News Kadaba

ಕೇಂದ್ರ ಬಜೆಟ್ 2025: ಕುಡಿಯುವ ನೀರು, ನೀರಾವರಿ ಯೋಜನೆಗಳಿಗೆ ಅನುಮೋದನೆ ನೀಡಬೇಕು, ಸಿಎಂ ಸಿದ್ದರಾಮಯ್ಯ ಒತ್ತಾಯ

(ನ್ಯೂಸ್ ಕಡಬ) newskadaba.com, ಜ.30 ಬೆಂಗಳೂರು: ಶನಿವಾರ ಮಂಡನೆಯಾಗಲಿರುವ ಕೇಂದ್ರ ಬಜೆಟ್ 2025ರಲ್ಲಿ ರಾಜ್ಯದಲ್ಲಿನ ಕುಡಿಯುವ ನೀರು ಮತ್ತು ನೀರಾವರಿ ಯೋಜನೆಗಳಿಗೆ ಅಗತ್ಯ ಅನುಮೋದನೆ ನೀಡಬೇಕು. ನಗರಗಳ ನಿರಂತರ ಬೆಳವಣಿಗೆಯನ್ನು ಬೆಂಬಲಿಸಲು ನಿರ್ಣಾಯಕ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಹೊಸ ಯೋಜನೆಯನ್ನು ರೂಪಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಬೆಂಗಳೂರು, ಮೈಸೂರು, ಮಂಗಳೂರು, ಹುಬ್ಬಳ್ಳಿ, ಬೆಳಗಾವಿ, ದಾವಣಗೆರೆ, ಬಳ್ಳಾರಿ, ರಾಯಚೂರು ಮತ್ತು ಕಲಬುರಗಿಯಂತಹ ನಗರಗಳು ಆರ್ಥಿಕ ಬೆಳವಣಿಗೆ ಮತ್ತು ಉದ್ಯೋಗ ನೀಡುವ ನಗರವಾಗಿ ಮುಂದುವರೆದಿದ್ದು, ತ್ವರಿತ ನಗರೀಕರಣ ಮತ್ತು ದೇಶದ […]

ಕೇಂದ್ರ ಬಜೆಟ್ 2025: ಕುಡಿಯುವ ನೀರು, ನೀರಾವರಿ ಯೋಜನೆಗಳಿಗೆ ಅನುಮೋದನೆ ನೀಡಬೇಕು, ಸಿಎಂ ಸಿದ್ದರಾಮಯ್ಯ ಒತ್ತಾಯ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಯಮುನಾ ನದಿ ವಿಷಪೂರಿತ ಆರೋಪ – ಕೇಜ್ರಿವಾಲ್ ವಿರುದ್ಧ ಪ್ರಕರಣ ದಾಖಲಿಸಲಿದೆ ಸರ್ಕಾರ

(ನ್ಯೂಸ್ ಕಡಬ) newskadaba.com, ಜ.29. : ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ “ಯಮುನಾ ವಿಷ” ಆರೋಪದ ವಿರುದ್ಧ ಹರಿಯಾಣ ಸರ್ಕಾರ ಪ್ರಕರಣ ದಾಖಲಿಸಲಿದೆ ಎಂದು ರಾಜ್ಯ ಸಚಿವ ವಿಪುಲ್ ಗೋಯಲ್ ಬುಧವಾರ ತಿಳಿಸಿದ್ದಾರೆ. “ಕೇಜ್ರಿವಾಲ್ ಅವರು ಹರಿಯಾಣ ಮತ್ತು ದೆಹಲಿಯ ಜನರಲ್ಲಿ ಭೀತಿಯನ್ನು ಹರಡಿದ್ದಾರೆ. ಅರವಿಂದ್ ಕೇಜ್ರಿ ವಾಲ್ ಬೇಜವಾಬ್ದಾರಿಯುತ ಹೇಳಿಕೆ ನೀಡಿದ್ದಾರೆ. ಹರಿಯಾಣ ಸರ್ಕಾರ ಆತನನ್ನು ಬಿಡುವುದಿಲ್ಲ. ಈ ಆರೋಪಗಳಲ್ಲಿ ಯಾವುದೇ ಹುರುಳಿಲ್ಲ “ಎಂದರು. ಹರಿಯಾಣದ ಬಿಜೆಪಿ ಸರ್ಕಾರವು ದೆಹಲಿಗೆ ಪೂರೈಸುವ ಯಮುನಾ

ಯಮುನಾ ನದಿ ವಿಷಪೂರಿತ ಆರೋಪ – ಕೇಜ್ರಿವಾಲ್ ವಿರುದ್ಧ ಪ್ರಕರಣ ದಾಖಲಿಸಲಿದೆ ಸರ್ಕಾರ Read More »

ಕರ್ನಾಟಕ

‘ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ನಾಳೆ ಕ್ಯಾಬಿನೆಟ್‌ನಲ್ಲಿ ಸುಗ್ರೀವಾಜ್ಞೆ ಜಾರಿ’- ಪರಮೇಶ್ವರ್‌

(ನ್ಯೂಸ್ ಕಡಬ) newskadaba.com, ಜ.29. : ನಾಳೆ ನಡೆಯುವ ಕ್ಯಾಬಿನೆಟ್‌ನಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ಹೊಸ ಕಾನೂನು ತರಲಿದ್ದು, ಸುಗ್ರೀವಾಜ್ಞೆ ಮೂಲಕ ಕಾನೂನು ಜಾರಿಗೆ ತರುತ್ತೇವೆ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ. ಸಿಎಂ ಸಭೆ ಬಳಿಕವೂ ಮೈಕ್ರೋ ಫೈನಾನ್ಸ್ ಕಂಪನಿಗಳು ಕಿರುಕುಳ ನೀಡುತ್ತಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಕಿರುಕುಳ ಆದರೆ ಪೊಲೀಸರಿಗೆ ದೂರು ಕೊಡಬೇಕು.ಪೊಲೀಸರು ತಕ್ಷಣ ಕ್ರಮ ತೆಗೆದುಕೊಳ್ಳುತ್ತಾರೆ. ಮೊನ್ನೆ ನಡೆದ ಸಭೆಯಲ್ಲಿ ಪೊಲೀಸರು ಇಂತಹ ಕೇಸ್ ಬಗ್ಗೆ ಸುಮೋಟೋ ತೆಗೆದುಕೊಳ್ಳಬೇಕು ಎಂದು ತಿಳಿಸಿದ್ದೇವೆ.

‘ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ನಾಳೆ ಕ್ಯಾಬಿನೆಟ್‌ನಲ್ಲಿ ಸುಗ್ರೀವಾಜ್ಞೆ ಜಾರಿ’- ಪರಮೇಶ್ವರ್‌ Read More »

ಕರ್ನಾಟಕ

ಮಹಾ ಕುಂಭಮೇಳದಲ್ಲಿ ಕಾಲ್ತುಳಿತ – ಪ್ರಧಾನಿ ಮೋದಿ ಸಂತಾಪ

(ನ್ಯೂಸ್ ಕಡಬ) newskadaba.com, ಜ.29. : ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಕಾಲ್ತುಳಿತ ಸಂಭವಿಸಿದ್ದು, ಇದರಿಂದ ಮೃತರಾದ ಕುಟುಂಬಗಳಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಮೌನಿ ಅಮಾವಾಸ್ಯೆಯಂದು ಪ್ರಯಾಗ್‌ರಾಜ್‌ನ ತ್ರಿವೇಣಿ ಸಂಗಮದಲ್ಲಿ ಸ್ನಾನ ಮಾಡಲು ಭಕ್ತರು ಭರದಿಂದ ಹರಿದು ಬಂದಿದ್ದರು. ಈ ವೇಳೆ ಕಾಲ್ತುಳಿತ ಸಂಭವಿಸಿ, 15ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ಶಂಕೆ ವ್ಯಕ್ತವಾಗಿದೆ. 60ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಈ ಬಗ್ಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ಗೆ ಪ್ರಧಾನಿ ಮೋದಿ ಕರೆ

ಮಹಾ ಕುಂಭಮೇಳದಲ್ಲಿ ಕಾಲ್ತುಳಿತ – ಪ್ರಧಾನಿ ಮೋದಿ ಸಂತಾಪ Read More »

ಬ್ರೇಕಿಂಗ್ ನ್ಯೂಸ್

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಲಕ್ಷಾಂತರ ರೂ. ಮೌಲ್ಯದ ವಾಹನಗಳು ಭಸ್ಮ

(ನ್ಯೂಸ್ ಕಡಬ) newskadaba.com, ಜ.29. ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, 100ಕ್ಕೂ ಹೆಚ್ಚ ವಾಹನಗಳು ಸುಟ್ಟು ಕರಕಲಾಗಿರುವ ಘಟನೆ ಜೆಡಿಎಸ್ ಕಚೇರಿ ಪಕ್ಕದ ಮೈದಾನದಲ್ಲಿ ಬುಧವಾರ ನಡೆದಿದೆ. ಜಪ್ತಿ ಮಾಡಿದ್ದ ವಾಹನಗಳನ್ನು ಪೊಲೀಸರು ಶೇಷಾದ್ರಿಪುರಂ ಬಳಿಯ ಜಕ್ಕರಾಯನ ಕೆರೆ ಗ್ರೌಂಡ್‌ನಲ್ಲಿ ಪಾರ್ಕ್ ಮಾಡಿದ್ದರು. ಈ ಪ್ರದೇಶದಲ್ಲಿ ಇಂದು ಬೆಳಗ್ಗೆ ಅಗ್ನಿ ಅವಘಡ ಸಂಭವಿಸಿದೆ. ಈಗಾಗಲೇ 5 ಕಾರು, 5 ಆಟೋ, 50 ಕ್ಕೂ ಹೆಚ್ಚು ಬೈಕ್‌ಗಳು ಸುಟ್ಟು ಕರಕಲಾಗಿದ್ದು, ಮತ್ತಷ್ಟು ವಾಹನಗಳಿಗೆ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಲಕ್ಷಾಂತರ ರೂ. ಮೌಲ್ಯದ ವಾಹನಗಳು ಭಸ್ಮ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಜಾತಿ ದೌರ್ಜನ್ಯ ಕೇಸಲ್ಲಿ ಶಿಕ್ಷೆ ಪ್ರಮಾಣ ಹೆಚ್ಚಿಸಿ: ಸಿಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com, ಜ.29. ಬೆಂಗಳೂರು: ಜಾತಿ ದೌರ್ಜನ್ಯ (ಅಟ್ರಾಸಿಟಿ) ಪ್ರಕರಣಗಳ ಶಿಕ್ಷೆಯ ಪ್ರಮಾಣ ಶೇ.10ಕ್ಕಿಂತ ಹೆಚ್ಚಾಗುವಂತೆ ಅಧಿಕಾರಿಗಳು ಕ್ರಮಕೈಗೊಳ್ಳಬೇಕು. ಅಟ್ರಾಸಿಟಿ ಪ್ರಕರಣಗಳ ಕುರಿತು ಜಿಲ್ಲಾಧಿಕಾರಿಗಳು ಪ್ರತಿ 3 ತಿಂಗಳಿಗೊಮ್ಮೆ ಸಭೆ ನಡೆಸಿ ಪ್ರಗತಿ ಪರಿಶೀಲನೆ ನಡೆಸಬೇಕು ಹಾಗೂ ದೌರ್ಜನ್ಯ ಎಸಗಿದವರಿಗೆ ಶಿಕ್ಷೆಯಾಗುವಂತೆ ಮಾಡುವಲ್ಲಿ ವಿಫಲ ರಾಗುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ವಿಧಾನಸೌಧದಲ್ಲಿ ಮಂಗಳವಾರ ಸಿದ್ದರಾಮಯ್ಯ ಅವರು ತಮ್ಮ ಅಧ್ಯಕ್ಷತೆಯಲ್ಲಿ ಅನುಸೂಚಿತ ಜಾತಿಗಳ ಮತ್ತು ಅನುಸೂಚಿತ ಬುಡಕಟ್ಟುಗಳ ರಾಜ್ಯಮಟ್ಟದ

ಜಾತಿ ದೌರ್ಜನ್ಯ ಕೇಸಲ್ಲಿ ಶಿಕ್ಷೆ ಪ್ರಮಾಣ ಹೆಚ್ಚಿಸಿ: ಸಿಎಂ ಸಿದ್ದರಾಮಯ್ಯ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನ್ಯಾಯಾಲಯದ ಮೂಲಕ ಜೀವನಾಂಶ ಪಡೆಯುವುದು ಸುಲಿಗೆಯಲ್ಲ: ಹೈಕೋರ್ಟ್

(ನ್ಯೂಸ್ ಕಡಬ) newskadaba.com, ಜ.29. ಬೆಂಗಳೂರು: ನ್ಯಾಯಾಲಯದ ಆದೇಶದ ಮೂಲಕ ಜೀವನಾಂಶ ಪಡೆಯುವುದು ಸುಲಿಗೆಗೆ ಸಮವಲ್ಲ ಎಂದು ಹೈಕೋರ್ಟ್ ಹೇಳಿದ್ದು, ತನ್ನ ಪತ್ನಿಯ ವಿರುದ್ಧ ವ್ಯಕ್ತಿಯೊಬ್ಬ ಮಾಡಿದ್ದ ಸುಲಿಗೆ ಮತ್ತು ಇತರ ಆರೋಪಗಳನ್ನು ರದ್ದುಗೊಳಿಸಿದೆ. 2023ರಲ್ಲಿ ಮಂಗಳೂರು ಮತ್ತು ಬೆಂಗಳೂರು ಮೂಲದ ದಂಪತಿಗಳು ಸಲ್ಲಿಸಿದ ಅರ್ಜಿಗಳನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ನ್ಯಾಯಬೀಠ ಪುರಸ್ಕರಿಸಿದ್ದು, ಪತ್ನಿಯೊಬ್ಬಳು ಜೀವನಾಂಶಕ್ಕಾಗಿ ನ್ಯಾಯಾಲಯದ ಮೊರೆ ಹೋದಾಗ, ನ್ಯಾಯಾಲಯ ಅದನ್ನು ಪರಿಗಣಿಸಿದಾಗ ಅದು ಸುಲಿಗೆಯ ಅಪರಾಧವಾಗುವುದಿಲ್ಲ. ಇದು ಕಾನೂನು ಪ್ರಕ್ರಿಯೆಗಳಾಗಿದ್ದು, ಉನ್ನತ ನ್ಯಾಯಾಲಯವು

ನ್ಯಾಯಾಲಯದ ಮೂಲಕ ಜೀವನಾಂಶ ಪಡೆಯುವುದು ಸುಲಿಗೆಯಲ್ಲ: ಹೈಕೋರ್ಟ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಹಾಕುಂಭ ಮೇಳದಲ್ಲಿ ಕಾಲ್ತುಳಿತ – ಹಲವು ಮಂದಿಗೆ ಗಂಭೀರ ಗಾಯ

(ನ್ಯೂಸ್ ಕಡಬ) newskadaba.com ಕಡಬ, ಜ.29. ಉತ್ತರ ಪ್ರದೇಶದ ಪ್ರಯಾಗ್​ರಾಜ್​ನಲ್ಲಿ ಮಹಾಕುಂಭ ಮೇಳದಲ್ಲಿ ಇಂದು ಮೌನಿ ಅಮಾವಾಸ್ಯೆ ಹಿನ್ನೆಲೆಯಲ್ಲಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಲು ಲಕ್ಷಾಂತರ ಮಂದಿ ಭಕ್ತರು ಆಗಮಿಸಿದ್ದು, ನೂಕುನುಗ್ಗಲು ಉಂಟಾಗಿತ್ತು. ಈ ಸಂದರ್ಭದಲ್ಲಿ ಕಾಲ್ತುಳಿತ ಸಂಭವಿಸಿ ಹಲವು ಮಂದಿ ಗಾಯಗೊಂಡಿರುವ ಘಟನೆ ವರದಿಯಾಗಿದೆ. ಸುಮಾರು 25-30 ಮಹಿಳೆಯರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ನಂತರ, ಗಂಗಾದಲ್ಲಿ ಅಮೃತ ಸ್ನಾನ ಅಥವಾ ಸಾಮೂಹಿಕ ಪವಿತ್ರ ಸ್ನಾನದಲ್ಲಿ ವಿಳಂಬವಾಯಿತು. ಮೌನಿ ಅಮವಾಸ್ಯೆಯಂದು ಅಮೃತ ಸ್ನಾನವು ಮಹಾ ಕುಂಭದ ಅತ್ಯಂತ

ಮಹಾಕುಂಭ ಮೇಳದಲ್ಲಿ ಕಾಲ್ತುಳಿತ – ಹಲವು ಮಂದಿಗೆ ಗಂಭೀರ ಗಾಯ Read More »

ಬ್ರೇಕಿಂಗ್ ನ್ಯೂಸ್

GSLV ರಾಕೆಟ್‌ನ 100 ನೇ ಉಡಾವಣೆಯೊಂದಿಗೆ ಮೈಲಿಗಲ್ಲನ್ನು ಆಚರಿಸಿದ ಇಸ್ರೋ

(ನ್ಯೂಸ್ ಕಡಬ) newskadaba.com ಕಡಬ, ಜ.28. ಭಾರತದ ಬಾಹ್ಯಾಕಾಶ ಸಂಸ್ಥೆ ಇಸ್ರೋ ಬುಧವಾರ ಬೆಳಿಗ್ಗೆ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ತನ್ನ 100 ನೇ ಜಿಎಸ್‌ಎಲ್‌ವಿ ರಾಕೆಟ್‌ನ ಯಶಸ್ವಿ ಉಡಾವಣೆಯೊಂದಿಗೆ ಮಹತ್ವದ ಮೈಲಿಗಲ್ಲನ್ನು ಗುರುತಿಸಿದೆ. GSLV-F15 ರಾಕೆಟ್ ಬೆಳಿಗ್ಗೆ 6:23 ಕ್ಕೆ ಮೇಲಕ್ಕೆತ್ತಿತು, NVS-02 ನ್ಯಾವಿಗೇಷನ್ ಉಪಗ್ರಹವನ್ನು ಬಾಹ್ಯಾಕಾಶಕ್ಕೆ ಕೊಂಡೊಯ್ಯಿತು, ರಾಷ್ಟ್ರದ ಬಾಹ್ಯಾಕಾಶ ಪರಿಶೋಧನೆಯ ಸಾಧನೆಗಳಿಗೆ ಮತ್ತೊಂದು ವಿಜಯವನ್ನು ಬಾರಿಸಿದೆ.ಐತಿಹಾಸಿಕ ಘಟನೆಯನ್ನು ಇಸ್ರೋ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದು, “ಲಿಫ್ಟಾಫ್! GSLV-F15 ಯಶಸ್ವಿಯಾಗಿ ತನ್ನ ಯೋಜಿತ ಕಕ್ಷೆಗೆ

GSLV ರಾಕೆಟ್‌ನ 100 ನೇ ಉಡಾವಣೆಯೊಂದಿಗೆ ಮೈಲಿಗಲ್ಲನ್ನು ಆಚರಿಸಿದ ಇಸ್ರೋ Read More »

ಬ್ರೇಕಿಂಗ್ ನ್ಯೂಸ್

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ಗೆ ನಿಂದಿಸಿದ ಆರೋಪ ಕೇಸ್: ಸಿ.ಟಿ.ರವಿಗೆ ತಾತ್ಕಾಲಿಕ ರಿಲೀಫ್ ನೀಡಿದ ಹೈಕೋರ್ಟ್

(ನ್ಯೂಸ್ ಕಡಬ) newskadaba.com ಜ.28: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ಗೆ ನಿಂದಿಸಿದ ಆರೋಪ ಪ್ರಕರಣದಲ್ಲಿ ಸಿ.ಟಿ.ರವಿ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಈ ಕೇಸ್ ಸಂಬಂಧ ಸಿ.ಟಿ.ರವಿ ವಿರುದ್ಧ ಬಲವಂತದ ಕ್ರಮ ಜರುಗಿಸದಂತೆ ಹೈಕೋರ್ಟ್ ಆದೇಶಿಸಿದೆ. ಪ್ರಕರಣ ರದ್ದು ಕೋರಿ ಸಿ.ಟಿ.ರವಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಜ.30ಕ್ಕೆ ಮುಂದೂಡಿದೆ. ಈ ಮಧ್ಯೆ, ಸಿಐಡಿ ತಂಡ ತನಿಖೆ ಭಾಗವಾಗಿ ಸ್ಥಳ ಮಹಜರಿಗೆ ಮತ್ತೊಮ್ಮೆ ಪ್ರಯತ್ನ ನಡೆಸಲು ಮುಂದಾಗಿದೆ. ಇದಕ್ಕೆ ಸಭಾಪತಿಗಳು ಗರಂ ಆಗಿದ್ದು, ಪ್ರಕರಣವನ್ನು ಎಥಿಕ್ಸ್ ಕಮಿಟಿಗೆ ಒಪ್ಪಿಸಿ ಆದೇಶ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ಗೆ ನಿಂದಿಸಿದ ಆರೋಪ ಕೇಸ್: ಸಿ.ಟಿ.ರವಿಗೆ ತಾತ್ಕಾಲಿಕ ರಿಲೀಫ್ ನೀಡಿದ ಹೈಕೋರ್ಟ್ Read More »

ಕರ್ನಾಟಕ
Scroll to Top