News Kadaba

ರಾಜ ಶಿವಾಜಿ ಪಾತ್ರಕ್ಕೆ ರಿತೇಶ್ ದೇಶ್‌ಮುಖ್ ಸೂಕ್ತವಲ್ಲ- ಟ್ರೋಲ್‌ ಆದ ನಟ ರಿತೇಶ್‌

(ನ್ಯೂಸ್‌ ಕಡಬ) newskadaba.com,  ಎ.22: ಬಾಲಿವುಡ್ ನಟ ರಿತೇಶ್ ದೇಶ್‌ಮುಖ್ ಅಭಿನಯದ ಬಹುನಿರೀಕ್ಷಿತ ಐತಿಹಾಸಿಕ ಸಿನಿಮಾ ‘ರಾಜ ಶಿವಾಜಿ’ ಟ್ರೇಲರ್ ಇತ್ತೀಚೆಗೆ ಬಿಡುಗಡೆ ಆಗಿದೆ. ಟ್ರೇಲರ್ ರಿಲೀಸ್ ಆದ ಬೆನ್ನಲ್ಲೇ ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧ ಚರ್ಚೆಗಳು ಶುರುವಾಗಿವೆ. ಏಪ್ರಿಲ್ 20ರಂದು ಅದ್ದೂರಿಯಾಗಿ ಟ್ರೇಲರ್ ಲಾಂಚ್ ಆಗಿದ್ದರೂ, ಛತ್ರಪತಿ ಶಿವಾಜಿ ಮಹಾರಾಜರ ಪಾತ್ರಕ್ಕೆ ರಿತೇಶ್ ಆಯ್ಕೆಯಾಗಿರುವುದು ಸರಿಯಲ್ಲ ಎಂಬ ಮಾತುಗಳು ಕೇಳಿಬರುತ್ತಿವೆ. ಪ್ರೇಕ್ಷಕರು ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ. ಸೋಷಿಯಲ್ ಮೀಡಿಯಾ ವೇದಿಕೆಗಳಲ್ಲಿ ಈ […]

ರಾಜ ಶಿವಾಜಿ ಪಾತ್ರಕ್ಕೆ ರಿತೇಶ್ ದೇಶ್‌ಮುಖ್ ಸೂಕ್ತವಲ್ಲ- ಟ್ರೋಲ್‌ ಆದ ನಟ ರಿತೇಶ್‌ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸಿಇಟಿ ಪರೀಕ್ಷೆಗೆ ಹೋಗುವವರ ಗಮನಕ್ಕೆ; ಕಾಲರ್ ಇಲ್ಲದ ಅರ್ಧ ತೋಳಿನ ಬಟ್ಟೆ ಕಡ್ಡಾಯ

(ನ್ಯೂಸ್‌ ಕಡಬ) newskadaba.com,  ಎ.22: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ನಡೆಸುವ ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಗಾಗಿನ ಸಾಮಾನ್ಯ ಪ್ರವೇಶ ಪರೀಕ್ಷೆ (CET) ರಾಜ್ಯಾದ್ಯಂತ ಇಂದಿನಿಂದ (ಏಪ್ರಿಲ್ 22) ಆರಂಭವಾಗುತ್ತಿದೆ. ಇಂಜಿನಿಯರಿಂಗ್, ಕೃಷಿ ವಿಜ್ಞಾನ ಮತ್ತು ಪಶುವೈದ್ಯಕೀಯ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ಈ ಪರೀಕ್ಷೆ ನಡೆಯುತ್ತಿದೆ. ವರ್ಷ ದಾಖಲೆಯ ಸಂಖ್ಯೆಯ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಒಟ್ಟು 3,30,479 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ಇವರಲ್ಲಿ 1,86,099 ಹುಡುಗಿಯರು ಮತ್ತು 1,44,380 ಹುಡುಗರು ಸೇರಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲೇ 163 ಕೇಂದ್ರಗಳಲ್ಲಿ

ಸಿಇಟಿ ಪರೀಕ್ಷೆಗೆ ಹೋಗುವವರ ಗಮನಕ್ಕೆ; ಕಾಲರ್ ಇಲ್ಲದ ಅರ್ಧ ತೋಳಿನ ಬಟ್ಟೆ ಕಡ್ಡಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪುತ್ತೂರು : ಜಾತ್ರಾ ಮಹೋತ್ಸವದ ವೇಳೆ ಸಾರ್ವಜನಿಕ ಶಾಂತಿ ಭಂಗ – ಇಬ್ಬರು ಅರೆಸ್ಟ್‌

(ನ್ಯೂಸ್‌ ಕಡಬ) newskadaba.com,  ಎ.22: ನಗರದ ಪೇಟೆಯಲ್ಲಿರುವ ದೇವಸ್ಥಾನದ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಗಲಾಟೆ ನಡೆಸಿ ಸಾರ್ವಜನಿಕ ಶಾಂತಿಗೆ ಭಂಗ ಉಂಟುಮಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಪುತ್ತೂರು ನಗರ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ಪುತ್ತೂರು ನರಿಮೊಗರು ನಿವಾಸಿ ಹರ್ಷ ಗೋಪಾಲ್ ಹಾಗೂ ಕಬಕ ನಿವಾಸಿ ಹರೀಶ್ ಎಂದು ಗುರುತಿಸಲಾಗಿದೆ. ಏಪ್ರಿಲ್ 20 ರಂದು ರಾತ್ರಿ ವೇಳೆ ದೇವಸ್ಥಾನದ ಜಾತ್ರಾ ಸ್ಥಳದಲ್ಲಿ ಪುತ್ತೂರು ನಗರ ಠಾಣೆಯ ಇಬ್ಬರು ಪೊಲೀಸ್ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುತ್ತಿದ್ದರು. ಈ ವೇಳೆ ದೇವಸ್ಥಾನದ

ಪುತ್ತೂರು : ಜಾತ್ರಾ ಮಹೋತ್ಸವದ ವೇಳೆ ಸಾರ್ವಜನಿಕ ಶಾಂತಿ ಭಂಗ – ಇಬ್ಬರು ಅರೆಸ್ಟ್‌ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

“SSLC ಫಲಿತಾಂಶ 2026: ಅಂಕಪಟ್ಟಿ ಡೌನ್‌ಲೋಡ್ ಮಾಡುವುದು ಹೇಗೆ? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್!”

(ನ್ಯೂಸ್‌ ಕಡಬ) newskadaba.com,  ಎ.22:ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (KSEAB) 2026ರ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶವನ್ನು ಶೀಘ್ರದಲ್ಲೇ ಪ್ರಕಟಿಸಲು ಸಿದ್ಧತೆ ನಡೆಸಿದೆ. ಈ ಕುರಿತಾದ ಸಂಪೂರ್ಣ ಮಾಹಿತಿ ಮತ್ತು ಅಂಕಪಟ್ಟಿ ಡೌನ್‌ಲೋಡ್ ಮಾಡುವ ವಿಧಾನ ಇಲ್ಲಿದೆ: ಎಸ್ಸೆಸ್ಸೆಲ್ಸಿ ಫಲಿತಾಂಶ 2026: ಪ್ರಮುಖ ವಿವರಗಳು ರಾಜ್ಯದಲ್ಲಿ ಮಾರ್ಚ್ 18 ರಿಂದ ಏಪ್ರಿಲ್ 2ರವರೆಗೆ ನಡೆದ 10ನೇ ತರಗತಿ ಬೋರ್ಡ್ ಪರೀಕ್ಷೆಯ ಫಲಿತಾಂಶಕ್ಕಾಗಿ ಸುಮಾರು 9 ಲಕ್ಷ ವಿದ್ಯಾರ್ಥಿಗಳು ಕಾಯುತ್ತಿದ್ದಾರೆ. ಹೈಕೋರ್ಟ್‌ನ ಇತ್ತೀಚಿನ ತೀರ್ಪಿನ ಅನ್ವಯ, ತೃತೀಯ ಭಾಷೆ

“SSLC ಫಲಿತಾಂಶ 2026: ಅಂಕಪಟ್ಟಿ ಡೌನ್‌ಲೋಡ್ ಮಾಡುವುದು ಹೇಗೆ? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್!” Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪಟಾಕಿ ಫ್ಯಾಕ್ಟರಿಯಲ್ಲಿ ಸ್ಫೋಟ – 13 ಮಂದಿ ಮೃತ್ಯು

(ನ್ಯೂಸ್‌ ಕಡಬ) newskadaba.com,  ಎ.22: ಪೂರಂ ಉತ್ಸವದ ಸಿದ್ಧತೆಗಳ ಸಮಯದಲ್ಲಿ ತಿರುವಂಬಾಡಿಯ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಹದಿಮೂರು ಜನ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಅಲ್ಲದೇ 27 ಕಾರ್ಮಿಕರು ತೀವ್ರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಅಪಘಾತದ ಸಮಯದಲ್ಲಿ ಸುಮಾರು 40 ಜನ ಆ ಸ್ಥಳದಲ್ಲಿದ್ದರು ಎಂಬ ಪ್ರಾಥಮಿಕ ಮಾಹಿತಿಯೊಂದು ಬಹಿರಂಗಗೊಂಡಿದೆ. ಹಬ್ಬಕ್ಕಾಗಿ ಪಟಾಕಿ ತಯಾರಿಸಲಾಗುತ್ತಿದ್ದ ಘಟಕದಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ ಹಲವರು ಗಾಯಗೊಂಡಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ.ಘಟನೆಯ ಬಳಿಕ ಅಗ್ನಿಶಾಮಕ ದಳ, ಪೊಲೀಸರು ಮತ್ತು ಆಂಬ್ಯುಲೆನ್ಸ್ ಸಿಬ್ಬಂದಿ

ಪಟಾಕಿ ಫ್ಯಾಕ್ಟರಿಯಲ್ಲಿ ಸ್ಫೋಟ – 13 ಮಂದಿ ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು : ಭಾರೀ ಗಾಳಿ, ಮಳೆ – ಬೃಹತ್ ಮರದ ಕೊಂಬೆ ಮುರಿದು ಬಿದ್ದು ಮನೆ, ವಾಹನಗಳಿಗೆ ಹಾನಿ

(ನ್ಯೂಸ್‌ ಕಡಬ) newskadaba.com,  ಎ.22: ನಗರದಲ್ಲಿ ಬೆಳಗಿನ ಜಾವ ಭಾರೀ ಗಾಳಿಯೊಂದಿಗೆ ಸುರಿದ ಮಳೆಗೆ ಬೃಹತ್‌ ಮರದ ಕೊಂಬೆ ಮುರಿದು ಬಿದ್ದು ಮನೆ, ವಾಹನಗಳಿಗೆ ಹಾನಿಯಾದ ಘಟನೆ ನಡೆದಿದೆ. ನಗರದ ಚಮ್ಮಾರ ಗಲ್ಲಿ, ಬಸವನಗುಡಿ ಬಳಿಯ ಅಶ್ವಥ ಕಟ್ಟೆಯಲ್ಲಿ ಬೆಳಗಿನ ಜಾವ ಸುಮಾರು 3:30ಕ್ಕೆ ಈ ಘಟನೆ ಸಂಭವಿಸಿದೆ. ಅಶ್ವಥ ಕಟ್ಟೆ ಯಲ್ಲಿದ್ದ ಬೃಹತ್ ಅಶ್ವಥ ಮರದ ಕೊಂಬೆ ಏಕಾಏಕಿ ಮುರಿದು ಬಿದ್ದಿದೆ. ಮುರಿದ ಕೊಂಬೆ, ಹತ್ತಿರದಲ್ಲಿದ್ದ ಎರಡು ಮನೆಗಳ ಮೇಲೆ ಬಿದ್ದು, ಮನೆಗಳಿಗೆ ಭಾಗಶಃ ಹಾನಿಯಾಗಿದೆ.

ಮಂಗಳೂರು : ಭಾರೀ ಗಾಳಿ, ಮಳೆ – ಬೃಹತ್ ಮರದ ಕೊಂಬೆ ಮುರಿದು ಬಿದ್ದು ಮನೆ, ವಾಹನಗಳಿಗೆ ಹಾನಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಭಾರೀ ಮಳೆಗೆ ತಡೆಗೋಡೆ ಕುಸಿತ – 5 ಕಾರುಗಳಿಗೆ ಹಾನಿ

(ನ್ಯೂಸ್‌ ಕಡಬ) newskadaba.com,  ಎ.22: ಬುಧವಾರ ಬೆಳಿಗ್ಗೆ ಸುರಿದ ಭಾರೀ ಮಳೆಯಿಂದಾಗಿ ನಗರದ ಅತ್ತಾವರ ಸಮೀಪದ ಅಯ್ಯಪ್ಪ ಮಂದಿರದ ಮುಂಭಾಗ ತಡೆಗೋಡೆ ಕುಸಿದು ಬಿದ್ದ ಪರಿಣಾಮ ಐದು ಕಾರುಗಳು ಜಖಂಗೊಂಡ ಘಟನೆ ನಡೆದಿದೆ. ಅಕಸ್ಮಿಕವಾಗಿ ತಡೆಗೋಡೆ ಕುಸಿದುಬಿದ್ದ ಕಾರಣ ಅಲ್ಲಿ ನಿಲ್ಲಿಸಿದ್ದ ವಾಹನಗಳಿಗೆ ಹಾನಿಯಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಸ್ಥಳೀಯರು ಹಾಗೂ ಸಂಬಂಧಿಸಿದ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮಂಗಳೂರು: ಭಾರೀ ಮಳೆಗೆ ತಡೆಗೋಡೆ ಕುಸಿತ – 5 ಕಾರುಗಳಿಗೆ ಹಾನಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಭಯೋತ್ಪಾದನೆಗೆ ಭಾರತ ಎಂದಿಗೂ ತಲೆಬಾಗುವುದಿಲ್ಲ: ಪ್ರಧಾನಿ ಮೋದಿ

(ನ್ಯೂಸ್‌ ಕಡಬ) newskadaba.com,  ಎ.22: ಸರಿಯಾಗಿ ಒಂದು ವರ್ಷದ ಹಿಂದೆ ಪಹಲ್ಗಾಮ್‌ನ ಬೈಸರನ್‌ ಕಣಿವೆ ಪ್ರದೇಶದಲ್ಲಿ ನಡೆದ ಉಗ್ರರ ಬೀಭತ್ಸ ಕೃತ್ಯಕ್ಕೆ ಒಂದು ವರ್ಷ ಪೂರ್ಣಗೊಂಡಿದೆ. ಈ ಹೊತ್ತಿನಲ್ಲಿ ಪ್ರಧಾನಿ ನರೇಂದ್ರ ಮೋದಿ  ಮೃತರ ನೆನೆದು ಕಂಬನಿ ಮಿಡಿದಿದ್ದಾರೆ.ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ವೊಂದನ್ನ ಹಂಚಿಕೊಂಡಿದ್ದು, ಪಹಲ್ಗಾಮ್‌ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟ 26 ಮಂದಿಗೆ ಸಂತಾಪ ಸೂಚಿಸಿದ್ದಾರೆ. ಕಳೆದ ವರ್ಷ ಈ ದಿನದಂದು ನಡೆದ ಭೀಕರ ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ (Pahalgam terror attack) ಬಲಿಯಾದ ಮುಗ್ಧ ಜೀವಗಳನ್ನು ನೆನಪಿಸಿಕೊಳ್ಳುತ್ತಿದ್ದೇನೆ.

ಭಯೋತ್ಪಾದನೆಗೆ ಭಾರತ ಎಂದಿಗೂ ತಲೆಬಾಗುವುದಿಲ್ಲ: ಪ್ರಧಾನಿ ಮೋದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಾಪು: ಭೀಕರ ರಸ್ತೆ ಅಪಘಾತ – ಖಾಸಗಿ ಬಸ್ ಢಿಕ್ಕಿಯಾಗಿ 8 ವರ್ಷದ ಬಾಲಕಿ ಮೃತ್ಯು

(ನ್ಯೂಸ್‌ ಕಡಬ) newskadaba.com,  ಎ.22: ರಾಷ್ಟ್ರೀಯ ಹೆದ್ದಾರಿಯ ಕಾಪು ಸಾಯಿ ಸರ್ವಿಸ್ ಸ್ಟೇಷನ್ ಬಳಿ ಇಂದು ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟಿಯಲ್ಲಿ ಪ್ರಯಾಣಿಸುತ್ತಿದ್ದ ಎಂಟು ವರ್ಷದ ಬಾಲಕಿ ಮೃತಪಟ್ಟಿದ್ದಾಳೆ. ಘಟನೆಯ ವಿವರ ಸರ್ವಿಸ್ ರಸ್ತೆಯಿಂದ ರಾಷ್ಟ್ರೀಯ ಹೆದ್ದಾರಿಗೆ ಅತಿವೇಗವಾಗಿ ಪ್ರವೇಶಿಸುತ್ತಿದ್ದ ತಡೆರಹಿತ ಖಾಸಗಿ ಬಸ್, ಮುಂಭಾಗದಲ್ಲಿ ಚಲಿಸುತ್ತಿದ್ದ ಸ್ಕೂಟಿಗೆ ಹಿಂಬದಿಯಿಂದ ಬಲವಾಗಿ ಢಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಸ್ಕೂಟಿಯ ಹಿಂಬದಿಯಲ್ಲಿ ಕುಳಿತಿದ್ದ ಬಾಲಕಿ ಸಾತ್ವಿ ಶೆಟ್ಟಿ (8) ಸ್ಥಳದಲ್ಲೇ ಗಂಭೀರವಾಗಿ ಗಾಯಗೊಂಡು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ.

ಕಾಪು: ಭೀಕರ ರಸ್ತೆ ಅಪಘಾತ – ಖಾಸಗಿ ಬಸ್ ಢಿಕ್ಕಿಯಾಗಿ 8 ವರ್ಷದ ಬಾಲಕಿ ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಜಿತ್.ಕೆ ಕೋಡಿಂಬಾಳ ಇವರಿಗೆ ಪಿ.ಹೆಚ್.ಡಿ ಪದವಿ

(ನ್ಯೂಸ್‌ ಕಡಬ) newskadaba.com,  ಎ.22 ಕಡಬ ತಾಲೂಕಿನ ಕೋಡಿಂಬಾಳದ ಅಜಿತ್.ಕೆ ಇವರು ಕೋಯಂಬತ್ತೂರಿನ ಭಾರತೀಯ ವಿಶ್ವವಿದ್ಯಾಲಯದಿಂದ ಡಾಕ್ಟರ್ ಆಫ್ ಫಿಲಾಸಫಿ(ಪಿ.ಹೆಚ್.ಡಿ) ಪದವಿಯನ್ನು ಪಡೆದಿದ್ದಾರೆ. ಅಜಿತ್ ರವರು “ಫಾಲಿಸೈಟಿಕ್ ಓವರಿ ಸಿಂಡ್ರೋಮ್ ಗಾಗಿ ಆಹಾರ ಕ್ರಮದ ಮಧ್ಯಸ್ಥಿಕೆ ಮತ್ತು ಜೀವನಶೈಲಿ ಮಾರ್ಪಾಡು – ಒಂದು ನಿರೀಕ್ಷಿತ ಮಧ್ಯಸ್ಥಿಕೆಯ ಅಧ್ಯಯನ(dietary intervention and lifestyle modification in polycystic ovary syndrome – A prospective international study) ಎಂಬ ವಿಷಯದ ಕುರಿತು ಸಂಶೋಧನೆ ನಡೆಸಿ ಪಿ.ಹೆಚ್.ಡಿ ಪದವಿಯನ್ನು ಪಡೆದುಕೊಂಡಿದ್ದಾರೆ.

ಅಜಿತ್.ಕೆ ಕೋಡಿಂಬಾಳ ಇವರಿಗೆ ಪಿ.ಹೆಚ್.ಡಿ ಪದವಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top