News Kadaba

ರಾಜ್ಯದ 9 ವಿಶ್ವವಿದ್ಯಾನಿಲಯ ಮುಚ್ಚುವುದು ಸುಲಭದ ಕೆಲಸವಲ್ಲ: ಅಶ್ವಥ್ ನಾರಾಯಣ್

(ನ್ಯೂಸ್ ಕಡಬ) newskadaba.com ಫೆ. 26: ಬೆಂಗಳೂರು: ರಾಜ್ಯದ ಒಂಬತ್ತು ವಿಶ್ವವಿದ್ಯಾಲಯಗಳನ್ನು ಮುಚ್ಚುವ ಸರ್ಕಾರದ ನಿರ್ಧಾರ ಅಷ್ಟು ಸುಲಭವಲ್ಲ ಎಂದು ಮಾಜಿ ಸಚಿವ ಡಾ.ಸಿ.ಎನ್.ಅಶ್ವಥ್ ನಾರಾಯಣ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಉನ್ನತ ಶಿಕ್ಷಣ ಸಚಿವ, ಖಾಸಗಿ ಸಂಯೋಜಿತ ಕಾಲೇಜುಗಳನ್ನು ಮುಚ್ಚುವುದೇ ದೊಡ್ಡ ಪ್ರಕ್ರಿಯೆಯಾಗಿದ್ದು, ಸರ್ಕಾರ ಅಂದುಕೊಂಡಂತೆ ಸ್ಥಾಪಿಸಿರುವ ವಿಶ್ವವಿದ್ಯಾನಿಲಯಗಳನ್ನು ಮುಚ್ಚುವುದು ಅಷ್ಟು ಸುಲಭವಲ್ಲ ಎಂದರು. ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಪ್ರತಿ ಜಿಲ್ಲೆಯಲ್ಲಿ ವಿಶ್ವವಿದ್ಯಾಲಯಗಳನ್ನು ಸ್ಥಾಪಿಸುವುದಾಗಿ ಹೇಳಿದ ನಾರಾಯಣ್, ಉನ್ನತ ಶಿಕ್ಷಣವನ್ನು ಉದಾರೀಕರಣಗೊಳಿಸಬೇಕು ಮತ್ತು ಪ್ರತಿ ಅರ್ಹ ಜಿಲ್ಲೆಗಳು ವಿಶ್ವವಿದ್ಯಾಲಯ ಪಡೆಯಬೇಕು […]

ರಾಜ್ಯದ 9 ವಿಶ್ವವಿದ್ಯಾನಿಲಯ ಮುಚ್ಚುವುದು ಸುಲಭದ ಕೆಲಸವಲ್ಲ: ಅಶ್ವಥ್ ನಾರಾಯಣ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಠಿಣ ವಲಸೆ ನಿಯಮ ಜಾರಿಗೆ ತರಲು ಮುಂದಾದ ಭಾರತ

(ನ್ಯೂಸ್ ಕಡಬ) newskadaba.com ಫೆ. 26: ಅಮೆರಿಕದಲ್ಲಿ ಕಠಿಣ ವಲಸೆ ನಿಯಮ ಜಾರಿಗೆ ತಂದ ಬೆನ್ನಲ್ಲೇ ಭಾರತ ಕೂಡ ಕಠಿಣ ವಲಸೆ ನಿಯಮ ಜಾರಿಗೆ ತರಲು ಮುಂದಾಗಿದೆ. ಮಾ.10 ರಂದು ಸಂಸತ್ತಿನ ಬಜೆಟ್ ಅಧಿವೇಶನ ನಡೆಯಲಿದೆ. ಈ ಅಧಿವೇಶನದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ವಲಸೆ ಮತ್ತು ಅಕ್ರಮ ವಿದೇಶಿ ವಲಸಿಗರ ಮಸೂದೆಯನ್ನು ಮಂಡಿಸುವ ಸಾಧ್ಯತೆಯಿದೆ. ಭಾರತದಲ್ಲಿ ಪಾಸ್‌ಪೋರ್ಟ್ ಕಾಯ್ದೆ 1920, ವಿದೇಶಿಯರ ನೋಂದಣಿ ಕಾಯ್ದೆ 1939, ವಿದೇಶಿಯರ ಕಾಯ್ದೆ 1946 ಮತ್ತು ವಲಸೆ ಕಾಯ್ದೆ 2000, ಇವು ಪ್ರಸ್ತುತ

ಕಠಿಣ ವಲಸೆ ನಿಯಮ ಜಾರಿಗೆ ತರಲು ಮುಂದಾದ ಭಾರತ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಲ್ಪೆ: ಸೈಂಟ್ ಮೇರಿಸ್ ದ್ವೀಪದ ಬಳಿ ವಿದೇಶಿ ಮೀನುಗಾರಿಕೆ ಬೋಟ್ ವಶ

(ನ್ಯೂಸ್ ಕಡಬ) newskadaba.com ಫೆ. 25 ಮಲ್ಪೆ: ಮಲ್ಪೆ ಸೈಂಟ್ ಮೇರಿಸ್ ದ್ವೀಪದ ಬಳಿ ಸಂಶಯಾಸ್ಪದವಾಗಿ ಸಂಚರಿಸುತ್ತಿದ್ದ ವಿದೇಶಿ ಬೋಟನ್ನು ಕರಾವಳಿ ಕಾವಲು ಪೊಲೀಸ್ ಹಾಗೂ ಮಂಗಳೂರು ಕೋಸ್ಟ್ ಗಾರ್ಡ್ ವಶಕ್ಕೆ ಪಡೆದುಕೊಂಡಿದ್ದು, ಅದರಲ್ಲಿದ್ದ ಮೂವರು ತಮಿಳುನಾಡು ಮೂಲದ ಮೀನುಗಾರರನ್ನು ಬಂಧಿಸಲಾಗಿದೆ. ಬಂಧಿತರನ್ನು ಭಾರತೀಯ ಮೂಲದ ತಮಿಳುನಾಡು ನಿವಾಸಿಗಳೆನ್ನಲಾದ ಜೇಮ್ಸ್ ಫ್ರಾಂಕ್ಲಿನ್, ರಾಬಿನ್ ಸ್ಟನ್, ಡಿರೋಸ್ ಅಲ್ಫೋನ್ಸ್ ಎಂದು ಗುರುತಿಸಲಾಗಿದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಈ ಪ್ರಕರಣದ ಹೆಚ್ಚಿನ ತನಿಖೆಯನ್ನು ಪೊಲೀಸರು ಮುಂದುವರಿಸಿದ್ದಾರೆ.

ಮಲ್ಪೆ: ಸೈಂಟ್ ಮೇರಿಸ್ ದ್ವೀಪದ ಬಳಿ ವಿದೇಶಿ ಮೀನುಗಾರಿಕೆ ಬೋಟ್ ವಶ Read More »

ಕರಾವಳಿ

1984ರ ಸಿಖ್ ವಿರೋಧಿ ದಂಗೆ ಕೇಸ್: ಸಜ್ಜನ್ ಕುಮಾರ್‌ಗೆ ಜೀವಾವಧಿ ಶಿಕ್ಷೆ

(ನ್ಯೂಸ್ ಕಡಬ) newskadaba.com ಫೆ. 25 ಬಂಟ್ವಾಳ: 1984ರ ಸಿಖ್ ವಿರೋಧಿ ದಂಗೆ ಪ್ರಕರಣದಲ್ಲಿ ಕಾಂಗ್ರೆಸ್‌ನ ಮಾಜಿ ಸಂಸದ ಸಜ್ಜನ್ ಕುಮಾರ್ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿ ಕೋರ್ಟ್ ತೀರ್ಪು ನೀಡಿದೆ. ಸರಸ್ವತಿ ವಿಹಾರ್ ಹತ್ಯೆಗಳಲ್ಲಿ ಸಜ್ಜನ್ ಕುಮಾರ್ ಅವರ ಪಾತ್ರದ ಬಗ್ಗೆ ದೆಹಲಿ ನ್ಯಾಯಾಲಯ ಈ ತೀರ್ಪು ನೀಡಿದ್ದು, ಇದು ಅವರ ಎರಡನೇ ಜೀವಾವಧಿ ಶಿಕ್ಷೆಯಾಗಿದೆ. ಸಜ್ಜನ್ ಕುಮಾರ್‌ಗೆ ವಿಶೇಷ ಕೋರ್ಟ್ ನ್ಯಾಯಾಧೀಶೆ ಕಾವೇರಿ ಬವೇಜಾ ಶಿಕ್ಷೆ ಪ್ರಮಾಣ ಪ್ರಕಟಿಸಿದ್ದಾರೆ. ಇನ್ನು ದೆಹಲಿಯ ರೋಸ್ ಅವೆನ್ಯೂ ರಸ್ತೆಯಲ್ಲಿರುವ ವಿಶೇಷ ನ್ಯಾಯಾಲಯ ಸಜ್ಜನ್

1984ರ ಸಿಖ್ ವಿರೋಧಿ ದಂಗೆ ಕೇಸ್: ಸಜ್ಜನ್ ಕುಮಾರ್‌ಗೆ ಜೀವಾವಧಿ ಶಿಕ್ಷೆ Read More »

ಬ್ರೇಕಿಂಗ್ ನ್ಯೂಸ್

ಬಂಟ್ವಾಳ: ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ಕಾರು; ವೃದ್ಧೆ ಮೃತ್ಯು

(ನ್ಯೂಸ್ ಕಡಬ) newskadaba.com ಫೆ. 25 ಬಂಟ್ವಾಳ: ಮಗನ ಅಂಗಡಿ ಹೊರಗೆ ಕುಳಿತುಕೊಂಡಿದ್ದ ವೃದ್ದೆಯೋರ್ವರಿಗೆ ಕಾರೊಂದು ಢಿಕ್ಕಿಯಾಗಿ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಪಾಲೆದಮರ ಎಂಬಲ್ಲಿ ಫೆ.23 ರಂದು ನಡೆದಿದೆ. ವಾಮದಪದವು ನಿವಾಸಿ ಸುಮತಿ(91) ಮೃತಪಟ್ಟ ವೃದ್ದೆ. ಪುತ್ರ ಮಂಜುನಾಥ್ ಅವರ ದಿನಸಿ ಅಂಗಡಿಯ ಹೊರಗಡೆ ಕುರ್ಚಿಯಲ್ಲಿ ಕುಳಿತುಕೊಂಡಿದ್ದರು. ಫೆ.23ರಂದು ಸಾಯಂಕಾಲ ಸುಮಾರು 6.45 ರ ಹೊತ್ತಿಗೆ ಬಂಟ್ವಾಳ ಮಣಿಹಳ್ಳ ಕಡೆಯಿಂದ ವಾಮದಪದವು ಕಡೆಗೆ ಶೋಭಾ ಅವರು ಚಲಾಯಿಸಿಕೊಂಡ ಬಂದ ಕಾರು ನಿಯಂತ್ರಣ ತಪ್ಪಿ ಅಂಗಡಿಯ ಕಡೆಗೆ ನುಗ್ಗಿ

ಬಂಟ್ವಾಳ: ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ಕಾರು; ವೃದ್ಧೆ ಮೃತ್ಯು Read More »

ಕರಾವಳಿ

ಇನ್ಮುಂದೆ ಶುಲ್ಕ ಕಟ್ಟಿದವರಿಗೆ ಮಾತ್ರ ಉದ್ಯಾನವನಗಳಿಗೆ ಎಂಟ್ರಿ, ಮಾ.1 ರಿಂದ ಜಾರಿ

(ನ್ಯೂಸ್ ಕಡಬ) newskadaba.com ಫೆ. 25: ಬೆಂಗಳೂರು: ಉದ್ಯಾನವನದಲ್ಲಿ ವಾಯುವಿಹಾರ ಮಾಡಲು ಮೈದಾನದಲ್ಲಿ ವ್ಯಾಯಾಮ ಮಾಡಲು ಇನ್ನು ಮುಂದೆ ಶುಲ್ಕ ಕಟ್ಟಬೇಕು. ನಿರ್ವಹಣಾ ವೆಚ್ಚ ಹೆಸರಿನಲ್ಲಿ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಸರ್ಕಾರಿ ಕ್ರೀಡಾಂಗಣದಲ್ಲಿ ಇನ್ಮುಂದೆ ಯಾವುದೇ ಕ್ರೀಡಾಪಟು ತರಬೇತಿ ಪಡೆ ಯಲು ಶುಲ್ಕ ಕಟ್ಟಬೇಕು. ಇದರಲ್ಲಿ ರಾಜ್ಯ, ರಾಷ್ಟ್ರೀಯ ಅಥವಾ ಅಂತರಾಷ್ಟ್ರೀಯ ಕ್ರೀಡಾಪಟುಗಳು ಸಹ ಶುಲ್ಕ ಕಟ್ಟಲೇಬೇಕು. ಇಡೀ ರಾಜ್ಯಾದ್ಯಂತ ಮಾ.1 ರಿಂದ ಜಾರಿಯಾಗಲಿದ್ದು, ವಿಶೇಷವಾಗಿ ಈಗ ತುಮಕೂರು ನಗರದ ಮಹಾತ್ಮಗಾಂಧಿ ಕ್ರೀಡಾಂಗಣವನ್ನು ವಿಶ್ವದರ್ಜೆ ಮಟ್ಟದಲ್ಲಿ ನಿರ್ಮಾಣ ಮಾಡಲಾಗಿದ್ದು ಇಲ್ಲಿ

ಇನ್ಮುಂದೆ ಶುಲ್ಕ ಕಟ್ಟಿದವರಿಗೆ ಮಾತ್ರ ಉದ್ಯಾನವನಗಳಿಗೆ ಎಂಟ್ರಿ, ಮಾ.1 ರಿಂದ ಜಾರಿ Read More »

ಕರ್ನಾಟಕ

ಬಿಬಿಎಂಪಿಗೆ ಕೂಡಲೇ ಚುನಾವಣೆ- ಸುಪ್ರೀಂ ಕೋರ್ಟ್‌‌ಗೆ ಬಿಜೆಪಿ ಮನವಿ

(ನ್ಯೂಸ್ ಕಡಬ) newskadaba.com ಫೆ. 25: ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಕೂಡಲೇ ಚುನಾವಣೆ ನಡೆಸಬೇಕೆಂದು ನಿರ್ದೇಶಿಸಲು ಕೋರಿ ಬಿಜೆಪಿಯು ಸುಪ್ರೀಂ ಕೋರ್ಟಿಗೆ ಮನವಿ ಸಲ್ಲಿಸಿದೆ. ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ.ವಿಜಯೇಂದ್ರ ಅವರು ಈ ಸಂಬಂಧ ಸಮಿತಿಯೊಂದನ್ನು ರಚಿಸಿದ್ದರು. ಈ ಸಮಿತಿಯು ಹಿರಿಯ ವಕೀಲರಾದ ಸಂದೀಪ್ ಪಾಟೀಲ್ ಅವರ ಮೂಲಕ ಸುಪ್ರೀಂ ಕೋರ್ಟಿಗೆ ವಕಾಲತ್ತು ಸಲ್ಲಿಸಿ ಮನವಿ ಮಾಡಿದೆ.

ಬಿಬಿಎಂಪಿಗೆ ಕೂಡಲೇ ಚುನಾವಣೆ- ಸುಪ್ರೀಂ ಕೋರ್ಟ್‌‌ಗೆ ಬಿಜೆಪಿ ಮನವಿ Read More »

ಕರ್ನಾಟಕ

ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವಿನ ಬಸ್ ಸಂಚಾರ ರದ್ದು

(ನ್ಯೂಸ್ ಕಡಬ) newskadaba.com ಫೆ. 25: ಬೆಂಗಳೂರು: ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವಿನ ಬಸ್ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ ಎಂದು ಸಾರಿಗೆ ಇಲಾಖೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ನಾವು ನಿನ್ನೆಯಿಂದ ಮಹಾರಾಷ್ಟ್ರಕ್ಕೆ ಬಸ್ ಸೇವೆಗಳನ್ನು ಸ್ಥಗಿತಗೊಳಿಸಿದ್ದೇವೆ. ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ನಿಗಮ (ಎಂಎಸ್‌ಆರ್‌ಟಿಸಿ) ಕೂಡ ಕರ್ನಾಟಕಕ್ಕೆ ಬಸ್‌ಗಳ ಸಂಚಾರವನ್ನು ನಿಲ್ಲಿಸಿದೆ ಎಂದು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಹಿರಿಯ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ. ಗಡಿ ಜಿಲ್ಲೆ ಬೆಳಗಾವಿಯಲ್ಲಿ ಉದ್ವಿಗ್ನ ಪರಿಸ್ಥಿತಿ ತಲೆದೋರಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅವರು ವಿವರಿಸಿದರು. ನಾರಾಯಣಗೌಡ

ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವಿನ ಬಸ್ ಸಂಚಾರ ರದ್ದು Read More »

ಕರ್ನಾಟಕ

ಬಂಗಾಳ ಕೊಲ್ಲಿಯಲ್ಲಿ 5.1 ತೀವ್ರತೆಯ ಭೂಕಂಪ

(ನ್ಯೂಸ್ ಕಡಬ) newskadaba.com ಫೆ. 25: ಬೆಂಗಳೂರು: ಒಡಿಶಾದ ಪುರಿ ಬಳಿ ಮಂಗಳವಾರ ಬೆಳಗ್ಗೆ 5.1 ತೀವ್ರತೆಯ ಭೂಕಂಪನ ದಾಖಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಂಗಾಳಕೊಲ್ಲಿಯಲ್ಲಿ 91 ಕಿಮೀ ಆಳದಲ್ಲಿ ಬೆಳಗ್ಗೆ 6.10ರ ಸುಮಾರಿಗೆ ಭೂಕಂಪ ಸಂಭವಿಸಿದೆ. ಇದುವರೆಗೆ ಯಾವುದೇ ಆಸ್ತಿಪಾಸ್ತಿ ಅಥವಾ ಸಾವು ನೋವು ಸಂಭವಿಸಿದ ವರದಿಯಾಗಿಲ್ಲ ಎಂದು ಒಡಿಶಾ ಕಂದಾಯ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ, ಭೂಕಂಪದ ಕೇಂದ್ರವು ಬಂಗಾಳಕೊಲ್ಲಿಯಲ್ಲಿರುವುದರಿಂದ ಅದರ ಪರಿಣಾಮವು ನಗಣ್ಯ ಎಂದು ಹೇಳಿದರು.

ಬಂಗಾಳ ಕೊಲ್ಲಿಯಲ್ಲಿ 5.1 ತೀವ್ರತೆಯ ಭೂಕಂಪ Read More »

ಬ್ರೇಕಿಂಗ್ ನ್ಯೂಸ್

ಬಿಎಲ್‌ಆರ್ ವಿಮಾನ ನಿಲ್ದಾಣದಲ್ಲಿ ವೈದ್ಯಕೀಯ ಸೇವೆಗಳಿಗಾಗಿ ಮಣಿಪಾಲ್ ಆಸ್ಪತ್ರೆಯು ಬಿಐಎಎಲ್ ಜೊತೆ ಪಾಲುದಾರಿಕೆ

(ನ್ಯೂಸ್ ಕಡಬ) newskadaba.com ಫೆ. 25: ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (BLR ವಿಮಾನ ನಿಲ್ದಾಣ) ಹೊಸ ವಿಮಾನ ನಿಲ್ದಾಣ ವೈದ್ಯಕೀಯ ಕೇಂದ್ರವನ್ನು ಸ್ಥಾಪಿಸಲು ಮಣಿಪಾಲ್ ಆಸ್ಪತ್ರೆಯು ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್ (BIAL) ನೊಂದಿಗೆ ಕೈಜೋಡಿಸಿದೆ. ಈ ಸೌಲಭ್ಯವು ಪ್ರಯಾಣಿಕರು ಮತ್ತು ವಿಮಾನ ನಿಲ್ದಾ ಣದ ಸಿಬ್ಬಂದಿಗೆ 24/7 ವೈದ್ಯಕೀಯ ಸಹಾಯವನ್ನು ಒದಗಿಸುತ್ತದೆ. ಈ ಅತ್ಯಾಧುನಿಕ ಸೌಲಭ್ಯವು ದಿನದ 24 ಗಂಟೆಯೂ (24/7) ತೆರೆದಿರುತ್ತದೆ, ಮತ್ತು ವೈದ್ಯ ರೊಂದಿಗೆ ಸಮಾ ಲೋಚನೆ, ಪ್ರಥಮ ಚಿಕಿತ್ಸೆ, ಎಕ್ಸ್-ರೇ, ಅಲ್ಟ್ರಾಸೌಂಡ್

ಬಿಎಲ್‌ಆರ್ ವಿಮಾನ ನಿಲ್ದಾಣದಲ್ಲಿ ವೈದ್ಯಕೀಯ ಸೇವೆಗಳಿಗಾಗಿ ಮಣಿಪಾಲ್ ಆಸ್ಪತ್ರೆಯು ಬಿಐಎಎಲ್ ಜೊತೆ ಪಾಲುದಾರಿಕೆ Read More »

ಕರಾವಳಿ, ಕರ್ನಾಟಕ
Scroll to Top