News Kadaba

ಪ್ರಯಾಣಿಕರೊಬ್ಬರು ಬಿಟ್ಟು ಹೋಗಿದ್ದ 4 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಆಟೋ ಚಾಲಕ

(ನ್ಯೂಸ್ ಕಡಬ) newskadaba.com ಮಾ. 11ತುಮಕೂರು:ಆಟೋ ಪ್ರಯಾಣಿಕರೊಬ್ಬರು ಮರೆತು ಬಿಟ್ಟು ಹೋಗಿದ್ದ ಸುಮಾರು 4 ಲಕ್ಷ ರೂ. ಮೌಲ್ಯದ ಬೆಲೆ ಬಾಳುವ ಚಿನ್ನದ ಒಡವೆಗಳನ್ನು ಆಟೋ ಚಾಲಕ ವಾರಸುದಾರರಿಗೆ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ. ನಗರದ ಹನುಮಂತಪುರ ನಿವಾಸಿ ರವಿಕುಮಾರ್ ಪ್ರಾಮಾಣಿಕತೆ ಮೆರೆದ ಆಟೋ ಚಾಲಕ. ಹಾಸನ ಜಿಲ್ಲೆಯ ಅರಸೀಕೆರೆ ಮೂಲದ ಗಾಯತ್ರಿ ಎಂಬುವರು ಕುಂದೂರು ಗ್ರಾಮದಲ್ಲಿ ತಮ್ಮ ಸಂಬಂಧಿಕರೊಬ್ಬರ ಮನೆಗೆ ಸೀಮಂತ ಕಾರ್ಯಕ್ರಮಕ್ಕೆ ಬಂದಿದ್ದರು.

ಪ್ರಯಾಣಿಕರೊಬ್ಬರು ಬಿಟ್ಟು ಹೋಗಿದ್ದ 4 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಆಟೋ ಚಾಲಕ Read More »

ಕರ್ನಾಟಕ

ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣ: ಡಿವೈಎಸ್ಪಿ ಕನಕಲಕ್ಷ್ಮೀ ಬಂಧನ

(ನ್ಯೂಸ್ ಕಡಬ) newskadaba.com ಮಾ. 11: ಬೆಂಗಳೂರು: ಭೋವಿ ನಿಗಮದಲ್ಲಿ ನಡೆದ ಅಕ್ರಮ ತನಿಖೆ ಎದುರಿಸಿದ್ದ ವಕೀಲೆ ಹಾಗೂ ಉದ್ಯಮಿ ಜೀವಾ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಡಿವೈಎಸ್ಪಿ ಕನಕಲಕ್ಷ್ಮೀಯನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ವಕೀಲೆ ಜೀವಾ, ನನ್ನ ಆತ್ಮಹತ್ಯೆಗೆ ಡಿವೈಎಸ್ಪಿ ಕನಕಲಕ್ಷ್ಮೀ ಕಾರಣ ಎಂದು 13 ಪುಟಗಳ ಸುದೀರ್ಘ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ಇಂದು ಬೆಳಗ್ಗೆ ಕನಕಲಕ್ಷ್ಮೀ ಎಸ್‌ಐಟಿ ವಿಚಾರಣೆಗೆ ಹಾಜರಾಗಿದ್ದಾಗ ಬಂಧಿಸಲಾಗಿದೆ. ಈ ಹಿಂದೆ ಎರಡು ಬಾರಿ ಕನಕಲಕ್ಷ್ಮೀ ಅವರ ಹೇಳಿಕೆಯನ್ನು ಎಸ್‌ಐಟಿ

ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣ: ಡಿವೈಎಸ್ಪಿ ಕನಕಲಕ್ಷ್ಮೀ ಬಂಧನ Read More »

ಕರ್ನಾಟಕ

ಹೆಚ್‌ಡಿಕೆಗೆ ಅನಾರೋಗ್ಯ-ಜಿಂದಾಲ್ ಪ್ರಕೃತಿ ಚಿಕಿತ್ಸಾಲಯದಲ್ಲಿ ಚಿಕಿತ್ಸೆ

(ನ್ಯೂಸ್ ಕಡಬ) newskadaba.com ಮಾ. 11: ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿರುವ ಕೇಂದ್ರ ಹೆಚ್.ಡಿ.ಕುಮಾರಸ್ವಾಮಿ ಅವರು ಜಿಂದಾಲ್ ಪ್ರಕೃತಿ ಚಿಕಿತ್ಸಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತೀವ್ರ ಕಫಾ, ಕೆಮ್ಮಿನಿಂದ ಬಳಲುತ್ತಿರುವ ಹೆಚ್‌ಡಿಕೆ, ತುಮಕೂರು ರಸ್ತೆಯಲ್ಲಿರುವ ಜಿಂದಾಲ್ ಪ್ರಕೃತಿ ಚಿಕಿತ್ಸಾಲಯದಲ್ಲಿ 3-4 ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ.ಸದ್ಯ ಸ್ವಲ್ಪ ಆರೋಗ್ಯ ಸುಧಾರಣೆ ಆಗಿದೆ ಎಂಬ ಮಾಹಿತಿ ಲಭಿಸಿದೆ. ಇತ್ತೀಚೆಗೆ ಚೆನ್ನೈನ ಅಪೋಲೋ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದಿದ್ದರು. ಆದರೂ ಕಫಾ, ಕೆಮ್ಮು ಕಡಿಮೆಯಾಗದ ಹಿನ್ನೆಲೆ ಪ್ರಕೃತಿ ಚಿಕಿತ್ಸಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಅನಾರೋಗ್ಯದ ಕಾರಣ ನಾಳೆ

ಹೆಚ್‌ಡಿಕೆಗೆ ಅನಾರೋಗ್ಯ-ಜಿಂದಾಲ್ ಪ್ರಕೃತಿ ಚಿಕಿತ್ಸಾಲಯದಲ್ಲಿ ಚಿಕಿತ್ಸೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ತರಕಾರಿ ಬೆಲೆ ಇಳಿಕೆ

(ನ್ಯೂಸ್ ಕಡಬ) newskadaba.com ಮಾ. 11: ಬೆಂಗಳೂರು: ನೀರಿನ ಅಭಾವ, ವಿದ್ಯುತ್ ಸಮಸ್ಯೆಯಿಂದ ಸಾಮಾನ್ಯವಾಗಿ ಬೇಸಿಗೆಯಲ್ಲಿ ತರಕಾರಿಗಳ ಬೆಲೆ ಗಗನಕ್ಕೇರುವುದು ಸಾಮಾನ್ಯ. ಸೊಪ್ಪು ಹಾಗೂ ತರಕಾರಿ ಬೆಲೆಯಲ್ಲಿ ಗಣನೀಯವಾಗಿ ಇಳಿಕೆಯಾಗಿದೆ. ಸಗಟು ದರದಲ್ಲಿ ಹುರುಳಿಕಾಯಿ ಹೊರತುಪಡಿಸಿದರೆ ಎಲ್ಲಾ ತರಕಾರಿ ಬೆಲೆ 40 ರೂ. ಆಸುಪಾಸಿನಲ್ಲಿದೆ ಚಿಲ್ಲರೆ ದರದಲ್ಲಿ 50 ರೂ.ಗೆ ಮಾರಾಟವಾಗುತ್ತಿದೆ. ತರಕಾರಿ ಬೆಳೆಯಲು ಹೆಚ್ಚಾಗಿ ನೀರಿನ ಅವಶ್ಯಕತೆ ಇದ್ದು ವಿದ್ಯುತ್ ಕಣ್ಣಾಮುಚ್ಚಾಲೆಯಿಂದ ಬೆಳೆಗಳಿಗೆ ಹೊಡೆತ ಬೀಳುತ್ತಿತ್ತು. ಆದರೆ ಈ ಬಾರಿ ಅಂತಹ ಸಮಸ್ಯೆ ಎದುರಾಗಿಲ್ಲ.

ತರಕಾರಿ ಬೆಲೆ ಇಳಿಕೆ Read More »

ಕರ್ನಾಟಕ

ಕಾನೂನು ಮೂಲಕ ಮೈಕ್ರೋಫೈನಾನ್ಸ್‌ ಕಪ್ಪು ಹಣಕ್ಕೆ ಕಡಿವಾಣ: ರಾಜ್ಯ ಸರ್ಕಾರ

(ನ್ಯೂಸ್ ಕಡಬ) newskadaba.com ಮಾ. 11: ಬೆಂಗಳೂರು: ಸಾಲ ನೀಡುವ ಸಂಸ್ಥೆಗಳು, ಕಿರುಬಂಡವಾಳ ಸಂಸ್ಥೆಗಳು ಕಪ್ಪು ಹಣವನ್ನು ಬಿಳಿ ಹಣವಾಗಿ ಪರಿವರ್ತಿಸುವ ಸಾಧನಗಳಾಗಿ ಮಾರ್ಪಟ್ಟಿದ್ದು, ಇದಕ್ಕೆ ಕಡಿವಾಣ ಹಾಕುವ ಅಗತ್ಯವಿದೆ ಎಂದು ಕಾನೂನು ಸಚಿವ ಎಚ್‌ಕೆ ಪಾಟೀಲ್ ಸೋಮವಾರ ಹೇಳಿದರು. ಕರ್ನಾಟಕ ಕಿರು ಸಾಲ ಮತ್ತು ಸಣ್ಣ ಸಾಲ (ಮೈಕ್ರೋ ಫೈನಾನ್ಸ್‌) ಮಸೂದೆಗೆ ವಿಧಾನಸಭೆಯಲ್ಲಿ ಸೋಮವಾರ ಅಂಗೀಕಾರ ದೊರೆಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪರವಾಗಿ ವಿಧೇಯಕದ ಕುರಿತು ಮಾತನಾಡಿದ ಎಚ್‌ಕೆ ಪಾಟೀಲ್ ಅವರು, ನೋಂದಾಯಿತವಲ್ಲದ ಲೇವಾದೇವಿದಾರರನ್ನು ನಿಯಂತ್ರಿಸುವುದು, ಮೂಲಭೂತ

ಕಾನೂನು ಮೂಲಕ ಮೈಕ್ರೋಫೈನಾನ್ಸ್‌ ಕಪ್ಪು ಹಣಕ್ಕೆ ಕಡಿವಾಣ: ರಾಜ್ಯ ಸರ್ಕಾರ Read More »

ಕರ್ನಾಟಕ

‘ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ತಮ್ಮ ಸ್ವಂತ ವಾಹನದ ಮೇಲೆ ಪೊಲೀಸ್ ಎಂದು ಬರೆಸುವಂತಿಲ್ಲ’- ಪರಮೇಶ್ವರ್‌

(ನ್ಯೂಸ್ ಕಡಬ) newskadaba.com ಮಾ. 11 ಬೆಂಗಳೂರು: ಪೊಲೀಸ್ ಇಲಾಖೆಯ ಅಧಿಕಾರಿಗಳು ‌ಹಾಗೂ ಸಿಬ್ಬಂದಿ ತಮ್ಮ ಸ್ವಂತ ವಾಹನದ ಮೇಲೆ ಪೊಲೀಸ್ ಎಂದು ಬರೆಸುವಂತಿಲ್ಲ. ಒಂದೇ ವೇಳೆ ಬರೆಸಿದ್ದರೇ ಅದು ಕಾನೂನು ಉಲ್ಲಂಘಿಸಿದಂತೆ ಎಂದು ಗೃಹ ಸಚಿವ ಡಾ.‌ಜಿ.ಪರಮೇಶ್ವರ ಸ್ಪಷ್ಟ ಸೂಚನೆ ನೀಡಿದ್ದಾರೆ. ಶ್ರವಣ ಬೆಳಗೊಳದ ಶಾಸಕ ಬಾಲಕೃಷ್ಣ ಸಿಎನ್ ಅವರ ಪ್ರಶ್ನೆಗೆ ಸಚಿವ ಡಾ. ಜಿ ಪರಮೇಶ್ವರ್​ ಉತ್ತರ ನೀಡಿದ್ದಾರೆ.ರಾಜ್ಯದ ಪೊಲೀಸ್​ ಇಲಾಖೆಯ ಅಧಿಕಾರಿಗಳು ಮತ್ತು ನೌಕರರು ತಮ್ಮ ಸ್ವಂತ ವಾಹನದ ಮೇಲೆ ಪೊಲೀಸ್​ ಎಂದು

‘ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ತಮ್ಮ ಸ್ವಂತ ವಾಹನದ ಮೇಲೆ ಪೊಲೀಸ್ ಎಂದು ಬರೆಸುವಂತಿಲ್ಲ’- ಪರಮೇಶ್ವರ್‌ Read More »

ಕರ್ನಾಟಕ

ಶಾಲಾ ವಿದ್ಯಾರ್ಥಿಗಳಿಗೆ ವಾರದಲ್ಲಿ ಒಂದು ದಿನ ನೈತಿಕ ಶಿಕ್ಷಣ: ಸರ್ಕಾರ ಒಪ್ಪಿಗೆ

(ನ್ಯೂಸ್ ಕಡಬ) newskadaba.com ಮಾ. 11 ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢಶಾಲಾ ಹಂತದಲ್ಲಿ ಮಕ್ಕಳಿಗೆ ನೈತಿಕ ಶಿಕ್ಷಣ ಪಾಠಕ್ಕೆ ಅವಕಾಶ ಮಾಡಿಕೊಡುವ ಕುರಿತು ಚಿಂತನೆ ನಡೆಸಲಾಗುತ್ತಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಹೇಳಿದ್ದಾರೆ. ವಿಧಾನ ಪರಿಷತ್ತಿನಲ್ಲಿ ಶೂನ್ಯ ವೇಳೆ ವಿಷಯ ಪ್ರಸ್ತಾಪಿಸಿದ ಬಿಜೆಪಿಯ ಭಾರತಿ ಶೆಟ್ಟಿ ಅವರು, ಹದಿಹರೆಯದ ಮಕ್ಕಳ ಸಮಸ್ಯೆಗಳನ್ನು ಎಳೆ ಎಳೆಯಾಗಿ ಬಿಚ್ಚಿಟ್ಟರು. 14 ರಿಂದ 17ನೇ ವಯಸ್ಸಿನ ಮಕ್ಕಳ ಮನಸ್ಸು ಚಂಚಲತೆಯಿಂದ ಕೂಡಿರುತ್ತದೆ. ಈ ವಯಸ್ಸಿನ ಮಕ್ಕಳ ಮೇಲೆ ಸೂಕ್ಷ್ಮ

ಶಾಲಾ ವಿದ್ಯಾರ್ಥಿಗಳಿಗೆ ವಾರದಲ್ಲಿ ಒಂದು ದಿನ ನೈತಿಕ ಶಿಕ್ಷಣ: ಸರ್ಕಾರ ಒಪ್ಪಿಗೆ Read More »

ಕರ್ನಾಟಕ

ಇನ್ಮುಂದೆ ಸರಕಾರಿ ವೈದ್ಯರಿಗೆ ಬೆಳಗ್ಗೆ 9ರಿಂದ ಸಂಜೆ 4ರವರೆಗೆ ಡ್ಯೂಟಿ ಕಡ್ಡಾಯ

(ನ್ಯೂಸ್ ಕಡಬ) newskadaba.com ಮಾ. 11 ಬೆಂಗಳೂರು: ಸರಕಾರಿ ಆಸ್ಪತ್ರೆ ವೈದ್ಯರು ಇನ್ನುಮುಂದೆ ಬೆಳಗ್ಗೆ 9ರಿಂದ ಸಂಜೆ 4ರವರೆಗೆ ಕಡ್ಡಾಯವಾಗಿ ಕಾರ್ಯ ನಿರ್ವಹಿಸಬೇಕೆಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ. ಪರಿಷತ್ ನಲ್ಲಿ ಮಾತನಾಡಿ ಅವರು, ಸರಕಾರಿ ವೈದ್ಯರು ತಮ್ಮ ಡ್ಯೂಟಿ ಅವಧಿಯಲ್ಲಿ ಬೇರೆಡೆ ಕೆಲಸ ಮಾಡುತ್ತಿರುವ ಆರೋಪ ಇದೆ,ಇದನ್ನು ತಡೆಯಲು ಕಟ್ಟುನಿಟ್ಟಿನ ಕ್ರಮ ಮಾಡಿದ್ದು  ನಿಗದಿತ ಅವಧಿಯಲ್ಲಿ ಆಸ್ಪತ್ರೆಯಲ್ಲೇ ಇದ್ದು ಬೆಳಗ್ಗೆ 9, ಮಧ್ಯಾಹ್ನ 2,3 ಮತ್ತು 4 ಗಂಟೆಗೆ ಬಯೋಮೆಟ್ರಿಕ್ ಮಾಡಬೇಕು.

ಇನ್ಮುಂದೆ ಸರಕಾರಿ ವೈದ್ಯರಿಗೆ ಬೆಳಗ್ಗೆ 9ರಿಂದ ಸಂಜೆ 4ರವರೆಗೆ ಡ್ಯೂಟಿ ಕಡ್ಡಾಯ Read More »

ಕರ್ನಾಟಕ

ಸುಳ್ಯ: ಬಾಲಕನಿಗೆ ವಾಹನ ಕೊಟ್ಟ ಪೋಷಕರಿಗೆ 25 ಸಾವಿರ ರೂ. ದಂಡ

(ನ್ಯೂಸ್ ಕಡಬ) newskadaba.com ಮಾ. 11: ಸುಳ್ಯ ಪರಿಸರದಲ್ಲಿ ಬಾಲಕ ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ವೇಳೆ ಸುಳ್ಯ ಪೊಲೀಸರು ತಡೆ ಹಿಡಿದು ಪ್ರಕರಣ ದಾಖಲಿಸಿದ್ದರು. ಸುಳ್ಯ ನ್ಯಾಯಾಲಯ ಬಾಲಕನ ಪೋಷಕರಿಗೆ 25 ಸಾವಿರ ರೂ. ದಂಡ ವಿಧಿಸಿದೆ. ಬಾಲಕನಿಗೆ ವಾಹನ ಚಾಲನೆ ಮಾಡಲು ನೀಡಿದ್ದಕ್ಕಾಗಿ ಸುಳ್ಯ ಪಿಎಸ್‌ಐ ಸಂತೋಷ್‌ ಬಿ.ಪಿ. ಅವರು ವಾಹನ ಮಾಲಕರ ವಿರುದ್ಧ ನ್ಯಾಯಾಲಯಕ್ಕೆ ದೋಷರೋಪಣ ಪಟ್ಟಿಯನ್ನು ಸಲ್ಲಿಸಿದ್ದಾರೆ.

ಸುಳ್ಯ: ಬಾಲಕನಿಗೆ ವಾಹನ ಕೊಟ್ಟ ಪೋಷಕರಿಗೆ 25 ಸಾವಿರ ರೂ. ದಂಡ Read More »

ಕರಾವಳಿ

ಶಿರಾಡಿ ಘಾಟಿಯಲ್ಲಿ ಏಕಮುಖ ಸಂಚಾರ

(ನ್ಯೂಸ್ ಕಡಬ) newskadaba.com ಮಾ. 11 ಸಕಲೇಶಪುರ: ಶಿರಾಡಿ ಘಾಟಿಯಲ್ಲಿ ಚತುಷ್ಪಥ ರಸ್ತೆ ನಿರ್ಮಾಣ ಕಾಮಗಾರಿಯನ್ನು ಜೂನ್ 30ರೊಳಗೆ ಪೂರ್ಣಗೊಳಿಸಬೇಕಿರುವ ಕಾರಣ ಒಂದು ತಿಂಗಳು ವಾಹನ ಸಂಚಾರ ಸ್ಥಗಿತಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮಾಡಿದ ಮನವಿಯನ್ನು ಜಿಲ್ಲಾಡಳಿತ ತಿರಸ್ಕರಿಸಿದ್ದು, ಪರ್ಯಾಯ ರಸ್ತೆ ವ್ಯವಸ್ಥೆ ಕಲ್ಪಿಸಿ ಕಾಮಗಾರಿಗೆ ಅವಕಾಶ ಕಲ್ಪಿಸಲು ಚಿಂತನೆ ನಡೆಸಿದೆ.‌ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ-75ರ ಕಾಮಗಾರಿಗಾಗಿ ರಸ್ತೆ ಬಂದ್‌ ಮಾಡಲು ನಾನಾ ಸಂಘಟನೆಗಳು, ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದಾರೆ. ಜಿಲ್ಲಾಡಳಿತ ಮಾರ್ಚ್ 15ರಿಂದ ಏಪ್ರಿಲ್‌ ಅಂತ್ಯದವರೆಗೆ ಶಿರಾಡಿಯಲ್ಲಿ

ಶಿರಾಡಿ ಘಾಟಿಯಲ್ಲಿ ಏಕಮುಖ ಸಂಚಾರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top