News Kadaba

ಗೃಹಜ್ಯೋತಿ ಯೋಜನೆ: ಹೊಸ ಗ್ರಾಹಕರಿಗೆ ‘ಅರ್ಧ ಜ್ಯೋತಿ’ ಭಾಗ್ಯ; ಇದರಿಂದ ಸರ್ಕಾರಕ್ಕೆ 600 ಕೋಟಿ ಉಳಿತಾಯ!

(ನ್ಯೂಸ್ ಕಡಬ) newskadaba.com ಮಾ. 03: ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿಗೆ ಷರತ್ತು ವಿಧಿಸಲಾಗಿದೆ. ಹೌದು… ಈ ಹಿಂದೆ ಪ್ರತಿ ಗೃಹ ಬಳಕೆದಾರರು ತಿಂಗಳಿಗೆ 200 ಯೂನಿಟ್‌ವರೆಗೆ ಉಚಿತ ವಿದ್ಯುತ್‌ ನ ಪೂರ್ಣ ಲಾಭ ಪಡೆಯುತ್ತಿದ್ದರು. ಆದರೆ ಇದೀಗ ಹೊಸದಾಗಿ ಮನೆ ಕಟ್ಟಿದವರು ಹಾಗೂ ಬಾಡಿಗೆ ಮನೆ ಬದಲಾಯಿಸಿದವರಿಗೆ ಈ ಲಾಭ ಸಿಗುತ್ತಿಲ್ಲ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರಚಿಸಿದ ಬಳಿಕ 2022–23ರ ಆರ್ಥಿಕ ವರ್ಷದಲ್ಲಿ ಬಳಕೆ ಮಾಡಿದ ವಿದ್ಯುತ್‌ ಯೂನಿಟ್‌ನ ಸರಾಸರಿ ಪ್ರಮಾಣ ಆಧರಿಸಿ 2023ರ […]

ಗೃಹಜ್ಯೋತಿ ಯೋಜನೆ: ಹೊಸ ಗ್ರಾಹಕರಿಗೆ ‘ಅರ್ಧ ಜ್ಯೋತಿ’ ಭಾಗ್ಯ; ಇದರಿಂದ ಸರ್ಕಾರಕ್ಕೆ 600 ಕೋಟಿ ಉಳಿತಾಯ! Read More »

ಕರ್ನಾಟಕ

‘ಗೃಹಲಕ್ಷ್ಮಿ ಯೋಜನೆಯಲ್ಲಿ ಯಾವುದೇ ಪರಿಷ್ಕರಣೆ ಮಾಡಲ್ಲ’- ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಮಾ. 03: ಗೃಹಲಕ್ಷ್ಮಿ ಯೋಜನೆಯಲ್ಲಿ ಯಾವುದೇ ಪರಿಷ್ಕರಣೆ ಮಾಡಲ್ಲ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟನೆ ನೀಡಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ನಾವು ಯಾವುದೇ ಫಿಲ್ಟರ್ ಮಾಡುತ್ತಿಲ್ಲ. ಎಲ್ಲರಿಗೂ ಹಣ ಸಿಗುತ್ತದೆ. ಯಾವುದೇ ಗೊಂದಲ ಬೇಡ, ಐದು ವರ್ಷ ಮಾತಿನಂತೆ ನಡೆಯುತ್ತೇವೆ. ಗೃಹಲಕ್ಷ್ಮಿ ನಗದು ಹಾಕುವುದು ಸಲ್ಪ ವಿಳಂಬವಾಗಿತ್ತು, ಇದೀಗ ಎಲ್ಲಾ ಸರಿಯಾಗಿದೆ. ಈಗ ಎರಡು ತಿಂಗಳ ಕಂತು ಬಿಡುಗಡೆಯಾಗುತ್ತದೆ ಎಂದು ತಿಳಿಸಿದರು. ಸಿ.ಟಿ.ರವಿ ಗಲಾಟೆ ಪ್ರಕರಣದ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ನಾನು ಇಂದು ಸದನಕ್ಕೆ ಬಂದಿದ್ದೇನೆ.

‘ಗೃಹಲಕ್ಷ್ಮಿ ಯೋಜನೆಯಲ್ಲಿ ಯಾವುದೇ ಪರಿಷ್ಕರಣೆ ಮಾಡಲ್ಲ’- ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟನೆ Read More »

ಕರ್ನಾಟಕ

ರಾಮಮಂದಿರ ಸ್ಫೋಟಿಸಲು ಸಂಚು: ಶಂಕಿತ ಉಗ್ರ ಅಬ್ದುಲ್ ರೆಹಮಾನ್ ಬಂಧಿಸಿದ ಗುಜರಾತ್ ಎಟಿಎಸ್, ಗ್ರನೇಡ್ ವಶ

(ನ್ಯೂಸ್ ಕಡಬ) newskadaba.com ಮಾ. 03: ಅಹಮದಾಬಾದ್: ಗುಜರಾತ್ ಎಟಿಎಸ್ ನಡೆಸಿದ ಪ್ರಮುಖ ಕಾರ್ಯಾಚರಣೆಯಲ್ಲಿ ಭಯೋತ್ಪಾದಕ ಸಂಘಟನೆಯೊಂದಿಗೆ ಸಂಬಂಧ ಹೊಂದಿದ್ದ ಶಂಕಿತ ಉಗ್ರ 19 ವರ್ಷದ ಅಬ್ದುಲ್ ರೆಹಮಾನ್‌ನನ್ನು ಬಂಧಿಸಲಾಗಿದೆ. ವಿಚಾರಣೆಯ ಸಮಯದಲ್ಲಿ ಸಂಗ್ರಹಿಸಲಾದ ಗುಪ್ತಚರ ಮಾಹಿತಿಯ ಮೇರೆಗೆ ದಾಳಿ ನಡೆಸಿ ಅಬ್ದುಲ್ ರೆಹಮಾನ್ ನನ್ನು ಬಂಧಿಸಲಾಗಿದೆ. ದಾಳಿ ವೇಳೆ ಪಾಳುಬಿದ್ದ ಮನೆಯೊಂದರಲ್ಲಿ ಎರಡು ಜೀವಂತ ಹ್ಯಾಂಡ್ ಗ್ರೆನೇಡ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಫರಿದಾಬಾದ್ ಪೊಲೀಸರ ಸಹಾಯದಿಂದ, ಎಟಿಎಸ್ ಸಂಪೂರ್ಣ ಶೋಧ ನಡೆಸಿ, ಸಂಭಾವ್ಯ ಭಯೋತ್ಪಾದಕ ದಾಳಿಯನ್ನು ವಿಫಲಗೊಳಿಸಿದೆ. ಅಬ್ದುಲ್ ರೆಹಮಾನ್‌ನ ಭಯೋತ್ಪಾದಕ ಸಂಪರ್ಕಗಳ ಕುರಿತು

ರಾಮಮಂದಿರ ಸ್ಫೋಟಿಸಲು ಸಂಚು: ಶಂಕಿತ ಉಗ್ರ ಅಬ್ದುಲ್ ರೆಹಮಾನ್ ಬಂಧಿಸಿದ ಗುಜರಾತ್ ಎಟಿಎಸ್, ಗ್ರನೇಡ್ ವಶ Read More »

ಬ್ರೇಕಿಂಗ್ ನ್ಯೂಸ್

ದೃಷ್ಟಿಹೀನರು ನ್ಯಾಯಾಧೀಶರಾಗಲು ಸುಪ್ರೀಂ ಕೋರ್ಟ್ ಅನುಮತಿ

(ನ್ಯೂಸ್ ಕಡಬ) newskadaba.com ಮಾ. 03: ಸೋಮವಾರ ಸುಪ್ರೀಂ ಕೋರ್ಟ್, ದೃಷ್ಟಿಹೀನರು ನ್ಯಾಯಾಧೀಶರಾಗಲು ಅರ್ಹರು ಎಂದು ತೀರ್ಪು ನೀಡಿದ್ದು, ಮಧ್ಯಪ್ರದೇಶ ನ್ಯಾಯಾಂಗ ಸೇವೆಗಳ ನಿಯಮವನ್ನು ರದ್ದುಗೊಳಿಸಿದೆ. ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದಿವಾಲಾ ಮತ್ತು ನ್ಯಾಯಮೂರ್ತಿ ಆರ್. ಮಹಾದೇವನ್ ಅವರ ಪೀಠವು, ಅಂಗವೈಕಲ್ಯದ ಕಾರಣ ಯಾವುದೇ ಅಭ್ಯರ್ಥಿಗೆ ನ್ಯಾಯಾಂಗ ಸೇವೆಗಳಲ್ಲಿ ನೇಮಕಾತಿಗೆ ಹಾಜರಾಗಲು ಅವಕಾಶವನ್ನು ನಿರಾಕರಿಸಲಾಗುವುದಿಲ್ಲ ಎಂದು ಹೇಳಿದೆ. ನ್ಯಾಯಾಂಗ ಸೇವೆಗಳಿಗೆ ನೇಮಕಾತಿ ಪ್ರಕ್ರಿಯೆಯಲ್ಲಿ ದೃಷ್ಟಿಹೀನ ವ್ಯಕ್ತಿಗಳು ಭಾಗವಹಿಸುವುದನ್ನು ನಿಷೇಧಿಸಲಾಗಿರುವ ಮಧ್ಯಪ್ರದೇಶ ನ್ಯಾಯಾಂಗ ಸೇವೆಗಳ ನಿಯಮಗಳನ್ನು (6A) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್

ದೃಷ್ಟಿಹೀನರು ನ್ಯಾಯಾಧೀಶರಾಗಲು ಸುಪ್ರೀಂ ಕೋರ್ಟ್ ಅನುಮತಿ Read More »

ಬ್ರೇಕಿಂಗ್ ನ್ಯೂಸ್

ಕಾಂಗ್ರೆಸ್ ಕಾರ್ಯಕರ್ತನಿಗೆ ಹಲ್ಲೆ ಆರೋಪ: ಶಾಸಕ ವೇದವ್ಯಾಸ ಕಾಮತ್ ಸಹಿತ 12 ಮಂದಿ ವಿರುದ್ಧ ಎಫ್.ಐ.ಆರ್. ದಾಖಲು

(ನ್ಯೂಸ್ ಕಡಬ) newskadaba.com ಮಾ. 03: ಮಂಗಳೂರು: ಕಾಂಗ್ರೆಸ್ ಕಾರ್ಯಕರ್ತರೊಬ್ಬರ ಮೇಲೆ ನಡೆದಿರುವ ಹಲ್ಲೆ ಆರೋಪಕ್ಕೆ ಸಂಬಂಧಿಸಿ ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಹಾಗೂ ಅವರ ಬೆಂಬಲಿಗರೆನ್ನಲಾದ 11 ಮಂದಿ ವಿರುದ್ಧ ಕಂಕನಾಡಿ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್. ದಾಖಲಾಗಿದೆ. ಕಾಂಗ್ರೆಸ್ ಕಾರ್ಯಕರ್ತ ಯಶವಂತ ಪ್ರಭು ಎಂಬವರು ನೀಡಿರುವ ದೂರಿನಂತೆ ಪ್ರಕರಣ ದಾಖಲಾಗಿದೆ. ಹಲ್ಲೆ ನಡೆದ ಸಂದರ್ಭ ಸ್ಥಳದಲ್ಲಿದ್ದ ಶಾಸಕ ವೇದವ್ಯಾಸ ಕಾಮತ್, “ಆತನ ಕೈ ಕಾಲು ಮುರಿಯಿರಿ” ಹಲ್ಲೆ ಆರೋಪಿಗಳಿಗೆ ದುಷ್ಪ್ರೇರಣೆ ನೀಡಿದ್ದಾರೆ ಎಂದು ಯಶವಂತ ಪ್ರಭು ದೂರಿನಲ್ಲಿ

ಕಾಂಗ್ರೆಸ್ ಕಾರ್ಯಕರ್ತನಿಗೆ ಹಲ್ಲೆ ಆರೋಪ: ಶಾಸಕ ವೇದವ್ಯಾಸ ಕಾಮತ್ ಸಹಿತ 12 ಮಂದಿ ವಿರುದ್ಧ ಎಫ್.ಐ.ಆರ್. ದಾಖಲು Read More »

ಕರ್ನಾಟಕ

ಇಂದಿನಿಂದ ರಾಜ್ಯ ಬಜೆಟ್ ಅಧಿವೇಶನ: ಮೊದಲ ದಿನವೇ ಪ್ರತಿಭಟನೆಗೆ ಬಿಜೆಪಿ ಮುಂದು!

(ನ್ಯೂಸ್ ಕಡಬ) newskadaba.com ಮಾ. 03 ಬೆಂಗಳೂರು: ಇಂದಿನಿಂದ ರಾಜ್ಯ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಮೊದಲ ದಿನವೇ ಪ್ರತಿಭಟನೆಗೆ ಪ್ರತಿಪಕ್ಷ ಬಿಜೆಪಿ ಸಜ್ಜಾಗಿದೆ. ರಾಜ್ಯಪಾಲರ ಅಧಿಕಾರ ಮೊಟಕುಗೊಳಿಸುವ ಕಾಂಗ್ರೆಸ್ ಸರ್ಕಾರದ ಕ್ರಮದ ವಿರುದ್ಧ ಶಾಸಕರ ಭವನದಿಂದ ವಿಧಾನಸೌಧದವರೆಗೆ ಪಾದಯಾತ್ರೆ ನಡೆಸಲು ಯೋಜಿಸಿದೆ. ವಿಧಾನಸೌಧದಲ್ಲಿ ಇಂದು ರಾಜ್ಯಪಾಲರು ವಿಧಾನಮಂಡಲದ ಜಂಟಿ ಅಧಿವೇಶನವನ್ನುದ್ದೇಶಿಸಿ ಭಾಷಣ ಮಾಡುವುದರೊಂದಿಗೆ ಆರಂಭವಾಗುವ ಬಜೆಟ್ ಅಧಿವೇಶನ, ಮಾರ್ಚ್ 21 ರಂದು ಕೊನೆಗೊಳ್ಳಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾರ್ಚ್ 7 ರಂದು ತಮ್ಮ 16 ನೇ ಬಜೆಟ್ ಮಂಡಿಸಲಿದ್ದಾರೆ. ಅದೇ ದಿನ, ಕೇಸರಿ

ಇಂದಿನಿಂದ ರಾಜ್ಯ ಬಜೆಟ್ ಅಧಿವೇಶನ: ಮೊದಲ ದಿನವೇ ಪ್ರತಿಭಟನೆಗೆ ಬಿಜೆಪಿ ಮುಂದು! Read More »

ಕರ್ನಾಟಕ

2,000 ರೂಪಾಯಿ ಬಳಿಕ ಮತ್ತೆ ಇಳಿಕೆಯಾದ ಚಿನ್ನದ ದರ

(ನ್ಯೂಸ್ ಕಡಬ) newskadaba.com ಮಾ. 03 ಮಾರ್ಚ್  1ರಂದು 22 ಕ್ಯಾರಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ 2,000 ರೂ,ಗಳಷ್ಟು ಇಳಿಕೆಯಾಗಿತ್ತು. ಭಾನುವಾರ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಯಾವುದೇ ವ್ಯತ್ಯಾಸ ಕಂಡು ಬಂದಿರಲಿಲ್ಲ. ಇಂದು ಮತ್ತೆ ಚಿನ್ನದ ಬೆಲೆಯಲ್ಲಿ ಇಳಿಕೆಯಾಗಿದೆ. 22 ಕ್ಯಾರಟ್ ಚಿನ್ನದ ಬೆಲೆ 1 ಗ್ರಾಂ: 7,939 ರೂಪಾಯಿ 8 ಗ್ರಾಂ: 63,512 ರೂಪಾಯಿ 10 ಗ್ರಾಂ: 79,390 ರೂಪಾಯಿ 100 ಗ್ರಾಂ: 7,93,900 ರೂಪಾಯಿ 24 ಕ್ಯಾರಟ್ ಚಿನ್ನದ ಬೆಲೆ 1 ಗ್ರಾಂ: 8,661 ರೂಪಾಯಿ

2,000 ರೂಪಾಯಿ ಬಳಿಕ ಮತ್ತೆ ಇಳಿಕೆಯಾದ ಚಿನ್ನದ ದರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸೂಟ್‌ಕೇಸ್‌ನಲ್ಲಿ ಕಾಂಗ್ರೆಸ್ ಕಾರ್ಯಕರ್ತೆ ಶವ ಪತ್ತೆ ಪ್ರಕರಣ – ಓರ್ವನ ಬಂಧನ

(ನ್ಯೂಸ್ ಕಡಬ) newskadaba.com ಮಾ. 03 ಕೇರಳ: ಭತ್ತದ ಗದ್ದೆಯಲ್ಲಿ ಮೀನು ಹಿಡಿಯುತ್ತಿದ್ದಾಗ ಮೀನುವೊಂದು ಗಂಟಲೊಳಗೆ ಹೋಗಿ ಯುವಕನೋರ್ವ ಸಾವನ್ನಪ್ಪಿರುವ ಘಟನೆ ಆಲಪ್ಪುಳ ಸಮೀಪದ ಕಾಯಂಕುಲಂನಲ್ಲಿ ಭಾನುವಾರ ನಡೆದಿದೆ. ಮೃತ ಯುವಕನನ್ನು ಪುತ್ತುಪ್ಪಲ್ಲಿಯ ಆದರ್ಶ್ ಅಲಿಯಾಸ್ ಉನ್ನಿ (25) ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಂಜೆ 4.30ರ ಸುಮಾರಿಗೆ ತನ್ನ ಸ್ನೇಹಿತರೊಂದಿಗೆ ಗದ್ದೆಗೆ ನೀರು ಹಾಯಿಸಿ ಮೀನು ಹಿಡಿಯುತ್ತಿದ್ದಾಗ ಈ ಘಟನೆ ನಡೆದಿದೆ. ಇನ್ನೊಂದು ಮೀನನ್ನು ಹಿಡಿಯಲು ಯತ್ನಿಸುತ್ತಿದ್ದಾಗ ಮೀನೊಂದು ಆತನ ಬಾಯಿ ಕಚ್ಚಿಕೊಂಡು ಗಂಟಲೊಳಗೆ ಹೋಗಿ ಸಿಲುಕಿಕೊಂಡಿದೆ. ಕೂಡಲೇ ಯುವಕನನ್ನು

ಸೂಟ್‌ಕೇಸ್‌ನಲ್ಲಿ ಕಾಂಗ್ರೆಸ್ ಕಾರ್ಯಕರ್ತೆ ಶವ ಪತ್ತೆ ಪ್ರಕರಣ – ಓರ್ವನ ಬಂಧನ Read More »

ಕರ್ನಾಟಕ

ಸೂಟ್‌ಕೇಸ್‌ನಲ್ಲಿ ಕಾಂಗ್ರೆಸ್ ಕಾರ್ಯಕರ್ತೆ ಶವ ಪತ್ತೆ ಪ್ರಕರಣ – ಓರ್ವನ ಬಂಧನ

(ನ್ಯೂಸ್ ಕಡಬ) newskadaba.com ಮಾ. 03: ಶನಿವಾರ ಸೂಟ್‌ಕೇಸ್‌ನಲ್ಲಿ ಕಾಂಗ್ರೆಸ್ ಕಾರ್ಯಕರ್ತೆ ಹಿಮಾನಿ ನರ್ವಾಲ್ ಅವರ ಶವ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ. ಬಹದ್ದೂರ್‌ಗಢ ನಿವಾಸಿಯಾದ ಶಂಕಿತ ವ್ಯಕ್ತಿ ನರ್ವಾಲ್‌ನ ಸ್ನೇಹಿತ ಬಂಧಿತ ಎಂದು ಮೂಲಗಳು ತಿಳಿಸಿವೆ. ಮೂಲಗಳ ಪ್ರಕಾರ, ಆಕೆಯ ಮೊಬೈಲ್ ಫೋನ್ ಮತ್ತು ಆಭರಣಗಳನ್ನು ಸಹ ಆತನಿಂದ ವಶಪಡಿಸಿಕೊಳ್ಳಲಾಗಿದೆ. 20ರ ಹರೆಯದ ನರ್ವಾಲ್ ಅವರ ಮೃತದೇಹ ರೋಹ್ಟಕ್‌ನಲ್ಲಿ ಸೂಟ್‌ಕೇಸ್‌ನಲ್ಲಿ ತುಂಬಿ ಪತ್ತೆಯಾಗಿದ್ದು, ನಂತರ ಹರಿಯಾಣ ಪೊಲೀಸರು ತನಿಖೆಗಾಗಿ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸಿದರು. ರೋಹ್ಟಕ್‌ನ

ಸೂಟ್‌ಕೇಸ್‌ನಲ್ಲಿ ಕಾಂಗ್ರೆಸ್ ಕಾರ್ಯಕರ್ತೆ ಶವ ಪತ್ತೆ ಪ್ರಕರಣ – ಓರ್ವನ ಬಂಧನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಗಳ ನಡುವೆ ಮಾರಾಮಾರಿ; 16 ವರ್ಷದ ಬಾಲಕ ಸಾವು

(ನ್ಯೂಸ್ ಕಡಬ) newskadaba.com ಮಾ. 01 ರುವನಂತಪುರಂ: ಕೇರಳದ ಕೋಝಿಕ್ಕೋಡ್‌ ಜಿಲ್ಲೆಯಲ್ಲಿ ನಡೆದ ಫೇರ್ ವೆಲ್ ಪಾರ್ಟಿಯೊಂದರ ವೇಳೆ ಕಾಣಿಸಿಕೊಂಡ ಜಗಳ ಕೊಲೆಯಲ್ಲಿ ಅಂತ್ಯಗೊಂಡಿದೆ. ಸಣ್ಣ ಜಗಳ ದುರಂತ ತಿರುವು ಪಡೆದುಕೊಂಡು 16 ವರ್ಷದ ಬಾಲಕ ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿದ್ದಾನೆ. 10ನೇ ತರಗತಿಯ ವಿದ್ಯಾರ್ಥಿ ಮೊಹಮ್ಮದ್ ಶಹಬಾಸ್ (16) ಅಸುನೀಗಿದ ದುರ್ದೈವಿ ಆಗಿದ್ದು, ಕೋಝಿಕ್ಕೋಡ್ ಜಿಲ್ಲೆಯ ಖಾಸಗಿ ಟ್ಯೂಷನ್ ಸೆಂಟರ್ ಬಳಿ ವಿದ್ಯಾರ್ಥಿಗಳ ನಡುವೆ ಹೊಡೆದಾಟ ನಡೆದ ವೇಳೆ ಆತ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.

ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಗಳ ನಡುವೆ ಮಾರಾಮಾರಿ; 16 ವರ್ಷದ ಬಾಲಕ ಸಾವು Read More »

ಕರ್ನಾಟಕ
Scroll to Top