News Kadaba

ಸೆಬಿ ಮುಖ್ಯಸ್ಥರಾಗಿ ತುಹಿನ್ ಕಾಂತ ಪಾಂಡೆ ನೇಮಕ

(ನ್ಯೂಸ್ ಕಡಬ) newskadaba.com ಫೆ. 28 ಬೆಂಗಳೂರು: ಭಾರತೀಯ ಷೇರುಪೇಟೆ ನಿಯಂತ್ರಣ ಮಂಡಳಿ(ಸೆಬಿ) ಮುಖ್ಯಸ್ಥರಾಗಿ ತುಹಿನ್ ಕಾಂತ ಪಾಂಡೆ ಅವರನ್ನು ಕೇಂದ್ರ ಸರ್ಕಾರ ಗುರುವಾರ ನೇಮಕ ಮಾಡಿದೆ. ಒಡಿಶಾ ಕೇಡರ್ ನ 1987ನೇ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿರುವ ತುಹಿನ್ ಕಾಂತ ಪಾಂಡೆ ಅವರನ್ನು ಸೆಬಿಯ 11ನೇ ಮುಖ್ಯಸ್ಥರಾಗಲಿದ್ದಾರೆ. ಸಂಪುಟದ ನೇಮಕಾತಿ ಸಮಿತಿಯ ಅನುಮೋದನೆಯ ನಂತರ, ಹಣಕಾಸು ಕಾರ್ಯದರ್ಶಿ ಪಾಂಡೆ ಅವರನ್ನು ಮೂರು ವರ್ಷಗಳ ಅವಧಿಗೆ ಸೆಬಿ ಮುಖ್ಯಸ್ಥರಾಗಿ ನೇಮಕ ಮಾಡಲಾಗಿದೆ. ಸೆಬಿ ಹಾಲಿ ಮುಖ್ಯಸ್ಥರಾಗಿರುವ ಮಾಧಬಿ ಪುರಿ […]

ಸೆಬಿ ಮುಖ್ಯಸ್ಥರಾಗಿ ತುಹಿನ್ ಕಾಂತ ಪಾಂಡೆ ನೇಮಕ Read More »

ಬ್ರೇಕಿಂಗ್ ನ್ಯೂಸ್

ಮಾರ್ಚ್ 1 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಪ್ರಾರಂಭ

(ನ್ಯೂಸ್ ಕಡಬ) newskadaba.com ಫೆ. 28 ಬೆಂಗಳೂರು: ರಾಜ್ಯದಲ್ಲಿ ಮಾರ್ಚ್ 1 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಪ್ರಾರಂಭವಾಗಲಿದ್ದು, ಮಾರ್ಚ್ 20ರ ವರೆಗೆ ಪರೀಕ್ಷೆ ನಡೆಯಲಿದೆ. ಈ ಬಾರಿ ಒಟ್ಟು 7,13,862 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಈ ಪೈಕಿ 3,35,468 ಗಂಡು ಮಕ್ಕಳು, 3,78,389 ಹೆಣ್ಣು ಮಕ್ಕಳು ಹಾಗೂ ಐವರು ತೃತೀಯ ಲಿಂಗಿಗಳು ಸೇರಿದ್ದಾರೆ. ಒಟ್ಟು 1,171 ಪರೀಕ್ಷಾ ಕೇಂದ್ರಗಳ ವ್ಯವಸ್ಥೆ ಕಲ್ಪಿಸಲಾಗಿದೆ. ಇದರೊಂದಿಗೆ 2,342 ಸ್ಥಾನಿಕ ಜಾಗೃತದಳ, 76 ಉತ್ತರ ಪತ್ರಿಕೆ ಮೌಲ್ಯಮಾಪನ ಕೇಂದ್ರಗಳು ಹಾಗೂ 31,000 ಮೌಲ್ಯಮಾಪಕರನ್ನ ಕರ್ತವ್ಯ ನಿರ್ವಹಿಸಲಿದ್ದಾರೆ.

ಮಾರ್ಚ್ 1 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಪ್ರಾರಂಭ Read More »

ಕರ್ನಾಟಕ

ಮಾರ್ಚ್ 3ರಿಂದ ಬಜೆಟ್ ಅಧಿವೇಶನ: 15 ದಿನ ಚರ್ಚೆಗೆ ಅವಕಾಶ

(ನ್ಯೂಸ್ ಕಡಬ) newskadaba.com ಫೆ. 28 ಬೆಂಗಳೂರು: ರಾಜ್ಯ ಬಜೆಟ್‌ ಮೇಲಿನ ಚರ್ಚೆಗೆ ಕೇವಲ 15 ದಿನಗಳನ್ನು ನಿಗದಿಪಡಿಸಿರುವ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ-ಜೆಡಿಎಸ್ ತೀವ್ರವಾಗಿ ವಾಗ್ದಾಳಿ ನಡೆಸಿವೆ. ವಿವಿಧ ಇಲಾಖೆಗಳ ಸಮಗ್ರ ಬೇಡಿಕೆಗಳನ್ನು ಕೂಲಂಕಷವಾಗಿ ಪರಿಶೀಲಿಸಲು ಸೂಕ್ಷ್ಮವಾದ ಚರ್ಚೆಯ ಅಗತ್ಯವಿದೆ ಎಂದು ಹೇಳಿದ್ದಾರೆ. ಮಾರ್ಚ್ ಮೂರರಿಂದ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಮಾರ್ಚ್ 7 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಸಕ್ತ ಸಾಲಿನ ರಾಜ್ಯ ಬಜೆಟ್ ನ್ನು ವಿಧಾನಸಭೆಯಲ್ಲಿ ಮಂಡಿಸಲಿದ್ದಾರೆ. ಅಧಿವೇಶನದ ಮೊದಲ ದಿನ ಮಾರ್ಚ್ 3ರಂದು ರಾಜ್ಯಪಾಲ ತಾವರ್‌ಚಂದ್ ಗೆಹ್ಲೋಟ್

ಮಾರ್ಚ್ 3ರಿಂದ ಬಜೆಟ್ ಅಧಿವೇಶನ: 15 ದಿನ ಚರ್ಚೆಗೆ ಅವಕಾಶ Read More »

ಕರ್ನಾಟಕ

ಯುಎಎನ್ ಜೊತೆ ಆಧಾರ್‌ ಲಿಂಕ್‌ ಮಾಡಲು ಮಾರ್ಚ್15 ಲಾಸ್ಟ್ ಡೇಟ್

(ನ್ಯೂಸ್ ಕಡಬ) newskadaba.com ಫೆ. 28 ನವದೆಹಲಿ: ಇಪಿಎಫ್‌ಒ ನೀಡುವ ಯುಎಎನ್‌ ಮತ್ತು ಆಧಾರ್‌ ಜತೆ ಲಿಂಕ್‌ ಕಲ್ಪಿಸಲು 2025ರ ಮಾರ್ಚ್ 15 ಕೊನೆ ದಿನವಾಗಿದೆ. ಲಿಂಕ್‌ ಕಲ್ಪಿಸುವುದು ಕಡ್ಡಾಯವಾಗಿದ್ದು, ತಪ್ಪಿದರೆ ಮುಂಬರುವ ದಿನಗಳಲ್ಲಿ ನಿಮ್ಮ ಕಂಪನಿಯು ಅಥವಾ ಉದ್ಯೋಗದಾತರು ಮಾಸಿಕ ನೀಡುವ ಇಪಿಎಫ್‌ ಪಾಲಿನ ಮೊತ್ತವು ಇಪಿಎಫ್‌ ಖಾತೆಗೆ (PF Account) ಜಮೆಯಾಗುವುದಿಲ್ಲ. ಈ ಹಿಂದೆ ಆಧಾರ್ ಹಾಗೂ ಯುಎಎನ್ ಲಿಂಕ್ ಮಾಡಲು 2025 ಫೆಬ್ರವರಿ 15ರಂದು ಕೊನೆ ದಿನವಾಗಿತ್ತು. ಆದರೀಗ ಇಪಿಎಫ್‌ಒ ಗಡುವನ್ನು ಮುಂದೂಡಿದ್ದು, ಮಾರ್ಚ್ 15 ರೊಳಗೆ ಯುಎನ್

ಯುಎಎನ್ ಜೊತೆ ಆಧಾರ್‌ ಲಿಂಕ್‌ ಮಾಡಲು ಮಾರ್ಚ್15 ಲಾಸ್ಟ್ ಡೇಟ್ Read More »

ಕರ್ನಾಟಕ

ಹಂಪಿ ಉತ್ಸವ: ಪೌರಕಾರ್ಮಿಕರಿಗೆ VIP ಪಾಸ್‌ ನೀಡಿ ಅಚ್ಚರಿ ಮೂಡಿಸಿದ ಜಿಲ್ಲಾಧಿಕಾರಿ!

(ನ್ಯೂಸ್ ಕಡಬ) newskadaba.com ಫೆ. 28 ಹೊಸಪೇಟೆ: ಹಂಪಿ ಉತ್ಸವಕ್ಕಾಗಿ ಪೌರಕಾರ್ಮಿಕರು ಮತ್ತು ಅವರ ಕುಟುಂಬಗಳಿಗೆ 2000 ಕ್ಕೂ ಹೆಚ್ಚು ವಿಐಪಿ ಪಾಸ್‌ಗಳನ್ನು ವಿಜಯನಗರ ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ ಗುರುವಾರ ವಿತರಿಸಿದರು. ದಿವಾಕರ್ ಅವರು ಹೊಸಪೇಟೆ ಪಟ್ಟಣದ ಪೌರಕಾರ್ಮಿಕರ ಮನೆಗಳಿಗೆ ಖುದ್ದಾಗಿ ಭೇಟಿ ನೀಡಿ ಪಾಸ್‌ಗಳನ್ನು ವಿತರಿಸಿದರು ಮತ್ತು ಅವರ ಕುಟುಂಬಗಳೊಂದಿಗೆ ಭೋಜನ ಸವಿದರು. ಪೌರಕಾರ್ಮಿಕರು ಮತ್ತು ಕುಷ್ಠರೋಗ ಪೀಡಿತರಿಗೆ ವಿಐಪಿ ಪಾಸ್‌ಗಳನ್ನು ವಿತರಿಸಲಾಯಿತು. ಪ್ರತಿದಿನ ನಗರವನ್ನು ಸ್ವಚ್ಛವಾಗಿಡಲು ಶ್ರಮಿಸುವ ಪೌರಕಾರ್ಮಿಕರಿಗೆ ಸಲ್ಲಿಸುವ ಗೌರವ ಎಂದು ಡಿಸಿ ದಿವಾಕರ್ ಹೇಳಿದರು. “ಹಬ್ಬದ ಸಮಯದಲ್ಲಿ

ಹಂಪಿ ಉತ್ಸವ: ಪೌರಕಾರ್ಮಿಕರಿಗೆ VIP ಪಾಸ್‌ ನೀಡಿ ಅಚ್ಚರಿ ಮೂಡಿಸಿದ ಜಿಲ್ಲಾಧಿಕಾರಿ! Read More »

ಕರ್ನಾಟಕ

ಆಭರಣ ಪ್ರಿಯರಿಗೆ ಸಿಹಿಸುದ್ದಿ: ಚಿನ್ನ, ಬೆಳ್ಳಿ ದರ ಕುಸಿತ, ಇಂದಿನ ಬೆಲೆ ಎಷ್ಟಿದೆ?

(ನ್ಯೂಸ್ ಕಡಬ) newskadaba.com ಫೆ. 27 ನವದೆಹಲಿ: ಚಿನಿವಾರ ಪೇಟೆಯಲ್ಲಿ ಗುರುವಾರ ನಡೆದ ವಹಿವಾಟಿನಲ್ಲಿ ಚಿನ್ನದ ಬೆಲೆ ಕುಸಿತ ಕಂಡಿದೆ. 10 ಗ್ರಾಂ ಚಿನ್ನದ ದರವು 723 ರೂಪಾಯಿ ಕಡಿಮೆಯಾಗಿದೆ. ಫ್ಯೂಚರ್ಸ್ ವಹಿವಾಟಿನಲ್ಲಿ 10 ಗ್ರಾಂಗೆ 723 ರೂಪಾಯಿ ಅಥವಾ ಶೇ 0.84ರಷ್ಟು ಕುಸಿತ ಕಂಡಿದ್ದು, 85,151 ರೂಪಾಯಿಗೆ ತಲುಪಿದೆ. ದೇಶೀಯ ಮಾರುಕಟ್ಟೆಯಲ್ಲಿ ಆಭರಣ ತಯಾರಕರು ಮತ್ತು ಚಿಲ್ಲರೆ ಮಾರಾಟಗಾರರಿಂದ ಬೇಡಿಕೆ ಕಡಿಮೆಯಾಗಿದೆ. ಜಾಗತಿಕ ಮಾರುಕಟ್ಟೆಯಲ್ಲೂ ಚಿನ್ನಕ್ಕೆ ಬೇಡಿಕೆ ಕಡಿಮೆಯಾಗಿದ್ದು, ಹಳದಿ ಲೋಹದ ಬೆಲೆಯಲ್ಲಿ ಇಳಿಕೆಯಾಗಿದೆ ಎಂದು ಮಾರುಕಟ್ಟೆ ತಜ್ಞರು ತಿಳಿಸಿದ್ದಾರೆ.

ಆಭರಣ ಪ್ರಿಯರಿಗೆ ಸಿಹಿಸುದ್ದಿ: ಚಿನ್ನ, ಬೆಳ್ಳಿ ದರ ಕುಸಿತ, ಇಂದಿನ ಬೆಲೆ ಎಷ್ಟಿದೆ? Read More »

ಬ್ರೇಕಿಂಗ್ ನ್ಯೂಸ್

ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವುದು ಸೂರ್ಯ-ಚಂದ್ರರಷ್ಟೇ ಗ್ಯಾರಂಟಿ : ಬಿಎಸ್ವೈ

(ನ್ಯೂಸ್ ಕಡಬ) newskadaba.com ಫೆ. 27 ಬೆಂಗಳೂರು: ಮುಂದಿನ ದಿನಗಳಲ್ಲಿ ರಾಜ್ಯದ ಉದ್ದಗಲಕ್ಕೂ ಪ್ರವಾಸ ಮಾಡಿ ಮತ್ತೆ ಪಕ್ಷ ಅಧಿಕಾರಕ್ಕೆ ತರುವ ಕೆಲಸ ಮಾಡಿ, ಪಕ್ಷ ಬಲಪಡಿಸ್ತೇವೆ.ಸೂರ್ಯ ಚಂದ್ರರಷ್ಟೇ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುವುದು ಗ್ಯಾರಂಟಿ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಭವಿಷ್ಯ ನುಡಿದಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಅವರು, ನನಗೆ ಇವತ್ತು 82 ತುಂಬಿ 83 ನೇ ವರ್ಷಕ್ಕೆ ಕಾಲಿಟ್ಟಿದ್ದೇನೆ. ರಾಜ್ಯಾದ್ಯಂತ ಅಭಿಮಾನಿಗಳು ದೇವಸ್ಥಾನಗಳಲ್ಲಿ ಪೂಜೆ ಪುನಸ್ಕಾರ ಮಾಡಿ ಶುಭ ಕೋರಿದ್ದಾರೆ. ಅವರೆಲ್ಲರಿಗೂ ಒಳ್ಳೇದಾಗಲಿ.ನನಗೆ ರಾಜ್ಯದಲ್ಲಿ ಅನೇಕ ಸ್ಥಾನಮಾನ

ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವುದು ಸೂರ್ಯ-ಚಂದ್ರರಷ್ಟೇ ಗ್ಯಾರಂಟಿ : ಬಿಎಸ್ವೈ Read More »

ಕರ್ನಾಟಕ

ಶ್ರೀಘ್ರದಲ್ಲೇ ರಾಜ್ಯದಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆ : ವಿಜಯೇಂದ್ರ ಮುನ್ಸೂಚನೆ

(ನ್ಯೂಸ್ ಕಡಬ) newskadaba.com ಫೆ. 27 ಬೆಂಗಳೂರು: ಕಾಂಗ್ರೆಸ್‌ನಲ್ಲಿ ದಿನೇ ದಿನೇ ಒಳಜಗಳ ಹೆಚ್ಚಾಗುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆ ನಡೆಯಲಿದೆ. ಅದಕ್ಕೆ ಈಗ ನಡೆಯುತ್ತಿರುವ ಬೆಳವಣಿಗೆಗಳು ಮುನ್ಸೂಚನೆಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಷಾ ಜತೆ ಡಿಕೆಶಿ ವೇದಿಕೆ ಹಂಚಿಕೊಂಡಿದ್ದಕ್ಕೆ ಕಾಂಗ್ರೆಸ್ ನಲ್ಲಿ ಆಕ್ಷೇಪ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಶಿವರಾತ್ರಿಯ ಸಂದರ್ಭದಲ್ಲಿ ಇಶಾ ಫೌಂಡೇಶನ್ ಕಾರ್ಯಕ್ರಮದಲ್ಲಿ ಡಿಕೆಶಿ ಭಾಗವಹಿಸಿದ್ದರು. ಅದೊಂದು ಧಾರ್ಮಿಕ ಕಾರ್ಯಕ್ರಮ, ಶಿವರಾತ್ರಿ

ಶ್ರೀಘ್ರದಲ್ಲೇ ರಾಜ್ಯದಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆ : ವಿಜಯೇಂದ್ರ ಮುನ್ಸೂಚನೆ Read More »

ಕರ್ನಾಟಕ

ಕರ್ನಾಟಕ ಭಾಗದ ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ವೇ ಸಂಚಾರಕ್ಕೆ ಸಿದ್ಧ!

(ನ್ಯೂಸ್ ಕಡಬ) newskadaba.com ಫೆ. 27 ಬೆಂಗಳೂರು: ಕರ್ನಾಟಕ ಭಾಗದ ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ವೇ ಪೂರ್ಣಗೊಂಡಿದ್ದು, ಸಾರ್ವಜನಿಕ ಸಂಚಾರಕ್ಕೆ ಮುಕ್ತವಾಗಿದೆ. ಆದರೆ ಇದು ಚೆನ್ನೈವರೆಗೆ ಪೂರ್ಣಗೊಂಡಿಲ್ಲ. ಸಿದ್ಧವಾದ ಎಕ್ಸ್‌ಪ್ರೆಸ್‌ವೇಗೆ ಸಂಬಂಧಿಸಿದ ಹಲವು ವಿಡಿಯೋಗಳು ಮತ್ತು ಫೋಟೋಗಳು ಸಾಮಾಜಿಕ ಮಾಧ್ಯಮ ಹರಿದಾಡುತ್ತಿದ್ದು, ಚೆನ್ನೈ ವರೆಗೆ ಎಕ್ಸ್‌ಪ್ರೆಸ್‌ವೇ ಸಂಚಾರಕ್ಕೆ ಮುಕ್ತವಾಗಿದೆ ಎಂಬ ಭಾವನೆ ಮೂಡಿಸುತ್ತಿವೆ. ಅಧಿಕೃತವಾಗಿ ರಸ್ತೆ ಸಂಚಾರಕ್ಕೆ ಮುಕ್ತವಾಗಿಲ್ಲದಿದ್ದರೂ, ಕಳೆದ ಡಿಸೆಂಬರ್‌ನಲ್ಲಿ ಈ ರಸ್ತೆಯನ್ನು ಸಾರ್ವಜನಿಕ ಸಂಚಾರಕ್ಕೆ ಅವಕಾಶ ನೀಡಲಾಗಿದೆ ಎಂದು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ(ಎನ್‌ಎಚ್‌ಎಐ) ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.  ಕರ್ನಾಟಕದಲ್ಲಿ 71 ಕಿಮೀ

ಕರ್ನಾಟಕ ಭಾಗದ ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ವೇ ಸಂಚಾರಕ್ಕೆ ಸಿದ್ಧ! Read More »

ಕರ್ನಾಟಕ

ಹೊಟೇಲ್, ಉಪಾಹಾರ, ತಿನಿಸು ಕೇಂದ್ರಗಳಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧ: ಸಚಿವ ದಿನೇಶ್ ಗುಂಡೂರಾವ್ ಘೋಷಣೆ

(ನ್ಯೂಸ್ ಕಡಬ) newskadaba.com ಫೆ. 27 ಬೆಂಗಳೂರು: ಹಲವು ಹೊಟೇಲ್ ಗಳು, ಉಪಾಹಾರ ಕೇಂದ್ರಗಳು, ಬೀದಿಬದಿ ತಿನಿಸು ಕೇಂದ್ರಗಳಲ್ಲಿ ಇಡ್ಲಿ ಬೇಯಿಸಲು ಪ್ಲಾಸ್ಟಿಕ್ ಕವರ್ ಗಳನ್ನು ಬಳಸಲಾಗುತ್ತಿದ್ದು, ಅದರಿಂದಾಗಿ ಗ್ರಾಹಕರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಉಂಟಾಗುತ್ತಿರುವುದು ಮಾದರಿ ಪರೀಕ್ಷೆಗಳಿಂದ ದೃಢಪಟ್ಟಿದೆ. ವಿವಿಧ ತಿನಿಸು ಕೇಂದ್ರಗಳಿಂದ ಸಂಗ್ರಹಿಸಲಾದ ಇಡ್ಲಿ ಮಾದರಿಗಳಲ್ಲಿ ಸುಮಾರು ಶೇಕಡಾ 50ರಷ್ಟು ಅಸುರಕ್ಷಿತ ಎಂಬುದು ಆಹಾರ ಇಲಾಖೆಯ ಪ್ರಯೋಗಾಲಯದಲ್ಲಿ ದೃಢಪಟ್ಟ ಬೆನ್ನಲ್ಲೇ ರಾಜ್ಯದ ಹೋಟೆಲ್​, ಉಪಾಹಾರ ಕೇಂದ್ರಗಳಲ್ಲಿ ಪ್ಲಾಸ್ಟಿಕ್ ಬಳಕೆ​ ನಿಷೇಧಿಸಲಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಹೊಟೇಲ್, ಉಪಾಹಾರ, ತಿನಿಸು ಕೇಂದ್ರಗಳಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧ: ಸಚಿವ ದಿನೇಶ್ ಗುಂಡೂರಾವ್ ಘೋಷಣೆ Read More »

ಕರ್ನಾಟಕ
Scroll to Top