News Kadaba

ರಹಸ್ಯ ವಿಮಾನಗಳ ಪತ್ತೆಗೂ ಸ್ವದೇಶಿ ರಾಡಾರ್‌ !

(ನ್ಯೂಸ್ ಕಡಬ) newskadaba.com ಫೆ. 13. ಬೆಂಗಳೂರು: ದೇಶದ ರಕ್ಷಣಾ ವ್ಯವಸ್ಥೆಗೆ ಸವಾಲಾಗಿರುವ ರಹಸ್ಯ ಯುದ್ಧವಿಮಾನಕ್ಕೆ ಠಕ್ಕರ್ ಕೊಡುವ ರೀತಿಯಲ್ಲಿ ಅತ್ಯಾಧುನಿಕ ರಾಡಾರ್‌ಗಳನ್ನು ಡಿಆರ್‌ಡಿಒ ಸಿದ್ಧಪಡಿಸಿದ್ದು, ಕೆಲ ಪ್ರಯೋಗ ಗಳ ಬಳಿಕ ಭಾರತೀಯ ರಕ್ಷಣಾ ಇಲಾಖೆಗೆ ಸೇರ್ಪಡೆಯಾಗುವ ಸಾಧ್ಯತೆಯಿದೆ. ನೆರೆ ರಾಷ್ಟ್ರ ಚೀನಾ ಐದನೇ ಹಂತದ ಯುದ್ಧ ವಿಮಾನವನ್ನು ಸಿದ್ಧಪಡಿಸಿದ್ದರೆ, ಪಾಕಿಸ್ತಾನದ ಬಳಿಕ ಎಫ್ 15 ಯುದ್ಧ ವಿಮಾನವಿದೆ. ಆದರೆ ಈ ಆಧುನಿಕ ಯುದ್ಧ ವಿಮಾನಗಳು ರಾಡಾರ್‌ಗಳ ಕಣ್ಣು ತಪ್ಪಿಸಿ ನುಗ್ಗುವುದು ಸುಲಭವಾಗಿತ್ತು. ಏಕೆಂದರೆ, ಅತ್ಯಾಧುನಿಕ ಯುದ್ಧ […]

ರಹಸ್ಯ ವಿಮಾನಗಳ ಪತ್ತೆಗೂ ಸ್ವದೇಶಿ ರಾಡಾರ್‌ ! Read More »

ಕರ್ನಾಟಕ

ಹಾಲಕ್ಕಿ ಜನಾಂಗದ ಜಾನಪದ ಕೋಗಿಲೆ ‘ಪದ್ಮಶ್ರೀ’ ಪುರಸ್ಕೃತ ಹಿರಿಯ ಹಾಡುಗಾರ್ತಿ ಸುಕ್ರಿ ಬೊಮ್ಮಗೌಡ ವಿಧಿವಶ

(ನ್ಯೂಸ್ ಕಡಬ) newskadaba.com ಫೆ. 13. ಕಾರವಾರ: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಹಾಲಕ್ಕಿ ಸಮುದಾಯದ ಸಾಕ್ಷಿ ಪ್ರಜ್ಞೆಯಂತಿದ್ದ ಜನಪದ ಹಾಡುಗಳನ್ನು ಹಾಡುವ ಜೊತೆಗೆ ಮದ್ಯಪಾನ ವಿರೋಧಿ ಹೋರಾಟದಿಂದ ಖ್ಯಾತಿಗಳಿಸಿದ್ದ ಅಂಕೋಲಾ ತಾಲ್ಲೂಕು ಬಡಗೇರಿಯ ಸುಕ್ರಿ ಬೊಮ್ಮ ಗೌಡ (88) ಗುರುವಾರ ನಸುಕಿನ ಜಾವ ನಿಧನರಾಗಿದ್ದಾರೆ ಉತ್ತರ ಕನ್ನಡ ಜಿಲ್ಲೆಯ ಹೆಮ್ಮೆಯ ಸುಕ್ರಜ್ಜಿ ಎಂದೇ ಪ್ರಸಿದ್ದರಾಗಿದ್ದ ಸುಕ್ರಿ ಬೊಮ್ಮಗೌಡ ಅವರಿಗೆ 91 ವರ್ಷ ವಯಸ್ಸಾಗಿತ್ತು. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಕೆಲವು ದಿನದ ಹಿಂದೆ ಉಸಿರಾಟ ಸಮಸ್ಯೆಯಿಂದ ಉಡುಪಿಯಲ್ಲಿ ಚಿಕಿತ್ಸೆ

ಹಾಲಕ್ಕಿ ಜನಾಂಗದ ಜಾನಪದ ಕೋಗಿಲೆ ‘ಪದ್ಮಶ್ರೀ’ ಪುರಸ್ಕೃತ ಹಿರಿಯ ಹಾಡುಗಾರ್ತಿ ಸುಕ್ರಿ ಬೊಮ್ಮಗೌಡ ವಿಧಿವಶ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅನಾರೋಗ್ಯದ ಹಿನ್ನೆಲೆ ತುಳುನಾಡಿನ ದೈವದ ಮೊರೆ ಹೋದ ತಮಿಳು ನಟ ವಿಶಾಲ್

(ನ್ಯೂಸ್ ಕಡಬ) newskadaba.com, ಫೆ.12. ಮಂಗಳೂರು: ಅನಾರೋಗ್ಯದ ಹಿನ್ನೆಲೆಯಲ್ಲಿ ತಮಿಳಿನ ಖ್ಯಾತ ನಟ ವಿಶಾಲ್ ತುಳುನಾಡಿನ ದೈವದ ಮೊರೆ ಹೋಗಿದ್ದಾರೆ. ಇತ್ತೀಚೆಗೆ ಬಿಡುಗಡೆಯಾದ ತಮಿಳಿನ ʼಮದಗಜರಾಜʼ ಸಿನಿಮಾ ಪ್ರಚಾರದ ವೇಳೆ ವಿಶಾಲ್  ತೀವ್ರ ಅನಾರೋಗ್ಯಕ್ಕೀಡಾಗಿದ್ದರು. ಮೈಕ್‌ ಹಿಡಿದು ಮಾತನಾಡುವ ವೇಳೆ ಮೈ ಕೈ ನಡುಗಿದ್ದರಿಂದ ಅವರ ಅಭಿಮಾನಿಗಳು ಆತಂಕಗೊಂಡಿದ್ದರು. ಬಳಿಕ ಅವರು ತೀವ್ರ ವೈರಲ್‌ ಫೀವರ್‌ನಿಂದ ಬಳಲುತ್ತಿರುವುದಾಗಿ ವೈದ್ಯರು ತಿಳಿಸಿದ್ದರು. ಆದರೆ, ಇದೀಗ ಅನಾರೋಗ್ಯದ ನಿವಾರಣೆಗಾಗಿ ತುಳುನಾಡಿನ ದೈವಸ್ಥಾನಕ್ಕೆ ನಟ ಆಗಮಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಮೂಲ್ಕಿ ತಾಲೂಕಿನ

ಅನಾರೋಗ್ಯದ ಹಿನ್ನೆಲೆ ತುಳುನಾಡಿನ ದೈವದ ಮೊರೆ ಹೋದ ತಮಿಳು ನಟ ವಿಶಾಲ್ Read More »

ಕರಾವಳಿ

ಮಹಾರಾಷ್ಟ್ರ : ನಕ್ಸಲ್‌ ದಾಳಿಗೆ ಯೋಧ ಹುತಾತ್ಮ

(ನ್ಯೂಸ್ ಕಡಬ) newskadaba.com, ಫೆ.12. ಮುಂಬೈ: ಗಡ್ಚಿರೋಲಿ ಜಿಲ್ಲೆಯಲ್ಲಿ ನಕ್ಸಲೀಯರೊಂದಿಗಿನ ಎನ್‌ಕೌಂಟರ್‌ನಲ್ಲಿ ಹುತಾತ್ಮರಾದ ಕಾನ್‌ಸ್ಟೆಬಲ್‌ ಮಹೇಶ್‌ ನಾಗುಲ್ವಾರ್‌ ಅವರ ಕುಟುಂಬಕ್ಕೆ ರಾಜ್ಯ ಸರ್ಕಾರ 2 ಕೋಟಿ ರೂಪಾಯಿ ಆರ್ಥಿಕ ನೆರವು ನೀಡಲಿದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌‍ ಘೋಷಿಸಿದ್ದಾರೆ. ನಿನ್ನೆ ಗಡ್‌ಚಿರೋಲಿಯಲ್ಲಿ ನಕ್ಸಲೀಯರೊಂದಿಗಿನ ಗುಂಡಿನ ಚಕಮಕಿಯಲ್ಲಿ ಗಾಯಗೊಂಡಿದ್ದ ವಿಶೇಷ ಕಮಾಂಡೋ ಘಟಕ ಸಿ-60 ನ 39 ವರ್ಷದ ಕಾನ್‌ಸ್ಟೆಬಲ್‌ ಸಾವನ್ನಪ್ಪಿದ್ದರು. ನಕ್ಸಲೀಯರ ವಿರುದ್ಧದ ಕಾರ್ಯಾಚರಣೆಯ ವೇಳೆ ಸಿ-60 ಕಮಾಂಡೋ ಘಟಕದ ಸಿಬ್ಬಂದಿ ಗಡ್ಚಿರೋಲಿಯ ಭಮ್ರಗಡ ತಾಲೂಕಿನ

ಮಹಾರಾಷ್ಟ್ರ : ನಕ್ಸಲ್‌ ದಾಳಿಗೆ ಯೋಧ ಹುತಾತ್ಮ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ

(ನ್ಯೂಸ್ ಕಡಬ) newskadaba.com, ಫೆ.12. ನವದೆಹಲಿ: ದಿನದಿಂದ ದಿನಕ್ಕೆ ಚಿನ್ನದ ಬೆಲೆ ಗಗನಕ್ಕೇರುತ್ತಿದ್ದು, ಚಿನ್ನಾಭರಣ ಖರೀದಿಸಿಬೇಕೆನ್ನುವ ಹಲವರ ಕನಸು ಕನಸಾಗಿಯೇ ಉಳಿದಿದೆ. ಈ ಬೆನ್ನಲ್ಲೇ ಇದೀಗ ಚಿನ್ನ ಖರೀದಿಗೆ ಕಾಲ ಕೂಡಿಬಂದಿದೆ. ಆಭರಣ ತಯಾರಕರು ಮತ್ತು ಚಿಲ್ಲರೆ ಮಾರಾಟಗಾರರಿಂದ ಬೇಡಿಕೆ ಕುಸಿತ ಕಂಡ ಪರಿಣಾಮವಾಗಿ ಇಲ್ಲಿನ ಚಿನಿವಾರಪೇಟೆಯಲ್ಲಿ ಬುಧವಾರ ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ ಕಂಡುಬಂದಿದೆ. ಸದ್ಯ ಚಿನ್ನದ ಬೆಲೆ 10 ಗ್ರಾಂಗೆ 345 ರೂ.ಗಳಷ್ಟು ಕಡಿಮೆಯಾಗಿದ್ದು, 85,178 ರೂ.ಗೆ ಮಾರಾಟವಾಗಿದೆ. ಮಲ್ಟಿ ಕಮೊಡಿಟಿ ಎಕ್ಸ್‌ಚೇಂಜ್‌ನಲ್ಲಿ (MCX), ಬುಧವಾರ

ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ Read More »

ಕರ್ನಾಟಕ

ಮಹಿಳಾ ಉದ್ಯೋಗಿಗಳಿಗೆ ವರ್ಕ್ ಫ್ರಂ ಹೋಂ ನಿಯಮ ಜಾರಿಗೆ ಮುಂದಾದ ಆಂದ್ರಪ್ರದೇಶ

(ನ್ಯೂಸ್ ಕಡಬ) newskadaba.com, ಫೆ.12. ಆಂಧ್ರಪ್ರದೇಶ ಸರ್ಕಾರವು ಮಹಿಳಾ ಐಟಿ ವಲಯದಲ್ಲಿ ಕೆಲಸ ಮಾಡುವ ಮಹಿಳೆಯರಿಗಾಗಿ ವರ್ಕ್​ ಫ್ರಂ ಹೋಂ ನೀತಿಯನ್ನು ಜಾರಿಗೆ ತರಲು ಸರ್ಕಾರ ಮುಂದಾಗಿದೆ. ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಈ ಕುರಿತು ಮಾತನಾಡಿ, . ಕೋವಿಡ್ 19 ಸಮಯದಲ್ಲಿ ಕೆಲಸದ ಸಂಸ್ಕೃತಿ ಬದಲಾಗಿರುವುದನ್ನು ಉಲ್ಲೇಖಿಸಿರುವ ಅವರು ತಂತ್ರಜ್ಞಾನದ ಲಭ್ಯತೆಯು ಮನೆಯಿಂದಲೇ ಕೆಲಸ ಮಾಡುವ ಪರಿಕಲ್ಪನೆಯನ್ನು ಉತ್ತೇಜಿಸಿದೆ ಎಂದು ಹೇಳಿದರು. ಆಂಧ್ರಪ್ರದೇಶ ಐಟಿ ಮತ್ತು ಜಿಸಿಸಿ ನೀತಿ 4.0 ಅಡಿಯಲ್ಲಿ, ಸರ್ಕಾರವು ಪ್ರತಿ ನಗರ,

ಮಹಿಳಾ ಉದ್ಯೋಗಿಗಳಿಗೆ ವರ್ಕ್ ಫ್ರಂ ಹೋಂ ನಿಯಮ ಜಾರಿಗೆ ಮುಂದಾದ ಆಂದ್ರಪ್ರದೇಶ Read More »

ಬ್ರೇಕಿಂಗ್ ನ್ಯೂಸ್

ಟಿವಿಎಸ್ ಮೋಟಾರ್ ಕಂಪನಿಯಿಂದ ರಾಜ್ಯದಲ್ಲಿ 2 ಸಾವಿರ ಕೋಟಿ ರೂ. ಹೂಡಿಕೆ

(ನ್ಯೂಸ್ ಕಡಬ) newskadaba.com, ಫೆ.12. ಬೆಂಗಳೂರು: ಮೈಸೂರಿನಲ್ಲಿ ತನ್ನ ಉತ್ಪಾದನೆ ಮತ್ತು ಎಂಜಿನಿಯರಿಂಗ್ ಕಾರ್ಯಾಚರಣೆಗಳನ್ನು ವಿಸ್ತರಿಸುವುದರ ಜೊತೆಗೆ ಕರ್ನಾಟಕದಲ್ಲಿ ಜಾಗತಿಕ ಸಾಮರ್ಥ್ಯ ಕೇಂದ್ರವನ್ನು ಸ್ಥಾಪಿಸುವುದಾಗಿ ಟಿವಿಎಸ್ ಮೋಟಾರ್ ಕಂಪನಿ ಹೇಳಿದೆ. ಕಂಪನಿಯು ರಾಜ್ಯದಲ್ಲಿ ಪರೀಕ್ಷಾ ಟ್ರ್ಯಾಕ್ ಅನ್ನು ನಿರ್ಮಿಸುತ್ತದೆ ಮತ್ತು ರಾಜ್ಯದಲ್ಲಿ ಹೊಸ ಕೇಂದ್ರಗಳನ್ನು ಆರಂಭಿಸಲು ಮೂಲಸೌಕರ್ಯವನ್ನು ಅಭಿವೃದ್ಧಿಪಡಿಸಲಿದೆ ಎಂದು ಟಿವಿಎಸ್ ಹೇಳಿದೆ. ಬೆಂಗಳೂರಿನಲ್ಲಿ ನಡೆಯುತ್ತಿರುವ ಜಾಗತಿಕ ಹೂಡಿಕೆದಾರರ ಸಮಾವೇಶ(ಜಿಐಎಂ) ಇನ್ವೆಸ್ಟ್ ಕರ್ನಾಟಕ 2025 ಉದ್ಘಾಟನಾ ಸಮಾರಂಭದಲ್ಲಿ ಟಿವಿಎಸ್ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಸುದರ್ಶನ್ ವೇಣು ಅವರು ಕಂಪನಿಯ

ಟಿವಿಎಸ್ ಮೋಟಾರ್ ಕಂಪನಿಯಿಂದ ರಾಜ್ಯದಲ್ಲಿ 2 ಸಾವಿರ ಕೋಟಿ ರೂ. ಹೂಡಿಕೆ Read More »

ಬ್ರೇಕಿಂಗ್ ನ್ಯೂಸ್

ಬಂಟ್ವಾಳ: ಚಾಲಕನಿಗೆ ಮೂರ್ಛೆ ರೋಗ ಬಂದು 100 ಮೀ.ನಷ್ಟು ಚಲಿಸಿದ ಲಾರಿ – ತಪ್ಪಿದ ಅನಾಹುತ

(ನ್ಯೂಸ್ ಕಡಬ) newskadaba.com, ಫೆ.12. ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು ೧೦೦ ಮೀ.ನಷ್ಟು ಚಲಿಸಿ ನಿಂತಿರುವ ಘಟನೆ ಇಂದು ಬೆಳಗ್ಗೆ 7.45ರ ಸುಮಾರಿಗೆ ನಡೆದಿದೆ. ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಡಿವೈಡರ್ ಮೇಲೆ ಅಳವಡಿಸಿದ್ದ ರಸ್ತೆ ಸೂಚನಾ ಫಲಕಕ್ಕೆ ಹಾನಿಯಾಗಿರುವುದು ಬಿಟ್ಟರೆ ಉಳಿದಂತೆ ಯಾವುದೇ ಹಾನಿ ಉಂಟಾಗಿಲ್ಲ.‌ ಲಾರಿಯು ಬೆಂಗಳೂರು ಭಾಗದಿಂದ ಮಂಗಳೂರು ಭಾಗಕ್ಕೆ ಚಲಿಸುತ್ತಿತ್ತು‌ ಎನ್ನಲಾಗಿದೆ.

ಬಂಟ್ವಾಳ: ಚಾಲಕನಿಗೆ ಮೂರ್ಛೆ ರೋಗ ಬಂದು 100 ಮೀ.ನಷ್ಟು ಚಲಿಸಿದ ಲಾರಿ – ತಪ್ಪಿದ ಅನಾಹುತ Read More »

ಕರಾವಳಿ

ಅಯೋಧ್ಯೆ ರಾಮ ಮಂದಿರದ ಪ್ರಧಾನ ಅರ್ಚಕ ಸತ್ಯೇಂದ್ರ ದಾಸ್ ವಿಧಿವಶ

(ನ್ಯೂಸ್ ಕಡಬ) newskadaba.com, ಫೆ.12. ಲಖನೌ: ಅಯೋಧ್ಯೆ ರಾಮ ಮಂದಿರದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ವಿಧಿವಶರಾಗಿದ್ದಾರೆ. ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಬುಧವಾರ ಬೆಳಿಗ್ಗೆ 7 ಗಂಟೆಗೆ ಲಕ್ನೋದ ಸಂಜಯ್ ಗಾಂಧಿ ಪಿಜಿಐನಲ್ಲಿ ನಿಧನರಾದರು. ಅವರಿಗೆ 87 ವರ್ಷ ವಯಸ್ಸಾಗಿತ್ತು. ಬಾಬರಿ ಮಸೀದಿ ಧ್ವಂಸದಿಂದ ಹಿಡಿದು ಭವ್ಯವಾದ ರಾಮಮಂದಿರ ನಿರ್ಮಾಣದವರೆಗೆ ಎಲ್ಲದಕ್ಕೂ ಸಾಕ್ಷಿಯಾಗಿದ್ದ ಆಚಾರ್ಯ ಸತ್ಯೇಂದ್ರ ದಾಸ್ ಅವರು 1993 ರಿಂದ ರಾಮಲಾಲಾ ಅವರ ಸೇವೆಯಲ್ಲಿ ನಿರತರಾಗಿದ್ದರು. ಅವರು ಭವ್ಯ ದೇವಾಲಯದಲ್ಲಿ ರಾಮಲಲ್ಲಾಗೆ ಸೇವೆ

ಅಯೋಧ್ಯೆ ರಾಮ ಮಂದಿರದ ಪ್ರಧಾನ ಅರ್ಚಕ ಸತ್ಯೇಂದ್ರ ದಾಸ್ ವಿಧಿವಶ Read More »

ಬ್ರೇಕಿಂಗ್ ನ್ಯೂಸ್

ಅಕ್ರಮ ಮರಳು ದಂಧೆ ತಡೆಯಲು ಹೋದ ಮಹಿಳಾ ಅಧಿಕಾರಿಗೆ ಬೆದರಿಕೆ, ನಿಂದನೆ: ಮೂವರ ಬಂಧನ

(ನ್ಯೂಸ್ ಕಡಬ) newskadaba.com, ಫೆ.12. ಭದ್ರಾವತಿ: ಅಕ್ರಮ ಮರಳು ಗಣಿಗಾರಿಕೆ ನಡೆಯುತ್ತಿದ್ದ ಸ್ಥಳದ ಮೇಲೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಮಹಿಳಾ ಅಧಿಕಾರಿಯೊಬ್ಬರು ದಾಳಿ ನಡೆಸಿದ ಸಂದರ್ಭದಲ್ಲಿ ಜಿಲ್ಲೆಯ ಶಾಸಕರೊಬ್ಬರ ಪುತ್ರ ಅಶ್ಲೀಲ ಪದಗಳಿಂದ ನಿಂದಿಸಿ, ಬೆದರಿಕೆ ಹಾಕಿದ ಪ್ರಕರಣ ರಾಜ್ಯದಲ್ಲಿ ಸಾಕಷ್ಟು ಸದ್ದು ಮಾಡುತ್ತಿದ್ದು, ಈ ನಡುವಲ್ಲೇ ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ಬಂಧಿತರನ್ನು ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಮಾವಿನಕಟ್ಟೆಯ ರವಿ (30), ಹಾಸನ ಜಿಲ್ಲೆಯ ಅರಕಲಗೂಡಿನ ವರುಣ್ (34)

ಅಕ್ರಮ ಮರಳು ದಂಧೆ ತಡೆಯಲು ಹೋದ ಮಹಿಳಾ ಅಧಿಕಾರಿಗೆ ಬೆದರಿಕೆ, ನಿಂದನೆ: ಮೂವರ ಬಂಧನ Read More »

ಕರ್ನಾಟಕ
Scroll to Top