News Kadaba

ಅಮಿತ್‌ ಶಾ ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

(ನ್ಯೂಸ್ ಕಡಬ) newskadaba.com ಜ.27: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಸಾಧುಗಳ ಜೊತೆಗೆ ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ. ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ ನಂತರ ಅವರು ಬಡೇ ಹನುಮಾನ್ ಜಿ ದೇವಸ್ಥಾನ ಮತ್ತು ಅಭಯವತ್‌ಗೆ ಭೇಟಿ ನೀಡಲಿದ್ದಾರೆ. ನಂತರ ಜುನಾ ಅಖಾರಕ್ಕೆ ತೆರಳಿ ಮಹಾರಾಜರು ಮತ್ತು ಅಖಾರದ ಇತರ ಸಂತರನ್ನು ಭೇಟಿ ಮಾಡಿ ಅವರೊಂದಿಗೆ ಭೋಜನ ಸೇವಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಫೆ. 5 ರಂದು ಪವಿತ್ರ ಸ್ನಾನ ಮಾಡಲಿದ್ದಾರೆ.

ಅಮಿತ್‌ ಶಾ ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ Read More »

ಬ್ರೇಕಿಂಗ್ ನ್ಯೂಸ್

ಮೈಸೂರು: ಹೃದಯಾಘಾತದಿಂದ SSLC ವಿದ್ಯಾರ್ಥಿನಿ ಸಾವು

(ನ್ಯೂಸ್ ಕಡಬ) newskadaba.com ಜ.27  ಮೈಸೂರು: ಹೃದಯಾಘಾತದಿಂದ ಎಸ್​ಎಸ್​ಎಲ್​ಸಿ ವಿದ್ಯಾರ್ಥಿನಿ ಮೃತಪಟ್ಟಿರುವ ಘಟನೆ ಪಿರಿಯಾಪಟ್ಟಣ ತಾಲೂಕಿನ ಕೆಲ್ಲೂರು ಗ್ರಾಮದಲ್ಲಿ ಸೋಮವಾರ ಸಂಭವಿಸಿದೆ. ನಾಗರಾಜ್, ವಸಂತ ದಂಪತಿ ಪುತ್ರಿ ದೀಪಿಕಾ (15) ಮೃತ ವಿದ್ಯಾರ್ಥಿನಿ. ರಾವಂದೂರು ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಎಸ್‌ಎಸ್ ಎಲ್‌ಸಿ ವ್ಯಾಸಂಗ ಮಾಡುತ್ತಿದ್ದ ದೀಪಿಕಾ ಭಾನುವಾರ ಇದ್ದಕ್ಕಿದ್ದಂತೆ ಅಸ್ವಸ್ಥಳಾಗಿದ್ದಳು. ಕೂಡಲೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಅಷ್ಟರಲ್ಲಾಗಲೇ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ. ಸ್ಥಳದಲ್ಲಿ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ.

ಮೈಸೂರು: ಹೃದಯಾಘಾತದಿಂದ SSLC ವಿದ್ಯಾರ್ಥಿನಿ ಸಾವು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಡುಪಿಯ ಶಾಲೆಗೆ ಬಾಂಬ್ ಬೆದರಿಕೆ

(ನ್ಯೂಸ್ ಕಡಬ) newskadaba.com ಜ.27  ಉಡುಪಿ:  ಬೆಳ್ಳಂಬೆಳಗ್ಗೆ ಉಡುಪಿಯ ಪ್ರತಿಷ್ಠಿತ ಖಾಸಗಿ ಶಾಲೆಗೆ ಬಾಂಬ್‌ ಬೆದರಿಕೆಯ ಇಮೇಲ್‌ ಬಂದಿದ್ದು, ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಕೂಡಲೇ ಸ್ಥಳಕ್ಕೆ ಪೊಲೀಸರಿಗೆ ಆಗಮಿಸಿದ್ದು, ತನಿಖೆ ನಡೆಸಲಾಗುತ್ತಿದೆ. ಇದುವರೆಗೆ ಯಾವುದೇ ಸಂಶಯಾಸ್ಪದ ವಸ್ತು ಪತ್ತೆಯಾಗಿಲ್ಲ. ಉಡುಪಿಯ ಶಾರದಾ ಇಂಟರ್‌ನ್ಯಾಷನಲ್‌ ವಸತಿ ಶಾಲೆಗೆ ಇಮೇಲೆ ಮೂಲಕ ಬಾಂಬ್‌ ಬೆದರಿಕೆ ಹಾಕಲಾಗಿದ್ದು, ಇಲ್ಲಿ ರಾಜ್ಯದ ವಿವಿಧ ಭಾಗಗಳ, ವಿವಿಧ ರಾಜ್ಯಗಳ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಬಾಂಬ್‌ ಬೆದರಿಕೆಯ ಸಂದೇಶ ಬರುತ್ತಿದ್ದಂತೆ ಶಾಲಾ ಆಡಳಿತ ಮಂಡಳಿ

ಉಡುಪಿಯ ಶಾಲೆಗೆ ಬಾಂಬ್ ಬೆದರಿಕೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಸುಳ್ಯ: ಮಂಡೇಕೋಲಿನಲ್ಲಿ ಆನೆಯ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಜ.27  : ಗಂಡಾನೆಯ ಮೃತದೇಹವೊಂದು ಪತ್ತೆಯಾಗಿರುವ ಘಟನೆ ದಕ್ಷಿಣ ಕನ್ನಡ ಮತ್ತು ಕೇರಳ ಗಡಿ ಭಾಗದ ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದ ಎರ್ಕಲ್ಪಾಡಿಯಲ್ಲಿ ಭಾನುವಾರ ನಡೆದಿದೆ. ಮಂಡೆಕೋಲು ರಿಸರ್ವ್ ಫಾರೆಸ್ಟ್‌ನಲ್ಲಿ ಸ್ಥಳೀಯರಿಗೆ ಸುಮಾರು 50-55 ವರ್ಷ ಪ್ರಾಯದ ಕಾಡಾನೆ ಮೃತದೇಹ ಕಂಡುಬಂದಿದ್ದು, ಅವರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಕಾದಾಟದಲ್ಲಿ ಸಾವು ಶಂಕೆಮೃತ ಆನೆ ಹಾಗೂ ಬೇರೆ ಕಾಡಾನೆಗಳ ನಡುವೆ ಕಾದಾಟ ನಡೆದು ಇದರಿಂದ ತೀವ್ರ ರಕ್ತಸ್ರಾವಗೊಂಡು ಆನೆ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಆನೆಯ

ಸುಳ್ಯ: ಮಂಡೇಕೋಲಿನಲ್ಲಿ ಆನೆಯ ಮೃತದೇಹ ಪತ್ತೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಉಡುಪಿ: ಗೋಡೌನ್‌ನಲ್ಲಿ ಭಾರೀ ಅಗ್ನಿ ಅವಘಡ; 40 ಲಕ್ಷ ರೂ. ನಷ್ಟ

(ನ್ಯೂಸ್ ಕಡಬ) newskadaba.com ಜ.27  ಬೆಳಗಾವಿ: ಅಲೆವೂರು ಗುಡ್ಡೆಯಂಗಡಿಯಲ್ಲಿನ ಇವೆಂಟ್ ಮ್ಯಾನೇಜ್‌ಮೆಂಟ್ ಕಂಪನಿಯೊಂದರ ಗೋಡೌನ್‌ನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಸುಮಾರು 40 ಲಕ್ಷ ರೂಪಾಯಿ ನಷ್ಟವಾಗಿದೆ. ಬೆಂಕಿ ಅನಾಹುತಕ್ಕೆ ನಿಖರ ಕಾರಣ ಇನ್ನಷ್ಟೇ ತಿಳಿದು ಬರಬೇಕಿದೆ. ಘಟನೆಯಲ್ಲಿ ಗೋಡೌನ್‌ನಲ್ಲಿ ಸಂಗ್ರಹಿಸಲಾಗಿದ್ದ ವಿವಿಧ ವಸ್ತುಗಳು ಮತ್ತು ಉಪಕರಣಗಳು ಸಂಪೂರ್ಣ ಸುಟ್ಟು ಭಸ್ಮವಾಗಿದೆ ಎಂದು ಮೂಲಗಳು ತಿಳಿಸಿವೆ. ಕೂಡಲೇ ಘಟನಾ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಮತ್ತು ತುರ್ತು ಸೇವಾ ಸಿಬ್ಬಂದಿ ಸ್ಥಳೀಯರ ನೆರವಿನೊಂದಿಗೆ ಬೆಂಕಿಯನ್ನು ಹತೋಟಿಗೆ ತಂದಿದ್ದು, ಸಂಭವನೀಯ ಹೆಚ್ಚಿನ

ಉಡುಪಿ: ಗೋಡೌನ್‌ನಲ್ಲಿ ಭಾರೀ ಅಗ್ನಿ ಅವಘಡ; 40 ಲಕ್ಷ ರೂ. ನಷ್ಟ Read More »

ಕರಾವಳಿ

ನನಗೆ ಮರುಜನ್ಮ ಸಿಕ್ಕಂತಾಗಿದೆ: ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿಕ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿಕೆ

(ನ್ಯೂಸ್ ಕಡಬ) newskadaba.com ಜ.27  ಬೆಳಗಾವಿ: ಜನವರಿ 14 ರಂದು ಕಾರು ಅಪಘಾತದಲ್ಲಿ ಗಾಯಗೊಂಡಿದ್ದ ಮಹಿಳೆ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಚಿಕಿತ್ಸೆ ನಂತರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಜನವರಿ 14 ರಂದು ಕಿತ್ತೂರು ಬಳಿ ರಸ್ತೆಬದಿಯ ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಲಕ್ಷ್ಮಿ ಹೆಬ್ಬಾಳ್ಕರ್ ಗಾಯಗೊಂಡಿದ್ದರು. ಖಾಸಗಿ ಆಸ್ಪತ್ರೆಯಲ್ಲಿ 13 ದಿನಗಳ ಚಿಕಿತ್ಸೆಯ ನಂತರ ಭಾನುವಾರ ಬಿಡುಗಡೆ ಮಾಡಲಾಯಿತು. ಆಸ್ಪತ್ರೆಯಿಂದ ಬಿಡುಗಡೆಯಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ತಮಗೆ ಪುನರ್ಜನ್ಮ ಸಿಕ್ಕಿದೆ ಎಂದು

ನನಗೆ ಮರುಜನ್ಮ ಸಿಕ್ಕಂತಾಗಿದೆ: ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿಕ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿಕೆ Read More »

ಕರ್ನಾಟಕ

ನಿಯಮ ಬಾಹಿರವಾಗಿ ಸಾಲ ವಸೂಲಾತಿಗೆ ಮುಂದಾದರೆ ಕಠಿಣ ಕ್ರಮ: ಮೈಕ್ರೋಫೈನಾನ್ಸ್ ಕಂಪನಿಗಳಿಗೆ ಸಿಎಂ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಜ.25  ಬೆಂಗಳೂರು: ಮೈಕ್ರೋಫೈನಾನ್ಸ್ ಕಂಪನಿಗಳನ್ನು ನಿಯಂತ್ರಿಸಲು ಅಸ್ತಿತ್ವದಲ್ಲಿರುವ ಕಾನೂನುಗಳನ್ನು ತಿದ್ದುಪಡಿ ಮಾಡಲಾಗುವುದು ಮತ್ತು ನಿಜವಾದ ಸಾಲಗಾರರ ಹಿತಾಸಕ್ತಿಗಳನ್ನು ರಕ್ಷಿಸಲು ಹೊಸ ಕಾನೂನು ಜಾರಿಗೆ ತರಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಹೇಳಿದ್ದಾರೆ. ಮೈಕ್ರೋ-ಫೈನಾನ್ಸ್ ಕಂಪನಿಗಳು ಸಾಲಗಾರರಿಂದ ಹಣ ವಸೂಲಿ ಮಾಡಲು ಕಿರುಕುಳ ನೀಡುತ್ತಿವೆ ಎಂದು ಸಾರ್ವಜನಿಕರ ಆಕ್ರೋಶದ ಹಿನ್ನೆಲೆಯಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಅವರು, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕಂದಾಯ ಸಚಿವ ಕೃಷ್ಣ ಬೈರೇಗೌಡ, ಗೃಹ ಸಚಿವ ಜಿ. ಪರಮೇಶ್ವರ, ಕಾನೂನು ಸಚಿವ

ನಿಯಮ ಬಾಹಿರವಾಗಿ ಸಾಲ ವಸೂಲಾತಿಗೆ ಮುಂದಾದರೆ ಕಠಿಣ ಕ್ರಮ: ಮೈಕ್ರೋಫೈನಾನ್ಸ್ ಕಂಪನಿಗಳಿಗೆ ಸಿಎಂ ಎಚ್ಚರಿಕೆ Read More »

ಕರ್ನಾಟಕ

ಉಪ್ಪಿನಂಗಡಿ: ನಿಲ್ಲಿಸಿದ್ದ ಗ್ಯಾಸ್ ಟ್ಯಾಂಕರ್ ಏಕಾಏಕಿ ಮುಂದಕ್ಕೆ ಚಲಿಸಿ ಹೆದ್ದಾರಿ ಬದಿಗೆ ಪಲ್ಟಿ

(ನ್ಯೂಸ್ ಕಡಬ)com ಜ.25 ಪ್ರಯಾಗ್ ರಾಜ್: ಚಾಲಕ ನಿಲ್ಲಿಸಿ ಹೋಗಿದ್ದ ಗ್ಯಾಸ್ ಟ್ಯಾಂಕರ್ ಏಕಾಏಕಿ ಮುಂದಕ್ಕೆ ಚಲಿಸಿ ಹೆದ್ದಾರಿ ಬದಿಗೆ ಮಗುಚಿ ಬಿದ್ದ ಘಟನೆ 34 ನೆಕ್ಕಿಲಾಡಿಯ ಬೊಳ್ಳಾರು ಎಂಬಲ್ಲಿನ ಮಂಗಳೂರು- ಬೆಂಗಳೂರು ರಾ ಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಬೆಳಗ್ಗೆ ಸಂಭವಿಸಿದೆ. ಈ ಸಂದರ್ಭ ಟ್ಯಾಂಕರ್ ನಿಂದ ಯಾವುದೇ ಗ್ಯಾಸ್ ಸೋರಿಕೆಯಾಗದ್ದರಿಂದ ಸಂಭವನೀಯ ಅನಾಹುತ ತಪ್ಪಿದಂತಾಗಿದೆ. ಗ್ಯಾಸ್ ತುಂಬಿದ್ದ ಬುಲೆಟ್ ಟ್ಯಾಂಕರ್ ಮಂಗಳೂರಿನಿಂದ ತಮಿಳುನಾಡಿಗೆ ತೆರಳುತ್ತಿತ್ತು. ಈ ನಡುವೆ ಟ್ಯಾಂಕರ್ ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಹೀಗಾಗಿ

ಉಪ್ಪಿನಂಗಡಿ: ನಿಲ್ಲಿಸಿದ್ದ ಗ್ಯಾಸ್ ಟ್ಯಾಂಕರ್ ಏಕಾಏಕಿ ಮುಂದಕ್ಕೆ ಚಲಿಸಿ ಹೆದ್ದಾರಿ ಬದಿಗೆ ಪಲ್ಟಿ Read More »

ಕರಾವಳಿ

ಮಹಾಕುಂಭ ಮೇಳದಲ್ಲಿ ಸ್ಪೀಕರ್ ಯುಟಿ ಖಾದರ್

(ನ್ಯೂಸ್ ಕಡಬ) newskadaba.com ಜ.25  ಪ್ರಯಾಗ್ ರಾಜ್: ತನ್ನ ಸರಳತೆ, ಜಾತ್ಯತೀತ ತತ್ವಗಳ ಅನುಸರಣೆಯಿಂದ ಹೆಸರುವಾಸಿಯಾಗಿರುವ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರು ಏಕತೆ ಮತ್ತು ಕೋಮು ಸಾಮರಸ್ಯದ ಸಂಕೇತವಾಗಿ ಶುಕ್ರವಾರ ಹಿಂದೂ ಕುಂಭ ಮೇಳಕ್ಕೆ ಭೇಟಿ ನೀಡಿದ್ದಾರೆ. ಮುಸ್ಲಿಂ ಆಗಿದ್ದರೂ ನಾಗ ಸಾಧುಗಳು ಮತ್ತು ಅಘೋರಿಗಳೊಂದಿಗೆ ಆಧ್ಯಾತ್ಮಿಕತೆ ಬಗ್ಗೆ ಆತ್ಮೀಯವಾಗಿ ಮಾತನಾಡಿದ್ದು, ಅನುಭವಗಳನ್ನು ಹಂಚಿಕೊಂಡಿದ್ದಾರೆ. ಹಿಂದಿಯಲ್ಲಿ ನಿರರ್ಗಳವಾಗಿ ಮಾತನಾಡುವ ಖಾದರ್ ಸಾಧುಗಳೊಂದಿಗೆ ಬೆರೆತು, ವಿಶ್ವದ ಅತಿದೊಡ್ಡ ಧಾರ್ಮಿಕ ಕೂಟಗಳಲ್ಲಿ ಒಂದಾದ ಮಹಾ ಕುಂಭ ಮೇಳದಲ್ಲಿ ಅದ್ಬುತ ಕ್ಷಣಗಳನ್ನು

ಮಹಾಕುಂಭ ಮೇಳದಲ್ಲಿ ಸ್ಪೀಕರ್ ಯುಟಿ ಖಾದರ್ Read More »

ಬ್ರೇಕಿಂಗ್ ನ್ಯೂಸ್

ಬೆಂಗಳೂರು: HAL ವಿಮಾನ ನಿಲ್ದಾಣವನ್ನು ಮತ್ತೆ ತೆರೆಯಲು ಸಂಸದ ತೇಜಸ್ವಿ ಸೂರ್ಯ ಒತ್ತಾಯ

(ನ್ಯೂಸ್ ಕಡಬ) newskadaba.com ಜ.25 ಬೆಂಗಳೂರು: HAL ವಿಮಾನ ನಿಲ್ದಾಣವನ್ನು ಮತ್ತೆ ತೆರೆಯಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುಬೇಕೆಂದು ಸಂಸದ ತೇಜಸ್ವಿ ಸೂರ್ಯ ನವದೆಹಲಿಯಲ್ಲಿ ಸಾರ್ವಜನಿಕ ಲೆಕ್ಕಪತ್ರ ಸಮಿತಿಗೆ ಮನವಿ ಮಾಡಿದರು. ಸಾರ್ವಜನಿಕ ಲೆಕ್ಕಪತ್ರ ಸಮಿತಿಯು ಆಯ್ದ ಸಂಸತ್ ಸದಸ್ಯರನ್ನು ಒಳಗೊಂಡಿದ್ದು, ಕೇಂದ್ರ ಸರ್ಕಾರದ ಆದಾಯ ಮತ್ತು ವೆಚ್ಚವನ್ನು ಲೆಕ್ಕಪರಿಶೋಧನೆ ಕೆಲಸ ಮಾಡುತ್ತದೆ. TNIE ಜೊತೆ ಮಾತನಾಡಿದ ತೇಜಸ್ವಿಸೂರ್ಯ, ಎರಡನೇ ವಿಮಾನ ನಿಲ್ದಾಣ ನಿರ್ಮಾಣಕ್ಕಾಗಿ ಸೂಕ್ತ ಸ್ಥಳವನ್ನು ಗುರುತಿಸಲು ನಡೆಯುತ್ತಿರುವ ಕ್ರಮದೊಂದಿಗೆ ಈ ಮನವಿಯನ್ನು ಪರಿಗಣಿಸಬಹುದು ಎಂದು ಹೇಳಿದರು. ನಗರದಲ್ಲಿ ಮೂರು

ಬೆಂಗಳೂರು: HAL ವಿಮಾನ ನಿಲ್ದಾಣವನ್ನು ಮತ್ತೆ ತೆರೆಯಲು ಸಂಸದ ತೇಜಸ್ವಿ ಸೂರ್ಯ ಒತ್ತಾಯ Read More »

ಕರಾವಳಿ
Scroll to Top