News Kadaba

ಪುಣೆ: ಅತ್ಯಾಚಾರ ಪ್ರಕರಣ-ಮಾರ್ಚ್ 12 ರವರೆಗೆ ಆರೋಪಿ ಪೊಲೀಸ್ ಕಸ್ಟಡಿಗೆ

(ನ್ಯೂಸ್ ಕಡಬ) newskadaba.com ಮಾ. 01 ಮುಂಬೈ: ಪುಣೆಯ ಸ್ವರ್ಗೇಟ್ ಡಿಪೋದಲ್ಲಿ ನಿಂತಿರುವ ಸರ್ಕಾರಿ ಬಸ್ಸಿನೊಳಗೆ 26 ವರ್ಷದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಯನ್ನು ಪುಣೆ ಅಪರಾಧ ವಿಭಾಗದ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಆರೋಪಿಯನ್ನು ಪುಣೆಯ ಗುನಾತ್ ಗ್ರಾಮದ ದತ್ತಾತ್ರಯ ರಾಮದಾಸ್ ಗಡೆ (37) ಎಂದು ಗುರುತಿಸಲಾಗಿದ್ದು, ಪೊಲೀಸರು ಶುಕ್ರವಾರ ಸಂಜೆ 6.15 ರ ಸುಮಾರಿಗೆ ಆರೋಪಿಯನ್ನು ನ್ಯಾಯಾಂಗ ಮ್ಯಾಜಿಸ್ಟ್ರೇಟ್ (ಪ್ರಥಮ ದರ್ಜೆ) ಟಿಎಸ್ ಗೈಗೋಲ್ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ಆರೋಪಿ ದತ್ತಾತ್ರೇಯ ಗಡೆಯನ್ನು ಮಾರ್ಚ್ 12 ರವರೆಗೆ ಪೊಲೀಸ್ […]

ಪುಣೆ: ಅತ್ಯಾಚಾರ ಪ್ರಕರಣ-ಮಾರ್ಚ್ 12 ರವರೆಗೆ ಆರೋಪಿ ಪೊಲೀಸ್ ಕಸ್ಟಡಿಗೆ Read More »

ಕರ್ನಾಟಕ

ಗ್ರಾಹಕರಿಗೆ ಶಾಕ್‌ ಮೇಲೆ ಶಾಕ್‌; ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್ ದರ ಏರಿಕೆ

(ನ್ಯೂಸ್ ಕಡಬ) newskadaba.com ಮಾ. 01 ನವದೆಹಲಿ: ತೈಲ ಮಾರುಕಟ್ಟೆ ಕಂಪನಿಗಳು ದೇಶದಾದ್ಯಂತ ವಾಣಿಜ್ಯ LPG ಸಿಲಿಂಡರ್‌ಗಳ (LPG Price Hike) ಬೆಲೆಯಲ್ಲಿ 6 ರೂ.ಗಳ ಹೆಚ್ಚಳವನ್ನು ಘೋಷಿಸಿದ್ದು, ಇದು ಮಾರ್ಚ್ 1 ರ ಶನಿವಾರದಿಂದ ಜಾರಿಗೆ ಬರುತ್ತದೆ. ದೆಹಲಿಯಲ್ಲಿ 19 ಕೆಜಿ ವಾಣಿಜ್ಯ LPG ಸಿಲಿಂಡರ್‌ನ ಬೆಲೆ 1,797 ರೂ.ಗಳಿಂದ 1,803 ರೂ.ಗಳಿಗೆ ಏರಿಕೆಯಾಗಿದೆ. ಸಿಲಿಂಡರ್​ನ ಬೆಲೆ ಏರಿಕೆ ಮಾಡಿರುವುದು ಗ್ರಾಹಕರಿಗೆ ಶಾಕ್ ನೀಡಿದಂತಾಗಿದೆ. ಇಂಡಿಯನ್ ಆಯಿಲ್ ಇಂದಿನಿಂದ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆಯನ್ನು 6 ರೂ. ಹೆಚ್ಚಿಸಿದ್ದು, ಈ

ಗ್ರಾಹಕರಿಗೆ ಶಾಕ್‌ ಮೇಲೆ ಶಾಕ್‌; ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್ ದರ ಏರಿಕೆ Read More »

ಕರ್ನಾಟಕ

ಆಭರಣಪ್ರಿಯರಿಗೆ ಗುಡ್‌ನ್ಯೂಸ್‌; ಚಿನ್ನದ ಬೆಲೆ ಮತ್ತೆ ಇಳಿಕೆ

(ನ್ಯೂಸ್ ಕಡಬ) newskadaba.com ಮಾ. 01 ಬೆಂಗಳೂರು: ಕೆಲವು ದಿನಗಳಿಂದ ಏರುಮುಖವಾಗಿ ಸಾಗುತ್ತಲೇ ಇದ್ದ ಚಿನ್ನದ ದರ ಇದೀಗ ಇಳಿಕೆಯತ್ತ ಸಾಗಿದೆ. ಶುಕ್ರವಾರ ಕಡಿಮೆಯಾಗಿದ್ದ ಚಿನ್ನದ ದರ ಇಂದು ಕೂಡ (ಮಾ. 1) ಕೊಂಚ ಅಗ್ಗವಾಗಿದೆ . ಶನಿವಾರ 22 ಕ್ಯಾರಟ್‌ ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ ಕ್ರಮವಾಗಿ 20 ರೂ. ಮತ್ತು 22 ರೂ. ಇಳಿಕೆಯಾಗಿದೆ. ಆ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,940 ರೂ.ಗೆ ತಲುಪಿದರೆ, 24 ಕ್ಯಾರಟ್‌ನ 1

ಆಭರಣಪ್ರಿಯರಿಗೆ ಗುಡ್‌ನ್ಯೂಸ್‌; ಚಿನ್ನದ ಬೆಲೆ ಮತ್ತೆ ಇಳಿಕೆ Read More »

ಕರ್ನಾಟಕ

ರಾಜ್ಯಗಳ ತೆರಿಗೆ ಪಾಲು ಕಡಿತಕ್ಕೆ ಚಿಂತನೆ: ಅನ್ಯಾಯವಾದರೆ ಬೀದಿಗಿಳಿದು ಹೋರಾಟ; ಕೇಂದ್ರ ಸರ್ಕಾರಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಮಾ. 01 ಬೆಂಗಳೂರು: ರಾಜ್ಯಗಳ ತೆರಿಗೆ ಹಂಚಿಕೆಯನ್ನು ಶೇ 41 ರಿಂದ ಶೇ 40 ಕ್ಕೆ ಕಡಿತಗೊಳಿಸಲು ಎನ್‌ಡಿಎ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಹೇಳಲಾಗುತ್ತಿದ್ದು. ಈ ಬೆಳವಣಿಗೆ ರಾಜ್ಯ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿದೆ. ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ತೆರಿಗೆ ಹಂಚಿಕೆ ವಿಚಾರದಲ್ಲಿ ರಾಜ್ಯಕ್ಕಾಗುತ್ತಿರುವ ಅನ್ಯಾಯವನ್ನು ಮನವಿ-ಮಾತುಕತೆ ಮೂಲಕ ಪರಿಹರಿಸಲು ನಡೆಸುತ್ತಿರುವ ಪ್ರಯತ್ನ ವಿಫಲವಾದಲ್ಲಿ ಬೀದಿಗಿಳಿದು ಹೋರಾಟ ನಡೆಸಬೇಕಾಗುತ್ತದೆ ಎಂದು ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ರಾಜ್ಯಕ್ಕೆ ನ್ಯಾಯಬದ್ಧವಾಗಿ ನೀಡಬೇಕಾಗಿರುವ ತೆರಿಗೆ

ರಾಜ್ಯಗಳ ತೆರಿಗೆ ಪಾಲು ಕಡಿತಕ್ಕೆ ಚಿಂತನೆ: ಅನ್ಯಾಯವಾದರೆ ಬೀದಿಗಿಳಿದು ಹೋರಾಟ; ಕೇಂದ್ರ ಸರ್ಕಾರಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ Read More »

ಕರ್ನಾಟಕ

ಬಂಟ್ವಾಳ: ಪಿಯುಸಿ ವಿದ್ಯಾರ್ಥಿ ನಾಪತ್ತೆ ಪ್ರಕರಣ: ಫರಂಗಿಪೇಟೆ ಜಂಕ್ಷನ್ ನಲ್ಲಿ ಬೃಹತ್ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಮಾ. 01 ಫರಂಗಿಪೇಟೆ ಸಮೀಪದ ಕಿದೆಬೆಟ್ಟು ಪದ್ಮನಾಭ ಮಡಿವಾಳ ಅವರ ಮಗ ಪಿಯುಸಿ ವಿದ್ಯಾರ್ಥಿ ದಿಗಂತ್ ಅವರ ನಿಗೂಡ ನಾಪತ್ತೆಯಾಗಿ 5 ದಿನಗಳು ಕಳೆದರೂ ಪೊಲೀಸ್ ಇಲಾಖೆ ಹಾಗೂ ಸರಕಾರದ ಯಾವುದೇ ರೀತಿಯ ಕಾರ್ಯಾಚರಣೆ ಯಶಸ್ವಿ ಕಾಣದೆ ಇರುವುದರಿಂದ ಸಾರ್ವಜನಿಕರು ಹಾಗೂ ವಿವಿಧ ಸಂಘಟನೆಗಳ ವತಿಯಿಂದ ಫರಂಗಿಪೇಟೆ ಜಂಕ್ಷನ್ ನಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.

ಬಂಟ್ವಾಳ: ಪಿಯುಸಿ ವಿದ್ಯಾರ್ಥಿ ನಾಪತ್ತೆ ಪ್ರಕರಣ: ಫರಂಗಿಪೇಟೆ ಜಂಕ್ಷನ್ ನಲ್ಲಿ ಬೃಹತ್ ಪ್ರತಿಭಟನೆ Read More »

ಕರಾವಳಿ

ಬಿಜೆಪಿ ರಾಜ್ಯಾಧ್ಯಕ್ಷ BY ವಿಜಯೇಂದ್ರ ಕಾರಿಗೆ ಲಾರಿ ಢಿಕ್ಕಿ

(ನ್ಯೂಸ್ ಕಡಬ) newskadaba.com ಮಾ. 01 ಚಿಕ್ಕಮಗಳೂರು: ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರ ಕಾರಿಗೆ ಲಾರಿಯೊಂದು ಢಿಕ್ಕಿ ಹೊಡೆದಿದೆ. ಚಿಕ್ಕಮಗಳೂರು ತಾಲೂಕಿನ ಲಕ್ಯಾ ಕ್ರಾಸ್ ಬಳಿ ಈ ಅಪಘಾತ ಸಂಭವಿಸಿದ್ದು, ಶುಕ್ರವಾರ ಬಸವ ತತ್ವ ಕಾರ್ಯಕ್ರಮ ಮುಗಿಸಿ ವಾಪಸ್ ಚಿಕ್ಕಮಗಳೂರು ನಗರದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ ಎನ್ನಲಾಗಿದೆ. ಲಾರಿ ಢಿಕ್ಕಿ ಹೊಡೆದ ರಭಸಕ್ಕೆ ಕಾರಿನ ಹಿಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಇನ್ನು ಅಪಘಾತದಲ್ಲಿ ಅದೃಷ್ಟವಶಾತ್​ವಿಜಯೇಂದ್ರ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವಿಜಯೇಂದ್ರ ಅವರು ಬೇರೊಂದು ಕಾರಿನಲ್ಲಿ ಪ್ರಯಾಣಿಸುತ್ತಿದ್ದರಿಂದ ಅವರು ಅಪಘಾತದಿಂದ

ಬಿಜೆಪಿ ರಾಜ್ಯಾಧ್ಯಕ್ಷ BY ವಿಜಯೇಂದ್ರ ಕಾರಿಗೆ ಲಾರಿ ಢಿಕ್ಕಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನಿಂದ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಆರಂಭ

(ನ್ಯೂಸ್ ಕಡಬ) newskadaba.com ಮಾ. 01 ಬೆಂಗಳೂರು : ಮಾರ್ಚ್ 1 ರ ಇಂದಿನಿಂದ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಆರಂಭವಾಗಲಿದ್ದು, ಈ ಬಾರಿ ನಾನಾ ದೇಶಗಳ ಹಾಗೂ ನಿರ್ದೇಶಕರ 400 ಸಿನಿಮಾಗಳು ಪ್ರದರ್ಶನಗೊಳ್ಳಲಿದೆ. ಇಂದು ಸಂಜೆ 5 ಗಂಟೆಗೆ ವಿಧಾನಸೌಧದ ಮುಂಭಾಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟಿಸಲಿದ್ದಾರೆ. ಡಿಸಿಎಂ ಡಿ.ಕೆ. ಶಿವಕುಮಾರ್ ಭಾಗವಹಿಸಲಿದ್ದು, ಚಿತ್ರೋತ್ಸವಕ್ಕೆ ಸಂಬಂಧಿಸಿದ ಐದು ಪುಸ್ತಕಗಳನ್ನು ನಟ ಶಿವರಾಜ್ ಕುಮಾರ್ ಬಿಡುಗಡೆ ಮಾಡಲಿದ್ದಾರೆ. ಅಂತರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿ ಕಿಶೋರ್ ಕುಮಾರ್ ವಿಶೇಷ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸಂಜೆ 5 ಖ್ಯಾತ

ಇಂದಿನಿಂದ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಆರಂಭ Read More »

ಕರ್ನಾಟಕ

ದೆಹಲಿ ರೈಲ್ವೆ ನಿಲ್ದಾಣದಲ್ಲಿ ಕಾಲ್ತುಳಿತ ಕೇಸ್‌: ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್

(ನ್ಯೂಸ್ ಕಡಬ) newskadaba.com ಫೆ. 28 ಬೆಂಗಳೂರು: ದೆಹಲಿ ರೈಲ್ವೆ ನಿಲ್ದಾಣದಲ್ಲಿಸಂಭವಿಸಿದ್ದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆ ಮತ್ತು ಜನಸಂದಣಿ ನಿರ್ವಹಣೆಗೆ ಸಂಬಂಧಿಸಿದ ನಿಯಮಗಳನ್ನು ಸರಿಯಾಗಿ ಅನುಷ್ಠಾನಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಈ ಕಾಲ್ತುಳಿತ ಪ್ರಕರಣದಲ್ಲಿ 18 ಮಂದಿ ಸಾವನ್ನಪ್ಪಿದ್ದಾರೆ ಎಂದು ರೈಲ್ವೆ ಇಲಾಖೆ ಹೇಳಿದೆ. ಹೀಗಾಗಿ ಎಲ್ಲ ರಾಜ್ಯಗಳಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆ ಮತ್ತು ಜನಸಂದಣಿ ನಿರ್ವಹಣೆಗೆ ಸಂಬಂಧಿಸಿದ ನಿಯಮಗಳನ್ನು ಸರಿಯಾಗಿ ಅನುಷ್ಠಾನಗೊಳಿಸುವಂತೆ ಮತ್ತು ನಿರ್ದೇಶನ ನೀಡುವಂತೆ ಆನಂದ್ ಕಾನೂನು ನೆರವು

ದೆಹಲಿ ರೈಲ್ವೆ ನಿಲ್ದಾಣದಲ್ಲಿ ಕಾಲ್ತುಳಿತ ಕೇಸ್‌: ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್ Read More »

ಬ್ರೇಕಿಂಗ್ ನ್ಯೂಸ್

ಮಾರ್ಚ್ 3 ರಂದು ರಾಜಭವನಕ್ಕೆ ಮುತ್ತಿಗೆ; ಮಾ. 22 ರಂದು ಕರ್ನಾಟಕ ಬಂದ್

(ನ್ಯೂಸ್ ಕಡಬ) newskadaba.com ಫೆ. 28 ಬೆಂಗಳೂರು:  ಬೆಳಗಾವಿ, ಮರಾಠಿ ವಿಚಾರಕ್ಕೆ ಸಂಬಂಧಿಸಿದಂತೆ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರು ಶುಕ್ರವಾರ ಸಾಲು ಸಾಲು ಪ್ರತಿಭಟನೆಗೆ ಕರೆ ನೀಡಿದ್ದು, ಮಾರ್ಚ್ 3 ರಂದು ರಾಜಭವನಕ್ಕೆ ಮುತ್ತಿಗೆ ಹಾಕುವುದಾಗಿ ಹಾಗೂ ಮಾರ್ಚ್ 22 ರಂದು ಅಖಂಡ ಕರ್ನಾಟಕ ಬಂದ್ ಮಾಡುವುದಾಗಿ ಘೋಷಿಸಿದ್ದಾರೆ. ಇಂದು ಬೆಂಗಳೂರಿನಲ್ಲಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ನಡೆದ ಕನ್ನಡಪರ ಸಂಘಟನೆಗಳ ಸಭೆಯಲ್ಲಿ ಮಾರ್ಚ್ 22 ರಂದು ಕರ್ನಾಟಕ ಬಂದ್ ಗೆ ಕರೆ ನೀಡಲು ನಿರ್ಧರಿಸಲಾಗಿದೆ. ಮಾರ್ಚ್ 3 ರಂದು ರಾಜಭವನಕ್ಕೆ

ಮಾರ್ಚ್ 3 ರಂದು ರಾಜಭವನಕ್ಕೆ ಮುತ್ತಿಗೆ; ಮಾ. 22 ರಂದು ಕರ್ನಾಟಕ ಬಂದ್ Read More »

ಕರ್ನಾಟಕ

ಉತ್ತರಾಖಂಡದಲ್ಲಿ ಹಿಮಪಾತ- 50ಕ್ಕೂ ಹೆಚ್ಚು ಕಾರ್ಮಿಕರು ಸಿಲುಕಿರುವ ಸಾಧ್ಯತೆ

(ನ್ಯೂಸ್ ಕಡಬ) newskadaba.com ಫೆ. 28 ಬೆಂಗಳೂರು:  ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಹಿಮಪಾತ ಸಂಭವಿಸಿದ್ದು, ಮಾನಾ ಗ್ರಾಮದಲ್ಲಿ 57 ಕಾರ್ಮಿಕರು ಸಿಲುಕಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ. 10 ಕಾರ್ಮಿಕರು ಸುರಕ್ಷಿತವಾಗಿ ಹೊರಬಂದಿದ್ದಾರೆ. ಇನ್ನುಳಿದ ಕಾರ್ಮಿಕರ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್), ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್), ಜಿಲ್ಲಾಡಳಿತ, ಇಂಡೋ-ಟಿಬೆಟಿಯನ್ ಗಡಿ ಪೊಲೀಸ್ (ಐಡಿಬಿಪಿ) ಮತ್ತು ಗಡಿ ರಸ್ತೆ ಸಂಸ್ಥೆ (ಬಿಆರ್‌ಒ) ತಂಡಗಳು ಸ್ಥಳದಲ್ಲಿ ಕಾರ್ಮಿಕರ ಕಾರ್ಯಾಚರಣೆ ನಡೆಸುತ್ತಿವೆ.

ಉತ್ತರಾಖಂಡದಲ್ಲಿ ಹಿಮಪಾತ- 50ಕ್ಕೂ ಹೆಚ್ಚು ಕಾರ್ಮಿಕರು ಸಿಲುಕಿರುವ ಸಾಧ್ಯತೆ Read More »

ಬ್ರೇಕಿಂಗ್ ನ್ಯೂಸ್
Scroll to Top