

ಮೇಕೆದಾಟು ಯೋಜನೆ ತಡೆಯಲು ಅಗತ್ಯ ಬಿದ್ದರೆ ಕೋರ್ಟಿಗೆ- ತಮಿಳುನಾಡು

(ನ್ಯೂಸ್ ಕಡಬ) newskadaba.com, ಮಾ. 25: ಚೆನ್ನೈ: ಕರ್ನಾಟಕದ ಮೇಕೆದಾಟು ಅಣೆಕಟ್ಟು ಯೋಜನೆ ತಡೆಯಲು ಅಗತ್ಯ ಬಿದ್ದರೆ ಕೋರ್ಟಿಗೆ ಹೋಗುವುದಾಗಿ ತಮಿಳು ನಾಡು ಸರಕಾರ ತಿಳಿಸಿದೆ. ಮೇಕೆದಾಟಿನಲ್ಲಿ ಕಾವೇರಿ ನದಿಗೆ ಜಲಾಶಯ ನಿರ್ಮಿಸುವ ಯೋಜನೆಗೆ ಯಾವ ಕಾರಣಕ್ಕೂ ಅವಕಾಶ ನೀಡುವುದಿಲ್ಲ. ಯೋಜನೆಯನ್ನು ತಡೆಯುವುದಕ್ಕಾಗಿ ಕಾನೂನು ಕ್ರಮ ಸೇರಿದಂತೆ ಎಲ್ಲಾ ಅಗತ್ಯ ಕ್ರಮಗಳನ್ನು ಸರ್ಕಾರ ಕೈಗೊಳ್ಳಲಿದೆ ಎಂದು ತಮಿಳುನಾಡು ಜಲಸಂಪನ್ಮೂಲ ಸಚಿವ ದೊರೈ ಮುರುಗನ್ ಹೇಳಿದ್ದಾರೆ. ಯೋಜನೆಗೆ ಕರ್ನಾಟಕ ಸರ್ಕಾರ ಅನುಮತಿ ಕೋರಿದ ಬೆನ್ನಲ್ಲೇ ಸಚಿವರ ಈ ಹೇಳಿಕೆ ಹೊರಟಿದೆ. 2025-2026ರ ನೀತಿ ಟಿಪ್ಪಣಿಯನ್ನು […]

ಮೇಕೆದಾಟು ಯೋಜನೆ ತಡೆಯಲು ಅಗತ್ಯ ಬಿದ್ದರೆ ಕೋರ್ಟಿಗೆ- ತಮಿಳುನಾಡು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದು ಉಡುಪಿ, ದಕ್ಷಿಣ ಕನ್ನಡ ಸೇರಿ ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ

(ನ್ಯೂಸ್ ಕಡಬ) newskadaba.com, ಮಾ. 25: ಮಾ.25ರ ಮಂಗಳವಾರ ಕೊಡಗು, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಬಾಗಲಕೋಟೆ, ಗದಗ ಮತ್ತು ಮೈಸೂರು ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಲಘು ಮಳೆ/ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ

ಇಂದು ಉಡುಪಿ, ದಕ್ಷಿಣ ಕನ್ನಡ ಸೇರಿ ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ Read More »

ಕರಾವಳಿ, ಕರ್ನಾಟಕ

ಉಡುಪಿ: ಗುಂಡೇಟಿಗೆ ಒಳಗಾಗಿದ್ದ ಗರುಡ ಗ್ಯಾಂಗಿನ ಸದಸ್ಯ ಇಸಾಕ್‌ 9 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ

(ನ್ಯೂಸ್ ಕಡಬ) newskadaba.com, ಮಾ. 25: ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿ ಗುಂಡೇಟಿಗೆ ಒಳಗಾಗಿದ್ದ ಗರುಡ ಗ್ಯಾಂಗಿನ ಸದಸ್ಯ ಇಸಾಕ್‌ನನ್ನು ಮಣಿಪಾಲ ಪೊಲೀಸರು ಸೋಮವಾರ ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆತನನ್ನು ನ್ಯಾಯಾಲಯ 9 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಆದೇಶ ನೀಡಿದೆ. ಬೆಂಗಳೂರಿನ ನೆಲಮಂಗಲದ ಪೊಲೀಸರಿಂದ ಮಣಿಪಾಲದಲ್ಲಿ ತಪ್ಪಿಸಿ ಕೊಳ್ಳುವ ವೇಳೆ ಸಾರ್ವಜನಿಕರ ಕಾರು, ಬೈಕಿಗೆ ಗುದ್ದಿ ಪರಾರಿಯಾಗಿದ್ದ ಇಸಾಕ್‌ನನ್ನು ಮಣಿಪಾಲ ಪೊಲೀಸರು ಮಾ.12ರಂದು ಹಾಸನದಲ್ಲಿ ಬಂಧಿಸಿದ್ದರು. ಅಲ್ಲಿಂದ ಆತನನ್ನು ಕರೆ ತರುವಾಗ ದಾರಿ ಮಧ್ಯೆ ಹಿರಿಯಡ್ಕ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರಿಗೆ

ಉಡುಪಿ: ಗುಂಡೇಟಿಗೆ ಒಳಗಾಗಿದ್ದ ಗರುಡ ಗ್ಯಾಂಗಿನ ಸದಸ್ಯ ಇಸಾಕ್‌ 9 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ Read More »

ಕರಾವಳಿ

‘ಡಿ.ಕೆ.ಶಿವಕುಮಾರ್ ಹೇಳಿಕೆ ಪ್ರಜಾಪ್ರಭುತ್ವ ವಿರೋಧಿ, ಸಂವಿಧಾನ ವಿರೋಧಿ’- ವಿಜಯೇಂದ್ರ

(ನ್ಯೂಸ್ ಕಡಬ) newskadaba.com, ಮಾ. 24: ಸಂವಿಧಾನ ಬದಲಿಸುವ ಕುರಿತ ಡಿ.ಕೆ.ಶಿವಕುಮಾರ್ ಅವರ ಹೇಳಿಕೆಯು ಪ್ರಜಾಪ್ರಭುತ್ವ ವಿರೋಧಿ ಹಾಗೂ ಸಂವಿಧಾನ ವಿರೋಧಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಆಕ್ಷೇಪಿಸಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಂವಿಧಾನ ಬದಲಿಸಲು ಬಿಜೆಪಿ ಮತ್ತು ನರೇಂದ್ರ ಮೋದಿ ಜೀ ಅವರು ಅವಕಾಶ ಕೊಡುವುದಿಲ್ಲ ಎಂದು ತಿಳಿಸಿದರು. ಡಿ.ಕೆ.ಶಿವಕುಮಾರ್ ಅವರ ಹೇಳಿಕೆಯನ್ನು ಖಂಡಿಸುವುದಾಗಿ ಹೇಳಿದರು.ಪ್ರಶ್ನೆಗೆ ಉತ್ತರಿಸಿದ ಅವರು, ಕಾಂಗ್ರೆಸ್ ಪಕ್ಷವು ಮುಸ್ಲಿಮರನ್ನು ಮತಬ್ಯಾಂಕ್ ಆಗಿ ಮಾಡಿಕೊಂಡಿದೆ. ರಾಜ್ಯದ- ದೇಶದ ಶೋಷಿತ, ಪೀಡಿತ

‘ಡಿ.ಕೆ.ಶಿವಕುಮಾರ್ ಹೇಳಿಕೆ ಪ್ರಜಾಪ್ರಭುತ್ವ ವಿರೋಧಿ, ಸಂವಿಧಾನ ವಿರೋಧಿ’- ವಿಜಯೇಂದ್ರ Read More »

ಕರ್ನಾಟಕ

ಉಡುಪಿ: ಮಲ್ಪೆ ಹಲ್ಲೆ ಕೇಸ್; ದೌರ್ಜನ್ಯ ಪ್ರಕರಣ ರದ್ದುಗೊಳಿಸುವಂತೆ ಸಂತ್ರಸ್ತೆ ಮನವಿ

(ನ್ಯೂಸ್ ಕಡಬ) newskadaba.com, ಮಾ. 24: ಮಲ್ಪೆ ಹಲ್ಲೆ ಪ್ರಕರಣದ ಸಂತ್ರಸ್ತೆ ಮತ್ತು ಅವರ ಸಮುದಾಯದ ಸದಸ್ಯರು ಇಂದು ಮಣಿಪಾಲದ ಡಿಸಿ ಕಚೇರಿಯಲ್ಲಿ ದೌರ್ಜನ್ಯ ಪ್ರಕರಣವನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅವರಿಗೆ ಮನವಿ ಸಲ್ಲಿಸಿದರು. ಮಾಧ್ಯಮದವರೊಂದಿಗೆ ಮಾತನಾಡಿದ ಮಲ್ಪೆ ಹಲ್ಲೆ ಪ್ರಕರಣದ ಸಂತ್ರಸ್ತೆ ಲಕ್ಕಿಬಾಯಿ, “ಘಟನೆ ನಡೆದ ದಿನ ನಾವು ವಿಷಯವನ್ನು ಶಾಂತಿಯುತವಾಗಿ ಬಗೆಹರಿಸಿಕೊಂಡೆವು. ಮರುದಿನ ಅವರು ನನ್ನನ್ನು ಕರೆದರು. ಆದರೆ ನನ್ನ ಜನರು ಕಾರ್ಯನಿರತರಾಗಿದ್ದರಿಂದ ನಾನು ಹೋಗಲಿಲ್ಲ. ನಂತರ, ಅವರು ಆಟೋರಿಕ್ಷಾದಲ್ಲಿ ಬಂದು ನನ್ನನ್ನು ಕರೆದುಕೊಂಡು

ಉಡುಪಿ: ಮಲ್ಪೆ ಹಲ್ಲೆ ಕೇಸ್; ದೌರ್ಜನ್ಯ ಪ್ರಕರಣ ರದ್ದುಗೊಳಿಸುವಂತೆ ಸಂತ್ರಸ್ತೆ ಮನವಿ Read More »

ಕರಾವಳಿ

‘ಇಂದಿನ ಆಡಳಿತಗಾರರು ಬ್ರಿಟಿಷರಿಗಿಂತ ಕೆಟ್ಟವರು’- ಬಿಜೆಪಿ ವಿರುದ್ಧ ಕೇಜ್ರಿವಾಲ್

(ನ್ಯೂಸ್ ಕಡಬ) newskadaba.com, ಮಾ. 24: ಸ್ವಾತಂತ್ರ‍್ಯ ಹೋರಾಟಗಾರ ಭಗತ್ ಸಿಂಗ್ ಮತ್ತು ಸಮಾಜ ಸುಧಾರಕ ಭೀಮರಾವ್ ಅಂಬೇಡ್ಕರ್ ಅವರ ಪರಂಪರೆಯನ್ನು ಬಿಜೆಪಿ ಕಡೆಗಣಿಸಿದೆ. ಇಂದಿನ ಆಡಳಿತಗಾರರು ಬ್ರಿಟಿಷರಿಗಿಂತ ಕೆಟ್ಟವರು ಎಂದು ಎಎಪಿ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಆಡಳಿತಾರೂಢ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ದೆಹಲಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಭಗತ್ ಸಿಂಗ್ ಮತ್ತು ಅಂಬೇಡ್ಕರ್ ಅವರ ಕನಸುಗಳನ್ನು ನನಸಾಗಿಸಲು ತಮ್ಮ ಪಕ್ಷ ರಾಜಕೀಯ ಪ್ರವೇಶಿಸಿದೆಯೇ ಹೊರತು ಅಧಿಕಾರಕ್ಕಾಗಿ ಅಲ್ಲ. ಬಾಬಾ ಸಾಹೇಬ್ ಅಂಬೇಡ್ಕರ್ ಮತ್ತು ಭಗತ್ ಸಿಂಗ್

‘ಇಂದಿನ ಆಡಳಿತಗಾರರು ಬ್ರಿಟಿಷರಿಗಿಂತ ಕೆಟ್ಟವರು’- ಬಿಜೆಪಿ ವಿರುದ್ಧ ಕೇಜ್ರಿವಾಲ್ Read More »

ಕರ್ನಾಟಕ

ರಾಜ್ಯದಲ್ಲಿ ಬೇಸಿಗೆಯಲ್ಲಿ ವಿದ್ಯುತ್‌ ತೊಂದರೆಯಾಗಲ್ಲ: ಕೆಪಿಟಿಸಿಎಲ್ ಎಂಡಿ

(ನ್ಯೂಸ್ ಕಡಬ) newskadaba.com, ಮಾ. 24: ವಿದ್ಯುತ್ ಸಂಗ್ರಹ ರಾಜ್ಯದಲ್ಲಿ ಚೆನ್ನಾಗಿ ಇದೆ. ರೈತರು, ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ, ಜನಕ್ಕೆ ಅನುಕೂಲ ರೀತಿಯಲ್ಲಿ ಕ್ರಮ ಕೈಗೊಂಡಿದ್ದೇವೆ ಎಂಬುದಾಗಿ ಕೆಪಿಟಿಸಿಎಲ್ ಎಂಡಿ ಪಂಕಜ್ ಕುಮಾರ್ ಪಾಂಡೆ ಹೇಳಿದ್ದಾರೆ. ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ ಅವರು ಇಂದು ಬೆಳಿಗ್ಗೆ 11 ಗಂಟೆಗೆ ಸುದ್ದಿಗೋಷ್ಠಿ ನಡೆಸಿಯಲ್ಲಿ ರಾಜ್ಯದ ಪ್ರಸ್ತುತ ವಿದ್ಯುತ್ ಪರಿಸ್ಥಿತಿ ಮತ್ತು ಇಂಧನ ಇಲಾಖೆಯ ಕಾರ್ಯ ಪ್ರಗತಿ, ಗ್ರ‍್ಯಾಚುಟಿ, ಪಿಂಚಣಿ ಹಣಕ್ಕಾಗಿ ವಿದ್ಯುತ್ ದರ ಏರಿಕೆ ಕುರಿತು ಚರ್ಚಿಸಲಾಯಿತು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ

ರಾಜ್ಯದಲ್ಲಿ ಬೇಸಿಗೆಯಲ್ಲಿ ವಿದ್ಯುತ್‌ ತೊಂದರೆಯಾಗಲ್ಲ: ಕೆಪಿಟಿಸಿಎಲ್ ಎಂಡಿ Read More »

ಕರ್ನಾಟಕ

ನಂದಿನಿ ಹಾಲಿನ ದರ ಏರಿಕೆ ಸಂಬಂಧ ಸಿಎಂ ನೇತೃತ್ವದಲ್ಲಿ ಮಹತ್ವದ ಸಭೆ

(ನ್ಯೂಸ್ ಕಡಬ) newskadaba.com, ಮಾ. 24: ನಂದಿನಿ ಹಾಲಿನ ದರ ಏರಿಕೆ ಸಂಬಂಧ ಇಂದು ಸಿಎಂ ಸಿದ್ದರಾಮಯ್ಯ ಸಭೆ ನಡೆಸಲಿದ್ದು, ಮಹತ್ವದ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ, ಕೆಎಂಎಫ್ ಅಧ್ಯಕ್ಷರು, ಜಿಲ್ಲಾ ಹಾಲು ಒಕ್ಕೂಟ ಅಧ್ಯಕ್ಷರೊಂದಿಗೆ ಈ ಮಹತ್ವದ ಸಭೆ ನಡೆಯಲಿದೆ. ಪ್ರತಿ ಲೀಟರ್ ಹಾಲಿಗೆ 5 ರೂ. ದರ ಹೆಚ್ಚಿಸಲು ಒಕ್ಕೂಟಗಳು ಈಗಾಗಲೇ ಒತ್ತಾಯಿಸಿದ್ದು, ಈ ಕುರಿತಾಗಿ ಸಿಎಂ ಸಭೆಯಲ್ಲಿ ಚರ್ಚೆ ನಡೆಸಲಿದ್ದಾರೆ. ಸಭೆ ಬಳಿಕ ಅಂತಿಮ ನಿರ್ಧಾರ ಪ್ರಕಟಿಸುವ ಸಾಧ್ಯತೆ ಇದೆ. ಪಶು

ನಂದಿನಿ ಹಾಲಿನ ದರ ಏರಿಕೆ ಸಂಬಂಧ ಸಿಎಂ ನೇತೃತ್ವದಲ್ಲಿ ಮಹತ್ವದ ಸಭೆ Read More »

ಕರ್ನಾಟಕ

15 ಕೋಟಿ ರೂ. ಪತ್ತೆ ಪ್ರಕರಣ; ನ್ಯಾಯಮೂರ್ತಿ ಯಶವಂತ್ ವರ್ಮಾ ಕರ್ತವ್ಯದಿಂದ ವಜಾ

(ನ್ಯೂಸ್ ಕಡಬ) newskadaba.com, ಮಾ. 24 ನವದೆಹಲಿ: ಮನೆಯಲ್ಲಿ ಸುಟ್ಟ ಸ್ಥಿತಿಯಲ್ಲಿ 15 ಕೋಟಿ ರೂ.ಗಳ ನೋಟಿನ ಕಂತೆಗಳು ಸಿಕ್ಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರನ್ನು ಸೇವೆಯಿಂದ ವಜಾಗೊಳಿಸಲಾಗಿದೆ. ಮುಂದಿನ ಆದೇಶದವರೆಗೆ ಯಶವಂತ್‌ ವರ್ಮಾ ಅವರನ್ನು ತಕ್ಷಣದಿಂದಲೇ ಕರ್ತವ್ಯದಿಂದ ವಜಾಗೊಳಿಸಿ ದೆಹಲಿ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಡಿ.ಕೆ. ಉಪಾಧ್ಯಾಯ ಆದೇಶ ಹೊರಡಿಸಿದ್ದಾರೆ. ಇದಕ್ಕೂ ಮುನ್ನ ಸುಪ್ರೀಂ ಕೋರ್ಟ್‌ ಈ ಪ್ರಕರಣದ ವಿಚಾರಣೆಗಾಗಿ ಪಂಜಾಬ್‌, ಹರಿಯಾಣ ಮತ್ತು ಕರ್ನಾಟಕ ಹೈಕೋರ್ಟ್‌ಗಳ ನ್ಯಾಯಮೂರ್ತಿಗಳ ಸಮಿತಿಯನ್ನು ರಚಿಸಿದೆ. ದೆಹಲಿ ಹೈಕೋರ್ಟ್‌

15 ಕೋಟಿ ರೂ. ಪತ್ತೆ ಪ್ರಕರಣ; ನ್ಯಾಯಮೂರ್ತಿ ಯಶವಂತ್ ವರ್ಮಾ ಕರ್ತವ್ಯದಿಂದ ವಜಾ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನಿಂದ ನಂದಿ ಗಿರಿಧಾಮ ಒಂದು ತಿಂಗಳು ಬಂದ್‌

(ನ್ಯೂಸ್ ಕಡಬ) newskadaba.com, ಮಾ. 24:  ವಿಶ್ವವಿಖ್ಯಾತ ನಂದಿ ಗಿರಿಧಾಮವನ್ನು ನವೀಕರಣ ಕಾಮಗಾರಿಯ ಹಿನ್ನೆಲೆಯಲ್ಲಿ ಇಂದಿನಿಂದ ಒಂದು ತಿಂಗಳುಗಳ ಕಾಲ ಬಂದ್ ಮಾಡಲಾಗುತ್ತಿದೆ. ಈ ಸಂಬಂಧ ಆದೇಶ ಹೊರಡಿಸಿರುವಂತ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿಎನ್ ರವೀಂದ್ರ ಅವರು, ನಂದಿ ಗಿರಿಧಾಮದಲ್ಲಿ ರಸ್ತೆ ಡಾಮರೀಕರಣ ಕಾಮಗಾರಿ ಸೇರಿದಂತೆ ಇತರೆ ನವೀಕರಣ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗುತ್ತಿದೆ. ಈ ಹಿನ್ನಲೆಯಲ್ಲಿ ಮಾರ್ಚ್.24ರ ಇಂದಿನಿಂದ ಏಪ್ರಿಲ್ 25ರವರೆಗೆ ಒಂದು ತಿಂಗಳವರೆಗೆ ಬಂದ್ ಮಾಡಲಾಗುತ್ತಿದೆ ಎಂದಿದ್ದಾರೆ. ಪ್ರವಾಸಿಗರ ಹಿತದೃಷ್ಟಿಯಿಂದ ವೀಕೆಂಡ್ ಶುಕ್ರವಾರ ಸಂಜೆ 6.30ರಿಂದ ಸೋಮವಾರ ಬೆಳಿಗ್ಗೆ 8 ಗಂಟೆಯಿಂದ ಮಾತ್ರವೇ

ಇಂದಿನಿಂದ ನಂದಿ ಗಿರಿಧಾಮ ಒಂದು ತಿಂಗಳು ಬಂದ್‌ Read More »

ಕರ್ನಾಟಕ
Scroll to Top